kannada Archives - Good News 24x7 https://www.goodnews24x7.com/tag/kannada/ Kannada Sat, 21 Feb 2026 12:34:02 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg kannada Archives - Good News 24x7 https://www.goodnews24x7.com/tag/kannada/ 32 32 ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್ https://www.goodnews24x7.com/toxic-teaser-garners-record-views/ Sat, 21 Feb 2026 12:33:03 +0000 https://www.goodnews24x7.com/?p=8437 ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು,…

The post ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್ appeared first on Good News 24x7.

]]>

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ 24 ಗಂಟೆಗಳಾಗಿವೆ. ಈ ಅವಧಿಯಲ್ಲಿ ದಾಖಲೆ ಮೊತ್ತದ ಜನ ಸಿನಿಮಾದ ಟೀಸರ್ ವೀಕ್ಷಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೇವಲ 24 ಗಂಟೆಗಳಲ್ಲಿ ಸುಮಾರು ಐದು ಕೋಟಿ ವೀವ್ಸ್ ಗಳಿಸಿಕೊಂಡಿದೆ.

1:55 ನಿಮಿಷದ ಟೀಸರ್ ಅನ್ನು ನಿನ್ನೆ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ಮಾಡಿತ್ತು. ಟೀಸರ್, ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್​ ಪ್ರೊಡಕ್ಷನ್ಸ್​​ನ ಯೂಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆ ಆಯ್ತು. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್​​ಗೆ ಭರಪೂರ ಮೆಚ್ಚುಗೆಗಳು ವ್ಯಕ್ತವಾಗಿವೆ. ಟೀಸರ್ ಬಿಡುಗಡೆ ಆದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಟಾಕ್ಸಿಕ್​’ನ ಕನ್ನಡದ ಟೀಸರ್ ಬಿಡುಗಡೆ ಆದ 24 ಗಂಟೆಗಳಲ್ಲಿ 74,19,923 ವೀವ್ಸ್ ಪಡೆದುಕೊಂಡಿದೆ. ಕನ್ನಡದ ಟೀಸರ್​​ಗಳ ಮಟ್ಟಿಗೆ ಇದೊಂದು ಹೊಸ ದಾಖಲೆಯೇ ಆಗಿದೆ. ಇನ್ನು ಇದೇ ಸಿನಿಮಾದ ತಮಿಳು ಟೀಸರ್ ಅದೇ ಅವಧಿಯಲ್ಲಿ 54.31 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಇನ್ನು ಮಲಯಾಳಂ ಟೀಸರ್ 27.63 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ.

ಅತಿ ಹೆಚ್ಚು ವೀವ್ಸ್ ಪಡೆದುಕೊಂಡಿರುವುದು ‘ಟಾಕ್ಸಿಕ್’ ಸಿನಿಮಾದ ಹಿಂದಿ ಟೀಸರ್. ಕೇವಲ 24 ಗಂಟೆಯಲ್ಲಿ 2.19 ಕೋಟಿಗೂ ಹೆಚ್ಚು ಜನ ‘ಟಾಕ್ಸಿಕ್’ ಸಿನಿಮಾದ ಹಿಂದಿ ಟೀಸರ್ ಅನ್ನು ವೀಕ್ಷಿಸಿದ್ದಾರೆ. ಎರಡನೇ ಸ್ಥಾನ ತೆಲುಗು ಟೀಸರ್​​ಗೆ. ‘ಟಾಕ್ಸಿಕ್’ ಸಿನಿಮಾದ ತೆಲುಗು ಟೀಸರ್ ಅನ್ನು ಕೇವಲ 24 ಗಂಟೆಯಲ್ಲಿ 1.10 ಕೋಟಿಗೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ. ಅಲ್ಲಿಗೆ ಒಟ್ಟು ಸುಮಾರು 5 ಕೋಟಿ ಬಾರಿ ಟೀಸರ್ ವೀಕ್ಷಣೆ ಕಂಡಿದೆ.

‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದು, ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಗೀತು ಮೋಹನ್​​​ದಾಸ್ ನಿರ್​​ದೇಶನ ಮಾಡಿದ್ದು, ಸಿನಿಮಾಕ್ಕೆ ಕೆವಿಎನ್ ಮತ್ತು ಯಶ್ ಅವರ ಮಾನ್​​ಸ್ಟರ್ ಮೈಂಡ್ಸ್ ಬಂಡವಾಳ ಹೂಡಿದೆ.

The post ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್ appeared first on Good News 24x7.

]]>
ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ. https://www.goodnews24x7.com/sslc-and-second-pu-final-exam-schedule-announced/ Thu, 06 Nov 2025 11:17:55 +0000 https://www.goodnews24x7.com/?p=8045 ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ…

The post ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>

ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ ಮುಕ್ತಾಯವಾಗಲಿದೆ.

 

 

 

 

 

 

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ
ಫೆ.28: ಕನ್ನಡ, ಆರೇಬಿಕ್
ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾ.3: ಇಂಗ್ಲಿಷ್
ಮಾ.4: ತೆಲುಗು, ತಮಿಳು, ಮರಾಠಿ. ಉರ್ದು, ಸಂಸ್ಕೃತ, ಫ್ರೆಂಚ್, ಮಲಯಾಳಂ
ಮಾ.5: ಇತಿಹಾಸ
ಮಾ.6: ಭೌತ ವಿಜ್ಞಾನ
ಮಾ.7: ಐಚ್ಛಿಕ ಕನ್ನಡ, ಭೂಗರ್ಭಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.೨: ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ
ಮಾ.10: ಅರ್ಥಶಾಸ್ತ್ರ
ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ
ಮಾ.12: ಹಿಂದಿ
ಮಾ.13: ರಾಜ್ಯಶಾಸ್ತ್ರ
ಮಾ.14: ಲೆಕ್ಕಶಾಸ್ತ್ರ, ಗಣಿತ
ಮಾ.16: ಸಮಾಜಶಾಸ್ತ್ರ, ಜೀವವಿಜ್ಞಾನ, ಗಣಕ ವಿಜ್ಞಾನ
ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್. ಬ್ಯೂಟಿ ಆಂಡ್ ವೆಲ್‌ನೆಸ್

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 18: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್‌ಸಿ ಇಆರ್‌ಟಿ), ಸಂಸ್ಕೃತ
ಮಾ.23: ವಿಜ್ಞಾನ, ರಾಜ್ಯಶಾಸ್ತ್ರ , ಹಿಂದೂಸ್ತಾನಿ, ಕರ್ನಾಟಕ ಸಂಗೀತ
ಮಾ.25: ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ
ಮಾ.28: ಗಣಿತ, ಸಮಾಜ ಶಾಸ್ತ್ರ
ಮಾ.30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿ ಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್ ವಿಷಯಗಳು
ಏ.1:ಅರ್ಥಶಾಸ್ತ್ರ ಎಂಜಿನಿಯರಿಂಗ್ ವಿಷಯಗಳು
ಏ.2: ಸಮಾಜ ವಿಜ್ಞಾನ

The post ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>
‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್ https://www.goodnews24x7.com/tap-your-chest-and-say-i-am-an-indian-live-with-pride-i-am-a-kannadigan-yash/ Sat, 01 Nov 2025 10:15:07 +0000 https://www.goodnews24x7.com/?p=7965 ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ…

The post ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್ appeared first on Good News 24x7.

]]>

ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ ವದಂತಿಗಳನ್ನು ನಿರ್ಮಾಪಕರು ತಳ್ಳಿ ಹಾಕಿದ್ದು, ಸಿನಿಮಾ ಯುಗಾದಿಗೆ ತೆರೆಗೆ ಬರಲಿದೆ.

ರಾಕಿಂಗ್ ಸ್ಟಾರ್ ಯಶ್ (Yash) ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರಿಗೆ ಕನ್ನಡದ ಮೇಲೆ ಗೌರವ ಇನ್ನೂ ಹಾಗೆಯೇ ಉಳಿದುಕೊಂಡಿದೆ. ಆದರೆ, ಅವರು ಕರ್ನಾಟಕದಲ್ಲಿ ನಡೆಯೋ ಎಲ್ಲಾ ಬೆಳವಣಿಗೆ ಬಗ್ಗೆಯೂ ಪ್ರತಿಕ್ರಿಯೆ ನೀಡೋದಿಲ್ಲ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಯಶ್ ಕನ್ನಡ ಮರೆತಿದ್ದಾರೆ ಎಂಬ ಆರೋಪ ಮರೆತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಒಂದೇ ಟ್ವೀಟ್ ಮೂಲಕ ಅವರು ಅದನ್ನು ಸುಳ್ಳು ಮಾಡಿದ್ದಾರೆ.

ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವ. ಈ ಸಮಯದಲ್ಲಿ ಅನೇಕರು ಶುಭಾಶಯ ಕೋರುತ್ತಿದ್ದಾರೆ. ಯಶ್ ಕೂಡ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಟ್ವೀಟ್ ಮಾಡಿದ್ದಾರೆ. ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು. ಸಾವಿರ ಭಾಷೆ ನಾಲಿಗೆಯಲ್ಲಿರಲಿ. ಕನ್ನಡ ಭಾಷೆ ಹೃದಯದಲ್ಲಿರಲಿ. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ’ ಎಂದು ಯಶ್ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಟಾಕ್ಸಿಕ್ ಸಿನಿಮಾ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟನೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಹಲವು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್​ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಮುಂದಿನ ವರ್ಷ ಮಾರ್ಚ್ 19ರಂದು ತೆರೆಗೆ ಬರಲಿದೆ. ಯುಗಾದಿ ಪ್ರಯುಕ್ತ ಸಿನಿಮಾ ರಿಲೀಸ್ ಆಗಲಿದೆ.

ಹಬ್ಬಿತ್ತು ವದಂತಿ
‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿದ್ದವು. ಈ ಸಿನಿಮಾದ ಶೂಟಿಂಗ್ ಬಗ್ಗೆ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ಗೆ ಕಿರಿಕ್ ಆಗಿದೆ ಎಂದು ವರದಿ ಆಗಿತ್ತು. ಆದರೆ, ಇದನ್ನು ನಿರ್ಮಾಣ ಸಂಸ್ಥೆ ಕೆವಿಎನ್ ತಳ್ಳಿ ಹಾಕಿದೆ. ಇದು ಕೇವಲ ವಂದತಿ ಎಂದು ಸ್ಪಷ್ಟಪಡಿಸಿದೆ. ಇದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಸಿನಿಮಾ ಅಂದುಕೊಂಡ ದಿನಾಂಕದಂದೇ ತೆರೆಗೆ ಬರಲಿದೆ.

The post ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್ appeared first on Good News 24x7.

]]>
ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕನ್ನಡ ರಾಜ್ಯೋತ್ಸವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ https://www.goodnews24x7.com/cm-blasts-hindi-imposition-attacks-central-government-at-kannada-rajyotsava/ Sat, 01 Nov 2025 09:54:49 +0000 https://www.goodnews24x7.com/?p=7957 ನಾಡಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ರಾಜ್ಯೋತ್ಸವ ಸಮಾರಂಭವನ್ನುದ್ದೇಶಿಸಿ ಸಿಎಂ ಭಾಷಣ ಮಾಡಿದ್ದು, ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)…

The post ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕನ್ನಡ ರಾಜ್ಯೋತ್ಸವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ appeared first on Good News 24x7.

]]>

ನಾಡಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ರಾಜ್ಯೋತ್ಸವ ಸಮಾರಂಭವನ್ನುದ್ದೇಶಿಸಿ ಸಿಎಂ ಭಾಷಣ ಮಾಡಿದ್ದು, ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಿಂದೆ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾಡಿದ ಭಾಷಣವು ಕನ್ನಡ ನಾಡು-ನುಡಿಯ ಗೌರವ, ಏಕೀಕರಣ ಹೋರಾಟ ಮತ್ತು ಭಾಷಾ ಸಮಸ್ಯೆಗಳ ಬಗ್ಗೆ ಆಳವಾದ ಚಿಂತನೆಯನ್ನು ಒಳಗೊಂಡಿತ್ತು. ಸಿಎಂ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾಡಿದ ಈ ಭಾಷಣವು ರಾಜ್ಯದ ಜನತೆಗೆ ಸ್ಫೂರ್ತಿ ನೀಡುವಂತಿದ್ದರೆ, ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ತೀಕ್ಷ್ಣ ಟೀಕೆಯನ್ನೂ ಒಳಗೊಂಡಿತ್ತು.

ಕನ್ನಡ ಏಕೀಕರಣಕ್ಕಾಗಿ ಹೋರಾಟ ನಡೆಸಿದ ಮಹನೀಯರನ್ನು ನೆನೆದ ಸಿಎಂ!
ಕನ್ನಡ ರಾಜ್ಯ 69 ವರ್ಷಗಳನ್ನು ಪೂರೈಸಿ, 70ನೇ ವರ್ಷಕ್ಕೆ ಕಾಲಿಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಸಂದರ್ಭದಲ್ಲಿ ಕನ್ನಡ ಏಕೀಕರಣಕ್ಕಾಗಿ ಹೋರಾಟ ನಡೆಸಿದ ಮಹನೀಯರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ ಎಂದು ಒತ್ತಿ ಹೇಳಿದರು. ಕನ್ನಡ ನಾಡು-ನುಡಿಗೆ ಕೊಡುಗೆ ನೀಡಿದವರನ್ನು ಸ್ಮರಿಸುವ ಮೂಲಕ ರಾಜ್ಯದ ಇತಿಹಾಸವನ್ನು ಗೌರವಿಸಬೇಕು ಎಂಬುದು ಅವರ ಸಂದೇಶವಾಗಿತ್ತು. ಸಾವಿರಾರು ವರ್ಷಗಳ ಇತಿಹಾಸವುಳ್ಳ ಕನ್ನಡ ಭಾಷೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಆಗ್ರಹಿಸಿದರು.

ಹಿಂದಿ ಹೇರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿ!
ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಭಾಷಾ ಸಮಸ್ಯೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು. ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳು ನಮ್ಮ ಮಕ್ಕಳ ಪ್ರತಿಭೆಯನ್ನು ದುರ್ಬಲಗೊಳಿಸುತ್ತಿವೆ ಎಂದು ಆರೋಪಿಸಿದರು. ಹೀಗಾಗಿ ಮಾತೃಭಾಷೆಯಲ್ಲಿ ಶಿಕ್ಷಣವನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂಬ ಬೇಡಿಕೆ ಇಟ್ಟರು. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಹಿಂದಿ ಭಾಷೆಯನ್ನು ಹೇರಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿ, ಹಿಂದಿ ಅಭಿವೃದ್ಧಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ ಎಂಬುದನ್ನು ಎತ್ತಿ ತೋರಿಸಿದರು. ಇದು ಕರ್ನಾಟಕ ವಿರೋಧಿ ನೀತಿ ಎಂದು ಕರೆಯಬೇಕಾದ್ದು, ಎಲ್ಲರೂ ಇದನ್ನು ಖಂಡಿಸಬೇಕು ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ!
ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದ ಅಭಿವೃದ್ಧಿಗೆ ಬೇಕಾದ ಯೋಜನೆಗಳು ಕೇಂದ್ರದಿಂದ ಸಿಗುತ್ತಿಲ್ಲ ಎಂದು ದೂರಿದರು. ಆದರೆ ನಮ್ಮ ಸರ್ಕಾರ ಜನರಲ್ಲಿ ಕನ್ನಡ ಪ್ರೀತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿಕೊಂಡರು. ಉದಾಹರಣೆಗೆ, ವಿಧಾನಸೌಧದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಕರ್ನಾಟಕದ ವಾಣಿಜ್ಯ ಮಳಿಗೆಗಳಲ್ಲಿ ನಾಮಫಲಕಗಳಲ್ಲಿ 60 ಪ್ರತಿಶತ ಕನ್ನಡವನ್ನು ಕಡ್ಡಾಯಗೊಳಿಸಲಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಭಾಷಣದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಅವರನ್ನು ನೆನೆದು ಅವರಿಗೆ ಅಭಿನಂದನೆ ಸಲ್ಲಿಸಿದರು. ಕನ್ನಡ ಸಾಹಿತ್ಯದ ಹೆಮ್ಮೆಯಾಗಿರುವ ಭಾನು ಅವರ ಸಾಧನೆಯು ರಾಜ್ಯಕ್ಕೆ ಗರ್ವ ತಂದಿದೆ ಎಂದು ಹೇಳಿದರು. ಒಟ್ಟಾರೆ, ಸಿಎಂ ಸಿದ್ದರಾಮಯ್ಯ ಅವರ ಭಾಷಣವು ಕನ್ನಡದ ಗೌರವವನ್ನು ಕಾಪಾಡುವ, ಭಾಷಾ ನೀತಿಯಲ್ಲಿ ಸಮಾನತೆ ಬೇಡುವ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಹೋರಾಡುವ ಸಂದೇಶವನ್ನು ಒಳಗೊಂಡಿತ್ತು. ಈ ರಾಜ್ಯೋತ್ಸವವು ಕನ್ನಡಿಗರಲ್ಲಿ ಒಗ್ಗಟ್ಟನ್ನು ಬೆಳೆಸಲಿ ಎಂಬುದು ಅವರ ಆಶಯವಾಗಿತ್ತು.

The post ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕನ್ನಡ ರಾಜ್ಯೋತ್ಸವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ appeared first on Good News 24x7.

]]>
ನವೆಂಬರ್ 1  ಕನ್ನಡ ರಾಜ್ಯೋತ್ಸವ ವಿಶೇಷ ಇತಿಹಾಸವನ್ನೊಮ್ಮೆ ನೀವೂ ತಿಳಿಯಿರಿ. https://www.goodnews24x7.com/know-the-special-history-of-november-1-kannada-rajyotsava/ Sat, 01 Nov 2025 05:43:44 +0000 https://www.goodnews24x7.com/?p=7947 ನವೆಂಬರ್ 1 ಕನ್ನಡಿಗರ ಪಾಲಿನ ಅತ್ಯಂತ ಸಂಭ್ರಮ, ಸಡಗರದ ಕ್ಷಣ. ಇದು ಕರ್ನಾಟಕ ರಾಜ್ಯ ರಚನೆಯ ಐತಿಹಾಸಿಕ ದಿನ. ಇದೇ ಕಾರಣದಿಂದ ನವೆಂಬರ್‌ನಲ್ಲಿ ಎಲ್ಲೆಲ್ಲೂ ಕನ್ನಡದ ಕಂಪು ಅನುರಣಿಸುತ್ತಿರುತ್ತದೆ. ಕರ್ನಾಟಕ ತನ್ನದೇ ಆದ ಶ್ರೀಮಂತ ಪರಂಪರೆ, ಸಂಸ್ಕೃತಿ, ಇತಿಹಾಸ ಹೊಂದಿರುವ ಪಾವನ ಭೂಮಿ.…

The post ನವೆಂಬರ್ 1  ಕನ್ನಡ ರಾಜ್ಯೋತ್ಸವ ವಿಶೇಷ ಇತಿಹಾಸವನ್ನೊಮ್ಮೆ ನೀವೂ ತಿಳಿಯಿರಿ. appeared first on Good News 24x7.

]]>

ನವೆಂಬರ್ 1 ಕನ್ನಡಿಗರ ಪಾಲಿನ ಅತ್ಯಂತ ಸಂಭ್ರಮ, ಸಡಗರದ ಕ್ಷಣ. ಇದು ಕರ್ನಾಟಕ ರಾಜ್ಯ ರಚನೆಯ ಐತಿಹಾಸಿಕ ದಿನ. ಇದೇ ಕಾರಣದಿಂದ ನವೆಂಬರ್‌ನಲ್ಲಿ ಎಲ್ಲೆಲ್ಲೂ ಕನ್ನಡದ ಕಂಪು ಅನುರಣಿಸುತ್ತಿರುತ್ತದೆ. ಕರ್ನಾಟಕ ತನ್ನದೇ ಆದ ಶ್ರೀಮಂತ ಪರಂಪರೆ, ಸಂಸ್ಕೃತಿ, ಇತಿಹಾಸ ಹೊಂದಿರುವ ಪಾವನ ಭೂಮಿ. ಕಲೆ, ಸಾಹಿತ್ಯಕ್ಕೆ ತವರೂರಿದು. ಕನ್ನಡ ಬರೀ ಭಾಷೆಯಲ್ಲ, ಅದು ನಮ್ಮ ಉಸಿರು, ಬದುಕು. ಅಲ್ಲಲ್ಲಿ ಚದುರಿ ಹೋಗಿದ್ದ ಕನ್ನಡ ಭಾಷಿಗರು ಇರುವ ಪ್ರದೇಶವನ್ನೆಲ್ಲಾ ಒಟ್ಟುಗೂಡಿಸಿ ಕರ್ನಾಟಕ ರಾಜ್ಯವನ್ನು ರೂಪಿಸಲಾಯಿತು.

ಕನ್ನಡದ ಕುಲಪುರೋಹಿತ ಎಂದೇ ಖ್ಯಾತಿಗಳಿಸಿರುವ ಆಲೂರು ವೆಂಕಟರಾಯರು 1905ರಲ್ಲೇ ಕರ್ನಾಟಕ ಏಕೀಕರಣ ಚಳುವಳಿ ಆರಂಭಿಸಿದ್ದರು. 1950ರಲ್ಲಿ ಭಾರತವು ಗಣರಾಜ್ಯವಾದ ನಂತರ ಪ್ರಾಂತ್ಯ, ಭಾಷೆಗಳ ಆಧಾರದ ವೇಳೆ ವಿವಿಧ ರಾಜ್ಯಗಳು ರೂಪುಗೊಂಡವು. 1956ರ ನವೆಂಬರ್ 1 ರಂದು ಮೈಸೂರು ರಾಜ್ಯವು ರಚನೆಯಾಯಿತು. ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಭಾಷೆ ಮಾತನಾಡುವ ಪ್ರದೇಶವನ್ನ ವಿಲೀನಗೊಳಿಸಿ ಮೈಸೂರು ರಾಜ್ಯವನ್ನ ಘೋಷಿಸಲಾಗಿತ್ತು. ಇಡೀ ಕನ್ನಡ ನಾಡನ್ನು ಪ್ರತಿನಿಧಿಸುವಂತಹ ಹೆಸರಿಡಲು ನಿರ್ಧರಿಸಿದಾಗ 1973ರ ನವೆಂಬರ್‌ 1ರಂದು ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಕರ್ನಾಟಕ ನಾಮಫಲಕವನನ್ನು ಸಾಂಕೇತಿಕವಾಗಿ ಅನಾವರಣಗೊಳಿಸಿದ್ದರು. ಹೀಗೆ ಕರುನಾಡು ಉದಯವಾದ ದಿನದ ಸಡಗರ, ಹೆಮ್ಮೆ, ಸ್ವಾಭಿಮಾನದ ಸಂಕೇತವೇ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಸಂಭ್ರಮ. ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶದಲ್ಲಿ ನೆಲೆಸಿರುವ ಕನ್ನಡ ಭಾಷಿಗರು ಈ ದಿನವನ್ನು ಅತ್ಯಂತ ವೈಭವದಿಂದ ಆಚರಿಸಿ ತಾಯಿ ಭುವನೇಶ್ವರಿಗೆ ನಮಿಸುತ್ತಾರೆ. ಅಂತೆಯೇ ಕನ್ನಡ ನಾಡು ಉದಯವಾದ ಹಾದಿಯನ್ನೊಮ್ಮೆ ನೋಡುವವರಿಗಾಗಿ ʻನಿಮ್ಮ ಪಬ್ಲಿಕ್‌ ಟಿವಿʼ ಈ ಮೈಲುಗಲ್ಲುಗಳ ನೋಟವನ್ನು ದಾಖಲಿಸಿದೆ.

ಉದಯವಾಯಿತು ಚೆಲುವ ಕನ್ನಡ ನಾಡು, ಹೆಸರಾಯ್ತು ಕರ್ನಾಟಕ
1973ರ ನವೆಂಬರ್ 1ರಂದು ಕನ್ನಡಿಗರ ಕನಸು ನನಸಾಗಿ ಮೈಸೂರು ರಾಜ್ಯ, ಕರ್ನಾಟಕವೆಂಬ ನಾಮ ಅಲಂಕರಿಸಿತು. ಮದ್ರಾಸ್, ಬಾಂಬೆ, ಹೈದರಾಬಾದ್ ಪ್ರಾಂತ್ಯಗಳ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ 1956ರ ನವೆಂಬರ್ 1ರಂದೇ ಉದಯವಾದರೂ ಇಡೀ ನಾಡನ್ನು ಪ್ರತಿನಿಧಿಸುವಂತಹ ಹೆಸರು ಪಡೆಯಲು ಮತ್ತೆ 17 ವರ್ಷ ಕಾಯಬೇಕಾಯಿತು. ಕನ್ನಡ ನಾಡಿಗೆ ಕರ್ನಾಟಕ ಎಂಬುದಾಗಿ ನಾಮಕರಣ ಮಾಡಿದ್ದು ದೇವರಾಜ ಅರಸು ನೇತೃತ್ವದ ಸರ್ಕಾರ. ಅಂದಾನಪ್ಪ ದೊಡ್ಡಮೇಟಿ, ಕೆ.ಎಚ್.ಪಾಟೀಲ, ಶಾಂತವೇರಿ ಗೋಪಾಲಗೌಡ ಅವರಂತಹ ನಾಯಕರ ಒತ್ತಾಸೆಯೂ ನಮ್ಮ ನಾಡು ಕರ್ನಾಟಕ ಎಂಬ ಹೆಸರು ಪಡೆಯುವಲ್ಲಿ ಮಹತ್ವದ ಪಾತ್ರ ವಹಿಸಿತ್ತು.

ಕನ್ನಡ ಚಳವಳಿ
60-70ರ ದಶಕದ ಕನ್ನಡ ಚಳವಳಿ ಕರ್ನಾಟಕ ಕನ್ನಡದ ಸಾಂಸ್ಕೃತಿಕ ಅಸ್ಮಿತೆಯನ್ನ ಬಲಪಡಿಸಿತು. ಡಬ್ಬಿಂಗ್ ವಿರೋಧಿ ಚಳವಳಿ ಕನ್ನಡ ಸಿನಿಮಾದ ಬೆನ್ನುಮೂಳೆ ಗಟ್ಟಿಗೊಳಿಸಿತು. ಬೆಂಗಳೂರು ಕನ್ನಡಿಗರ ಅಳುಕು ಆತ್ಮವಿಶ್ವಾಸವಾಗಿ ಬದಲಾಗಿ, ಕಾರ್ಖಾನೆಗಳಲ್ಲಿ ಕನ್ನಡಿಗರ ಸೊಲ್ಲು ಕೇಳುವಂತಾಯಿತು. ಅನಕೃ, ಮ. ರಾಮಮೂರ್ತಿ, ಎಂ.ಚಿದಾನಂದಮೂರ್ತಿ, ವಾಟಾಳ್ ನಾಗರಾಜ್, ಜಿ.ನಾರಾಯಣಕುಮಾರ್ ಮತ್ತಿತರ ನಾಯಕರು ಕನ್ನಡ ಚಳವಳಿಗೆ ಜೀವ ತುಂಬಿದರು.

ನಿರ್ದೇಶನದ ‘ನಾಂದಿ’
ಎನ್. ಲಕ್ಷ್ಮೀನಾರಾಯಣ್ ನಿರ್ದೇಶನದ ‘ನಾಂದಿ’ (1964) ‘ಹೊಸ ಅಲೆ’ಗೆ ಮುನ್ನುಡಿ ಬರೆಯಿತು. ಆ ಅಲೆ ಸ್ಪಷ್ಟವಾಗಿ ಪ್ರಕಟಗೊಂಡ ಸಿನಿಮಾ ಯು.ಆರ್. ಅನಂತಮೂರ್ತಿ ಕಥೆ ಆಧರಿಸಿ ಪಟ್ಟಾಭಿರಾಮ ರೆಡ್ಡಿ ನಿರ್ದೇಶಿಸಿದ ‘ಸಂಸ್ಕಾರ’ (1970) ಕನ್ನಡದ ಮೊದಲ ಸ್ವರ್ಣಕಮಲ ಪುರಸ್ಕೃತ ಚಿತ್ರವಿದು. ʻಚೋಮನದುಡಿ’, ʻಘಟಶ್ರಾದ್ಧ’, ʻಕಾಡು’ ಚಿತ್ರಗಳಿಂದ ಇತ್ತೀಚಿನ ʻತಿಥಿ’, ʻಪೆಟ್ರೊ’, ʻಫೋಟೊ’ ಚಿತ್ರಗಳವರೆಗಿನ ಕಲಾತ್ಮಕ ಚಿತ್ರಗಳ ಹರವಿನಲ್ಲಿ ಗಿರೀಶ ಕಾಸರವಳ್ಳಿ, ಗಿರೀಶ ಕಾರ್ನಾಡ, ಬಿ.ವಿ. ಕಾರಂತ, ಜಿ.ವಿ ಅಯ್ಯರ್, ಎಂ.ಎಸ್ ಸತ್ಯು, ಲಂಕೇಶ್, ಬರಗೂರು ರಾಮಚಂದ್ರಪ್ಪ, ಪಿ. ಶೇಷಾದ್ರಿ, ಮುಂತಾದವರನ್ನ ಗುರ್ತಿಸಬಹುದು.

ಬಂಡೀಪುರ ಹುಲಿ ಯೋಜನೆ
ಅಳಿವಿನಂಚಿಗೆ ಸಾಗಿದ್ದ ಹುಲಿಗಳ ಸಂತತಿ ರಕ್ಷಣೆಯಲ್ಲಿ ಹೊಸ ಭಾಷ್ಯ ಬರೆದಿದ್ದು 1973ರ ನ.16ರಂದು ಉದ್ಘಾಟನೆಯಾದ ಬಂಡೀಪುರ ಹುಲಿ ಯೋಜನೆ.

ರಣಜಿ ಟ್ರೋಫಿ
1973ರಲ್ಲಿ ಬೆಂಗಳೂರಿನಲ್ಲಿ ಆರಂಭಗೊಂಡ ಭಾರತೀಯ ಆಡಳಿತ ನಿರ್ವಹಣಾ ಸಂಸ್ಥೆ (ಐಐಎಂಬಿ) ಜಾಗತಿಕ ಮಟ್ಟದಲ್ಲೂ ಹೆಸರು ಮಾಡಿದ ಬಿ-ಸ್ಕೂಲ್. ಇದರೊಂದಿಗೆ 15 ಸಲ ರಣಜಿ ಟ್ರೋಫಿ ಜಯಿಸಿದ್ದ ಮುಂಬೈ ತಂಡವನ್ನ 1973-74ರಲ್ಲಿ ಸೆಮಿ ಫೈನಲ್‌ನಲ್ಲಿ ಮಣಿಸಿ ಫೈನಲ್‌ನಲ್ಲಿ ರಾಜಸ್ಥಾನವನ್ನ ಸೋಲಿಸಿ ಕರ್ನಾಟಕ ಮೊದಲ ಬಾರಿ ರಣಜಿ ಟ್ರೋಫಿ ತನ್ನದಾಗಿಸಿತು.

ಆರೋಗ್ಯ ಕ್ಷೇತ್ರದ ಹೆಗ್ಗುರುತೂ
‘ಚಿಕಿತ್ಸೆ ಮೊದಲು-ಪಾವತಿ ನಂತರ’ ಎಂಬ ಪರಿಕಲ್ಪನೆಯ ಅಡಿಯಲ್ಲಿ 1972ರಲ್ಲಿ ಸ್ಥಾಪನೆಯಾದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರಾಜ್ಯಕ್ಕೊಂದು ಮುಕುಟಮಣಿ. ಅಲ್ಲದೇ ಅದು ಆರೋಗ್ಯ ಕ್ಷೇತ್ರದ ಹೆಗ್ಗುರುತೂ ಆಗಿತ್ತು.

 ʻಬಂಗಾರದ ಮನುಷ್ಯʼ
ಸಿದ್ದಲಿಂಗಯ್ಯ ನಿರ್ದೇಶನದ ‘ಬಂಗಾರದ ಮನುಷ್ಯ’ ನಾಡಿನ ಮೇಲೆ ಗಾಢ ಪರಿಣಾಮ ಬೀರಿದ ಮುಖ್ಯವಾಹಿನಿಯ ಪ್ರಮುಖ ಸಿನಿಮಾ. 1972-1973ರಲ್ಲಿ, ಒಟ್ಟು 104 ವಾರಗಳ ದಾಖಲೆ ಪ್ರದರ್ಶನದ ಮೂಲಕ ಚಿತ್ರೋದ್ಯಮದ ಸ್ಥಿರತೆಗೆ ಕಾರಣವಾಯಿತು. ರೈತ ಸಂಸ್ಕೃತಿ – ಕನ್ನಡ ಸಂಸ್ಕೃತಿಗಳನ್ನು ಒಟ್ಟಿಗೆ ಕಾಣಿಸಿತು. ಕೌಟುಂಬಿಕ ಮೌಲ್ಯಗಳನ್ನ ಎತ್ತಿಹಿಡಿಯಿತು. ಕೃಷಿ ಸಂಸ್ಕೃತಿಯ ಮಹತ್ವವನ್ನೂ ಸಾರಿತು. ವರನಟ ಡಾ.ರಾಜ್‌ಕುಮಾರ್‌ ವ್ಯಕ್ತಿತ್ವ-ವರ್ಚಸ್ಸಿಗೆ ಹೊಳಪು ನೀಡಿತು. ಇದೆಲ್ಲದಕ್ಕಿಂತ ಮುಖ್ಯವಾಗಿ ವಿದ್ಯಾವಂತ ಯುವಜನ ಹಳ್ಳಿಗಳಿಗೆ ಮರಳಲು ಪ್ರೇರೇಪಿಸಿತು.

ʻಕೆಎಂಎಫ್‌ʼ 
ಗುಜರಾತ್‌ನ ಅಮುಲ್ ಮಾದರಿಯಲ್ಲಿ ಆರಂಭವಾದ ಕರ್ನಾಟಕ ಹಾಲು ಮಹಾಮಂಡಳವು (ಕೆಎಂಎಫ್) ರಾಜ್ಯದಲ್ಲಿ ಕ್ಷೀರ ಕ್ರಾಂತಿಯನ್ನೇ ಮಾಡಿದೆ. ಸಹಕಾರ ತತ್ವದ ಆಧಾರದಲ್ಲಿ ಹಳ್ಳಿ ಮಟ್ಟದಲ್ಲಿ ಕಾರ್ಯಾರಂಭ ಮಾಡಿದ ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ಜೀವನಾಡಿಯಾದವು. 15 ಒಕ್ಕೂಟಗಳೊಂದಿಗೆ, ಹಾಲಿನ ಸಂಗ್ರಹ ಮತ್ತು ಮಾರಾಟದಲ್ಲಿ ಭಾರತದಲ್ಲಿ 2ನೇ ಸ್ಥಾನ, ದಕ್ಷಿಣದಲ್ಲಿ ಮೊದಲ ಸ್ಥಾನ ಪಡೆದಿರುವ ಕೆಎಂಎಫ್, ರೈತರ ಉಪಕಸುಬನ್ನೇ ಒಂದು ಉದ್ಯಮವನ್ನಾಗಿ ಪರಿವರ್ತಿಸಿದೆ. ಅಲ್ಲದೇ ಇಂದು ಹಳ್ಳಿಹಳ್ಳಿಗಳಲ್ಲೂ ಡೈರಿ ಸ್ಥಾಪಿಸುವ ಮೂಲಕ ಪ್ರತಿ ಮನೆಗೂ ಕ್ಷೀರ ತಲುಪಸುವ ಕೆಲಸವನ್ನು ಕೆಎಂಎಫ್‌ ಮಾಡ್ತಿದೆ.

1977ರ ಫೆಬ್ರುವರಿಯಲ್ಲಿ ಹಾವನೂರು ವರದಿ ಜಾರಿ
ʻಹಿಂದುಳಿದ ವರ್ಗಗಳ ಬೈಬಲ್’, ದೇವರಾಜ ಅರಸು ಈ ವರದಿಯನ್ನು ಹಾಗಂತ ಬಣ್ಣಿಸಿದ್ದರು. ಹಿಂದುಳಿದ ವರ್ಗಗಳಿಗೆ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ 1972ರ ಆಗಸ್ಟ್‌ನಲ್ಲಿ ಎಲ್.ಜಿ. ಹಾವನೂರು ನೇತೃತ್ವದಲ್ಲಿ ಆಯೋಗ ರಚಿಸಲಾಯಿತು. ಆಳವಾಗಿ ಅಧ್ಯಯನ ನಡೆಸಿ, ಸೂಕ್ತ ಶಿಫಾರಸುಗಳೊಂದಿಗೆ 1975ರ ನವೆಂಬರ್‌ನಲ್ಲಿ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತು. ಕೆಲವು ಮಾರ್ಪಾಡುಗಳೊಂದಿಗೆ 1977ರ ಫೆಬ್ರುವರಿಯಲ್ಲಿ ಅರಸು ನೇತೃತ್ವದ ಸರ್ಕಾರ ಈ ವರದಿಯನ್ನು ಜಾರಿಗೆ ತಂದಿತು.

ʻದಲಿತ ಸಂಘರ್ಷ ಸಮಿತಿʼ

ಶತಮಾನಗಳಿಂದ ತುಳಿತಕ್ಕೆ ಒಳಗಾದವರ ಕೊರಳ ದನಿಯಾಗಿ, ಎದೆಯುಬ್ಬಿಸಿ ನಿಲ್ಲುವ ಕಾಲಿಗೆ ಬಲವಾಗಿ ರೂಪುಗೊಂಡಿದ್ದೇ ಕರ್ನಾಟಕ ದಲಿತ ಸಂಘರ್ಷ ಸಮಿತಿ. ಬಿ. ಬಸವಲಿಂಗಪ್ಪ, ಬಿ.ಎಂ.ತಿಪ್ಪೇಸ್ವಾಮಿ, ಪ್ರೊ.ಬಿ. ಕೃಷ್ಣಪ್ಪ, ದೇವನೂರ ಮಹಾದೇವ, ಸಿದ್ದಲಿಂಗಯ್ಯ, ಕೋಟಗಾನಹಳ್ಳಿ ರಾಮಯ್ಯ, ಎನ್‌. ವೆಂಕಟೇಶ್ ಅವರ ಪ್ರೇರಣೆ ಇದರ ಹಿಂದಿತ್ತು. ನಾಡಿನ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯಕ ವಲಯದಲ್ಲಿ ಸಂಚಲನ ಮೂಡಿಸಿದ ಈ ಚಳವಳಿ, ದಲಿತರಲ್ಲಿ ಸ್ವಾಭಿಮಾನದ ಕಿಚ್ಚು ಹತ್ತಿಸಿ ಬದಲಾವಣೆಯ ಹರಿಕಾರನಾಯಿತು.

ಉಳುವವನೇ ಭೂಮಿಯ ಒಡೆಯನಾದ
ಕಾಗೋಡು ಚಳವಳಿಯ ಪರಿಣಾಮವಾಗಿ ಉಳುವವನೆ ಹೊಲದೊಡೆಯ ಆಶಯದ ಮೇರೆಗೆ ಜಾರಿಗೊಳಿಸಿದ ಈ ಶಾಸನ ಗೇಣಿದಾರರಿಗೆ ಭೂಮಿ, ಕೃಷಿ ಭೂಮಿಗೆ ಮಿತಿ ಹಾಕಿದ ಕ್ರಾಂತಿಕಾರಕ ಹೆಜ್ಜೆ. 1961ರ ಕಾಯ್ದೆಗೆ ಬಲವಾದ ತಿದ್ದುಪಡಿ ತಂದಿದ್ದು ದೇವರಾಜ ಅರಸರು. ಭೂಮಾಲೀಕರ ಬಳಿ ಇದ್ದ ಜಮೀನು, ಉಳುಮೆ ಮಾಡುತ್ತಿದ್ದವರಿಗೆ ದಕ್ಕುವಂತಾಗಿ ಕೃಷಿ ಕ್ಷೇತ್ರದಲ್ಲಿ ದೊಡ್ಡಮಟ್ಟದ ಬದಲಾವಣೆ ತಂದ ಕಾಯ್ದೆ ಇದು. ಬಳಿಕ ದೇಶವ್ಯಾಪಿ ಜಾರಿಗೊಳಿಸಲಾಯಿತು. ಕಳೆದ ವರ್ಷವಷ್ಟೇ ತೆರೆಗೆ ಬಂದಿದ್ದ ದರ್ಶನ್‌ ಅಭಿನಯದ ಕಾಟೇರಾ ಸಿನಿಮಾ ಇದಕ್ಕೆ ಕನ್ನಡಿ ಹಿಡಿದಿತ್ತು.

ʻಅಪ್ಪಿಕೋ ಚಳವಳಿ ಮತ್ತು ಸಾಲ ಸಮ್ಮೇಳನʼ
1983ರ ಸೆ.8 ರಂದು ಶಿರಸಿ ತಾಲ್ಲೂಕಿನ ಕೆಳಾಸೆ ಕುದ್ರಗೋಡ ಅರಣ್ಯದಲ್ಲಿ ಆರಂಭಗೊಂಡ ಅಪ್ಪಿಕೋ ಚಳವಳಿ ಮಲೆನಾಡು ಪೂರ್ತಿ ವ್ಯಾಪಿಸಿತು. ಸರ್ಕಾರ ಈ ಹೋರಾಟಕ್ಕೆ ಮಣಿದು ಅರಣ್ಯ ನೀತಿಯಲ್ಲಿ ಪರಿವರ್ತನೆ ಮಾಡಿದ್ದಲ್ಲದೇ, ಮರ ಕಡಿಯುವುದನ್ನು ನಿಷೇಧಿಸಿತು. ಇದರ ನಂತರ ರಾಷ್ಟ್ರೀಕರಣದ ಬಳಿಕವೂ ಬಡವರು ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಆಗುತ್ತಿರಲಿಲ್ಲ. ಕೇಂದ್ರದಲ್ಲಿ ಹಣಕಾಸು ರಾಜ್ಯ ಸಚಿವರಾಗಿದ್ದ ಬಿ. ಜನಾರ್ದನ ಪೂಜಾರಿ ನೇತೃತ್ವದಲ್ಲಿ 1983ರಲ್ಲಿ ದೇಶದಾದ್ಯಂತ ಸಾಲ ಮೇಳ ಆರಂಭಿಸಲಾಯಿತು.

ವಿಶ್ವ ಕನ್ನಡ ಸಮ್ಮೇಳನ
ಜಗತ್ತಿನಾದ್ಯಂತ ಹರಡಿರುವ ಕನ್ನಡಿಗರನ್ನು ಒಂದೇ ವೇದಿಕೆಗೆ ತಂದು, ಕನ್ನಡ ನಾಡು ನುಡಿಯ ಬಗ್ಗೆ ಚರ್ಚಿಸುವ ಆಶಯದೊಂದಿಗೆ ಆರಂಭಗೊಂಡಿದ್ದು ವಿಶ್ವ ಕನ್ನಡ ಸಮ್ಮೇಳನ. 1985ರಲ್ಲಿ ಮೊದಲ ಸಮ್ಮೇಳನ ಮೈಸೂರಿನಲ್ಲಿ ನಡೆಯಿತು.

ಮೊಟ್ಟ ಮೊದಲಿಗೆ ಕಂಪ್ಯೂಟರ್‌ನಲ್ಲಿ ಕನ್ನಡ
ಕಂಪ್ಯೂಟರ್ ಪ್ರವರ್ಧಮಾನಕ್ಕೆ ಬರುವ ಹೊತ್ತಿನಲ್ಲೇ ತಂತ್ರಜ್ಞ ಕೆ.ಪಿ.ರಾವ್ 1981ರಲ್ಲಿ ಸೇಡಿಯಾಪು ಕನ್ನಡ ತಂತ್ರಾಂಶ ಅಭಿವೃದ್ಧಿ ಪಡಿಸಿದರು. ಕನ್ನಡಕ್ಕೆ ಸಂಬಂಧಿಸಿದ ಮೊದಲ ತಂತ್ರಾಂಶ. 1998ರಲ್ಲಿ ಬರಹ ಕನ್ನಡ, 2001ರಲ್ಲಿ ಸರ್ಕಾರದ ನುಡಿ ತಂತ್ರಾಂಶ ಬಳಕೆಗೆ ಬಂತು.

ಕನ್ನಡ ಪ್ರಜ್ಞೆ ಬಡಿದೆಬ್ಬಿಸಿದ ಗೋಕಾಕ್‌ ಚಳವಳಿ
ಶಿಕ್ಷಣದಲ್ಲಿ ಕನ್ನಡದ ಸ್ಥಾನಮಾನ ಹೇಗಿರಬೇಕು ಎನ್ನುವುದನ್ನ ಅಧ್ಯಯನ ಮಾಡಿ ವಿ.ಕೃ.ಗೋಕಾಕ್ ನೇತೃತ್ವದ ಸಮಿತಿ ನೀಡಿದ್ದ ವರದಿ ಜಾರಿಗಾಗಿ ನಡೆದ ಹೋರಾಟ ಐತಿಹಾಸಿಕ. ಸಾಹಿತಿಗಳು, ಹೋರಾಟಗಾರರು ಆರಂಭಿಸಿದ ಈ ಚಳವಳಿ ವರನಟ ರಾಜ್‌ಕುಮಾರ್ ಪ್ರವೇಶದಿಂದ ಬಿರುಸು ಪಡೆದಿತ್ತು. ಸರ್ಕಾರ ಕನ್ನಡಿಗರ ಒಕ್ಕೊರಲ ಧ್ವನಿಗೆ ಮಣಿಯಲೇಬೇಕಾಯಿತು. ಭಾಷೆಯ ಉಳಿವಿಗಾಗಿ ಹೋರಾಡಬೇಕಾದ ಪ್ರಜ್ಞೆಯನ್ನು ಕನ್ನಡಿಗರಲ್ಲಿ ರೂಪಿಸಿದ್ದು ಗೋಕಾಕ್ ಚಳವಳಿ.

1989ರಲ್ಲಿ ರಂಗಾಯಣ ಸ್ಥಾಪನೆ
1989ರಲ್ಲಿ ಸ್ಥಾಪನೆಯಾದ ಬಿ.ವಿ ಕಾರಂತರ ಕನಸಿನ ಕೂಸಾದ ʻರಂಗಾಯಣʼವು ದಕ್ಷಿಣ ಭಾರತದ ಮೊದಲ ರಂಗತರಬೇತಿ ಶಾಲೆಯಾಗಿ ನೂರಾರು ನಾಟಕ ಪ್ರಯೋಗಗಳನ್ನ ಮಾಡಿದೆ.

ಶಿವಮೊಗ್ಗದಲ್ಲಿ ಬೆತ್ತಲೆ ಸೇವೆ ನಿಷೇಧ
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಗ್ರಾಮದೇವತೆ ರೇಣುಕಾ ಎಲ್ಲಮ್ಮನ ಹೆಸರಿನಲ್ಲಿ ಹೆಣ್ಣು, ಗಂಡು ಇಬ್ಬರೂ ಮಾಡುತ್ತಿದ್ದ ಬೆತ್ತಲೆ ಸೇವೆ ಎಂಬ ಅನಿಷ್ಟ ಪದ್ದತಿ ವಿರುದ್ಧದ ಹೋರಾಟದ ಫಲವಾಗಿ ರಾಮಕೃಷ್ಣ ಹೆಗಡೆ ಸರ್ಕಾರವು ಚನ್ನವೀರಪ್ಪ ಆಯೋಗವನ್ನು ರಚಿಸಿ, 1987ರ ಫೆ.27ರಂದು ಬೆತ್ತಲೆ ಸೇವೆ ನಿಷೇಧಿಸಿತು. ಕರ್ನಾಟಕ ಮೌಢ್ಯ ನಿಷೇಧ ಕಾಯ್ದೆ-2017 ಕೂಡ ಬೆತ್ತಲೆ ಸೇವೆಯ ನಿಷೇಧವನ್ನ ಪುನರುಚ್ಛರಿಸಿದೆ.

ಬೆಂಗಳೂರು ಸೇರಿ ಜಿಲ್ಲೆಗಳ ವಿಭಜನೆ, ಬಿಬಿಎಂಪಿ ರಚನೆ
ರಾಜ್ಯ ಉದಯವಾದ ನಂತರ ಮೊದಲ ಬಾರಿಗೆ 1986ರಲ್ಲಿ ಬೆಂಗಳೂರು ಜಿಲ್ಲೆಯನ್ನ ಬೆಂಗ್ಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಾಗಿ ವಿಭಜಿಸಲಾಗಿತ್ತಯ. ನಂತರ 1997ರಲ್ಲಿ ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ಗದಗ, ಹಾವೇರಿ ಚಾಮರಾಜನಗರ ಜಿಲ್ಲೆಗಳು ರಚನೆಯಾದವು. ಇದರೊಂದಿಗೆ ಅಭಿವೃದ್ಧಿ ಹಾದಿಯಲ್ಲಿರುವ ಬೆಂಗಳೂರಿನ ಆಡಳಿತ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ದೃಷ್ಟಿಯಿಂದ ನಗರದ ವ್ಯಾಪ್ತಿಯನ್ನ ವಿಸ್ತರಿಸಿ ಬೆಂಗಳೂರು ಬೃಹತ್‌ ಹಾನಗರ ಪಾಲಿಕೆ ಎಂದು 2007ರಲ್ಲಿ ಮರುನಾಮಕರಣ ಮಾಡಲಾಯಿತು.

ಕರ್ನಾಟಕ ರತ್ನ 
ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಮಾನ್ಯ ಸೇವೆ ಸಲ್ಲಿಸಿದವರು, ಸಾಧಕರನ್ನ ಗುರುತಿಸಿ ಗೌರವಿಸುವ ಉದ್ದೇಶದಿಂದ ಎಸ್.‌ ಬಂಗಾರಪ್ಪನವರ ನೇತೃತ್ವದ ಸರ್ಕಾರ 1992ರಲ್ಲಿ ಕರ್ನಾಟಕ ರತ್ನ ರಂಬ ರಾಜ್ಯದ ಅತ್ಯುನ್ನತ ನಾಗರಿಕ ಪುರಸ್ಕಾರನೀಡುವ ನಿರ್ಧಾರ ಕೈಗೊಂಡರು.
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನನಿರಂತರ ಹೋರಾಟದ ಫಲವಾಗಿ 2008ರ ನವೆಂಬರ್‌ 1ರಂದು ಕೇಂದ್ರ ಸರ್ಕಾರ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಪ್ರಕಟ ಮಾಡಿತು.

ಸಾಂಸ್ಕೃತಿಕ ರಾಯಭಾರಿ ಬಸವಣ್ಣ
12ನೇ ಶತಮಾನದಲ್ಲೇ ಸಮಾನತೆಯ ಸಂದೇಶದೊಂದಿಗೆ ವಿವಿಧ ಜಾತಿ, ವೃತ್ತಿಗಳ ಜನರನ್ನ ಸಂಘಟಿಸಿ ಶರಣ ಚಳವಳಿ ರೂಪಿಸಿದವರು ಬಸವಣ್ಣ. ಸಾಮಾಜಿಕ ನ್ಯಾಯದ ಆಶಯಗಳನ್ನ ತಮ್ಮ ವಚನ ಹಾಗೂ ಕ್ರಿಯೆಗಳ ಮೂಲಕ ನಾಡಿನಲ್ಲಿ ಹರಡಿದವರು. ಜಾಗತಿಕ ಮಹತ್ವದ ಸಾಂಸ್ಕೃತಿಕ ಚಳವಳಿಯ ಮುಂದಾಳಾಗಿದ್ದ ಬಸೌಣ್ಣ ಅವರನ್ನು ಹಾಲಿ ರಾಜ್ಯ ಸರ್ಕಾರ 2024ರಲ್ಲಿ ʻಕರ್ನಾಟಕದ ಸಾಂಸೃತಿಕ ರಾಯಭಾರಿʼ ಎಂದು ಘೋಷಣೆ ಮಾಡಿತು.

ಕಾಂತಾರಾ – ಕೆಜಿಎಫ್‌ ಕಮಾಲ್‌
20ರ ದಶಕದ ಮಧ್ಯೆ ಕೆಲ ವರ್ಷಗಳಲ್ಲಿ ಒಳ್ಳೆಯ ಸಿನಿಮಾಗಳು ಕಡಿಮೆಯಾಗಿದ್ದವು. ಒಂದಿಷ್ಟು ಥಿಯೇಟರ್‌ಗಳೂ ಬಂದ್‌ ಆದವು. ಆದ್ರೆ 2022ರಲ್ಲಿ ತೆರೆ ಕಂಡ ಕೆಜಿಎಫ್‌, ಕಾಂತಾರಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದವು. ಕನ್ನಡ ಚಿತ್ರರಂಗದತ್ತ ಬಾಲಿವುಡ್‌ ಸಹ ತಿರುಗಿನೋಡುವಂತೆ ಈ ಸಿನಿಮಾಗಳು ಹೊಸ ದಾಖಲೆ ಸೃಷ್ಟಿಸಿದವು.

The post ನವೆಂಬರ್ 1  ಕನ್ನಡ ರಾಜ್ಯೋತ್ಸವ ವಿಶೇಷ ಇತಿಹಾಸವನ್ನೊಮ್ಮೆ ನೀವೂ ತಿಳಿಯಿರಿ. appeared first on Good News 24x7.

]]>
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’ ಎಂದ ಅಶ್ವಿನಿ ಗೌಡ https://www.goodnews24x7.com/ashwini-gowda-says-janvis-friendship-has-tarnished-my-name/ Mon, 27 Oct 2025 06:52:16 +0000 https://www.goodnews24x7.com/?p=7883   ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಸದಾ ಒಟ್ಟಿಗೆ ಇರುತ್ತಿದ್ದರು. ಆದರೆ, ಇವರು ಒಟ್ಟಾಗಿ ಇರೋದು ಯಾವ ರೀತಿ ಕಾಣಿಸುತ್ತಿದೆ ಎಂಬ ಸತ್ಯವನ್ನು ಸುದೀಪ್ ಹೇಳಿದ್ದರು. ಇದಾದ ಬಳಿಕ ಇಬ್ಬರೂ ಬದಲಾದಂತೆ ಕಾಣುತ್ತಿದೆ. ‘ಜಾನ್ವಿ…

The post ‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’ ಎಂದ ಅಶ್ವಿನಿ ಗೌಡ appeared first on Good News 24x7.

]]>

 

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಸದಾ ಒಟ್ಟಿಗೆ ಇರುತ್ತಿದ್ದರು. ಆದರೆ, ಇವರು ಒಟ್ಟಾಗಿ ಇರೋದು ಯಾವ ರೀತಿ ಕಾಣಿಸುತ್ತಿದೆ ಎಂಬ ಸತ್ಯವನ್ನು ಸುದೀಪ್ ಹೇಳಿದ್ದರು. ಇದಾದ ಬಳಿಕ ಇಬ್ಬರೂ ಬದಲಾದಂತೆ ಕಾಣುತ್ತಿದೆ. ‘ಜಾನ್ವಿ ಗೆಳೆತನದಿಂದ ನನ್ನ ಹೆಸರಿಗೆ ಕಳಂಕ ಬರುತ್ತಿದೆ’ ಎಂದು ಅಶ್ವಿನಿ ಹೇಳಿದ್ದಾರೆ. ಇದರಿಂದ ಜಾನ್ವಿಗೆ ಕೋಪ ಬಂದಿದೆ. ಇಬ್ಬರೂ ಫ್ರೆಂಡ್​ಶಿಪ್ ಮುರಿದುಕೊಳ್ಳುವ ಸೂಚನೆ ನೀಡಿದ್ದಾರೆ.

The post ‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’ ಎಂದ ಅಶ್ವಿನಿ ಗೌಡ appeared first on Good News 24x7.

]]>
‘ನಾನು ನಿನ್ನ ಮಿಸ್ ಮಾಡಿಕೊಳ್ತೀನಿ’; ಬಿಗ್ ಬಾಸ್​ನಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್ https://www.goodnews24x7.com/i-miss-you-suraj-hugs-rashika-who-left-bigg-boss/ Mon, 27 Oct 2025 05:55:12 +0000 https://www.goodnews24x7.com/?p=7877 Bigg Boss Kannada Elimination: ಬಿಗ್ ಬಾಸ್ ಕನ್ನಡ ಸೀಸನ್ 12ರ ನಾಲ್ಕನೇ ವಾರ ದೀಪಾವಳಿ ಪ್ರಯುಕ್ತ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಯಿತು. ರಾಶಿಕಾ ಮತ್ತು ಸ್ಪಂದನಾ ಮನೆಯಿಂದ ಹೊರಹೋಗುವವರ ಲಿಸ್ಟ್‌ನಲ್ಲಿದ್ದರು. ಸೂರಜ್ ರಾಶಿಕಾರನ್ನು ಅಪ್ಪಿಕೊಂಡರು. ಕೊನೆಗೆ ಇದು ಪ್ರ್ಯಾಂಕ್ ಎಂದು ತಿಳಿದು…

The post ‘ನಾನು ನಿನ್ನ ಮಿಸ್ ಮಾಡಿಕೊಳ್ತೀನಿ’; ಬಿಗ್ ಬಾಸ್​ನಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್ appeared first on Good News 24x7.

]]>

Bigg Boss Kannada Elimination: ಬಿಗ್ ಬಾಸ್ ಕನ್ನಡ ಸೀಸನ್ 12ರ ನಾಲ್ಕನೇ ವಾರ ದೀಪಾವಳಿ ಪ್ರಯುಕ್ತ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಯಿತು. ರಾಶಿಕಾ ಮತ್ತು ಸ್ಪಂದನಾ ಮನೆಯಿಂದ ಹೊರಹೋಗುವವರ ಲಿಸ್ಟ್‌ನಲ್ಲಿದ್ದರು. ಸೂರಜ್ ರಾಶಿಕಾರನ್ನು ಅಪ್ಪಿಕೊಂಡರು. ಕೊನೆಗೆ ಇದು ಪ್ರ್ಯಾಂಕ್ ಎಂದು ತಿಳಿದು ಸ್ಪರ್ಧಿಗಳು ನಿಟ್ಟುಸಿರು ಬಿಟ್ಟರು.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBk 12) ನಾಲ್ಕನೇ ವೀಕೆಂಡ್​ನಲ್ಲಿ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಗಿದೆ. ದೀಪಾವಳಿ ಪ್ರಯುಕ್ತ ಯಾವುದೇ ಎಲಿಮಿನೇಷನ್ ಇರೋದಿಲ್ಲ ಎಂದು ವೀಕ್ಷಕರಿಗೆ ಮೊದಲೇ ತಿಳಿಸಲಾಗಿತ್ತು. ಆದರೆ, ಬಿಗ್ ಬಾಸ್​ನಲ್ಲಿ ಇದ್ದ ಸ್ಪರ್ಧಿಗಳಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲ. ಪ್ರ್ಯಾಂಕ್ ಎಲಿಮಿನೇಷನ್​ಗೆ ರಾಶಿಕಾ ಹಾಗೂ ಸ್ಪಂದನಾ ಸೋಮಣ್ಣ ಒಂದು ಕ್ಷಣ ಕಂಗಾಲಾದರು. ಮನೆಯಿಂದ ಹೊರ ಹೊರಟ ರಾಶಿಕಾನ ಸೂರಜ್ ತಬ್ಬಿದ್ದಾರೆ.

ಸೂರಜ್ ಹಾಗೂ ರಾಶಿಕಾ ಮಧ್ಯೆ ಪ್ರೀತಿ ಮೂಡುತ್ತಿರುವುದು ಸ್ಪಷ್ಟವಾಗುತ್ತಿದೆ. ಆದರೆ, ನೋಡುಗರಿಗೆ ಇದು ತುಂಬಾನೇ ನಾಟಕೀಯ ಎನಿಸುತ್ತಿದೆ. ಜನಪ್ರಿಯತೆ ಗಳಿಸಬೇಕು ಎಂಬ ಕಾರಣಕ್ಕೆ ರಾಶಿಕಾ ಅವರು ಈ ರೀತಿಯ ಪ್ರೀತಿ ನಾಟಕ ಮಾಡುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಸುದೀಪ್ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಹೀಗೆ ಮುಂದುವರಿದರೆ ಆಟ ಶೀಘ್ರವೇ ಕೊನೆ ಆಗುತ್ತದೆ ಎಂದು ರಾಶಿಕಾಗೆ ಸುದೀಪ್ ಬುದ್ಧಿಮಾತು ಹೇಳಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಗ್ ಬಾಸ್ ರಾಶಿಕಾಗೆ ಚಮಕ್ ನೀಡಿದರು. ನಾಮಿನೇಟ್ ಆದವರ ಪೈಕಿ ಧ್ರುವಂತ್, ರಾಶಿಕಾ ಹಾಗೂ ಸ್ಪಂದನಾ ಅವರು ಅಂತಿಮವಾಗಿ ಉಳಿದುಕೊಂಡರು. ಈ ಪೈಕಿ ಧ್ರುವಂತ್ ಸೇವ್ ಆದರು. ಈ ಬೆನ್ನಲ್ಲೇ, ‘ರಾಶಿಕಾ ಹಾಗೂ ಸ್ಪಂದನಾ ನೀವಿನ್ನು ಮನೆಯಿಂದ ಹೊರಡಬಹುದು’ ಎಂದರು. ಇದರಿಂದ ರಾಶಿಕಾ ಹಾಗೂ ಸ್ಪಂದನಾ ಕಣ್ಣೀರು ಹಾಕಲು ಆರಂಭಿಸಿದರು.

ಓಡಿ ಬಂದ ಸೂರಜ್ ಅವರು ರಾಶಿಕಾನ ತಬ್ಬಿಕೊಂಡರು. ಸೂರಜ್​ಗೂ ಇದು ಸಾಕಷ್ಟು ಬೇಸರ ಮೂಡಿಸಿತು. ‘ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಸೂರಜ್ ಹೇಳಿದರು. ಆ ಬಳಿಕ ಮುಖ್ಯದ್ವಾರ ಓಪನ್ ಆದಾಗ, ‘ಎಲಿಮಿನೇಷನ್ ಇರೋದಿಲ್ಲ’ ಎಂಬ ಬೋರ್ಡ್ ಕಂಡು ರಾಶಿಕಾ ಹಾಗೂ ಸ್ಪಂದನಾ ಖುಷಿ ಆದರು. ಈ ವೇಳೆ ಮತ್ತೆ ಓಡೋಡಿ ಬಂದ ಸೂರಜ್ ರಾಶಿಕಾನ ಮತ್ತೆ ತಬ್ಬಿಕೊಂಡರು.

The post ‘ನಾನು ನಿನ್ನ ಮಿಸ್ ಮಾಡಿಕೊಳ್ತೀನಿ’; ಬಿಗ್ ಬಾಸ್​ನಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್ appeared first on Good News 24x7.

]]>
‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ https://www.goodnews24x7.com/kantara-cap%e1%b9%adar-1era%e1%b8%8du-varaga%e1%b8%b7alli-visvadyanta-717-50-ko%e1%b9%adi-ru-kalek%e1%b9%a3an-kantarachapter1movieactorrishabshettyindianboxofficetamiltelugu/ Sun, 19 Oct 2025 10:09:28 +0000 https://www.goodnews24x7.com/?p=7778 ‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ…

The post ‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ appeared first on Good News 24x7.

]]>

‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ಕಲೆಕ್ಷನ್ ವರದಿ ಇಲ್ಲಿದೆ.

ನಟ ರಿಷಬ್ ಶೆಟ್ಟಿ (Rishab Shetty) ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಅತಿ ಬೇಡಿಕೆಯ ನಟನಾಗಿ, ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಗೆಲುವು. ಅಕ್ಟೋಬರ್ 2ರಂದು ಬಿಡುಗಡೆ ಆದ ಈ ಸಿನಿಮಾ ಇಂದಿಗೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಭಾಷೆಗಳಲ್ಲೂ ಅಬ್ಬರಿಸುತ್ತಿದೆ. 17 ದಿನಗಳು ಕಳೆದರೂ ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಉತ್ತಮವಾಗಿಯೇ ಕಲೆಕ್ಷನ್ (Kantara Chapter 1 Collection) ಆಗುತ್ತಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾದ ಗಳಿಕೆ 500 ಕೋಟಿ ರೂಪಾಯಿ ಮೀರಿದೆ.

ಈ ಬಗ್ಗೆ ಇಲ್ಲಿದೆ ವಿವರ Sacnilk ವರದಿ ಪ್ರಕಾರ ‘ಕಾಂತಾರ: ಚಾಪ್ಟರ್ 1’ ಸಿನಿಮಾ 17ನೇ ದಿನ ಭಾರತದ ಗಲ್ಲಾಪೆಟ್ಟಿಗೆಯಲ್ಲಿ 12.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಲ್ಲಿಗೆ, ಭಾರತದಲ್ಲಿ ಸಿನಿಮಾದ ಒಟ್ಟು ಕಲೆಕ್ಷನ್ 506 ಕೋಟಿ ರೂಪಾಯಿ ಆಗಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಯಲ್ಲಿ ಬಿಡುಗಡೆ ಆದ ಈ ಸಿನಿಮಾಗೆ ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಭಾರತದ ಆಚೆ ಕೂಡ ಹಲವು ದೇಶಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಉತ್ತಮವಾಗಿ ಪ್ರದರ್ಶನ ಕಂಡಿದೆ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯೇ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಎರಡು ವಾರಗಳಲ್ಲಿ ಈ ಸಿನಿಮಾಗೆ ವಿಶಾದ್ಯಂತ 717.50 ಕೋಟಿ ರೂಪಾಯಿ ಆಗಿದೆ. ಇನ್ನೂ ಹೆಚ್ಚಿನ ಕಲೆಕ್ಷನ್ ಮಾಡುವ ಸಾಧ್ಯತೆ ದಟ್ಟವಾಗಿದೆ.

ಭಾನುವಾರ (ಅಕ್ಟೋಬರ್ 19) ಕೂಡ ಅನೇಕ ಕಡೆಗಳಲ್ಲಿ ಬುಕಿಂಗ್ ಚೆನ್ನಾಗಿದೆ. ಅಲ್ಲದೇ, ದೀಪಾವಳಿ ಹಬ್ಬದ ರಜೆ ಬಂದಿರುವುದರಿಂದ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರ ಸಂಖ್ಯೆ ಹೆಚ್ಚುವ ನಿರೀಕ್ಷೆ ಜಾಸ್ತಿ ಇದೆ. ಈ ಎಲ್ಲದರ ಪರಿಣಾಮವಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇನ್ನೂ ಉತ್ತಮವಾಗಿ ಕಲೆಕ್ಷನ್ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಗೆ ಭರ್ಜರಿ ಲಾಭ ಆಗಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಾಗಿದೆ. ನಟಿ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಫೇಮಸ್ ಆಗಿದ್ದಾರೆ. ಪರಭಾಷೆ ಮಂದಿ ಮತ್ತೆ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ರಿಷಬ್ ಶೆಟ್ಟಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ.

The post ‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ appeared first on Good News 24x7.

]]>
ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ https://www.goodnews24x7.com/famous-indian-singer-dies-in-scuba-diving-accident-in-singapore/ Fri, 19 Sep 2025 10:59:22 +0000 https://www.goodnews24x7.com/?p=7586 Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.…

The post ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ appeared first on Good News 24x7.

]]>

Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ ಸಮುದ್ರದಲ್ಲಿ ಈಜಾಟ) ಸಾಹಸ ಮಾಡುವಾಗ ಜುಬೀನ್ ಗರ್ಗ್ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಸಿಂಗಪುರದ ಸ್ಥಳೀಯ ಪೊಲೀಸರ ವರದಿಯಂತೆ ಜುಬೀನ್ ಗರ್ಗ್ ಅವರನ್ನು ನದಿಯೊಂದರಿಂದ ಹೊರಗೆ ತೆಗೆಯಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಂತೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಜುಬೀನ್ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

 

ಅಸ್ಸಾಂ ಮೂಲದವರಾದ ಜುಬೀನ್ ಗರ್ಗ್ ಅವರು ಅಸ್ಸಾಮಿ ಸಿನಿಮಾಗಳ ಖ್ಯಾತ ನಟ ಆಗಿದ್ದರು. ಮಾತ್ರವಲ್ಲದೆ ಹಲವಾರು ಹಿಂದಿ, ಬೆಂಗಾಲಿ, ಅಸ್ಸಾಮಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಪಂಜಾಬಿ, ಒಡಿಯಾ, ಬೋಡೊ, ಕರ್ಬಿ, ತಿವಾ, ನೇಪಾಳಿ, ಭೋಜ್​​ಪುರಿ, ಭಿಷ್ಣುಪ್​ರಿಯ ಮಣಿಪುರಿ ಇನ್ನೂ ಕೆಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದರು. ಎಆರ್ ರೆಹಮಾನ್ ಸೇರಿದಂತೆ ಇನ್ನೂ ಕೆಲವು ಅತ್ಯುತ್ತಮ ಸಂಗೀತ ನಿರ್ದೇಶಕರುಗಳ ಮೆಚ್ಚಿನ ಗಾಯಕರಾಗಿದ್ದರು ಜುಬೀನ್ ಗರ್ಗ್.

ಕನ್ನಡದಲ್ಲಿ ಗಣೇಶ್ ನಟಿಸಿರುವ ‘ಹುಡುಗಾಟ’ ಸಿನಿಮಾದ ‘ಒಮ್ಮೊಮ್ಮೆ ಹೀಗೂ’, ‘ಮಹಾರುದ್ರ’ ಸಿನಿಮಾದ ‘ಅಮ್ಮಾ ನೀನು’, ‘ಪರಿಚಯ’ ಸಿನಿಮಾದ ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದಾರೆ. ಹಿಂದಿಯಲ್ಲಿ ‘ದಿಲ್ ಸೇ’ , ‘ಗ್ಯಾಂಗ್​​ಸ್ಟರ್’, ‘ಅಶೋಕಾ’, ‘ಕ್ರಿಶ್’,‘ಆನ್’, ಇನ್ನೂ ಹಲವಾರು ಜನಪ್ರಿಯ ಸಿನಿಮಾಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ‘ಗ್ಯಾಂಗ್​​ಸ್ಟರ್’ ಸಿನಿಮಾದ ‘ಯಾ ಆಲಿ’ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು, ‘ದಿಲ್ ಸೇ’ ಸಿನಿಮಾದ ‘ಪಾಕಿ ಪಾಕಿ ಪರದೇಸಿ’ ‘ಕಾಂಟೆ’ ಸಿನಿಮಾದ ‘ಮಾಹಿ ವೇ’ ಇನ್ನೂ ಹಲವಾರು ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದರು.

ಬಹುಮುಖ ಪ್ರತಿಭೆ ಹೊಂದಿದ್ದ ಜುಬೀನ್ ಗಾಯಕರಾಗಿ ಮಾತ್ರವೇ ಅಲ್ಲದೆ ಅಸ್ಸಾಮಿ ಭಾಷೆಯ ಹಲವಾರು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ಜೊತೆಗೆ ಸಂಗೀತ ನಿರ್ದೇಶನ, ಗೀತ ರಚನೆ, ಚಿತ್ರಕತೆ ರಚನೆ, ಸಿನಿಮಾ ನಿರ್ಮಾಣಗಳನ್ನು ಸಹ ಜುಬೀನ್ ಗರ್ಗ್ ಮಾಡಿದ್ದಾರೆ. ಇದೀಗ ಖ್ಯಾತ ಗಾಯಕನ ನಿಧನಕ್ಕೆ ಹಲವಾರು ಸಂಗೀತಗಾರರು, ಸಂಗೀತ ನಿರ್ದೇಶಕರುಗಳು ಕಂಬನಿ ಮಿಡಿದಿದ್ದಾರೆ. ಸಿನಿಮಾ ನಟರುಗಳು ಕಂಬನಿ ಮಿಡಿದಿದ್ದಾರೆ.

The post ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ appeared first on Good News 24x7.

]]>
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ಪ್ರಶಸ್ತಿ: ಅಭಿಮಾನಿಗಳಿಗೆ ಸಂಭ್ರಮ https://www.goodnews24x7.com/karnataka-ratna-award-for-vishnuvardhan-fans-are-excited/ Fri, 12 Sep 2025 09:46:03 +0000 https://www.goodnews24x7.com/?p=7486 ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಕುಟುಂಬದವರ ಬಹುಕಾಲದ ಬೇಡಿಕೆ ಈಡೇರಿದೆ. ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ವಿಷ್ಣುವರ್ಧನ್ ಅವರಿಗೆ ಗೌರವ ಸಲ್ಲಿಸಲಾಗಿದೆ. ಬಿ. ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ನಟ ವಿಷ್ಣುವರ್ಧನ್…

The post ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ಪ್ರಶಸ್ತಿ: ಅಭಿಮಾನಿಗಳಿಗೆ ಸಂಭ್ರಮ appeared first on Good News 24x7.

]]>

ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಕುಟುಂಬದವರ ಬಹುಕಾಲದ ಬೇಡಿಕೆ ಈಡೇರಿದೆ. ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ವಿಷ್ಣುವರ್ಧನ್ ಅವರಿಗೆ ಗೌರವ ಸಲ್ಲಿಸಲಾಗಿದೆ. ಬಿ. ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ನಟ ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂಬುದು ಅಭಿಮಾನಿಗಳು ಹಾಗೂ ಕುಟುಂಬದವರ ಒತ್ತಾಯ ಆಗಿತ್ತು. ಆ ಮನವಿಯನ್ನು ಸರ್ಕಾರ ಪುರಸ್ಕರಿಸಿದೆ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರಣೋತ್ತವರಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. ಈ ಸುದ್ದಿ ತಿಳಿದ ಕೂಡಲೇ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಎಲ್ಲರೂ ಸಂಭ್ರಮಿಸುತ್ತಿದ್ದಾರೆ.

ವಿಷ್ಣುವರ್ಧನ್​ ಅಳಿಯ ಅನಿರುದ್ಧ್​ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಅಪ್ಪಾಜಿಗೆ ಕರ್ನಾಟಕ ರತ್ನ ಘೋಷಿಸಿದ್ದಕ್ಕೆ ಖುಷಿ ಆಯಿತು. ಅಪ್ಪಾಜಿಯವರು ಈ ಕರ್ನಾಟಕ ರತ್ನ ಪ್ರಶಸ್ತಿಗೆ ಅರ್ಹರು. ಅವರು ಯಾವಾಗಲೂ ನಮ್ಮೊಂದಿಗೆ ಇರುತ್ತಾರೆ. ಕನ್ನಡ ಚಿತ್ರರಂಗದ ಎಲ್ಲ ಕಲಾವಿದರಿಗೆ ನನ್ನ ಧನ್ಯವಾದಗಳು’ ಎಂದು ಅನಿರುದ್ಧ್ ಹೇಳಿದ್ದಾರೆ.
ಅಭಿಮಾನಿಗಳ ಪಾಲಿಗೆ ವಿಷ್ಣುವರ್ಧನ್ ಅವರು ಕೋಟಿಗೊಬ್ಬ. ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಸಿಕ್ಕಿರುವುದು ನಿಜಕ್ಕೂ ಸಂತಸ ತಂದಿದೆ. ‘ಕೋಟಿಗೊಬ್ಬ’ ಸಿನಿಮಾದ ಹಾಡಿನ ದೃಶ್ಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ವಿಷ್ಣುವರ್ಧನ್ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಲವು ರೀತಿಯ ಮೀಮ್ಸ್ ವೈರಲ್ ಆಗುತ್ತಿವೆ.

200ಕ್ಕೂ ಅಧಿಕ ಸಿನಿಮಾಗಳಲ್ಲಿ ಡಾ. ವಿಷ್ಣುವರ್ಧನ್ ಅವರು ನಟಿಸಿದ್ದರು. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದರು. 1972ರಿಂದ 2009ರ ತನಕ ಅವರು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ನಾಗರಹಾವು, ಭೂತಯ್ಯನ ಮಗ ಅಯ್ಯು, ಬಂಧನ, ಮುತ್ತಿನ ಹಾರ, ಯಜಮಾನ, ಹಾಲುಂಡ ತವರು, ಜೀವನದಿ, ಕೋಟಿಗೊಬ್ಬ, ಸೂರ್ಯವಂಶ, ಸಿಂಹಾದ್ರಿಯ ಸಿಂಹ, ಆಪ್ತಮಿತ್ರ ಮುಂತಾದ ಸಿನಿಮಾಗಳನ್ನು ಅಭಿಮಾನಿಗಳು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಈ ವರ್ಷ ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಕೇಳಿಬಂತು. ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣು ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಯಿತು. ಆ ಘಟನೆಯನ್ನು ಅಭಿಮಾನಿಗಳು ಹಾಗೂ ಅನೇಕ ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ವಿಷ್ಣುವರ್ಧನ್ ಪುಣ್ಯಭೂಮಿಯನ್ನು ಮತ್ತೆ ಪಡೆಯಲು ಅಭಿಮಾನಿಗಳು ಸರ್ಕಾರಕ್ಕೆ ಒತ್ತಾಯ ಹೇರಿದ್ದಾರೆ.

The post ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ಪ್ರಶಸ್ತಿ: ಅಭಿಮಾನಿಗಳಿಗೆ ಸಂಭ್ರಮ appeared first on Good News 24x7.

]]>