Dakshina Kannada Archives - Good News 24x7 https://www.goodnews24x7.com/tag/dakshina-kannada/ Kannada Wed, 29 Apr 2026 08:42:21 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Dakshina Kannada Archives - Good News 24x7 https://www.goodnews24x7.com/tag/dakshina-kannada/ 32 32 ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ https://www.goodnews24x7.com/heatwave-on-the-coast-health-department-on-high-alert9482-2/ Wed, 29 Apr 2026 08:42:21 +0000 https://www.goodnews24x7.com/?p=9482 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಬಿಸಿಲು ಮತ್ತು ಆರ್ದ್ರತೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಿದೆ.…

The post ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ appeared first on Good News 24x7.

]]>

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಬಿಸಿಲು ಮತ್ತು ಆರ್ದ್ರತೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಿದೆ.

ಆಸ್ಪತ್ರೆಗಳಲ್ಲಿ ವಿಶೇಷ ಸಿದ್ಧತೆ
ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಗೆ ತಕ್ಷಣದ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ:

ತಾಲೂಕು ಆಸ್ಪತ್ರೆಗಳು: ತಲಾ 5 ವಿಶೇಷ ಬೆಡ್‌ಗಳು.

ಸಮುದಾಯ ಆರೋಗ್ಯ ಕೇಂದ್ರಗಳು: ತಲಾ 2 ವಿಶೇಷ ಬೆಡ್‌ಗಳು.

ಚರ್ಮದ ಕಾಯಿಲೆಗಳ ಹೆಚ್ಚಳ
ಬಿಸಿಲಿನ ತೀವ್ರತೆಯಿಂದಾಗಿ ಜಿಲ್ಲೆಯಲ್ಲಿ ಚರ್ಮದ ಕಾಯಿಲೆಗಳು ಕಾಣಿಸಿಕೊಳ್ಳಲಾರಂಭಿಸಿವೆ. ವಿಶೇಷವಾಗಿ ಬೆವರು ಸಾಲೆ, ಚರ್ಮದ ತುರಿಕೆ ಮತ್ತು ಕಜ್ಜಿಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ದಿನವೊಂದಕ್ಕೆ ಸರಾಸರಿ 3 ರಿಂದ 5 ರೋಗಿಗಳು ಇಂತಹ ಲಕ್ಷಣಗಳೊಂದಿಗೆ ಚಿಕಿತ್ಸೆಗೆ ಬರುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ
ಹೀಟ್ ಸ್ಟ್ರೋಕ್ ಸೇರಿದಂತೆ ಬಿಸಿಲಿನಿಂದ ಉಂಟಾಗುವ ಯಾವುದೇ ಪ್ರಕರಣಗಳು ದಾಖಲಾದಲ್ಲಿ, ತಕ್ಷಣವೇ ಮಾಹಿತಿಯನ್ನು ಆರೋಗ್ಯ ಇಲಾಖೆಯ ವೆಬ್ ಪೋರ್ಟಲ್‌ನಲ್ಲಿ ದಾಖಲಿಸುವಂತೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಓಆರ್‌ಎಸ್ (ORS) ಕಾರ್ನರ್ ಸೌಲಭ್ಯ
ನಿರ್ಜಲೀಕರಣ ತಡೆಗಟ್ಟಲು ಜಿಲ್ಲಾಸ್ಪತ್ರೆಯಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರಗಳವರೆಗೆ ‘ಓಆರ್‌ಎಸ್ ಕಾರ್ನರ್’ಗಳನ್ನು ಸ್ಥಾಪಿಸಲಾಗಿದೆ. ಔಷಧಗಳ ಕೊರತೆಯಾಗದಂತೆ ಸ್ಥಳೀಯವಾಗಿಯೇ ಖರೀದಿಸಲು ಅವಕಾಶ ನೀಡಲಾಗಿದ್ದು, ಕಳೆದ ಒಂದು ವಾರದಿಂದ ಓಆರ್‌ಎಸ್ ಪ್ಯಾಕೆಟ್‌ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ.

ಗಮನಿಸಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ವಿಶೇಷ ಸಭೆ ನಡೆದಿದ್ದು, ಬಿಸಿಲಿನಿಂದ ಗಂಭೀರ ಸಮಸ್ಯೆ ಎದುರಾದ ರೋಗಿಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಲು ಸೂಚಿಸಲಾಗಿದೆ. ಸದ್ಯದ ಮಾಹಿತಿಯ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಅಧಿಕೃತ ಹೀಟ್ ಸ್ಟ್ರೋಕ್ ಪ್ರಕರಣಗಳು ವರದಿಯಾಗಿಲ್ಲ.

The post ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ appeared first on Good News 24x7.

]]>
ರಾಜ್ಯಾದ್ಯಂತ ಮೂರು ದಿನಗಳ ಕಾಲ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ. https://www.goodnews24x7.com/heavy-rains-across-the-state-for-three-days-red-alert-declared-in-these-districts/ Mon, 26 May 2025 07:40:34 +0000 https://www.goodnews24x7.com/?p=4087 ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ…

The post ರಾಜ್ಯಾದ್ಯಂತ ಮೂರು ದಿನಗಳ ಕಾಲ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ. appeared first on Good News 24x7.

]]>

ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಮೇ 27ರವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

The post ರಾಜ್ಯಾದ್ಯಂತ ಮೂರು ದಿನಗಳ ಕಾಲ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ. appeared first on Good News 24x7.

]]>
ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. https://www.goodnews24x7.com/rainfall-across-karnataka-for-the-next-one-week-yellow-alert-for-more-than-12-districts/ Tue, 13 May 2025 11:28:08 +0000 https://www.goodnews24x7.com/?p=3851 ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು,…

The post ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. appeared first on Good News 24x7.

]]>

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಂಎಂ ಹಿಲ್ಸ್, ಪುತ್ತೂರು, ಶಿವಮೊಗ್ಗದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.


ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

The post ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. appeared first on Good News 24x7.

]]>
ಸೌಜನ್ಯ ಕೇಸ್ ಪ್ರಕರಣದ ವಿಡಿಯೋ ಮಾಡಿದ್ದ ಯೂಟೂಬರ್ ‘ಸಮೀರ್ dhootha’ ಬಂಧನಕ್ಕೆ ಯತ್ನ; ಪೊಲೀಸರಿಂದ ಬಂತು ನೋಟಿಸ್ !! https://www.goodnews24x7.com/%e0%b2%b8%e0%b3%8c%e0%b2%9c%e0%b2%a8%e0%b3%8d%e0%b2%af-%e0%b2%95%e0%b3%87%e0%b2%b8%e0%b3%8d-%e0%b2%aa%e0%b3%8d%e0%b2%b0%e0%b2%95%e0%b2%b0%e0%b2%a3%e0%b2%a6-%e0%b2%b5%e0%b2%bf%e0%b2%a1%e0%b2%bf/ Thu, 06 Mar 2025 09:17:31 +0000 https://www.goodnews24x7.com/?p=2630 ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ ಸಮೀರ್ ಎಂಡಿ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಅಲ್ಲದೆ ಅವರಿಗೆ ಸಾಕಷ್ಟು ಜೀವ ಬೆದರಿಕೆ ಕರೆಗಳು ಬಂದಿವೆ ಎಂದುಸಮೀರ್ ಎಂ.ಡಿ. ಹೇಳಿಕೆ ನೀಡಿದ್ದಾರೆ. ಸಮೀರ್ ಎಂಡಿ ಅವರು ಮಾಡಿದ್ದ ವಿಡಿಯೋ…

The post ಸೌಜನ್ಯ ಕೇಸ್ ಪ್ರಕರಣದ ವಿಡಿಯೋ ಮಾಡಿದ್ದ ಯೂಟೂಬರ್ ‘ಸಮೀರ್ dhootha’ ಬಂಧನಕ್ಕೆ ಯತ್ನ; ಪೊಲೀಸರಿಂದ ಬಂತು ನೋಟಿಸ್ !! appeared first on Good News 24x7.

]]>

ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ ಸಮೀರ್ ಎಂಡಿ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಅಲ್ಲದೆ ಅವರಿಗೆ ಸಾಕಷ್ಟು ಜೀವ ಬೆದರಿಕೆ ಕರೆಗಳು ಬಂದಿವೆ ಎಂದುಸಮೀರ್ ಎಂ.ಡಿ. ಹೇಳಿಕೆ ನೀಡಿದ್ದಾರೆ.
ಸಮೀರ್ ಎಂಡಿ ಅವರು ಮಾಡಿದ್ದ ವಿಡಿಯೋ ಕರ್ನಾಟಕದಲ್ಲಿಡೆ ಸಂಚಲನ ಸೃಷ್ಟಿಸಿದ ಕೂಡಲೇ ,ಬಳ್ಳಾರಿಯಿಂದ ಪೊಲೀಸರು ಆಗಮಿಸಿ ಬಂಧನಕ್ಕೆ ಮುಂದಾಗಿದ್ದರು. ಆದ್ರೆ ವಿಚಾರಣೆಗೆ ಸಹಕರಿಸೋದಾಗಿ ಭರವಸೆ ನೀಡಿದ್ಮೇಲೆ ನೋಟಿಸ್ ನೀಡಿ ಹಿಂದಿರುಗಿದ್ದಾರೆ ಎಂದು ಫೇಸ್‌ಬುಕ್ ಲೈವ್‌ನಲ್ಲಿ ಸಮೀರ್ ಹೇಳಿದ್ದಾರೆ. ಈ ವಿಡಿಯೋಗೆ ಒಂದು ಮಿಲಿಯನ್ ವ್ಯೂವ್ ಪಡೆದುಕೊಳ್ಳುತ್ತಲೇ ನನಗೆ ಭಯ ಶುರುವಾಯ್ತು. ಕೆಲವರು ನನ್ನ ವೈಯಕ್ತಿಕ ಮಾಹಿತಿ ಮತ್ತು ನನ್ನ ವಿಳಾಸವನ್ನು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಮಾಡಲಾಯ್ತು. ನಂತರ ನನಗೆ ಹಲವು ಜೀವಬೆದರಿಕೆ ಕರೆಗಳು ಬರಲು ಆರಂಭಿಸಿದವು. ಪೊಲೀಸರ ಬಳಿ ಹೋದ್ರೆ ರಕ್ಷಣೆ ಸಿಗುತ್ತೆ ಎಂಬ ನಂಬಿಕೆಯೂ ನನಗಿರಲಿಲ್ಲ. ನಂತರ ನಾನು ಕೂಡಲೇ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತಂಡದ ಸದಸ್ಯರನ್ನು ಸಂಪರ್ಕಿಸಿದೆ. ನಂತರ ಅವರೇ ವಕೀಲರ ಸಹಾಯವನ್ನು ನೀಡಿದ್ದಾರೆ ಎಂದು ಸಮೀರ್ ವಿಡಿಯೋವೊಂದರಲ್ಲಿ ಹೇಳಿಕೊಂಡಿದ್ದಾರೆ.

ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಮತ್ತು ಯೂಟ್ಯೂಬ್ ನಲ್ಲಿ ಇನ್ನು ಒಂದು ವಾರ ಸಹ ಪೂರೈಸಿಲ್ಲ ಆಗಲೇ ಸಮೀರ್ ಅವರಿಗೆ ಜೀವ ಬೆದರಿಕೆಯನ್ನು ಇಡುತ್ತಿದ್ದಾರೆ. ಹಾಗಾಗಿ ಅವರು ,ನನಗೆ ಜೀವ ಬೆದರಿಕೆ ಬರುತ್ತಿರುವ ಹಿನ್ನೆಲೆ ಸೌಜನ್ಯ ಪ್ರಕರಣದ ಮತ್ತೋರ್ವ ಹೋರಾಟಗಾರ ಗಿರಿಶ್ ಮಟ್ಟನವರ್ ಅವರನ್ನು ಮನೆಗೆ ಬರುವಂತೆ ಹೇಳುವಂತೆ ಮನವಿ ಮಾಡಿಕೊಂಡೆ. ಗಿರೀಶ್ ಮಟ್ಟನವರ್ ಮನೆಗೆ ಬಂದ ಸಂದರ್ಧದಲ್ಲಿಯೇ ಪೊಲೀಸರು ನಮ್ಮ ಮನೆಗೆ ಬಂದರು ಎಂದು ಸಮೀರ್ ಎಂ.ಡಿ ಹೇಳಿದ್ದಾರೆ. ಸೌಜನ್ಯ ವಿಡಿಯೋ ಮಾಡುವ ಮುನ್ನ ಗಿರೀಶ್ ಅಥವಾ ಮಹೇಶ್ ಶೆಟ್ಟಿಯಯವರಿಗೂ ನಮಗೂ ಪರಿಚಯವೇ ಇರಲಿಲ್ಲ. ಇವರು ಯಾರು ನನಗೆ ವಿಡಿಯೋ ಮಾಡುವಂತೆ ಹೇಳಿಲ್ಲ ಎಂದು ರಂಜಾನ್ ತಿಂಗಳಿನಲ್ಲಿ ಅಲ್ಲಾಹುವಿನ ಮೇಲೆ ಆಣೆ ಮಾಡುತ್ತೇನೆ. ವಿಡಿಯೋ ಬಿಡುಗಡೆಯಾದ ನಂತರ ನನಗೆ ಇವರ ಪರಿಚಯವಾಗಿದೆ ಎಂದು ಸಮೀರ್ ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಒಟ್ಟಾರೆಯಾಗಿ ಅವರ ವಿರುದ್ಧವಾಗಿ ಬಂದಿರುವ ಎಲ್ಲಾ ಅವಹೇಳನಕಾರಿ ಟಿಕೆ- ಟಿಪ್ಪಣಿಗಳಿಗೆ ಸ್ಪಷ್ಟ ಉತ್ತರವನ್ನು ನೀಡಿದ್ದಾರೆ.

ಇನ್ನು ಸೌಜನ್ಯ ಪ್ರಕರಣದಲ್ಲಿ ಹಲವಾರು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿರುವ ಗಿರೀಶ್ ಮುಟ್ಟಣ್ಣನವರ್ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿ, ಸಮೀರ್ ತಮ್ಮ ವಿಡಿಯೋದಲ್ಲಿ ಯಾರ ಹೆಸರನ್ನು ಬಳಸಿಲ್ಲ. ಇನ್ನು ದೇವಸ್ಥಾನದ ಕುರಿತು ಯಾವುದೇ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿಲ್ಲ. ಸುಪ್ರೀಂಕೋರ್ಟ್‌ಗೆ ಅವರೇ ಬರೆದುಕೊಟ್ಟಂತಹ ಹೇಳಿಕೆಯನ್ನು ಸಮೀರ್ ತಮ್ಮ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ. ಇಲ್ಲಿ ಯಾವುದೇ ಅವಹೇಳನಕಾರಿ ಹೇಳಿಕೆಯಾಗಲಿ, ಅಥವಾ ಸಂಸ್ಕೃತಿಗೆ ಧಕ್ಕೆ ತರುವಂತಹ ವಿಚಾರಗಳನ್ನಾಗಲಿ ಅವರು ಹೇಳಿಲ್ಲ. ಹೊರತಾಗಿ ಸೌಜನ್ಯಳ ಪ್ರಕರಣದ ಕುರಿತು ಸಂಪೂರ್ಣ ಅಧ್ಯಯನ ನಡೆಸಿ ಸತ್ಯವನ್ನು ಹೇಳಿದ್ದಾರೆ. ಸೌಜನ್ಯಳನ್ನು ನಿಮ್ಮ ಮನೆ ಮಗಳು ಎಂದು ತಿಳಿದುಕೊಳ್ಳಿ ಎಂದು ಮನವಿ ಮಾಡಿಕೊಡರು.
ಸಮೀರ್ ಅವರನ್ನು ಬಂಧಿಸಬೇಕು ಎಂಬ ಉದ್ದೇಶದಿಂದಲೇ ಪೊಲೀಸರು ಬಳ್ಳಾರಿಯಿಂದ ಆಗಮಿಸಿದ್ದರು. ಬಳ್ಳಾರಿ ಕೌಲ್ ಬಜಾರ್ ಠಾಣೆಯ ಅಧಿಕಾರಿಗಳು, ಬಳ್ಳಾರಿ ಎಸ್‌ಪಿ, ಬೆಂಗಳೂರು ಗ್ರಾಮಾಂತರ ಎಸ್‌ಪಿ ಮತ್ತು ಇಲ್ಲಿಯ ಸ್ಥಳೀಯ ಆವಲಹಳ್ಳಿಯ ಪೊಲೀಸರೊಂದಿಗೂ ನಾವು ಮಾತನಾಡಿದ್ದೇವೆ. ತನಿಖೆಗೆ ಸಹಕರಿಸೋದಾಗಿ ಹೇಳಿದ್ಮೇಲೆ ನೋಟಿಸ್ ನೀಡಿ ಹಿಂದಿರುಗಿದ್ದಾರೆ. ತನಿಖೆಯಿಂದ ತಪ್ಪಿಸಿಕೊಳ್ಳುವ ಮಾತೇ ಇಲ್ಲ. ತನಿಖೆಗೆ ಸಮೀರ್ ಬರುತ್ತಾನೆ ಎಂದು ಹೇಳಿದ್ದೇವೆ. ನಮ್ಮ ಮಾತನ್ನು ಒಪ್ಪಿಕೊಂಡಿರೋದಕ್ಕೆ ಪೊಲೀಸರಿಗೆ ಧನ್ಯವಾದ ಹೇಳುತ್ತೇವೆ ಎಂದರು.

ಈ ಸೌಜನ್ಯ ಪ್ರಕರಣದಲ್ಲಿ ಎಲ್ಲಾ ಧರ್ಮದವರನ್ನು ಸೇರಿಸುತ್ತಿದ್ದೇವೆ. ಇಲ್ಲಿ ಧರ್ಮದ ವಿಷಯವೇ ಇಲ್ಲ. ಸೌಜನ್ಯಾಳೇ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪರಿಚಯಿಸಿದ್ದು. ಆಕೆಯಿಂದಲೇ ನನಗೆ ಮಹೇಶ್ ಅವರ ಪರಿಚಯವಾಯ್ತು. ಇದೀಗ ಸಮೀರ್ ಜೊತೆಯಲ್ಲಿ ನಾವೆಲ್ಲಾ ಇದ್ದೇವೆ. ನಮ್ಮೆಲ್ಲರನ್ನು ಪರಿಚಯಿಸಿ ಒಂದೆಡೆ ಸೇರಿಸುತ್ತಿರೋದು ಸೌಜನ್ಯ. ದೇವಸ್ಥಾನದ ಕುರಿತು ಹೇಳಿಕೆಯು ದಾಖಲೆಯಲ್ಲಿವೆ. ಧರ್ಮಸ್ಥಳದ ಮಂಜುನಾಥ ಸ್ವಾಮಿ ಅಥವಾ ಹಿಂದೂ ದೇಗುಲಕ್ಕೆ ಅವಮಾನ ಮಾಡಲಾಗ್ತಿದೆ ಎಂದು ಪ್ರಕರಣವನ್ನು ತಿರುಚಲಾಗುತ್ತಿದೆ. ವಿಡಿಯೋದಲ್ಲಿ ಹೇಳಿರುವ ವಿಷಯವೇ ಬೇರೆ, ಅಲ್ಲದೆ ಒಂದು ಹೆಣ್ಣು ಮಗಳಿಗೆ ನ್ಯಾಯ ಕೊಡಿಸುವುದಕ್ಕಾಗಿ ಮಾಡಿದ ವಿಡಿಯೋವನ್ನು ಬೇರೆಯವರು ಸದುಪಯೋಗಪಡಿಸಿಕೊಂಡು ಧರ್ಮದ ಹೆಸರಿಗೆ ತಿರುಚಿ ಅಂಟಿಸುತ್ತಿದ್ದಾರೆ. ಇದು ಕೊಂಚ ಬೇಸರದ ಸಂಗತಿಯಾದರೂ , ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಡೆಯುತ್ತದೆ ಎಂದು ಗಿರೀಶ್ ರವರು ಹೇಳಿದ್ದಾರೆ.

ನ್ಯಾಯ-ಅನ್ಯಾಯಗಳು ಆದಷ್ಟು ಬೇಗ ಎಲ್ಲರಿಗೂ ತಿಳಿಯುತ್ತದೆ. ಮಂಜುನಾಥ ಸ್ವಾಮಿ ಕಣ್ಣು ಬಿಟ್ಟಿದ್ದರಿಂದಲೇ, ನಿಜವಾದ ಆರೋಪಿಗಳು ಯಾರು ಅನ್ನೋದು ಸಮಾಜದ ಮುಂದೆ ಬರಲಿದೆ. ಆ ಮಂಜುನಾಥ ಸ್ವಾಮಿ ಕೃಪೆಯಿಂದಲೇ ನಾವು ಇಲ್ಲಿ ಸೇರುವಂತಾಗಿದೆ ಎಂದು ಸಮೀರ್ ಎಂ.ಡಿ. ಹೇಳಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸಮೀರ್ ಅವರು ಮಾಡಿರುವ ವಿಡಿಯೋದ ಕುರಿತ ತನಿಖೆ ಎಲ್ಲಿಯವರೆಗೆ ಹೋಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

The post ಸೌಜನ್ಯ ಕೇಸ್ ಪ್ರಕರಣದ ವಿಡಿಯೋ ಮಾಡಿದ್ದ ಯೂಟೂಬರ್ ‘ಸಮೀರ್ dhootha’ ಬಂಧನಕ್ಕೆ ಯತ್ನ; ಪೊಲೀಸರಿಂದ ಬಂತು ನೋಟಿಸ್ !! appeared first on Good News 24x7.

]]>
ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*. https://www.goodnews24x7.com/%e0%b2%ac%e0%b3%86%e0%b2%b3%e0%b3%8d%e0%b2%b3%e0%b2%82%e0%b2%ac%e0%b3%86%e0%b2%b3%e0%b2%97%e0%b3%8d%e0%b2%97%e0%b3%86-%e0%b2%aa%e0%b3%81%e0%b2%a4%e0%b3%8d%e0%b2%a4%e0%b3%82%e0%b2%b0%e0%b2%bf%e0%b2%a8/ Sat, 28 Dec 2024 08:58:55 +0000 https://www.goodnews24x7.com/?p=1324 ದಕ್ಷಿಣ ಕನ್ನಡ : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಾದವರನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಂದೆ – ಮಗ ಹಾಗೂ…

The post ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*. appeared first on Good News 24x7.

]]>

ದಕ್ಷಿಣ ಕನ್ನಡ : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಾದವರನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಂದೆ – ಮಗ ಹಾಗೂ ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇವರು ತಮ್ಮ ಆಲ್ಟೋ ಕಾರಿನಲ್ಲಿ ಗೊಂದೊಳ್ ಪೂಜೆಗೆ ಪುತ್ತೂರಿನ ಪುಣಚಕ್ಕೆ ಆಗಮಿಸಿದ್ದರು. ಹಿಂತಿರುಗುವ ವೇಳೆ ಮುಂಜಾನೆ 4.15ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಅಣ್ಣು ನಾಯ್ಕ, ಅವರ ಪುತ್ರ ಚಿದಾನಂದ ಹಾಗೂ ನೆರೆಮನೆಯ ರಮೇಶ್ ನಾಯ್ಕ ಮೃತರಾಗಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸ್​​ ಠಾಣೆಯ ಸಬ್​ಇನ್ಸ್​ಪೆಕ್ಟರ್​​ ಉದಯ ರವಿ ಹಾಗೂ ಎಫ್.ಎಸ್.ಐ. ಎಲ್ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*. appeared first on Good News 24x7.

]]>