Judge Archives - Good News 24x7 https://www.goodnews24x7.com/tag/judge/ Kannada Sat, 03 May 2025 11:07:44 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Judge Archives - Good News 24x7 https://www.goodnews24x7.com/tag/judge/ 32 32 ಸಿಎಂ ವಿರುದ್ಧದ ದೂರು ವಜಾಗೊಳಿಸಿದ ವಿಶೇಷ ನ್ಯಾಯಾಲಯ.! https://www.goodnews24x7.com/special-court-dismisses-complaint-against-cm/ Sat, 03 May 2025 11:07:44 +0000 https://www.goodnews24x7.com/?p=3579 ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೋಟ್ಯಂತರ ರೂಪಾಯಿ ಜಾಹೀರಾತು ತೆರಿಗೆ ವಸೂಲಿ ಮಾಡುವ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೌನವಹಿಸಿದೆ ಎಂದು ಆರೋಪಿಸಿ ಮಾಜಿ ಕಾರ್ಪೊರೇಟರ್ ಸಲ್ಲಿಸಿದ್ದ ಖಾಸಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ ಜಾಹೀರಾತುಗಳು ಮುಖ್ಯಮಂತ್ರಿ…

The post ಸಿಎಂ ವಿರುದ್ಧದ ದೂರು ವಜಾಗೊಳಿಸಿದ ವಿಶೇಷ ನ್ಯಾಯಾಲಯ.! appeared first on Good News 24x7.

]]>

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೋಟ್ಯಂತರ ರೂಪಾಯಿ ಜಾಹೀರಾತು ತೆರಿಗೆ ವಸೂಲಿ ಮಾಡುವ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೌನವಹಿಸಿದೆ ಎಂದು ಆರೋಪಿಸಿ ಮಾಜಿ ಕಾರ್ಪೊರೇಟರ್ ಸಲ್ಲಿಸಿದ್ದ ಖಾಸಗಿ ದೂರಿನಲ್ಲಿ ಆರೋಪಿಸಲಾಗಿದೆ.

ಈ ಜಾಹೀರಾತುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2013-18ರ ಅಧಿಕಾರಾವಧಿಗೆ ಸಂಬಂಧಿಸಿವೆ. ಸಿದ್ದರಾಮಯ್ಯ ಮತ್ತು ಆಗಿನ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಡಿಐಪಿಆರ್ನ ಆರೋಪಿ ಅಧಿಕಾರಿಗಳಿಗೆ ಮೌನವಾಗಿರಲು ಲಂಚ ನೀಡಿರಬಹುದು ಅಥವಾ ಕಾನೂನುಬಾಹಿರ ಲಾಭ ನೀಡಿರಬಹುದು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ವಿಶೇಷ ನ್ಯಾಯಾಲಯವು ಈ ದೂರರ್ಜಿಯನ್ನು ವಜಾಗೊಳಿಸಿದೆ.

ರಾಜ್ಯದ ಮಾಜಿ ಮತ್ತು ಹಾಲಿ ಸಂಸದರು / ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್, ಊಹೆಗಳ ಮೇಲೆ ಆರೋಪಗಳನ್ನು ಹೊರಿಸಲಾಗಿದೆ. ಇದು ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಆಧಾರವಾಗುವುದಿಲ್ಲ ಎಂದು ಹೇಳಿದರು. ಅಲ್ಲದೆ, ಆರೋಪಿ ಸಂಖ್ಯೆ 1 ರಿಂದ 5 ರ ವಿರುದ್ಧ ಮುಂದುವರಿಯಲು ಯಾವುದೇ ಆಧಾರಗಳಿಲ್ಲ ಎಂದು ಹೇಳಿ ದೂರನ್ನು ವಜಾಗೊಳಿಸಿದರು.ಆರೋಪಿಗಳಾದ ಸಿದ್ದರಾಮಯ್ಯ, ಜಾರ್ಜ್, ಆಗಿನ ಡಿಐಪಿಆರ್ ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮೀನಾರಾಯಣ್, ಮಣಿವಣ್ಣನ್ ಪಿ ಮತ್ತು ಆಗಿನ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಲೋಕಾಯುಕ್ತ ಪೊಲೀಸರಿಂದ ಸೂಕ್ತ ತನಿಖೆಗೆ ಒಪ್ಪಿಸುವಂತೆ ಕೋರಿ ಎನ್.ಆರ್.ರಮೇಶ್ ಅವರು 2025ರಲ್ಲಿ ದೂರು ದಾಖಲಿಸಿದ್ದರು.

2015 ರಿಂದ 2017 ರವರೆಗೆ ಅನುಮತಿ ಪಡೆಯದೆ ಮತ್ತು ಶುಲ್ಕವನ್ನು ಪಾವತಿಸದೆ 439 ಬಸ್ ತಂಗುದಾಣಗಳಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸುವ ಮೂಲಕ ಬಿಬಿಎಂಪಿಗೆ 68.14 ಕೋಟಿ ರೂ.ಗಳ ನಷ್ಟವನ್ನುಂಟು ಮಾಡಲಾಗಿದೆ ಎಂದು ಆರೋಪಿಸಿ ರಮೇಶ್ ಅವರು ಜುಲೈ 29, 2024 ರಂದು ಲೋಕಾಯುಕ್ತರು ತಮ್ಮ ದೂರನ್ನು ಮುಕ್ತಾಯಗೊಳಿಸಿದ ನಂತರ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.

 

The post ಸಿಎಂ ವಿರುದ್ಧದ ದೂರು ವಜಾಗೊಳಿಸಿದ ವಿಶೇಷ ನ್ಯಾಯಾಲಯ.! appeared first on Good News 24x7.

]]>
ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್. https://www.goodnews24x7.com/court-gives-another-shock-to-prajwal-revanna/ Tue, 22 Apr 2025 11:53:47 +0000 https://www.goodnews24x7.com/?p=3357 ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ.…

The post ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್. appeared first on Good News 24x7.

]]>

ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಕ್ರೈಮ್ ನಂಬರ್ 20ರಲ್ಲಿ ಪ್ರಜ್ವಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ.

ಕೆ.ಆರ್ ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸಹ ಈಗಾಗಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದೇ ವೇಳೆ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದ್ರು, ಆರೋಪ ಓದಿ ಹೇಳುವಾಗ ನ್ಯಾಯಾಧೀಶರ ಮುಂದೆಯೇ ಕೈ ಮುಗಿದು ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದರು. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳು ಹೈಕೋರ್ಟ್ನಲ್ಲಿ ವಜಾಗೊಂಡಿವೆ. ಅಲ್ಲದೇ ಸುಪ್ರೀಂಕೋರ್ಟ್ನಲ್ಲೂ ಸಹ ವಜಾಗೊಂಡಿತ್ತು. ಸದ್ಯ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು. ಈ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದೂರು ದಾಖಲಿಸಿದರು. ಬಳಿಕ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ತಂಡ ರಚಿಸಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದರು. ಆದರೆ, ಎಸ್ಐಟಿ ಅಧಿಕಾರಿಗಳ ತಾಂತ್ರಿಕ ನಡೆಯಿಂದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಲ್ಲಿ ಯಶ್ವಿಸಿಯಾಯಿತು. ಪ್ರಕರಣದ ತನಿಖೆ ನಡೆಸಿದ ಎಸ್ಐಟಿ 1,632 ಪುಟಗಳ ಚಾರ್ಚ್ಶೀಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಚಾರ್ಚ್ಶೀಟ್ನಲ್ಲಿ ಮನೆ ಕೆಲಸದಾಕೆಗೆ ಲೈಂಗಿಕ್ ದೌರ್ಜನ್ಯ ನೀಡಿರುವುದು ಉಲ್ಲೇಖವಾಗಿದೆ.

The post ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್. appeared first on Good News 24x7.

]]>