kalyana karnataka Archives - Good News 24x7 https://www.goodnews24x7.com/tag/kalyana-karnataka/ Kannada Mon, 16 Sep 2024 12:58:03 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg kalyana karnataka Archives - Good News 24x7 https://www.goodnews24x7.com/tag/kalyana-karnataka/ 32 32 ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ https://www.goodnews24x7.com/additional-discussion-for-the-development-of-welfare-karnataka-in-the-cabinet-meeting/ Mon, 16 Sep 2024 12:53:27 +0000 https://www.goodnews24x7.com/?p=601 ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ…

The post ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Good News 24x7.

]]>

ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

The post ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Good News 24x7.

]]>