examination Archives - Good News 24x7 https://www.goodnews24x7.com/tag/examination/ Kannada Fri, 02 May 2025 10:43:00 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg examination Archives - Good News 24x7 https://www.goodnews24x7.com/tag/examination/ 32 32 ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ; 15 ನೇ ಸ್ಥಾನಕ್ಕೆ ಕುಸಿದ ಮೈಸೂರು. https://www.goodnews24x7.com/sslc-exam-results-mysore-falls-to-15th-position/ Fri, 02 May 2025 10:43:00 +0000 https://www.goodnews24x7.com/?p=3558 ಮೈಸೂರು : ಇಂದು 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು 15 ನೇ ಸ್ಥಾನಕ್ಕೆ ಕುಸಿದಿದೆ.           ಈ ಬಾರಿ ಎಸ್ ಎಸ್…

The post ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ; 15 ನೇ ಸ್ಥಾನಕ್ಕೆ ಕುಸಿದ ಮೈಸೂರು. appeared first on Good News 24x7.

]]>

ಮೈಸೂರು : ಇಂದು 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು 15 ನೇ ಸ್ಥಾನಕ್ಕೆ ಕುಸಿದಿದೆ.

 

 

 

 

 

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಶೇ 68.39 ರೊಂದಿಗೆ ಮೈಸೂರು 15ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಜಿಲ್ಲೆಯಲ್ಲಿ ಒಟ್ಟು 35,264 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 24,116 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಳೆದ ವರ್ಷ ಮೈಸೂರು ಜಿಲ್ಲೆ 7 ಸ್ಥಾನ ಪಡೆದಿತ್ತು ಈ ಬಾರಿ ದಿಢೀರ್ 15ನೇ ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಭಾರತೀಯ ವಿದ್ಯಾಮಂದಿರ ತಾನ್ಯ, ಮರಿಮಲ್ಲಪ್ಪ ಶಾಲೆಯ ಧನುಷ್ 625 ಕ್ಕೆ 625 ಅಂಕ ಪಡೆದು ಟಾಪರ್ ಆಗಿ ಹೊರಹೊಮ್ಮಿದ್ದಾರೆ ಎಂದು ಡಿಡಿಪಿಐ ಜವರೇಗೌಡ ಮಾಹಿತಿ ನೀಡಿದರು.

The post ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ; 15 ನೇ ಸ್ಥಾನಕ್ಕೆ ಕುಸಿದ ಮೈಸೂರು. appeared first on Good News 24x7.

]]>
ರೈಲ್ವೆ ಇಲಾಖೆಯ ಪರೀಕ್ಷೆಗೆ ಜನಿವಾರ ನಿರ್ಬಂಧ ವಿವಾದಕ್ಕೆ ಕೊನೆಗೂ ತೆರೆ ಎಳೆದ ಸೋಮಣ್ಣ…. https://www.goodnews24x7.com/%e0%b2%b0%e0%b3%88%e0%b2%b2%e0%b3%8d%e0%b2%b5%e0%b3%86-%e0%b2%87%e0%b2%b2%e0%b2%be%e0%b2%96%e0%b3%86%e0%b2%af-%e0%b2%aa%e0%b2%b0%e0%b3%80%e0%b2%95%e0%b3%8d%e0%b2%b7%e0%b3%86%e0%b2%97%e0%b3%86/ Mon, 28 Apr 2025 11:54:50 +0000 https://www.goodnews24x7.com/?p=3468 ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ದೆಹಲಿಯಿಂದ ಸುದ್ದಿಗೊಷ್ಠಿ ನಡೆಸಿ, ವಿವಾದಕ್ಕೆ…

The post ರೈಲ್ವೆ ಇಲಾಖೆಯ ಪರೀಕ್ಷೆಗೆ ಜನಿವಾರ ನಿರ್ಬಂಧ ವಿವಾದಕ್ಕೆ ಕೊನೆಗೂ ತೆರೆ ಎಳೆದ ಸೋಮಣ್ಣ…. appeared first on Good News 24x7.

]]>

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ದೆಹಲಿಯಿಂದ ಸುದ್ದಿಗೊಷ್ಠಿ ನಡೆಸಿ, ವಿವಾದಕ್ಕೆ ತೆರೆ ಎಳೆದಿದ್ದಾರೆ.ಇತ್ತೀಚಗಷ್ಟೆ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಸರ್ಕಾರದ ವಿರುದ್ಧ ಹಿಂದೂ ಪರ ಸಂಘಟನೆಗಳು ಮತ್ತು ಬ್ರಾಹ್ಮಣ ಮಹಾಸಂಘಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ರೇಲ್ವೆ ಇಲಾಖೆಯ ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ವಿಷಯದ ಬಗ್ಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ ಎಂದಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಏಪ್ರಿಲ್ 28, 29 ಮತ್ತು 30 ರಂದು ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ನಡೆಯುತ್ತದೆ. ಅಭ್ಯರ್ಥಿಗಳು ಜನಿವಾರ, ಮಂಗಳಸೂತ್ರ ತೆಗೆದು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ಬಂದಿವೆ. ಈ ಬಗ್ಗೆ ಸರಿಪಡಿಸುವಂತೆ ಸಂಸದರು, ಶಾಸಕರು ಮನವಿ ಮಾಡಿರುತ್ತಾರೆ. ಬ್ರಾಹ್ಮಣ ಮಹಾಸಭಾ, ವಿವಿಧ ಸಂಘಟನೆಗಳು ಸಹ ನನ್ನ ಗಮನ ಸೆಳೆದಿವೆ ಎಂದು ತಿಳಿಸಿದರು. ಹೀಗಾಗಿ, ಈ ಬಗ್ಗೆ ಅಶ್ವಿನಿ ವೈಷ್ಣವ್, ಅಧಿಕಾರಿಗಳ ಜತೆ ಚರ್ಚಿಸಿ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಂಗಳಸೂತ್ರ ಧರಿಸಿ ಪರೀಕ್ಷೆ ಬರೆಯಲು ಬಂದರೆ ತೊಂದರೆ ನೀಡಬಾರದೆಂದು ಸೂಚನೆ ನೀಡಲಾಗಿದೆ. ಇತರೆ ನಿಯಮ ಪಾಲಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚನೆ ನೀಡಲಾಗಿದೆ. ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯಲು ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

The post ರೈಲ್ವೆ ಇಲಾಖೆಯ ಪರೀಕ್ಷೆಗೆ ಜನಿವಾರ ನಿರ್ಬಂಧ ವಿವಾದಕ್ಕೆ ಕೊನೆಗೂ ತೆರೆ ಎಳೆದ ಸೋಮಣ್ಣ…. appeared first on Good News 24x7.

]]>
ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ. https://www.goodnews24x7.com/%e0%b2%85%e0%b2%a4%e0%b2%bf%e0%b2%a5%e0%b2%bf-%e0%b2%b6%e0%b2%bf%e0%b2%95%e0%b3%8d%e0%b2%b7%e0%b2%95%e0%b2%b0-%e0%b2%a8%e0%b3%87%e0%b2%ae%e0%b2%95%e0%b2%95%e0%b3%8d%e0%b2%95%e0%b3%86-%e0%b2%b8/ Sat, 22 Feb 2025 07:50:48 +0000 https://www.goodnews24x7.com/?p=2357 ಶಿವಮೊಗ್ಗ, ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿದೆ. ಅತಿಥಿ ಶಿಕ್ಷಕರ ಸಂಬಳವನ್ನು…

The post ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ. appeared first on Good News 24x7.

]]>

ಶಿವಮೊಗ್ಗ, ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿದೆ. ಅತಿಥಿ ಶಿಕ್ಷಕರ ಸಂಬಳವನ್ನು ನಿಲ್ಲಿಸಿಲ್ಲ. ಕೆಲ ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರ ವೇತನ ನಿಲ್ಲಿಸಲಾಗಿತ್ತು. ನಿನ್ನೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಿಡುಗಡೆ ಮಾಡಲಾಗಿದೆ ಎಂದರು.
ರಂಜಾನ್​ ಉಪವಾಸ ಮಾಡುವವರಿಗೆ ರಜೆ ಕೊಟ್ರೆ, ಗಣೇಶ್‌ ಹಬ್ಬಕ್ಕೂ ಕೊಡಬೇಕು
ಹಿಜಾಬ್ ಧರಿಸಿ ಬರುವವರಿಗೆ ದ್ವಿತೀಯ ಪಿಯು ಪರೀಕ್ಷೆಗೆ ಅನುಮತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಸದ್ಯ ಹಿಜಾಬ್ ಪ್ರಕರಣ ಕೋರ್ಟ್ ನಲ್ಲಿದೆ ಹೀಗಾಗಿ ಹಿಜಾಬ್ ಬಗ್ಗೆ ಯಾವುದೇ ಚರ್ಚೆ ಮಾಡುವುದು ಬೇಡ. ಮೊದಲಿನಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತದೆ. ಈ ಬಾರಿ ಎಸ್ ಎಸ್ ಎಲ್ ಪರಿಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇರಲ್ಲ ಎಂದು ತಿಳಿಸಿದರು.

The post ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ. appeared first on Good News 24x7.

]]>