#Hotel owners Archives - Good News 24x7 https://www.goodnews24x7.com/tag/hotel-owners/ Kannada Thu, 12 Mar 2026 06:44:44 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #Hotel owners Archives - Good News 24x7 https://www.goodnews24x7.com/tag/hotel-owners/ 32 32 ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ! https://www.goodnews24x7.com/lpg-cylinder-shortagelpg-cylinder-shortage/ Thu, 12 Mar 2026 06:44:32 +0000 https://www.goodnews24x7.com/?p=8866   ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್​ಗಳು ಬ್ಲ್ಯಾಕ್​​ ಮಾರ್ಕೆಟ್​​ನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೂ…

The post ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ! appeared first on Good News 24x7.

]]>

 

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್​ಗಳು ಬ್ಲ್ಯಾಕ್​​ ಮಾರ್ಕೆಟ್​​ನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೂ ಅವುಗಳ ಲಭ್ಯತೆಯೂ ಕಷ್ಟಸಾಧ್ಯವಾಗಿದೆ. ಇದರಿಂದ ಹಲವು ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ತಲುಪಿವೆ ಅಥವಾ ತಮ್ಮ ಮೆನುವಿನ ಐಟಂಗಳನ್ನು ಗಣನೀಯವಾಗಿ ಕಡಿಮೆ ಮಾಡಿವೆ.

ಇದರಿಂದಾಗಿ ಹೋಟೆಲ್‌ಗಳನ್ನು ಅವಲಂಬಿಸಿರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಆಹಾರದ ಕೊರತೆ ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯ ನಡುವೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ನಾಗರಿಕರಿಗೆ ಬುಕಿಂಗ್ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಸಿಲಿಂಡರ್​ಗಳನ್ನು ಮನೆಗಳಿಗೆ ವಿತರಿಸಲಾಗುವುದು. ಅಲ್ಲದೆ, ಎಲ್‌ಪಿಜಿ ಸಿಲಿಂಡರ್ ಉತ್ಪಾದನೆಯನ್ನು ಶೇಕಡಾ 25ರಷ್ಟು ಹೆಚ್ಚಿಸಲಾಗಿದೆ ಮತ್ತು ಹೊಸ ಮೂಲಗಳಿಂದ ಎಲ್‌ಎನ್‌ಜಿ ಸರಕುಗಳನ್ನು ಖರೀದಿಸಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

The post ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ! appeared first on Good News 24x7.

]]>