fire Archives - Good News 24x7 https://www.goodnews24x7.com/tag/fire/ Kannada Thu, 20 Nov 2025 07:24:33 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg fire Archives - Good News 24x7 https://www.goodnews24x7.com/tag/fire/ 32 32 ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…! https://www.goodnews24x7.com/cars-parked-in-front-of-the-house-caught-fire-two-cars-burnt-to-ashes-the-mischief-of-miscreants/ Thu, 20 Nov 2025 07:24:33 +0000 https://www.goodnews24x7.com/?p=8224 ನಂಜನಗೂಡಿನಲ್ಲಿ ಬಿಗಿ ಇಲ್ಲದ ಪೊಲೀಸ್ ಕಾರ್ಯವೈಖರಿಯ ವಿರುದ್ಧ ವ್ಯಾಪಕ ಆಕ್ರೋಶ ನಂಜನಗೂಡು: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.ಮಧ್ಯ ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮನೆಯವರು ಎಚ್ಚರವಾಗಿ…

The post ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…! appeared first on Good News 24x7.

]]>

ನಂಜನಗೂಡಿನಲ್ಲಿ ಬಿಗಿ ಇಲ್ಲದ ಪೊಲೀಸ್ ಕಾರ್ಯವೈಖರಿಯ ವಿರುದ್ಧ ವ್ಯಾಪಕ ಆಕ್ರೋಶ

ನಂಜನಗೂಡು: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.ಮಧ್ಯ ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮನೆಯವರು ಎಚ್ಚರವಾಗಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಪರಿಸ್ಥಿತಿ ಕೈ ಮೀರಿದೆ.

ಕೊಲೆ ಸುಲಿಗೆ ಆಯ್ತು ಈಗ ಮನೆ ಮುಂದೆ ನಿಲ್ಲಿಸಿರುವ ಕಾರುಗಳಿಗೆ ಬೆಂಕಿ…!

ಪ್ರಶಾಂತ್ ಎಂಬುವರಿಗೆ ಸೇರಿದ ನ್ಯಾನೋ ಕಾರ್ ಹಾಗೂ ಅಭಿನಾಗಭೂಷಣ್ ಎಂಬುವರಿಗೆ ಸೇರಿದ ಮಹೇಂದ್ರ ಯುವ 500 ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನಲ್ಲಿ ಪೊಲೀಸರ ಕಾರ್ಯ ವೈಖರಿ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.ರಾತ್ರಿ ಗಸ್ತು ಹೆಚ್ಚಿಸುವಂತೆ ಪೊಲೀಸರ ಮೇಲೆ ಸಾರ್ವಜನಿಕರು ಒತ್ತಡ ಹೇರಿದ್ದಾರೆ.ಕೊಲೆ,ಸುಲಿಗೆ ಆಯ್ತು ಇದೀಗ ಮನೆ ಮುಂದೆ ನಿಲ್ಲಿಸಿರುವ ವಾಹನಗಳಿಗೂ ರಕ್ಷಣೆ ಇಲ್ಲ ಎಂದು ಕಿಡಿ ಕಾರಿದ್ದಾರೆ.

The post ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…! appeared first on Good News 24x7.

]]>
ಸೊಸೆಗೆ ಬೆಂಕಿ ಹಚ್ಚಿ ಜೀವ ತೆಗೆದ ಅತ್ತೆ, ಮಾವ, ಗಂಡ.. https://www.goodnews24x7.com/mother-in-law-father-in-law-husband-set-daughter-in-law-on-fire/ Sun, 24 Aug 2025 05:16:56 +0000 https://www.goodnews24x7.com/?p=6601 ಲಕ್ನೋ: ನಿಕ್ಕಿ ಎನ್ನುವ ಮಹಿಳೆ ಜೀವ ಕಳೆದುಕೊಂಡವರು. ಈಕೆಯ ಗಂಡ ವಿಪಿನ್​ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ನಂತರ ನಾಪತ್ತೆ ಆಗಿರುವ ಮಾವ, ಅತ್ತೆ ಮತ್ತು ಸೋದರ ಮಾವ ಈ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ವರದಕ್ಷಿಣೆಗಾಗಿ ಅತ್ತೆ, ಮಾವ…

The post ಸೊಸೆಗೆ ಬೆಂಕಿ ಹಚ್ಚಿ ಜೀವ ತೆಗೆದ ಅತ್ತೆ, ಮಾವ, ಗಂಡ.. appeared first on Good News 24x7.

]]>

ಲಕ್ನೋ: ನಿಕ್ಕಿ ಎನ್ನುವ ಮಹಿಳೆ ಜೀವ ಕಳೆದುಕೊಂಡವರು. ಈಕೆಯ ಗಂಡ ವಿಪಿನ್​ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ನಂತರ ನಾಪತ್ತೆ ಆಗಿರುವ ಮಾವ, ಅತ್ತೆ ಮತ್ತು ಸೋದರ ಮಾವ ಈ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ವರದಕ್ಷಿಣೆಗಾಗಿ ಅತ್ತೆ, ಮಾವ ಹಾಗೂ ಗಂಡ ಸೇರಿ ಸೊಸೆಗೆ ಮನ ಬಂದಂತೆ ಹೊಡೆದು ಮನೆಯಲ್ಲೇ ಬೆಂಕಿ ಹಚ್ಚಿ ಜೀವ ತೆಗೆದಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಈಕೆಯ ಗಂಡ ವಿಪಿನ್​ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ನಂತರ ನಾಪತ್ತೆ ಆಗಿರುವ ರೋಹಿತ್ (ಮಾವ), ದಯಾ (ಅತ್ತೆ) ಮತ್ತು ಸತ್ವೀರ್​ (ಸೋದರ ಮಾವ) ಈ ಮೂವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆ ನಿಕ್ಕಿ ಹಾಗೂ ಈಕೆಯ ಸಹೋದರಿ ಕಾಂಚಾಣ ಇಬ್ಬರು ಒಂದೇ ಮನೆಗೆ ಸೊಸೆಯಾಗಿದ್ದರು. ನಿಕ್ಕಿ ಹಾಗೂ ವಿಪಿನ್ 2016ರಲ್ಲಿ ಹರಿಯಾಣದ ಸಿರ್ಸಾದಲ್ಲಿ ಮದುವೆಯಾಗಿದ್ದರು. ಆದರೆ ಮದುವೆಯಲ್ಲಿ ವರದಕ್ಷಿಣೆಯಾಗಿ ಎಸ್​ಯುವಿ ಕಾರು, ಬೆಲೆಬಾಳುವ ಚಿನ್ನಾಭರಣಗಳನ್ನು ನೀಡಲಾಗಿತ್ತು. ಆದರೂ ವರದಕ್ಷಿಣೆಗಾಗಿ ಇಬ್ಬರಿಗೂ ಗಂಡನ ಮನೆಯವರು ಹೊಡೆಯುತ್ತಿದ್ದರು.

ತವರಿನಿಂದ ಹಣ ತರುವಂತೆ ಮನೆಯಲ್ಲಿ ನಿರಂತರ ಹಿಂಸೆ ಕೊಡುತ್ತಿದ್ದರು. ಹೀಗಾಗಿಯೇ ಮತ್ತೊಂದು ಕಾರನ್ನು ಕೂಡ ನೀಡಲಾಗಿತ್ತು ಎಂದು ಹೇಳಲಾಗಿದೆ. ಆದರೂ ಗಂಡನ ಮನೆಯವರ ವರದಕ್ಷಿಣೆಯ ಆಸೆ ನಿರಂತರವಾಗಿದ್ದರಿಂದ ಮನೆಯಲ್ಲಿ ಹೆಂಡತಿ ಜೊತೆ ವಿಪಿನ್ ಜಗಳ ತೆಗೆದು ಹೊಡೆದಿದ್ದಾನೆ. ಇದಕ್ಕೆ ಗಂಡನ ಪೋಷಕರು ಸಾಥ್ ಕೊಟ್ಟಿದ್ದಾರೆ. ಅದರಂತೆ ಗಂಡ ಹೊಡೆದು, ಕೋಪದಲ್ಲಿ ಹೆಂಡತಿಗೆ ಬೆಂಕಿ ಹಚ್ಚಿಬಿಟ್ಟಿದ್ದಾನೆ. ರಕ್ಷಣೆಗಾಗಿ ಬೆಂಕಿಯಲ್ಲೇ ಮಹಿಳೆ ಚೀರಾಡಿದ್ದಾಳೆ. ಈ ವೇಳೆ ಈಕೆಯ ಸಹೋದರಿಯನ್ನ ಹೊರಗಾಕಲಾಗಿತ್ತು. ಇದನ್ನು ನೋಡಿ ಸಹೋದರಿ ತೀವ್ರ ಭಯದಿಂದ ಕೂಗಿದ್ದಾಳೆ.

ತಕ್ಷಣ ಸ್ಥಳೀಯರು ಬಂದು ಮನೆ ಒಳಗೆ ತೀವ್ರ ಸುಟ್ಟ ಗಾಯಗಳಿಂದ ಬಿದ್ದಿದ್ದ ಮಹಿಳೆಯನ್ನ ರಕ್ಷಣೆ ಮಾಡಿ, ಗ್ರೇಟರ್ ನೋಯ್ಡಾದ ಫೋರ್ಟಿಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ದಾರಿ ಮಧ್ಯೆಯೇ ಮಹಿಳೆ ಜೀವ ಬಿಟ್ಟಿದ್ದಾಳೆ. ಸದ್ಯ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ನಿಕ್ಕಿಯ ಸಹೋದರಿ ಕಾಂಚಾಣ, ನನ್ನ ಸಹೋದರಿಗೆ ಆಕೆಯ ಗಂಡ ಮನಬಂದಂತೆ ಥಳಿಸಿದ್ದರಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಗ ವಿಪಿನ್ ಬೆಂಕಿ ಹಚ್ಚಿದ್ದಾನೆ. ವರದಕ್ಷಿಣೆಗಾಗಿ ನಮಗೆ ಹಿಂಸಿಸುತ್ತಿದ್ದರು. ಮದುವೆಯಲ್ಲಿ ಬ್ರ್ಯಾಂಡೆಡ್​​ ಎಸ್​ಯುವಿ ಕಾರು ಹಾಗೂ ಬೆಲೆಬಾಳುವ ಚಿನ್ನಾಭರಣಗಳನ್ನ ನೀಡಲಾಗಿದೆ. ಆದರೂ ನಿಕ್ಕಿ ಕಡೆಯವರು ಇನ್ನು ಬೇಕು ಎನ್ನುತ್ತಿದ್ದರು. ಮದುವೆ ನಂತರವೂ 35 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದರು ಎಂದಿದ್ದಾಳೆ. ಇದರ ಬದಲಿಗೆ ಮತ್ತೊಂದು ಕಾರನ್ನು ಇವರಿಗೆ ನೀಡಲಾಗಿತ್ತು. ಆದರೂ ಅವರ ಕಿರುಕುಳ, ಹಿಂಸೆ ನಿರಂತರವಾಗಿತ್ತು. ನಾನು ಸ್ಥಳದಲ್ಲೇ ಇದ್ದರೂ ಸಹೋದರಿಯನ್ನ ಉಳಿಸಿಕೊಳ್ಳಲು ಆಗಲಿಲ್ಲ. ಇಬ್ಬರು ಒಂದೇ ಬಾರಿ ಮದುವೆ ಆಗಿದ್ದೇವು. ಸ್ಥಳೀಯರ ಸಹಾಯದಿಂದ ನಿಕ್ಕಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದೇವು ಎಂದು ಕಾಂಚಾಣ ಹೇಳಿದ್ದಾರೆ.

ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ನಿಕ್ಕಿ ಅವರ ಮಗು ಹೇಳಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಪ್ಪನೇ ಮಮ್ಮಿಗೆ ಬೆಂಕಿ ಹಚ್ಚಿ ಜೀವ ತೆಗೆದಿದ್ದಾನೆ ಎಂದು ಮಗು ಹೇಳಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ವಿಪಿನ್ ಹಾಗೂ ಅವರ ಮನೆಯವರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇನ್ನು ಸ್ಥಳೀಯರು ಕೂಡ ಆ ಕುಟುಂಬದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ ಎನ್ನಲಾಗಿದೆ.

The post ಸೊಸೆಗೆ ಬೆಂಕಿ ಹಚ್ಚಿ ಜೀವ ತೆಗೆದ ಅತ್ತೆ, ಮಾವ, ಗಂಡ.. appeared first on Good News 24x7.

]]>
ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ; 5 ಬೋಗಿಗಳು ಸುಟ್ಟು ಕರಕಲು. https://www.goodnews24x7.com/fire-in-goods-train-carrying-diesel-5-coaches-gutted/ Sun, 13 Jul 2025 06:42:04 +0000 https://www.goodnews24x7.com/?p=5070 ತಿರುವಳ್ಳೂರು : ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳ್ಳಿ ತಪ್ಪಿದ ಪರಿಣಾಮ, ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ. ಚೆನ್ನೈ ಬಂದರಿನಿಂದ ಡೀಸೆಲ್ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ…

The post ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ; 5 ಬೋಗಿಗಳು ಸುಟ್ಟು ಕರಕಲು. appeared first on Good News 24x7.

]]>

ತಿರುವಳ್ಳೂರು : ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳ್ಳಿ ತಪ್ಪಿದ ಪರಿಣಾಮ, ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ.

ಚೆನ್ನೈ ಬಂದರಿನಿಂದ ಡೀಸೆಲ್ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ ಇದ್ದಕ್ಕಿದ್ದಂತೆ ಹಳಿತಪ್ಪಿದೆ. ಈ ವೇಳೆ ರೈಲಿನಲ್ಲಿದ್ದ ಡೀಸೆಲ್ ಟ್ಯಾಂಕರ್ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಧಗಧಗಿಸುತ್ತಿರುವ ಬೆಂಕಿಯ ಜ್ವಾಲೆಯ ಹಿನ್ನೆಲೆಯಲ್ಲಿ ಸುತ್ತಲೂ ದಟ್ಟ ಹೊಗೆ ಆವರಿಸಿಕೊಂಡಿತ್ತು.

ಟ್ಯಾಂಕರ್ಗಳಲ್ಲಿ ಅಪಾರ ಪ್ರಮಾಣದ ಇಂಧನ ಇರುವುದರಿಂದ ಬೆಂಕಿಯ ವ್ಯಾಪ್ತಿ ಮತ್ತಷ್ಟು ಹರಡಬಹುದು ಎಂದು ಅಧಿಕಾರಿಗಳು ಆಂತಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಇದುವರೆಗೆ ಒಟ್ಟು ಐದು ಬೋಗಿಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟುಕರಕಲಾಗಿವೆ.

10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿದ್ದರೂ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಹತ್ತಿರದ ವಸತಿ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ. ಸುರಕ್ಷತಾ ಕಾರಣಗಳಿಗಾಗಿ ವಿದ್ಯುತ್ ಸರಬರಾಜು ಕೂಡ ಕಡಿತಗೊಳಿಸಲಾಗಿದೆ.

ಘಟನೆ ನಡೆದ ಸ್ಥಳದ ಸಮೀಪವಿರುವ ಮನೆಗಳಲ್ಲಿನ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ.
ಇಲ್ಲಿನ ಜಿಲ್ಲಾಧಿಕಾರಿ ಎಂ.ಪ್ರತಾಪ್ ಅವರು ಅಗ್ನಿಶಾಮಕ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಆದೇಶಿಸಿದ್ದಾರೆ. ಅಪಘಾತದಲ್ಲಿ ಇಲ್ಲಿಯವರೆಗೆ ಯಾವುದೇ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ. ರಕ್ಷಣಾ ಕಾರ್ಯಾಚರಣೆಗಾಗಿ ಅರಕ್ಕೋಣಂನಿಂದ ವಿಪತ್ತು ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ.


ರೈಲು ಸೇವೆಗಳಲ್ಲಿ ವ್ಯತ್ಯಯ: ಘಟನೆಯಿಂದ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಕೆಲ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ದಕ್ಷಿಣ ರೈಲ್ವೆ ಇಲಾಖೆಯು ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದೆ. “ತಿರುವಳ್ಳೂರು ಬಳಿ ಸಂಭವಿಸಿದ ಘಟನೆಯಿಂದ ಮುಂಜಾಗೃತವಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಬೆಂಕಿ ನಂದಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದ್ದರಿಂದ ರೈಲು ಸೇವೆಗಳಲ್ಲಿ ಈ ಕೆಳಗಿನ ಬದಲಾವಣೆಗಳನ್ನು ಮಾಡಲಾಗಿದೆ” ಎಂದು ರೈಲುಗಳ ಪಟ್ಟಿಯನ್ನು ಹಂಚಿಕೊಂಡಿದೆ. ತುರ್ತು ಸಹಾಯಕ್ಕಾಗಿ ಸಹಾಯವಾಣಿ: 044-25354151, 044-24354995 ತೆರೆಯಲಾಗಿದೆ.

ಘಟನಾ ಸ್ಥಳಕ್ಕೆ NDRF ತಂಡ ಆಗಮನ: ತಿರುವಳ್ಳೂರು ಜಿಲ್ಲಾಡಳಿತದ ಮನವಿ ಮೇರೆಗೆ ರಕ್ಷಣಾ ಮತ್ತು ಬೆಂಬಲ ಕಾರ್ಯಾಚರಣೆಗಾಗಿ 50 ರಕ್ಷಣಾ ಸಿಬ್ಬಂದಿಯನ್ನು ಒಳಗೊಂಡ ಎರಡು ಎನ್ಡಿಆರ್ಎಫ್ ತಂಡಗಳನ್ನು ಘಟನಾ ಸ್ಥಳಕ್ಕೆ ಕರೆಯಿಸಲಾಗಿದೆ.

ಬೆಂಕಿ ನಂದಿಸಲು ಇನ್ನೂ ಕೆಲ ಗಂಟೆಗಳ ಅಗತ್ಯ: ತಮಿಳುನಾಡು ಸಚಿವ ಎಸ್.ಎಂ. ನಾಸರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಕರೆ ನೀಡಿದ್ದಾರೆ. ಬೆಂಕಿ ನಿಯಂತ್ರಿಸಲು ಇನ್ನೂ ಕೆಲ ಗಂಟೆಗಳು ಅಗತ್ಯವಿದೆ ಎಂದು ಜಿಲ್ಲಾಡಳಿತ ಹೇಳಿದೆ.

The post ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ; 5 ಬೋಗಿಗಳು ಸುಟ್ಟು ಕರಕಲು. appeared first on Good News 24x7.

]]>
ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ. https://www.goodnews24x7.com/fire-accident-in-mysore-udaipur-palace-queen-humsafar-express-train/ Fri, 04 Jul 2025 07:34:48 +0000 https://www.goodnews24x7.com/?p=4885 ರಾಮನಗರ : ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಉದಯ್ಪುರಕ್ಕೆ ಹೊರಟಿದ್ದ ರೈಲು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣದ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಿ ಬೆಂಕಿ ನಂದಿಸಲಾಯಿತು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್…

The post ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ. appeared first on Good News 24x7.

]]>

ರಾಮನಗರ : ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಉದಯ್ಪುರಕ್ಕೆ ಹೊರಟಿದ್ದ ರೈಲು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣದ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಿ ಬೆಂಕಿ ನಂದಿಸಲಾಯಿತು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ.

ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ರೈಲ್ವೆ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಳಗ್ಗೆ 11.45 ರ ಸುಮಾರಿಗೆ ರೈಲು ಚನ್ನಪಟ್ಟಣ ದಾಟುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿತ್ತು.

ಎಂಜಿನ್ನಿಂದ ಕಿಡಿಗಳು ಬರುತ್ತಿರುವುದನ್ನು ಗಮನಿಸಿದ ಲೋಕೋ ಪೈಲಟ್ ತಕ್ಷಣವೇ ರೈಲನ್ನು ನಿಲ್ಲಿಸಿದರು. ಅವರು ತಕ್ಷಣ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು.ಬೆಂಕಿ ಸಣ್ಣ ಪ್ರಮಾಣದಲ್ಲಿತ್ತು ಮತ್ತು ಎಂಜಿನ್ ವಿಭಾಗಕ್ಕೆ ಮಾತ್ರ ಸೀಮಿತವಾಗಿತ್ತು ಎಂದು ವರದಿಯಾಗಿದೆ. ತಾಂತ್ರಿಕ ದೋಷದಿಂದ ಇದು ಸಂಭವಿಸಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

 

The post ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ. appeared first on Good News 24x7.

]]>
ಸಿಡಿಲ ಬಡಿತಕ್ಕೆ ಹೊತ್ತಿ ಉರಿದ ಮನೆ, ಬೋರೆ ಆನಂದೂರಿನಲ್ಲಿ ನಡೆದ ಘಟನೆ ; ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ https://www.goodnews24x7.com/house-burnt-down-due-to-lightning-strike-in-bore-anandur-mla-g-t-deve-gowda-visits-the-spot/ Sun, 18 May 2025 10:23:36 +0000 https://www.goodnews24x7.com/?p=3981 ಮೈಸೂರು : ಆಕಸ್ಮಿಕ ಅಗ್ನಿಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಬೋರೆ ಆನಂದೂರು…

The post ಸಿಡಿಲ ಬಡಿತಕ್ಕೆ ಹೊತ್ತಿ ಉರಿದ ಮನೆ, ಬೋರೆ ಆನಂದೂರಿನಲ್ಲಿ ನಡೆದ ಘಟನೆ ; ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ appeared first on Good News 24x7.

]]>

ಮೈಸೂರು : ಆಕಸ್ಮಿಕ ಅಗ್ನಿಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ.


ಬೋರೆ ಆನಂದೂರು ಗ್ರಾಮದ ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಗಳಲ್ಲಿ ಇದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳದ ತಕ್ಷಣ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಚಾಮುಂಡೇಶ್ವರಿ ಕ್ಷೇತ್ರದ ಮೈಸೂರು ತಾಲ್ಲೂಕು ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಬೆಂಕಿ ಅನಾಹುತ 3 ಮನೆಗಳು ಬೆಂಕಿಗೆ ಆಹುತಿ ಬೆಂಕಿಯ ನಾಲಿಗೆಗೆ ಮನೆಯಲ್ಲಿರುವ ದವಸ ಧಾನ್ಯ, ಬಟ್ಟೆ, ಪಾತ್ರೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.  ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿದ್ದಾರೆ

ಅಷ್ಟೇ ಅಲ್ಲದೆ ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಪ್ರತಿ ಕುಟುಂಬಕ್ಕೆ ಒಂದೊಂದು ಲಕ್ಷ ಪರಿಹಾರ ನೀಡಿದ ಶಾಸಕ ಜಿಟಿಡಿ ಘೋಷಣೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸೆಸ್ಕಾಂ ಎಂ.ಡಿ. ಮುನಿಗೋಪಾಲ್ ರಾಜ್, ಎಸ್.ಸಿ.ಸುನೀಲ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಗಳೊಡನೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.

The post ಸಿಡಿಲ ಬಡಿತಕ್ಕೆ ಹೊತ್ತಿ ಉರಿದ ಮನೆ, ಬೋರೆ ಆನಂದೂರಿನಲ್ಲಿ ನಡೆದ ಘಟನೆ ; ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ appeared first on Good News 24x7.

]]>
ಹೈದರಾಬಾದ್ ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17ಮಂದಿ ಸ*ಜೀವ ದಹನ. https://www.goodnews24x7.com/hyderabad-fire-near-charminar-17-people-burnt-alive/ Sun, 18 May 2025 07:46:50 +0000 https://www.goodnews24x7.com/?p=3951 ಹೈದರಾಬಾದ್ : ಚಾರ್ಮಿನಾರ್ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ…

The post ಹೈದರಾಬಾದ್ ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17ಮಂದಿ ಸ*ಜೀವ ದಹನ. appeared first on Good News 24x7.

]]>

ಹೈದರಾಬಾದ್ : ಚಾರ್ಮಿನಾರ್ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಮತ್ತು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಗುಲ್ಜಾರ್ ಹೌಸ್ ಭೇಟಿ ನೀಡಿದ್ದಾರೆ. ಆ ಪ್ರದೇಶದ ಮಾಜಿ ಶಾಸಕ ಮತ್ತು ಎಐಎಂಐಎಂ ನಾಯಕಿ ಮುಮ್ತಾಜ್ ಅಹ್ಮದ್ ಖಾನ್ ಕೂಡ ಸ್ಥಳದಲ್ಲಿದ್ದರು.
ತೆಲಂಗಾಣದ ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಮೋದಿ ಸಂತಾಪ, ಪರಿಹಾರ ಘೋಷಣೆ
ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಹೈದರಾಬಾದ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟವಾಗಿದ್ದರಿಂದ ಪ್ರಧಾನಿ ಮೋದಿ ತೀವ್ರ ದುಃಖಿತರಾಗಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಮೃತರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.


ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಮಾತನಾಡಿ, ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಇಂದು ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಅಪಘಾತದಲ್ಲಿ ಕೆಲವರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಈ ಘಟನೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಸಂಭವಿಸಿದೆ. ಇಂತಹ ಘಟನೆಗಳು ತುಂಬಾ ದುಃಖಕರ ಎಂದಿದ್ದಾರೆ.


ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ರಾಜ್ಯ ಸರ್ಕಾರ ಶೀಘ್ರದಲ್ಲೇ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಹೇಳಿದ್ದಾರೆ.

The post ಹೈದರಾಬಾದ್ ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17ಮಂದಿ ಸ*ಜೀವ ದಹನ. appeared first on Good News 24x7.

]]>
‘ನಟಿ ಸೌಂದರ್ಯಾ ಸಾವು ಆಕಸ್ಮಿಕವಲ್ಲ; 21 ವರ್ಷಗಳ ಬಳಿಕ ದಾಖಲಾಯ್ತು ದೂರು. https://www.goodnews24x7.com/%e0%b2%a8%e0%b2%9f%e0%b2%bf-%e0%b2%b8%e0%b3%8c%e0%b2%82%e0%b2%a6%e0%b2%b0%e0%b3%8d%e0%b2%af%e0%b2%be-%e0%b2%b8%e0%b2%be%e0%b2%b5%e0%b3%81-%e0%b2%86%e0%b2%95%e0%b2%b8%e0%b3%8d%e0%b2%ae/ Wed, 12 Mar 2025 12:01:00 +0000 https://www.goodnews24x7.com/?p=2745 ನಟಿ ಸೌಂದರ್ಯಾ ಅವರು 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು…

The post ‘ನಟಿ ಸೌಂದರ್ಯಾ ಸಾವು ಆಕಸ್ಮಿಕವಲ್ಲ; 21 ವರ್ಷಗಳ ಬಳಿಕ ದಾಖಲಾಯ್ತು ದೂರು. appeared first on Good News 24x7.

]]>

ನಟಿ ಸೌಂದರ್ಯಾ ಅವರು 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈಗ ಟಾಲಿವುಡ್ನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಇವರ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ.


ಕೌಟುಂಬಿಕ ಸಮಸ್ಯೆ ಕಾರಣದಿಂದ ಮೋನ್ ಬಾಬು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈಗ ಅವರು ಸೌಂದರ್ಯಾ ಸಾವಿನ ಪ್ರಕರಣದಲ್ಲಿ ಸಮಸ್ಯೆ ಎದುರಿಸಿದ್ದಾರೆ. ಆಂಧ್ರ ಪ್ರದೇಶದ ಖಮ್ಮಾಮ್ ಜಿಲ್ಲೆಯಲ್ಲಿ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಮೋಹನ್ ಬಾಬು ಕೈವಾಡ ಇದೆ ಎಂದು ದೂರಲಾಗಿದೆ. ಚಿಟ್ಟಿಮಲ್ಲು ಎಂಬುವವರು ಈ ದೂರು ನೀಡಿದ್ದಾರೆ.‘ಸೌಂದರ್ಯಾ ಅವರದ್ದು ಆಕಸ್ಮಿಕ ಸಾವಲ್ಲ, ಇದೊಂದು ನಿಯೋಜಿತ ಕೊಲೆ. ಜಾಗದ ವಿಚಾರದಲ್ಲಿ ಈ ಕೊಲೆ ನಡೆದಿದೆ. ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ಶಂಶಾಬಾದ್ನಲ್ಲಿರುವ ಆರು ಎಕರೆ ಜಾಗವನ್ನು ಹೊಂದಿದ್ದರು. ಇದನ್ನು ತಮಗೆ ಕೊಡುವಂತೆ ಮೋಹನ್ ಬಾಬು ಕೇಳುತ್ತಿದ್ದರು. ಇದನ್ನು ಮಾರಲು ಸೌಂದರ್ಯಾ ನಿರಾಕರಿಸಿದ್ದರು. ಇದರಿಂದ ಈ ಕೊಲೆ ನಡೆದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಸೌಂದರ್ಯಾ ಅವರು ಕನ್ನಡ ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ‘ಆಪ್ತಮಿತ್ರ’ ಚಿತ್ರದಲ್ಲಿ ಮಾಡಿದ ನಾಗವಲ್ಲಿ ಪಾತ್ರ ಯಾವಾಗಲೂ ನೆನಪಿನಲ್ಲಿ ಇರುವಂಥದ್ದು. ಅವರು ನಿಧನ ಹೊಂದುವಾಗ ಕೇವಲ 31 ವರ್ಷ ವಯಸ್ಸಾಗಿತ್ತು.


ಸೌಂದರ್ಯಾ ಅವರ ಸಾವಿನ ಬಳಿಕ ಈ ಜಾಗ ಮಾರುವಂತೆ ಅವರ ಕುಟುಂಬದವರಿಗೆ ಮೋಹನ್ ಬಾಬು ಒತ್ತಡ ಹೇರಿದ್ದಾರೆ ಎಂದು ದೂರನಲ್ಲಿ ತಿಳಿಸಲಾಗಿದೆ. ಆ ಬಳಿಕ ಮೋಹನ್ ಬಾಬು ಅವರು ಅಕ್ರಮವಾಗಿ ಈ ಜಾಗವನ್ನು ಪಡೆದುಕೊಂಡರು ಎನ್ನಲಾಗಿದೆ. ಸದ್ಯ ದೂರು ನೀಡಿದ ಚಿಟ್ಟಿಮಲ್ಲು ತಮಗೆ ಪೊಲೀಸ್ ರಕ್ಷಣೆ ಬೇಕು ಎಂದು ಕೋರಿದ್ದಾರೆ. ಅಲ್ಲದೆ ಈ ಜಾಗವನ್ನು ಸರ್ಕಾರದವರು ವಶಕ್ಕೆ ಪಡೆದು ಅಗತ್ಯ ಇರುವ ವೃದ್ಧಾಶ್ರಮದವರಿಗೆ ನೀಡುವಂತೆ ಕೋರಿದ್ದಾರೆ.

The post ‘ನಟಿ ಸೌಂದರ್ಯಾ ಸಾವು ಆಕಸ್ಮಿಕವಲ್ಲ; 21 ವರ್ಷಗಳ ಬಳಿಕ ದಾಖಲಾಯ್ತು ದೂರು. appeared first on Good News 24x7.

]]>