karnataka politics Archives - Good News 24x7 https://www.goodnews24x7.com/tag/karnataka-politics/ Kannada Fri, 30 May 2025 11:20:17 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg karnataka politics Archives - Good News 24x7 https://www.goodnews24x7.com/tag/karnataka-politics/ 32 32 ಡಿಕೆಶಿ ಅವರ ಪ್ರವಾಹ ವೀಕ್ಷಣೆಯ ಭೇಟಿ ಕುರಿತು ನೇರ ಪ್ರಶ್ನೆ ಮಾಡಿದ ಹೆಚ್.ಡಿ.ಕೆ…. https://www.goodnews24x7.com/%e0%b2%a1%e0%b2%bf%e0%b2%95%e0%b3%86%e0%b2%b6%e0%b2%bf-%e0%b2%85%e0%b2%b5%e0%b2%b0-%e0%b2%aa%e0%b3%8d%e0%b2%b0%e0%b2%b5%e0%b2%be%e0%b2%b9-%e0%b2%b5%e0%b3%80%e0%b2%95%e0%b3%8d%e0%b2%b7%e0%b2%a3/ Fri, 30 May 2025 11:20:07 +0000 https://www.goodnews24x7.com/?p=4160 ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ…

The post ಡಿಕೆಶಿ ಅವರ ಪ್ರವಾಹ ವೀಕ್ಷಣೆಯ ಭೇಟಿ ಕುರಿತು ನೇರ ಪ್ರಶ್ನೆ ಮಾಡಿದ ಹೆಚ್.ಡಿ.ಕೆ…. appeared first on Good News 24x7.

]]>

ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಕಾಲೆಳೆದಿದ್ದಾರೆ. ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿಕೆ ಕೇಳಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

The post ಡಿಕೆಶಿ ಅವರ ಪ್ರವಾಹ ವೀಕ್ಷಣೆಯ ಭೇಟಿ ಕುರಿತು ನೇರ ಪ್ರಶ್ನೆ ಮಾಡಿದ ಹೆಚ್.ಡಿ.ಕೆ…. appeared first on Good News 24x7.

]]>
ಬಿ.ಜೆ.ಪಿ ಪಕ್ಷದಿಂದ ಶಾಸಕ ಎಸ್.ಟಿ ಸೋಮಶೇಖರ್ ಉಚ್ಚಾಟನೆ….!! https://www.goodnews24x7.com/%e0%b2%ac%e0%b2%bf-%e0%b2%9c%e0%b3%86-%e0%b2%aa%e0%b2%bf-%e0%b2%aa%e0%b2%95%e0%b3%8d%e0%b2%b7%e0%b2%a6%e0%b2%bf%e0%b2%82%e0%b2%a6-%e0%b2%b6%e0%b2%be%e0%b2%b8%e0%b2%95-%e0%b2%8e%e0%b2%b8%e0%b3%8d/ Tue, 27 May 2025 11:49:10 +0000 https://www.goodnews24x7.com/?p=4097 ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬರೋಬ್ಬರಿ ಎರಡು ವರ್ಷದ ಬಳಿಕ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಕ್ರಮಕೈಗೊಂಡಿದೆ. ಇನ್ನು ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್…

The post ಬಿ.ಜೆ.ಪಿ ಪಕ್ಷದಿಂದ ಶಾಸಕ ಎಸ್.ಟಿ ಸೋಮಶೇಖರ್ ಉಚ್ಚಾಟನೆ….!! appeared first on Good News 24x7.

]]>

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬರೋಬ್ಬರಿ ಎರಡು ವರ್ಷದ ಬಳಿಕ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಕ್ರಮಕೈಗೊಂಡಿದೆ. ಇನ್ನು ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳನಂತಿದೆ.ಬಿಜೆಪಿಯಿಂದ ಗೆದ್ದು ವಿಧಾನಸಭೆ ಪ್ರವೇಶಿಸಿರುವ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅಮವಾಸ್ಯೆ ದಿನ ಒಳ್ಳೆ ನಿರ್ಧಾರ ಕೈಗೊಂಡಿದ್ದಾರೆ. ಬೆಳಗ್ಗೆ 10.30ರಲ್ಲಿ ಮೊಬೈಲ್ ನೋಡಿದಾಗ ಈ ವಿಚಾರ ತಿಳಿಯಿತು. ಚುನಾವಣೆ ವೇಳೆಗೆ ಬಿಜೆಪಿಯಲ್ಲಿ ಇನ್ನೂ 10-12 ಸೀಟ್ ಖಾಲಿ ಆಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಪಕ್ಷದಿಂದ ನಮ್ಮನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿತ್ತು. ಆದ್ರೆ ಯಾವಾಗ ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿರಲಿಲ್ಲ. 6 ವರ್ಷಗಳ ಕಾಲ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಾರೆ. ನೋಟಿಸ್ ಕೊಡುವ ಮುನ್ನ ಅಮಿತ್ ಶಾ ನನ್ನ ಜತೆ ಮಾತಾಡಿದ್ದರು. ಕ್ಷೇತ್ರದಲ್ಲಿರುವ ಭಿನ್ನಮತದ ಬಗ್ಗೆ ಅಮಿತ್ ಶಾ ಜತೆ ಮಾತನಾಡಿದ್ದೆ. ಸಮಸ್ಯೆ ಬಗೆಹರಿಸದಿದ್ದರೆ ಪಕ್ಷ ತೊರೆಯುವುದಾಗಿ ನಾನು ಹೇಳಿದ್ದೆ. ಬಿಜೆಪಿಯ ಯಾರೂ ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಲಿಲ್ಲ. ಅಮಾವಾಸ್ಯೆಯ ದಿನ ಒಳ್ಳೆಯದು ಮಾಡಿದ್ದಾರೆ. ಸಂತೋಷವಾಗಿದ್ದೇನೆ. ಚುನಾವಣೆ ವೇಳೆಗೆ ಬಿಜೆಪಿಯಲ್ಲಿ ಇನ್ನೂ 10-12 ಸೀಟ್ ಖಾಲಿ ಆಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದರು.

ಉಚ್ಚಾಟನೆ ಮಾಡಿದವರಿಗೆ ಚಾಮುಂಡೇಶ್ವರಿ ಆರೋಗ್ಯ ಭಾಗ್ಯ ಕೊಟ್ಟು ಕಾಪಾಡಲಿ. ನಮ್ಮ ಉಚ್ಚಾಟನೆಗೂ, ಯತ್ನಾಳ್ ಉಚ್ಚಾಟನೆಗೂ ತುಂಬಾ ವ್ಯತ್ಯಾಸವಿದೆ. ಯತ್ನಾಳ್ ರನ್ನ ಅಂದೇ ಉಚ್ಚಾಟಿಸಿದ್ದರೆ ಬಿಜೆಪಿ ಸರ್ಕಾರ ಹೋಗುತ್ತಿರಲಿಲ್ಲ. ಬಿಜೆಪಿಯ ಒಬ್ಬ ಶಾಸಕ ವಿಧಾನಸೌಧದಲ್ಲಿ ರೇಪ್ ಮಾಡುತ್ತಾನೆ. ವಿಪಕ್ಷ ನಾಯಕರಿಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಪ್ರಯತ್ನ ಮಾಡುತ್ತಾರೆ. ಒಕ್ಕಲಿಗ ಹೆಣ್ಮಗಳನ್ನು ಮಂಚಕ್ಕೆ ಕರೆಯುವುದನ್ನು ಎಲ್ಲಾದ್ರೂ ಕೇಳಿದ್ದೀರಾ? ಬಿಜೆಪಿ ಪ್ರಾಮಾಣಿಕ ಆಗಿದ್ದರೆ ಇಂತಹವರನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಪರೋಕ್ಷವಾಗಿ ಶಾಸಕ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು. ಉಚ್ಚಾಟನೆಯಲ್ಲಿ ಬಿಎಸ್ವೈ, ವಿಜಯೇಂದ್ರರದ್ದು ಯಾವ ಪಾತ್ರ. ಉಳಿದ ನಾಯಕರೂ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ನಾನಾಗಿ ಹೋಗಿ ಮೇಲೆ ಬಿದ್ದು ಕೇಳುವ ಮನಸ್ಸು ನನ್ನದಲ್ಲ. ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉಳಿಸಿಕೊಳ್ಳುವ ಪ್ರಯತ್ನ ಮಾಡ್ಲಿಲ್ಲ. ಇಬ್ಬರೂ ಕೂಡ 100% ನನ್ನ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ಅವರು ಪ್ರಯತ್ನ ಮಾಡಿದ್ದರೆ ಇಂದು ನಾನು ಉಚ್ಚಾಟನೆ ಆಗುತ್ತಿರಲಿಲ್ಲ ಎಂದರು.

The post ಬಿ.ಜೆ.ಪಿ ಪಕ್ಷದಿಂದ ಶಾಸಕ ಎಸ್.ಟಿ ಸೋಮಶೇಖರ್ ಉಚ್ಚಾಟನೆ….!! appeared first on Good News 24x7.

]]>
‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… https://www.goodnews24x7.com/one-more-step-to-prove-siddapara-you-are-not-as-brave-as-i-thought-hd-kumaraswamy/ Fri, 27 Sep 2024 04:23:28 +0000 https://www.goodnews24x7.com/?p=669 ‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ…

The post ‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… appeared first on Good News 24x7.

]]>

‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು…

ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ.

ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ? ಮುಡಾಸಿದ್ವಿಲಾಸ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

The post ‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… appeared first on Good News 24x7.

]]>