Fortunercar Archives - Good News 24x7 https://www.goodnews24x7.com/tag/fortunercar/ Kannada Sat, 06 Sep 2025 07:22:41 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Fortunercar Archives - Good News 24x7 https://www.goodnews24x7.com/tag/fortunercar/ 32 32 2,500 ರೂಪಾಯಿ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ https://www.goodnews24x7.com/cm-siddaramaiah-pays-rs-2500-fine/ Sat, 06 Sep 2025 07:22:41 +0000 https://www.goodnews24x7.com/?p=7407 ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿಸಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್…

The post 2,500 ರೂಪಾಯಿ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ appeared first on Good News 24x7.

]]>

ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿಸಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ 7 ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿ ಮಾಡಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರು ನಿತ್ಯ ಸಂಚಾರ ಮಾಡುವ ಫಾರ್ಚೂನರ್ ಕಾರು 2024ರಿಂದ ಈವರೆಗೂ 7 ಬಾರಿ ಸಂಚಾರ ನಿಯಮಗಳ ಉಲ್ಲಂಘನೆ ಮಾಡಿರುವುದು ಇದೆ. ಈ ಪೈಕಿ 6 ಪ್ರಕರಣಗಳು ಸೀಟು ಬೆಲ್ಟ್ ಧರಿಸದೇ ನಿಯಮ ಉಲ್ಲಂಘಿಸಿದ ಕೇಸ್ ಆಗಿವೆ. ಇವು ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್​ಮೆಂಟ್ ಸಿಸ್ಟಂನಲ್ಲಿ (ಐಟಿಎಂಎಸ್) ಸಂಚಾರ ನಿಯಮ ಉಲ್ಲಂಘಿಸಿರುವುದು ಸೆರೆಯಾಗಿತ್ತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ದಂಡ ಪಾವತಿ ಆಗಿದೆ. ಸದ್ಯ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶೇ.50ರಷ್ಟು ದಂಡ ಪಾವತಿಯ ಆಫರ್ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುತ್ತಿದ್ದಾರೆ. ಇದೇ ಆಫರ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರಿಗಳು 2,500 ರೂಪಾಯಿ ದಂಡ ಪಾವತಿ ಮಾಡಿದ್ದಾರೆ. ಇದರಿಂದ ಟ್ರಾಫಿಕ್ ನಿಯಮ ಉಲ್ಲಂಘನೆ ಕೇಸ್​ಗಳು ಕ್ಲೀಯರ್ ಆಗಿವೆ.

ಈ ವರ್ಷ ಜುಲೈ 9ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ಏರ್​ಪೋರ್ಟ್ ಎಕ್ಸ್​ಪ್ರೆಸ್ ಕಾರಿಡಾರ್​ನಲ್ಲಿ ಸಿಎಂ ಅವರಿದ್ದ ಕಾರು ಓವರ್ ಸ್ಟೀಡಾಗಿ ಚಲಾಯಿಸಿ ನಿಯಮ ಉಲ್ಲಂಘಿಸಿತ್ತು.2024ರ ಜನವರಿ 24ರಂದು ಮಧ್ಯಾಹ್ನ 12.19ರಂದು ಒಲ್ಡ್ ಏರ್​ಪೋರ್ಟ್ ರಸ್ತೆಯ ಲೀಲಾ ಪ್ಯಾಲೇಸ್ ಜಂಕ್ಷನ್ ಬಳಿ ಹೋಗುವಾಗ ಸಿದ್ದರಾಮಯ್ಯ ಅವರು ಸೀಟು ಬೆಲ್ಟ್ ಧರಿಸಿಲ್ಲ. ಅದೇ ಜಂಕ್ಷನ್​ನಲ್ಲಿ ಫೆಬ್ರುವರಿ ಹಾಗೂ ಆಗಸ್ಟ್​ನಲ್ಲಿ ಮತ್ತೆರಡು ಪ್ರಕರಣಗಳು ದಾಖಲಾಗಿದ್ದವು. ಮಾರ್ಚ್​​ನಲ್ಲಿ ಚಂದ್ರಿಕಾ ಹೋಟೆಲ್​ ಜಂಕ್ಷನ್ ಹಾಗೂ ಆಗಸ್ಟ್​ನಲ್ಲಿ ಶಿವಾನಂದ ಸರ್ಕಲ್ ಹಾಗೂ ಡಾ.ರಾಜ್​ಕುಮಾರ್ ಪ್ರತಿಮೆ ಜಂಕ್ಷನ್​ಗಳ ಬಳಿ ಸೀಟು ಬೆಲ್ಟ್ ಧರಿಸಿದೇ ನಿಯಮ ಉಲ್ಲಂಘಿಸಿದ ಪ್ರಕರಣಗಳು ದಾಖಲಾಗಿದ್ದವು.

The post 2,500 ರೂಪಾಯಿ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ appeared first on Good News 24x7.

]]>