DCcourts Archives - Good News 24x7 https://www.goodnews24x7.com/tag/dccourts/ Kannada Fri, 30 May 2025 10:04:55 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg DCcourts Archives - Good News 24x7 https://www.goodnews24x7.com/tag/dccourts/ 32 32 AC, DC ಕೋರ್ಟ್ ನಲ್ಲಿ ಐದು ವರ್ಷಕ್ಕೂ ಹಳೆಯದಾದ ಬಾಕಿ ಪ್ರಕರಣ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಿಎಂ‌. https://www.goodnews24x7.com/cases-pending-in-ac-dc-courts-for-more-than-five-years-cm-takes-dig-at-officials/ Fri, 30 May 2025 10:04:55 +0000 https://www.goodnews24x7.com/?p=4154 ಬೆಂಗಳೂರು : ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.  ಇಂದು ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ…

The post AC, DC ಕೋರ್ಟ್ ನಲ್ಲಿ ಐದು ವರ್ಷಕ್ಕೂ ಹಳೆಯದಾದ ಬಾಕಿ ಪ್ರಕರಣ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಿಎಂ‌. appeared first on Good News 24x7.

]]>

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.  ಇಂದು ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದರು.
ನಂತರ ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.

Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ ಎಂದರೆ ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು. DC ಮತ್ತು CEO ಗಳ ಸಭೆಗೆ ಮಧ್ಯಾಹ್ನ ಊಟದ ಬಿಡುವು 30 ನಿಮಿಷ ನೀಡಲಾಗಿತ್ತು. ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಊಟಕ್ಕೆಂದು ಮನೆಗೆ ತೆರಳಿದರು. ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಊಟ ಮುಗಿಸಿ ಸರಿಯಾಗಿ 30 ನಿಮಿಷಕ್ಕೆ ಸಮ್ಮೇಳನ ಸಭಾಂಗಣಕ್ಕೆ ಖಡಕ್ ಎಂಟ್ರಿ ಕೊಟ್ಟರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು, “ಸರ್ ಅಧಿಕಾರಿಗಳು ಇನ್ನೂ ಊಟಕ್ಕೆ ಹೋಗಿದ್ದಾರೆ ಸರ್, ಬರ್ತಾರೆ ಎಂದರು. ಮುಖ್ಯಮಂತ್ರಿಗಳು ಸರಿಯಾದ ಸಮಯಕ್ಕೆ ಬಂದ ಸುದ್ದಿ ಕೇಳಿ ಬ್ಯಾಂಕ್ವೆಂಟ್ ಹಾಲ್ ನಲ್ಲಿದ್ದ ಅಧಿಕಾರಿಗಳು, ಸಚಿವರು ತಡಬಡಾಯಿಸಿ ದೌಡಾಯಿಸಿದರು.
ಊಟಕ್ಕೆ ಬಿಡುವು ಕೊಡುವಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 45 ನಿಮಿಷ ಬಿಡುವು ಕೊಡೋಣ ಎಂದಿದ್ದರು. ಮುಖ್ಯಮಂತ್ರಿಗಳು ಅರ್ಧ ಗಂಟೆ ಸಾಕು ಎಂದು ಹೇಳಿದ್ದರು. ತಮ್ಮ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿತು.

The post AC, DC ಕೋರ್ಟ್ ನಲ್ಲಿ ಐದು ವರ್ಷಕ್ಕೂ ಹಳೆಯದಾದ ಬಾಕಿ ಪ್ರಕರಣ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಿಎಂ‌. appeared first on Good News 24x7.

]]>