Karnatakagovernment Archives - Good News 24x7 https://www.goodnews24x7.com/tag/karnatakagovernment/ Kannada Wed, 08 Jul 2026 12:35:08 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Karnatakagovernment Archives - Good News 24x7 https://www.goodnews24x7.com/tag/karnatakagovernment/ 32 32 ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ https://www.goodnews24x7.com/new-commissioner-appointed-for-mysore-city-corporation/ Wed, 08 Jul 2026 12:35:08 +0000 https://www.goodnews24x7.com/?p=9815 ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಮರುಜೀವ ನೀಡಿದ್ದು, ರಾಜ್ಯದ ಹಿರಿಯ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ದಿಢೀರ್ ಆದೇಶ ಹೊರಡಿಸಿದೆ. ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ನಡೆದಿರುವ ಈ ಪ್ರಕ್ರಿಯೆಯಲ್ಲಿ, ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಮುಖ ಆಡಳಿತಾತ್ಮಕ ಬದಲಾವಣೆ ತರಲಾಗಿದೆ. ಮೈಸೂರು…

The post ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ appeared first on Good News 24x7.

]]>

ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಮರುಜೀವ ನೀಡಿದ್ದು, ರಾಜ್ಯದ ಹಿರಿಯ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ದಿಢೀರ್ ಆದೇಶ ಹೊರಡಿಸಿದೆ. ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ನಡೆದಿರುವ ಈ ಪ್ರಕ್ರಿಯೆಯಲ್ಲಿ, ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಮುಖ ಆಡಳಿತಾತ್ಮಕ ಬದಲಾವಣೆ ತರಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ (MCC) ನೂತನ ಆಯುಕ್ತರಾಗಿ ಹಿರಿಯ ಕೆಎಎಸ್ (ಆಯ್ಕೆ ಶ್ರೇಣಿ) ಅಧಿಕಾರಿ ಎಂ.ಕೆ. ಸವಿತಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹೊರಡಿಸಿರುವ ಅಧಿಕೃತ ಆದೇಶದನ್ವಯ, ನಿಯೋಜನೆಗೊಂಡಿರುವ ಅಧಿಕಾರಿಗಳು ಯಾವುದೇ ವಿಳಂಬವಿಲ್ಲದೆ ತಕ್ಷಣದಿಂದಲೇ ಜಾರಿಗೆ ಬರುವಂತೆ ತಮ್ಮ ಹೊಸ ಹುದ್ದೆಗಳ ಜವಾಬ್ದಾರಿಯನ್ನು ವಹಿಸಿಕೊಂಡು, ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಲಾಗಿದೆ.ಮೈಸೂರು ಆಡಳಿತದ ಅತಿ ಹತ್ತಿರದ ಪರಿಚಯವಿರುವ ಅಧಿಕಾರಿ!ನೂತನ ಆಯುಕ್ತರಾಗಿ ನೇಮಕವಾಗಿರುವ ಎಂ.ಕೆ. ಸವಿತಾ ಅವರು ಮೈಸೂರು ಭಾಗದ ಆಡಳಿತ ವ್ಯವಸ್ಥೆಯಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ. ಈ ಹಿಂದೆ ಅವರು: ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ (Registrar) ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅದಕ್ಕೂ ಮುನ್ನ ಮೈಸೂರು ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾಗಿ (Joint Director) ಮೈಸೂರು ದಸರಾ ಸೇರಿದಂತೆ ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಮೂಡಾ (MUDA) ಕಾರ್ಯದರ್ಶಿಯಾಗಿ ಹಾಗೂ ಮೈಸೂರು ಪಾಲಿಕೆಯ ವಲಯ ಆಯುಕ್ತರಾಗಿಯೂ ಕೆಲಸ ಮಾಡಿದ ಅನುಭವ ಇವರಿಗಿದೆ. ಮೈಸೂರು ನಗರದ ಭೌಗೋಳಿಕತೆ, ಸಾಂಸ್ಕೃತಿಕ ಹಿನ್ನೆಲೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಅವರಿಗೆ ನಿಕಟ ಪರಿಚಯ ಇರುವುದರಿಂದ, ಪಾಲಿಕೆಯ ಆಯುಕ್ತರಾಗಿ ಅವರ ನೇಮಕ ಅತ್ಯಂತ ಸೂಕ್ತ ಹಾಗೂ ನಿರೀಕ್ಷಿತ ಎನ್ನಲಾಗಿದೆ.ಪ್ರಮುಖ ಸವಾಲುಗಳು ಮತ್ತು ನಿರೀಕ್ಷೆಗಳು:ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಹೆಗ್ಗಳಿಕೆಯ ಮೈಸೂರಿನ ಸಮಗ್ರ ಅಭಿವೃದ್ಧಿ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಗರಿಕ ಮೂಲಸೌಕರ್ಯಗಳ ಸುಧಾರಣೆ, ರಾಜಕಾಲುವೆಗಳ ಸ್ವಚ್ಛತೆ, ಮತ್ತು ಮಳೆಗಾಲದ ತುರ್ತು ಪರಿಸ್ಥಿತಿಗಳ ನಿರ್ವಹಣೆಯಲ್ಲಿ ನೂತನ ಆಯುಕ್ತರ ನಡೆ ಈಗ ಕುತೂಹಲ ಮೂಡಿಸಿದೆ. ಸ್ಥಳೀಯ ಆಡಳಿತಕ್ಕೆ ವೇಗ ನೀಡಲು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಲು ಈ ಆಡಳಿತಾತ್ಮಕ ಬದಲಾವಣೆ ಸಹಕಾರಿಯಾಗಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.ಡಿಜಿಟಲ್ ಮೀಡಿಯಾ ಶಾರ್ಟ್ ನೋಟ್ಸ್ (Short Points for Quick Read):ವರ್ಗಾವಣೆ ಆದೇಶ: ಕರ್ನಾಟಕ ಸರ್ಕಾರದಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ಹಿರಿಯ ಅಧಿಕಾರಿಗಳ ನಿಯೋಜನೆ. ಮೈಸೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಎಂ.ಕೆ. ಸವಿತಾ, ಕೆಎಎಸ್ (ಆಯ್ಕೆ ಶ್ರೇಣಿ).ಹಿಂದಿನ ಹುದ್ದೆ: ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ (Registrar) ಸೇವೆ ಸಲ್ಲಿಸುತ್ತಿದ್ದರು. ತಕ್ಷಣವೇ ಹೊಸ ಹುದ್ದೆಗೆ ಹಾಜರಾಗಿ ಅಧಿಕಾರ ಸ್ವೀಕರಿಸಲು ಆದೇಶ

The post ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ appeared first on Good News 24x7.

]]>
ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ https://www.goodnews24x7.com/government-green-signal-for-construction-of-sl-bhyrappa-memorial/ Thu, 25 Sep 2025 09:32:35 +0000 https://www.goodnews24x7.com/?p=7631 ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್​​ಎಲ್​ ಭೈರಪ್ಪ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸಾಹಿತ್ಯ ಕ್ಷೇತ್ರಕ್ಕೆ…

The post ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ appeared first on Good News 24x7.

]]>

ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್​​ಎಲ್​ ಭೈರಪ್ಪ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸಾಹಿತ್ಯ ಕ್ಷೇತ್ರಕ್ಕೆ ಭೈರಪ್ಪ ಅವರ ಕೊಡುಗೆಗಳನ್ನು ಸ್ಮರಿಸಿದರು.

ಬೆಂಗಳೂರು: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್​ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು. ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುನಾದಗೊಂಡಿವೆ. ಬಹುಶಃ ಕನ್ನಡದ ಇತರ ಯಾವ ಸಾಹಿತಿಯ ಕೃತಿಗಳೂ ಅಷ್ಟೊಂದು ಸಂಖ್ಯೆಯಲ್ಲಿ ಬೇರೆ ಭಾಷೆಗಳಿಗೆ ಅನುವಾದಗೊಂಡಿಲ್ಲ. ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ಕೂಡ ಸಿಗಬೇಕಿತ್ತು. ಅವರು ಅದಕ್ಕೆ ಅರ್ಹರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
ಅಂತಿಮ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಭೈರಪ್ಪ ಅವರ ಪತ್ನಿ ಹಾಗೂ ಮಕ್ಕಳ ಜತೆ ಕುಳಿತುಕೊಂಡು ಮಾತನಾಡಿ ಅವರಿಗೆ ಸಾಂತ್ವನ ಹೇಳಿದರು.

ಎಸ್ಎಲ್ ಭೈರಪ್ಪ ಬುಧವಾರ ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಸದ್ಯ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಅಂತಿಮ ದರ್ಶನ ನಡೆಯುತ್ತಿದ್ದು, ಮಧ್ಯಾಹ್ನದ ನಂತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇದೆ. ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

The post ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ appeared first on Good News 24x7.

]]>