HealthMinister Archives - Good News 24x7 https://www.goodnews24x7.com/tag/healthminister/ Kannada Mon, 07 Jul 2025 09:59:59 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg HealthMinister Archives - Good News 24x7 https://www.goodnews24x7.com/tag/healthminister/ 32 32 ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ; ಗುಂಡೂರಾವ್ ಮಾಹಿತಿ. https://www.goodnews24x7.com/corona-vaccine-does-not-cause-heart-attacks-gundurao-information/ Mon, 07 Jul 2025 09:59:59 +0000 https://www.goodnews24x7.com/?p=4950 ಬೆಂಗಳೂರು : ಹಾಸನ ಜಿಲ್ಲೆಯೂ ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಸಂಬಂಧ ಆರೋಗ್ಯ ಸಚಿವ ದಿನೇಶ್ ತಜ್ಞರ ಜತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ಎಂದು…

The post ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ; ಗುಂಡೂರಾವ್ ಮಾಹಿತಿ. appeared first on Good News 24x7.

]]>

ಬೆಂಗಳೂರು : ಹಾಸನ ಜಿಲ್ಲೆಯೂ ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಸಂಬಂಧ ಆರೋಗ್ಯ ಸಚಿವ ದಿನೇಶ್ ತಜ್ಞರ ಜತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ಎಂದು ಹೇಳಿದರು. ಮುಂದುವರೆದು, ವರದಿಯಲ್ಲಿ ಕರೋನಾದಿಂದ ಗುಣಮುಖರಾದವರಿಗೆ ಹೃದಯಾಘಾತವಾಗಿದೆ ಅಂತ ಇದೆ ಎಂದು ಹೇಳಿದರು.

ಕರೋನಾ ರೋಗದಿಂದ ಸ್ವಲ್ಪ ಮಟ್ಟಿಗೆ ಹೃದಯಾಘಾತ ಹೆಚ್ಚಾಗಿದೆ. ಕರೋನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುವ ಸಾಧ್ಯತೆ ಇದೆ. ಆದರೆ, ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ. ಹೃದಯಾಘಾತಕ್ಕೆ ಲಸಿಕೆ ಕಾರಣವಲ್ಲ. ಕರೋನಾ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ, ಎಂಆರ್ಎನ್ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಈ ವ್ಯಾಕ್ಸಿನ್ ಅನ್ನು ನಮ್ಮ ದೇಶದಲ್ಲಿ ಯಾರು ತೆಗೆದುಕೊಂಡಿಲ್ಲ ಎಂದು ತಿಳಸಿದ್ದಾರೆ.


ಹೃದಯಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡುವುದು ಕಡ್ಡಾಯ. ಹೃದಯಾಘಾತದ ಬಗ್ಗೆ ಪ್ರತ್ಯೇಕ ಪಠ್ಯ ಅಳವಡಿಕೆ ಮಾಡಲಾಗುವುದು. ಶಿಕ್ಷಣ ಇಲಾಖೆ ಮುಂದಿನ ವರ್ಷದಿಂದ ಪಠ್ಯ ಅಳವಡಿಕೆ ಮಾಡುತ್ತೆ ಎಂದು ಹೇಳಿದರು. ತಾಲೂಕು ಆಸ್ಪತ್ರೆಗಳಿಗೂ ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುತ್ತದೆ. ಸರ್ಕಾರಿ ನೌಕರರು, ಗುತ್ತಿಗೆ ನೌಕರರು ತಪಾಸಣೆ ಮಾಡಿಸಿಕೊಳ್ಳಬೇಕು. ಜನರ ಜೀವನಶೈಲಿ ಹೃದಯಘಾತಕ್ಕೆ ಕಾರಣವಾಗಿದೆ. ಶೇ 50 ಕ್ಕಿಂತ ಹೆಚ್ಚು ಧೂಮಪಾನಿಗಳಿಗೆ ಹೃದಯಘಾತವಾಗಿದೆ ಎಂದು ತಿಳಿಸಿದರು.


ಕರೋನಾಗಿಂತ ಮುಂಚೆ ಮತ್ತು ಕರೋನಾ ನಂತರ ಸಾಕಷ್ಟು ಬದಾಲಾವಣೆಯಾಗಿದೆ. ಒಬೆಸಿಟಿ, ಡಯಾಬಿಟಿಸ್ ಎಲ್ಲವೂ ಹೆಚ್ಚಾಗಿ ಕಂಡುಬಂದಿದೆ. ಈ ಕಾರಣದಿಂದ ಕರೋನಾ ರೋಗದ ಪರಿಣಾಮ ಸಾರ್ವಜನಿಕರ ಮೇಲೆ ಆಗಿದೆ. ಕರೋನಾ ಬಂದಾಗ ತೆಗೆದುಕೊಂಡ ಬೇರೆ ಬೇರೆ ಮೆಡಿಸನ್ನಿಂದ ಹೃದಯದ ಮೇಲೆ ಪರಿಣಾಮ ಬೀರಿದೆ. ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಜುಲೈ 10 ರಂದು ವರದಿ ಕೈಸೇರಲಿದೆ ಎಂದರು. ಸರ್ಕಾರಿ, ಗುತ್ತಿಗೆ ನೌಕರರು ಮತ್ತು ಖಾಸಗಿ ಉದ್ಯೋಗಿಗಳು ವರ್ಷಕ್ಕೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಈ ಬಗ್ಗೆ ನಾವು ಸೂಚನೆ ನೀಡುತ್ತಿದ್ದೇವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮತಷ್ಟು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಭರವಸೆ ನೀಡಿದರು.

The post ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ; ಗುಂಡೂರಾವ್ ಮಾಹಿತಿ. appeared first on Good News 24x7.

]]>
ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್. https://www.goodnews24x7.com/covid-subtype-not-dangerous-dinesh-gundu-rao/ Mon, 26 May 2025 06:42:29 +0000 https://www.goodnews24x7.com/?p=4081 ಬೆಂಗಳೂರು: ಸದ್ಯ ಹರಡುತ್ತಿರುವ ಕೋವಿಡ್ ಉಪತಳಿಯು ಅಷ್ಟೇನು ಅಪಾಯಕಾರಿಯಲ್ಲ. ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿ ಆಗಿಲ್ಲ.…

The post ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್. appeared first on Good News 24x7.

]]>

ಬೆಂಗಳೂರು: ಸದ್ಯ ಹರಡುತ್ತಿರುವ ಕೋವಿಡ್ ಉಪತಳಿಯು ಅಷ್ಟೇನು ಅಪಾಯಕಾರಿಯಲ್ಲ. ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿ ಆಗಿಲ್ಲ. ಯಾರಿಗೂ ಗಂಭೀರ ಸ್ವರೂಪದ ರೋಗ ಲಕ್ಷಣ ಕಂಡುಬಂದಿಲ್ಲ. ಮುಂದಿನ ಮೂರು, ನಾಲ್ಕು ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆತಂಕದ ವಾತಾವರಣ ಇಲ್ಲ, ಮೊದಲ ಮತ್ತು ಎರಡನೇ ಹಂತದ ಕೋವಿಡ್ ಪರಿಸ್ಥಿತಿ ಈಗಿಲ್ಲ ಎಂದು ಹೇಳಿದ್ದಾರೆ.

 

ಲಭ್ಯವಿರುವ ಟೆಸ್ಟಿಂಗ್ ಕಿಟ್ಸ್ಗಳು:


RAT = 2500
RNA extraction kits =130000
VTM= 200000
RTPCR kits = 5000 Procuring

#Bengaluru #Covid #DineshGunduRao #Health #Minister #HealthMinister #government #dangerous #Covid19 #pregnantwomen #pregnant #women #hospitals #Bengaluru #karnataka #mysore #goodnewskannada #symptoms #serious

ಶಾಲಾ, ಕಾಲೇಜುಗಳು ಆರಂಭವಾಗುತ್ತಿದ್ದು, ಯಾವ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಿ ತೀರ್ಮಾನಿಸುತ್ತೇವೆ. ಸದ್ಯ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ಟೆಸ್ಟಿಂಗ್ಗೆ ಸೂಚನೆ ನೀಡಲಾಗಿದೆ. ಟೆಸ್ಟಿಂಗ್ ಕಿಟ್ಗಳು ಎರಡು ದಿನದೊಳಗೆ ಪೂರೈಕೆಯಾಗಲಿದೆ. ಸಾರಿ, ಐಎಲ್ಐ ಪ್ರಕರಣಗಳು, ವಯೋವೃದ್ಧರು, ಗರ್ಭಿಣಿಯರಿಗೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ.


ಸೋಂಕಿನಿಂದ ನಿನ್ನೆ ಒಬ್ಬರು ಮೃತಪಟ್ಟಿರುವುದು ದೃಢವಾಗಿದೆ. ಅವರಿಗೆ 84 ವರ್ಷ ಆಗಿತ್ತು. ಒಂದು ವರ್ಷದಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ನಾನಾ ಆರೋಗ್ಯ ಸಮಸ್ಯೆ ಇತ್ತು. ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ಆಡಿಟ್ ನಡೆಸಲು ತಿಳಿಸಲಾಗಿದೆ ಎಂದರು.ಅಗತ್ಯ ಟೆಸ್ಟಿಂಗ್ ಕಿಟ್ ಲಭ್ಯವಿದೆ: ರಾಜ್ಯದಲ್ಲಿ ಅಗತ್ಯ ಕೋವಿಡ್-19 ಟೆಸ್ಟಿಂಗ್ ಕಿಟ್ಗಳ ಲಭ್ಯತೆಯಿದೆ. SARI ಪ್ರಕರಣಗಳಲ್ಲಿ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚಿಸಲಾಗಿದೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.


ಬೆಂಗಳೂರಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, NIV ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ತಿಂಗಳಿಗಾಗುವಷ್ಟು 5 ಸಾವಿರ RTPCR ಟೆಸ್ಟಿಂಗ್ ಕಿಟ್ಗಳನ್ನು ಖರೀದಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಸೂಕ್ತ ಆರೋಗ್ಯ ಸೇವೆ ಒದಗಿಸಲು ಸನ್ನದ್ಧವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

The post ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್. appeared first on Good News 24x7.

]]>
ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರ ಅಸಮಾಧಾನ. https://www.goodnews24x7.com/congress-leaders-express-displeasure-over-central-governments-ceasefire-agreement/ Tue, 13 May 2025 12:21:48 +0000 https://www.goodnews24x7.com/?p=3861 ಬೆಂಗಳೂರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ-…

The post ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರ ಅಸಮಾಧಾನ. appeared first on Good News 24x7.

]]>

ಬೆಂಗಳೂರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ- ಪಾಕ್ ನಡುವಿನ ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿರಿ ಎಂಬುದನ್ನ ಪ್ರಧಾನಿ ಮೋದಿ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.
ಉಗ್ರರನ್ನು ನಾಶ ಮಾಡುತ್ತೇವೆ ಎಂದು ಮೋದಿ ಅವರು ಹೇಳಿದ್ದರು. ಹೀಗಾಗಿ ದೊಡ್ಡ ತೀರ್ಮಾನ ತೆಗದುಕೊಳ್ಳುವ ನಿರೀಕ್ಷೆ ಇತ್ತು , ಆದರೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ. ಪ್ರಧಾನಿ ಮೋದಿ ರಾಜಕೀಯವಾಗಿ ಮಾತನಾಡುತ್ತಾರೆ, ಪಾಕಿಸ್ತಾನ ನಮ್ಮ ಮೇಲೂ ದಾಳಿ ಮಾಡಿದೆ. ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡರು ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

The post ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರ ಅಸಮಾಧಾನ. appeared first on Good News 24x7.

]]>