#Fire breaks Archives - Good News 24x7 https://www.goodnews24x7.com/tag/fire-breaks/ Kannada Mon, 16 Mar 2026 11:35:25 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #Fire breaks Archives - Good News 24x7 https://www.goodnews24x7.com/tag/fire-breaks/ 32 32 ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ! https://www.goodnews24x7.com/fire-breaks-out-in-medical-college-hospital-10-patients-killed8899-2/ Mon, 16 Mar 2026 11:35:13 +0000 https://www.goodnews24x7.com/?p=8899   ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್…

The post ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ! appeared first on Good News 24x7.

]]>

 

ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಘಟನೆಯಲ್ಲಿ ಐಸಿಯುನಲ್ಲಿದ್ದ 10 ರೋಗಿಗಳು ಬಲಿಯಾಗಿದ್ದಾರೆ. ಅವರನ್ನು ರಕ್ಷಿಸಲು ಯತ್ನಿಸಿದ ಸಿಬ್ಬಂದಿ ಪೈಕಿ 11 ಮಂದಿಗೆ ಗಾಯಗಳಾಗಿವೆ.ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕೂಡ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಸಿಯುನಲ್ಲಿದ್ದ ಇತರ ರೋಗಿಗಳನ್ನು ಆಸ್ಪತ್ರೆಯ ಬೇರೆ ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆಡೆ ವರ್ಗಾಯಿಸಲಾಗಿದೆ. ಹೀಗೆ ಬೇರೆಡೆ ಸಾಗಿಸುವ ಹಂತದಲ್ಲಿ 7 ಮಂದಿ ರೋಗಿಗಳು ಅಸುನೀಗಿದ್ದಾರೆ. ಮೂರು ರೋಗಿಗಳು ನಂತರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಣೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟಿರುವ ರೋಗಿಗಳ ಸಂಬಂಧಿಕರಿಗೆ 25 ಲಕ್ಷ ರೂ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಹಾಗೆಯೇ, ಗಾಯಗೊಂಡಿರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

The post ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ! appeared first on Good News 24x7.

]]>