KNRajanna Archives - Good News 24x7 https://www.goodnews24x7.com/tag/knrajanna/ Kannada Wed, 13 Aug 2025 05:55:11 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg KNRajanna Archives - Good News 24x7 https://www.goodnews24x7.com/tag/knrajanna/ 32 32 ಅನಿಲ್ ಚಿಕ್ಕಮಾದುಗೆ ಸಿಗುತ್ತಾ ಮಂತ್ರಿ ಸ್ಥಾನ ? https://www.goodnews24x7.com/will-anil-chikkamadu-get-a-ministerial-position/ Wed, 13 Aug 2025 05:29:51 +0000 https://www.goodnews24x7.com/?p=5966 ಸಚಿವ ಸ್ಥಾನದಿಂದ ನಾಯಕ ಸಮುದಾಯದ ಕೆಎನ್ ರಾಜಣ್ಣ ಹೊರ ಬಿದ್ದ ಹಿನ್ನೆಲೆಯಲ್ಲಿ ಅದೇ ನಾಯಕ ಸಮುದಾಯದ ಮತ್ತೋರ್ವ ಅಭ್ಯರ್ಥಿ ಎಚ್ ಡಿ ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಂಪುಟ ಪುನರ್ ರಚನೆಯ ವೇಳೆ ಮಂತ್ರಿ ಸ್ಥಾನ ಸಿಗುತ್ತಾ ಎಂಬ…

The post ಅನಿಲ್ ಚಿಕ್ಕಮಾದುಗೆ ಸಿಗುತ್ತಾ ಮಂತ್ರಿ ಸ್ಥಾನ ? appeared first on Good News 24x7.

]]>

ಸಚಿವ ಸ್ಥಾನದಿಂದ ನಾಯಕ ಸಮುದಾಯದ ಕೆಎನ್ ರಾಜಣ್ಣ ಹೊರ ಬಿದ್ದ ಹಿನ್ನೆಲೆಯಲ್ಲಿ ಅದೇ ನಾಯಕ ಸಮುದಾಯದ ಮತ್ತೋರ್ವ ಅಭ್ಯರ್ಥಿ ಎಚ್ ಡಿ ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಂಪುಟ ಪುನರ್ ರಚನೆಯ ವೇಳೆ ಮಂತ್ರಿ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.
ಯಾಕೆ ಅಂತ ಹೇಳಿದ್ರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಯ ಎರಡು ಬಣಗಳಲ್ಲೂ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ ಅಷ್ಟೇ ಅಲ್ಲದೆ ಇವರಿಗೆ ಮಂತ್ರಿ ಸ್ಥಾನ ಸಿಕ್ಕರೆ ನಾಯಕ ಸಮುದಾಯದ ಸಂಪೂರ್ಣ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದಂತಾಗುತ್ತದೆ. ಹೆಚ್‌ಡಿ ಕೋಟೆಯಲ್ಲಿ 2ನೇ ಬಾರಿ ಗೆದ್ದು ಶಾಸಕರಾಗಿರುವ ಅನಿಲ್ ಚಿಕ್ಕಮಾದು ಅವರಿಗೆ ಮಂತ್ರಿ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಉತ್ತರ ದೊರೆಯಲ್ಲಿದೆ.

ಹೈಲೈಟ್

  • ಸಂಪುಟ ಪುನರಚನೆ ವೇಳೆ ಅನಿಲ್ ಚಿಕ್ಕಮಾದುಗೆ ಸಿಗುತ್ತಾ ಮಂತ್ರಿ ಸ್ಥಾನ ?
  • ಮೈಸೂರು ಭಾಗಕ್ಕೆ ಮತ್ತೊಂದು ಮಂತ್ರಿ ಸ್ಥಾನ ನೀಡ್ತಾರಾ ?
  • ಹೆಚ್‌ ಡಿ ಕೋಟೆ ಕಾಂಗ್ರೆಸ್ ಶಾಸಕ ಮಂತ್ರಿಯಾಗ್ತಾರಾ ?

ಎಸ್ಟಿ ಸಮುದಾಯಕ್ಕೆ ಸೇರಿರುವ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು. ಎಸ್ಟಿ ಸಮುದಾಯಕ್ಕೆ ಸೇರಿರುವ ‘ಕೈ’ ಶಾಸಕ ರಾಜಣ್ಣ ವಜಾದಿಂದ ಅನಿಲ್ ಚಿಕ್ಕಮಾದು ಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ . ನಾಯಕ ಸಮುದಾಯದ ಬೆಂಬಲ ಪಡೆಯುವ ಸಲುವಾಗಿ , ಡ್ಯಾಮೇಜ್ ಕಂಟ್ರೋಲ್ ಮಾಡೋಕೆ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡುತ್ತಾ ಕಾಂಗ್ರೆಸ್ ಅಂತ ಕಾದುನೋಡಬೇಕಿದೆ.

ಹೆಚ್‌ಡಿ ಕೋಟೆಯಲ್ಲಿ 2ನೇ ಬಾರಿ ಗೆದ್ದು ಶಾಸಕರಾಗಿರುವ ಅನಿಲ್ , ಸಿಎಂ ಸಿದ್ದರಾಮಯ್ಯ ಡಿಕೆಶಿ ಎರಡೂ ಬಣದ ಜತೆ ಉತ್ತಮ ಬಾಂಧವ್ಯ ಇದೆ. ಅನಿಲ್ ಚಿಕ್ಕಮಾದು ನಾಯಕ ಸಮುದಾಯದ ಮಂತ್ರಿಯಾಗಿದ್ದಾರೆ. ಮೈಸೂರು-ಚಾಮರಾಜನಗರ ಭಾಗದಲ್ಲಿನಾಯಕ ಸಮುದಾಯ ಹೆಚ್ಚಾಗಿದೆ.ಹಾಗಾಗಿ ನಾಯಕ ಸಮುದಾಯದ ಬೆಂಬಲ ಪಡೆಯಲು ಅನಿಲ್ ಚಿಕ್ಕಮಾದುಗೆ ಮಂತ್ರಿ ಸ್ಥಾನ ಕೊಡೋ ನಿರ್ಧಾರ ಮಾಡುತ್ತಾ ಕಾಂಗ್ರೆಸ್ ಅಂತ ಕಾದು ನೋಡಬೇಕಿದೆ.

The post ಅನಿಲ್ ಚಿಕ್ಕಮಾದುಗೆ ಸಿಗುತ್ತಾ ಮಂತ್ರಿ ಸ್ಥಾನ ? appeared first on Good News 24x7.

]]>
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ. https://www.goodnews24x7.com/pe%e1%b9%adrol-suriduko%e1%b9%87%e1%b8%8du-atmahatyege-yatnisida-raja%e1%b9%87%e1%b9%87a-bembaliga-knrajannapetrolmadhugiricongressresignationbjpgovernmentsuicidedcmdkmlasunilkumarlegislat/ Tue, 12 Aug 2025 11:38:50 +0000 https://www.goodnews24x7.com/?p=5951 ಸಚಿವ ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮಧುಗಿರಿ ಬಂದ್​​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ರಾಜಣ್ಣರನ್ನು ವಜಾ ಮಾಡಿದ್ದನ್ನೇ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ, ಸದನದ ಹೊರಗೂ ಒಳಗೂ ಕಾಂಗ್ರೆಸ್ ನಾಯಕರನ್ನು ಮಾತಿನಲ್ಲೇ…

The post ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ. appeared first on Good News 24x7.

]]>

ಸಚಿವ ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮಧುಗಿರಿ ಬಂದ್​​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ರಾಜಣ್ಣರನ್ನು ವಜಾ ಮಾಡಿದ್ದನ್ನೇ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ, ಸದನದ ಹೊರಗೂ ಒಳಗೂ ಕಾಂಗ್ರೆಸ್ ನಾಯಕರನ್ನು ಮಾತಿನಲ್ಲೇ ಕಟ್ಟಿ ಹಾಕುವ ಯತ್ನ ಮಾಡಿದೆ.

ಸಚಿವ ಸ್ಥಾನದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಿದ್ದನ್ನು ಖಂಡಿಸಿ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ರಾಜಣ್ಣ ಬೆಂಬಲಿಗರು, ಅಭಿಮಾನಿಗಳು ಮಂಗಳವಾರ ಬೃಹತ್​​ ಪ್ರತಿಭಟನೆ ನಡೆಸಿದರು. ಮಧುಗಿರಿ ಬಂದ್​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಭಾಗಿಯಾದರು. ಈ ವೇಳೆ ರಾಜಣ್ಣ ಅಭಿಮಾನಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸುವಂತೆ ಹೈಡ್ರಾಮಾ ಮಾಡಿದ. ಕೂಡಲೇ ಸ್ಥಳದಲ್ಲಿದ್ದವರು ಆತನ ಮೇಲೆ ನೀರು ಸುರಿದು ರಕ್ಷಿಸಿದರು.

ನಾಟಿ ಹೋರಿಗಳ ಕತ್ತು ಕೊಯ್ದು ಕಟುಕರು ! ಅಕ್ರಮ ಸಾಗಣೆಯ ಅನುಮಾನ!

 

ಸಾಮೂಹಿಕ ರಾಜೀನಾಮೆಗೆ ಮುಂದಾದ ರಾಜಣ್ಣ ಬೆಂಬಲಿಗರು
ಮಧುಗಿರಿಯ ಪುರಸಭೆ ವಾರ್ಡ್​ ಸಂಖ್ಯೆ 22 ರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. 10ನೇ ವಾರ್ಡ್ ಸದಸ್ಯೆ ಗಿರಿಜಾ ಮಂಜುನಾಥ್ ಉಪ ವಿಭಾಗಾಧಿಕಾರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅತ್ತ ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ಹಾದಿ ತುಳಿದಿದ್ದರೆ, ಇತ್ತ ಬಿಜೆಪಿಗೆ ರಾಜಣ್ಣರನ್ನು ವಜಾ ಮಾಡಿದ್ದೇ ಅಸ್ತ್ರವಾಗಿ ಸಿಕ್ಕಿದೆ.

ರಾಜಣ್ಣ ವಜಾ ಮಾಡಿದ್ದೇಕೆ? ಸದನದಲ್ಲಿ ಉತ್ತರಕ್ಕೆ ಬಿಜೆಪಿ ಪಟ್ಟು
ವಿಧಾನಸಭೆ ಕಲಾಪದ ಆರಂಭದಲ್ಲಿ, ಅಂದರೆ ಪ್ರಶ್ನೋತ್ತರ ವೇಳೆ ಶುರುವಾಗುವ ಮುನ್ನ ವಿಪಕ್ಷ ನಾಯಕ ಆರ್​ ಅಶೋಕ್ ಮಾತನಾಡಿ, ರಾಜಣ್ಣರನ್ನು ವಜಾ ಮಾಡಿದ್ದೇಕೆ? ಸರ್ಕಾರ ಇದಕ್ಕೆ ಉತ್ತರ ಕೊಡಬೇಕೆಂದು ಆಗ್ರಹಿಸಿದರು. ಈ ವೇಳೆ, ಸ್ಪೀಕರ್ ಖಾದರ್ ಇದು ಅವರ ಪಕ್ಷದ ಆಂತರಿಕ ವಿಚಾರ ಎಂದಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಇಷ್ಟಕ್ಕೆ ಸುಮ್ಮನಾಗದ ಆರ್​.ಅಶೋಕ್, ಮತ ಕಳ್ಳತನದ ಕುರಿತು ರಾಜಣ್ಣ ಸತ್ಯ ಹೇಳಿದ್ದಾರೆ. ಸತ್ಯ ಹೇಳಿದ್ದಕ್ಕೆ ಅವರನ್ನು ಬಲಿ ಪಡೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಇತ್ತ ವಿಧಾನ ಪರಿಷತ್​ನಲ್ಲೂ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪತ್ರವನ್ನು ಓದಿದರು. ಇದಕ್ಕೆ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭಾಪತಿ ಹೊರಟ್ಟಿ, ಪ್ರಶ್ನೋತ್ತರ ಕಲಾಪದ ಬಳಿಕ ಬಳಿಕ ಪ್ರಸ್ತಾಪಿಸುವಂತೆ ಸೂಚನೆ ನೀಡಿದರು. ಆಗ ಬಿಜೆಪಿ ಸದಸ್ಯರು ಈಗಲೇ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಕೆಮ್ಮಿದ್ದಕ್ಕೆ ಕಿಚಾಯಿಸಿದ ಬಿಜೆಪಿ
ಇದೆಲ್ಲದರ ನಡುವೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿರುವಾಗ ಉತ್ತರ ನೀಡಲು ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ಕೆಮ್ಮತೊಡಗಿದರು. ಈ ವೇಳೆ, ಬಿಜೆಪಿ ಶಾಸಕ ಸುನಿಲ್ ಕುಮಾರ್, ‘ನೀವು ಕೆಮ್ಮಿದರೆ ಯಾರಿಗೆ ಅಪಾಯ ಕಾದಿದೆಯೋ ಗೊತ್ತಿಲ್ಲ’ ಎಂದು ಕಾಲೆಳೆದರು. ಸುನೀಲ್ ಕುಮಾರ್ ಮಾತಿಗೆ ಸದನ ನಗೆ ಗಡಲಲ್ಲಿ ತೇಲಿತು. ಏನೂ ಪ್ರತಿಕ್ರಿಯೆ ನೀಡದ ಡಿಕೆ ಶಿವಕುಮಾರ್ ಉತ್ತರ ಮುಂದುವರಿಸಿದರು.
ಸದನದ ಹೊರಗೂ ಮಾತನಾಡಿರುವ ಬಿಜೆಪಿ ನಾಯಕರು, ರಾಜಣ್ಣ ವಜಾ ಮಾಡುವಂಥ ಅಪರಾಧ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

The post ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ. appeared first on Good News 24x7.

]]>
ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.? https://www.goodnews24x7.com/is-randeep-surjewala-the-reason-for-k-n-rajannas-dismissal/ Tue, 12 Aug 2025 11:12:15 +0000 https://www.goodnews24x7.com/?p=5946 ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ…

The post ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.? appeared first on Good News 24x7.

]]>

ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ ಮಾತು ಕೆಪಿಸಿಸಿ ಅಂಗಳದಲ್ಲಿ ಚರ್ಚೆಯಾಗುತ್ತಿದೆ.

ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ..! ಹಾಲಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಇತ್ತೀಚೆಗೆ ಬೆಂಗಳೂರಿಗೆ ಬಂದು ಸಚಿವರು, ಶಾಸಕರ ಸಭೆ ನಡೆಸಿದ್ದರು. ಇದನ್ನು ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಬಹಿರಂಗವಾಗಿ ಪ್ರಶ್ನಿಸಿದ್ದರು. ಜೊತೆಗೆ ರಣದೀಪ್ ಸುರ್ಜೇವಾಲಾ, ಎಲ್ಲ ಕ್ಯಾಬಿನೆಟ್ ಸಚಿವರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದರು. ಈ ಮಾತುಕತೆಗೆ ಸಹಕಾರ ಸಚಿವರಾಗಿದ್ದ ಕೆ.ಎನ್‌.ರಾಜಣ್ಣ ಹೋಗಿರಲಿಲ್ಲ. ರಣದೀಪ್ ಸುರ್ಜೇವಾಲಾ, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಚಿವರ ಜೊತೆ ನಡೆಸುವಾಗ ಕೆ.ಎನ್.ರಾಜಣ್ಣ, ತಮ್ಮ ಕುಟುಂಬದ ಜೊತೆ ಅಮೆರಿಕಾ ಪ್ರವಾಸ ಹೋಗಿದ್ದರು. ನಂತರ ಹೋಗಿ ರಣದೀಪ್ ಸುರ್ಜೇವಾಲಾರನ್ನು ಭೇಟಿಯಾಗುತ್ತೇನೆ ಎಂದಿದ್ದರು. ಆ ರೀತಿ ರಣದೀಪ್ ಸುರ್ಜೇವಾಲಾರನ್ನು ರಾಜಣ್ಣ ಭೇಟಿಯಾಗಲಿಲ್ಲ ಜೊತೆಗೆ ರಣದೀಪ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ನಾಯಕರು ರಣದೀಪ್ ಸುರ್ಜೇವಾಲಾಗೆ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕರೆದು ಸಭೆ ನಡೆಸುವ ಅಧಿಕಾರ ಇಲ್ಲ. ಅಧಿಕಾರಿಗಳನ್ನು ಕರೆದು ಸಭೆ ನಡೆಸಿದ್ದು ಸರಿಯಲ್ಲ ಎಂದೆಲ್ಲಾ ಬಹಿರಂಗವಾಗಿ ರಣದೀಪ್ ಸುರ್ಜೇವಾಲಾ ವಿರುದ್ಧ ಮಾತನಾಡಿದ್ದರು.

ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?

ಇದು ಸಹಜವಾಗಿಯೇ ರಾಜ್ಯದ ಕಾಂಗ್ರೆಸ್ ಸರ್ಕಾರ, ಪಕ್ಷದ ಬೆಳವಣಿಗೆಗಳ ಬಗ್ಗೆ ಕಣ್ಣಿಟ್ಟಿರುವ ರಣದೀಪ್ ಸುರ್ಜೇವಾಲಾ ಗಮನಕ್ಕೆ ಬಂದಿದೆ. ಹೀಗಾಗಿ ರಣದೀಪ್ ಸುರ್ಜೇವಾಲಾಗೆ ಕೆ.ಎನ್.ರಾಜಣ್ಣ ಬಗ್ಗೆ ಒಳಗೊಳಗೆ ಅಸಮಾಧಾನ ಇತ್ತು. ಹೀಗಾಗಿ ಈಗ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿ ಕ್ಯಾಂಪೇನ್ ಮಾಡುವಾಗ ಅದರ ವಿರುದ್ಧವೂ ರಾಜಣ್ಣ ಹೇಳಿಕೆ ಕೊಟ್ಟಿದ್ದನ್ನೇ ರಣದೀಪ್ ಸುರ್ಜೇವಾಲಾ, ರಾಜಣ್ಣ ವಿರುದ್ಧ ಅಸ್ತ್ರವಾಗಿ ಬಳಕೆ ಮಾಡಿಕೊಂಡಿದ್ದಾರೆ. ತಮ್ಮ ವಿರುದ್ಧ ಮಾತನಾಡಿದ, ತಮ್ಮನ್ನು ಪ್ರಶ್ನಿಸಿದ ಕೆ.ಎನ್‌.ರಾಜಣ್ಣರನ್ನು ಹಣಿಯಲು ಅವರ ಹೇಳಿಕೆಯನ್ನೇ ಅವರ ವಿರುದ್ಧ ಅಶಿಸ್ತು ಎಂದು ಅಸ್ತ್ರ ಪ್ರಯೋಗಿಸಿ, ರಾಹುಲ್ ಗಾಂಧಿ ಮುಂದಿಟ್ಟಿದ್ದಾರೆ. ತಮ್ಮ ಹೋರಾಟವನ್ನು ಪ್ರಶ್ನಿಸಿದ ತಮ್ಮದೇ ಪಕ್ಷದ ಸಚಿವರ ಮಾತು ಅನ್ನು ಒಪ್ಪಿಕೊಳ್ಳಲು ಆಗಲ್ಲ. ಇದು ಅಶಿಸ್ತು ಎಂದು ರಾಹುಲ್ ಗಾಂಧಿ ಪರಿಗಣಿಸಿದ್ದಾರೆ. ಜೊತೆಗೆ ರಾಜಣ್ಣರ ಈ ಹಿಂದಿನ ವಿವಾದಾತ್ಮಕ ಹೇಳಿಕೆಗಳನ್ನು ಆಗಸ್ಟ್ 8 ರಂದು ರಾಹುಲ್ ಗಾಂಧಿ ಬೆೆಂಗಳೂರಿಗೆ ಬಂದಿದ್ದ ವೇಳೆಯೇ ರಣದೀಪ್ ಸುರ್ಜೇವಾಲಾ, ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದರಂತೆ.
ಆಗಲೂ ರಾಹುಲ್ ಗಾಂಧಿ, ಕೆ.ಎನ್.ರಾಜಣ್ಣ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕರ್ನಾಟಕದಲ್ಲಿ ನಾವು 140 ಶಾಸಕರ ಸರ್ಕಾರ ನಡೆಸುತ್ತಿದ್ದೇವೋ, 115 ಮಂದಿಯ ಶಾಸಕರ ಸರ್ಕಾರ ನಡೆಸುತ್ತಿದ್ದೇವೋ? ಬಹುಮತ ಇದ್ದರೂ, ಪದೇ ಪದೇ ಸರ್ಕಾರದಲ್ಲಿ ಗೊಂದಲ ಏಕೆ ಎಂದು ರಾಹುಲ್ ಗಾಂಧಿ ಅವರು ನೇರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವರನ್ನು ಪ್ರಶ್ನಿಸಿದ್ದಾರೆ.

ಕೆ.ಎನ್.ರಾಜಣ್ಣ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದರೂ, ಏಕೆ ಯಾವುದೇ ಕ್ರಮ ಆಗಿಲ್ಲವೆಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರಂತೆ. ರಾಜಣ್ಣ ಪದೇ ಪದೇ ಪಕ್ಷ , ಸರ್ಕಾರಕ್ಕೆ ಮುಜುಗರ ಆಗುವ ಹೇಳಿಕೆ ನೀಡುತ್ತಿದ್ದಾರೆ ಎಂದು ರಣದೀಪ್ ಸುರ್ಜೇವಾಲಾ ನೇರವಾಗಿ ರಾಹುಲ್ ಗಾಂಧಿಗೆ ಹೇಳಿದ್ದಾರೆ. ಇದರಿಂದಾಗಿಯೇ ರಾಹುಲ್ ಗಾಂಧಿಯೇ ಈಗ ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣರನ್ನು ವಜಾಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯಗೆ ಫರ್ಮಾನು ಹೊರಡಿಸಿದ್ದರು. ಹೀಗಾಗಿ ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ, ಅದನ್ನು ಅಂಗೀಕರಿಸಿ, ರಾಜ್ಯಪಾಲರಿಗೆ ಕಳಿಸದೇ, ಸಿಎಂ ಸಿದ್ದರಾಮಯ್ಯ, ರಾಜಣ್ಣರನ್ನು ಕ್ಯಾಬಿನೆಟ್ ನಿಂದ ವಜಾಗೊಳಿಸುವ ಶಿಫಾರಸ್ಸು ಅನ್ನು ರಾಜ್ಯಪಾಲರಿಗೆ ಕಳಿಸಿದ್ದಾರೆ. ಬಳಿಕ ರಾಜಭವನದಿಂದ ರಾಜಣ್ಣರನ್ನು ಕ್ಯಾಬಿನೆಟ್ ನಿಂದ ವಜಾಗೊಳಿಸುವ ಪತ್ರ ಬಿಡುಗಡೆ ಆಗಿದೆ. ಆ ಪತ್ರವನ್ನು ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಅವರಿಗೆ ರವಾನೆ ಮಾಡಿದ್ದಾರೆ.
ಹೀಗೆ ಸಚಿವ ಸ್ಥಾನದಿಂದ ಕೆ.ಎನ್‌. ರಾಜಣ್ಣರ ತಲೆದಂಡಕ್ಕೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ ಮಾತು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಅಂಗಳದಲ್ಲಿ ನಿನ್ನೆಯಿಂದ ಚರ್ಚೆಯಾಗುತ್ತಿದೆ. ಕೆ.ಎನ್‌. ರಾಜಣ್ಣ ಕಿಕ್ ಔಟ್ ಎಪಿಸೋಡ್ ನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಣದೀಪ್ ಸುರ್ಜೇವಾಲಾ.

ಬ್ಯಾಕ್ ಟು ಬ್ಯಾಕ್ ರಾಜಣ್ಣರ ಗೊಂದಲದ ಹೇಳಿಕೆಗಳ ಪಟ್ಟಿಯನ್ನೇ ರಣದೀಪ್ ಸುರ್ಜೇವಾಲಾ ಸಂಗ್ರಹಿಸಿಕೊಂಡಿದ್ದರು. ಕೆಲ ರಾಜ್ಯ ನಾಯಕರ ಮೂಲಕ ಸಾಕ್ಷಿ ಸಮೇತ ವರದಿಯನ್ನು ತರಿಸಿಕೊಂಡು ಸೂಕ್ತ ಸಮಯಕ್ಕಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಕಾಯುತ್ತಿದ್ದರು. ಡಿಕೆಶಿ ವಿರುದ್ಧ ಸಿಎಂ ಗಾದಿ, ಐದು ಡಿಸಿಎಂ ಹುದ್ದೆ ಸೃಷ್ಟಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಕೆ.ಎನ್‌. ರಾಜಣ್ಣ ಬಹಿರಂಗವಾಗಿ ಮಾತನಾಡಿದ್ದರು. ಈ ಬಗ್ಗೆ ಉಸ್ತುವಾರಿ ಸುರ್ಜೇವಾಲಾಗೆ ನಿರಂತರವಾಗಿ ದೂರು ನೀಡುತ್ತಿದ್ದಿದ್ದು ಡಿಸಿಎಂ ಡಿಕೆಶಿ. ರಾಜಣ್ಣರ ಪ್ರತಿಯೊಂದು ಹೇಳಿಕೆಗಳ ಮಾಹಿತಿ ಪಡೆಯುತ್ತಿದ್ದಾಗಲೇ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಿರುದ್ಧವೂ ಹೇಳಿಕೆಯನ್ನು ಕೆ.ಎನ್‌. ರಾಜಣ್ಣ ನೀಡಿದ್ದರು.
ಈಗ ರಾಹುಲ್ ಗಾಂಧಿ ಹೋರಾಟವನ್ನ ಅಣಕಿಸುವಂತೆ ಹೇಳಿಕೆ ನೀಡಿದ್ದನ್ನೆ ರಾಜಣ್ಣ ವಿರುದ್ಧ ಪ್ರಬಲ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಜೊತೆಗೆ ಮತಗಳ್ಳತನ ಸಂಬಂಧ ರಾಜಣ್ಣ ನೀಡಿದ್ದ ಹೇಳಿಕೆಯನ್ನ ರಣದೀಪ್ ಸುರ್ಜೇವಾಲಾ ಬಳಸಿಕೊಂಡಿದ್ದಾರೆ. ಮೊದಲ ಹಂತವಾಗಿ ಕೆ.ಸಿ ವೇಣುಗೋಪಾಲ್ ಗಮನಕ್ಕೆ ರಾಜಣ್ಣರ ವಿವಾದಾತ್ಮಕ ಹೇಳಿಕೆಗಳನ್ನು ತರುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ನೇರವಾಗಿ ರಾಹುಲ್ ಗಾಂಧಿಗೆ ರಾಜಣ್ಣ ಹೇಳಿಕೆ ಬಗ್ಗೆ ಮನವರಿಕೆ ಮಾಡುವಲ್ಲಿ ರಣದೀಪ್ ಸುರ್ಜೇವಾಲಾ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ರಾಜ್ಯ ಕ್ಯಾಬಿನೆಟ್ ನಿಂದ ಕೆ.ಎನ್.ರಾಜಣ್ಣ ವಜಾ ಆದೇಶ ಹೈಕಮ್ಯಾಂಡ್ ನಿಂದ ಸಿಎಂ ಸಿದ್ದರಾಮಯ್ಯಗೆ ರವಾನೆಯಾಗಿದೆ.

The post ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.? appeared first on Good News 24x7.

]]>
ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು! https://www.goodnews24x7.com/%e0%b2%b8%e0%b2%9a%e0%b2%bf%e0%b2%b5-%e0%b2%b0%e0%b2%be%e0%b2%9c%e0%b2%a3%e0%b3%8d%e0%b2%a3-%e0%b2%b0%e0%b2%be%e0%b2%9c%e0%b3%80%e0%b2%a8%e0%b2%be%e0%b2%ae%e0%b3%86-%e0%b2%b0%e0%b2%b9%e0%b2%b8/ Mon, 11 Aug 2025 13:48:05 +0000 https://www.goodnews24x7.com/?p=5856 ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ…

The post ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು! appeared first on Good News 24x7.

]]>

ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ ಇಷ್ಟೆಲ್ಲ ಬೆಳವಣಿಗೆಗಳು ನಡೆಯಲು ಕಾರಣವೇನು? ಕೆಎನ್ ರಾಜಣ್ಣ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದರೇ? ಅಥವಾ ಯಾರದ್ದಾದರೂ ಒತ್ತಡಕ್ಕೆ ಕಟ್ಟುಬಿದ್ದು ಅವರು ಈ ನಿರ್ಧಾರ ತೆಗೆದುಕೊಂಡರೇ? ಎಂಬ ಕುತೂಹಲಗಳಿಗೆ ಉತ್ತರ ಇಲ್ಲಿದೆ.

ಇಂದು ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಕಾರ್ಯದರ್ಶಿಗೆ ಕೆಎನ್ ರಾಜಣ್ಣ ರಾಜೀನಾಮೆ ಪತ್ರ ನೀಡಿ ವಿಧಾನಸೌಧದಿಂದ ಹೊರಟಿದ್ದಾರೆ. ಬಳಿಕ ಸಿಎಂ ಆ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದರು. ಹೀಗೆ ದಿಢೀರೆಂದು ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಹಿಂದೆ ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪದ ವಿಚಾರದಲ್ಲಿ ಕೆಎನ್ ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದರು. ಈ ಮೂಲಕ ಕೆಎನ್ ರಾಜಣ್ಣ ಅವರು ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ತೊಡೆ ತಟ್ಟಿದ್ದರು. ಇದು ಮಾಜಿ ಸಚಿವ ಕೆಎನ್ ರಾಜಣ್ಣ ಅವರಿಗೆ ಮುಳುವಾಗಿ ಪರಿಣಮಿಸಿದೆ. ಶಾಸಕ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ರಾಜಭವನದಿಂದ ಸರ್ಕಾರಕ್ಕೆ ಅಧಿಕೃತ ಪತ್ರ ರವಾನಿಸಲಾಗಿದೆ.
ಹೌದು, ಸಚಿವ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. “ಮುಂದಿನ ಅಗತ್ಯ ಕ್ರಮಕ್ಕಾಗಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಈ ಪತ್ರದೊಂದಿಗೆ ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ” ಎಂದು ಪತ್ರದಲ್ಲಿದೆ.

ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್ ರಾಜಣ್ಣ ಅವರು ಸೋಮವಾರ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಎನ್ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತಗಳ ಕಳ್ಳತನವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಆದರೆ, “ವೋಟರ್ ಲಿಸ್ಟ್ನ್ನು ನಮ್ಮದೇ ಸರ್ಕಾರ ಇರುವಾಗ ಮಾಡಿರುವುದು. ಆಗ ಕಣ್ಮುಚ್ಚಿ ಕುಳಿತಿದ್ದು ಈಗ ಹೇಳಿದರೆ ಏನು ಪ್ರಯೋಜನ” ಎಂದು ಸಚಿವ ಕೆ.ಎನ್ ರಾಜಣ್ಣ ಹೇಳುವ ಮೂಲಕ ತಮ್ಮದೇ ಪಕ್ಷದ ನಾಯಕರು ಮುಜುಗರಕ್ಕೀಡಾಗುವಂತೆ ಮಾಡಿದ್ದರು.

The post ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು! appeared first on Good News 24x7.

]]>
ಕಾಂಗ್ರೆಸ್ ನಿಂದಲೂ ಹೊರಬೀಳ್ತಾರಾ ಕೆ. ಎನ್. ​ ರಾಜಣ್ಣ ? https://www.goodnews24x7.com/will-k-n-rajanna-also-quit-the-congress/ Mon, 11 Aug 2025 12:10:35 +0000 https://www.goodnews24x7.com/?p=5846 ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

The post ಕಾಂಗ್ರೆಸ್ ನಿಂದಲೂ ಹೊರಬೀಳ್ತಾರಾ ಕೆ. ಎನ್. ​ ರಾಜಣ್ಣ ? appeared first on Good News 24x7.

]]>

ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್​ನ ರಾಷ್ಟ್ರೀಯ ಮತ್ತು ರಾಜ್ಯ ​ನಾಯಕರು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಮಾಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್​ ರಾಜಣ್ಣ ಹೇಳಿಕೆಯೊಂದು ನೀಡಿ ತಮ್ಮದೇ ಪಕ್ಷದ ನಾಯಕರು ಮುಜುಗುರಕ್ಕೀಡಾಗುವಂತೆ ಮಾಡಿದ್ದರು. ಕೆಎನ್​ ರಾಜಣ್ಣ ಹೇಳಿಕೆಯಿಂದ ಹೈಕಮಾಂಡ್ ತೀವ್ರ ಅಸಮಾಧಾನಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದೆ. ಹೈಕಮಾಂಡ್ ನ ಈ ನಿರ್ಧಾರ ಸಚಿವ ಕೆ ಎನ್ ರಾಜಣ್ಣ ಅವರನ್ನ ಪಕ್ಷದಿಂದಲೂ ಹೊರಹಾಕಲಾಗುತ್ತಾ ಎಂಬ ಅನುಮಾನಕ್ಕೆ ಕಾರಣವಾಗಿದೆ .

 

The post ಕಾಂಗ್ರೆಸ್ ನಿಂದಲೂ ಹೊರಬೀಳ್ತಾರಾ ಕೆ. ಎನ್. ​ ರಾಜಣ್ಣ ? appeared first on Good News 24x7.

]]>
ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆ.ಎನ್.​ ರಾಜಣ್ಣ ! https://www.goodnews24x7.com/kn-rajanna-resigns-from-the-ministerial-post/ Mon, 11 Aug 2025 11:54:16 +0000 https://www.goodnews24x7.com/?p=5835 ಲೋಕಸಭಾ ಚುನಾವಣೆ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್​ನ ರಾಷ್ಟ್ರೀಯ ಮತ್ತು ರಾಜ್ಯ ​ನಾಯಕರು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಮಾಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್​ ರಾಜಣ್ಣ ಹೇಳಿಕೆ ನೀಡಿ ತಮ್ಮದೇ ಪಕ್ಷದ ನಾಯಕರು ಮುಜುಗುರಕ್ಕೀಡಾಗುವಂತೆ ಮಾಡಿದ್ದರು. ಕೆಎನ್​…

The post ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆ.ಎನ್.​ ರಾಜಣ್ಣ ! appeared first on Good News 24x7.

]]>

ಲೋಕಸಭಾ ಚುನಾವಣೆ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್​ನ ರಾಷ್ಟ್ರೀಯ ಮತ್ತು ರಾಜ್ಯ ​ನಾಯಕರು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಮಾಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್​ ರಾಜಣ್ಣ ಹೇಳಿಕೆ ನೀಡಿ ತಮ್ಮದೇ ಪಕ್ಷದ ನಾಯಕರು ಮುಜುಗುರಕ್ಕೀಡಾಗುವಂತೆ ಮಾಡಿದ್ದರು. ಕೆಎನ್​ ರಾಜಣ್ಣ ಹೇಳಿಕೆಯಿಂದ ಹೈಕಮಾಂಡ್ ತೀವ್ರ ಅಸಮಾಧಾನಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದೆ.

ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ.

ರಾಜೀನಾಮೆ ಬಗ್ಗೆ ಸಚಿವ ಕೆಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.

ತಂದೆಯ ರಾಜಿನಾಮೆ ವಿಚಾರ ತಳ್ಳಿಹಾಕಿದ: MLC ರಾಜೇಂದ್ರ
ತಂದೆ, ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ ನೀಡುತ್ತಾರೆ ಎಂಬುವುದು ಸುಳ್ಳು. ನಾನು ಈಗಷ್ಟೇ ನಮ್ಮ ತಂದೆಯ ಜೊತೆ ಮಾತನಾಡಿದ್ದೇನೆ. ಆ ರೀತಿ ಏನೂ ಇಲ್ಲ ಅಂತ ನಮ್ಮ ತಂದೆ ಹೇಳಿದ್ದಾರೆ ಎಂದು ಕೆ.ಎನ್.ರಾಜಣ್ಣ ಪುತ್ರ ಎಂಎಲ್​ಸಿ ರಾಜೇಂದ್ರ ಹೇಳಿದ್ದಾರೆ.

The post ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆ.ಎನ್.​ ರಾಜಣ್ಣ ! appeared first on Good News 24x7.

]]>