Governor Archives - Good News 24x7 https://www.goodnews24x7.com/tag/governor/ Kannada Mon, 11 Aug 2025 13:48:05 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Governor Archives - Good News 24x7 https://www.goodnews24x7.com/tag/governor/ 32 32 ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು! https://www.goodnews24x7.com/%e0%b2%b8%e0%b2%9a%e0%b2%bf%e0%b2%b5-%e0%b2%b0%e0%b2%be%e0%b2%9c%e0%b2%a3%e0%b3%8d%e0%b2%a3-%e0%b2%b0%e0%b2%be%e0%b2%9c%e0%b3%80%e0%b2%a8%e0%b2%be%e0%b2%ae%e0%b3%86-%e0%b2%b0%e0%b2%b9%e0%b2%b8/ Mon, 11 Aug 2025 13:48:05 +0000 https://www.goodnews24x7.com/?p=5856 ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ…

The post ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು! appeared first on Good News 24x7.

]]>

ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ ಇಷ್ಟೆಲ್ಲ ಬೆಳವಣಿಗೆಗಳು ನಡೆಯಲು ಕಾರಣವೇನು? ಕೆಎನ್ ರಾಜಣ್ಣ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದರೇ? ಅಥವಾ ಯಾರದ್ದಾದರೂ ಒತ್ತಡಕ್ಕೆ ಕಟ್ಟುಬಿದ್ದು ಅವರು ಈ ನಿರ್ಧಾರ ತೆಗೆದುಕೊಂಡರೇ? ಎಂಬ ಕುತೂಹಲಗಳಿಗೆ ಉತ್ತರ ಇಲ್ಲಿದೆ.

ಇಂದು ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಕಾರ್ಯದರ್ಶಿಗೆ ಕೆಎನ್ ರಾಜಣ್ಣ ರಾಜೀನಾಮೆ ಪತ್ರ ನೀಡಿ ವಿಧಾನಸೌಧದಿಂದ ಹೊರಟಿದ್ದಾರೆ. ಬಳಿಕ ಸಿಎಂ ಆ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದರು. ಹೀಗೆ ದಿಢೀರೆಂದು ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಹಿಂದೆ ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪದ ವಿಚಾರದಲ್ಲಿ ಕೆಎನ್ ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದರು. ಈ ಮೂಲಕ ಕೆಎನ್ ರಾಜಣ್ಣ ಅವರು ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ತೊಡೆ ತಟ್ಟಿದ್ದರು. ಇದು ಮಾಜಿ ಸಚಿವ ಕೆಎನ್ ರಾಜಣ್ಣ ಅವರಿಗೆ ಮುಳುವಾಗಿ ಪರಿಣಮಿಸಿದೆ. ಶಾಸಕ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ರಾಜಭವನದಿಂದ ಸರ್ಕಾರಕ್ಕೆ ಅಧಿಕೃತ ಪತ್ರ ರವಾನಿಸಲಾಗಿದೆ.
ಹೌದು, ಸಚಿವ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. “ಮುಂದಿನ ಅಗತ್ಯ ಕ್ರಮಕ್ಕಾಗಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಈ ಪತ್ರದೊಂದಿಗೆ ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ” ಎಂದು ಪತ್ರದಲ್ಲಿದೆ.

ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್ ರಾಜಣ್ಣ ಅವರು ಸೋಮವಾರ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಎನ್ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತಗಳ ಕಳ್ಳತನವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಆದರೆ, “ವೋಟರ್ ಲಿಸ್ಟ್ನ್ನು ನಮ್ಮದೇ ಸರ್ಕಾರ ಇರುವಾಗ ಮಾಡಿರುವುದು. ಆಗ ಕಣ್ಮುಚ್ಚಿ ಕುಳಿತಿದ್ದು ಈಗ ಹೇಳಿದರೆ ಏನು ಪ್ರಯೋಜನ” ಎಂದು ಸಚಿವ ಕೆ.ಎನ್ ರಾಜಣ್ಣ ಹೇಳುವ ಮೂಲಕ ತಮ್ಮದೇ ಪಕ್ಷದ ನಾಯಕರು ಮುಜುಗರಕ್ಕೀಡಾಗುವಂತೆ ಮಾಡಿದ್ದರು.

The post ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು! appeared first on Good News 24x7.

]]>
ಸಚಿವ ರಾಜಣ್ಣ ದಿಢೀರ್ ರಾಜೀನಾಮೆ ನಿರ್ಧಾರದ ಹಿಂದಿನ ಕೈವಾಡ ಯಾರದ್ದು? https://www.goodnews24x7.com/who-is-behind-the-sudden-resignation-of-minister-rajanna/ Mon, 11 Aug 2025 13:01:33 +0000 https://www.goodnews24x7.com/?p=5854 ಬೆಂಗಳೂರು : ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದು ಇದ್ದಕ್ಕಿದ್ದಂತೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದ ಜನರಿಗೆ ಶಾಕ್ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್…

The post ಸಚಿವ ರಾಜಣ್ಣ ದಿಢೀರ್ ರಾಜೀನಾಮೆ ನಿರ್ಧಾರದ ಹಿಂದಿನ ಕೈವಾಡ ಯಾರದ್ದು? appeared first on Good News 24x7.

]]>

ಬೆಂಗಳೂರು : ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದು ಇದ್ದಕ್ಕಿದ್ದಂತೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದ ಜನರಿಗೆ ಶಾಕ್ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ ಇಷ್ಟೆಲ್ಲ ಬೆಳವಣಿಗೆಗಳು ನಡೆಯಲು ಕಾರಣವೇನು? ಕೆಎನ್ ರಾಜಣ್ಣ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದರೇ? ಅಥವಾ ಯಾರದ್ದಾದರೂ ಒತ್ತಡಕ್ಕೆ ಕಟ್ಟುಬಿದ್ದು ಅವರು ಈ ನಿರ್ಧಾರ ತೆಗೆದುಕೊಂಡರೇ? ಎಂಬ ಕುತೂಹಲಗಳಿಗೆ ಉತ್ತರ ಇಲ್ಲಿದೆ.

ಇಂದು ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಕಾರ್ಯದರ್ಶಿಗೆ ಕೆಎನ್ ರಾಜಣ್ಣ ರಾಜೀನಾಮೆ ಪತ್ರ ನೀಡಿ ವಿಧಾನಸೌಧದಿಂದ ಹೊರಟಿದ್ದಾರೆ. ಬಳಿಕ ಸಿಎಂ ಆ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದರು. ಹೀಗೆ ದಿಢೀರೆಂದು ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಹಿಂದೆ ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜಣ್ಣ ಅವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಸೂಚನೆ ನೀಡಿತ್ತು. ಇಂದು ಸಂಜೆ 6 ಗಂಟೆಯೊಳಗೆ ರಾಜೀನಾಮೆ ಪಡೆಯುವಂತೆ ಸೂಚನೆ ನೀಡಲಾಗಿತ್ತು. ಇಂದುವೇಳೆ ಅವರು ರಾಜೀನಾಮೆ ನೀಡದಿದ್ದರೆ ರಾಜಣ್ಣ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಬೇಕಾಗುತ್ತದೆ ಎಂದು ತಿಳಿಸಲಾಗಿತ್ತು.

ಇಂದು ಸಂಜೆ 6ರೊಳಗೆ ರಾಜೀನಾಮೆ ನೀಡದಿದ್ದರೆ ಕೆ.ಎನ್.ರಾಜಣ್ಣ ಅವರನ್ನು ಉಚ್ಚಾಟನೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿತ್ತು. ಹೀಗಾಗಿ, ತಕ್ಷಣ ರಾಜಣ್ಣ ಅವರ ಜೊತೆ ಮಾತುಕತೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಉಚ್ಛಾಟನೆಯಿಂದ ಪಾರಾಗಲು ರಾಜೀನಾಮೆ ಸಲ್ಲಿಸುವಂತೆ ಸಲಹೆ ನೀಡಿದ್ದರು. ಹೀಗಾಗಿ, ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕೆ.ಎನ್.ರಾಜಣ್ಣ ಅವರಿಂದ ರಾಜೀನಾಮೆ ಪಡೆದು ರಾಜ್ಯಪಾಲರಿಗೆ ಕಳುಹಿಸಿ, ರಾಜಭವನದಿಂದ ಬಂದ ಅಂಗೀಕಾರದ ಪ್ರತಿಯನ್ನು ರಾಹುಲ್ ಗಾಂಧಿಯ ಕಚೇರಿಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ನಿರ್ಧಾರಕ್ಕೆ ಕಾರಣವೇನು?:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಕೆಎನ್ ರಾಜಣ್ಣ ಅವರ ತಲೆದಂಡ ಕಾಂಗ್ರೆಸ್ ಪಕ್ಷದಲ್ಲಿಯೂ ಭಾರೀ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯನವರ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣ ಇತ್ತೀಚೆಗೆ ಕೆಲವು ಬಾರಿ ಕಾಂಗ್ರೆಸ್ ವಿರುದ್ಧವೇ ಹೇಳಿಕೆ ನೀಡಿ ಹೈಕಮಾಂಡ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಆಗಸ್ಟ್ 8ರಂದು ಬೆಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ರಾಜಣ್ಣ, ನಾವೇ ಮೊದಲು ಮತಪಟ್ಟಿಯನ್ನು ನೋಡಿಕೊಳ್ಳಬೇಕಿತ್ತು. ಅದು ಬಿಟ್ಟು ಈಗ ಆ ವಿಷಯವನ್ನು ಹೇಳುತ್ತಿರುವುದು ಸರಿಯಲ್ಲ. ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದಾಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ನಮ್ಮ ನಾಯಕರು ಕಣ್ಣುಮುಚ್ಚಿ ಕುಳಿತಿದ್ದರಾ? ಎಂದು ತಮ್ಮದೇ ಪಕ್ಷದವರ ವಿರುದ್ಧ ತುಮಕೂರಿನಲ್ಲಿ ಹೇಳಿಕೆ ನೀಡಿದ್ದರು.

ಇದೇ ವಿಡಿಯೋವನ್ನು ಬಳಸಿಕೊಂಡು ಬಿಜೆಪಿ ಕಾಂಗ್ರೆಸ್ ಸರ್ಕಾರ ಹಾಗೂ ರಾಹುಲ್ ಗಾಂಧಿಯ ವಿರುದ್ಧ ಟೀಕಾಪ್ರಹಾರ ನಡೆಸಿತ್ತು. ನಿಮ್ಮದೇ ಪಕ್ಷದ ಸಚಿವರು ನಿಮ್ಮ ಬಂಡವಾಳ ಬಿಚ್ಚಿಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿತ್ತು. ರಾಜಣ್ಣ ಮಾತನಾಡಿದ್ದ ಆ ವಿಡಿಯೋ ಕಾಂಗ್ರೆಸ್ ಹೈಕಮಾಂಡ್ ನಾಯಕರ ಕೈಸೇರಿತ್ತು. ಇದೇ ಕಾರಣಕ್ಕೆ ರಾಜಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿತ್ತು ಎನ್ನಲಾಗಿದೆ. ಹೀಗಾಗಿ, ರಾಜೀನಾಮೆ ಅಥವಾ ಉಚ್ಛಾಟನೆ ಎಂಬ 2 ಆಯ್ಕೆಯನ್ನು ರಾಜಣ್ಣ ಅವರ ಮುಂದಿಡಲಾಗಿತ್ತು. ಅನಿವಾರ್ಯವಾಗಿ ರಾಜಣ್ಣ ರಾಜೀನಾಮೆಯ ಆಯ್ಕೆಯನ್ನು ಆರಿಸಿಕೊಳ್ಳಬೇಕಾಯಿತು ಎನ್ನಲಾಗಿದೆ. ಆದರೆ, ಅವರ ಉಚ್ಛಾಟನೆಯ ಬಗ್ಗೆಯೂ ಇನ್ನೂ ವದಂತಿಗಳು ಹರಿದಾಡುತ್ತಿವೆ.

The post ಸಚಿವ ರಾಜಣ್ಣ ದಿಢೀರ್ ರಾಜೀನಾಮೆ ನಿರ್ಧಾರದ ಹಿಂದಿನ ಕೈವಾಡ ಯಾರದ್ದು? appeared first on Good News 24x7.

]]>
ರಾಜ್ಯಪಾಲರು ಕಾಯ್ದಿರಿಸಿದ ಮಸೂದೆಗಳ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್ನಿಂದ ರಾಷ್ಟ್ರಪತಿಗೆ 3 ತಿಂಗಳ ಗಡುವು. https://www.goodnews24x7.com/%e0%b2%b0%e0%b2%be%e0%b2%9c%e0%b3%8d%e0%b2%af%e0%b2%aa%e0%b2%be%e0%b2%b2%e0%b2%b0%e0%b3%81-%e0%b2%95%e0%b2%be%e0%b2%af%e0%b3%8d%e0%b2%a6%e0%b2%bf%e0%b2%b0%e0%b2%bf%e0%b2%b8%e0%b2%bf%e0%b2%a6/ Sat, 12 Apr 2025 11:43:26 +0000 https://www.goodnews24x7.com/?p=3176 ನವದೆಹಲಿ : ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ರಾಜ್ಯಪಾಲರು ಉಲ್ಲೇಖಿಸಿದ ಮಸೂದೆಗಳ ಕುರಿತು ರಾಷ್ಟ್ರಪತಿಗಳು ನಿರ್ಧರಿಸಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿದೆ. ಇಂದಿನಿಂದ 3 ತಿಂಗಳೊಳಗೆ ರಾಷ್ಟ್ರಪತಿ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ತಮಿಳುನಾಡಿನ ರಾಜ್ಯಪಾಲ ಆರ್.…

The post ರಾಜ್ಯಪಾಲರು ಕಾಯ್ದಿರಿಸಿದ ಮಸೂದೆಗಳ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್ನಿಂದ ರಾಷ್ಟ್ರಪತಿಗೆ 3 ತಿಂಗಳ ಗಡುವು. appeared first on Good News 24x7.

]]>

ನವದೆಹಲಿ : ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ರಾಜ್ಯಪಾಲರು ಉಲ್ಲೇಖಿಸಿದ ಮಸೂದೆಗಳ ಕುರಿತು ರಾಷ್ಟ್ರಪತಿಗಳು ನಿರ್ಧರಿಸಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿದೆ. ಇಂದಿನಿಂದ 3 ತಿಂಗಳೊಳಗೆ ರಾಷ್ಟ್ರಪತಿ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ತಮಿಳುನಾಡಿನ ರಾಜ್ಯಪಾಲ ಆರ್. ಎನ್ ರವಿ ಅವರು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿದ್ದ ತಮಿಳುನಾಡಿನ 10 ಮಸೂದೆಗಳನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ 4 ದಿನಗಳ ನಂತರ ಈ ತೀರ್ಪು ಬಂದಿದೆ. 415 ಪುಟಗಳ ಪೂರ್ಣ ತೀರ್ಪನ್ನು ಶುಕ್ರವಾರ ರಾತ್ರಿ ತಡರಾತ್ರಿ 10:54 ಕ್ಕೆ ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
“ಗೃಹ ಸಚಿವಾಲಯವು ನಿಗದಿಪಡಿಸಿದ ಕಾಲಮಿತಿಯನ್ನು ಅಳವಡಿಸಿಕೊಳ್ಳುವುದು ಸೂಕ್ತವೆಂದು ನಾವು ಪರಿಗಣಿಸುತ್ತೇವೆ. ಅಂತಹ ಉಲ್ಲೇಖವನ್ನು ಸ್ವೀಕರಿಸಿದ ದಿನಾಂಕದಿಂದ 3 ತಿಂಗಳ ಅವಧಿಯೊಳಗೆ ರಾಜ್ಯಪಾಲರು ತಮ್ಮ ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸೂಚಿಸುತ್ತೇವೆ. ಈ ಅವಧಿಯನ್ನು ಮೀರಿ ಯಾವುದೇ ವಿಳಂಬವಾದರೆ, ಸೂಕ್ತ ಕಾರಣಗಳನ್ನು ದಾಖಲಿಸಿ ಸಂಬಂಧಪಟ್ಟ ರಾಜ್ಯಕ್ಕೆ ತಿಳಿಸಬೇಕು. ರಾಜ್ಯಗಳು ಸಹಯೋಗದಿಂದಿರಬೇಕು ಮತ್ತು ಕೇಂದ್ರ ಸರ್ಕಾರವು ನೀಡಿದ ಸಲಹೆಗಳನ್ನು ತ್ವರಿತವಾಗಿ ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು ಏಪ್ರಿಲ್ 8ರಂದು ತೀರ್ಪು ನೀಡಿತ್ತು. “ರಾಜ್ಯಪಾಲರು ರಾಷ್ಟ್ರಪತಿಗಳ ಒಪ್ಪಿಗೆಗೆ ಮಸೂದೆಯನ್ನು ಕಾಯ್ದಿರಿಸಿದರೆ ಮತ್ತು ರಾಷ್ಟ್ರಪತಿಗಳು ಅದಕ್ಕೆ ಒಪ್ಪಿಗೆಯನ್ನು ತಡೆಹಿಡಿದರೆ, ಈ ನ್ಯಾಯಾಲಯದ ಮುಂದೆ ಅಂತಹ ಕ್ರಮವನ್ನು ಪ್ರಶ್ನಿಸಲು ರಾಜ್ಯ ಸರ್ಕಾರಕ್ಕೆ ಮುಕ್ತವಾಗಿರುತ್ತದೆ” ಎಂದು ನ್ಯಾಯಪೀಠ ಹೇಳಿದೆ.
ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಒಪ್ಪಿಗೆ ನೀಡುವ ಅಥವಾ ತಡೆಹಿಡಿಯುವ ಅಥವಾ ರಾಷ್ಟ್ರಪತಿಗಳ ಪರಿಗಣನೆಗೆ ಮಸೂದೆಯನ್ನು ಕಾಯ್ದಿರಿಸುವ ಅಧಿಕಾರವನ್ನು ಹೊಂದಿದ್ದಾರೆ. “ರಾಜ್ಯ ಸಚಿವ ಸಂಪುಟದ ಸಲಹೆಗೆ ವಿರುದ್ಧವಾಗಿ ಒಪ್ಪಿಗೆಯನ್ನು ತಡೆಹಿಡಿದ ಸಂದರ್ಭದಲ್ಲಿ, ರಾಜ್ಯಪಾಲರು ಗರಿಷ್ಠ 3 ತಿಂಗಳ ಅವಧಿಯೊಳಗೆ ಮಸೂದೆಯನ್ನು ಸಂದೇಶದೊಂದಿಗೆ ಹಿಂತಿರುಗಿಸಬೇಕು” ಎಂದು ಪೀಠ ಹೇಳಿದೆ.
ಸಾಂವಿಧಾನಿಕ ಆದೇಶವನ್ನು ಪುನರುಚ್ಚರಿಸುತ್ತಾ, ರಾಜ್ಯಪಾಲರು ಮಂತ್ರಿ ಮಂಡಳಿಯ ನೆರವು ಮತ್ತು ಸಲಹೆಗೆ ಬದ್ಧರಾಗಿದ್ದಾರೆ ಮತ್ತು ಸದನವು ಮಸೂದೆಯನ್ನು ಪುನಃ ಮಂಡಿಸಿದ ನಂತರ ಅದನ್ನು ಎರಡನೇ ಬಾರಿಗೆ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ನಿಗದಿತ ಸಮಯದೊಳಗೆ ಕಾರ್ಯನಿರ್ವಹಿಸಲು ವಿಫಲವಾದರೆ ರಾಜ್ಯಪಾಲರ ನಿಷ್ಕ್ರಿಯತೆಯು ನ್ಯಾಯಾಂಗ ಪರಿಶೀಲನೆಗೆ ಒಳಪಡುತ್ತದೆ ಎಂದು ತೀರ್ಪು ಹೇಳಿದೆ.

The post ರಾಜ್ಯಪಾಲರು ಕಾಯ್ದಿರಿಸಿದ ಮಸೂದೆಗಳ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್ನಿಂದ ರಾಷ್ಟ್ರಪತಿಗೆ 3 ತಿಂಗಳ ಗಡುವು. appeared first on Good News 24x7.

]]>
ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ! https://www.goodnews24x7.com/%e0%b2%ae%e0%b2%be%e0%b2%9c%e0%b2%bf-%e0%b2%b8%e0%b2%9a%e0%b2%bf%e0%b2%b5-%e0%b2%a8%e0%b2%be%e0%b2%97%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b5%e0%b2%bf%e0%b2%b0%e0%b3%81%e0%b2%a6/ Wed, 09 Apr 2025 13:16:43 +0000 https://www.goodnews24x7.com/?p=3148 ಬೆಂಗಳೂರು : ವಾಲ್ಮೀಕಿ ನಿಗಮ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. 3 ದಿನಗಳ ಹಿಂದೆಯೇ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದರು. ವಾಲ್ಮೀಕಿ ನಿಗಮದಲ್ಲಿ 89 ಕೋಟಿ ಹಣ ವರ್ಗಾವಣೆ…

The post ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ! appeared first on Good News 24x7.

]]>

ಬೆಂಗಳೂರು : ವಾಲ್ಮೀಕಿ ನಿಗಮ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. 3 ದಿನಗಳ ಹಿಂದೆಯೇ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದರು.
ವಾಲ್ಮೀಕಿ ನಿಗಮದಲ್ಲಿ 89 ಕೋಟಿ ಹಣ ವರ್ಗಾವಣೆ ಆರೋಪ ಸಂಬಂಧ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ED ಅನುಮತಿ ಕೋರಿತ್ತು. ಇದೀಗ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಕೋರ್ಟ್ ಅನುಮತಿ ನೀಡಿದೆ. ತನಿಖೆ ವೇಳೆ ED ಅಧಿಕಾರಿಗಳು ನಾಗೇಂದ್ರರನ್ನ ಅರೆಸ್ಟ್ ಮಾಡಿದ್ದು, ಈ ಹಗರಣ ಕೇಸಲ್ಲಿ ನಾಗೇಂದ್ರ ಜೈಲು ಸೇರಿದ್ದರು. ನಂತರ ಜಾಮೀನು ಮೇಲೆ ಹೊರ ಬಂದಿದ್ದ ನಾಗೇಂದ್ರಗೆ ತನಿಖೆ ಶಾಕ್ ನೀಡಿತ್ತು.


ಪ್ರಕರಣದ ಹಿನ್ನೆಲೆ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಬಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 89 ಕೋಟಿ ಹಣ ವರ್ಗಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಮತ್ತಿತರರ ವಿರುದ್ಧ ಇಸಿಐಆರ್ ದಾಖಲಿಸಿ ತನಿಖೆ ಕೈಗೊಂಡಿತ್ತು. ಈ ಹಗರಣ ಕೇಸಲ್ಲಿ ಮಾಜಿ ಸಚಿವ ನಾಗೇಂದ್ರರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

 

The post ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ! appeared first on Good News 24x7.

]]>
ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ. https://www.goodnews24x7.com/%e0%b2%b0%e0%b2%be%e0%b2%9c%e0%b3%80%e0%b2%a8%e0%b2%be%e0%b2%ae%e0%b3%86-%e0%b2%a8%e0%b2%bf%e0%b2%b0%e0%b3%8d%e0%b2%a7%e0%b2%be%e0%b2%b0%e0%b2%a6%e0%b2%bf%e0%b2%82%e0%b2%a6-%e0%b2%b9%e0%b2%bf%e0%b2%82/ Tue, 25 Mar 2025 11:04:52 +0000 https://www.goodnews24x7.com/?p=2881 ಹುಬ್ಬಳ್ಳಿ :- ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ…

The post ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ. appeared first on Good News 24x7.

]]>

ಹುಬ್ಬಳ್ಳಿ :- ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಹೊರಟ್ಟಿ, ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ. 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ಅದನ್ನ(ರಾಜೀನಾಮೆ) ಅಲ್ಲಿಗೆ ಕೈ ಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಅನ್ ಸೈನಡ್ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ . 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ಅದನ್ನ ಅಲ್ಲಿಗೆ ಕೈ ಬಿಟ್ಟಿದ್ದೇನೆ. ಬೆಂಗಳೂರಲ್ಲಿ ಸಭೆ ಮಾಡೋದಾಗಿ ಅಂದು ಕೊಂಡಿದ್ದೇವೆ. ಎಲ್ಲರೂ ಸಹ ನೀವೇ ರಾಜೀನಾಮೆ ಕೊಡಬೇಡಿ ಎಂದು ಹೇಳುತ್ತಿದ್ದಾರೆ. ನಾನು ಮಾಡಿದ ತೀರ್ಮಾನಕ್ಕೆ ವಿರೋಧ ಬಂತು . ನಮ್ಮ ಶಾಸನ ಸಭೆ ಸದಸ್ಯರು ನೋಡೋಣ ರಾಜೀನಾಮೆ ಬೇಡ ಎಂದಿದ್ದಾರೆ. ಪುಟ್ಟಣ್ಣ ಕರೆ ಮಾಡಿ ರಾಜೀನಾಮೆ ವಿಷಯದಲ್ಲಿ ಮುಂದುವರಿಬೇಡಿ ಅಂದ್ರು. ಸಾರ್ವಜನಿಕ ವಲಯದಲ್ಲಿ ನನಗೆ ಇಷ್ಟೊಂದು ಗೌರವ ಕೊಡುತ್ತಿರುವುದಕ್ಕೆ ನಾನು ರಾಜೀನಾಮೆಯಿಂದ ಹಿಂದೆ ಸರಿದಿದ್ದೇನೆ ಎಂದು ಬಸವರಾಜ್ ಹೊರಟ್ಟಿ ಹೇಳಿದರು.

ಈ ಹಿಂದೆ ಇಂತಹ ಘಟನೆ ಆಗಿಲ್ಲ. ಮಾರ್ಚ್ 19, 20, 21ಕ್ಕೆ ಸದನ ಮುಂದುವರೆಸಲಾಗದಂತೆ ಆಯ್ತು. ಬಜೆಟ್ ಮೇಲೆ ಸಿಎಂ ಉತ್ತರ ಕೊಟ್ಟ ನಂತರ ಹನಿಟ್ರ್ಯಾಪ್ ಉತ್ತರ ಕೊಡಿಸುತ್ತೇನೆ ಎಂದು ಹೇಳಿದ್ದೆ. ತಪ್ಪಿಗಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಹ ಹೇಳಿದ್ದರು. ಆದರೂ ಅದೇ ಗದ್ದಲದಲ್ಲಿ ಬಿಲ್ ಕೂಡ ಪಾಸ್ ಆಯ್ತು. ಚರ್ಚೆ ಆಗದೆ ಈ ರೀತಿ ಗದ್ದಲದಲ್ಲಿ ಬಿಲ್ ಪಾಸ್ ಆಗಬಾರದು. ಅದು ಜನರಿಗೆ ಮೋಸ ಮಾಡಿದಂತೆ. ನಾನು ಅಲ್ಲಿ ಇದ್ರು ಕೂಡ ಈ ರೀತಿ ಮಾಡಿದ್ರು . ಹೀಗಾಗಿ ಮನಸ್ಸಿಗೆ ಬೇಜಾರ್ ಆಯ್ತು ಎಂದು ಬೇಸರ ಹೊರಹಾಕಿದರು.
ಹಲವು ನಾಯಕರು ರಾಜೀನಾಮೆ ಕೊಡುವುದರಿಂದ ಎಲ್ಲಾ ಬಗೆ ಹರಿಯುವುದಿಲ್ಲ ಅಂದ್ರು. ಹೀಗಾಗಿ ರಾಜೀನಾಮೆ ನೀಡಬಾರದು ಎಂದು ಈಗಾಗಲೇ ತೀರ್ಮಾನ ಮಾಡಿದ್ದೇನೆ. 27ರ ನಂತರ ಎಲ್ಲಾ 75 ಸದಸ್ಯರಿಗೆ ಪತ್ರ ಕಳುಹಿಸುತ್ತೇನೆ. ಯಾರು ನನ್ನ ಮಾತು ಮೀರಲ್ಲ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಿನ ದಿನಮಾನಗಳಲ್ಲಿ ಒಣ ಪ್ರತಿಷ್ಠೆನೇ ಜಾಸ್ತಿ ಆಗಿದೆ. ಜನರ ಅಭಿವೃದ್ಧಿ ಬಗ್ಗೆ ಯಾವ ಚರ್ಚೆ ಕೂಡ ಆಗಿಲ್ಲ . ಹನಿಟ್ರ್ಯಾಪ್ ಬಗ್ಗೆ ಮುಖ್ಯಮಂತ್ರಿ ಕ್ರಮ ಕೈಗೊಳ್ಳುತ್ತೇವೆ ಅಂದ್ರೆ ಮುಗಿದೋಯ್ತು. ಮುಂದಿನ ಅಧಿವೇಶನಕ್ಕೆ ಸದನ ಉತ್ತಮಗೊಳಿಸುವ ಕೆಲಸ ಮಾಡುತ್ತೇವೆ. ಈ ಘಟನೆ ಆಗಿದ್ದು ಒಳ್ಳೆದಾಯ್ತು, ಸುಧಾರಣೆಗೆ ಒಂದು ದಾರಿ ಆದಂತಾಗಿದೆ. ನಾನು ಸ್ವಲ್ಪ ಭಾವುಕನಾಗೋದು ಸಹಜವಾಗಿ ಕಣ್ಣಲ್ಲಿ ನೀರು ಬರುತ್ತೆ. ವ್ಯವಸ್ಥೆ ಸರಿ ಪಡಿಸಲು ಏನಾದರೂ ಮಾಡಬೇಕು . ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

The post ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ. appeared first on Good News 24x7.

]]>
ಪಂಚ ಗ್ಯಾರಂಟಿಗೆ ಗೌರ್ನರ್ ಶ್ಲಾಘನೆ! https://www.goodnews24x7.com/%e0%b2%aa%e0%b2%82%e0%b2%9a-%e0%b2%97%e0%b3%8d%e0%b2%af%e0%b2%be%e0%b2%b0%e0%b2%82%e0%b2%9f%e0%b2%bf%e0%b2%97%e0%b3%86-%e0%b2%97%e0%b3%8c%e0%b2%b0%e0%b3%8d%e0%b2%a8%e0%b2%b0%e0%b3%8d-%e0%b2%b6/ Tue, 04 Mar 2025 08:45:27 +0000 https://www.goodnews24x7.com/?p=2555 ರಾಜ್ಯ ಸರ್ಕಾರವು ಪ್ರತಿ ವರ್ಷ 90,000 ಕೋಟಿ ರು.ಗೂ ಹೆಚ್ಚು ಹಣವನ್ನು ಕಲ್ಯಾಣ ಕಾರ್ಯಕ್ರಮಗಳ ಮೂಲಕ ನೇರವಾಗಿ ಜನ ರಿಗೆ ತಲುಪಿಸುತ್ತಿದೆ. ಗ್ಯಾರಂಟಿಗಳಿಂದ ಹಣ ಕಾಸು ಸ್ಥಿತಿ ಹದಗೆಡುತ್ತದೆ ಎನ್ನುತ್ತಿದ್ದವರ ಭವಿಷ್ಯವನ್ನು ಸುಳ್ಳಾಗಿಸಿ ವಿಶ್ವಸಂಸ್ಥೆ ಮುಖ್ಯಸ್ಥ ರಿಂದಲೇ ಶ್ಲಾಘನೆ ಪಡೆದಿದೆ ಎಂದು…

The post ಪಂಚ ಗ್ಯಾರಂಟಿಗೆ ಗೌರ್ನರ್ ಶ್ಲಾಘನೆ! appeared first on Good News 24x7.

]]>

ರಾಜ್ಯ ಸರ್ಕಾರವು ಪ್ರತಿ ವರ್ಷ 90,000 ಕೋಟಿ ರು.ಗೂ ಹೆಚ್ಚು ಹಣವನ್ನು ಕಲ್ಯಾಣ ಕಾರ್ಯಕ್ರಮಗಳ ಮೂಲಕ ನೇರವಾಗಿ ಜನ ರಿಗೆ ತಲುಪಿಸುತ್ತಿದೆ. ಗ್ಯಾರಂಟಿಗಳಿಂದ ಹಣ ಕಾಸು ಸ್ಥಿತಿ ಹದಗೆಡುತ್ತದೆ ಎನ್ನುತ್ತಿದ್ದವರ ಭವಿಷ್ಯವನ್ನು ಸುಳ್ಳಾಗಿಸಿ ವಿಶ್ವಸಂಸ್ಥೆ ಮುಖ್ಯಸ್ಥ ರಿಂದಲೇ ಶ್ಲಾಘನೆ ಪಡೆದಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರುಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ್ದಾರೆ.
ಸೋಮವಾರಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ‘ಆಡಳಿತ’ ಎಂಬುದು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶ ಎಂದು ಜನ ಕಲ್ಯಾಣವನ್ನೇ ಧೈಯವಾಗಿಟ್ಟು ಕೊಂಡು ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರವು ಸರ್ವರ ಅಭ್ಯುದಯಕ್ಕಾಗಿ ಕೆಲಸ ಮಾಡುತ್ತಿದೆ ಎಂದರು.
ಉಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಲಿದೆ, ಹಣಕಾಸು ಸ್ಥಿತಿ ಹದಗೆಡಲಿದೆ ಎಂದು ಹೇಳಲಾಗುತ್ತಿತ್ತು. ಅಂತ ಹವರ ಭವಿಷ್ಯ ಸುಳ್ಳಾಗುವಂತೆ ಅನುಷ್ಠಾನಗೊ ಳಿಸಲಾಗಿದೆ.

ರಾಜ್ಯಪಾಲರ ಭಾಷಣದಲ್ಲೇನಿದೆ?
# ವಿವಿಧ ವಿವಿಗಳು ಗ್ಯಾರಂಟಿ ಮಾದರಿಯನ್ನು ಅಧ್ಯಯನ ನಡೆಸುವಂತಾಗಿದೆ
# ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಒಯ್ಯಲು ಮುಂದಡಿ
# ಕಳೆದ 19 ತಿಂಗಳಲ್ಲಿ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ
# ನಂಜುಂಡಪ್ಪ ವರದಿ ಜಾರಿ ಮಾಡಿ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಕ್ರಮ
# ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಪ್ರಕ್ರಿಯೆ

ಹಿಂದಿನ ಸರ್ಕಾರ ಅಕ್ರಮ ತಾರ್ಕಿಕ ಅಂತ್ಯ: ಗೌರರ್

ಹಿಂದಿನ ಸರ್ಕಾರದ ಅವಧಿಯ ಭ್ರಷ್ಟಾಚಾರ ಗಳನ್ನು ತಾರ್ಕಿಕ ಅಂತ್ಯಕ್ಕೆ ತರಲಾಗುವುದು ಎಂದು ರಾಜ್ಯಪಾಲರು ಹೇಳಿದ್ದಾರೆ. ತನ್ಮೂಲಕ ಹಿಂದಿನ ಬಿಜೆಪಿ ಸರ್ಕಾರದ ಹಗರಣಗಳು, ಭ್ರಷ್ಟಾಚಾರ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುವುದಾಗಿ ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ಸಂದೇಶ ನೀಡಿದೆ.

ತಾವೇ ತಿರಸ್ಕರಿಸಿದ್ದ ಸುಗ್ರೀವಾಜ್ಞೆಗೆ ಮೆಚ್ಚುಗೆ!

ಬಲವಂತದ ಸಾಲ ವಸೂಲಿ ವಿರುದ್ಧ ರಾಜ್ಯ ಸರ್ಕಾರ ಹೊರಡಿಸಿದ್ದ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹಲೋಸ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಆ ಸುಗ್ರೀವಾಜ್ಞೆಯನ್ನು ಸಮರ್ಥಿಸಿಕೊಂಡಿದ್ದಾರೆ.

The post ಪಂಚ ಗ್ಯಾರಂಟಿಗೆ ಗೌರ್ನರ್ ಶ್ಲಾಘನೆ! appeared first on Good News 24x7.

]]>
ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್‌.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ https://www.goodnews24x7.com/%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86-%e0%b2%ac%e0%b2%bf%e0%b2%97%e0%b3%8d/ Tue, 24 Sep 2024 07:07:16 +0000 https://www.goodnews24x7.com/?p=631 ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್‌.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ. ಸಿಎಂ ಸಿದ್ದರಾಮಯ್ಯ…

The post ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್‌.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ appeared first on Good News 24x7.

]]>

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್‌.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ.

ಸಿಎಂ ಸಿದ್ದರಾಮಯ್ಯ ಪರ ಹಾಗೂ ದೂರುದಾರರ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್‌ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಮುಡಾ ಪ್ರಕರಣದಲ್ಲಿ ಅರ್ಜಿದಾರರ ಕ್ರಮ ಸೂಕ್ತವಾಗಿದೆ. ಹೀಗಾಗಿ ಗವರ್ನರ್ ಆದೇಶವನ್ನು ಹೈಕೋರ್ಟ್‌ ಒಪ್ಪಿಕೊಂಡಿದೆ.

ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್​ನ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಗೂ ಪ್ರೊ.ರವಿಕುಮಾರ್ ವರ್ಮಾ ಅವರು ವಾದ ಮಂಡನೆ ಮಾಡಿದರು. ಇನ್ನು ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ್ದ ನ್ಯಾ.ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಪ್ರಕರಣ ತನಿಖೆ ಆಗಬೇಕು ಎಂದು ಹೇಳಿದೆ.

The post ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್‌.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ appeared first on Good News 24x7.

]]>
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ https://www.goodnews24x7.com/the-high-court-has-reserved-the-verdict-of-prosecution-against-cm-siddaramaiah/ Thu, 12 Sep 2024 14:55:18 +0000 https://www.goodnews24x7.com/?p=588 ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್‌ ಹಗರಣ ಆರೋಪದ ಕಾನೂನು ಹೋರಾಟ ನಿರ್ಣಾಯಕ ಘಟ್ಟ ತಲುಪಿದೆ. ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನ ಪ್ರಶ್ನಿಸಿದ ಅರ್ಜಿಯ ಅಂತಿಮ ಹಂತದ ವಾದ…

The post ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ appeared first on Good News 24x7.

]]>

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್‌ ಹಗರಣ ಆರೋಪದ ಕಾನೂನು ಹೋರಾಟ ನಿರ್ಣಾಯಕ ಘಟ್ಟ ತಲುಪಿದೆ. ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನ ಪ್ರಶ್ನಿಸಿದ ಅರ್ಜಿಯ ಅಂತಿಮ ಹಂತದ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್​ನಲ್ಲಿ ನಡೆಸಲಾಗಿದೆ. ವಾದಮಂಡನೆ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಏನು ತೀರ್ಪು ಬರುತ್ತೆ ಎಂದು ಟೆನ್ಷನ್ ಶುರುವಾಗಿದೆ.

The post ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ appeared first on Good News 24x7.

]]>
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! https://www.goodnews24x7.com/today-is-a-big-day-for-cm-siddaramaiah-2/ Thu, 12 Sep 2024 03:54:19 +0000 https://www.goodnews24x7.com/?p=578 ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.…

The post ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! appeared first on Good News 24x7.

]]>

ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!

ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.

ರಾಜ್ಯ ರಾಜಕಾರಣ ಸದ್ಯ ಕುತೂಹಲದ ಘಟ್ಟಕ್ಕೆ ಬಂದು ನಿಂತಿದೆ. ಮುಡಾ ಕೇಸ್​​ ಏನಾಗಲಿದೆ ಅನ್ನೋದು ಕೆಲವೇ ಘಂಟೆಗಳಲ್ಲಿ ನಿರ್ಧಾರ ಆಗಲಿದೆ. ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ನ್ಯಾ. ನಾಗಪ್ರಸನ್ನ ಗುರುವಾರ ಅರ್ಜಿ ವಿಚಾರಣೆ ಮುಗಿಸೋಣ ಅಂತ ಅರ್ಜಿದಾರರಿಗೆ ಮೌಖಿಕವಾಗಿ ತಿಳಿಸಿದ್ದರು. ಹೀಗಾಗಿ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ತೀರ್ಮಾನ ಆಗಲಿದೆ.

The post ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! appeared first on Good News 24x7.

]]>
ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ https://www.goodnews24x7.com/cm-siddaramaiahs-application-hearing-adjourned-to-september-12/ Mon, 09 Sep 2024 12:33:24 +0000 https://www.goodnews24x7.com/?p=552 ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ ಇಂದು ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. 17 Aಅಡಿ ಪ್ರಾಸಿಕ್ಯೂಷನ್ ಗೆ ಪೊಲೀಸರು…

The post ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ appeared first on Good News 24x7.

]]>

ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ

ಇಂದು ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. 17 Aಅಡಿ ಪ್ರಾಸಿಕ್ಯೂಷನ್ ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಲಲಿತಾ ಕುಮಾರಿ ಪ್ರಕರಣವನ್ನು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು.

ರಾಜ್ಯಪಾಲರು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು. ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ವರದಿ ಪಡೆಯಬೇಕಿತ್ತು. ವರದಿಯ ಬಲವಿಲ್ಲದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ 17ಎರ ಮಾರ್ಗಸೂಚಿ ಆಧರಿಸಿ ಎಜಿ ಶಶಿಕುಮಾರ್ ಶೆಟ್ಟಿ ವಾದ ಮಂಡನೆ ಮಾಡಿದರು.

ಸಿಎಂ ತಪ್ಪು ಮಾಡಿದ್ದಾರೆ ಎಂಬುದಕ್ಕೆ ದಾಖಲೆ ಇಲ್ಲ. ತರಾತುರಿಯಲ್ಲಿ ಗವರ್ನರ್ ಬಳಿ ತನೊಖೆಗೆ ಅನುಮತಿ ನೀಡಲಾಗಿದೆ ಎಂದರು. ಈ ವೇಳೆ ಖಾಸಗಿ ದೂರುದಾರರಿಗೆ ಇದು ಅನ್ವಯವಾಗಲ್ಲ ಎಂದು ಜಡ್ಜ್ ಪ್ರಶ್ನಿಸಿದ್ದು, ದೂರು ನೀಡಿದ ನಂತರ 15 ದಿನಗಳಿಂದ 6 ವಾರಗಳ ಕಾಲ ಸಮಯ ಇರುತ್ತೆ. ಸಿಎಂ ಪ್ರಕರಣದಲ್ಲಿ ಕಾಲಾವಕಾಶ ನೀಡದೇ ದೂರು ನೀಡಲಾಗಿದೆ ಎಂದು ವಾದಿಸಿದರು. ವಿಚಾರಣೆಯನ್ನ ಕೋರ್ಟ್ ಸೆಪ್ಟಂಬರ್ 12ಕ್ಕೆ ಮುಂದೂಡಿಕೆ ಮಾಡಿದ್ದು ಅಂದು ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡುವ ಸಾಧ್ಯತೆ ಇದೆ.

The post ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ appeared first on Good News 24x7.

]]>