#March 18 Archives - Good News 24x7 https://www.goodnews24x7.com/tag/march-18/ Kannada Mon, 16 Mar 2026 12:02:27 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #March 18 Archives - Good News 24x7 https://www.goodnews24x7.com/tag/march-18/ 32 32 SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ! https://www.goodnews24x7.com/government-gives-good-news-to-students-writing-sslc-examsgovernment-gives-good-news-to-students-writing-sslc-exams/ Mon, 16 Mar 2026 12:02:18 +0000 https://www.goodnews24x7.com/?p=8905   2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷಾ…

The post SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ! appeared first on Good News 24x7.

]]>

 

2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಘೋಷಿಸಿದೆ.
ಎಸ್​​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್​​​​​ಆರ್​​​ಟಿಸಿ ಉಚಿತ ಪ್ರಯಾಣ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಘೋಷಿಸಿದೆ. ಹೌದು.. ಎಸ್​​ಎಸ್​​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್​ಆರ್​​ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆ ಬರೆಯಬೇಕಾದರೆ ಹಾಲ್ ಟಿಕೆಟ್ ಅವಶ್ಯವಾಗಿದೆ. ಅದೇ ರೀತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡೆಕ್ಟರ್​ಗೆ ಹಾಲ್ ಟಿಕೆಟ್ ತೋರಿಸಿದರಷ್ಟೇ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಗಲಿದೆ. ಹೀಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮರೆಯದೆ ಹಾಲ್ ಟಿಕೆಟ್ ತೆಗೆದುಕೊಂಡು ಹೋಗಿ.ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಮಾರ್ಚ್ 18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದಿದ್ದಾರೆ.

ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಅನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ ಎಂದು ತಿಳಿಸಿದ್ದಾರೆ.

The post SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ! appeared first on Good News 24x7.

]]>