ICU Archives - Good News 24x7 https://www.goodnews24x7.com/tag/icu/ Kannada Sat, 22 Nov 2025 11:47:39 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg ICU Archives - Good News 24x7 https://www.goodnews24x7.com/tag/icu/ 32 32 ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ! https://www.goodnews24x7.com/bride-in-accident-groom-tied-the-knot-in-icu/ Sat, 22 Nov 2025 11:47:39 +0000 https://www.goodnews24x7.com/?p=8242 ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ…

The post ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ! appeared first on Good News 24x7.

]]>

ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

https://www.facebook.com/reel/3798106020489452

ಆಸ್ಪತ್ರೆಗೆ ಬಂದ ಶರೋನ್ ಹಾಗೂ ಅವನಿ ಕುಟುಂಬಸ್ಥರು ಪೂರ್ವ ನಿಗದಿಯಾಗಿದ್ದಂತೆ ಶುಕ್ರವಾರ ಮಧ್ಯಾಹ್ನ 12:15 ರಿಂದ 12:30ರ ನಡುವೆ ಮದುವೆ ನೆರವೇರಿಸಲು ಅವಕಾಶ ಕಲ್ಪಿಸುವಂತೆ ಆಸ್ಪತ್ರೆಯವರಲ್ಲಿ ಮನವಿ ಮಾಡಿದ್ದರು. ಅದರಂತೆ ಆಸ್ಪತ್ರೆಯ ಐಸಿಯುನಲ್ಲೇ ಶರೋನ್ ಅವನಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಆಸ್ಪತ್ರೆಯಲ್ಲಿಯೇ ಸಮಾರಂಭ ನಡೆಸಬೇಕೆಂದು ವರನ ಕುಟುಂಬ ಮನವಿ ಮೇರೆಗೆ ಇಲ್ಲಿಯೇ ಮದುವೆ ನಡೆಸಿದ್ದೇವೆ ಎಂದು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇಂದು (ಶನಿವಾರ) ಅವನಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸುಧೀಶ್ ಕರುಣಾಕರನ್ ತಿಳಿಸಿದ್ದಾರೆ.

The post ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ! appeared first on Good News 24x7.

]]>
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. https://www.goodnews24x7.com/former-prime-minister-h-d-deve-gowdas-health-improves/ Fri, 10 Oct 2025 13:03:15 +0000 https://www.goodnews24x7.com/?p=7685 ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್…

The post ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. appeared first on Good News 24x7.

]]>

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ.

ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

 

 

 

 

 

 

 

ದೇವೇಗೌಡರನ್ನು ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೋ. ಕೆ.ಎಸ್ ರಂಗಪ್ಪ ಭೇಟಿಯನ್ನ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ

ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್

 

 

 

 

 

 

ಮೊದಲು ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿತ್ತು. ಖ್ಯಾತ ವೈದ್ಯ ಡಾ. ಸುದರ್ಶನ್ ಬಲ್ಲಾಳ್ ನೇತ್ವತ್ವದಲ್ಲಿ ಚಿಕಿತ್ಸೆ ನಡೆಯುತ್ತಿತ್ತು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಹೀಗಾಗಿ ಬಳಿಕ ಅವರನ್ನು ನಿನ್ನೆ ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು.

ಮಾಜಿ ಪ್ರಧಾನಮಂತ್ರಿಗಳು ಹಾಗೂ ವರಿಷ್ಠರಾದ ಶ್ರೀ ಹೆಚ್‌.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

The post ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. appeared first on Good News 24x7.

]]>