HombaleFilms Archives - Good News 24x7 https://www.goodnews24x7.com/tag/hombalefilms/ Kannada Fri, 31 Oct 2025 08:18:10 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg HombaleFilms Archives - Good News 24x7 https://www.goodnews24x7.com/tag/hombalefilms/ 32 32 ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ; ‘ಕಾಂತಾರ 1’ ಟಿಕೆಟ್ ದರ ಇಳಿಕೆ https://www.goodnews24x7.com/gift-for-kannada-rajyotsava-kantara-1-ticket-price-reduced/ Fri, 31 Oct 2025 08:18:10 +0000 https://www.goodnews24x7.com/?p=7931 Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಇದೀಗ ಸಿನಿಮಾದ ನಿರ್ಮಾಣ ಸಂಸ್ಥೆ ಹೊಂಬಾಳೆ, ಕನ್ನಡ…

The post ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ; ‘ಕಾಂತಾರ 1’ ಟಿಕೆಟ್ ದರ ಇಳಿಕೆ appeared first on Good News 24x7.

]]>

Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಇದೀಗ ಸಿನಿಮಾದ ನಿರ್ಮಾಣ ಸಂಸ್ಥೆ ಹೊಂಬಾಳೆ, ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ನೀಡಿದ್ದಾರೆ ಎನ್ನಲಾಗುತ್ತಿದೆ. ಅಸಲಿಗೆ ಅದು ಉಡುಗೊರೆಯಾ ಮಾರುಕಟ್ಟೆ ತಂತ್ರವಾ?

ಹೊಂಬಾಳೆ ಫಿಲಮ್ಸ್ (Hombale Films) ನಿರ್ಮಾಣ ಮಾಡಿ, ರಿಷಬ್ ಶೆಟ್ಟಿ ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದಿದೆ. ಭಾರತದಾದ್ಯಂತ ಸಿನಿಮಾ ಅತ್ಯುತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದ್ದು, ಆಂಧ್ರ, ತೆಲಂಗಾಣ ವಿಶೇಷವಾಗಿ ಉತ್ತರ ಭಾರತದ ಹಿಂದಿ ಪ್ರದೇಶದಲ್ಲಿ ಭರ್ಜರಿ ಜನಪ್ರೀತಿ ಗಳಿಸಿದೆ, ಗಲ್ಲಾಪೆಟ್ಟಿಗೆಯನ್ನೂ ಸಹ ತುಂಬಿಸಿಕೊಂಡಿದೆ. ಇದೀಗ ಸಿನಿಮಾದ ಇಂಗ್ಲೀಷ್ ಆವೃತ್ತಿ ಬಿಡುಗಡೆ ಆಗಲಿದ್ದು, ಇಂದಷ್ಟೆ ಸಿನಿಮಾದ ಸ್ಪ್ಯಾನಿಷ್ ಭಾಷೆಯ ಟ್ರೈಲರ್ ಸಹ ಬಿಡುಗಡೆ ಆಗಿದೆ. ಇಷ್ಟೆಲ್ಲದರ ಮಧ್ಯೆ, ಹೊಂಬಾಳೆಯು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟಿಕೆಟ್ ದರವನ್ನು ಇಳಿಕೆ ಮಾಡಿದ್ದು ಕನ್ನಡ ರಾಜ್ಯೋತ್ಸವಕ್ಕೆ ಕನ್ನಡಿಗರಿಗೆ ಉಡುಗೊರೆ ಎನ್ನಲಾಗುತ್ತಿದೆ. ಅಸಲಿಗೆ ಇದು ನಿಜಕ್ಕೂ ಉಡುಗೊರೆಯಾ? ಅಥವಾ ಮಾರುಕಟ್ಟೆ ತಂತ್ರವಾ?

ಭಾರತದಾದ್ಯಂತ ಅಬ್ಬರಿಸುತ್ತಿರುವ ಈ ಸಿನಿಮಾ ಕರ್ನಾಟಕ ಒಂದರಲ್ಲೇ 250 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. 2025ರ ಅತ್ಯಂತ ಯಶಸ್ವಿ ಸಿನಿಮಾ ಎನಿಸಿಕೊಂಡಿದೆ. ಇದೀಗ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಿನಿಮಾದ ಟಿಕೆಟ್ ದರಗಳನ್ನು ಕರ್ನಾಟಕದಲ್ಲಿ ಇಳಿಕೆ ಮಾಡಲಾಗಿದೆ. ನಾಳೆಯಿಂದ (ಅಕ್ಟೋಬರ್ 31) ‘ಕಾಂತಾರ ಚಾಪ್ಟರ್ 1’ ಸಿನಿಮಾದ ಟಿಕೆಟ್ ದರಗಳು ಕಡಿಮೆ ಆಗಲಿದ್ದು, ಸಿಂಗಲ್ ಸ್ಕ್ರೀನ್‌ಗಳಲ್ಲಿ (ಏಕಪರದೆ) ಕೇವಲ 99 ರೂಪಾಯಿಗೆ ಸಿನಿಮಾ ವೀಕ್ಷಿಸಬಹುದಾಗಿದೆ. ಇನ್ನು ರಾಜ್ಯದ ಯಾವುದೇ ಮಲ್ಟಿಪ್ಲೆಕ್ಸ್‌ಗಳಲ್ಲಿ ಕೇವಲ 150 ರೂಪಾಯಿಗಳಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ. ಅಂದಹಾಗೆ ರಾಜ್ಯ ಸರ್ಕಾರವು ಏಕರೂಪ ಟಿಕೆಟ್ ದರದ ಆದೇಶ ಹೊರಡಿಸಿದಾಗ ಆದೇಶಕ್ಕೆ ತಡೆ ತರುವಲ್ಲಿ ಹೊಂಬಾಳೆಯ ಪಾತ್ರ ಮಹತ್ವದ್ದು, ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೊಂಬಾಳೆ ನಿರ್ಮಾಣ ಸಂಸ್ಥೆ, ಸರ್ಕಾರದ ಆದೇಶದಿಂದ ಕಡಿಮೆ ಆಗಿದ್ದ ಟಿಕೆಟ್ ದರಗಳು ಮತ್ತೆ ಹೆಚ್ಚಾಗುವಂತೆ ಮಾಡಿದ ನಿರ್ಮಾಣ ಸಂಸ್ಥೆಗಳಲ್ಲಿ ಪ್ರಮುಖವಾದದ್ದಾಗಿತ್ತು ಎಂಬುದನ್ನು ಇಲ್ಲಿ ಮರೆಯುವಂತಿಲ್ಲ.

ಇದನ್ನು ಹೊಂಬಾಳೆ ಕಡೆಯಿಂದ ರಾಜ್ಯೋತ್ಸವಕ್ಕೆ ಉಡುಗೊರೆ ಎನ್ನಲಾಗುತ್ತಿದೆಯಾದರೂ, ಇದರ ಹಿಂದೆ ಮಾರುಕಟ್ಟೆ ತಂತ್ರವೂ ಇದೆ. ನಾಳೆ ಅಂದರೆ ಅಕ್ಟೋಬರ್ 31 ರಿಂದಲ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆರಂಭ ಮಾಡಲಿದೆ. ಅದಕ್ಕೆ ಸರಿಯಾಗಿ ಚಿತ್ರಮಂದಿರಗಳಲ್ಲಿಯೂ ಸಹ ಸಿನಿಮಾದ ಟಿಕೆಟ್ ದರವನ್ನು ಕಡಿಮೆ ಮಾಡಲಾಗಿದೆ. ಸಿನಿಮಾ ಒಟಿಟಿಗೆ ಬಂದಮೇಲೂ ಚಿತ್ರಮಂದಿರಗಳಿಗೆ ಜನರನ್ನು ಸೆಳೆಯಲೆಂದು ಹೀಗೊಂದು ಅದ್ಭುತ ಆಫರ್ ಅನ್ನು ಹೊಂಬಾಳೆ ನೀಡಿದೆ. ಸಿನಿಮಾ ಒಟಿಟಿಗೆ ಬಂದಮೇಲೆಯೂ ಸಹ ಜನ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಅಕ್ಟೋಬರ್ 2 ರಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಯ್ತು. ಈ ಸಿನಿಮಾ ಈ ವರೆಗೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 900 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಈ ವರ್ಷ ಭಾರತದ ಯಾವುದೇ ಭಾಷೆಯಲ್ಲಿ ಈ ವರೆಗೆ ಬಿಡುಗಡೆ ಆದ ಸಿನಿಮಾಗಳ ಪೈಕಿ ಅತ್ಯಂತ ಯಶಸ್ವಿ ಸಿನಿಮಾ ಇದೆನಿಸಿಕೊಂಡಿದೆ. 2022 ರಲ್ಲಿ ಬಿಡುಗಡೆ ಆದ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಅಂದರೆ ಮುಂದಿನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ರಿಷಬ್ ಶೆಟ್ಟಿ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ರುಕ್ಮಿಣಿ ವಸಂತ್ ನಾಯಕಿ. ಬಾಲಿವುಡ್​​ನಲ್ಲಿ ಮಿಂಚುತ್ತಿರುವ ಕನ್ನಡಿಗ ಗುಲ್ಷನ್ ದೇವಯ್ಯ, ಮಲಯಾಳಂ ನಟ ಜಯರಾಂ ಇನ್ನೂ ಕೆಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ

The post ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ; ‘ಕಾಂತಾರ 1’ ಟಿಕೆಟ್ ದರ ಇಳಿಕೆ appeared first on Good News 24x7.

]]>
‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ https://www.goodnews24x7.com/kantara-cap%e1%b9%adar-1era%e1%b8%8du-varaga%e1%b8%b7alli-visvadyanta-717-50-ko%e1%b9%adi-ru-kalek%e1%b9%a3an-kantarachapter1movieactorrishabshettyindianboxofficetamiltelugu/ Sun, 19 Oct 2025 10:09:28 +0000 https://www.goodnews24x7.com/?p=7778 ‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ…

The post ‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ appeared first on Good News 24x7.

]]>

‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ಕಲೆಕ್ಷನ್ ವರದಿ ಇಲ್ಲಿದೆ.

ನಟ ರಿಷಬ್ ಶೆಟ್ಟಿ (Rishab Shetty) ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಅತಿ ಬೇಡಿಕೆಯ ನಟನಾಗಿ, ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಗೆಲುವು. ಅಕ್ಟೋಬರ್ 2ರಂದು ಬಿಡುಗಡೆ ಆದ ಈ ಸಿನಿಮಾ ಇಂದಿಗೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಭಾಷೆಗಳಲ್ಲೂ ಅಬ್ಬರಿಸುತ್ತಿದೆ. 17 ದಿನಗಳು ಕಳೆದರೂ ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಉತ್ತಮವಾಗಿಯೇ ಕಲೆಕ್ಷನ್ (Kantara Chapter 1 Collection) ಆಗುತ್ತಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾದ ಗಳಿಕೆ 500 ಕೋಟಿ ರೂಪಾಯಿ ಮೀರಿದೆ.

ಈ ಬಗ್ಗೆ ಇಲ್ಲಿದೆ ವಿವರ Sacnilk ವರದಿ ಪ್ರಕಾರ ‘ಕಾಂತಾರ: ಚಾಪ್ಟರ್ 1’ ಸಿನಿಮಾ 17ನೇ ದಿನ ಭಾರತದ ಗಲ್ಲಾಪೆಟ್ಟಿಗೆಯಲ್ಲಿ 12.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಲ್ಲಿಗೆ, ಭಾರತದಲ್ಲಿ ಸಿನಿಮಾದ ಒಟ್ಟು ಕಲೆಕ್ಷನ್ 506 ಕೋಟಿ ರೂಪಾಯಿ ಆಗಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಯಲ್ಲಿ ಬಿಡುಗಡೆ ಆದ ಈ ಸಿನಿಮಾಗೆ ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಭಾರತದ ಆಚೆ ಕೂಡ ಹಲವು ದೇಶಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಉತ್ತಮವಾಗಿ ಪ್ರದರ್ಶನ ಕಂಡಿದೆ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯೇ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಎರಡು ವಾರಗಳಲ್ಲಿ ಈ ಸಿನಿಮಾಗೆ ವಿಶಾದ್ಯಂತ 717.50 ಕೋಟಿ ರೂಪಾಯಿ ಆಗಿದೆ. ಇನ್ನೂ ಹೆಚ್ಚಿನ ಕಲೆಕ್ಷನ್ ಮಾಡುವ ಸಾಧ್ಯತೆ ದಟ್ಟವಾಗಿದೆ.

ಭಾನುವಾರ (ಅಕ್ಟೋಬರ್ 19) ಕೂಡ ಅನೇಕ ಕಡೆಗಳಲ್ಲಿ ಬುಕಿಂಗ್ ಚೆನ್ನಾಗಿದೆ. ಅಲ್ಲದೇ, ದೀಪಾವಳಿ ಹಬ್ಬದ ರಜೆ ಬಂದಿರುವುದರಿಂದ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರ ಸಂಖ್ಯೆ ಹೆಚ್ಚುವ ನಿರೀಕ್ಷೆ ಜಾಸ್ತಿ ಇದೆ. ಈ ಎಲ್ಲದರ ಪರಿಣಾಮವಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇನ್ನೂ ಉತ್ತಮವಾಗಿ ಕಲೆಕ್ಷನ್ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಗೆ ಭರ್ಜರಿ ಲಾಭ ಆಗಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಾಗಿದೆ. ನಟಿ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಫೇಮಸ್ ಆಗಿದ್ದಾರೆ. ಪರಭಾಷೆ ಮಂದಿ ಮತ್ತೆ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ರಿಷಬ್ ಶೆಟ್ಟಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ.

The post ‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ appeared first on Good News 24x7.

]]>
ಬಾಕ್ಸ್ ​​ಆಫೀಸ್​​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’ https://www.goodnews24x7.com/mahavatar-narasimha-creates-new-record-at-the-box-office/ Wed, 27 Aug 2025 09:20:35 +0000 https://www.goodnews24x7.com/?p=6793 ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿ, ದೇಶದಾದ್ಯಂತ ವಿತರಣೆ ಸಹ ಮಾಡಿರುವ ‘ಮಹಾವತಾರ್ ನರಸಿಂಹ’ ಅನಿಮೇಷನ್ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆ ಬರೆದಿದೆ. ಜುಲೈ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ‘ಕೂಲಿ’, ‘ವಾರ್ 2‘, ‘ಸು ಫ್ರಂ ಸೋ’,…

The post ಬಾಕ್ಸ್ ​​ಆಫೀಸ್​​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’ appeared first on Good News 24x7.

]]>

ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿ, ದೇಶದಾದ್ಯಂತ ವಿತರಣೆ ಸಹ ಮಾಡಿರುವ ‘ಮಹಾವತಾರ್ ನರಸಿಂಹ’ ಅನಿಮೇಷನ್ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆ ಬರೆದಿದೆ. ಜುಲೈ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ‘ಕೂಲಿ’, ‘ವಾರ್ 2‘, ‘ಸು ಫ್ರಂ ಸೋ’, ‘ಕಿಂಗ್ಡಮ್’ ಇನ್ನೂ ಕೆಲ ಸಿನಿಮಾಗಳ ಎದುರು ಗಟ್ಟಿಯಾಗಿ ನಿಂತು ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಗೆಲುವನ್ನು ತನ್ನದಾಗಿಸಿಕೊಂಡಿದೆ.
‘ಕೂಲಿ’, ‘ವಾರ್ 2’ ಅದಕ್ಕೂ ಮುಂಚೆ ‘ಕಿಂಗ್ಡಮ್’, ‘ಸು ಫ್ರಂ ಸೋ’ ಸಿನಿಮಾಗಳ ಅಬ್ಬರಗಳ ಎದುರು ಅಲುಗದೆ ನಿಂತ ‘ಮಹಾವತಾರ್ ನರಸಿಂಹ’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​​ನಲ್ಲಿ ಹೊಸ ಮೈಲಿಗಲ್ಲಿ ಸ್ಥಾಪನೆ ಮಾಡಿದೆ. ಹಿಂದೆಂದೂ ಯಾವ ಅನಿಮೇಷನ್ ಸಿನಿಮಾ ಸಹ ಸೃಷ್ಟಿಸದ ದಾಖಲೆಯೊಂದನ್ನು ಸೃಷ್ಟಿಸಿದೆ ಈ ಸಿನಿಮಾ.

‘ಮಹಾವತಾರ್ ನರಸಿಂಹ’ ಸಿನಿಮಾ ಜುಲೈ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಹೊಂಬಾಳೆ ಫಿಲಮ್ಸ್​ನವರ ಬೆಂಬಲದಿಂದಾಗಿ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ದೇಶದೆಲ್ಲೆಡೆ ಪ್ರಮುಖ ನಗರಗಳಲ್ಲಿ ಬಿಡುಗಡೆ ಆಯ್ತು. ಆರಂಭದಲ್ಲಿ ಹೆಚ್ಚು ಸದ್ದು ಮಾಡದಿದ್ದರೂ ಕೇವಲ ಒಂದೇ ವಾರದಲ್ಲಿ ತನ್ನ ಕಂಟೆಂಟ್ ಹಾಗೂ ಹೊಂಬಾಳೆಯು ಶಕ್ತಿಯುತ ಮಾರ್ಕೆಟಿಂಗ್​​ನಿಂದಾಗಿ ಪ್ರೇಕ್ಷಕರನ್ನು ಸೆಳೆಯಲು ಆರಂಭಿಸಿತು.

 

ಇದೀಗ ಸಿನಿಮಾ ಬಿಡುಗಡೆ ಆಗಿ 30 ದಿನಗಳ ಬಳಿಕ ‘ಮಹಾವತಾರ್ ನರಸಿಂಹ’ ಸಿನಿಮಾ 300 ಕೋಟಿ ರೂಪಾಯಿಗೆ ಹೆಚ್ಚಿನ ಗಳಿಕೆ ಮಾಡಿದೆ. ಭಾರತದ ಇನ್ಯಾವುದೇ ಅನಿಮೇಷನ್ ಸಿನಿಮಾ ಸಹ ಇಷ್ಟು ದೊಡ್ಡ ಮೊತ್ತದ ಹಣವನ್ನು ಈ ವರೆಗೆ ಗಳಿಕೆ ಮಾಡಿಲ್ಲ. ಭಾರತದ ಅನಿಮೇಷನ್ ಸಿನಿಮಾಗಳು ಮಾತ್ರವೇ ಅಲ್ಲದೆ. ವಿದೇಶದ ಅನಿಮೇಷನ್ ಸಿನಿಮಾಗಳು ಸಹ ಭಾರತದಲ್ಲಿ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿಲ್ಲ. ಕಳೆದೆರಡು ವರ್ಷಗಳಲ್ಲಿ ಬಿಡುಗಡೆ ಆದ ‘ಸ್ಪೈಡರ್​​ಮ್ಯಾನ್’, ‘ಡಾಕ್ಟರ್ ಸ್ಟ್ರೇಂಜ್’, ‘ಥಾರ್’, ‘ಅವತಾರ್’ ಸಿನಿಮಾಗಳೂ ಸಹ ಇಷ್ಟು ದೊಡ್ಡ ಮೊತ್ತದ ಹಣವನ್ನು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿಲ್ಲ ಎಂಬುದು ಗಮನಿಸಬೇಕಾದ ಅಂಶ.

‘ಮಹಾವತಾರ್ ನರಸಿಂಹ’ ಸಿನಿಮಾನಲ್ಲಿ ವಿಷ್ಣುವಿನ ನರಸಿಂಹ ಅವತಾರದ ಕತೆಯನ್ನು ಅನಿಮೇಷನ್ ಮೂಲಕ ಹೇಳಲಾಗಿದೆ. ‘ಮಹಾವತಾರ: ನರಸಿಂಹ’ ಸಿನಿಮಾವನ್ನು ಅಶ್ವಿಕ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ. ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ನಿರ್ಮಾಣ ಮಾಡಿದ್ದಾರೆ. ಕಡಿಮೆ ಬಜೆಟ್​ ಕಾರಣದಿಂದಾಗಿ ಈ ಸಿನಿಮಾ ನಿರ್ಮಾಣ ಮಾಡಲು ಅಶ್ವಿಕ್ ಅವರಿಗೆ ಬಹಳ ಸಮಯ ಹಿಡಿಯಿತಂತೆ. ಆದರೆ ಈ ಸಿನಿಮಾ ಹಣ ಮಾಡಿರುವ ಕಾರಣ ಮುಂದಿನ ಸಿನಿಮಾಗಳನ್ನು ಅತ್ಯುತ್ತಮ ಗುಣಮಟ್ಟದಲ್ಲಿ ಪ್ರೇಕ್ಷಕರ ಮುಂದೆ ತರುವುದಾಗಿ ಅಶ್ವಿಕ್ ಹೇಳಿದ್ದಾರೆ.

“ಮಹಾವತಾರ್” ಸಿನಿಮ್ಯಾಟಿಕ್ ಯೂನಿವರ್ಸ್​ ನಿರ್ಮಿಸಲು ಚಿತ್ರತಂಡ ಮುಂದಾಗಿದ್ದು, ಭಗವಾನ್ ವಿಷ್ಣುವಿನ ದಶಾವತಾರಗಳ ಆಧಾರದ ಮೇಲೆ ಬರಲಿರುವ ಸಿನಿಮಾ ಆಗಿರಲಿದೆ. ಮುಂದಿನ ಹತ್ತು ವರ್ಷಗಳಲ್ಲಿ ‘ಮಹಾವತಾರ್’ ಯೂನಿವರ್ಸ್​ನ ಏಳು ಸಿನಿಮಾಗಳು ತೆರೆಗೆ ಬರಲಿದೆ.

The post ಬಾಕ್ಸ್ ​​ಆಫೀಸ್​​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’ appeared first on Good News 24x7.

]]>