Gujarat Archives - Good News 24x7 https://www.goodnews24x7.com/tag/gujarat/ Kannada Tue, 26 May 2026 12:33:56 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Gujarat Archives - Good News 24x7 https://www.goodnews24x7.com/tag/gujarat/ 32 32 ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..! https://www.goodnews24x7.com/rcb-can-reach-the-final-without-playing-the-qualifier/ Tue, 26 May 2026 12:28:44 +0000 https://www.goodnews24x7.com/?p=9547 ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

The post ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..! appeared first on Good News 24x7.

]]>

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ, ಮಳೆ ನಿಯಮ ಆರ್‌ಸಿಬಿಗೆ ವರದಾನವಾಗಲಿದೆ.

ಐಪಿಎಲ್ ರ ಸೀಸನ್ ಅಂತಿಮ ಹಂತಕ್ಕೆ ತಲುಪಿದೆ. ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಇಂದು ಧರ್ಮಶಾಲಾದಲ್ಲಿ ಮೊದಲ ಕ್ವಾಲಿಫೈಯರ್ ಆಡಲು ಸಿದ್ಧವಾಗಿವೆ. ಪಂದ್ಯ ಸಂಜೆ  7:30 ಕ್ಕೆ ಪ್ರಾರಂಭವಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇತ್ತ ಸೋತ ತಂಡಕ್ಕೆ ಮತ್ತೊಂದು ಅವಕಾಶವಿದ್ದರೂ (ಕ್ವಾಲಿಫೈಯರ್-2), ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಇರಾದೆಯಲ್ಲಿವೆ. ಆದಾಗ್ಯೂ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ಕ್ವಾಲಿಫೈಯರ್ ಆಡದೆಯೇ ಫೈನಲ್ ತಲುಪುವ ಅವಕಾಶವನ್ನು ಹೊಂದಿದೆ. ಅದು ಹೇಗೆ ಸಾಧ್ಯ?

ಪಂದ್ಯ ರದ್ದಾದರೆ ಆರ್​ಸಿಬಿ ಫೈನಲ್​ಗೆ

ವಾಸ್ತವವಾಗಿ ಫೈನಲ್ ಹೊರತುಪಡಿಸಿ ಯಾವುದೇ ಪ್ಲೇಆಫ್ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿಲ್ಲ. ಆದ್ದರಿಂದ, ಕ್ವಾಲಿಫೈಯರ್ 1, ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಪಂದ್ಯಗಳು ಮಳೆಯಿಂದಾಗಿ ರದ್ದಾದರೆ, ಮರುದಿನ ಪಂದ್ಯಗಳನ್ನು ಆಡಲಾಗುವುದಿಲ್ಲ. ಹೀಗಾಗಿ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳಲ್ಲಿ ಮಳೆ ಬಂದರೆ, ಅದೇ ದಿನ ಪಂದ್ಯವನ್ನು ಮುಗಿಸಲು ಪ್ರಯತ್ನಿಸಲಾಗುತ್ತದೆ. ಪಂದ್ಯದ ಆರಂಭ ವಿಳಂಬವಾದರೆ, ಕನಿಷ್ಠ ಐದು ಓವರ್‌ಗಳ ಪಂದ್ಯವನ್ನು ಆಡಿಸಲು ಪ್ರಯತ್ನಿಸಲಾಗುತ್ತದೆ. ಇದಕ್ಕಾಗಿ, 120 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. ಆದರೆ ಹೆಚ್ಚುವರಿ ಸಮಯದ 120 ನಿಮಿಷಗಳಲ್ಲೂ ಪಂದ್ಯ ಮುಗಿಯದಿದ್ದರೆ, ಆಗ ಪಾಯಿಂಟ್‌ ಪಟ್ಟಿ ಪ್ರಮುಖ ಪಾತ್ರವಹಿಸುತ್ತದೆ.

https://www.instagram.com/reel/DYzRfaoE5RV/?utm_source=ig_web_copy_link&igsh=MzRlODBiNWFlZA==ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್

ಅಂದರೆ ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡ ಮೇಲುಗೈ ಸಾಧಿಸಿರುತ್ತದೋ ಆ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಇದರರ್ಥ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್​ಸಿಬಿ ಕ್ವಾಲಿಫೈಯರ್ 1 ಆಡದೆಯೇ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುತ್ತದೆ. ಇತ್ತ ಗುಜರಾತ್ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ.

ಅಗ್ರಸ್ಥಾನದಲ್ಲಿ ಆರ್​ಸಿಬಿ


ಐಪಿಎಲ್ 2026 ರ ಗುಂಪು ಹಂತ ಮುಗಿದ ಬಳಿಕ ನಾವು ಪಾಯಿಂಟ್ ಪಟ್ಟಿಯನ್ನು ನೋಡುವುದಾದರೆ.. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಹಾಲಿ ಚಾಂಪಿಯನ್ ಆರ್​ಸಿಬಿ ಲೀಗ್ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದ್ದು, +0.783 ನೆಟ್ ರನ್​ರೇಟ್ ಹೊಂದಿದೆ. ಇತ್ತ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಕೂಡ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದೆ. ಆದರೆ ಗುಜರಾತ್ ತಂಡದ ನೆಟ್ ರನ್​ರೇಟ್ ಆರ್​ಸಿಬಿಗಿಂತ ಕಡಿಮೆ ಅಂದರೆ +0.695 ಆಗಿರುವ ಕಾರಣ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.

ಧರ್ಮಶಾಲಾದಲ್ಲಿ ಹವಾಮಾನ ಹೇಗಿರಲಿದೆ?


ಧರ್ಮಶಾಲಾ ಮೈದಾನವು ಪರ್ವತಗಳಿಂದ ಸುತ್ತುವರೆದಿದೆ. ಇದರಿಂದಾಗಿ, ಹವಾಮಾನ ಯಾವುದೇ ಸಮಯದಲ್ಲಿ ಬದಲಾಗಬಹುದು. ಆದಾಗ್ಯೂ, ಹವಾಮಾನ ಮುನ್ಸೂಚನೆಯ ಪ್ರಕಾರ, ಪಂದ್ಯದ ದಿನದಂದು ಮಳೆಯಾಗುವ ಸಾಧ್ಯತೆ ಶೇ. 25 ರಷ್ಟು ಇದೆ. ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ನಿರೀಕ್ಷಿಸಲಾಗಿದೆ. ಪ್ರಸ್ತುತ, ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪೂರ್ಣ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಹಾಗೆಯೇ ಮಳೆ ಬರುವ ಸಾಧ್ಯತೆ ಇರದ ಕಾರಣ, ಆರ್​ಸಿಬಿ ಈ ಪಂದ್ಯವನ್ನು ಆಡಿ, ಜಯ ಸಾಧಿಸಿಯೇ ಫೈನಲ್​ಗೆ ಟಿಕೆಟ್ ಪಡೆಯಬೇಕಾಗಿದೆ.

The post ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..! appeared first on Good News 24x7.

]]>
ಅಹಮದಾಬಾದ್ ಏರ್ ಪೋರ್ಟ್ನಲ್ಲಿ ವಿಮಾನ ಪತನ! ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇದ್ರ? https://www.goodnews24x7.com/plane-crashes-at-ahmedabad-airport-former-gujarat-cm-vijay-rupani-was-also-on-board/ Thu, 12 Jun 2025 11:15:35 +0000 https://www.goodnews24x7.com/?p=4366 ಅಹಮದಾಬಾದ್ : ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್…

The post ಅಹಮದಾಬಾದ್ ಏರ್ ಪೋರ್ಟ್ನಲ್ಲಿ ವಿಮಾನ ಪತನ! ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇದ್ರ? appeared first on Good News 24x7.

]]>

ಅಹಮದಾಬಾದ್ : ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಯಿತು. ಪ್ರಯಾಣಿಕರ ಪಟ್ಟಿಯಲ್ಲಿ ವಿಜಯ್ ರೂಪಾನಿ ಹೆಸರಿದೆ. ಟಿಕೆಟ್ ಮಾಹಿತಿ ಕೂಡ ಈಗ ಲಭ್ಯವಾಗಿದೆ.

ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ 242 ಜನರಲ್ಲಿ ಇಬ್ಬರು ಪೈಲಟ್ಗಳು ಮತ್ತು 2 ಮಕ್ಕಳು ಸೇರಿದಂತೆ 8 ಸಿಬ್ಬಂದಿ ಇದ್ದರು. ವಿಮಾನದ ಪೈಲಟ್ನ ಹೆಸರು ಸುಮಿತ್ ಸಭರ್ವಾಲ್ ಎಂದು ಹೇಳಲಾಗುತ್ತಿದೆ.

ವಿಮಾನ ಟೇಕ್ ಆಫ್ ಆದ ಕೇವಲ 1 ನಿಮಿಷದಲ್ಲಿ ಅಪಘಾತಕ್ಕೀಡಾಗಿದೆ. ಅದರ ವಿಡಿಯೋ ಕೂಡ ಹೊರಬಿದ್ದಿದೆ. ಆಕಾಶದಲ್ಲಿ 625 ಅಡಿ ಎತ್ತರ ತಲುಪಿದ ತಕ್ಷಣ ವಿಮಾನ ಹೇಗೆ ಪತನಗೊಂಡಿತು ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಗುಜರಾತ್ನ ಅಹ್ಮದಾಬಾದ್ನಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ. ಅಹ್ಮದಾಬಾದ್ ಏರ್ಪೋರ್ಟ್ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದು ನಿಮಿಷದಲ್ಲಿ ಮೇಘನಿನಗರ್ದಲ್ಲಿ ಪತನಗೊಂಡಿದೆ.

ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿ ಇದ್ದರು. ಇವರಲ್ಲಿ ಒಟ್ಟು 133 ಮಂದಿ ಸಾವನ್ನಪ್ಪಿದ್ದಾರೆ ಎಂದು ಧೃಡಪಡಿಸಲಾಗಿದೆ. ವಿಜಯ್ ರೂಪಾನಿ ಸೀಟ್ ಸಂಖ್ಯೆ 2-ಡಿಯಲ್ಲಿ ಕುಳಿತಿದ್ದರು. ಟಿಕೆಟ್ ದೃಢೀಕರಿಸಲಾಗಿದೆ. ಅವರ ಸೀಟ್ ನಂಬರ್ 11 ಜಿ. ಮೂಲಗಳ ಪ್ರಕಾರ, ವಿಜಯ್ ರೂಪಾನಿ ಅವರ ಪತ್ನಿ ಬ್ರಿಟನ್ನಲ್ಲಿದ್ದರು. ಅವರ ಪತ್ನಿ 6 ತಿಂಗಳು ಅಲ್ಲಿದ್ದರು. ಅವರನ್ನು ಮರಳಿ ಕರೆತರಲು ವಿಜಯ್ ರೂಪಾನಿ ಲಂಡನ್ಗೆ ಹೋಗುತ್ತಿದ್ದರು. ನಂತರ ಅಹಮದಾಬಾದ್ನಲ್ಲಿ ಟೇಕ್ ಆಫ್ ಆಗುವಾಗ ವಿಮಾನ ಅಪಘಾತಕ್ಕೀಡಾಯಿತು. ಈ ಅಪಘಾತ ಅಹಮದಾಬಾದ್ನ ಮೇಘನಿನಗರ ಪ್ರದೇಶದ ಬಳಿ ಸಂಭವಿಸಿದೆ. ಟೇಕ್ ಆಫ್ ಆಗುವ ಸಮಯದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ.

1956ರಲ್ಲಿ ಇಂದಿನ ಮೈನ್ಮಾರ್ ದೇಶದ ರಂಗೂನ್ನಲ್ಲಿ ಜೈನ್ ಬನಿಯಾ ಸಮುದಾಯದಲ್ಲಿ ಜನಿಸಿದ ವಿಜಯ್ ರೂಪಾನಿ ಅವರ ಕುಟುಂಬ ಮುಂದೆ ಗುಜರಾತಿನ ರಾಜ್ಕೋಟ್ಗೆ ವಲಸೆ ಬಂತು. ಬಿಎ ಎಲ್ಎಲ್ಬಿ ಪದವೀಧರರು. ಅವರ ತಂದೆ ರಮಣಿಕ್ಲಾಲ್ ರೂಪಾನಿ ತಾಯಿ ಮಾಯಾಬೆನ್. ವಿದ್ಯಾರ್ಥಿ ಜೀವನದಿಂದಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಕ್ರಿಯ ಸದಸ್ಯರಾಗಿ ಕೆಲಸ ಮಾಡಿದ ಅವರು, ಇಸವಿ ಸನ್ 1971ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಅಲ್ಲದೇ ಸ್ಟಾಕ್ ಬ್ರೋಕರ್ ಆಗಿಯೂ ಅವರು ಷೇರುಪೇಟೆಯಲ್ಲಿ ಕೆಲಸ ಮಾಡಿದ್ದರು.ವಿಜಯ್ ರೂಪಾನಿ ಪಕ್ಷ ಮತ್ತು ಸಂಘಟನೆಯ ತತ್ವ ಸಿದ್ಧಾಂತಗಳಿಗೆ ನಿಷ್ಠಾವಂತ ಕಾರ್ಯಕರ್ತ. 1976ರಲ್ಲಿ ತುರ್ತು ಪರಿಸ್ಥಿತಿಯ ವಿರುದ್ಧ ನಡೆಸಿದ ಹೋರಾಟ ಅವರಿಗೆ 11 ತಿಂಗಳ ಜೈಲುವಾಸದ ರುಚಿಯನ್ನೂ ಉಣಬಡಿಸಿತು. 1978ರಿಂದ 1981ರವರೆಗೆ ಆರ್ಎಸ್ಎಸ್ನ ಪ್ರಚಾರಕ್ ಜವಾಬ್ದಾರಿಯನ್ನು ನಿರ್ವಹಿಸಿದ ವಿಜಯ್ ರೂಪಾನಿಗೆ 2006ರಲ್ಲಿ ಗುಜರಾತ್ ಪ್ರವಾಸೋದ್ಯಮ ಅಭಿವೃದ್ಧಿಯ ಜವಾಬ್ದಾರಿಯನ್ನೂ ಬಿಜೆಪಿ ನೀಡಿತು. 2006ರಲ್ಲಿ ರಾಜ್ಕೋಟ್ ಪಾಲಿಕೆ ಕಾರ್ಪೋರೇಟರ್, ಮೇಯರ್ ಆಗಿ ಆಯ್ಎಕಯಾದ ಅವರಿಗೆ ಬಿಜೆಪಿ ರಾಜ್ಯಸಭೆಯ ಸದಸ್ಯ ಸ್ಥಾನವನ್ನು ನೀಡಿತು.

The post ಅಹಮದಾಬಾದ್ ಏರ್ ಪೋರ್ಟ್ನಲ್ಲಿ ವಿಮಾನ ಪತನ! ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇದ್ರ? appeared first on Good News 24x7.

]]>
3ನೇ ಕ್ಲಾಸ್ ಬಾಲಕಿಗೆ ಹೃದಯಾಘಾತ ಅಹಮದಾಬಾದ್ ಶಾಲೆಯಲ್ಲಿ ಘಟನೆ. https://www.goodnews24x7.com/3%e0%b2%a8%e0%b3%87-%e0%b2%95%e0%b3%8d%e0%b2%b2%e0%b2%be%e0%b2%b8%e0%b3%8d-%e0%b2%ac%e0%b2%be%e0%b2%b2%e0%b2%95%e0%b2%bf%e0%b2%97%e0%b3%86-%e0%b2%b9%e0%b3%83%e0%b2%a6%e0%b2%af%e0%b2%be%e0%b2%98/ Sun, 12 Jan 2025 11:50:20 +0000 https://www.goodnews24x7.com/?p=1724 ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಶಾಲೆಯ ಕಾರಿಡಾರ್ನಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾಳೆ. ಗಾರ್ಗಿ ರಣಪರಾ ಎಂಬ 8 ವರ್ಷದ ಬಾಲಕಿ ನಿನ್ನೆ ಬೆಳಿಗ್ಗೆ ಥಲ್ತೇಜ್ ಪ್ರದೇಶದಲ್ಲಿರುವ ಜೆಬಾರ್ ಶಾಲೆಯಲ್ಲಿ ಕುಸಿದು ಬಿದ್ದಿದ್ದಾಳೆ. ಕ್ಲಾಸ್ರೂಮಿನ ಹೊರಗಿದ್ದ ಕಾರಿಡಾರ್ನಲ್ಲೇ ಬಾಲಕಿ…

The post 3ನೇ ಕ್ಲಾಸ್ ಬಾಲಕಿಗೆ ಹೃದಯಾಘಾತ ಅಹಮದಾಬಾದ್ ಶಾಲೆಯಲ್ಲಿ ಘಟನೆ. appeared first on Good News 24x7.

]]>

ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಶಾಲೆಯ ಕಾರಿಡಾರ್ನಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾಳೆ. ಗಾರ್ಗಿ ರಣಪರಾ ಎಂಬ 8 ವರ್ಷದ ಬಾಲಕಿ ನಿನ್ನೆ ಬೆಳಿಗ್ಗೆ ಥಲ್ತೇಜ್ ಪ್ರದೇಶದಲ್ಲಿರುವ ಜೆಬಾರ್ ಶಾಲೆಯಲ್ಲಿ ಕುಸಿದು ಬಿದ್ದಿದ್ದಾಳೆ. ಕ್ಲಾಸ್ರೂಮಿನ ಹೊರಗಿದ್ದ ಕಾರಿಡಾರ್ನಲ್ಲೇ ಬಾಲಕಿ ಕುಸಿದುಬಿದ್ದಿದ್ದಾಳೆ. ತಕ್ಷಣ ಶಿಕ್ಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅವಳು ಅಷ್ಟರಲ್ಲಾಗಲೇ ಮೃತಪಟ್ಟಿದ್ದಳು.
ಶಾಲಾ ಆಡಳಿತ ಮಂಡಳಿ ಹಂಚಿಕೊಂಡ ಸಿಸಿಟಿವಿ ವೀಡಿಯೊದಲ್ಲಿ, ಗಾರ್ಗಿ ರಣಪರಾ ಲಾಬಿಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆದರೆ ದಾರಿಯಲ್ಲಿ, ಅವಳು ಸುಸ್ತಾಗಿ ಲಾಬಿಯಲ್ಲಿ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾಳೆ. ನಂತರ ಶಿಕ್ಷಕರು ಮತ್ತು ಇತರ ವಿದ್ಯಾರ್ಥಿಗಳು ನೋಡನೋಡುತ್ತಿದ್ದಂತೆ ಆಕೆ ಪ್ರಜ್ಞೆ ತಪ್ಪಿ ಬೀಳುತ್ತಾಳೆ. ಅವಳು ಉಸಿರಾಟದ ತೊಂದರೆ ಅನುಭವಿಸುತ್ತಿದ್ದರಿಂದ ಶಿಕ್ಷಕರು ಅವಳಿಗೆ ಸಿಪಿಆರ್ ನೀಡಿ ಆಂಬ್ಯುಲೆನ್ಸ್ಗೆ ಕರೆ ಮಾಡಿದರು. ಆದರೆ, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಆಕೆ ಮೃತಪಟ್ಟಿದ್ದಳು.
ಈ ವಾರದ ಆರಂಭದಲ್ಲಿ ಇದೇ ರೀತಿಯ ಘಟನೆ ಕರ್ನಾಟಕದ ಚಾಮರಾಜನಗರದಲ್ಲಿ ನಡೆದಿತ್ತು. ಇಲ್ಲಿನ 8 ವರ್ಷದ 3ನೇ ತರಗತಿ ವಿದ್ಯಾರ್ಥಿನಿ ಶಾಲೆಯಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಅದೇ ರೀತಿಯ ಘಟನೆ ಅಹಮದಾಬಾದ್ ಶಾಲೆಯಲ್ಲಿ ನಡೆದಿದೆ.

The post 3ನೇ ಕ್ಲಾಸ್ ಬಾಲಕಿಗೆ ಹೃದಯಾಘಾತ ಅಹಮದಾಬಾದ್ ಶಾಲೆಯಲ್ಲಿ ಘಟನೆ. appeared first on Good News 24x7.

]]>
ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ. https://www.goodnews24x7.com/%e0%b2%96%e0%b2%be%e0%b2%b8%e0%b2%97%e0%b2%bf-%e0%b2%ac%e0%b2%b8%e0%b3%8d-%e0%b2%a1%e0%b2%82%e0%b2%aa%e0%b2%b0%e0%b3%8d-%e0%b2%9f%e0%b3%8d%e0%b2%b0%e0%b2%95%e0%b3%8d%e0%b2%97%e0%b3%86-%e0%b2%a1/ Tue, 17 Dec 2024 12:01:27 +0000 https://www.goodnews24x7.com/?p=1182 ಗುಜರಾತ್ :- ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ…

The post ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ. appeared first on Good News 24x7.

]]>

ಗುಜರಾತ್ :- ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.

ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.
ಬಸ್ ಹಿಂದಿನಿಂದ ಡಂಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಬಲಭಾಗದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

The post ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ. appeared first on Good News 24x7.

]]>