KFI Archives - Good News 24x7 https://www.goodnews24x7.com/tag/kfi/ Kannada Sun, 31 Aug 2025 09:38:06 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg KFI Archives - Good News 24x7 https://www.goodnews24x7.com/tag/kfi/ 32 32 ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ https://www.goodnews24x7.com/shivarajkumars-new-movie-with-kvn-productions-directed-by-pawan-wadiyar/ Sun, 31 Aug 2025 09:38:06 +0000 https://www.goodnews24x7.com/?p=7085 ನಿರ್ದೇಶಕ ಪವನ್ ಒಡೆಯರ್ ಅವರು ಇದೇ ಮೊದಲ ಬಾರಿಗೆ ಶಿವರಾಜ್​​ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಕೂಡ ಮೊದಲ ಬಾರಿಗೆ ಶಿವಣ್ಣನ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಸೆಪ್ಟೆಂಬರ್ 3 ರಂದು ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ. ಹಲವು…

The post ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ appeared first on Good News 24x7.

]]>

ನಿರ್ದೇಶಕ ಪವನ್ ಒಡೆಯರ್ ಅವರು ಇದೇ ಮೊದಲ ಬಾರಿಗೆ ಶಿವರಾಜ್​​ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಕೂಡ ಮೊದಲ ಬಾರಿಗೆ ಶಿವಣ್ಣನ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಸೆಪ್ಟೆಂಬರ್ 3 ರಂದು ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ. ಹಲವು ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಜತೆ ಶಿವರಾಜ್​​ಕುಮಾರ್ ಹೊಸ ಸಿನಿಮಾ; ಪವನ್ ಒಡೆಯರ್ ನಿರ್ದೇಶನ

ಯಶ್ ನಟನೆಯ ‘ಟಾಕ್ಸಿಕ್’, ಧ್ರುವ ಸರ್ಜಾ ನಟನೆಯ ‘ಕೆಡಿ’, ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸೇರಿ ಹಲವು ಬಹುನಿರೀಕ್ಷಿತ ಸಿನಿಮಾಗಳನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಇತ್ತೀಚೆಗೆ ಈ ಸಂಸ್ಥೆ ತೆಲುಗು ಚಿತ್ರರಂಗಕ್ಕೂ ಎಂಟ್ರಿ ನೀಡಿತು. ಈಗ ನಟ ಶಿವರಾಜ್​​ಕುಮಾರ್ ಜೊತೆ ಸಿನಿಮಾ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಮುಂದಾಗಿದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಸಿನಿಮಾಗೆ ಸ್ಕ್ರಿಪ್ಟ್ ಪೂಜೆ ಮಾಡಲಾಯಿತು.

ನಿರ್ದೇಶಕ ಪವನ್‌ ಒಡೆಯರ್‌ ಅವರು ಪುನೀತ್‌ ರಾಜ್‌ಕುಮಾರ್‌ ಜೊತೆ ಎರಡು ಸಿನಿಮಾಗಳನ್ನು ಮಾಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಶಿವರಾಜ್‌ಕುಮಾರ್‌ ಜೊತೆ ಸಿನಿಮಾ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ. ಸೆಪ್ಟೆಂಬರ್ 3ರಂದು ಈ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ನಿರ್ದೇಶನ ಮಾಡುವುದರ ಜೊತೆಗೆ ಪವನ್ ಒಡೆಯರ್ ಅವರು ನಿರ್ಮಾಣದಲ್ಲೂ ಕೈ ಜೋಡಿಸುತ್ತಿದ್ದಾರೆ.

ವೆಂಕಟ್ ಕೊನಂಕಿ ಅವರ ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ಪವನ್ ಒಡೆಯರ್ ಅವರ ‘ಒಡೆಯರ್ ಮೂವೀಸ್’ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿವೆ. ದೇಶದ ಹಲವು ಭಾಗಗಳಲ್ಲಿ ಈ ಸಿನಿಮಾಗೆ ಶೂಟಿಂಗ್ ನಡೆಯಲಿದೆ. ಸೆಪ್ಟೆಂಬರ್ ‌3ರಂದು ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಶುರು ಆಗಲಿದೆ. ನಂತರ ಮಂಡ್ಯ , ಮುಂಬೈ, ಹೈದರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಇದು ಒಂದು ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಸಿನಿಮಾ ಆಗಿರಲಿದೆ ಎಂದು ಚಿತ್ರತಂಡ ಹೇಳಿದೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶಶಾಂಕ್ ನಾರಾಯಣ್ ಅವರು ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಶಿವರಾಜ್​​ಕುಮಾರ್ , ಪವನ್ ಒಡೆಯರ್ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಕಾಂಬಿನೇಷನ್​ ಆದ್ದರಿಂದ ನಿರೀಕ್ಷೆ ಜೋರಾಗಿದೆ.

ಈ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಜೊತೆ ಹಲವು ಕಲಾವಿದರು ಅಭಿನಯಿಸಲಿದ್ದಾರೆ. ಜಯರಾಮ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿ, ಸಾಯಿ ಕುಮಾರ್, ಸಂಜನಾ ಆನಂದ್, ದೀಕ್ಷಿತ್ ಶೆಟ್ಟಿ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಇತ್ತೀಚೆಗೆ ನಡೆದ ಸ್ಕ್ರಿಪ್ಟ್ ಪೂಜೆಯಲ್ಲಿ ಚಿತ್ರತಂಡದ ಹಲವರು ಭಾಗಿಯಾಗಿದ್ದರು.

The post ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ appeared first on Good News 24x7.

]]>
‘ಕರಿಯ 2’ ಚಿತ್ರದ ನಾಯಕ ನಟ ಅನಾರೋಗ್ಯದಿಂದ ನಿಧನ. https://www.goodnews24x7.com/the-lead-actor-of-the-film-kariya-2-passed-away-due-to-illness/ Tue, 05 Aug 2025 06:17:08 +0000 https://www.goodnews24x7.com/?p=5339 ‘ಕರಿಯ 2’, ‘ಗಣಪ’, ‘ಕೆಂಪ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಜಾಂಡೀಸ್ ಆಗಿತ್ತು. ಬನಶಂಕರಿಯ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ…

The post ‘ಕರಿಯ 2’ ಚಿತ್ರದ ನಾಯಕ ನಟ ಅನಾರೋಗ್ಯದಿಂದ ನಿಧನ. appeared first on Good News 24x7.

]]>

‘ಕರಿಯ 2’, ‘ಗಣಪ’, ‘ಕೆಂಪ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಜಾಂಡೀಸ್ ಆಗಿತ್ತು. ಬನಶಂಕರಿಯ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಅವರಿಗೆ 38 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದಷ್ಟೆ ಬನಶಂಕರಿಯ ಸಾಗರ್ ಅಪೋಲೊ ಆಸ್ಪತ್ರೆಗೆ ಅವರು ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ, ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ.

https://youtu.be/CX6-oIcxgPQ?si=zZtsHbWQ_ujIhHD3ಅನಿಲ್ ಚಿಕ್ಕಮಾದು ನಾನ್ ಕಾಂಟ್ರವರ್ಸಿಯಲ್ ಲೀಡರ್… ಅವರ ಹೆಸರಿಗೆ ಮಸಿ ಬಳಿಯುವ ಹುನ್ನಾರ ನಡೆಯುತ್ತಿದೆ

ಸಂತೋಷ್ ಬಾಲರಾಜ್ ಅವರಿಗೆ ಜಾಂಡೀಸ್ ಆಗಿತ್ತು. ಜಾಂಡೀಸ್ ಖಾಯಿಲೆ ಬಾಲರಾಜ್ ಅವರ ದೇಹವನ್ನೆಲ್ಲ ಆವರಿಸಿತ್ತು. ಕಳೆದ ಎರಡು ದಿನದಿಂದಲೂ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಯಕೃತ್ತು ಮತ್ತು ಕಿಡ್ನಿಯ ಸಮಸ್ಯೆಯಿಂದಾಗಿ ಅವರಿಗೆ ಜಾಂಡೀಸ್ ತಗುಲಿತ್ತು. ಈ ಮೊದಲೂ ಸಹ ಸಂತೋಷ್ ಬಾಲರಾಜ್ ಅವರು ಜಾಂಡೀಸ್​ನಿಂದ ಬಳಲಿದ್ದರು. ಆಗ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಕೈ ಮೀರಿ ಹೋಗಿತ್ತು. ಸಂತೋಷ್ ಅವರಿಗೆ ಮದುವೆ ಆಗಿರಲಿಲ್ಲ. ತಾಯಿ ಮತ್ತು ಸಹೋದರಿ ಇದ್ದರು.

‘ಕೆಂಪ’ ಸಿನಿಮಾ ಮೂಲಕ ಸಂತೋಷ್ ಬಾಲರಾಜ್ ಚಿತ್ರರಂಗ ಪ್ರವೇಶಿಸಿದ್ದರು. ಆ ಬಳಿಕ ಅವರು ‘ಕರಿಯ 2’, ‘ಜನ್ಮ’ ಮತ್ತು ‘ಗಣಪ’ ಸಿನಿಮಾಗಳಲ್ಲಿ ನಟಿಸಿದರು. ದರ್ಶನ್ ನಟನೆಯ ‘ಕರಿಯ’ ಸಿನಿಮಾದ ನಿರ್ಮಾಪಕ ಅನೆಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್, ಆನೆಕಲ್ ಬಾಲರಾಜ್ ಅವರು ಕಳೆದ ವರ್ಷವಷ್ಟೆ ನಿಧನ ಹೊಂದಿದರು. ಈಗ ಸಂತೋಷ್ ಸಹ ಇಹಲೋಕ ತ್ಯಜಿಸಿದ್ದಾರೆ. ಸಂತೋಷ್ ನಟನೆಯ ‘ಬರ್ಕ್ಲಿ’ ಮತ್ತು ‘ಸತ್ಯಂ’ ಸಿನಿಮಾಗಳು ಬಿಡುಗಡೆ ಆಗಬೇಕಿವೆ.

The post ‘ಕರಿಯ 2’ ಚಿತ್ರದ ನಾಯಕ ನಟ ಅನಾರೋಗ್ಯದಿಂದ ನಿಧನ. appeared first on Good News 24x7.

]]>