Jofra Archer Archives - Good News 24x7 https://www.goodnews24x7.com/tag/jofra-archer/ Kannada Thu, 26 Jun 2025 12:35:35 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Jofra Archer Archives - Good News 24x7 https://www.goodnews24x7.com/tag/jofra-archer/ 32 32 ಡೆಡ್ಲಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದಾರೆ…. https://www.goodnews24x7.com/%e0%b2%a1%e0%b3%86%e0%b2%a1%e0%b3%8d%e0%b2%b2%e0%b2%bf-%e0%b2%9c%e0%b3%8b%e0%b2%ab%e0%b3%8d%e0%b2%b0%e0%b2%be-%e0%b2%86%e0%b2%b0%e0%b3%8d%e0%b2%9a%e0%b2%b0%e0%b3%8d-4-%e0%b2%b5%e0%b2%b0%e0%b3%8d/ Thu, 26 Jun 2025 12:35:35 +0000 https://www.goodnews24x7.com/?p=4694 ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್‌ ಸ್ಟೇಡಿಯಂ…

The post ಡೆಡ್ಲಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದಾರೆ…. appeared first on Good News 24x7.

]]>

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್‌ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಜೋಫ್ರಾ ಆರ್ಚರ್ ಫಸ್ಟ್ ಕ್ಲಾಸ್ ಕ್ರಿಕೆಟ್​ಗೆ ಮತ್ತೆ ಮರಳಿದ್ದಾರೆ. ಅದು ಕೂಡ ಬರೋಬ್ಬರಿ 4 ವರ್ಷಗಳ ಬಳಿಕ. ಫಿಟ್​ನೆಸ್ ಸಮಸ್ಯೆಯ ಕಾರಣ ವರ್ಷಗಳ ಕಾಲ ಇಂಗ್ಲೆಂಡ್ ತಂಡದಿಂದ ಹೊರಗುಳಿದಿದ್ದ ಆರ್ಚರ್ ಇತ್ತೀಚೆಗಷ್ಟೇ ಸೀಮಿತ ಓವರ್​ಗಳ ಸರಣಿಗಳಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ದೀರ್ಘಾವಧಿಯ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದೀಗ ವರ್ಷಗಳ ಬಳಿಕ ಆರ್ಚರ್ ರೆಡ್ ಬಾಲ್​ ಕ್ರಿಕೆಟ್​ಗೆ ಮರಳಿದ್ದಾರೆ.

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​ಶಿಪ್ ಟೆಸ್ಟ್ ಟೂರ್ನಿಯಲ್ಲಿ ಜೋಫ್ರಾ ಆರ್ಚರ್ ಸಸೆಕ್ಸ್ ತಂಡದ ಪರ ಕಣಕ್ಕಿಳಿದಿದ್ದಾರೆ. ಚೆಸ್ಟರ್-ಲೆ-ಸ್ಟ್ರೀಟ್​ನ ರಿವರ್‌ಸೈಡ್ ಮೈದಾನದಲ್ಲಿ ನಡೆದ ಡರ್ಹ್ಯಾಮ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಆರ್ಚರ್ ಮೊದಲ ಇನಿಂಗ್ಸ್​ನಲ್ಲಿ 18 ಓವರ್​ಗಳನ್ನು ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಕೇವಲ 32 ರನ್ ನೀಡಿ ಒಂದು ವಿಕೆಟ್ ಪಡೆದಿದ್ದಾರೆ. ಈ ಮೂಲಕ ಜೋಫ್ರಾ ಆರ್ಚರ್ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿದ್ದಾರೆ.ಇತ್ತ ಕೌಂಟಿ ಕ್ರಿಕೆಟ್​ನಲ್ಲಿ ಆರ್ಚರ್ 18 ಓವರ್​ಗಳನ್ನು ಎಸೆಯುಲು ಯಶಸ್ವಿಯಾಗಿರುವ ಕಾರಣ ಅವರನ್ನು ಭಾರತದ ವಿರುದ್ಧದ ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಮರಳುವ ಸಲುವಾಗಿಯೇ ಆರ್ಚರ್ ಮತ್ತೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕಣಕ್ಕಿಳಿದಿದ್ದಾರೆ. ಅದರಲ್ಲೂ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯ ಮುಗಿದರೂ ಇನ್ನೂ 4 ಮ್ಯಾಚ್​ಗಳು ಬಾಕಿಯಿವೆ. ಹೀಗಾಗಿ ಈ ಸರಣಿಯ ಮೂಲಕವೇ ಕಂಬ್ಯಾಕ್ ಮಾಡಲು ಜೋಫ್ರಾ ಆರ್ಚರ್ ಪ್ಲ್ಯಾನ್ ರೂಪಿಸಿದ್ದಾರೆ. ಅದರಂತೆ ಭಾರತದ ವಿರುದ್ಧದ ಎರಡನೇ ಅಥವಾ ಮೂರನೇ ಟೆಸ್ಟ್ ಪಂದ್ಯದ ವೇಳೆ ಜೋಫ್ರಾ ಆರ್ಚರ್ ಇಂಗ್ಲೆಂಡ್ ಟೆಸ್ಟ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಜೋಫ್ರಾ ಆರ್ಚರ್ ಇಂಗ್ಲೆಂಡ್ ತಂಡವನ್ನು ಸೇರಿಕೊಂಡರೆ ಆಂಗ್ಲರ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ. ಅದರಲ್ಲೂ ಮಾರಕ ಬೌನ್ಸರ್​ಗೆ ಹೆಸರುವಾಸಿಯಾಗಿರುವ ಆರ್ಚರ್ ಎದುರಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಜೋಫ್ರಾ ಎಂಟ್ರಿಗೂ ಮುನ್ನ ಟೀಮ್ ಇಂಡಿಯಾ ಬ್ಯಾಟರ್​ಗಳು ಘಾತಕ ಎಸೆತಗಳನ್ನು ಎದುರಿಸಲು ಸಜ್ಜಾಬೇಕಿರುವುದು ಅನಿವಾರ್ಯ.

The post ಡೆಡ್ಲಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದಾರೆ…. appeared first on Good News 24x7.

]]>