dailylife Archives - Good News 24x7 https://www.goodnews24x7.com/tag/dailylife/ Kannada Tue, 30 Jun 2026 09:01:18 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg dailylife Archives - Good News 24x7 https://www.goodnews24x7.com/tag/dailylife/ 32 32 ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! https://www.goodnews24x7.com/mp-tejaswi-suryas-anger-against-the-state-government/ Tue, 30 Jun 2026 09:01:18 +0000 https://www.goodnews24x7.com/?p=9709 ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ…

The post ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! appeared first on Good News 24x7.

]]>

ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸಾಗಿದೆ ಎಂದು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಜನರು ಕೆಲಸ ಮಾಡಬೇಕೋ ಅಥವಾ ರಸ್ತೆಯಲ್ಲೇ ಕಾಯಬೇಕೋ ಎಂದು ಸಿಎಂಗೆ ಪ್ರಶ್ನಿಸಿದ್ದಾರೆ.

ಬಿಎಂಟಿಸಿ ಬಸ್‌ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸು! ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ಬಿಎಂಟಿಸಿ ಬಸ್‌ಗಳ ಕೊರತೆ ಕುರಿತು ಸಂಸದ ತೇಜಸ್ವಿ ಸೂರ್ಯ ಅಸಮಾಧಾನ.
ಪ್ರಯಾಣಿಕರು ಗಂಟೆಗಟ್ಟಲೆ ಬಸ್‌ಗಾಗಿ ರಸ್ತೆಯಲ್ಲೇ ಕಾಯುವಂತಾಗಿದೆ ಎಂದು ಟೀಕೆ.
ಜನರು ಕೆಲಸ ಮಾಡಬೇಕೋ ಅಥವಾ ರಸ್ತೆಯಲ್ಲೇ ನಿಲ್ಲಬೇಕೋ ಎಂದು ಪ್ರಶ್ನೆ.
ಜೂನ್ 30,ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಸೋಮವಾರ ಖುದ್ದು ಬಿಎಂಟಿಸಿ ಬಸ್ಸಿನಲ್ಲಿ ಕತ್ರಿಗುಪ್ಪೆಯಿಂದ ಬನಶಂಕರಿವರೆಗೆ ಪ್ರಯಾಣಿಸುವ ಸಂದರ್ಭದಲ್ಲಿ ಪ್ರಯಾಣಿಕರ ಅಳಲು ಆಲಿಸಿದ್ದರು. ಇದೀಗ ಬಿಎಂಟಿಸಿ ಬಸ್​ ಸ್ಟ್ಯಾಂಡ್​ ಒಂದರಲ್ಲಿ ಪ್ರಯಾಣಿಕರೊಂದಿಗೆ ಮಾತನಾಡಿ ಅಲ್ಲಿನ ದುಸ್ಥಿತಿಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಎಂಟಿಸಿ ಪ್ರಯಾಣಿಕರ ದೈನಂದಿನ ಪರದಾಟವನ್ನು ತಪಸ್ಸಿಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ.

ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!

ಉತ್ತಮ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಿಲ್ಲದೆ ಯಾವುದೇ ಸಾರಿಗೆ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲಿ ಬಸ್‌ಗಳ ಸಂಖ್ಯೆಯನ್ನು ಕನಿಷ್ಠ 15,000 ಕ್ಕೆ ಹೆಚ್ಚಿಸಬೇಕು. ನಗರದ ಯಾವುದೇ ಭಾಗದಲ್ಲಾದರೂ ಸರಿ, ಪ್ರತಿ ಪ್ರಜೆಗೆ ಐದು ನಿಮಿಷಗಳಲ್ಲಿ ಬಸ್ ಸಿಗುವಂತಾಗಲು ಖಾಸಗಿ ಸಹಭಾಗಿತ್ವವನ್ನು ಪ್ರೋತ್ಸಾಹಿಸಬೇಕು ಎಂದು ತೇಜಸ್ವಿ ಸೂರ್ಯ ಅವರು ಈ ಹಿಂದೆ ಮಾಡಿದ್ದ ಹಳೆಯ ಪೋಸ್ಟ್ ಅನ್ನು ನೆನಪಿಸಿಕೊಂಡಿದ್ದಾರೆ. ಆ ಪೋಸ್ಟ್ ಮಾಡಿ ಎಂಟು ತಿಂಗಳು ಕಳೆದಿದ್ದು, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ, ಹೊಸ ಉಪಮುಖ್ಯಮಂತ್ರಿ ಹಾಗೂ ಹೊಸ ಸಾರಿಗೆ ಸಚಿವರು ಅಧಿಕಾರಕ್ಕೆ ಬಂದಿದ್ದರೂ ಬೆಂಗಳೂರಿನ ಬಿಎಂಟಿಸಿ ಸ್ಥಿತಿ ಮಾತ್ರ ಹಳೇ ಕಥೆಯನ್ನೇ ಮುಂದುವರಿಸಿದೆ ಎಂದು ಅವರು ಟೀಕಿಸಿದ್ದಾರೆ.

The post ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! appeared first on Good News 24x7.

]]>