Indian armed force Archives - Good News 24x7 https://www.goodnews24x7.com/tag/indian-armed-force/ Kannada Sat, 10 May 2025 12:20:32 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Indian armed force Archives - Good News 24x7 https://www.goodnews24x7.com/tag/indian-armed-force/ 32 32 ಮಕ್ಕಳಿಗೆ ‘ಸಿಂಧೂರ’ ಎಂದು ಹೆಸರಿಡಲು ಪೋಷಕರ ಪೈಪೋಟಿ…. https://www.goodnews24x7.com/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b8%e0%b2%bf%e0%b2%82%e0%b2%a7%e0%b3%82%e0%b2%b0-%e0%b2%8e%e0%b2%82%e0%b2%a6%e0%b3%81-%e0%b2%b9%e0%b3%86%e0%b2%b8/ Sat, 10 May 2025 12:20:32 +0000 https://www.goodnews24x7.com/?p=3816 ಮೇ 7 ರಂದು ಜನಿಸಿದ ಮಕ್ಕಳಿಗೆ ‘ಸಿಂಧೂರ’, ‘ಸಿಂಧೂರಿ’, ‘ಸಿಂಧೂ’ ಎಂದು ಹೆಸರಿಡಲು ದೇಶದ ವಿವಿಧೆಡೆ ಪೋಷಕರು ಪೈಪೋಟಿಗೆ ಬಿದ್ದಿದ್ದಾರೆ.ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತದ ಸಶಸ್ತ್ರ ಪಡೆಗಳು ಮೇ 7ರಂದು ನಡೆಸಿದ್ದ ಕ್ಷಿಪಣಿ ದಾಳಿಗೆ…

The post ಮಕ್ಕಳಿಗೆ ‘ಸಿಂಧೂರ’ ಎಂದು ಹೆಸರಿಡಲು ಪೋಷಕರ ಪೈಪೋಟಿ…. appeared first on Good News 24x7.

]]>

ಮೇ 7 ರಂದು ಜನಿಸಿದ ಮಕ್ಕಳಿಗೆ ‘ಸಿಂಧೂರ’, ‘ಸಿಂಧೂರಿ’, ‘ಸಿಂಧೂ’ ಎಂದು ಹೆಸರಿಡಲು ದೇಶದ ವಿವಿಧೆಡೆ ಪೋಷಕರು ಪೈಪೋಟಿಗೆ ಬಿದ್ದಿದ್ದಾರೆ.ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತದ ಸಶಸ್ತ್ರ ಪಡೆಗಳು ಮೇ 7ರಂದು ನಡೆಸಿದ್ದ ಕ್ಷಿಪಣಿ ದಾಳಿಗೆ ‘ಆಪರೇ ಷನ್ ಸಿಂಧೂರ್’ ಎಂದು ಹೆಸರಿಡಲಾಗಿತ್ತು. ಹೀಗಾಗಿ ಮೇ 7ರಂದು ಜನಿಸಿದ ಮಕ್ಕಳಿಗೆ ಇದಕ್ಕೆ ಸಾಮ್ಯವಿರುವ ಹೆಸರನ್ನಿ ಡಲು ಪೋಷಕರು ಮುಗಿಬಿದ್ದಿದ್ದಾರೆ.ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಕಾಂಟಿ ನಿವಾಸಿ ಸುಷ್ಮತಾ ದೇವಿ ಅವರು ಮೇ 7ರಂದು ಜನಿಸಿದ ತಮ್ಮ ಮೊಮ್ಮಗ ತಮ್ಮ ಮೊಮ್ಮಗ ನಿಗೆ ‘ಸಿಂಧೂರ’ ಎಂದು ಹೆಸರಿಟ್ಟಿದ್ದಾರೆ. ಮೊಮ್ಮಗ ಬೆಳೆದು ದೊಡ್ಡವನಾಗುತ್ತಿದ್ದಂತೆ ತನ್ನ ಹೆಸರಿನ ಹಿನ್ನೆಲೆ ತಿಳಿದುಕೊಳ್ಳುತ್ತಾನೆ ಎಂದು ಹೇಳಿದ್ದಾರೆ.

ಪಾಕಿಸ್ತಾನದಲ್ಲಿನ ಭಯೋತ್ಪಾದ ಕರ ನೆಲೆಗಳನ್ನು ಭಾರತ ನಾಶಪಡಿಸಲು ‘ಸಿಂಧೂರ್’ ಕಾರ್ಯಾಚರಣೆ ನಡೆಸಿದ ದಿನದಂದು ತಾನು ಹುಟ್ಟಿದ್ದು ಎಂಬುದನ್ನು ತಿಳಿದುಕೊಳ್ಳುವ ಮೂಲಕ, ತನ್ನ ಹೆಸರಿನ ಮಹತ್ವವನ್ನು ಅರಿಯುತ್ತಾನೆ. ನನ್ನ ಮೊಮ್ಮಗ ವಿದ್ಯಾಭ್ಯಾಸ ಮುಗಿಸಿದ ಬಳಿಕ ಸಮವಸ್ತ್ರ ಧರಿಸಿ ದೇಶಕ್ಕೆ ಸೇವೆ ಸಲ್ಲಿಸ ಬೇಕು ಎಂದು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

The post ಮಕ್ಕಳಿಗೆ ‘ಸಿಂಧೂರ’ ಎಂದು ಹೆಸರಿಡಲು ಪೋಷಕರ ಪೈಪೋಟಿ…. appeared first on Good News 24x7.

]]>