media Archives - Good News 24x7 https://www.goodnews24x7.com/tag/media/ Kannada Fri, 26 Jun 2026 12:37:53 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg media Archives - Good News 24x7 https://www.goodnews24x7.com/tag/media/ 32 32 ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ https://www.goodnews24x7.com/sdpi-urges-government-to-drop-bus-fare-hike-proposal/ Fri, 26 Jun 2026 12:37:53 +0000 https://www.goodnews24x7.com/?p=9678 ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ…

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>

ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ ರೀತಿ ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಯತ್ನವನ್ನು ಕೈಬಿಡಬೇಕು ಹಾಗೂ ಸಾರಿಗೆ ನಿಗಮಗಳ ನಷ್ಟದ ನೆಪದಲ್ಲಿ ಮತ್ತೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರ ತಕ್ಷಣವೇ ತಿರಸ್ಕರಿಸಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಆಗ್ರಹಿಸಿದರು.
ಇಂದು ಮೈಸೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಜನಹಿತಕ್ಕೆ ಸಂಬಂಧಿಸಿದ ಮೂರು ಮಹತ್ವದ ವಿಷಯಗಳ ಕುರಿತು ಎಸ್‌ಡಿಪಿಐ ಪಕ್ಷದ ನಿಲುವನ್ನು ವಿವರಿಸಿದರು.
1. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹಕ್ಕು ರಕ್ಷಣೆ ಸರ್ಕಾರದ ಹೊಣೆ
ಭಾರತದ ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಅದರ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಿಬ್ಬಂದಿಯೇ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಹೀಗಾಗಿ ಯಾವುದೇ ಅರ್ಹ ಮತದಾರರ ಹೆಸರು ಅನಗತ್ಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಪರಿಶೀಲನೆ ವೇಳೆ “Logical Discrepancy” ಎಂಬ ಕಾರಣವನ್ನು ಉಲ್ಲೇಖಿಸಿ ಲಕ್ಷಾಂತರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವರದಿಗಳು ಆತಂಕಕಾರಿ ಬೆಳವಣಿಗೆಯಾಗಿದೆ. ಭಾರತದಂತಹ ಬಹುಭಾಷಾ, ಬಹುಸಂಸ್ಕೃತಿಯ ದೇಶದಲ್ಲಿ ಹೆಸರುಗಳ ಕಾಗುಣಿತ ಅಥವಾ ದಾಖಲೆಗಳಲ್ಲಿನ ಸಣ್ಣಪುಟ್ಟ ವ್ಯತ್ಯಾಸಗಳನ್ನು ಆಧಾರವಾಗಿಸಿಕೊಂಡು ಮತದಾರರನ್ನು ಹೊರಗಿಡುವುದು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಕೃತಕ ಬುದ್ಧಿಮತ್ತೆಯ ತಾಂತ್ರಿಕ ದೋಷ ಅಥವಾ ಆಡಳಿತಾತ್ಮಕ ಲೋಪದಿಂದ ಒಬ್ಬ ಅರ್ಹ ನಾಗರಿಕನೂ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಆದ್ದರಿಂದ ರಾಜ್ಯ ಸರ್ಕಾರ ಚುನಾವಣಾ ಆಯೋಗದೊಂದಿಗೆ ಚರ್ಚಿಸಿ, “Logical Discrepancy”ಯನ್ನು ಮತದಾರರನ್ನು ಕೈಬಿಡುವ ಮಾನದಂಡವಾಗಿ ಬಳಸಬಾರದು ಎಂದು ಒತ್ತಾಯಿಸಬೇಕು. ಯಾವುದೇ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಮೊದಲು ಮನೆ-ಮನೆಗೆ ಪರಿಶೀಲನೆ, ನೇರ ಭೇಟಿ ಹಾಗೂ ಸಂಬಂಧಪಟ್ಟ ವ್ಯಕ್ತಿಗೆ ಪೂರ್ವ ನೋಟಿಸ್ ನೀಡುವಂತಹ ಮಾನವೀಯ ಮತ್ತು ಪಾರದರ್ಶಕ ಕ್ರಮಗಳನ್ನು ಕಡ್ಡಾಯಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
2. ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣ ಜನವಿರೋಧಿ ಕ್ರಮ
ರಾಜ್ಯ ಸರ್ಕಾರ ವಿದ್ಯುತ್ ವಿತರಣಾ ಸಂಸ್ಥೆಗಳ (ESCOMs) ಕಾರ್ಯಾಚರಣೆಯನ್ನು ಹಂತ ಹಂತವಾಗಿ ಖಾಸಗಿ ಕಂಪನಿಗಳಿಗೆ ಒಪ್ಪಿಸುವ ಪ್ರಯತ್ನ ನಡೆಸುತ್ತಿರುವ ವರದಿಗಳು ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಉಂಟುಮಾಡಿವೆ ಎಂದು ಅಬ್ದುಲ್ ಮಜೀದ್ ಹೇಳಿದರು.
ವಿದ್ಯುತ್ ಎಂಬುದು ಸಾಮಾನ್ಯ ವಾಣಿಜ್ಯ ವಸ್ತುವಲ್ಲ; ಅದು ಜನಜೀವನ, ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಅಭಿವೃದ್ಧಿಯ ಬೆನ್ನೆಲುಬಾಗಿದೆ. ಈ ಸೇವೆಯನ್ನು ಖಾಸಗಿ ಕಂಪನಿಗಳ ಲಾಭದ ಉದ್ದೇಶಕ್ಕೆ ಒಪ್ಪಿಸಿದರೆ ವಿದ್ಯುತ್ ದರ ಏರಿಕೆ, ಗ್ರಾಮೀಣ ಪ್ರದೇಶಗಳ ನಿರ್ಲಕ್ಷ್ಯ ಹಾಗೂ ಸೇವೆಯ ಗುಣಮಟ್ಟ ಕುಸಿಯುವ ಅಪಾಯವಿದೆ.
ಸರ್ಕಾರ ಖಾಸಗೀಕರಣದ ಮೂಲಕ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವ ಬದಲು, ಎಸ್ಕಾಂಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ತಾಂತ್ರಿಕ ಸುಧಾರಣೆಗಳನ್ನು ಜಾರಿಗೆ ತಂದು, ಸಾರ್ವಜನಿಕ ಸ್ವಾಮ್ಯದಲ್ಲಿಯೇ ಉತ್ತಮ ಗುಣಮಟ್ಟದ ವಿದ್ಯುತ್ ಸೇವೆ ಒದಗಿಸಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
3. ಬಸ್ ದರ ಏರಿಕೆ ಪ್ರಸ್ತಾವವನ್ನು ಸರ್ಕಾರ ತಕ್ಷಣ ತಿರಸ್ಕರಿಸಲಿ
ರಾಜ್ಯದ ರಸ್ತೆ ಸಾರಿಗೆ ನಿಗಮಗಳು ಮತ್ತೊಮ್ಮೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಈಗಾಗಲೇ 2025ರ ಜನವರಿ 5ರಿಂದ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲಾಗಿದೆ. ಇದೀಗ ಬಿಎಂಟಿಸಿ ಶೇ.44, ಕೆಎಸ್‌ಆರ್‌ಟಿಸಿ ಶೇ.33 ಹಾಗೂ ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯೂಕೆಆರ್‌ಟಿಸಿಗಳೂ ದರ ಏರಿಕೆಗೆ ಪ್ರಸ್ತಾವ ಸಲ್ಲಿಸಿರುವುದು ಸಾಮಾನ್ಯ ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಹೊರಿಸುವ ಕ್ರಮವಾಗಿದೆ.
ಬೆಲೆ ಏರಿಕೆ, ನಿರುದ್ಯೋಗ ಹಾಗೂ ಜೀವನೋಪಾಯದ ಸಂಕಷ್ಟದಿಂದ ಜನರು ತತ್ತರಿಸಿರುವ ಸಂದರ್ಭದಲ್ಲಿ ಮತ್ತೆ ಬಸ್ ದರ ಹೆಚ್ಚಿಸುವುದು ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಮಹಿಳೆಯರು, ಉದ್ಯೋಗಿಗಳು ಹಾಗೂ ಪ್ರತಿದಿನ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಲಕ್ಷಾಂತರ ಜನರಿಗೆ ದೊಡ್ಡ ಹೊಡೆತವಾಗಲಿದೆ.
ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟಕ್ಕೆ ಪ್ರಯಾಣಿಕರು ಕಾರಣರಲ್ಲ. ಸರ್ಕಾರದ ನೀತಿ ವೈಫಲ್ಯ, ಸಮರ್ಪಕ ಅನುದಾನದ ಕೊರತೆ ಮತ್ತು ಆಡಳಿತಾತ್ಮಕ ದೌರ್ಬಲ್ಯವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ವೈಫಲ್ಯದ ಹೊರೆ ಜನರ ಮೇಲೆ ಹಾಕುವುದು ಸರಿಯಲ್ಲ. ಸರ್ಕಾರ ದರ ಏರಿಕೆಯನ್ನು ಸುಲಭ ಪರಿಹಾರವಾಗಿ ಪರಿಗಣಿಸದೆ, ನಿಗಮಗಳ ಆರ್ಥಿಕ ಪುನಶ್ಚೇತನಕ್ಕಾಗಿ ಸಮಗ್ರ ಕಾರ್ಯಯೋಜನೆ ರೂಪಿಸಬೇಕು. ಬಸ್ ದರ ಏರಿಕೆ ಪ್ರಸ್ತಾವವನ್ನು ತಕ್ಷಣವೇ ತಿರಸ್ಕರಿಸಿ ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಅವರು ಒತ್ತಾಯಿಸಿದರು.
ಅಂತಿಮವಾಗಿ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು, ಸಾರ್ವಜನಿಕ ವಿದ್ಯುತ್ ಸೇವೆ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ಇವು ಜನರ ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಾಗಿದ್ದು, ಸರ್ಕಾರವು ಜನವಿರೋಧಿ ನೀತಿಗಳನ್ನು ಕೈಬಿಟ್ಟು ಜನಪರ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಅಬ್ದುಲ್ ಮಜೀದ್ ಕರೆ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಕಾರ್ಯದರ್ಶಿ ಮೌಲಾನಾ ಅಕ್ರಮ್, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್, ಮೈಸೂರು ಜಿಲ್ಲಾ ಕಾರ್ಯಾಧ್ಯಕ್ಷ ಶಫಿವುಲ್ಲಾ ಹಾಗೂ ಜಿಲ್ಲಾ ಉಪಾಧ್ಯಕ್ಷ ಎಸ್. ಸ್ವಾಮಿ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಕರ್ನಾಟಕ

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>
ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ. https://www.goodnews24x7.com/iran-hits-back-at-donald-trump-us-president-mocked-in-lego-style-video/ Mon, 27 Apr 2026 10:36:12 +0000 https://www.goodnews24x7.com/?p=9419 ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಇರಾನ್ ದೇಶವು ‘ಲೆಗೋ’ (Lego-style) ಮಾದರಿಯ ಅನಿಮೇಟೆಡ್ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ವಾಷಿಂಗ್ಟನ್‌ನಲ್ಲಿ ನಡೆದ ‘ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್’ ಕಾರ್ಯಕ್ರಮದ ವೇಳೆ ಉಂಟಾದ ಗೊಂದಲವನ್ನೇ ವಸ್ತುವಾಗಿಟ್ಟುಕೊಂಡು ಈ ಡಿಸ್ ಟ್ರ್ಯಾಕ್…

The post ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ. appeared first on Good News 24x7.

]]>

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಇರಾನ್ ದೇಶವು ‘ಲೆಗೋ’ (Lego-style) ಮಾದರಿಯ ಅನಿಮೇಟೆಡ್ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ವಾಷಿಂಗ್ಟನ್‌ನಲ್ಲಿ ನಡೆದ ‘ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್’ ಕಾರ್ಯಕ್ರಮದ ವೇಳೆ ಉಂಟಾದ ಗೊಂದಲವನ್ನೇ ವಸ್ತುವಾಗಿಟ್ಟುಕೊಂಡು ಈ ಡಿಸ್ ಟ್ರ್ಯಾಕ್ ವಿಡಿಯೊ ತಯಾರಿಸಲಾಗಿದೆ. ರ‍್ಯಾಪ್ ಸಂಗೀತದ ಹಿನ್ನೆಲೆಯಲ್ಲಿ ಟ್ರಂಪ್ ಅವರ ನಾಯಕತ್ವ, ಭದ್ರತಾ ವೈಫಲ್ಯ ಮತ್ತು ಅವರ ಸಾರ್ವಜನಿಕ ನಡವಳಿಕೆಯನ್ನು ಈ ವಿಡಿಯೊದಲ್ಲಿ ತೀವ್ರವಾಗಿ ವ್ಯಂಗ್ಯವಾಡಲಾಗಿದೆ.

ವೈಟ್ ಹೌಸ್ ಡಿನ್ನರ್ ವೇಳೆ ಗುಂಡಿನ ಸದ್ದು ಕೇಳಿಬಂದಾಗ ಉಂಟಾದ ಗೊಂದಲ ಮತ್ತು ಟ್ರಂಪ್ ಅವರನ್ನು ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ತರಾತುರಿಯಲ್ಲಿ ಸ್ಥಳದಿಂದ ಹೊರಗೆ ಕರೆದೊಯ್ದ ದೃಶ್ಯಗಳನ್ನು ಈ ವಿಡಿಯೊದಲ್ಲಿ ನಾಟಕೀಯವಾಗಿ ತೋರಿಸಲಾಗಿದೆ. ಟ್ರಂಪ್ ಅಮೆರಿಕದ ಮಾಧ್ಯಮಗಳನ್ನು ನಿಯಂತ್ರಿಸಬಹುದು, ಆದರೆ ಇರಾನ್ ಮೇಲೆ ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ವಿಡಿಯೊ ಮುಖಾಂತರ ಸಾರಲಾಗಿದೆ. ಅಲ್ಲದೆ, ಟ್ರಂಪ್ ತಮ್ಮ ಜನಪ್ರಿಯತೆ ಕುಗ್ಗಿದಾಗ ಜನರ ಗಮನ ಸೆಳೆಯಲು ಇಂತಹ ನಾಟಕೀಯ ಸನ್ನಿವೇಶಗಳನ್ನು ಸೃಷ್ಟಿಸುತ್ತಾರೆ ಎಂದು ಇರಾನ್ ಆರೋಪಿಸಿದೆ.

ಈ ಆನಿಮೇಟೆಡ್ ವಿಡಿಯೊದಲ್ಲಿ ಟ್ರಂಪ್ ಅವರನ್ನು ಅಹಂಕಾರಿ ಎಂದು ಚಿತ್ರಿಸಲಾಗಿದೆ. ಅವರು ಸಾರ್ವಜನಿಕವಾಗಿ ಬಲಿಷ್ಠನಂತೆ ವರ್ತಿಸಿದರೂ, ತೆರೆಯ ಮರೆಯಲ್ಲಿ ಜನರು ಅವರನ್ನು ಹಾಸ್ಯ ಮಾಡುತ್ತಿದ್ದಾರೆ ಎಂದು ಇರಾನ್ ಹೇಳಿದೆ. ಅಮೆರಿಕ ಆರ್ಥಿಕ ಒತ್ತಡ ಎದುರಿಸುತ್ತಿದೆ ಮತ್ತು ಸ್ವತಃ ಟ್ರಂಪ್ ಬೆಂಬಲಿಗರೇ ಅವರ ದೋಷಗಳನ್ನು ಗುರುತಿಸುತ್ತಿದ್ದಾರೆ ಎಂದು ವಿಡಿಯೊದಲ್ಲಿ ಟೀಕಿಸಲಾಗಿದೆ. ಮೆಲಾನಿಯಾ ಟ್ರಂಪ್ ಮತ್ತು ಜೆಡಿ ವ್ಯಾನ್ಸ್ ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಿದ್ದ ಆ ಸಮಾರಂಭದಲ್ಲಿ ನಡೆದ ಗೊಂದಲ ಕೇವಲ ನಾಟಕವಾಗಿತ್ತು ಎಂದು ಈ ಟ್ರ್ಯಾಕ್ ಲೇವಡಿ ಮಾಡಿದೆ.

The post ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ. appeared first on Good News 24x7.

]]>
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. https://www.goodnews24x7.com/c-t-ravi-strongly-condemned-mallikarjun-kharges-statement-on-prime-minister-modi/ Wed, 22 Apr 2026 09:34:37 +0000 https://www.goodnews24x7.com/?p=9378 ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

The post ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. appeared first on Good News 24x7.

]]>

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು ನೋಡಿದರೆ ಜನ ನೀವು ಮಾನಸಿಕ ಅಸ್ವಸ್ಥರಂತೆ ಮಾತನಾಡುತ್ತಿದ್ದೀರಿ ಎಂದು ಭಾವಿಸುತ್ತಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಂದುವರಿದು, “ನಿಜವಾದ ಭಯೋತ್ಪಾದಕರನ್ನು ನಿಮ್ಮ ಪಕ್ಷದ ನಾಯಕರು ‘ಬ್ರದರ್ಸ್’ ಎಂದು ಸಂಬೋಧಿಸುತ್ತಾರೆ, ಆದರೆ ದೇಶದ ಪ್ರಧಾನಿಯನ್ನು ಟೀಕಿಸುವಾಗ ಇಂತಹ ಕೆಳಮಟ್ಟದ ಭಾಷೆ ಬಳಸುತ್ತಿರುವುದು ಖಂಡನೀಯ,” ಎಂದು ಕಿಡಿಕಾರಿದರು.

The post ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. appeared first on Good News 24x7.

]]>
ಮಾಧ್ಯಮಗಳು ಸಮಾಜ ಸುಧಾರಣೆಗೆ ಒತ್ತು ನೀಡಲಿ: ಊಹಾ ಪತ್ರಿಕೋದ್ಯಮದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ. https://www.goodnews24x7.com/media-should-focus-on-social-reform-cm-siddaramaiah-lashes-out-against-speculative-journalism/ Sat, 11 Apr 2026 12:00:24 +0000 https://www.goodnews24x7.com/?p=9218 ಬೀದರ್: “ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಅತ್ಯಂತ ಅಪಾಯಕಾರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಬೀದರ್‌ನಲ್ಲಿ ಆಯೋಜಿಸಲಾಗಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮಗಳು ಕೇವಲ ಮಾಹಿತಿಯನ್ನು ನೀಡುವ ಕೆಲಸಕ್ಕೆ ಸೀಮಿತವಾಗದೆ, ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸುಧಾರಣೆಗೆ ಒತ್ತು…

The post ಮಾಧ್ಯಮಗಳು ಸಮಾಜ ಸುಧಾರಣೆಗೆ ಒತ್ತು ನೀಡಲಿ: ಊಹಾ ಪತ್ರಿಕೋದ್ಯಮದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ. appeared first on Good News 24x7.

]]>

ಬೀದರ್: “ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಅತ್ಯಂತ ಅಪಾಯಕಾರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಬೀದರ್‌ನಲ್ಲಿ ಆಯೋಜಿಸಲಾಗಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮಗಳು ಕೇವಲ ಮಾಹಿತಿಯನ್ನು ನೀಡುವ ಕೆಲಸಕ್ಕೆ ಸೀಮಿತವಾಗದೆ, ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸುಧಾರಣೆಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸಂವಿಧಾನದ ಆಶಯ ಮತ್ತು ಪತ್ರಿಕಾ ಧರ್ಮ:
ಪತ್ರಕರ್ತರು ತಮ್ಮ ವೃತ್ತಿ ಬದುಕಿನಲ್ಲಿ ಸಂವಿಧಾನದ ಆಶಯಗಳನ್ನು ಎಷ್ಟರಮಟ್ಟಿಗೆ ಜಾರಿಗೊಳಿಸುತ್ತಿದ್ದಾರೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಅವರು ಧ್ವನಿ ಇಲ್ಲದವರ ಧ್ವನಿಯಾಗಿ ಪತ್ರಿಕೋದ್ಯಮವನ್ನು ಬಳಸಿಕೊಂಡಿದ್ದರು. ಆದರೆ, ಇಂದು ಕ್ಷುಲ್ಲಕ ವಿಚಾರಗಳನ್ನು ದಿನವಿಡೀ ಪ್ರಸಾರ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. “ಗಂಡ-ಹೆಂಡತಿ ಜಗಳವನ್ನು ತೋರಿಸುವುದರಿಂದ ಸಮಾಜಕ್ಕೆ ಯಾವ ಪ್ರಯೋಜನವಿದೆ?” ಎಂದು ಪ್ರಶ್ನಿಸಿದ ಸಿಎಂ, ಮಾಧ್ಯಮಗಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣಕ್ಕೆ ಪೂರಕವಾದ ಅಂಶಗಳನ್ನು ಜನರಿಗೆ ತಲುಪಿಸಬೇಕು ಎಂದರು.

ಕಾರ್ಪೊರೇಟ್ ಹಿಡಿತದ ಬಗ್ಗೆ ಕಳವಳ:
ಇಂದಿನ ಮಾಧ್ಯಮ ಸಂಸ್ಥೆಗಳು ಕಾರ್ಪೊರೇಟ್ ಹಿತಾಸಕ್ತಿಗಳ ಹಿಡಿತಕ್ಕೆ ಸಿಲುಕಿರುವುದು ಬೇಸರದ ಸಂಗತಿ. ಪತ್ರಕರ್ತರು ಸತ್ಯವನ್ನು ಬರೆದರೂ, ಮಾಲೀಕರ ಒತ್ತಡದಿಂದಾಗಿ ಸಂಪಾದಕರು ಸುದ್ದಿಯನ್ನು ಬದಲಾಯಿಸುವ ಸ್ಥಿತಿ ನಿರ್ಮಾಣವಾಗಿದೆ. “ನಾನು ಮಂತ್ರಿಯಾಗಿ 40 ವರ್ಷಗಳಾದರೂ, ನಮ್ಮ ಸರ್ಕಾರದ ಪರ ಬರೆಯಿರಿ ಎಂದು ಇದುವರೆಗೂ ಯಾರನ್ನೂ ಕೇಳಿಲ್ಲ” ಎಂದು ಹೇಳಿದ ಅವರು, ಪತ್ರಿಕೆಗಳ ಮೇಲೆ ಜನಸಾಮಾನ್ಯರು ಇಟ್ಟಿರುವ ನಂಬಿಕೆಯನ್ನು ಪತ್ರಕರ್ತರು ಉಳಿಸಿಕೊಳ್ಳಬೇಕು ಎಂದು ಆಶಿಸಿದರು.

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ:
ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯನ್ನು ತಮ್ಮ ಸರ್ಕಾರವೇ ಜಾರಿಗೆ ತಂದಿದೆ ಎಂದು ಸ್ಮರಿಸಿದ ಸಿಎಂ, ಈ ಸೌಲಭ್ಯವನ್ನು ಪಡೆಯುವಲ್ಲಿ ನಿಯಮಗಳ ಅಡಚಣೆ ಇದ್ದರೆ ಅವುಗಳನ್ನು ಚರ್ಚಿಸಿ ಶೀಘ್ರವೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

The post ಮಾಧ್ಯಮಗಳು ಸಮಾಜ ಸುಧಾರಣೆಗೆ ಒತ್ತು ನೀಡಲಿ: ಊಹಾ ಪತ್ರಿಕೋದ್ಯಮದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ. appeared first on Good News 24x7.

]]>
ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು! https://www.goodnews24x7.com/i-am-not-afraid-of-such-threats-kharge-is-not-afraid-either-cm-siddaramaiah-retorts/ Wed, 15 Oct 2025 11:06:49 +0000 https://www.goodnews24x7.com/?p=7721 ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು…

The post ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು! appeared first on Good News 24x7.

]]>

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ಇಂದು ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಆರ್.ಎಸ್.ಎಸ್.ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ.


ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ ಅವರು ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು.

ಬೆದರಿಕೆಗೆ ಹೆದರುವುದಿಲ್ಲ

ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ ಅವರು ಹೆದರುವುದಿಲ್ಲ. ನಾನೂ ಹೆಸದರುವುದಿಲ್ಲ ಎಂದರು.

ಸಮೀಕ್ಷೆ: ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದರು.

ಎಲ್ಲ ಶಾಸಕರಿಗೂ ಅನುದಾನ

ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿ ಜೆಡಿಎಸ್ ನವರು ನಮ್ಮ ಶಾಸಕರಿಗೆ ಅನುದಾನ ನೀಡಿದ್ದರೇ ? ಎಂದು ಪ್ರಶ್ನಿಸಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ ಎಂದರು.ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಬಿಜೆಪಿಯವರು ತಾಕತ್ತಿದ್ದರೆ ಆರ್.ಎಸ್.ಎಸ್. ಮೇಲೆ ನಿಷೇಧ ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ ಸೋತು ಹೋದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

The post ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು! appeared first on Good News 24x7.

]]>
‘ನಾನು ಭಾರತದಲ್ಲೇ ಇರೆನಿಸ್ಕೊಂಡೆ’ — ನೈಜೀರಿಯನ್ ಯುವಕನ 10 ಕಾರಣಗಳು ವೈರಲ್! https://www.goodnews24x7.com/i-miss-india-10-reasons-why-a-nigerian-youth-is-viral/ Fri, 05 Sep 2025 13:47:54 +0000 https://www.goodnews24x7.com/?p=7388 ವಿದೇಶಗಳಲ್ಲಿ ಬದುಕುವುದು ಇಷ್ಟವಿಲ್ಲ, ಭಾರತವೇ ನನ್ನ ಮನೆ ಎಂಬ ನೈಜೀರಿಯನ್ ಯುವಕನ ಮಾತುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ಯಾಸ್ಕಲ್ ಒಲಲೆಯಿ, ನೈಜೀರಿಯಾದ ಯುವಕ, ಭಾರತದಲ್ಲಿ ವಾಸಿಸಲು ತೀವ್ರ ಆಸಕ್ತಿ ಹೊಂದಿದ್ದಾರೆ. 2021ರಲ್ಲಿ ಲಾಗೋಸ್ ವಿಶ್ವವಿದ್ಯಾಲಯದಿಂದ ತಮ್ಮ ಶಿಕ್ಷಣವನ್ನು ನಿಲ್ಲಿಸಿ,…

The post ‘ನಾನು ಭಾರತದಲ್ಲೇ ಇರೆನಿಸ್ಕೊಂಡೆ’ — ನೈಜೀರಿಯನ್ ಯುವಕನ 10 ಕಾರಣಗಳು ವೈರಲ್! appeared first on Good News 24x7.

]]>

ವಿದೇಶಗಳಲ್ಲಿ ಬದುಕುವುದು ಇಷ್ಟವಿಲ್ಲ, ಭಾರತವೇ ನನ್ನ ಮನೆ ಎಂಬ ನೈಜೀರಿಯನ್ ಯುವಕನ ಮಾತುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪ್ಯಾಸ್ಕಲ್ ಒಲಲೆಯಿ, ನೈಜೀರಿಯಾದ ಯುವಕ, ಭಾರತದಲ್ಲಿ ವಾಸಿಸಲು ತೀವ್ರ ಆಸಕ್ತಿ ಹೊಂದಿದ್ದಾರೆ. 2021ರಲ್ಲಿ ಲಾಗೋಸ್ ವಿಶ್ವವಿದ್ಯಾಲಯದಿಂದ ತಮ್ಮ ಶಿಕ್ಷಣವನ್ನು ನಿಲ್ಲಿಸಿ, ಇದೇ ವರ್ಷ ಭಾರತಕ್ಕೆ ಬಂದ ಪ್ಯಾಸ್ಕಲ್, ಇಲ್ಲಿನ ಬದುಕು ತನ್ನನ್ನು ಆಕರ್ಷಿಸಿದೆ ಎಂದು ಹೇಳಿದ್ದಾರೆ. ಅವರು ಈಗ ಭಾರತವನ್ನು ಬಿಡುವೆಂದೇ ಇಚ್ಛಿಸುವುದಿಲ್ಲ.

ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದ ಒಂದು ವಿಡಿಯೋದಲ್ಲಿ, ಪ್ಯಾಸ್ಕಲ್ ಭಾರತವನ್ನು ಪ್ರೀತಿಸಲು ಕಾರಣವಾದ 10 ಪ್ರಮುಖ ಅಂಶಗಳನ್ನು ವಿವರಿಸಿದ್ದಾರೆ. ಈ ಕಾರಣಗಳು ಭಾರತೀಯರೇ ಹೊಸ ದೃಷ್ಟಿಕೋನದಿಂದ ತಮ್ಮ ದೇಶವನ್ನು ನೋಡುವಂತೆ ಮಾಡುತ್ತಿವೆ.

ಪ್ಯಾಸ್ಕಲ್ ಭಾರತವನ್ನು ಯಾಕೆ ಇಷ್ಟಪಡುತ್ತಾರೆ? ಇಲ್ಲಿದೆ ಆ 10 ಕಾರಣಗಳು:

  • ಇಲ್ಲಿ ನಿಜವಾದ ಶಾಂತಿ ಸಿಗುತ್ತದೆ: ಆತಂಕದಿಂದ ಎದ್ದೇಳಬೇಕಾದ ಅಗತ್ಯ ಇಲ್ಲ. ಮನಸ್ಸಿಗೆ ಶಾಂತಿ.
  • ಚರ್ಮದ ಬಣ್ಣ ಅಡೆತಡೆ ಆಗದು: ನಾನು ಕಪ್ಪು ಎಂಬುದನ್ನು ಇಲ್ಲಿ ಯಾರೂ ತೂಗಿಸುವುದಿಲ್ಲ. ಭದ್ರತೆಯ ಅನুভೂತಿ ಇದೆ.
  • ಸರಳ ಬದುಕು: ಇಲ್ಲಿನ ಜೀವನ ತೋರಿಕೆಯಿಂದ ಮುಕ್ತ, ನಾಟಕೀಯತೆ ಇಲ್ಲ.
  • ನಾನು ಒಳ್ಳೆಯ ಮನುಷ್ಯನಾಗಬಹುದು: ಇಲ್ಲಿ ನಂಬಿಕೆಯಿಂದ ಬದುಕಲು ಸಾಧ್ಯ.
  • ಪ್ರಾಮಾಣಿಕ ಸಂಭಾಷಣೆ: ಜನರು ನೇರವಾಗಿ ಮಾತನಾಡುತ್ತಾರೆ, ಬೇರೆಯವರಂತೆ ನಟಿಸುವುದಿಲ್ಲ.
  • ವಿವೇಕದ ಜನರು: ಯಾರೂ ನನ್ನ ಚರ್ಮದ ಬಣ್ಣವನ್ನು ಮನಪೂರ್ವಕವಾಗಿ ಸ್ಮರಿಸುತ್ತಿಲ್ಲ.
  • ಭದ್ರತೆ: ರಾತ್ರಿ ನಾನು ಬೈರಿನಲ್ಲಿ ನಡೆಯುವಾಗ, ಭಾರತದಲ್ಲಿ ಜಾಸ್ತಿ ಸುರಕ್ಷತೆ ಇದೆ ಎಂದು ನಂಬುತ್ತೇನೆ, ಅಮೆರಿಕಕ್ಕಿಂತಲೂ.
  • ಹೆಚ್ಚು ಸುಲಭ ಬದುಕು: ಕಡಿಮೆ ಬಾಡಿಗೆ, ನೈಸರ್ಗಿಕ ಆಹಾರ, ಕಡಿಮೆ ಒತ್ತಡ.
  • ನಿಜವಾದ ಸ್ವಾತಂತ್ರ್ಯ: ನನ್ನ ಆದರ್ಶಗಳನ್ನು ಹಿಂಡದೆ ಬದುಕಲು ಅವಕಾಶ.
  • ಗೌರವ: ನಾನು ಹೇಗೆ ಕಾಣುತ್ತೇನೆ ಎನ್ನುವುದಕ್ಕಿಂತ, ನಾನು ನಿಜವಾಗಿಯೂ ಯಾರು ಎಂಬುದಕ್ಕೆ ಗೌರವ ಸಿಗುತ್ತದೆ.

ಪ್ಯಾಸ್ಕಲ್ ಈ 10 ಅಂಶಗಳನ್ನು ಹಂಚಿಕೊಂಡ ನಂತರ, ಹಲವಾರು ಭಾರತೀಯರು ಮತ್ತು ವಿದೇಶಿಗರು ಈ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ #IndiaLove ಮತ್ತು #PascalInIndia ಟ್ರೆಂಡಿಂಗ್ ಆಗುತ್ತಿದೆ.

ಭಾರತವನ್ನು ವಿದೇಶೀಯರು ನೋಡುತ್ತಿರುವ ದೃಷ್ಟಿಕೋನ, ಹಲವಾರು ಜನರಲ್ಲಿ ಹೆಮ್ಮೆ ಮತ್ತು ಚಿಂತನೆ ಎರಡನ್ನೂ ಮೂಡಿಸುತ್ತಿದೆ!

The post ‘ನಾನು ಭಾರತದಲ್ಲೇ ಇರೆನಿಸ್ಕೊಂಡೆ’ — ನೈಜೀರಿಯನ್ ಯುವಕನ 10 ಕಾರಣಗಳು ವೈರಲ್! appeared first on Good News 24x7.

]]>
ಜಾತಿ ಶ್ರೇಷ್ಠತೆ ನಿರಂತರ ಷಡ್ಯಂತ್ರ ನಡೀತಾ ಇದೆ … ಕೆ.ವಿ.ಪ್ರಭಾಕರ್ ಹೇಳಿಕೆ ! https://www.goodnews24x7.com/there-is-a-continuous-conspiracy-of-caste-supremacy-k-v-prabhakars-statement/ Sun, 31 Aug 2025 07:11:01 +0000 https://www.goodnews24x7.com/?p=7131 ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ…

The post ಜಾತಿ ಶ್ರೇಷ್ಠತೆ ನಿರಂತರ ಷಡ್ಯಂತ್ರ ನಡೀತಾ ಇದೆ … ಕೆ.ವಿ.ಪ್ರಭಾಕರ್ ಹೇಳಿಕೆ ! appeared first on Good News 24x7.

]]>

ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ.

ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಪ್ರಚಾರ ಇಲಾಖೆ, SC/ST ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ ವಿಚಾರಗೋಷ್ಠಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ
ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಷೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೊಟ್ಟಣವೇ ಹೆಚ್ಚಾಗಿದೆ. ಕಡ್ಡಿಗೀರುವ ಅವಕಾಶಕ್ಕಾಗಿ ಕಾಯುತ್ತಿರುವಂತೆ ಕಾಣುತ್ತಾರೆ. ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ. ಪ್ರಾಣ ಉಳಿಸುವುದು, ಬಿಡುವುದು ಇವರಿಗೇ ಬಿಟ್ಟಿದೆ ಎಂದು ವಿವರಿಸಿದರು.‌

ಸುದ್ದಿ ಮಾಧ್ಯಮದ ಆತ್ಮ ಆಗಿರುವ “ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯ”ವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಆಗಿದೆ ಎಂದು ಅಭಿಪ್ರಾಯಪಟ್ಟರು. ಇವತ್ತಿನ‌ ಸುದ್ದಿ ಮಾಧ್ಯಮಗಳ ರಚನೆ ಮತ್ತು ಆಚರಣೆಯಲ್ಲಿ ಜಾತ್ಯತೀತತೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

ದೇಶದಲ್ಲಿ ಎರಡು ತದ್ವಿರುದ್ದವಾದ ಬೆಳವಣಿಗೆಗಳು ಅತೀ ವೇಗವಾಗಿ ನಡೆಯುತ್ತಿವೆ. ಒಂದು ಅಂಬೇಡ್ಕರ್ ಅವರ ವಿಗ್ರಹಗಳನ್ನು ಅತೀ ಹೆಚ್ಚು ನಿರ್ಮಿಸುತ್ತಲೇ ಅಂಬೇಡ್ಕರ್ ಅವರ ವಿಚಾರಗಳನ್ನು ಕೊಲ್ಲುವ ಪ್ರಕ್ರಿಯೆ ಕೂಡ ಹೆಚ್ಚು ವೇಗ ಪಡೆದುಕೊಂಡಿದೆ. ವಿಗ್ರಹಗಳನ್ನು ಸ್ಥಾಪಿಸಿ, ವಿಚಾರಗಳನ್ನು ಕೊಲ್ಲುವ ಈ ವಿದ್ಯಮಾನಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಡೀ ದೇಶದಲ್ಲಿ ಅತೀ ಹೆಚ್ಚು ಅಂಬೇಡ್ಕರ್ ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಆದರೆ, ವಿಶ್ವದಲ್ಲೇ ಅತೀ ಹೆಚ್ಚು ಮಾನ್ಯತೆ ಪಡೆದ ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೂಪಗೊಳಿಸುತ್ತಾ, ಸಂವಿಧಾನದ ತಲೆ ಕತ್ತರಿಸುವುದು, ಕೈ ಮುರಿಯುವುದು, ಮಸಿ ಬಳಿಯುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಸಂವಿಧಾನದಿಂದ “ಜಾತ್ಯತೀತ ಮತ್ತು ಸಮಾಜವಾದ” ಎನ್ನುವ ಮೌಲ್ಯವನ್ನು ಕೀಳಬೇಕು ಎನ್ನುವ ಕೂಗಿನ‌ ಹಿಂದೆ ಇರುವುದೂ ಕೂಡ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸುವ ವಿಕೃತ ಮನಸ್ಥಿತಿಯೇ ಆಗಿದೆ ಎಂದು ವಿಶ್ಲೇಷಿಸಿದರು.

ತಮ್ಮ 65 ವರ್ಷಗಳ ಜೀವಿತಾವಧಿಯಲ್ಲಿ ಅರ್ಧಕ್ಕೂ ಹೆಚ್ಚು ಆಯಸ್ಸನ್ನು ಅಂಬೇಡ್ಕರ್ ಅವರು ಪತ್ರಕರ್ತರಾಗಿ, ಸಂಪಾದಕರಾಗಿ, ಲೇಖಕರಾಗಿ, ಬರಹಗಾರರಾಗಿ ಕಳೆದಿದ್ದಾರೆ. 1920 ರಲ್ಲಿ “ಮೂಕನಾಯಕ”, 1927 ರಲ್ಲಿ “ಬಹಿಷ್ಕೃತ ಭಾರತ”, 1928 ರಲ್ಲಿ “ಸಮತಾ”, 1930 ರಲ್ಲಿ “ಜನತಾ”, 1943 ರಲ್ಲಿ ಪ್ರಬುದ್ಧ ಭಾರತ ಪತ್ರಿಕೆಗಳನ್ನು ಆರಂಭಿಸಿ ಮುನ್ನಡೆಸಿದರು.

ಇದನ್ನೂ ಓದಿ: ಆಡಿ ಕಲಿ-ಬರೆದು ಕಲಿ ಎಂಬ ಮಾತಿನ ಗುಟ್ಟು ಏನು? ಮಕ್ಕಳು, ಪೋಷಕರಿಗೆ ತಿಳಿ ಹೇಳಿದ ಕೆ.ವಿ.ಪ್ರಭಾಕರ್!

ಸದ್ಯ ಸುಮಾರು 25000 ಪುಟದಷ್ಟು ಅಂಬೇಡ್ಕರ್ ಅವರ ಬರಹಗಳು ಲಭ್ಯವಿದೆ. ಸುಮಾರು ಐದು ವರ್ಷಗಳ ಕಾಲ ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನೂ ಅಭ್ಯಾಸ ಮಾಡಿ, ಅಧ್ಯಯನ‌ ನಡೆಸಿ “ಬುದ್ಧ ಮತ್ತು ಅವನ ಧರ್ಮ” ಕೃತಿಯನ್ನು ಬರೆಯುವಾಗಲೇ ತಾವು ಮಾಡಿಟ್ಟಿದ್ದ ನೋಟ್ಸ್ ಗಳ ರಾಶಿಯ ಮೇಲೇ ಕೊನೆಯುಸಿರೆಳೆದರು.

ತಮ್ಮ ಇಡೀ ಜೀವಮಾನವನ್ನು ಪ್ರಬುಧ್ಧ ಭಾರತದ ನಿರ್ಮಾಣಕ್ಕಾಗಿ ನಿರಂತರವಾಗಿ ನಿಷ್ಠುರ ಸಂಪಾದಕೀಯಗಳನ್ನು, ಲೇಖನಗಳನ್ನು ಬರೆದರು. ಆ ನಿಷ್ಠುರತೆ ಇವತ್ತಿನ ಸುದ್ದಿ ಮಾಧ್ಯಮಗಳಲ್ಲಿ ಅಳಿಸುತ್ತಿದೆ.

ಒಂದು ಕಡೆ ಮಾಧ್ಯಮಗಳಲ್ಲಿ ದಲಿತ ಸಮುದಾಯದ ಪ್ರತಿನಿಧ್ಯವೇ ಇಲ್ಲ ಎನ್ನುವ ಅಧ್ಯಯನ‌ ವರದಿಗಳು ಬಂದಿವೆ. ನಿರ್ಣಾಯಕ ಸ್ಥಾನಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಸುದ್ದಿ ಸಂಸ್ಥೆಗಳು ನಿಷೇದ ಹೇರಿವೆ ಎನ್ನುವ ವರದಿಗಳೂ ಇವೆ. ಈ ತಾರತಮ್ಯ ಸುದ್ದಿಗಳ, ಸಂಗತಿಗಳ ಆಯ್ಕೆಯ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ ಪತ್ರಿಕೆಗಳನ್ನು ರೂಪಿಸುವ ಮತ್ತು ಸುದ್ದಿಗಳನ್ನು ಗ್ರಹಿಸುವುದರಲ್ಲಿ ಮತ್ತು ಮಂಡಿಸುವುದರಲ್ಲೂ ಅಂಬೇಡ್ಕರ್ ದೃಷ್ಟಿಕೋನ ಕಾಣೆಯಾಗಿದೆ ಎಂದರು.

ಆದ್ದರಿಂದ ಅಂಬೇಡ್ಕರ್ ಅವರ ದೃಷ್ಟಿಕೋನದ ಮರುಸ್ಥಾಪನೆ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾಪತ್ತೆಯಾಗಿರುವ ಕಾಳಜಿಗಳ ಮರು ಶೋಧನೆ ಆಗುವ ಅಗತ್ಯವಿದೆ. 2012 ರ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು ನೆಪವಾಗಿ ಇಟ್ಟುಕೊಂಡು ಪ್ರಜಾವಾಣಿ ಪತ್ರಿಕೆ ದೇವನೂರು ಮಹದೇವ ಅವರ ಅತಿಥಿ ಸಂಪಾದಕತ್ವದಲ್ಲಿ ಸಂಚಿಕೆ ಹೊರತಂದಿತ್ತು. ಈ ಸಂಚಿಕೆಯನ್ನು ನಾನು ಇವತ್ತಿಗೂ ಜೋಪಾನವಾಗಿ ಇಟ್ಟಿದ್ದೀನಿ. ಈ ಸಂಚಿಕೆ ಪತ್ರಿಕೋದ್ಯಮದಲ್ಲಿ ಮರ್ಯಾದೆಗೇಡು ಹತ್ಯೆಗೆ ಒಳಗಾಗಿರುವ ಅಂಬೇಡ್ಕರ್ ದೃಷ್ಟಿಕೋನಕ್ಕೆ ಮರು ಜೀವ ಕೊಡುವ ಅದ್ಭುತ ಪ್ರಯತ್ನವಾಗಿತ್ತು.

ಆ ಸಂಚಿಕೆಯ ಮುಖಪುಟದಲ್ಲಿ, ದೇವನೂರು ಮಹದೇವ ಅವರು ಬರೆದಿರುವ “ಸಮಾನತೆ ಕನಸನ್ನು ಮತ್ತೆ ಕಾಣುತ್ತಾ” ಎನ್ನುವ ಅತಿಥಿ ಸಂಪಾದಕೀಯ ಮತ್ತು ಇದರ ಪಕ್ಕದಲ್ಲೇ ಸಂಪಾದಕ ಶಾಂತಕುಮಾರ್ ಅವರು ಬರೆದಿರುವ “ಕಾಳಜಿಗಳ ಮರು ಶೋಧ..” ಎನ್ನುವ ಸಂಪಾದಕೀಯ ಎರಡೂ ಕನ್ನಡಿಗಳು. ಈ ಸಂಪಾದಕೀಯದ ಕನ್ನಡಿಗಳಲ್ಲಿ ನಾವು ಪತ್ರಕರ್ತರು ನಮ್ಮನ್ನು ನಾವು ಮರು ಶೋಧಿಸಿಕೊಳ್ಳುವ ಅಗತ್ಯವಿದೆ. ಈ ಕನ್ನಡಿಗಳಲ್ಲಿ ಈ ಹೊತ್ತಿನ ಸುದ್ದಿ ಮಾಧ್ಯಮಗಳು ದರ್ಶನ ಪಡೆಯಲಿ ಎಂದು ಆಶಿಸಿದರು.

ವಿಧಾನ ಪರಿಷತ್ ಸದಸ್ಯರಾದ ನವೀನ್ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಡಿ.ಉಮಾಪತಿ‌ ಅವರು ಆಶಯ ಮಾತುಗಳನ್ನಾಡಿದರು. ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೆಷಾ ಖಾನುಂ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿಯ ಕಾರ್ಯದರ್ಶಿ ಸಹನಾ ಭಟ್, ಅಕಾಡೆಮಿ ಸದಸ್ಯರಾದ ಅಹೋಬಳಪತಿ ಸೇರಿ SC/ST ಸಂಪಾದಕರ ಸಂಘದ ಪದಾಧಿಕಾರಿಗಳು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

The post ಜಾತಿ ಶ್ರೇಷ್ಠತೆ ನಿರಂತರ ಷಡ್ಯಂತ್ರ ನಡೀತಾ ಇದೆ … ಕೆ.ವಿ.ಪ್ರಭಾಕರ್ ಹೇಳಿಕೆ ! appeared first on Good News 24x7.

]]>
ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದ ಧರ್ಮಾಧಿಕಾರಿಗಳು https://www.goodnews24x7.com/%e0%b2%b8%e0%b2%a4%e0%b3%8d%e0%b2%af%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%a4%e0%b3%8a%e0%b2%b3%e0%b3%86%e0%b2%a6%e0%b3%81-%e0%b2%87%e0%b2%9f%e0%b3%8d%e0%b2%9f%e0%b2%82%e0%b2%a4/ Sun, 24 Aug 2025 06:45:04 +0000 https://www.goodnews24x7.com/?p=6636 “ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇದೆ” ಇದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇಂದು ನೀಡಿರುವ ಮೊದಲ ಪ್ರತಿಕ್ರಿಯೆ. ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿರುವ ಘಟನೆಗೆ ಸಂಬಂಧಿಸಿದಂತೆ ವೀರೇಂದ್ರ ಹೆಗ್ಗಡೆ ಅವರು ಮೊದಲ ಪ್ರತ್ರಿಕ್ರಿಯೆ ನೀಡಿದ್ದಾರೆ.ಈಗ ಒಂದೊಂದೇ ಸತ್ಯಗಳು…

The post ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದ ಧರ್ಮಾಧಿಕಾರಿಗಳು appeared first on Good News 24x7.

]]>

“ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇದೆ” ಇದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇಂದು ನೀಡಿರುವ ಮೊದಲ ಪ್ರತಿಕ್ರಿಯೆ. ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿರುವ ಘಟನೆಗೆ ಸಂಬಂಧಿಸಿದಂತೆ ವೀರೇಂದ್ರ ಹೆಗ್ಗಡೆ ಅವರು ಮೊದಲ ಪ್ರತ್ರಿಕ್ರಿಯೆ ನೀಡಿದ್ದಾರೆ.ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇವತ್ತಿನ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಅಲಿಯಾಸ್ ಚೆನ್ನ ನೀಡಿದ್ದ ದೂರಿನ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಿತ್ತು. ಮಾಸ್ಕ್ ಮ್ಯಾನ್ ಚಿನ್ನಯ್ಯ ತೋರಿಸಿದ ಜಾಗಗಳಲೆಲ್ಲಾ ಅಗೆದರೂ, ಮಾಸ್ಕ್ ಮ್ಯಾನ್ ಹೇಳಿದಂತೆ ನೂರಾರು ಶವದ ಅಸ್ಥಿಪಂಜರಗಳು ಸಿಗಲಿಲ್ಲ. ಜೊತೆಗೆ ಮಾಸ್ಕ್ ಮ್ಯಾನ್ ದೂರು, ಹೇಳಿಕೆಯ ಬಗ್ಗೆಯೇ ಅನುಮಾನ ಮೂಢಲಾರಂಭಿಸಿತ್ತು. ಈ ಬಗ್ಗೆ ಪ್ರಶ್ನಿಸಿದರೂ, ಸಮರ್ಪಕ ಉತ್ತರವನ್ನು ಮಾಸ್ಕ್ ಮ್ಯಾನ್ ನೀಡಲು ವಿಫಲನಾಗಿದ್ದಾನೆ. ಮಾಸ್ಕ್ ಮ್ಯಾನ್ ಚಿನ್ನಯ್ಯ ಮೊದಲು ಒಂದು ತಲೆ ಬುರುಡೆಯನ್ನು ತಂದಿದ್ದ.

ಅಮೆರಿಕನ್ ಡೈಮಂಡ್​ನಿಂದ ತಯಾರಾದ ವಿಶೇಷ ಗಣಪ.. ಇದರ ಬೆಲೆ ಎಷ್ಟು ಗೊತ್ತಾ?

 

 

ಆ ಬುರುಡೆಯನ್ನು ಪೊಲೀಸರು ಮತ್ತು ಕೋರ್ಟ್ ಗೆ ನೀಡಿ ಹೇಳಿಕೆಯನ್ನು ನೀಡಿದ್ದ. ಆ ಬುರುಡೆಯನ್ನು ಎಲ್ಲಿಂದ ತಂದಿದ್ದ ಎಂಬುದನ್ನು ತಿಳಿಸಲು ವಿಫಲನಾಗಿದ್ದ. ಹೀಗಾಗಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಎಸ್‌ಐಟಿ ಬಂಧಿಸಿದೆ. ಮತ್ತೊಂದೆಡೆ ಮಹೇಶ್ ಶೆಟ್ಟಿ ತಿಮ್ಮರೋಡಿರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಈ ಎಲ್ಲ ಬೆಳವಣಿಗೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು, ಈ ಬಗ್ಗೆ ಹೆಚ್ಚು ಮಾತನಾಡಲ್ಲ . ಎಸ್ಐಟಿ ತನಿಖೆಯ ಹಂತದಲ್ಲಿ ನಾನು ಹೆಚ್ಚು ಮಾತನಾಡಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸುವ ಎಲ್ಲರಿಗೂ ಧನ್ಯವಾದಗಳು. ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ, ಕ್ಷೇತ್ರದ ಮೇಲಿನ ಅಭಿಮಾನ ಹೀಗೇ ಇರಲಿ. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

The post ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದ ಧರ್ಮಾಧಿಕಾರಿಗಳು appeared first on Good News 24x7.

]]>