Meteorological Department Archives - Good News 24x7 https://www.goodnews24x7.com/tag/meteorological-department/ Kannada Wed, 29 Apr 2026 08:42:21 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Meteorological Department Archives - Good News 24x7 https://www.goodnews24x7.com/tag/meteorological-department/ 32 32 ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ https://www.goodnews24x7.com/heatwave-on-the-coast-health-department-on-high-alert9482-2/ Wed, 29 Apr 2026 08:42:21 +0000 https://www.goodnews24x7.com/?p=9482 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಬಿಸಿಲು ಮತ್ತು ಆರ್ದ್ರತೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಿದೆ.…

The post ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ appeared first on Good News 24x7.

]]>

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಬಿಸಿಲು ಮತ್ತು ಆರ್ದ್ರತೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಿದೆ.

ಆಸ್ಪತ್ರೆಗಳಲ್ಲಿ ವಿಶೇಷ ಸಿದ್ಧತೆ
ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಗೆ ತಕ್ಷಣದ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ:

ತಾಲೂಕು ಆಸ್ಪತ್ರೆಗಳು: ತಲಾ 5 ವಿಶೇಷ ಬೆಡ್‌ಗಳು.

ಸಮುದಾಯ ಆರೋಗ್ಯ ಕೇಂದ್ರಗಳು: ತಲಾ 2 ವಿಶೇಷ ಬೆಡ್‌ಗಳು.

ಚರ್ಮದ ಕಾಯಿಲೆಗಳ ಹೆಚ್ಚಳ
ಬಿಸಿಲಿನ ತೀವ್ರತೆಯಿಂದಾಗಿ ಜಿಲ್ಲೆಯಲ್ಲಿ ಚರ್ಮದ ಕಾಯಿಲೆಗಳು ಕಾಣಿಸಿಕೊಳ್ಳಲಾರಂಭಿಸಿವೆ. ವಿಶೇಷವಾಗಿ ಬೆವರು ಸಾಲೆ, ಚರ್ಮದ ತುರಿಕೆ ಮತ್ತು ಕಜ್ಜಿಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ದಿನವೊಂದಕ್ಕೆ ಸರಾಸರಿ 3 ರಿಂದ 5 ರೋಗಿಗಳು ಇಂತಹ ಲಕ್ಷಣಗಳೊಂದಿಗೆ ಚಿಕಿತ್ಸೆಗೆ ಬರುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ
ಹೀಟ್ ಸ್ಟ್ರೋಕ್ ಸೇರಿದಂತೆ ಬಿಸಿಲಿನಿಂದ ಉಂಟಾಗುವ ಯಾವುದೇ ಪ್ರಕರಣಗಳು ದಾಖಲಾದಲ್ಲಿ, ತಕ್ಷಣವೇ ಮಾಹಿತಿಯನ್ನು ಆರೋಗ್ಯ ಇಲಾಖೆಯ ವೆಬ್ ಪೋರ್ಟಲ್‌ನಲ್ಲಿ ದಾಖಲಿಸುವಂತೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಓಆರ್‌ಎಸ್ (ORS) ಕಾರ್ನರ್ ಸೌಲಭ್ಯ
ನಿರ್ಜಲೀಕರಣ ತಡೆಗಟ್ಟಲು ಜಿಲ್ಲಾಸ್ಪತ್ರೆಯಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರಗಳವರೆಗೆ ‘ಓಆರ್‌ಎಸ್ ಕಾರ್ನರ್’ಗಳನ್ನು ಸ್ಥಾಪಿಸಲಾಗಿದೆ. ಔಷಧಗಳ ಕೊರತೆಯಾಗದಂತೆ ಸ್ಥಳೀಯವಾಗಿಯೇ ಖರೀದಿಸಲು ಅವಕಾಶ ನೀಡಲಾಗಿದ್ದು, ಕಳೆದ ಒಂದು ವಾರದಿಂದ ಓಆರ್‌ಎಸ್ ಪ್ಯಾಕೆಟ್‌ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ.

ಗಮನಿಸಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ವಿಶೇಷ ಸಭೆ ನಡೆದಿದ್ದು, ಬಿಸಿಲಿನಿಂದ ಗಂಭೀರ ಸಮಸ್ಯೆ ಎದುರಾದ ರೋಗಿಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಲು ಸೂಚಿಸಲಾಗಿದೆ. ಸದ್ಯದ ಮಾಹಿತಿಯ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಅಧಿಕೃತ ಹೀಟ್ ಸ್ಟ್ರೋಕ್ ಪ್ರಕರಣಗಳು ವರದಿಯಾಗಿಲ್ಲ.

The post ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ appeared first on Good News 24x7.

]]>
ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ… : ಹವಾಮಾನ ಇಲಾಖೆ ಮುನ್ಸೂಚನೆ! https://www.goodnews24x7.com/rajyada-vividhe%e1%b8%8de-biruga%e1%b8%b7i-sahita-bhari-ma%e1%b8%b7e-sadhyate-havamana-ilakhe-munsucane-havamana-ilakhe-saiklon-prabhavadinda-rajyada-halavu-jillega%e1%b8%b7alli-bhari-ma/ Tue, 01 Apr 2025 06:01:59 +0000 https://www.goodnews24x7.com/?p=2956 ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ… : ಹವಾಮಾನ ಇಲಾಖೆ ಮುನ್ಸೂಚನೆ! ಸೈಕ್ಲೋನ್ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಪೂರ್ವ ಮುಂಗಾರು ಆರ್ಭಟವು ಗುಡುಗು ಸಿಡಿಲಿನೊಂದಿಗೆ ಏಪ್ರಿಲ್ 6 ರವರೆಗೂ ಅಪ್ಪಳಿಸಲಿದೆ ಎಂದು…

The post ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ… : ಹವಾಮಾನ ಇಲಾಖೆ ಮುನ್ಸೂಚನೆ! appeared first on Good News 24x7.

]]>

ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ… : ಹವಾಮಾನ ಇಲಾಖೆ ಮುನ್ಸೂಚನೆ!

ಸೈಕ್ಲೋನ್ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಪೂರ್ವ ಮುಂಗಾರು ಆರ್ಭಟವು ಗುಡುಗು ಸಿಡಿಲಿನೊಂದಿಗೆ ಏಪ್ರಿಲ್ 6 ರವರೆಗೂ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆ, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಆಲಿಕಲ್ಲು ಮಳೆಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳು ಮತ್ತು ದಕ್ಷಿಣ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಆಲಿಕಲ್ಲು ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ.

The post ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ… : ಹವಾಮಾನ ಇಲಾಖೆ ಮುನ್ಸೂಚನೆ! appeared first on Good News 24x7.

]]>
ಕರ್ನಾಟಕದ 14 ಜಿಲ್ಲೆಗಳಲ್ಲಿ ಮಾರ್ಚ್ 12ರಿಂದ 3 ದಿನಗಳ ಕಾಲ ಮಳೆ. https://www.goodnews24x7.com/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95%e0%b2%a6-14-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%ae/ Sat, 08 Mar 2025 05:14:17 +0000 https://www.goodnews24x7.com/?p=2663 ಕರ್ನಾಟಕ ಮಾರ್ಚ್ 08: ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಏರುತ್ತಿದ್ದಂತೆ ಮಳೆ(Rain)ಯ ಮುನ್ಸೂಚನೆಯೂ ಸಿಕ್ಕಿದೆ. ಮಾರ್ಚ್ 12ರಿಂದ ಮೂರು ದಿನಗಳ ಕಾಲ ಕರ್ನಾಟಕದ 14ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ,…

The post ಕರ್ನಾಟಕದ 14 ಜಿಲ್ಲೆಗಳಲ್ಲಿ ಮಾರ್ಚ್ 12ರಿಂದ 3 ದಿನಗಳ ಕಾಲ ಮಳೆ. appeared first on Good News 24x7.

]]>

ಕರ್ನಾಟಕ ಮಾರ್ಚ್ 08: ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಏರುತ್ತಿದ್ದಂತೆ ಮಳೆ(Rain)ಯ ಮುನ್ಸೂಚನೆಯೂ ಸಿಕ್ಕಿದೆ. ಮಾರ್ಚ್ 12ರಿಂದ ಮೂರು ದಿನಗಳ ಕಾಲ ಕರ್ನಾಟಕದ 14ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇದೆ.
ಹೊನ್ನಾವರ, ಕಾರವಾರ, ಹಾಸನ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಬೀದರ್ ಹಾಗೂ ಕೊಪ್ಪಳದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇತ್ತು. ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

The post ಕರ್ನಾಟಕದ 14 ಜಿಲ್ಲೆಗಳಲ್ಲಿ ಮಾರ್ಚ್ 12ರಿಂದ 3 ದಿನಗಳ ಕಾಲ ಮಳೆ. appeared first on Good News 24x7.

]]>
ಜಿಟಿ ಜಿಟಿ ಮಳೆಯಿಂದಾಗಿ ಬೆಂಗಳೂರು ಕೂಲ್.. ಕೂಲ್! https://www.goodnews24x7.com/%e0%b2%9c%e0%b2%bf%e0%b2%9f%e0%b2%bf-%e0%b2%9c%e0%b2%bf%e0%b2%9f%e0%b2%bf-%e0%b2%ae%e0%b2%b3%e0%b3%86%e0%b2%af%e0%b2%bf%e0%b2%82%e0%b2%a6%e0%b2%be%e0%b2%97%e0%b2%bf-%e0%b2%ac%e0%b3%86%e0%b2%82/ Fri, 27 Dec 2024 11:37:42 +0000 https://www.goodnews24x7.com/?p=1301 ಬೆಂಗಳೂರು : ನಿನ್ನೆಯಿಂದ (ಡಿಸೆಂಬರ್ 26) ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಚಳಿಗಾಲ ಹಿನ್ನೆಲೆಯಲ್ಲಿ ಕೂಲ್ ಕೂಲ್ ವಾತಾವರಣ ಮಧ್ಯ ಇದೀಗ ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲಿ ಕೊಂಚ ನಿಧಾನವಾಗಿತ್ತಾದರೂ ಬಳಿಕ ಬಿರುಸುಗೊಂಡಿತ್ತು. ಹಾಗೇ ಹಿಂಗಾರು ಮಳೆ ಸಹ…

The post ಜಿಟಿ ಜಿಟಿ ಮಳೆಯಿಂದಾಗಿ ಬೆಂಗಳೂರು ಕೂಲ್.. ಕೂಲ್! appeared first on Good News 24x7.

]]>

ಬೆಂಗಳೂರು : ನಿನ್ನೆಯಿಂದ (ಡಿಸೆಂಬರ್ 26) ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಚಳಿಗಾಲ ಹಿನ್ನೆಲೆಯಲ್ಲಿ ಕೂಲ್ ಕೂಲ್ ವಾತಾವರಣ ಮಧ್ಯ ಇದೀಗ ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲಿ ಕೊಂಚ ನಿಧಾನವಾಗಿತ್ತಾದರೂ ಬಳಿಕ ಬಿರುಸುಗೊಂಡಿತ್ತು. ಹಾಗೇ ಹಿಂಗಾರು ಮಳೆ ಸಹ ಉತ್ತಮವಾಗಿದೆ. ಇದೀಗ ಚಳಿಗಾಲದಲ್ಲೂ ಸಹ ಮಳೆ ನಿಲ್ಲುತ್ತಿಲ್ಲ. ನಿನ್ನೆ (ಗುರುವಾರ) ಮಧ್ಯಾಹ್ನದ ವೇಳೆ ನಗರದ ಹಲವೆಡೆ ಜಿನಿ ಜಿನಿ ಮಳೆಯಾಗಿತ್ತು. ಅದೇ ಸರಿಯಾದ ಮಧ್ಯಾಹ್ನದ ಹೊತ್ತಿಗೆ ಇಂದು(ಡಿಸೆಂಬರ್ 27) ಸಹ ಜಿಟಿ ಜಿಟಿ ಮಳೆಯಾಗಿದೆ. ಬೆಂಗಳೂರಿನಲ್ಲಿ ವಾತಾವರಣ ಕೂಲ್ ಕೂಲ್ ಆಗಿದ್ದು, ಜನರು ನಡುಗುವಂತಾಗಿದೆ. ಇನ್ನೊಂದೆಡೆ ಬಿಟ್ಟು ಬಿಟ್ಟು ಬರುತ್ತಿರುವ ಮಳೆಗೆ ಜನರು ರೋಸಿಹೋಗಿದ್ದಾರೆ. ಇನ್ನು ಬಿಟ್ಟು ಬಿಟ್ಟು ಬರುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಬೀದಿ ವ್ಯಾಪಾರಿಗಳು ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದೆ. ಅತ್ತ ಜೋರಾಗಿ ಬರುತ್ತಿಲ್ಲ. ಇನ್ನೊಂದೆಡೆ ಆಕಡೆ ಹೋಗುತ್ತಿಲ್ಲ. ಆಗಾಗ ಜಿನಿ ಜಿನಿ ಮಳೆಯಾಗುತ್ತಿದೆ.

ಬಂಗಾಲ ಉಪಸಾಗರದ ನೈರುತ್ಯ ಭಾಗದಲ್ಲಿ ವಾಯ ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆಯ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಹೊರತುಪಡಿಸಿ ರಾಜ್ಯದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಹಗುರ ಮಳೆಯಾಗಲಿದೆ ಎಂದು ತಿಳಿಸಿದೆ.
ಇಂದು ಮತ್ತು ನಾಳೆ ಹಾಸನ, ಮೈಸೂರು, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು ನಗರ ಜಿಲ್ಲೆ ಕರ್ನಾಟಕದ ಒಳಭಾಗದ ಮೇಲೆ ಪ್ರತ್ಯೇಕವಾದ ಸ್ಥಳಗಳಲ್ಲಿ ಮಂಜು ಇರಲಿದೆ. ನಾಳೆ ಬೆಳಿಗ್ಗೆ ಸಂದರ್ಭದಲ್ಲಿ ಬೆಂಗಳೂರು ಸುತ್ತಮುತ್ತ ಮಂಜು ಕವಿದ ವಾತಾವರಣ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿಯಲ್ಲಿ ಚುಮು ಚುಮು ಚಳಿ ಆರಂಭ.


ರಾಜಧಾನಿಯಲ್ಲಿ ಚುಮು ಚುಮು ಚಳಿ ಆರಂಭವಾಗಿದ್ದು, ಸಂಜೆ ಆಗುತ್ತಿದ್ದಂತೆಯೇ ಶುರುವಾಗುವ ಚಳಿ ಮರುದಿನ ಸೂರ್ಯೋದಯದವರೆಗೂ ಹಾಗೆಯೇ ಇರುತ್ತದೆ. ಅವಧಿಗೂ ಮುನ್ನವೇ ಬೆಂಗಳೂರಿನಲ್ಲಿ ಭಾರೀ ಚಳಿ ಆರಂಭವಾಗಿತ್ತು. ಬಳಿಕ ಕೊಂಚ ಕಡಿಮೆಯಾಗಿತ್ತಾದರೂ ಬಳಿಕ ಬಂದ ಸೈಕ್ಲೋನ್ನಿಂದ ಬಿಸಿಲೇ ಇಲ್ಲದಂತಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಚಳಿಯ ಜೊತೆ ಜೊತೆಗೆ ಆಗಾಗ ತುಂತೂರು ಮಳೆಯಾಗುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ.
ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದೆ. ಶಿರಾಲಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಶುಕ್ರವಾರ ಬೆಳಗ್ಗೆಯಿಂದಲೇ ಮಳೆ ಜಿನುಗುತ್ತಿದೆ.
ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

The post ಜಿಟಿ ಜಿಟಿ ಮಳೆಯಿಂದಾಗಿ ಬೆಂಗಳೂರು ಕೂಲ್.. ಕೂಲ್! appeared first on Good News 24x7.

]]>