Employees Archives - Good News 24x7 https://www.goodnews24x7.com/tag/employees/ Kannada Tue, 07 Apr 2026 11:10:29 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Employees Archives - Good News 24x7 https://www.goodnews24x7.com/tag/employees/ 32 32 ಏ. 8ರಂದು ಬಸ್ ಸಂಚಾರ ಡೌಟ್!. https://www.goodnews24x7.com/bus-service-on-april-8th-in-doubt/ Tue, 07 Apr 2026 11:10:29 +0000 https://www.goodnews24x7.com/?p=9148 38 ತಿಂಗಳ ವೇತನ ಹಿಂಬಾಕಿ ‌ಮತ್ತು ಹೊಸ ವೇತನ (Salary Arrears) ಪರಿಷ್ಕರಣೆಗಾಗಿ ಆಗ್ರಹಿಸಿ ಈಗಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್​ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ…

The post ಏ. 8ರಂದು ಬಸ್ ಸಂಚಾರ ಡೌಟ್!. appeared first on Good News 24x7.

]]>

38 ತಿಂಗಳ ವೇತನ ಹಿಂಬಾಕಿ ‌ಮತ್ತು ಹೊಸ ವೇತನ (Salary Arrears) ಪರಿಷ್ಕರಣೆಗಾಗಿ ಆಗ್ರಹಿಸಿ ಈಗಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್​ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ ಒಪ್ಪದ ಸಾರಿಗೆ ನೌಕರರ ಕೂಟ ಮತ್ತೆ ಹೋರಾಟಕ್ಕೆ ಮುಂದಾಗಿದೆ.

ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ವರೆಗೆ ಪಾದಯಾತ್ರೆ
ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಬೇಕಿದ್ದ 38 ವೇತನ ಹಿಂಬಾಕಿ 2024ರಿಂದ ಆಗಬೇಕಿದ್ದ, ಹೊಸ ವೇತನ ಒಪ್ಪಂದಕ್ಕಾಗಿ ಆಗ್ರಹಿಸಿ ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ರಾಜ್ಯ ಸರ್ಕಾರ 38 ತಿಂಗಳು ವೇತನ ಹಿಂಬಾಕಿ ಬದಲಿಗೆ 26 ತಿಂಗಳು ವೇತನ ಹಿಂಬಾಕಿ, 2024 ಜನವರಿ ಬದಲಿಗೆ 2025ರ ಏಪ್ರಿಲ್​ನಿಂದ ಹೊಸ ವೇತನ ಒಪ್ಪಂದ ಮಾಡುವುದಾಗಿ ಈಗಾಗಲೇ ಆದೇಶ ಮಾಡಿದೆ. ಆದರೆ ಇದಕ್ಕೆ ಒಪ್ಪದ ಸಾರಿಗೆ ನೌಕರರ ಒಕ್ಕೂಟ ಇಂದು ಸುದ್ದಿಗೋಷ್ಠಿ ನಡೆಸಿ ಯಾವುದೇ ‌ಕಾರಣಕ್ಕೂ ಸರ್ಕಾರದ ಆದೇಶವನ್ನು ನಾವು ಒಪ್ಪುವುದಿಲ್ಲ. ಏಪ್ರಿಲ್​ 8ರಿಂದ ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ವರೆಗೆ ಪಾದಯಾತ್ರೆ ಮಾಡುತ್ತೇವೆ ಎಂದು ಸಾರಿಗೆ ನೌಕರರ ಒಕ್ಕೂಟ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ.
ಇದನ್ನೂ ಓದಿ: ವೇತನ ಹಿಂಬಾಕಿಗೆ ಡಿಮ್ಯಾಂಡ್​​: ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ

ಇನ್ನು ಸಾರಿಗೆ ನೌಕರರ ಒಕ್ಕೂಟ 38 ತಿಂಗಳ ವೇತನ ಹಿಂಬಾಕಿ ಮತ್ತು 2024 ಜನವರಿಯಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಪಟ್ಟುಹಿಡಿದಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ 38 ತಿಂಗಳ ವೇತನ ಹಿಂಬಾಕಿಯಲ್ಲಿ 26 ತಿಂಗಳ ವೇತನ ಹಿ‌ಂಬಾಕಿ 1272 ಕೋಟಿ ರೂ ನೀಡುತ್ತಿದೆ. 2024 ಜನವರಿಯಿಂದ ಆಗಬೇಕಿದ್ದ ಹೊಸ ವೇತನ ಒಪ್ಪಂದವನ್ನು 2025 ಏಪ್ರಿಲ್​ನಿಂದ ಮಾಡಲು ಮುಂದಾಗಿದೆ.

1970 ಕೋಟಿ ರೂ ಹಿಂಬಾಕಿ ಬಿಡುಗಡೆಗೆ ಪಟ್ಟು
ಸರ್ಕಾರದ ಈ ನಿರ್ಧಾರಕ್ಕೆ ಒಪ್ಪದ ಕೆಎಸ್ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರು 38 ತಿಂಗಳ ವೇತನ ಹಿಂಬಾಕಿ 1970 ಕೋಟಿ ರೂ ಬಿಡುಗಡೆ ಮಾಡಲೇಬೇಕು ಮತ್ತು 2024 ಜನವರಿಯಿಂದಲೇ ಹೊಸ ವೇತನ ಒಪ್ಪಂದ ಮಾಡಬೇಕೆಂದು ಪಟ್ಟುಹಿಡಿದಿದ್ದಾರೆ. ಈ ನಿಟ್ಟಿನಲ್ಲಿ ಫ್ರೀಡಂ ಪಾರ್ಕ್​ಗೆ ಬಂದು, ಅಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಂತರ ಮುಷ್ಕರಕ್ಕೆ ಹೋಗಬೇಕೆಂದು ಸಾರಿಗೆ ನೌಕರರ ಮುಖಂಡರು ಸಿದ್ಧತೆ ಮಾಡಿಕೊಂಡಿದ್ದಾರೆ. ಅಂದು ಬಸ್​​ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದೂಡುವುದು ಉತ್ತಮ.

ಒಟ್ಟಿನಲ್ಲಿ ರಾಜ್ಯ ಸರ್ಕಾರ ನೀಡಬೇಕಿದ್ದ 38 ತಿಂಗಳ ಬದಲಿಗೆ 26 ತಿಂಗಳಿನ ವೇತನ ಮತ್ತು 2024 ಜನವರಿ ಬದಲಿಗೆ ‌25 ಏಪ್ರಿಲ್​ನಿಂದ ಹೊಸ ವೇತನ ಪರಿಷ್ಕರಣೆ ಮಾಡುತ್ತೇವೆ ಅಂತಿದ್ದಾರೆ. ಆದರೆ ಇದಕ್ಕೆ ಸಾರಿಗೆ ನೌಕರರು ಒಪ್ಪದೆ ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ‌ಕಾದು ನೋಡಬೇಕಿದೆ.

The post ಏ. 8ರಂದು ಬಸ್ ಸಂಚಾರ ಡೌಟ್!. appeared first on Good News 24x7.

]]>
ಕಾನ್‌ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ.ಜೆ ರಾಯ್ ಸಾ#ವಿನ ಕೊನೆಯ ಕ್ಷಣ ಹೇಗಿತ್ತು ಗೊತ್ತಾ? https://www.goodnews24x7.com/do-you-know-what-the-last-moments-of-confident-group-chairman-c-j-roys-death-were-like/ Sat, 31 Jan 2026 07:15:56 +0000 https://www.goodnews24x7.com/?p=8342 ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್  ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. 57 ವರ್ಷದ ಈ ರಿಯಲ್ ಎಸ್ಟೇಟ್ ಉದ್ಯಮಿ ತಮ್ಮ ಪಿಸ್ತೂಲಿನಿಂದ ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಹಲವಾರು ಅನುಮಾನಗಳು…

The post ಕಾನ್‌ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ.ಜೆ ರಾಯ್ ಸಾ#ವಿನ ಕೊನೆಯ ಕ್ಷಣ ಹೇಗಿತ್ತು ಗೊತ್ತಾ? appeared first on Good News 24x7.

]]>

ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್  ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. 57 ವರ್ಷದ ಈ ರಿಯಲ್ ಎಸ್ಟೇಟ್ ಉದ್ಯಮಿ ತಮ್ಮ ಪಿಸ್ತೂಲಿನಿಂದ ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಹಲವಾರು ಅನುಮಾನಗಳು ಕಾಡುತ್ತಿವೆ. ಅದರಲ್ಲದೆ ಅವರು ಬಳಸಿದ ಪಿಸ್ತೂಲಿಗೆ ಲೈಸೆನ್ಸ್ ಇರಲಿಲ್ಲವೆಂಬ ಶಂಕೆಯೂ ವ್ಯಕ್ತವಾಗಿದೆ.
ಕೇರಳದ ಕೊಚ್ಚಿಯಿಂದ ಬಂದ ಆದಾಯ ತೆರಿಗೆ (ಐಟಿ) ಅಧಿಕಾರಿಗಳ ತಂಡವು ಬೆಂಗಳೂರಿನ ತಮ್ಮ ಸಹೋದ್ಯೋಗಿಗಳೊಂದಿಗೆ ಕಳೆದ ಮೂರು ದಿನಗಳಿಂದ ಕಾನ್‌ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು. ಕಳೆದ ತಿಂಗಳು ಕಚೇರಿಯಲ್ಲಿ ನಡೆದ ದೊಡ್ಡ ಮಟ್ಟದ ದಾಳಿಯಲ್ಲಿ ಕೆಲವು ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲಿಸಿ ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೇ ಮತ್ತೊಮ್ಮೆ ದಾಳಿ ನಡೆದಿತ್ತು.

ಆದಾಯ ತೆರಿಗೆ (ಐಟಿ) ಅಧಿಕಾರಿಗಳ ದಾಳಿ ವೇಳೆ ನಡೆದಿದ್ದೇನು?
ಮಧ್ಯಾಹ್ನ 12 ಗಂಟೆ: ಬೆಂಗಳೂರಿನ ಕಾನ್‌ಫಿಡೆಂಟ್ ಗ್ರೂಪ್ ಕಚೇರಿಗೆ ಐ-ಟಿ ಅಧಿಕಾರಿಗಳ ಆಗಮನ
ಮಧ್ಯಾಹ್ನ 2 ಗಂಟೆ: ಕಚೇರಿಗೆ ಸಿ.ಜೆ. ರಾಯ್ ಆಗಮನ
ಮಧ್ಯಾಹ್ನ 2–3 ಗಂಟೆ:ಕೆಲವು ದಾಖಲೆಗಳಿಗೆ ಸಹಿ ಹಾಕಲು ಮತ್ತು ಪರಿಶೀಲಿಸಲು ಅಧಿಕಾರಿಗಳ ಸೂಚನೆ
ಮಧ್ಯಾಹ್ನ 3 ಗಂಟೆ: ರಾಯ್ ತಮ್ಮ ಖಾಸಗಿ ಕೇಬಿನ್‌ಗೆ ತೆರಳುತ್ತಾರೆ
ಮಧ್ಯಾಹ್ನ 3–3:10: ಪಿಸ್ತೂಲ್ ತೆಗೆದು ಎದೆಗೆ ಗುಂಡು ಹಾರಿಸಿಕೊಂಡು ಕುಸಿದು ಬೀಳುತ್ತಾರೆ
ಸಂಜೆ 3:10–4 ಗಂಟೆ: ಉದ್ಯೋಗಿಗಳು ಮತ್ತು ಅಧಿಕಾರಿಗಳು ರಾಯ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಎಚ್‌ಎಸ್‌ಆರ್ ಲೇಔಟ್‌ನ ಆಸ್ಪತ್ರೆಗೆ ಕರೆದೊಯ್ಯುತ್ತಾರೆ; ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಯುತ್ತದೆ.
ಸುಮಾರು ಮಧ್ಯಾಹ್ನ 3 ಗಂಟೆಗೆ, ತಮ್ಮ ಕೇಬಿನ್‌ನಲ್ಲಿ ಕೆಲವು ದಾಖಲೆಗಳಿವೆ ಎಂದು ಹೇಳಿ ರಾಯ್ ಒಳಗೆ ತೆರಳಿದ್ದರು. ಕೆಲವೇ ನಿಮಿಷಗಳಲ್ಲಿ ಗುಂಡಿನ ಶಬ್ದ ಕೇಳಿಬಂದಿತ್ತು. ಕೇಬಿನ್‌ನಲ್ಲಿ ಸಿಸಿಟಿವಿ ಕ್ಯಾಮೆರಾ ಇತ್ತೋ ಇಲ್ಲವೋ ಎಂಬುದನ್ನು ಪೊಲೀಸರು ದೃಢಪಡಿಸಿಲ್ಲ.

ದಾಖಲೆಗಳಿರುವ ಬ್ರೀಫ್‌ಕೇಸ್ ಮತ್ತು ಪಿಸ್ತೂಲ್ ಸದಾ ಜೊತೆಗೇ ಇಟ್ಟುಕೊಳ್ಳುತ್ತಿದ್ದ ರಾಯ್
ರಾಯ್ ಅವರ ಆಪ್ತ ಸಹಾಯಕ ಹೇಳುವಂತೆ, ಪಿಸ್ತೂಲ್ ಇದ್ದ ಕಾರಣ ರಾಯ್ ಸದಾ ತಮ್ಮ ಬ್ರೀಫ್‌ಕೇಸ್ ಅನ್ನು ಜೊತೆಗೇ ಇಟ್ಟುಕೊಳ್ಳುತ್ತಿದ್ದರು. ಅಪರೂಪಕ್ಕೆ ಅವುಗಳನ್ನು ಮರೆತರೂ ಸಹ ತಕ್ಷಣ ತಮ್ಮ ಭದ್ರತಾ ಸಿಬ್ಬಂದಿಯನ್ನು ಕಳುಹಿಸಿ ತರಿಸಿಕೊಳ್ಳುತ್ತಿದ್ದರು.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ, ಸಿ.ಜೆ ರಾಯ್ ಆತ್ಮಹತ್ಯೆಗೆ ಬಳಸಿದ ಪಿಸ್ತೂಲಿನ ತಯಾರಿಕೆ ಮತ್ತು ಕ್ಯಾಲಿಬರ್ ಅನ್ನು ಬಾಲಿಸ್ಟಿಕ್ ತಜ್ಞರ ತಂಡ ಪರಿಶೀಲಿಸಿ ದೃಢಪಡಿಸಬೇಕಿದೆ ಎಂದಿದ್ದಾರೆ.
ಕಾನ್‌ಫಿಡೆಂಟ್ ಗ್ರೂಪ್‌ನ ಸ್ಥಾಪಕ ನಿರ್ದೇಶಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಟಿ.ಎ. ಜೋಸೆಫ್ ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ಐಟಿ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ದೂರಿನಲ್ಲಿ ಮಾಡಿಲ್ಲ. ಆದ್ದರಿಂದ ನಾವು ಅಸಹಜ ಮರಣ ಪ್ರಕರಣವನ್ನು ದಾಖಲಿಸಿದ್ದೇವೆ. ಕುಟುಂಬದವರು ಹೊಸ ಆರೋಪಗಳನ್ನು ಮಾಡಿದರೆ ಪ್ರತ್ಯೇಕ ಎಫ್‌ಐಆರ್ ದಾಖಲಿಸುವ ಸಾಧ್ಯತೆಯಿದೆ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಅವರ ಸಹಾಯಕರೊಬ್ಬರು, ಇಷ್ಟು ವರ್ಷಗಳ ಕಾಲ ರಾಯ್ ಅವರೊಂದಿಗೆ ಕೆಲಸ ಮಾಡಿದ್ದೇನೆ. ಆದರೆ ಅವರು ದುರ್ಬಲ ಮನಸ್ಸಿನವರಾಗಿ ಎಂದಿಗೂ ಕಾಣಿಸಿಲ್ಲ ಎಂದು ಹೇಳಿದ್ದಾರೆ.

ಐ-ಟಿ ಅಧಿಕಾರಿಗಳೇ ಅವರ ಸಾವಿಗೆ ಕಾರಣವೆಂದ ಸಹೋದರ!
ರಾಯ್ ಅವರ ಸಹೋದರ ಮತ್ತು ವೈಟ್‌ಗೋಲ್ಡ್ ಸಂಸ್ಥೆಯ ಮಾಲೀಕ ಸಿ.ಜೆ. ಬಾಬು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಕಳೆದ ಮೂರು ದಿನಗಳಿಂದ ಕೇರಳದ ಆದಾಯ ತೆರಿಗೆ ಅಧಿಕಾರಿಗಳು ಬೆಂಗಳೂರಿನಲ್ಲಿ ಶೋಧ ನಡೆಸುತ್ತಿದ್ದರು ಎಂದು ಹೇಳಿದರು. ಅಧಿಕಾರಿಗಳಿಂದ ಒತ್ತಡದ ಆರೋಪ ಮಾಡಿರುವ ಅವರು, ರಾಯ್ ಅವರು ಪಿಸ್ತೂಲ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಾವಿಗೆ ಐಟಿ ತಂಡವೇ ಕಾರಣ ಎಂದು ಆರೋಪಿಸಿದ್ದಾರೆ.
ರಾಯ್ ಅವರ ಪತ್ನಿ, ಇಪ್ಪತ್ತರ ವಯಸ್ಸಿನ ಮಗ ಮತ್ತು ಮಗಳು ದುಬೈನಲ್ಲಿ ನೆಲೆಸಿದ್ದು, ಶನಿವಾರ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸುತ್ತಾರೆಂದು ಹೇಳಲಾಗಿದೆ. ರಾಯ್ ಅವರ ತಾಯಿ ಕೊರಮಂಗಲದ ನೆಕ್ಸಸ್ ಮಾಲ್ ಸಮೀಪ ವಾಸಿಸುತ್ತಿದ್ದು, ಅವರು ಅಲ್ಲಿ ಅಪರೂಪಕ್ಕೆ ಮಾತ್ರ ತಂಗುತ್ತಿದ್ದರು ಎಂದು ಸಹಾಯಕರು ತಿಳಿಸಿದ್ದಾರೆ. ಬೆಂಗಳೂರಿಗೆ ಬಂದಾಗ ಸಾಮಾನ್ಯವಾಗಿ ಅವರು ಕೇಂದ್ರ ವ್ಯಾಪಾರ ವಲಯದ ಫೈವ್ ಸ್ಟಾರ್ ಹೋಟೆಲ್‌ಗಳಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಅಧಿಕಾರಿಗಳು ಹೇಳಿದ್ದೇನು?
ಐಟಿ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿದ ಪೊಲೀಸರು, ಅಧಿಕಾರಿಗಳು ಕೇವಲ ಅವರ ಸಂಸ್ಥೆಯ ಮೇಲಿದ್ದ ನಿರ್ಬಂಧ ಆದೇಶಗಳನ್ನು ತೆರವುಗೊಳಿಸುವ ಸಲುವಾಗಿ ದಾಖಲೆ ಪರಿಶೀಲನೆ ನಡೆಸುತ್ತಿದ್ದರು. ರಾಯ್ ಅವರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ನಿರ್ಬಂಧ ಇರಲಿಲ್ಲ. ರಾಯ್​ ಎಷ್ಟು ಸುತ್ತು ಗುಂಡು ಹಾರಿಸಿಕೊಂಡಿದ್ದಾರೆ ಎಂಬುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಒಬ್ಬ ಹಿರಿಯ ತನಿಖಾಧಿಕಾರಿ ಮಾತನಾಡಿ, ಗುಂಡಿನ ಶಬ್ದ ಕೇಳಿದ ತಕ್ಷಣ ಉದ್ಯೋಗಿಗಳು ಮತ್ತು ಅಧಿಕಾರಿಗಳಲ್ಲಿ ಗೊಂದಲ ಸೃಷ್ಟಿಯಾಗಿತ್ತು. ನಂತರ ರಾಯ್ ಅವರನ್ನು ಎಚ್‌ಎಸ್‌ಆರ್ ಲೇಔಟ್‌ನ ನಾರಾಯಣ ಆಸ್ಪತ್ರೆಗಳಿಗೆ ಕರೆದೊಯ್ದರು. ಅಲ್ಲಿ ವೈದ್ಯರು ಅವರನ್ನು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆಂದರು ಎಂದು ಹೇಳಿದ್ದಾರೆ.

The post ಕಾನ್‌ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ.ಜೆ ರಾಯ್ ಸಾ#ವಿನ ಕೊನೆಯ ಕ್ಷಣ ಹೇಗಿತ್ತು ಗೊತ್ತಾ? appeared first on Good News 24x7.

]]>
ಸೈಬರ್ ದಾಳಿ ಸಂತ್ರಸ್ತರಲ್ಲಿ ಭಾರತ ನಂ 1. https://www.goodnews24x7.com/india-is-no-1-in-cyber-attack-victims/ Sat, 23 Aug 2025 09:00:11 +0000 https://www.goodnews24x7.com/?p=6550 ಭಾರತವು ಜಾಗತಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಬ್ರೆಜಿಲ್ ಮತ್ತು ಸ್ಪೇನ್‌ನಂತಹ ದೇಶಗಳನ್ನು ಹಿಂದಿಕ್ಕಿ, ನಾವು ಮತ್ತೊಂದು ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತಲುಪಿದ್ದೇವೆ. ಆದರೆ, ಇದು ಖುಷಿಪಡುವಂತಹ ಸಾಧನೆಯಲ್ಲ, ಬದಲಾಗಿ ಗಂಭೀರವಾಗಿ ಆಲೋಚಿಸಬೇಕಾದ ವಿಷಯ. ಏಕೆಂದರೆ, ಸೈಬರ್ ದಾಳಿ…

The post ಸೈಬರ್ ದಾಳಿ ಸಂತ್ರಸ್ತರಲ್ಲಿ ಭಾರತ ನಂ 1. appeared first on Good News 24x7.

]]>

ಭಾರತವು ಜಾಗತಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಬ್ರೆಜಿಲ್ ಮತ್ತು ಸ್ಪೇನ್‌ನಂತಹ ದೇಶಗಳನ್ನು ಹಿಂದಿಕ್ಕಿ, ನಾವು ಮತ್ತೊಂದು ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತಲುಪಿದ್ದೇವೆ. ಆದರೆ, ಇದು ಖುಷಿಪಡುವಂತಹ ಸಾಧನೆಯಲ್ಲ, ಬದಲಾಗಿ ಗಂಭೀರವಾಗಿ ಆಲೋಚಿಸಬೇಕಾದ ವಿಷಯ.
ಏಕೆಂದರೆ, ಸೈಬರ್ ದಾಳಿ ಸಂತ್ರಸ್ತರಲ್ಲಿ ಭಾರತವು ಇದೀಗ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಹ್ಯಾಕರ್‌ಗಳು ಅತಿ ಹೆಚ್ಚು ದಾಳಿ ಮಾಡುವ ದೇಶಗಳ ಪಟ್ಟಿಯಲ್ಲಿ ನಮ್ಮ ದೇಶ ಈಗ ಮುಂಚೂಣಿಯಲ್ಲಿದೆ.

ಹೆಚ್ಚಿದ ಮಾಲ್‌ವೇರ್ ದಾಳಿಗಳು:

  •  ಕಳೆದ ಮೇ ತಿಂಗಳಲ್ಲಿ, ಭಾರತದಲ್ಲಿ ವಿಂಡೋಸ್ ಆಪರೇಟಿಂಗ್ ಸಿಸ್ಟಂ ಹೊಂದಿರುವ ಶೇ.12.4ರಷ್ಟು ಸಾಧನಗಳಲ್ಲಿ ಮಾಲ್‌ವೇರ್ ದಾಳಿ ಪತ್ತೆಯಾಗಿತ್ತು.
  • ಆದರೆ, ಜೂನ್ ವೇಳೆಗೆ ಈ ಪ್ರಮಾಣ ಶೇ.13.2ಕ್ಕೆ ಏರಿಕೆಯಾಗಿದೆ.
  • ಇ-ಮೇಲ್ ಮೂಲಕ ನಡೆಯುವ ಸೈಬರ್ ದಾಳಿಗಳ ಸಂಖ್ಯೆಯೂ ಕೂಡಾ ಗಣನೀಯವಾಗಿ ಹೆಚ್ಚಾಗಿದೆ.

ವರ್ಕ್ ಫ್ರಂ ಹೋಂ ಕೂಡ ಒಂದು ಕಾರಣ:

ಕೋವಿಡ್ ಸಾಂಕ್ರಾಮಿಕದ ನಂತರ, ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ‘ವರ್ಕ್ ಫ್ರಂ ಹೋಂ’ ಅವಕಾಶ ಕಲ್ಪಿಸಿದವು. ಇದರಿಂದ, ಕಚೇರಿಯ ಸುರಕ್ಷಿತ ನೆಟ್‌ವರ್ಕ್‌ಗಳು ಮನೆಯಲ್ಲಿನ ಅಸುರಕ್ಷಿತ ಸಾಧನಗಳೊಂದಿಗೆ ಸಂಪರ್ಕ ಸಾಧಿಸಿದವು. ಸೈಬರ್ ಸುರಕ್ಷತಾ ಕಂಪನಿ ‘ಆಕ್ರಾನಿಸ್’ನ ಜನರಲ್ ಮ್ಯಾನೇಜರ್ ರಾಜೇಶ್ ಛಬ್ರಾ ಅವರ ಪ್ರಕಾರ, ಸೈಬರ್ ದಾಳಿ ಹೆಚ್ಚಳಕ್ಕೆ ಇದೂ ಒಂದು ಪ್ರಮುಖ ಕಾರಣ.

The post ಸೈಬರ್ ದಾಳಿ ಸಂತ್ರಸ್ತರಲ್ಲಿ ಭಾರತ ನಂ 1. appeared first on Good News 24x7.

]]>
ಸಾರಿಗೆ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್: ಹೈಕೋರ್ಟ್ ಆದೇಶ, ಎಚ್ಚರಿಕೆ. https://www.goodnews24x7.com/transport-strike-to-continue-for-another-2-days-high-court-orders-warns-highcourt-transport-orders-state-challenging-lawyers-committee-employees-bengaluru-the-high-court-has-taken-a-dig-at-the-l/ Tue, 05 Aug 2025 11:46:13 +0000 https://www.goodnews24x7.com/?p=5386 ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಸಾರಿಗೆ ಸಂಘಟನೆ ಪರ ವಕೀಲರಿಗೆ ತರಾಟೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಹೂಡಿರುವುದನ್ನ ಪ್ರಶ್ನಿಸಿ ಸಲ್ಲಿಸಿಲಾಗಿರುವ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು…

The post ಸಾರಿಗೆ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್: ಹೈಕೋರ್ಟ್ ಆದೇಶ, ಎಚ್ಚರಿಕೆ. appeared first on Good News 24x7.

]]>

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಸಾರಿಗೆ ಸಂಘಟನೆ ಪರ ವಕೀಲರಿಗೆ ತರಾಟೆ ತೆಗೆದುಕೊಂಡಿದೆ.

ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಹೂಡಿರುವುದನ್ನ ಪ್ರಶ್ನಿಸಿ ಸಲ್ಲಿಸಿಲಾಗಿರುವ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು ಭಕ್ರು ಅವರಿದ್ದ ಪೀಠ, ಹೈಕೋರ್ಟ್ ಆದೇಶವಿದ್ದರೂ ಮುಷ್ಕರ ನಡೆಸಲಾಗಿದೆ.

ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು ಇಲ್ಲವಾದರೇ ನಾಳೇ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು ಸಾರಿಗೆ ಸಂಘಟನೆ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ ಜನಸಾಮಾನ್ಯರನ್ನ ಒತ್ತಯಾಗಿಸುವುದನ್ನ ಸಹಿಸಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಎಚ್ಚರಿಕೆ ನೀಡಿತು.

ನ್ಯಾಯಪೀಠದ ತರಾಟೆಗೆಕ್ರಿಯಾ ಸಮಿತಿ ಪರ ವಕೀಲರು ತಬ್ಬಿಬ್ಬಾಗಿ ನಾಳೆ ಮುಷ್ಕರ ನಡೆಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ನೋಟಿಸ್ ನೀಡಿದ ನ್ಯಾಯಪೀಠವು ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆಯನ್ನ ಎರಡು ದಿನ ವಿಸ್ತರಣೆ ಮಾಡಿದ್ದು ಮುಷ್ಕರ ಮುಂದುವರೆಸಿದರೆ ಎಸ್ಮಾ ಕಾಯ್ದೆಯಡಿ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದೆ. ನಂತರ ವಿಚಾರಣೆಯನ್ನ ಆಗಸ್ಟ್ 7ಕ್ಕೆ ಮುಂದೂಡಿಕೆ ಮಾಡಿದೆ.

The post ಸಾರಿಗೆ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್: ಹೈಕೋರ್ಟ್ ಆದೇಶ, ಎಚ್ಚರಿಕೆ. appeared first on Good News 24x7.

]]>
ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ. https://www.goodnews24x7.com/sc-st-employees-are-being-violated-in-their-promotion-kharge-writes-to-cm-siddaramaiah5110-2/ Tue, 15 Jul 2025 08:56:27 +0000 https://www.goodnews24x7.com/?p=5110 ಕರ್ನಾಟಕದ ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ…

The post ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ. appeared first on Good News 24x7.

]]>

ಕರ್ನಾಟಕದ ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ.

​ಬೆಂಗಳೂರು, ಜುಲೈ 15: ತಾವು ಎಸ್​​​ಸಿ ಎಸ್​​ಟಿ (SC ST) ಪರ, ಹಿಂದುಳಿದ ವರ್ಗಗಳ ಹಿತ ಕಾಯುವುದೇ ಆದ್ಯತೆ ಹಾಗೂ ಸಂವಿಧಾನಾತ್ಮಕಾಗಿಯೇ ಆಡಳಿತ ನಡೆಸುವುದು ಎಂದೇ ಸದಾ ಬಿಂಬಿಸಿಕೊಂಡು ಬಂದಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿಯೇ ಹಿಂದುಳಿದ ವರ್ಗಗಳ ನೌಕರರಿಗೆ ಸಮಸ್ಯೆಯಾಗುತ್ತಿದೆಯೇ? ಇಂಥದ್ದೊಂದು ಪ್ರಶ್ನೆಗೆ ಈಗ ನಡೆದಿರುವ ಬೆಳವಣಿಗೆ ಕಾರಣವಾಗಿದೆ. ಎಸ್​​​ಸಿ ಎಸ್​​ಟಿ ನೌಕರರ ಮುಂಬಡ್ತಿಯಲ್ಲಿ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ಎಸ್.ಟಿ. ನೌಕರರ ಸಂಘದವರು ಎಸ್.ಸಿ.ಎಸ್.ಟಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟ‌ರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಗದಿಪಡಿಸಿದ್ದರೂ, ಅದನ್ನು ಕಟುನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದ್ದರೂ ಕೆಲವು ಇಲಾಖೆಗಳ ಅಧಿಕಾರಿಗಳು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಗೆ ಈ ವಿಚಾರವಾಗಿ ನಿಮಗೂ ಕೂಡ ಬರೆದಿರುವ ಪತ್ರದ ಪ್ರತಿಯನ್ನು ಸಂಘದ ಅಧ್ಯಕ್ಷರು ನನ್ನ ಗಮನಕ್ಕೆ ತಂದಿದ್ದಾರೆ.

ಇದರ ಜೊತೆ ಲಗತ್ತಿಸಿರುವ ಪತ್ರಿಕೆಯಲ್ಲಿ ಬಂದಿರುವ ವಿವರಗಳನ್ನು ಹಾಗೂ ಸಂಘದವರು ನಿಮಗೆ ಈಗಾಗಲೇ ನೀಡಿರುವ ಪತ್ರವನ್ನು ಸ್ವತಃ ಅವಲೋಕಿಸುವುದರ ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಸರ್ಕಾರವೇ ಹೊರಡಿಸಿರುವ ಅದೇಶ ಹಾಗೂ ಸುತ್ತೋಲೆಗಳಲ್ಲಿ ತಿಳಿಸಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸ್ಪಷ್ಟ ಆದೇಶವನ್ನು ನೀಡುವುದು ಸೂಕ್ತ. ಇಲ್ಲದಿದ್ದರೆ ಅಧಿಕಾರಿಗಳ ಮಟ್ಟದಲ್ಲಿ ಅಸಮಧಾನ ಉಂಟಾಗಿ ಸರ್ಕಾರದ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯಲು ಕಷ್ಟವಾಗುತ್ತದೆ ಎಂದು ಖರ್ಗೆ ಅವರು ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

The post ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ. appeared first on Good News 24x7.

]]>
ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ https://www.goodnews24x7.com/kanakadasa-suffered-the-humiliation-of-the-clan-and-then-erased-it-kvp/ Sun, 13 Jul 2025 10:04:12 +0000 https://www.goodnews24x7.com/?p=5076 ದಾವಣಗೆರೆ : ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕನಕ ನೌಕರರ ಬಳಗ ಮತ್ತು…

The post ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ appeared first on Good News 24x7.

]]>

ದಾವಣಗೆರೆ : ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.


ಕನಕ ನೌಕರರ ಬಳಗ ಮತ್ತು ಜಿಲ್ಲಾ ಕುರುಬರ ವಿದ್ಯಾವರ್ದಕ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. “ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಮಾತಿದೆ. ಇವತ್ತು ನಮ್ಮ ಸಮುದಾಯದ ನಾನು ಮತ್ತು ಈ ಮಕ್ಕಳು ಪ್ರತಿಭಾವಂತರಾಗಿ ಇಲ್ಲಿ ಗೌರವಿಸಲ್ಪಡುತ್ತಿದ್ದೇವೆ ಎಂದರೆ ಇದಕ್ಕೆ ನಮ್ಮ ಹಿರಿಯರು ಮತ್ತು ಹಿಂದಿನವರು ನಡೆಸಿದ ಹೋರಾಟಗಳು ಕಾರಣ.

ಅಕ್ಷರ ಕಲಿತರೆ ಕಿವಿಗೆ ಕಾದ ಸೀಸ ಸುರಿಯುವ ಶಿಕ್ಷೆ ವಿಧಿಸುತ್ತಿದ್ದ ಕಾಲದಿಂದ ನಮ್ಮದೇ ಆದ ವಿದ್ಯಾವರ್ದಕ ಸಂಘ ಕಟ್ಟಿಕೊಂಡು SSLC ಯಿಂದ MBBS ವರೆಗೂ ಸಾವಿರಾರು ಪ್ರತಿಭಾವಂತರನ್ನು ಪುರಸ್ಕರಿಸುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಈ ಸಾಧನೆಯ ಹಿಂದೆ ಇರುವ ಪ್ರತೀ ಹೆಜ್ಜೆ ಗುರುತುಗಳನ್ನೂ ನಾವು ಅರಿತುಕೊಳ್ಳಬೇಕಿದೆ ಎಂದರು.

ದಾಸಶ್ರೇಷ್ಠ ಕನಕದಾಸರು ಅಂದರೆ ನಮಗೆಲ್ಲಾ ಭಕ್ತಿ ಬರುತ್ತದೆ. ಆದರೆ ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ. ಎಳೆಯ ವಯಸ್ಸಿನಿಂದಲೂ ಕನಕರ ಬಗ್ಗೆ ಮಾತನಾಡುವಾಗ ಕನಕರ ಹೋರಾಟವನ್ನು ತಿಳಿಯುವುದರ ಬದಲಾಗಿ ಕನಕನ ಕಿಂಡಿಯ ಬಗ್ಗೆ ತಿಳಿಯುವುದರಲ್ಲಿ ನಮಗೆ ಹೆಚ್ಚು ಉತ್ಸಾಹ ಮೂಡಿಸಿರುವುದರ ಹಿಂದೆಯೂ ಒಂದು ಸಾಂಸ್ಕೃತಿಕ ರಾಜಕಾರಣ ಇದೆಯಲ್ಲವೇ ಎಂದು ಪ್ರಶ್ನಿಸಿದರು.
ದೇವರು ಸಂಸ್ಕೃತದಲ್ಲಿ ಮಾಡುವ ಭಕ್ತಿ, ಪ್ರಾರ್ಥನೆಯನ್ನು ಮಾತ್ರ ಸ್ವೀಕರಿಸುತ್ತಾನೆ ಎನ್ನುವ “ಅಹಂ” ಜಾರಿಯಲ್ಲಿದ್ದ ಸಂದರ್ಭದಲ್ಲಿ ಕನಕದಾಸರು ತಾಯಿ ಭಾಷೆಯಲ್ಲಿ ವಚನಗಳನ್ನು, ಕೀರ್ತನೆಗಳನ್ನು ರಚಿಸಿ ಕೃಷ್ಣನನ್ನು ತನ್ನ ಕಡೆಗೆ ತಿರುಗಿಸಿಕೊಂಡರು ಎನ್ನುವುದು ಕೇವಲ ಕತೆಯಲ್ಲ. ಕೀಳರಿಮೆ ಮತ್ತು ಕುಲದ ಅವಮಾನವನ್ನು ಮೆಟ್ಟಿನಿಂತ ಹೋರಾಟ ಮತ್ತು ಬಂಡಾಯ ಎನ್ನುವುದನ್ನು ನಾವು ಮರೆಯಬಾರದು.

 

ಕನಕದಾಸರು ಸಮಾಜದ ನೋವನ್ನು ಹಾಡಾಗಿ ಹಾಡಿದರು ಎಂದು ನಾನು ಹಿಂದೊಮ್ಮೆ ಹೇಳಿದ್ದೆ. “ಕುಲ ಕುಲವೆಂದು ಬಡಿದಾಡದಿರಿ…” ಎಂದು ಕನಕರು ಹಾಡುವ ಮೊದಲು ಕುಲದ ಅವಮಾನವನ್ನು ಅನುಭವಿಸಿದ್ದರು. ಈ ಅವಮಾನವನ್ನು ಅಳಿಸಲು ಬದುಕಿನುದ್ದಕ್ಕೂ ಶ್ರಮಿಸಿದ ಬಂಡಾಯಗಾರರು. ಆದರೆ, ಕನಕರ ಹೋರಾಟದ ಪರಂಪರೆಯನ್ನೇ ನಾಶಮಾಡುವ ಹುನ್ನಾರದ ಭಾಗವಾಗಿ ಅವರನ್ನು ಕೇವಲ ಭಕ್ತಿಗೆ ಸೀಮಿತಗೊಳಿಸುತ್ತಿದ್ದಾರೆ. ಇದು ನಮ್ಮ ಇವತ್ತಿನ ಮತ್ತು ಮುಂದಿನ ಪೀಳಿಗೆಯಲ್ಲಿ ಹೋರಾಟವನ್ನು ಮರೆಸುವ ತಂತ್ರವೇ ಆಗಿದೆ. ಹೀಗಾಗಿ ಭಕ್ತಿಯ ಜೊತೆಗೆ ಕನಕರ ಬಂಡಾಯವನ್ನು ನಾವು ಅರಿಯೋಣ. ನಾವು ಪೋಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಬದುಕಿನ ಮೌಲ್ಯಗಳನ್ನು ಕೊಡಬೇಕು. ಆಗ ಸಮಾಜ ಮೌಲ್ಯಯುತವಾಗುತ್ತದೆ ಎಂದರು.

ಇವತ್ತಿನ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಿಂದುಳಿದ ಸಮುದಾಯಗಳ ಮಕ್ಕಳಲ್ಲಿನ ಕೀಳರಿಮೆ ಅಳಿಸಿ ಆತ್ಮವಿಶ್ವಾಸ ಎನ್ನುವ “ರಕ್ತದಾನ” ಮಾಡಿದಂತೆ ಎಂದು ಭಾವಿಸುತ್ತೇನೆ. ಆತ್ಮವಿಶ್ವಾಸದ ರಕ್ತದಾನದಿಂದ ಇಡೀ ನಮ್ಮ ಸಮಾಜ ಬಲಿಷ್ಠಗೊಳ್ಳುತ್ತದೆ ಎನ್ನುವ ಭರವಸೆ ವ್ಯಕ್ತಪಡಿಸುತ್ತಾ ನನ್ನ ಮಾತುಗಳನ್ನು ಮುಗಿದುತ್ತೇನೆ. ಇವತ್ತು ಎಲ್ಲಾ ಮಕ್ಕಳೂ ವಿದ್ಯಾವಂತರೇ. ಆದರೆ ಹೃದಯವಂತರಾಗುವ ಅಗತ್ಯವಿದೆ. ವೃದ್ಧಾಶ್ರಮಗಳಿಲ್ಲದ ಮಾನವೀಯ ಮತ್ತು ಜವಾಬ್ದಾರಿಯುತ ಸಮಾಜ ನಿರ್ಮಾಣ ನಮ್ಮ ಆದ್ಯತೆಯಾಗಲಿ ಎಂದು ಕರೆ ನೀಡಿದರು.

ಕಾಗಿನೆಲೆ ಮಹಾಸಂಸ್ಥಾನ, ಕನಕ ಗುರುಪೀಠದ ಪೂಜ್ಯರಾದ ಜಗದ್ಗುರು ಶ್ರೀ ಡಾ.ನಿರಂಜನಾನಂದಪುರಿ ಮಹಾ ಗುರುಗಳು ದಿವ್ಯ ಸಾನಿದ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್, ಕೊಪ್ಪಳ ವಿವಿ ಕುಲಪತಿಗಳಾದ ಡಾ.ಬಿ.ಕೆ.ರವಿ, ಬಾಲ ಭವನ ಅಧ್ಯಕ್ಷರಾದ ಬಿ.ಆರ್. ನಾಯ್ಡು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

The post ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ appeared first on Good News 24x7.

]]>
ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆದಂತ ಮಾರಾಟಕ್ಕೆ ಯತ್ನ: ಅರಣ್ಯ ಸಿಬ್ಬಂದಿ ಸೇರಿ ಐವರ ಬಂಧನ. https://www.goodnews24x7.com/attempt-to-sell-elephant-tusks-in-valparai-forest-area-five-arrested-including-forest-staff/ Sun, 22 Jun 2025 11:56:49 +0000 https://www.goodnews24x7.com/?p=4612 ಕೊಯಮತ್ತೂರು : ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಅರೆಕಾಲಿಕ ಅರಣ್ಯ ಸಿಬ್ಬಂದಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಕೊಯಮತ್ತೂರು ಜಿಲ್ಲೆಯ ವಾಲ್ಪಾರೈನಲ್ಲಿ ಮೃತ ಆನೆಯ ದಂತವನ್ನು ಕದ್ದು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ…

The post ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆದಂತ ಮಾರಾಟಕ್ಕೆ ಯತ್ನ: ಅರಣ್ಯ ಸಿಬ್ಬಂದಿ ಸೇರಿ ಐವರ ಬಂಧನ. appeared first on Good News 24x7.

]]>

ಕೊಯಮತ್ತೂರು : ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಅರೆಕಾಲಿಕ ಅರಣ್ಯ ಸಿಬ್ಬಂದಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಕೊಯಮತ್ತೂರು ಜಿಲ್ಲೆಯ ವಾಲ್ಪಾರೈನಲ್ಲಿ ಮೃತ ಆನೆಯ ದಂತವನ್ನು ಕದ್ದು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮಣಂಪಲ್ಲಿ ಅರಣ್ಯ ಮೀಸಲು ಅಧಿಕಾರಿ ಗಿರಿಧರನ್ ಮತ್ತು ವಾಲ್ಪಾರೈ ಅರಣ್ಯ ಮೀಸಲು ಅಧಿಕಾರಿ ಸುರೇಶ್ ಕೃಷ್ಣನ್ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳ ತಂಡ ಕಾರ್ಯಾಚರಣೆ ಕೈಗೊಂಡಿತ್ತು.

ಜೂನ್ 21ರಂದು ವಾಲ್ಪಾರೈ ಬಳಿಯ ಥೈಮುಡಿ ಎನ್ಸಿ ಪ್ರದೇಶದಲ್ಲಿ, ಎರಡು ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ, ಅದೇ ಪ್ರದೇಶದ ಮಣಿಕಂಠನ್ (47), ರಾಜ (39), ಮತ್ತು ದೇವಪಾಲ (31) ಅವರನ್ನು ಬಂಧಿಸಿದ್ದಾರೆ. ಜೊತೆಗೆ ಅವರ ಬಳಿ ಇದ್ದ 5 ಅಡಿ ಉದ್ದ ಎರಡು ದಂತಗಳು ಹಾಗೂ ಕಳ್ಳಸಾಗಣೆಗಾಗಿ ಬಳಸುತ್ತಿದ್ದ ಐಷಾರಾಮಿ ಕಾರನ್ನು ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತನಿಖೆ ವೇಳೆ ಅಯ್ಯರ್ಬಾಡಿ ಬೀಟ್ನಲ್ಲಿ ತಾತ್ಕಾಲಿಕ ಅರಣ್ಯ ನೌಕರರಾಗಿ ಕೆಲಸ ಮಾಡುತ್ತಿದ್ದ ಪ್ರೇಮದಾಸ್ (29) ಮತ್ತು ರಾಮನ್ (35) ಭಾಗಿಯಾಗಿರುವುದು ತಿಳಿದುಬಂದಿದೆ. ನಂತರ, ಅಧಿಕಾರಿಗಳು ಆ ಇಬ್ಬರು ಸಿಬ್ಬಂದಿ ಸೇರಿದಂತೆ ಎಲ್ಲಾ ಐದು ಜನರನ್ನು ಬಂಧಿಸಿದ್ದಾರೆ.


ಮೃತ ಆನೆಯ ದಂತಗಳನ್ನು ಕದ್ದು ಮಾರಾಟ ಮಾಡಲು ಯತ್ನಿಸಿದ್ದಕ್ಕಾಗಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಯಿತು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.
ಆರೋಪಿ ಮಣಿಕಂಠನ್ 2021 ರಲ್ಲಿ ಇದೇ ರೀತಿಯ ಆನೆ ದಂತ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದ.

ಪ್ರಕರಣದ ಕುರಿತು ಮಾತನಾಡಿದ ಅರಣ್ಯಾಧಿಕಾರಿ ಗಿರೀಧರನ್, “ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅರೆಕಾಲಿಕ ಸಿಬ್ಬಂದಿ ಮತ್ತು ಬೇಟೆ ನಿಗ್ರಹ ಸಿಬ್ಬಂದಿ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ. ಪ್ರಸ್ತುತ, ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಆದೇಶದ ಮೇರೆಗೆ, ಅಣ್ಣಾಮಲೈ ಹುಲಿ ಮೀಸಲು ಪ್ರದೇಶದ ದಟ್ಟ ಕಾಡುಗಳು ಮತ್ತು ಅನುಮಾನಾಸ್ಪದವಾಗಿ ಓಡಾಡುವ ಜನರ ಮೇಲೆ ನಿಗಾ ಇಡಲಾಗುವುದು. ಆರೋಪಿಗಳು ದಂತಗಳನ್ನು ಹೇಗೆ ಸಂಗ್ರಹಿಸಿದರು ಎಂಬುದರ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದರು.

The post ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆದಂತ ಮಾರಾಟಕ್ಕೆ ಯತ್ನ: ಅರಣ್ಯ ಸಿಬ್ಬಂದಿ ಸೇರಿ ಐವರ ಬಂಧನ. appeared first on Good News 24x7.

]]>
ಎಸ್ಬಿಐ ಮ್ಯಾನೇಜರ್ ವರ್ಗಾವಣೆ: ಸ್ಥಳೀಯ ಭಾಷೆ ಗೌರವಿಸುವುದು, ಜನರನ್ನು ಗೌರವಿಸಿದಂತೆ ಎಂದ ಸಿಎಂ https://www.goodnews24x7.com/sbi-manager-transfer-respecting-local-language-is-like-respecting-people-says-cm/ Wed, 21 May 2025 07:46:45 +0000 https://www.goodnews24x7.com/?p=4022 ಬೆಂಗಳೂರು: ಎಸ್ಬಿಐ ಬ್ರಾಂಚ್ ಮ್ಯಾನೇಜರ್ ಕನ್ನಡ ಮಾತನಾಡಲು ನಿರಾಕರಿಸಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, “ಆನೇಕಲ್ನ ಸೂರ್ಯನಗರ ಮ್ಯಾನೇಜರ್ ನಡವಳಿಕೆ ಖಂಡನೀಯವಾಗಿದೆ. ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಎಸ್ಬಿಐ ಕ್ರಮ ಮೆಚ್ಚುವಂತದ್ದಾಗಿದ್ದು,…

The post ಎಸ್ಬಿಐ ಮ್ಯಾನೇಜರ್ ವರ್ಗಾವಣೆ: ಸ್ಥಳೀಯ ಭಾಷೆ ಗೌರವಿಸುವುದು, ಜನರನ್ನು ಗೌರವಿಸಿದಂತೆ ಎಂದ ಸಿಎಂ appeared first on Good News 24x7.

]]>

ಬೆಂಗಳೂರು: ಎಸ್ಬಿಐ ಬ್ರಾಂಚ್ ಮ್ಯಾನೇಜರ್ ಕನ್ನಡ ಮಾತನಾಡಲು ನಿರಾಕರಿಸಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, “ಆನೇಕಲ್ನ ಸೂರ್ಯನಗರ ಮ್ಯಾನೇಜರ್ ನಡವಳಿಕೆ ಖಂಡನೀಯವಾಗಿದೆ. ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಎಸ್ಬಿಐ ಕ್ರಮ ಮೆಚ್ಚುವಂತದ್ದಾಗಿದ್ದು, ಆ ಮೂಲಕ ಈ ವಿವಾದಕ್ಕೆ ತೆರೆಬಿದ್ದಿದೆ” ಎಂದಿದ್ದಾರೆ.


“ಆದರೆ, ಇಂಥ ಘಟನೆಗಳು ಮರುಕಳಿಸಬಾರದು. ಎಲ್ಲ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನವನ್ನು ಮಾಡಬೇಕು” ಎಂದು ಮನವಿ ಮಾಡಿದ್ದಾರೆ.
“ಎಲ್ಲ ಬ್ಯಾಂಕ್ ಉದ್ಯೋಗಿಗಳಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆ, ಸಂಸ್ಕೃತಿ ಬಗ್ಗೆ ತರಬೇತಿ ನೀಡಲು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಮನವಿ ಮಾಡುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಜನರನ್ನು ಗೌರವಿಸಿದ ಹಾಗೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆಗಿರುವುದೇನು?:
ಆನೇಕಲ್ ತಾಲೂಕಿನ ಚಂದಾಪುರದ ಸೂರ್ಯನಗರದಲ್ಲಿನ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಚಳವಳಿಗಾರರೊಬ್ಬರಿಗೆ ಕನ್ನಡ ಮಾತನಾಡುವುದೇ ಇಲ್ಲ ಎಂದು ಪಟ್ಟು ಹಿಡಿದ ವಿಡಿಯೋ ವೈರಲಾಗಿತ್ತು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.


ಎಂದಿನಂತೆ ಕನ್ನಡ ಮಾತನಾಡದ ಮಹಿಳಾ ಮ್ಯಾನೇಜರ್ ಕೇವಲ ಇಂಗ್ಲಿಷ್ , ಹಿಂದಿಯಲ್ಲಿಯೇ ಪ್ರತಿಕ್ರಿಯಿಸುತ್ತಿರುವುದನ್ನು ಮೊಬೈಲ್ ಮೂಲಕ ದೃಶ್ಯ ಸೆರೆ ಮಾಡುತ್ತಲೇ, ತಮ್ಮ ಖಾತೆಯಲ್ಲಿ ಹರಿಬಿಟ್ಟ ಸ್ಥಳೀಯ ಮಹೇಶ್ ರೆಡ್ಡಿ ಎಂಬುವರು ‘ಕನ್ನಡ ಮಾತನಾಡಲೇ ಬೇಕು. ಅದು ಆರ್ಬಿಐ ನಿಯಮ’ ಎಂದು ಪಟ್ಟು ಹಿಡಿದಿದ್ದರು.
ಈ ವೇಳೆ ಮ್ಯಾನೇಜರ್ ಸವಾಲು ಹಾಕುತ್ತಲೇ ‘ಆರ್ಬಿಐ ನಲ್ಲಿ ಗೈಡ್ಲೈನ್ಸ್ ಎಲ್ಲಿದೆ. ಕನ್ನಡ ಮಾತನಾಡಬೇಕು ಎಂಬ ಮ್ಯಾಂಡೇಟರಿ ಏನಿಲ್ಲ. ನಾನು ಕನ್ನಡ ಮಾತನಾಡುವುದಿಲ್ಲ ‘ ಎಂದು ಅವರೂ ಕೂಡಾ ವಿಡಿಯೋ ಮಾಡಿಕೊಂಡಿದ್ದರು.
ವಿಡಿಯೋ ವೈರಲಾಗುತ್ತಿದ್ದಂತೆಯೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಆನೇಕಲ್ ಸುತ್ತಲಿನ ಎಲ್ಲ ಖಾಸಗಿ ಬ್ಯಾಂಕ್ಗಳಲ್ಲಿ ಪರಭಾಷಿಗರೇ ಕಾಣುತ್ತಿದ್ದು, ಸ್ಥಳೀಯರಿಗೆ ಬ್ಯಾಂಕ್ ಸೇವೆಗಳ ಸಮಗ್ರ ಮಾಹಿತಿ ದೊರೆಯದೇ ಪರದಾಡುತ್ತಿರುವ, ಬೆನ್ನಲ್ಲೇ ಆಗಾಗ ಇಂತಹ ಘಟನೆಗಳು ಮರುಕಳಿಸುತಿವೆ ಎಂಬ ಕೂಗು ಜೋರಾಗಿದೆ.

The post ಎಸ್ಬಿಐ ಮ್ಯಾನೇಜರ್ ವರ್ಗಾವಣೆ: ಸ್ಥಳೀಯ ಭಾಷೆ ಗೌರವಿಸುವುದು, ಜನರನ್ನು ಗೌರವಿಸಿದಂತೆ ಎಂದ ಸಿಎಂ appeared first on Good News 24x7.

]]>
ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ; ಸಿಎಂ ಸಿದ್ದರಾಮಯ್ಯ ಅಸಮಾಧಾನ. https://www.goodnews24x7.com/finance-minister-did-not-give-a-single-paise-of-the-money-announced-by-the-state-cm-siddaramaiah-unhappy/ Sun, 04 May 2025 10:36:35 +0000 https://www.goodnews24x7.com/?p=3660 ಬೆಂಗಳೂರು : ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ…

The post ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ; ಸಿಎಂ ಸಿದ್ದರಾಮಯ್ಯ ಅಸಮಾಧಾನ. appeared first on Good News 24x7.

]]>

ಬೆಂಗಳೂರು : ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.


ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು. ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.

ವೇತನ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದರು. ನಮಗೆ 11495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

https://www.facebook.com/reel/643984295133776    ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜೊತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಟೀಕಿಸಿದರು.

The post ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ; ಸಿಎಂ ಸಿದ್ದರಾಮಯ್ಯ ಅಸಮಾಧಾನ. appeared first on Good News 24x7.

]]>
ಇಂದು ಬೆಳಿಗ್ಗೆ 7:10ಕ್ಕೆ ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ: ತಪಾಸಣೆ. https://www.goodnews24x7.com/bomb-threat-to-chamarajanagar-district-administration-building-at-710-am-today-inspection/ Fri, 02 May 2025 10:25:13 +0000 https://www.goodnews24x7.com/?p=3554 ಚಾಮರಾಜನಗರ : ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸ್ಪೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಬಂದದೆ. ಬಾಂಬ್ ಬೆದರಿಕೆ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾಹಿತಿ ನೀಡಿದರು. ಮಧ್ಯಾಹ್ನ 3:10 ಗಂಟೆಗೆ ಬಾಂಬ್…

The post ಇಂದು ಬೆಳಿಗ್ಗೆ 7:10ಕ್ಕೆ ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ: ತಪಾಸಣೆ. appeared first on Good News 24x7.

]]>

ಚಾಮರಾಜನಗರ : ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸ್ಪೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಬಂದದೆ.
ಬಾಂಬ್ ಬೆದರಿಕೆ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾಹಿತಿ ನೀಡಿದರು. ಮಧ್ಯಾಹ್ನ 3:10 ಗಂಟೆಗೆ ಬಾಂಬ್ ಸ್ಪೋಟಿಸುವುದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಸಗಿ ಏಜೆನ್ಸಿ ಮೂಲಕ ಇ-ಮೇಲ್ ಬಂದಿದ್ದು, ಜಿಲ್ಲಾಡಳಿತ ಎಲ್ಲಾ ಕಚೇರಿಯ ಅಧಿಕಾರಿ ಹಾಗೂ ನೌಕರ ಸಿಬ್ಬಂದಿಗಳಲ್ಲಿ ಆತಂಕ ಉಂಟಾಗಿತ್ತು.

 

 

 

 

 

 

 

 

ಇಂದು ಬೆಳಿಗ್ಗೆ 7:10ಕ್ಕೆ ಖಾಸಗಿ ಏಜೆನ್ಸಿ ಇ-ಮೇಲ್ ಮೂಲಕ ಜಿಲ್ಲಾ ಆಡಳಿತ ಭವನಕ್ಕೆ ಬಾಂಬ್ ಇಟ್ಟಿರುವದಾಗಿ ಮೇಲ್ ಬಂದಿದ್ದು, ಅದು 3:10 ಗಂಟೆಗೆ ಸ್ಪೋಟಗೊಳ್ಳುವುದೆಂದು ತಿಳಿದು ಬಂದಿದೆ ಎಂದ ಡಿಸಿ ಶಿಲ್ಪಾ ನಾಗ್ ಮಾಹಿತಿ ನೀಡಿದರು.
ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಬಾಂಬ್ ನಿಷ್ಕ್ರಿಯ ದಳಗಳನ್ನು ಕರೆಸಿ ತನಿಖೆ ಮಾಡಲಾಗುತ್ತಿದೆ. ಈ ಮಾಹಿತಿ ಹುಸಿ ಅಥವಾ ನಿಜವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳನ್ನ ಕಚೇರಿಯಿಂದ ಹೊರಗೆ ಕಳುಹಿಸಿ ಜಿಲ್ಲಾಡಳಿತ ಭವನ ಬಂದ್ ಮಾಡಲಾಗಿತ್ತು.
ಕಚೇರಿಯ ಸುತ್ತಮುತ್ತಲು ಬಾಂಬ್ ಇಟ್ಟಿರುವ ಬಗ್ಗೆ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಸೇರಿದಂತೆ ಮತ್ತಿತರ ಅಧಿಕಾರಿಗಳು ಬಿಡು ಬಿಟ್ಟದ್ದರು.

The post ಇಂದು ಬೆಳಿಗ್ಗೆ 7:10ಕ್ಕೆ ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ: ತಪಾಸಣೆ. appeared first on Good News 24x7.

]]>