ForestMinisterEshwarKhandre Archives - Good News 24x7 https://www.goodnews24x7.com/tag/forestministereshwarkhandre/ Kannada Thu, 26 Jun 2025 12:35:21 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg ForestMinisterEshwarKhandre Archives - Good News 24x7 https://www.goodnews24x7.com/tag/forestministereshwarkhandre/ 32 32 ಮಲೆಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾ*ವು: ತನಿಖೆಗೆ ಆದೇಶಿಸಿದ ಸಚಿವ ಈಶ್ವರ ಖಂಡ್ರೆ. https://www.goodnews24x7.com/unnatural-death-of-4-tigers-in-malemahadeshwar-hill-minister-eshwar-khandre-orders-investigation/ Thu, 26 Jun 2025 12:31:41 +0000 https://www.goodnews24x7.com/?p=4681 ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿದ್ದು ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ…

The post ಮಲೆಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾ*ವು: ತನಿಖೆಗೆ ಆದೇಶಿಸಿದ ಸಚಿವ ಈಶ್ವರ ಖಂಡ್ರೆ. appeared first on Good News 24x7.

]]>

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿದ್ದು ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.


ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ. 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯವಿದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷಪ್ರಾಶನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.

The post ಮಲೆಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾ*ವು: ತನಿಖೆಗೆ ಆದೇಶಿಸಿದ ಸಚಿವ ಈಶ್ವರ ಖಂಡ್ರೆ. appeared first on Good News 24x7.

]]>