Dharwad: Archives - Good News 24x7 https://www.goodnews24x7.com/tag/dharwad/ Kannada Fri, 27 Feb 2026 12:23:56 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Dharwad: Archives - Good News 24x7 https://www.goodnews24x7.com/tag/dharwad/ 32 32 ವಿಜಯಪುರದಲ್ಲಿ ಜೆಡಿಎಸ್ ಬೃಹತ್ ಸಮಾವೇಶ https://www.goodnews24x7.com/jds-massive-convention-in-vijayapurajds-massive-convention-in-vijayapura/ Fri, 27 Feb 2026 12:23:42 +0000 https://www.goodnews24x7.com/?p=8518 ಹೌದು ಜೆಡಿಎಸ್‌ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ನಿಮಿತ್ತ ಕಿತ್ತೂರು ಕರ್ನಾಟಕ ಭಾಗದಲ್ಲಿ ‘ಬೆಳ್ಳಿಹಬ್ಬ’ ಆಚರಿಸುವ ಸಲುವಾಗಿ ವಿಜಯಪುರ ನಗರದಲ್ಲಿ ಇಂದು ಬೃಹತ್ ಜನತಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.   ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್‌ನಲ್ಲಿ ಜೆಡಿಎಸ್ ಜನತಾ ಸಮಾವೇಶ ಆಯೋಜನೆ ಮಾಡಲಾಗಿದೆ.…

The post ವಿಜಯಪುರದಲ್ಲಿ ಜೆಡಿಎಸ್ ಬೃಹತ್ ಸಮಾವೇಶ appeared first on Good News 24x7.

]]>

ಹೌದು ಜೆಡಿಎಸ್‌ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ನಿಮಿತ್ತ ಕಿತ್ತೂರು ಕರ್ನಾಟಕ ಭಾಗದಲ್ಲಿ ‘ಬೆಳ್ಳಿಹಬ್ಬ’ ಆಚರಿಸುವ ಸಲುವಾಗಿ ವಿಜಯಪುರ ನಗರದಲ್ಲಿ ಇಂದು ಬೃಹತ್ ಜನತಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

 

ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್‌ನಲ್ಲಿ ಜೆಡಿಎಸ್ ಜನತಾ ಸಮಾವೇಶ ಆಯೋಜನೆ ಮಾಡಲಾಗಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿ . ಅಂದಾಜು ಸುಮಾರು ಒಂದು ಲಕ್ಷ ಜನ ಸೇರಿದ್ದರೆಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

 

ರಜತ ಮಹೋತ್ಸವ, ಜನತಾ ಸಮಾವೇಶ ಹೆಸರಿನಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಿದೆ .ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಯುವ ಜನತಾದಳ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ದೇವಾನಂದ ಚಹ್ವಾಣ, ಪಕ್ಷದ ಸಂಸದರು, ಮಾಜಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಜಿಲ್ಲಾ ಘಟಕದ ಅಧ್ಯಕ್ಷರು ಸೇರಿದಂತೆ ಕಿತ್ತೂರು ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡು ಯಶಸ್ವಿ ಗೊಳಿಸಿದ್ದಾರೆ

The post ವಿಜಯಪುರದಲ್ಲಿ ಜೆಡಿಎಸ್ ಬೃಹತ್ ಸಮಾವೇಶ appeared first on Good News 24x7.

]]>
ವಿಶ್ವ ದಾಖಲೆಯಾದ ‘ಶಕ್ತಿ’! https://www.goodnews24x7.com/world-record-shakti/ Tue, 19 Aug 2025 06:07:02 +0000 https://www.goodnews24x7.com/?p=6388 ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಗಳಲ್ಲಿ ಒಂದಾದ ಶಕ್ತಿ ಯೋಜನೆ ‘ಗೋಲ್ಡನ್ ಬುಕ್…

The post ವಿಶ್ವ ದಾಖಲೆಯಾದ ‘ಶಕ್ತಿ’! appeared first on Good News 24x7.

]]>

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಗಳಲ್ಲಿ ಒಂದಾದ ಶಕ್ತಿ ಯೋಜನೆ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ಸೇರ್ಪಡೆಯಾಗಿದೆ. 2023ರ ಜೂನ್ 11 ರಿಂದ 2025 ಜುಲೈ 25ರ ಅವಧಿಯಲ್ಲಿ ನಾಲ್ಕೂ ನಿಗಮದ ಸಾರಿಗೆ ಬಸ್‌ಗಳಲ್ಲಿ

ಮಹಿಳೆಯರು (500 ಕೋಟಿ) ಉಚಿತ ಟಿಕೇಟ್ ಪಡೆದು ಪ್ರಯಾಣ ಮಾಡಿದ್ದಾರೆ. ಈ ಕಾರಣ ದಿಂದ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಶಕ್ತಿ ಯೋಜನೆ ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿರು ವುದು ಅತೀವ ಸಂತಸ ಮತ್ತು ಹೆಮ್ಮೆಯ ಕ್ಷಣ ವಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Record ನಲ್ಲಿ ಸ್ಥಾನ ಪಡೆದಿದೆ ಎಂದು ಹೇಳಿದ್ದಾರೆ. Beyond Free Rides ಎಂಬ ಹೆಸರಿನಲ್ಲಿ Sustainable Mobility Network ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ಅಧ್ಯಯನ ನಡೆಸಿತು. ಬೆಂಗಳೂರಿನಲ್ಲಿ ಶೇ.23 ರಷ್ಟು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಶೇ.21 ರಷ್ಟು ಹೆಚ್ಚು ಮಹಿಳಾ ಉದ್ಯೋಗಿಗಳು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಅಧ್ಯಯನ ವರದಿ ತಿಳಿಸಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

The post ವಿಶ್ವ ದಾಖಲೆಯಾದ ‘ಶಕ್ತಿ’! appeared first on Good News 24x7.

]]>
ಧಾರವಾಡದಲ್ಲಿ ದುರಂತ: ಥಿನ್ನರ್ ಬಾಟಲಿ ಸ್ಪೋಟದಿಂದ ಮೃತಪಟ್ಟ ಮಗನ ನಂತರ ಇದೀಗ ತಂದೆಯೂ ಸಾವು. https://www.goodnews24x7.com/tragedy-in-dharwad-after-son-dies-in-thinner-bottle-explosion-now-father-also-dies/ Tue, 19 Aug 2025 05:26:02 +0000 https://www.goodnews24x7.com/?p=6381 ಧಾರವಾಡ : ಥಿನ್ನರ್ ಬಾಟಲಿ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಮೃತಪಟ್ಟ ನಾಲ್ಕು ವರ್ಷದ ಮಗನ ನಂತರ, ಗಂಭೀರ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆಯೂ ಇಂದು ಮೃತಪಟ್ಟಿದ್ದಾರೆ. ಈ ಘಟನೆ ಧಾರವಾಡದ ಸಂತೋಷ್ ನಗರದಲ್ಲಿ ನಡೆದಿದೆ. ಮೃತರಾದವರು ಚಂದ್ರಕಾಂತ್…

The post ಧಾರವಾಡದಲ್ಲಿ ದುರಂತ: ಥಿನ್ನರ್ ಬಾಟಲಿ ಸ್ಪೋಟದಿಂದ ಮೃತಪಟ್ಟ ಮಗನ ನಂತರ ಇದೀಗ ತಂದೆಯೂ ಸಾವು. appeared first on Good News 24x7.

]]>

ಧಾರವಾಡ : ಥಿನ್ನರ್ ಬಾಟಲಿ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಮೃತಪಟ್ಟ ನಾಲ್ಕು ವರ್ಷದ ಮಗನ ನಂತರ, ಗಂಭೀರ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆಯೂ ಇಂದು ಮೃತಪಟ್ಟಿದ್ದಾರೆ. ಈ ಘಟನೆ ಧಾರವಾಡದ ಸಂತೋಷ್ ನಗರದಲ್ಲಿ ನಡೆದಿದೆ.

ಮೃತರಾದವರು ಚಂದ್ರಕಾಂತ್ ಮಾಶ್ಯಾಳ. ಕಳೆದ ಶುಕ್ರವಾರ (ಆಗಸ್ಟ್ 15), ಮನೆಯೊಳಗೆ ಶೀತದಿಂದ ರಕ್ಷಣೆಗಾಗಿ ಕಡುಪು (ಕುಪ್ಪಡಿ) ಇಡಲಾಗಿತ್ತು. ಈ ಸಮಯದಲ್ಲಿ ಆಟವಾಡುತ್ತಿದ್ದ ಮಗ ಅಗಸ್ತ್ಯ (4) ತಪ್ಪಿತಸ್ಥವಾಗಿ ಥಿನ್ನರ್ ಬಾಟಲಿಯನ್ನು ಕೆಡವಿದ್ದನು. ಬಾಟಲಿಯಿಂದ ಹೊರಬಂದ ದ್ರವ ಬೆಂಕಿಗೆ ತಗುಲಿ ತಕ್ಷಣವೇ ಅಗ್ನಿ ಹರಡಿತ್ತು.

ಅಗ್ನಿಯ ಕೆನ್ನಾಲಿಗೆ ಬಾಲಕನ ದೇಹವನ್ನು ಹೊತ್ತಿಕೊಂಡು ಭೀಕರ ಗಾಯಗಳನ್ನುಂಟುಮಾಡಿತು. ಮಗನನ್ನು ರಕ್ಷಿಸಲು ಮುಂದಾದ ತಂದೆ ಚಂದ್ರಕಾಂತ್‌ಗೂ ತೀವ್ರ ಸುಟ್ಟ ಗಾಯಗಳಾದವು. ತಕ್ಷಣವೇ ಇಬ್ಬರನ್ನೂ ಧಾರವಾಡದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಗಷ್ಟೇ ಬಾಲಕ ಅಗಸ್ತ್ಯ ಮೃತಪಟ್ಟಿದ್ದ. ಇಂದು, ತೀವ್ರ ನಿಗಾ ಘಟಕದಲ್ಲಿ ಸಾವಿನ ಹೋರಾಟ ನಡೆಸುತ್ತಿದ್ದ ತಂದೆ ಚಂದ್ರಕಾಂತ್ ಮಾಶ್ಯಾಳರೂ ಕೊನೆಯುಸಿರೆಳೆದರು.

ಈ ದ್ವಿತೀಯ ದುಃಖವಾರ್ತೆಯೊಂದಿಗೆ ಕುಟುಂಬದ ದುಃಖ ಮತ್ತಷ್ಟು ಆಳವಾಯಿತು. ತಂದೆ ಮತ್ತು ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ದಾರಿಯವರೆಗೆ ಹರಡಿದಂತಾಗಿದೆ.

The post ಧಾರವಾಡದಲ್ಲಿ ದುರಂತ: ಥಿನ್ನರ್ ಬಾಟಲಿ ಸ್ಪೋಟದಿಂದ ಮೃತಪಟ್ಟ ಮಗನ ನಂತರ ಇದೀಗ ತಂದೆಯೂ ಸಾವು. appeared first on Good News 24x7.

]]>
ಕೆಟ್ಟ ಸ್ಥಿತಿಯಲ್ಲಿ ಇವತ್ತು ದೇಶ ಇದೆ ; ಸಚಿವ ಸಂತೋಷ್ ಲಾಡ್. https://www.goodnews24x7.com/the-country-is-in-a-bad-state-today-minister-santosh-lad/ Sun, 29 Jun 2025 08:55:55 +0000 https://www.goodnews24x7.com/?p=4811 ಧಾರವಾಡ: “ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ?. ಪಹಲ್ಗಾಮ್, ಪುಲ್ವಾಮಾ ದಾಳಿ ಕುರಿತು ಕೇಳಬಾರದು ಎಂದು ಅವರು ಇಂಥ ಅಭಿಯಾನಗಳನ್ನು ತರುತ್ತಿದ್ದಾರೆ. ವಿಷಯಾಧಾರಿತ ಸಮಸ್ಯೆಗಳು ಜನರಿಗೆ ಗೊತ್ತಾಗಬಾರದೆಂಬುದು ಇವರ ಉದ್ದೇಶ” ಎಂದು ಸಚಿವ…

The post ಕೆಟ್ಟ ಸ್ಥಿತಿಯಲ್ಲಿ ಇವತ್ತು ದೇಶ ಇದೆ ; ಸಚಿವ ಸಂತೋಷ್ ಲಾಡ್. appeared first on Good News 24x7.

]]>

ಧಾರವಾಡ: “ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ?. ಪಹಲ್ಗಾಮ್, ಪುಲ್ವಾಮಾ ದಾಳಿ ಕುರಿತು ಕೇಳಬಾರದು ಎಂದು ಅವರು ಇಂಥ ಅಭಿಯಾನಗಳನ್ನು ತರುತ್ತಿದ್ದಾರೆ. ವಿಷಯಾಧಾರಿತ ಸಮಸ್ಯೆಗಳು ಜನರಿಗೆ ಗೊತ್ತಾಗಬಾರದೆಂಬುದು ಇವರ ಉದ್ದೇಶ” ಎಂದು ಸಚಿವ ಸಂತೋಷ್ ಲಾಡ್ ಟೀಕಿಸಿದರು.

“ಇವರ ಪ್ರಕಾರ ನಮ್ಮನ್ನು ಯಾವುದೇ ಬೇರೆ ದೇಶಕ್ಕೆ ಹೋಲಿಸಿ ನೋಡುವಂತಿಲ್ಲ. ಬೇರೆ ರಾಜ್ಯಕ್ಕೂ ಹೋಲಿಸಿ ನೋಡುವಂತಿಲ್ಲ. ನಮ್ಮ ದೇಶವೇ ಗ್ರೇಟ್, ನಮ್ಮ ಪ್ರಧಾನಿಯೇ ಗ್ರೇಟ್. ತುರ್ತು ಪರಿಸ್ಥಿತಿ ಈಗ ಪ್ರಸ್ತುತವೇ? ಚರ್ಚಿಸುವ ವಿಷಯವೇ? ಎಂದು ಅವರು ಕೇಳಿದರು. ಇದೇ ವೇಳೆ, ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡಲಿದ್ದಾರೆ ಎಂಬ ಆರ್.ಅಶೋಕ್ ಹೇಳಿಕೆಗೆ, “ಯಾರು ಸಿಎಂ ಆಗ್ತಾರೆ ಅಂತ ಅಶೋಕ್ ಅವರನ್ನೇ ಕೇಳಬೇಕು” ಎಂದರು.

“ಡಿಕ್ಟೇಟರ್ಶಿಪ್ ಕಾಂಗ್ರೆಸ್ ಪಕ್ಷದ ರಕ್ತ, ಡಿಎನ್ಎಯಲ್ಲೇ ಇದೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ವಾಗ್ದಾಳಿ ನಡೆಸಿದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ತುರ್ತು ಪರಿಸ್ಥಿತಿ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಮ್ಯೂನಿಸ್ಟ್ ಪಾರ್ಟಿಯ ಸರ್ಕಾರ ಕಿತ್ತೊಗೆದರು. ಅಂಬೇಡ್ಕರ್ ಅವರನ್ನು ರಾಜಕೀಯವಾಗಿ ತುಳಿದ ಪಕ್ಷ ಕಾಂಗ್ರೆಸ್. ಕರುಣಾನಿಧಿಯವರನ್ನು ಒಳಗೆ ಹಾಕಿಸಿದರು. ಇಂದಿರಾ ಗಾಂಧಿ ಹಿಟ್ಲರ್ ಅವರಂತೆ ವರ್ತಿಸಿದರು. 50 ವರ್ಷಗಳ ಹಿಂದೆ ಕಾಂಗ್ರೆಸ್ ಪಾರ್ಟಿ ಹೇಗೆ ನಡೆದುಕೊಂಡಿತ್ತು ಎಂನ್ನುವುದನ್ನು ತಿಳಿಸುವುದೇ ಈ ಕಾರ್ಯಕ್ರಮದ ಉದ್ದೇಶ. ಜಾತ್ಯತೀತತೆ ನಮ್ಮ ರಕ್ತದಲ್ಲಿದೆ. ಬಸವಣ್ಣನವರ ಕಾಲದಲ್ಲೇ ಜಾತ್ಯತೀತತೆ ಇತ್ತು. ನಾವು ಕಾಂಗ್ರೆಸ್ ಪಕ್ಷದಿಂದ ಕಲಿಯಬೇಕಿಲ್ಲ” ಎಂದು ವಾಕ್ಸಮರ ನಡೆಸಿದರು.

The post ಕೆಟ್ಟ ಸ್ಥಿತಿಯಲ್ಲಿ ಇವತ್ತು ದೇಶ ಇದೆ ; ಸಚಿವ ಸಂತೋಷ್ ಲಾಡ್. appeared first on Good News 24x7.

]]>
ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. https://www.goodnews24x7.com/rainfall-across-karnataka-for-the-next-one-week-yellow-alert-for-more-than-12-districts/ Tue, 13 May 2025 11:28:08 +0000 https://www.goodnews24x7.com/?p=3851 ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು,…

The post ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. appeared first on Good News 24x7.

]]>

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಂಎಂ ಹಿಲ್ಸ್, ಪುತ್ತೂರು, ಶಿವಮೊಗ್ಗದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.


ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

The post ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. appeared first on Good News 24x7.

]]>
ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆ ! https://www.goodnews24x7.com/%e0%b2%87%e0%b2%82%e0%b2%a6%e0%b2%bf%e0%b2%a8%e0%b2%bf%e0%b2%82%e0%b2%a6-5-%e0%b2%a6%e0%b2%bf%e0%b2%a8%e0%b2%97%e0%b2%b3-%e0%b2%95%e0%b2%be%e0%b2%b2-%e0%b2%b0%e0%b2%be%e0%b2%9c%e0%b3%8d%e0%b2%af/ Sat, 12 Apr 2025 10:52:28 +0000 https://www.goodnews24x7.com/?p=3167 ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು,…

The post ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆ ! appeared first on Good News 24x7.

]]>

ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

The post ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆ ! appeared first on Good News 24x7.

]]>
ಬೆಳಗ್ಗೆ SSLC ಪರೀಕ್ಷೆ, ರಾತ್ರಿ ತಂದೆ ಸಾ*ವು ;ದುಃಖದಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ!….. https://www.goodnews24x7.com/%e0%b2%ac%e0%b3%86%e0%b2%b3%e0%b2%97%e0%b3%8d%e0%b2%97%e0%b3%86-sslc-%e0%b2%aa%e0%b2%b0%e0%b3%80%e0%b2%95%e0%b3%8d%e0%b2%b7%e0%b3%86-%e0%b2%b0%e0%b2%be%e0%b2%a4%e0%b3%8d%e0%b2%b0%e0%b2%bf-%e0%b2%a4/ Sat, 22 Mar 2025 09:54:50 +0000 https://www.goodnews24x7.com/?p=2858 ನಿನ್ನೆ ರಾತ್ರಿಯೇ ಏಕಾಏಕಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ ತಂದೆ ನೂರಹಸನ.ತಂದೆಯ ಆಸೆ ಈಡೇರಿಸಲು ದುಃಖದಲ್ಲೂ ನಿರ್ಧಾರ ಮಾಡಿದ ವಿದ್ಯಾರ್ಥಿನಿ.ಮಗಳೇ ನಾನೇ ನಿನ್ನನ್ನು ಬೆಳಗ್ಗೆ ಪರೀಕ್ಷೆಗೆ ಬಿಡುವುದಾಗಿ ಹೇಳಿದ್ದರು.ತಂದೆ ಸಾವಿನ ದುಃಖದಲ್ಲೂ ಮಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಮನಕಲಕುವ ಘಟನೆ ಧಾರವಾಡ ಜಿಲ್ಲೆಯ…

The post ಬೆಳಗ್ಗೆ SSLC ಪರೀಕ್ಷೆ, ರಾತ್ರಿ ತಂದೆ ಸಾ*ವು ;ದುಃಖದಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ!….. appeared first on Good News 24x7.

]]>

ನಿನ್ನೆ ರಾತ್ರಿಯೇ ಏಕಾಏಕಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ ತಂದೆ ನೂರಹಸನ.ತಂದೆಯ ಆಸೆ ಈಡೇರಿಸಲು ದುಃಖದಲ್ಲೂ ನಿರ್ಧಾರ ಮಾಡಿದ ವಿದ್ಯಾರ್ಥಿನಿ.ಮಗಳೇ ನಾನೇ ನಿನ್ನನ್ನು ಬೆಳಗ್ಗೆ ಪರೀಕ್ಷೆಗೆ ಬಿಡುವುದಾಗಿ ಹೇಳಿದ್ದರು.ತಂದೆ ಸಾವಿನ ದುಃಖದಲ್ಲೂ ಮಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಮನಕಲಕುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ.

ಶಬಾನಾ ಪಟಾಸು ನವಲಗುಂದ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಶಬಾನಾ ಚೆನ್ನಾಗಿ ಓದಬೇಕು ಅನ್ನೋದು ಶಬಾನಾ ತಂದೆ ನೂರಹಸನ ಅವರ ಆಸೆಯಾಗಿತ್ತು. ಆದರೆ ಕಳೆದ ಗುರುವಾರ ರಾತ್ರಿ ಏಕಾಏಕಿ ಹೊಟ್ಟೆ ನೋವು ಬಂದು ಮೃತಪಟ್ಟಿದ್ದಾರೆ.ಶುಕ್ರವಾರ ಬೆಳಗ್ಗೆ ಮಗಳಿಗೆ SSLC ಪರೀಕ್ಷೆ ಇತ್ತು. ಗುರುವಾರ ರಾತ್ರಿ ತಂದೆ ನೂರಹಸನ ಮಗಳೇ ನಾನೇ ನಿನ್ನನ್ನು ಬೆಳಗ್ಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಬಿಡುವುದಾಗಿ ಹೇಳಿದ್ದರು. ಆದರೆ ಗುರುವಾರ ರಾತ್ರಿಯೇ ವಿದ್ಯಾರ್ಥಿನಿ ತಂದೆ ಪ್ರಾಣ ಬಿಟ್ಟಿದ್ದಾರೆ.ತಂದೆಯ ಸಾವಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಶಬಾನಾ ಪಟಾಸು SSLC ಪರೀಕ್ಷೆಗೆ ಗೈರಾಗುತ್ತಿದ್ದರು. ಇದನ್ನು ತಿಳಿದ ಶಿಕ್ಷಕರು ವಿದ್ಯಾರ್ಥಿನಿಯ ಮನ ಒಲಿಸಿದ್ದಾರೆ. ಶಿಕ್ಷಕರ ಮನವಿ, ತಂದೆಯ ಆಸೆ ಈಡೇರಿಸಲು ನಿರ್ಧರಿಸಿದ ಶಬಾನಾ ಪರೀಕ್ಷೆಗೆ ಹಾಜರಾಗಿದ್ದಾರೆ.
ಈ ವಿಷಯ ತಿಳಿದ ಶಿಕ್ಷಣ ಇಲಾಖೆ ವಿದ್ಯಾರ್ಥಿನಿಗೆ ವಾಹನ ವ್ಯವಸ್ಥೆಯ ಅನುಕೂಲ ಮಾಡಿಕೊಟ್ಟಿದೆ. ತಂದೆಯ ಪ್ರೇರಣೆಯಿಂದಲೇ ಶಾಲೆಗೆ ಬರುತ್ತಿರುವುದಾಗಿ ಹೇಳಿರುವ ವಿದ್ಯಾರ್ಥಿನಿ ದುಃಖದಲ್ಲೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಗಮನ ಸೆಳೆದಿದ್ದಾರೆ.

The post ಬೆಳಗ್ಗೆ SSLC ಪರೀಕ್ಷೆ, ರಾತ್ರಿ ತಂದೆ ಸಾ*ವು ;ದುಃಖದಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ!….. appeared first on Good News 24x7.

]]>
ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ವೈರಲ್, ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಕೇಳಿಬಂತು ಅಕ್ರಮದ ಆರೋಪ, https://www.goodnews24x7.com/%e0%b2%b8%e0%b3%80%e0%b2%b2%e0%b3%8d-%e0%b2%93%e0%b2%aa%e0%b2%a8%e0%b3%8d-%e0%b2%86%e0%b2%97%e0%b2%bf%e0%b2%b0%e0%b3%81%e0%b2%b5-%e0%b2%aa%e0%b3%8d%e0%b2%b0%e0%b2%b6%e0%b3%8d%e0%b2%a8%e0%b3%86/ Thu, 12 Dec 2024 09:10:17 +0000 https://www.goodnews24x7.com/?p=1082 ಧಾರವಾಡ: ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದೆ. ಧಾರವಾಡದಲ್ಲಿ ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಭ್ಯರ್ಥಿಗಳು ಮರು ಪರೀಕ್ಷೆಗೆ…

The post ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ವೈರಲ್, ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಕೇಳಿಬಂತು ಅಕ್ರಮದ ಆರೋಪ, appeared first on Good News 24x7.

]]>

ಧಾರವಾಡ: ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದೆ. ಧಾರವಾಡದಲ್ಲಿ ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಭ್ಯರ್ಥಿಗಳು ಮರು ಪರೀಕ್ಷೆಗೆ ಆಗ್ರಹಿಸಿದ್ದಾರೆ.

ಧಾರವಾಡ, ಡಿಸೆಂಬರ್ 12: ಪಿಡಿಒ ನೇಮಕಾತಿಗೆ ಸಂಬಂಧಿಸಿ ಡಿಸೆಂಬರ್ 8ರಂದು ನಡೆದಿದ್ದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಪ್ಪಿತಸ್ಥರನ್ನು ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರವೂ ವ್ಯಕ್ತವಾಗಿದೆ. ಇದರೊಂದಿಗೆ, ಈ ಸಲವೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕೆಪಿಎಸ್‌ಸಿ ವಿಫಲವಾಯ್ತಾ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.
ಧಾರವಾಡದ ಕೆಎನ್‌ಕೆ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ಕೈ ಸೇರುವ ಮೊದಲೇ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಸಾಮಾನ್ಯ ಜ್ಞಾನ ವಿಷಯಕ್ಕೆ ಸಂಬಂಧಪಟ್ಟ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು ಎನ್ನಲಾಗಿದೆ.

ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್‌ಗೆ ಸಮಗ್ರವಾಗಿ ಪ್ಲಾಸ್ಟಿಕ್ ಕವರ್ನ ಸೀಲ್ ಹಾಕಿರಲಾಗುತ್ತದೆ. ಬಳಿಕ ಆಯಾ ಪರೀಕ್ಷಾ ಕೊಠಡಿಯ ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ ಇರುತ್ತದೆ. ಆದರೆ, ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಪುನಃ ಆಂಟಿಸಿದ್ದಾರೆಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಕೆಪಿಎಸ್‌ಸಿ ಸರಿಯಾಗಿ ಪರೀಕ್ಷೆ ನಡೆಸಿಲ್ಲವೆಂದು ಅಭ್ಯರ್ಥಿಗಳು ಆರೋಪ ಮಾಡಿದ್ದು, ಮರುಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಕೆಪಿಎಸ್‌ಸಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿಯನ್ನೂ ಮಾಡಲಾಗಿದೆ . ಮರುಪರೀಕ್ಷೆ ಮಾಡಬೇಕೆಂದು ಹೋರಾಟ ನಡೆಸಲು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ ತೀರ್ಮಾನಿಸಿದೆ. ಜತೆಗೆ, ಸೀಲ್ ಓಪನ್ ಮಾಡಿರುವ ಬಗ್ಗೆ ತನಿಖೆ ಮಾಡುವಂತೆ ಆಗ್ರಹಿಸಿದೆ.

ಕೇವಲ ತುಮಕೂರಿನಲ್ಲಿ ಒಬ್ಬ ಅಭ್ಯರ್ಥಿ ಬ್ಲೂಟೂತ್ ಬಳಸಿಲ್ಲ, ಇದರ ಹಿಂದೆ ಒಂದು ದೊಡ್ಡ ಗ್ಯಾಂಗ್ ಇದೆ. ನಮಗೆಲ್ಲ ನೆನಪಿದೆ, ತಾವೇ ಮುಂದಾಳತ್ವ ವಹಿಸಿಕೊಂಡು PSI ಹಗರಣವನ್ನು ಬಯಲಿಗೆಳೆದು, ಅಕ್ರಮದ ಅಪರಾಧಿಗಳಿಗೆ ಜೈಲುಗಂಬಿ ಎಣಿಸಲಿಕ್ಕೆ ಹಚ್ಚಿದಿರಿ. PDO HK ಮತ್ತು NON HK ಪರೀಕ್ಷೆಯಲ್ಲಿ “ಬ್ಲೂಟೂತ್ ಬಳಕೆ”ಮತ್ತು “ಪ್ರಶ್ನೆ ಪತ್ರಿಕೆ ಸೋರಿಕೆ” ಆಗಿರುವುದು ಜಗಜ್ಜಾಹೀರವಾಗಿದೆ. ಬಡ ಅಭ್ಯರ್ಥಿಗಳು 5-6 ವರ್ಷದಿಂದ ಪರೀಕ್ಷೆಗೆ ಹಗಲು-ರಾತ್ರಿ ತಯಾರಿ ನಡೆಸಿದ್ದರು. ಅಕ್ರಮವಾಗಿ ಸರ್ಕಾರಿ ಹುದ್ದೆಗಳು ಮಾರಾಟವಾದರೆ, ಪ್ರತಿಭಾನ್ವಿತ ಬಡ ಅಭ್ಯರ್ಥಿಗಳ ಗತಿಯೇನು? ಇದಕ್ಕೆ ಉತ್ತರ ತಾವು ಕೊಡಬೇಕು. ಯುವಕರ ಕಣ್ಮಣಿ ನೀವು, ನಿಮ್ಮ ಮೇಲೆ ಲಕ್ಷಾಂತರ ಅಭ್ಯರ್ಥಿಗಳು ಭರವಸೆ ಇಟ್ಟಿದ್ದಾರೆ. ಇದಕ್ಕೆ ಪರಿಹಾರ ಹುಡಿಕಿ, ಅಕ್ರಮದಲ್ಲಿ ಭಾಗಿಯಾದ ಆರೋಪಿಗಳಿಗೆ ಜೈಲಿಗಟ್ಟಿಸಿ, “ಮರುಪರೀಕ್ಷೆ “ನಡೆಸುವಂತೆ KPSC ಗೆ ಅದೇಶಿಸಬೇಕೆಂದು AKSSA ಸಂಘಟನೆ ಪರವಾಗಿ ಕೇಳಿಕೊಳ್ಳುತ್ತೇವೆ ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (ರಿ) ವಿದ್ಯಾರ್ಥಿ ಘಟಕದ ಕಾಂತಕುಮಾರ್ ಆರ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ ಆಗ್ರಹಿಸಿದ್ದಾರೆ.

The post ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ವೈರಲ್, ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಕೇಳಿಬಂತು ಅಕ್ರಮದ ಆರೋಪ, appeared first on Good News 24x7.

]]>