DCM D.K. Shivakumar Archives - Good News 24x7 https://www.goodnews24x7.com/tag/dcm-d-k-shivakumar/ Kannada Fri, 16 May 2025 11:31:48 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg DCM D.K. Shivakumar Archives - Good News 24x7 https://www.goodnews24x7.com/tag/dcm-d-k-shivakumar/ 32 32 ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್. https://www.goodnews24x7.com/preparations-for-greater-bengaluru-elections-in-the-next-4-months-dcm-d-k-shivakumar/ Fri, 16 May 2025 11:31:38 +0000 https://www.goodnews24x7.com/?p=3893 ಮೈಸೂರು : “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ…

The post ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್. appeared first on Good News 24x7.

]]>

ಮೈಸೂರು : “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ, “ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ” ಎಂದು ತಿಳಿಸಿದರು.

ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ, “ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ” ಎಂದು ತಿಳಿಸಿದರು.

ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದು ತಿಳಿಸಿದರು.

“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದು ತಿಳಿಸಿದರು.
ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

The post ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್. appeared first on Good News 24x7.

]]>
ಸಿಎಂ , ಡಿಸಿಎಂ ಗೆ ವೇದಿಕೆ ಮೇಲೆಯೇ ಖರ್ಗೆ ಎಚ್ಚರಿಕೆ. https://www.goodnews24x7.com/kharge-warns-cm-dcm-on-stage/ Thu, 17 Apr 2025 11:39:23 +0000 https://www.goodnews24x7.com/?p=3318 ಕಲಬುರಗಿ :- ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದಾರೆ. ನೀವು, ನೀವೇ ಕಿತ್ತಾಡಿಕೊಳ್ಳುತ್ತಿದ್ದರೆ ಸರ್ಕಾರವನ್ನು ಮುಗಿಸು ತ್ತಾರೆ, ಹುಷಾರಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವೇದಿಕೆ…

The post ಸಿಎಂ , ಡಿಸಿಎಂ ಗೆ ವೇದಿಕೆ ಮೇಲೆಯೇ ಖರ್ಗೆ ಎಚ್ಚರಿಕೆ. appeared first on Good News 24x7.

]]>

ಕಲಬುರಗಿ :- ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದಾರೆ. ನೀವು, ನೀವೇ ಕಿತ್ತಾಡಿಕೊಳ್ಳುತ್ತಿದ್ದರೆ ಸರ್ಕಾರವನ್ನು ಮುಗಿಸು ತ್ತಾರೆ, ಹುಷಾರಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವೇದಿಕೆ ಮೇಲೆಯೇ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಉದ್ಯೋಗ  ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರತೆಗೆ ಯಲು ಪ್ಲಾನ್ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಕಲ್ಯಾಣ ವಿಭಾಗ ಮಟ್ಟದ ಉದ್ಯೋಗ ಮೇಳದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದ ಸಂದರ್ಭದಲ್ಲಿ ವಿಮಾನ ನಿಲ್ದಾಣ. ದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಚಿವರಿಗೆ ಅವಕಾಶ ನೀಡಲಾಗು
ಕರ್ನಾಟಕಕ್ಕೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಮಾಡುವುದೂ ಇಲ್ಲ. ಏಕೆಂದರೆ ನಾನು 1 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಳೆದ 10 ವರ್ಷಗಳಿಂದ ಮಾಡು
ವುದು. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷ ಆಣಿಕ ಸಮೀಕ್ಷೆ ಅಷ್ಟೇ. ಆದರೂ, ಯಾರಿಗೂ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ಅಭಿಪ್ರಾಯಗಳನ್ನೂ ಆಲಿಸಲಾಗುವುದು ಎಂದು ಹೇಳಿದರು. ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು.
ವುದಕ್ಕೆ ಸಾಧ್ಯವಾಗಿಲ್ಲ. ಕಡೇಚೂರಿನಲ್ಲಿ ರೈಲು ಬೋಗಿ ಕಾರ್ಖಾನೆ ನಿರ್ಮಾಣಕ್ಕಾಗಿ ಉಚಿತವಾಗಿ ಜಾಗ, ನೀರು, ವಿದ್ಯುತ್ ನೀಡಿದರೂ ಮೋದಿ ಸರ್ಕಾರ ಅನುದಾನ ಬಿಡುಗಡೆ ಮಾಡದೆ ನಿರ್ಲಕ್ಷಿಸುತ್ತಿದೆ.
ಕಲಬುರಗಿಯಿಂದ ದೇಶದ ವಿವಿಧ ಭಾಗಗಳಿಗೆ 27ಕ್ಕೂ ಹೆಚ್ಚು ರೈಲುಗಳನ್ನು ತಂದಿದ್ದೇವೆ. ಆದರೆ ಕಲಬುರಗಿಯಿಂದ ಬೆಂಗಳೂರಿಗೆ ಹೆಚ್ಚುವರಿ ರೈಲುಗಳನ್ನು ಬಿಡಿ ಎಂದು ಮನವಿ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.
ಕಲಬುರಗಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶ್ರೀನಿವಾಸ ಸರಡಗಿ ಗ್ರಾಮದ ಜನರು ಮುಕ್ತ ಮನಸ್ಸಿನಿಂದ ತಮ್ಮ ಜಮೀನುಗಳನ್ನು ಬಿಟ್ಟುಕೊಟ್ಟಿದ್ದಾರೆ.
ಈಗ ನೋಡಿದರೆ ಇಲ್ಲಿಗೆ ವಿಮಾನಗಳೇ ಬರುತ್ತಿಲ್ಲ. ಕಲಬುರಗಿಗೆ ನಿರಂತರ ವಿಮಾನ ಸೇವೆ ಆರಂಭಿಸಲು ಮೋದಿ ಸರ್ಕಾರ ಯಾವುದೇ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಆದರೆ ಕೇಂದ್ರ ಸರ್ಕಾರಕ್ಕೆ ಆಸಕ್ತಿ ಇರುವುದು ಒಂದೇ ವಿಷಯದಲ್ಲಿ, ಅದು ವಿಪಕ್ಷ ನಾಯಕರ ಮೇಲೆ ಐಟಿ, ಇಡಿ ದಾಳಿಗಳನ್ನು ಮಾಡಿಸುವುದರಲ್ಲಿ ಮಾತ್ರ ನಿರತವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

The post ಸಿಎಂ , ಡಿಸಿಎಂ ಗೆ ವೇದಿಕೆ ಮೇಲೆಯೇ ಖರ್ಗೆ ಎಚ್ಚರಿಕೆ. appeared first on Good News 24x7.

]]>