Metro Archives - Good News 24x7 https://www.goodnews24x7.com/tag/metro/ Kannada Fri, 26 Jun 2026 06:26:54 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Metro Archives - Good News 24x7 https://www.goodnews24x7.com/tag/metro/ 32 32 ನಮ್ಮ ಮೆಟ್ರೋ ರೈಲು ಮತ್ತೆ ಕೈಕೊಟ್ಟಿದ್ದೇಕೆ? ? https://www.goodnews24x7.com/why-did-our-metro-train-give-up-again/ Fri, 26 Jun 2026 06:25:26 +0000 https://www.goodnews24x7.com/?p=9667 ಗುರುವಾರ ಸಂಜೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ರೈಲಿನ ಬಾಗಿಲು ಮುಚ್ಚದ ಕಾರಣ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದ ಘಟನೆಗೆ ಅಸಲಿ ಕಾರಣ ಬಯಲಾಗಿದೆ. ಪ್ರಯಾಣಿಕರೊಬ್ಬರ ಲೋಹದ ಸರ ಬಾಗಿಲಿನ ಗೈಡ್‌ವೇನಲ್ಲಿ ಸಿಲುಕಿಕೊಂಡಿದ್ದರಿಂದ ಈ ತಾಂತ್ರಿಕ ವ್ಯತ್ಯಯ ಉಂಟಾಗಿತ್ತು…

The post ನಮ್ಮ ಮೆಟ್ರೋ ರೈಲು ಮತ್ತೆ ಕೈಕೊಟ್ಟಿದ್ದೇಕೆ? ? appeared first on Good News 24x7.

]]>

ಗುರುವಾರ ಸಂಜೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ರೈಲಿನ ಬಾಗಿಲು ಮುಚ್ಚದ ಕಾರಣ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದ ಘಟನೆಗೆ ಅಸಲಿ ಕಾರಣ ಬಯಲಾಗಿದೆ. ಪ್ರಯಾಣಿಕರೊಬ್ಬರ ಲೋಹದ ಸರ ಬಾಗಿಲಿನ ಗೈಡ್‌ವೇನಲ್ಲಿ ಸಿಲುಕಿಕೊಂಡಿದ್ದರಿಂದ ಈ ತಾಂತ್ರಿಕ ವ್ಯತ್ಯಯ ಉಂಟಾಗಿತ್ತು ಎಂದು ಬಿಎಂಆರ್‌ಸಿಎಲ್ ತನ್ನ ಪ್ರಾಥಮಿಕ ತನಿಖಾ ವರದಿಯಲ್ಲಿ ತಿಳಿಸಿದೆ.

ಪರ್ಪಲ್ ಲೈನ್ ಮೆಟ್ರೋ ರೈಲು ಹಾಗೂ ರೈಲಿನ ಬಾಗಿಲಿನ ಡೋರ್ ಗೈಡ್‌ವೇ ಯಲ್ಲಿ ಸಿಲುಕಿಕೊಂಡಿದ್ದ ಲೋಹದ ಸರ

ರೈಲಿನಲ್ಲಿ ಯಾವುದೇ ತಾಂತ್ರಿಕ ದೋಷವಿಲ್ಲ
ಬಾಗಿಲಿನಲ್ಲಿ ಸಿಲುಕಿತ್ತು ಲೋಹದ ಸರ
ಬಿಎಂಆರ್​ಸಿಎಲ್ ಪ್ರಾಥಮಿಕ ತನಿಖಾ ವರದಿಯಲ್ಲಿ ಬಯಲು

ಜೂನ್ 26 ,ಬೆಂಗಳೂರು : ನಮ್ಮ ಮೆಟ್ರೋದ ನೇರಳೆ ಮಾರ್ಗದ (Purple Line) ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಗುರುವಾರ ಸಂಜೆ ರೈಲಿನ ಬಾಗಿಲು ಮುಚ್ಚದೆ ಪ್ರಯಾಣಿಕರು ಆತಂಕಗೊಂಡಿದ್ದ ಮತ್ತು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ರೈಲಿನಲ್ಲಿ ಯಾವುದೇ ತಾಂತ್ರಿಕ ದೋಷ ಇರಲಿಲ್ಲ ಎಂದು ಸ್ಪಷ್ಟಪಡಿಸಿರುವ ಬಿಎಂಆರ್‌ಸಿಎಲ್, ಘಟನೆಗೆ ಕಾರಣವಾದ ಅಸಲಿ ಸತ್ಯವನ್ನು ಬಿಚ್ಚಿಟ್ಟಿದೆ.

ಡೋರ್ ಗೈಡ್‌ವೇನಲ್ಲಿ ಸಿಲುಕಿದ್ದ ಮೆಟಲ್ ಚೈನ್
ಗುರುವಾರ ಸಂಜೆ 7:36 ರ ಸುಮಾರಿಗೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಬಾಗಿಲು ಸರಿಯಾಗಿ ಮುಚ್ಚದ ಕಾರಣ ಮುಂಜಾಗ್ರತಾ ಕ್ರಮವಾಗಿ ಸಂಜೆ 7:54 ರವರೆಗೆ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ನೂರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿತ್ತು.

ಕಾರಣ ಪತ್ತೆ ಹಚ್ಚಿದ ಬಿಎಂಆರ್​ಸಿಎಲ್ ನಿರ್ವಹಣಾ ತಂಡ
ಈ ಘಟನೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್‌ನ ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ಜಂಟಿಯಾಗಿ ಸಮಗ್ರ ಪ್ರಾಥಮಿಕ ತನಿಖೆ ನಡೆಸಿದ್ದು, ಪ್ರಯಾಣಿಕರೊಬ್ಬರ ಲೋಹದ ಸರ ರೈಲಿನ ಬಾಗಿಲಿನ ಡೋರ್ ಗೈಡ್‌ವೇ ಯಲ್ಲಿ ಸಿಲುಕಿಕೊಂಡಿದ್ದನ್ನು ಪತ್ತೆ ಹಚ್ಚಿವೆ. ಇದರಿಂದಾಗಿಯೇ ಬಾಗಿಲುಗಳು ಸ್ವಯಂಚಾಲಿತವಾಗಿ ಲಾಕ್ ಆಗಲು ಸಾಧ್ಯವಾಗಿರಲಿಲ್ಲ ಎಂದು ವರದಿ ತಿಳಿಸಿದೆ.

ಪ್ರಯಾಣಿಕರ ಸುರಕ್ಷತೆಯೇ ನಮ್ಮ ಆದ್ಯತೆ ಬಿಎಂಆರ್‌ಸಿಎಲ್

ರೈಲು ಹಾಗೂ ಅದರ ಬಾಗಿಲಿನ ವ್ಯವಸ್ಥೆಯನ್ನು ಸಮಗ್ರವಾಗಿ ತಾಂತ್ರಿಕ ಪರಿಶೀಲನೆಗೆ ಒಳಪಡಿಸಿದ ನಂತರ, ರೈಲಿನ ಉಪಕರಣಗಳಲ್ಲಿ ಯಾವುದೇ ರೀತಿಯ ದೋಷ ಕಂಡುಬಂದಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ‘ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆಯೇ ಬಿಎಂಆರ್‌ಸಿಎಲ್‌ಗೆ ಅತ್ಯುನ್ನತ ಆದ್ಯತೆಯಾಗಿದೆ. ಸಾರ್ವಜನಿಕರಿಗೆ ಸುರಕ್ಷಿತ, ವಿಶ್ವಾಸಾರ್ಹ ಹಾಗೂ ನಿರಂತರ ಮೆಟ್ರೋ ಸೇವೆಗಳನ್ನು ಒದಗಿಸಲು ನಾವು ಸದಾ ಬದ್ಧರಾಗಿದ್ದೇವೆ’ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಯಾಣಿಕರು ಮೆಟ್ರೋ ಹತ್ತುವಾಗ ಮತ್ತು ಇಳಿಯುವಾಗ ತಮ್ಮ ಬ್ಯಾಗ್ ಹಾಗೂ ಸರಗಳಂತಹ ವಸ್ತುಗಳ ಬಗ್ಗೆ ಎಚ್ಚರ ವಹಿಸುವುದು ಅವಶ್ಯಕವಾಗಿದೆ.

The post ನಮ್ಮ ಮೆಟ್ರೋ ರೈಲು ಮತ್ತೆ ಕೈಕೊಟ್ಟಿದ್ದೇಕೆ? ? appeared first on Good News 24x7.

]]>
13 ನಿಮಿಷಗಳ ರೋಚಕ ಕಾರ್ಯಾಚರಣೆ, ನಮ್ಮ ಮೆಟ್ರೋದಲ್ಲಿ ಜೀವಂತ ಹೃದಯ ಸಾಗಾಟ https://www.goodnews24x7.com/muslims-march-to-condemn-propaganda-against-dharmasthala/ Tue, 18 Nov 2025 08:35:36 +0000 https://www.goodnews24x7.com/?p=8207 ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ ಸಂಜೆ ಅಸ್ಟರ್ ಆರ್.ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಜೀವಂತ ಹೃದಯವನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಸಾಗಿಸುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ…

The post 13 ನಿಮಿಷಗಳ ರೋಚಕ ಕಾರ್ಯಾಚರಣೆ, ನಮ್ಮ ಮೆಟ್ರೋದಲ್ಲಿ ಜೀವಂತ ಹೃದಯ ಸಾಗಾಟ appeared first on Good News 24x7.

]]>

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ ಸಂಜೆ ಅಸ್ಟರ್ ಆರ್.ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಜೀವಂತ ಹೃದಯವನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಸಾಗಿಸುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ ಸಂಜೆ ಅಸ್ಟರ್ ಆರ್.ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಜೀವಂತ ಹೃದಯವನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಸಾಗಿಸುವಲ್ಲಿ ಯಶಸ್ವಿಯಾಗಿದೆ. ಈ ಕಾರ್ಯವನ್ನು 25.05.2025ರ ಬಿ.ಎಂ.ಆರ್.ಸಿ.ಎಲ್ ನ ಸಂಯುಕ್ತ ಪ್ರಕ್ರಿಯಾ ಆದೇಶದಂತೆ ನೆರವೇರಿಸಲಾಯಿತು.

ಸಂಜೆ 7.26 ಗಂಟೆಗೆ, ಆರು ಸದಸ್ಯರ ವೈದ್ಯಕೀಯ ತಂಡವು ಅಂಗಾಂಗ ಪೆಟ್ಟಿಗೆಯೊಂದಿಗೆ ರಾಗಿಗುಡ್ಡ ಮೆಟ್ರೋ ನಿಲ್ದಾಣ ತಲುಪಿತು. ಸುರಕ್ಷತಾ ಅಧಿಕಾರಿಗಳು ಮತ್ತು ನಿಲ್ದಾಣ ಸಿಬ್ಬಂದಿ ಅವರನ್ನು ಸ್ವಾಗತಿಸಿದರು. ತಂಡವು ಭದ್ರತಾ ತಪಾಸಣೆ ಮುಗಿಸಿ 19:29ಕ್ಕೆ ಪ್ಲಾಟ್‌ಫಾರ್ಮ್ ತಲುಪಿತು.ವೈದ್ಯಕೀಯ ತಂಡವು 19:32ಕ್ಕೆ ರೈಲುಗೆ ಹತ್ತಿ, ಸುರಕ್ಷತಾ ಸಿಬ್ಬಂದಿಗಳೊಂದಿಗೆ 19:39ಕ್ಕೆ ಬೊಮ್ಮಸಂದ್ರ ನಿಲ್ದಾಣ ತಲುಪಿತು. ಅಲ್ಲಿನ ASO ಮತ್ತು ಸ್ಟೇಷನ್ ಕಂಟ್ರೋಲರ್ ತಂಡವನ್ನು ನಿಲ್ದಾಣದ ನಿರ್ಗಮನದವರೆಗೆ ಮಾರ್ಗದರ್ಶನ ಮಾಡಿದರು. ಹೃದಯವನ್ನು ತಕ್ಷಣ ಆಂಬ್ಯುಲೆನ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಆಂಬ್ಯುಲೆನ್ಸ್ ಹೊರಟು 20:12ಕ್ಕೆ ನಾರಾಯಣ ಹೃದಯಾಲಯ ತಲುಪಿತು.ಇದು ನಮ್ಮ ಮೆಟ್ರೋ ಮೂಲಕ ಸಾಗಿಸಲಾದ ಐದನೇ ಯಶಸ್ವಿ ಮಾನವ ಅಂಗಾಂಗ, ಮತ್ತು ಜೀವನ ರಕ್ಷಣಾ ಕಾರ್ಯಗಳಲ್ಲಿ BMRCL ತನ್ನ ಬದ್ಧತೆಯನ್ನು ಮತ್ತೆ ತೋರಿಸಿದೆ.

The post 13 ನಿಮಿಷಗಳ ರೋಚಕ ಕಾರ್ಯಾಚರಣೆ, ನಮ್ಮ ಮೆಟ್ರೋದಲ್ಲಿ ಜೀವಂತ ಹೃದಯ ಸಾಗಾಟ appeared first on Good News 24x7.

]]>
ನಮ್ಮ ಮೆಟ್ರೋ ನಿಲ್ದಾಣಗಳಿಗೂ ಬಂತು `ನಂದಿನಿ’ ಪಾರ್ಲರ್… 175ಕ್ಕೂ ಹೆಚ್ಚು ಉತ್ಪನ್ನಗಳ ಮಾರಾಟ ! https://www.goodnews24x7.com/namma-me%e1%b9%adro-nilda%e1%b9%87aga%e1%b8%b7igu-bantu-nandini-parlar-175kku-heccu-utpannaga%e1%b8%b7a-mara%e1%b9%ada-metrobengalurunandinikmf-be%e1%b9%85ga%e1%b8%b7uru-namma/ Tue, 26 Aug 2025 05:32:49 +0000 https://www.goodnews24x7.com/?p=6726 ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇದೀಗ ನಂದಿನಿ ಪಾರ್ಲರ್‌ಗಳು ಆರಂಭವಾಗಿದ್ದು, 175ಕ್ಕೂ ಅಧಿಕ ನಂದಿನಿ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗುತ್ತಿವೆ. ಹೌದು, ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ಹೆಮ್ಮೆಯ ನಂದಿನಿ ಪಾರ್ಲರ್‌ಗೆ ಅವಕಾಶ ಕೊಡದೇ ಅಮುಲ್ ಪಾರ್ಲರ್‌ಗಳಿಗೆ ಅವಕಾಶ ಕೊಟ್ಟಿದೆ ಎಂದು ದೊಡ್ಡ…

The post ನಮ್ಮ ಮೆಟ್ರೋ ನಿಲ್ದಾಣಗಳಿಗೂ ಬಂತು `ನಂದಿನಿ’ ಪಾರ್ಲರ್… 175ಕ್ಕೂ ಹೆಚ್ಚು ಉತ್ಪನ್ನಗಳ ಮಾರಾಟ ! appeared first on Good News 24x7.

]]>

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇದೀಗ ನಂದಿನಿ ಪಾರ್ಲರ್‌ಗಳು ಆರಂಭವಾಗಿದ್ದು, 175ಕ್ಕೂ ಅಧಿಕ ನಂದಿನಿ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗುತ್ತಿವೆ.

ಹೌದು, ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ಹೆಮ್ಮೆಯ ನಂದಿನಿ ಪಾರ್ಲರ್‌ಗೆ ಅವಕಾಶ ಕೊಡದೇ ಅಮುಲ್ ಪಾರ್ಲರ್‌ಗಳಿಗೆ ಅವಕಾಶ ಕೊಟ್ಟಿದೆ ಎಂದು ದೊಡ್ಡ ಮಟ್ಟದ ಪ್ರತಿರೋಧ ವ್ಯಕ್ತವಾಗಿತ್ತು. ಇದೆಲ್ಲದರ ನಂತರ ಕಡೆಗೂ ನಂದಿನಿ ಪಾರ್ಲರ್‌ಗಳು ಮೆಟ್ರೋ ನಿಲ್ದಾಣದಲ್ಲಿ ಕಾರ್ಯಾರಂಭ ಮಾಡಿವೆ.ಇದನ್ನೂ ಓದಿ: ಕರ್ನಾಟಕದ ಗಡಿಯಿಂದ 19 ಕಿ.ಮೀ ದೂರದಲ್ಲಿ ನಿರ್ಮಾಣವಾಗಲಿದೆ ಹೊಸೂರು ವಿಮಾನ ನಿಲ್ದಾಣ!

ಕೆಎಂಎಫ್ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿಲ್ಲದೇ ಇದ್ದದ್ದೇ ಇದಕ್ಕೆ ಕಾರಣ ಅನ್ನೋದು ಗೊತ್ತಾಗಿತ್ತು. ಬೆಂಗಳೂರು ಮೆಟ್ರೋ ರೈಲು ನಿಗಮ ಹಂಚಿಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಪಕ್ಷಪಾತ ಮಾಡಿಲ್ಲ ಎಂದು ಸ್ಪಷ್ಟಪಡಿಸಿತ್ತು. ನಂತರ ನಂದಿನಿ ಪಾರ್ಲರ್‌ಗೆ 10 ಕಡೆ ಅವಕಾಶ ಮಾಡಿಕೊಡಲಾಗಿತ್ತು. ಈಗ ಕೊನೆಗೂ ಮೂರು ಕಡೆ ನಂದಿನಿ ಪಾರ್ಲರ್‌ಗಳು ಆರಂಭವಾಗಿದ್ದು, ಭರ್ಜರಿ ರೆಸ್ಪಾನ್ಸ್ ದೊರೆಯುತ್ತಿದೆ.

ಪ್ರಾರಂಭಿಕವಾಗಿ ಮೂರು ಪಾರ್ಲರ್‌ಗಳನ್ನ ಸಿಎಂ, ಕೆಎಂಎಫ್ ಎಂಡಿ ಹಾಗೂ ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಅವರು ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಉದ್ಘಾಟನೆ ಮಾಡಿದರು. ಅದರಂತೆ ಮೆಜೆಸ್ಟಿಕ್, ಕೋಣನಕುಂಟೆ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜು ಬಳಿ ಪ್ರಾರಂಭಗೊಂಡಿವೆ.

ಇನ್ನು ಈ ನಂದಿನಿ ಪಾರ್ಲರ್‌ಗಳಲ್ಲಿ ಸುಮಾರು 175ಕ್ಕೂ ಹೆಚ್ಚು ನಂದಿನಿ ಉತ್ಪನ್ನಗಳು ದೊರೆಯುತ್ತಿವೆ. ಇದರ ಜೊತೆಗೆ ಹಲವು ಹೊಸ ಉತ್ಪನ್ನಗಳನ್ನೂ ಪರಿಚಯಿಸಲಾಗಿದೆ. ಗೌರಿ-ಗಣೇಶ ಹಬ್ಬ, ದಸರಾ ಹಬ್ಬಗಳಲ್ಲಿ ಹೆಚ್ಚಾಗಿ ನಂದಿನಿ ಉತ್ಪನ್ನ ಬಳಸಿ ನಮ್ಮ ರೈತರಿಗೆ ಪರೋಕ್ಷವಾಗಿ ಸಪೋರ್ಟ್ ಮಾಡಿ ಎಂದು ಕೆಎಂಎಫ್ ಎಂಡಿ ತಿಳಿಸಿದ್ದಾರೆ.

ಇನ್ನುಳಿದ 7 ಪಾರ್ಲರ್‌ಗಳನ್ನು ಆದಷ್ಟು ಬೇಗ ಶುರು ಮಾಡಲು ಸಿದ್ಧತೆತೆಗಳು ನಡೆಯುತ್ತಿದ್ದು, ಇನ್ನಷ್ಟು ನಿಲ್ದಾಣಗಳಲ್ಲಿ ನಂದಿನಿ ಪಾರ್ಲರ್ ಪ್ರಾರಂಭಿಸಲು ಕೆಎಂಎಫ್ ಜಾಗ ಕೇಳಲು ನಿರ್ಧರಿಸಿದೆ. ಜೊತೆಗೆ ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿ 500ಕ್ಕೂ ಹೆಚ್ಚು ಪಾರ್ಲರ್ ಶುರು ಮಾಡುವ ಗುರಿಯನ್ನು ಕೆಎಂಎಫ್ ಹೊಂದಿದೆ.ಇದನ್ನೂ ಓದಿ: ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ – ಪೊಲೀಸರಿಂದ ತೀವ್ರ ಶೋಧ

The post ನಮ್ಮ ಮೆಟ್ರೋ ನಿಲ್ದಾಣಗಳಿಗೂ ಬಂತು `ನಂದಿನಿ’ ಪಾರ್ಲರ್… 175ಕ್ಕೂ ಹೆಚ್ಚು ಉತ್ಪನ್ನಗಳ ಮಾರಾಟ ! appeared first on Good News 24x7.

]]>
ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ https://www.goodnews24x7.com/%e0%b2%b9%e0%b2%b3%e0%b2%a6%e0%b2%bf-%e0%b2%ae%e0%b2%be%e0%b2%b0%e0%b3%8d%e0%b2%97%e0%b2%a6-%e0%b2%ae%e0%b3%86%e0%b2%9f%e0%b3%8d%e0%b2%b0%e0%b3%8b-%e0%b2%b8%e0%b3%8b%e0%b2%ae%e0%b2%b5%e0%b2%be/ Sun, 17 Aug 2025 12:48:25 +0000 https://www.goodnews24x7.com/?p=6298 ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ನಮ್ಮ ಮೆಟ್ರೋ ಹಳದಿ ಮಾರ್ಗದ…

The post ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ appeared first on Good News 24x7.

]]>

ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ

ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳುಬೆಳಿಗ್ಗೆ 5:00 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ. ಈ ವಿಶೇಷ ವ್ಯವಸ್ಥೆ ಕೇವಲ ಸೋಮವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮರುದಿನ ಮಂಗಳವಾರ (ಆ.19) ದಿಂದ ಹಳದಿ ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 6:30 ರಿಂದ ಪ್ರಾರಂಭವಾಗಲಿವೆ.
ಹಿಸುತ್ತವೆ.

ಹಳದಿ ಮಾರ್ಗ ಎಲ್ಲಿಂದ ಎಲ್ಲಿಯವರೆಗೆ ಸಂಚಾರ
ಆರ್​ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಸಂಪರ್ಕ ಕಲಿಸಲಾಗಿದ್ದು, ಒಟ್ಟು 19.15 ಕಿಲೋ ಮೀಟರ್ ಉದ್ದದ ಮಾರ್ಗವಾಗಿದೆ. ಬೆಂಗಳೂರಿನ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿಯಿಂದ ಬೆಂಗಳೂರಿನ ಕೇಂದ್ರ ಭಾಗದ ನಡುವೆ ಸಂಪರ್ಕ ಕೊಂಡಿಯಾಗಿದೆ.

ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ. ಹಳದಿ ಮಾರ್ಗದ ರೈಲು 3 ಮೆಟ್ರೋ ಲೈನ್‌ಗೆ ಕೂಡುತ್ತದೆ. ಹಳದಿ ಮಾರ್ಗವು ಹಸಿರು ಮಾರ್ಗ, ಗುಲಾಬಿ, ನೀಲಿ ಮಾರ್ಗಕ್ಕೆಕ್ಕೆ ಕೂಡುತ್ತದೆ. ಜಯದೇವ ಆಸ್ಪತ್ರೆ ನಿಲ್ದಾಣವು ಅತಿ ಎತ್ತರ ಹಾಗೂ ದೊಡ್ಡ ಮೆಟ್ರೋ ನಿಲ್ದಾಣ ಎಂಬ ಖ್ಯಾತಿ ಪಡೆದಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗದ ವಿಶೇಷತೆಗಳೇನು? ಇಲ್ಲಿದೆ ವಿವರ, ಫೋಟೋಸ್​ ನೋಡಿ

ನಮ್ಮ ಮೆಟ್ರೋ ಹಳದಿ ಮಾರ್ಗದ ನಿಲ್ದಾಣಗಳು: ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರ್ ರಸ್ತೆ, ಇನ್ಫೋಸಿಸ್‌ ಫೌಂಡೇಶನ್ ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಬೆರತೇನ ಅಗ್ರಹಾರ, ಹೊಸ ರೋಡ್, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿ ಗುಡ್ಡ ದೇವಸ್ಥಾನ, ಆರ್‌.ವಿ (ರಾಷ್ಟ್ರೀಯ ವಿದ್ಯಾಲಯ) ರಸ್ತೆ.

The post ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ appeared first on Good News 24x7.

]]>
85 ಮೆಟ್ರೋ ಸ್ಟೇಷನ್​ಗಳಲ್ಲೂ ಅಪರ್ಣಾದ್ದೇ ಧ್ವನಿ! ಯೆಲ್ಲೋ ಲೈನ್ ಗೂ ಬಂತು ಖ್ಯಾತ ನಿರೂಪಕಿ ಕಂಠ.. https://www.goodnews24x7.com/aparnas-voice-is-heard-at-all-85-metro-stations-the-famous-anchorwomans-voice-has-also-come-to-the-yellow-line/ Mon, 11 Aug 2025 11:03:05 +0000 https://www.goodnews24x7.com/?p=5823 ಅಪರ್ಣಾ, ಯಾರಿಗೆತಾನೇ ಗೊತ್ತಿಲ್ಲ ಹೇಳಿ , ನಟಿ ಹಾಗೂ ನಿರೂಪಕಿಯಾಗಿ ಜಯಪ್ರಿಯತೆ ಪಡೆದವರು , ಅವರ ಸುಮಧುರ ಧ್ವನಿಯು ಬೆಂಗಳೂರಿನ ಹಸಿರು ಮತ್ತು ನೇರಳೆ ಮೆಟ್ರೋ ಮಾರ್ಗಗಳಲ್ಲಿ ಜನಪ್ರಿಯವಾಗಿತ್ತು. ಇದೀಗ ಹೊಸದಾಗಿ ಉದ್ಘಾಟನೆಯಾದ ಹಳದಿ ಮೆಟ್ರೋ ಮಾರ್ಗದಲ್ಲಿ ಸಹ ಇವರ ಧ್ವನಿಯನ್ನು…

The post 85 ಮೆಟ್ರೋ ಸ್ಟೇಷನ್​ಗಳಲ್ಲೂ ಅಪರ್ಣಾದ್ದೇ ಧ್ವನಿ! ಯೆಲ್ಲೋ ಲೈನ್ ಗೂ ಬಂತು ಖ್ಯಾತ ನಿರೂಪಕಿ ಕಂಠ.. appeared first on Good News 24x7.

]]>

ಅಪರ್ಣಾ, ಯಾರಿಗೆತಾನೇ ಗೊತ್ತಿಲ್ಲ ಹೇಳಿ , ನಟಿ ಹಾಗೂ ನಿರೂಪಕಿಯಾಗಿ ಜಯಪ್ರಿಯತೆ ಪಡೆದವರು , ಅವರ ಸುಮಧುರ ಧ್ವನಿಯು ಬೆಂಗಳೂರಿನ ಹಸಿರು ಮತ್ತು ನೇರಳೆ ಮೆಟ್ರೋ ಮಾರ್ಗಗಳಲ್ಲಿ ಜನಪ್ರಿಯವಾಗಿತ್ತು. ಇದೀಗ ಹೊಸದಾಗಿ ಉದ್ಘಾಟನೆಯಾದ ಹಳದಿ ಮೆಟ್ರೋ ಮಾರ್ಗದಲ್ಲಿ ಸಹ ಇವರ ಧ್ವನಿಯನ್ನು ಬಳಸಲಾಗಿದೆ. ಅಪರ್ಣಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ ತಮ್ಮ ಕೊನೆಯ ದಿನಗಳಲ್ಲಿ ಯೆಲ್ಲೋ ಲೈನ್ ನ ಮೆಟ್ರೋ ಅನ್ನೊನ್ಸಮೆಂಟ್ ರೆಕಾರ್ಡಿಂಗ್‌ ಮಾಡಿದ್ದರು. 2024ರ ಏಪ್ರಿಲ್-ಮೇ ನಲ್ಲಿ ಮೆಟ್ರೋದ ತಾಂತ್ರಿಕ ತಂಡ ಅಪರ್ಣಾ ಬಳಿ ತೆರೆಳಿ ಅವರ ಧ್ವನಿಯನ್ನು ರೆಕಾರ್ಡಿಂಗ್ ಮಾಡಿಕೊಂಡಿತ್ತು.

ಕಳೆದ ವರ್ಷ ಜುಲೈನಲ್ಲಿ ನಿಧನ ಹೊಂದಿದ್ದ ನಿರೂಪಕಿ ಅಪರ್ಣಾ ಅನಾರೋಗ್ಯ ದಿಂದ ಬಳಲುತ್ತಿದ್ದರು . ಕ್ಯಾನ್ಸರ್ ಮಧ್ಯೆಯೂ ಅಪರ್ಣಾ ತಮ್ಮ ಧ್ವನಿ ನೀಡಿ ಕರ್ತವ್ಯ ಮೆರೆದಿದ್ದಾರೆ.

ಹಳದಿ ಬಣ್ಣದ ಮಾರ್ಗ ಭಾನುವಾರ (ಆಗಸ್ಟ್ 10) ಉದ್ಘಾಟನೆಗೊಂಡಿತು. ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಆರ್​ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಈ ರೈಲು ಸಂಪರ್ಕ ಕಲ್ಪಿಸುತ್ತದೆ. ಒಟ್ಟೂ 16 ನಿಲ್ದಾಣಗಳನ್ನು ಈ ಮೆಟ್ರೋ ರೈಲು ಹಾದು ಹೋಗುತ್ತದೆ. ಈ ಮಾರ್ಗದಲ್ಲಿ ಅಪರ್ಣಾ ಧ್ವನಿ ಪ್ರತಿಧ್ವನಿಸಲಿದೆ.

 

ಅಪರ್ಣಾ ಧ್ವನಿ ತುಂಬಾನೇ ಸುಮಧುರವಾಗಿತ್ತು. ಅವರು ಆ್ಯಂಕರಿಂಗ್​ಗೆ ನಿಂತರೆ ಬಾಯಿಯಿಂದ ಮುತ್ತುಗಳು ಉದುರುತ್ತಿವೆ ಎಂದನಿಸುತ್ತಿತ್ತು. ಹಸಿರು ಹಾಗೂ ಪರ್ಪಲ್ ಲೈನ್ ಮೆಟ್ರೋಗೆ ಅಪರ್ಣಾ ಅವರೇ ಧ್ವನಿ ನೀಡಿದ್ದರು. ಇದು ಮೆಟ್ರೋದ ಹೈಲೈಟ್ ಕೂಡ ಆಗಿತ್ತು. ಹಳದಿ ಬಣ್ಣದ ಮೆಟ್ರೋಗೂ ಅವರದ್ದೇ ಧ್ವನಿ ಇರಬೇಕು ಎಂಬುದು ಕನ್ನಡಿಗರ ಆಸೆ ಆಗಿತ್ತು. ‘ಹಳೆಯ ಮಾರ್ಗದಲ್ಲಿ ಅಪರ್ಣಾ ಧ್ವನಿ ಮುಂದುವರಿಸುತ್ತೇವೆ. ಹಳದಿ ಬಣ್ಣಕ್ಕೆ ಕಷ್ಟ’ ಎಂದು ಮೆಟ್ರೋ ಅಧಿಕಾರಿಗಳು ಈ ಮೊದಲು ಹೇಳಿದ್ದರು. ಆದರೆ , ಇದೀಗ ಹಳದಿ ಲೈನ್ ಮೆಟ್ರೋಗೂ ಅಪರ್ಣಾ ಅವರ ಧ್ವನಿ ಮುಂದುವರೆದಿರುವುದು ಕನ್ನಡಿಗರಲ್ಲಿ ಸಂತಸ ತಂದಿದೆ .

ಸದ್ಯ ಹಸಿರು ಬಣ್ಣದ ಲೈನ್​ ನಾಗಸಂದ್ರದಿಂದ ಸಿಲ್ಕ್ ಇನ್ಸ್​ಟಿಟ್ಯೂಟ್​ವರೆಗೆ ಕಾರ್ಯ ನಿರ್ವಹಿಸುತ್ತಿದ್ದು, 32 ಮೆಟ್ರೋ ಸ್ಟೇಷನ್​ಗಳು ಇವೆ. ಪರ್ಪಲ್ ಲೈನ್​ ವೈಟ್ ಫೀಲ್ಡ್​​ನಿಂದ ಚೆಲ್ಲಘಟ್ಟದವರೆಗೆ ಕಾರ್ಯ ನಿರ್ವಹಿಸುತ್ತಿದ್ದು 37 ಮೆಟ್ರೋ ಸ್ಟೇಷನ್​ಗಳು ಇವೆ. ಈಗ ಹಳದಿ ಮೆಟ್ರೋ ಸೇರಿದರೆ 85 ಸ್ಟೇಷನ್​ಗಳಿದ್ದು , ಎಲ್ಲಾ ಸ್ಟೇಷನ್ ಗಳಲ್ಲೂ ಅಪರ್ಣಾ ಅವರದ್ದೇ ಧ್ವನಿ ಇರಲಿದೆ.

The post 85 ಮೆಟ್ರೋ ಸ್ಟೇಷನ್​ಗಳಲ್ಲೂ ಅಪರ್ಣಾದ್ದೇ ಧ್ವನಿ! ಯೆಲ್ಲೋ ಲೈನ್ ಗೂ ಬಂತು ಖ್ಯಾತ ನಿರೂಪಕಿ ಕಂಠ.. appeared first on Good News 24x7.

]]>
ಹಳದಿ ಮಾರ್ಗದ ಮೆಟ್ರೋ ಲೋಕಾರ್ಪಣೆ; ಮೋದಿಗಾಗಿ ಈ ಮಾರ್ಗದ ಮೆಟ್ರೋ ಕೂಡ ಬಂದ್. https://www.goodnews24x7.com/ha%e1%b8%b7adi-margada-me%e1%b9%adro-lokarpa%e1%b9%87e-modigagi-i-margada-me%e1%b9%adro-ku%e1%b8%8da-band-be%e1%b9%85ga%e1%b8%b7uru-nagarada-ar-vi-rasteyinda-bommasandrada-na%e1%b8%8duvina-nam/ Sun, 10 Aug 2025 05:49:22 +0000 https://www.goodnews24x7.com/?p=5673 ಬೆಂಗಳೂರು: ನಗರದ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗ (Namma Metro Yellow Line)ಕ್ಕೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಲಿದ್ದಾರೆ. ಯೆಲ್ಲೋ ಮಾರ್ಗದ ಮೆಟ್ರೋ ಆರಂಭಿಸುತ್ತಿರುವುದರಿಂದ ಹಸಿರು ಮಾರ್ಗದ ಮೆಟ್ರೋವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ.…

The post ಹಳದಿ ಮಾರ್ಗದ ಮೆಟ್ರೋ ಲೋಕಾರ್ಪಣೆ; ಮೋದಿಗಾಗಿ ಈ ಮಾರ್ಗದ ಮೆಟ್ರೋ ಕೂಡ ಬಂದ್. appeared first on Good News 24x7.

]]>

ಬೆಂಗಳೂರು: ನಗರದ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗ (Namma Metro Yellow Line)ಕ್ಕೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಲಿದ್ದಾರೆ. ಯೆಲ್ಲೋ ಮಾರ್ಗದ ಮೆಟ್ರೋ ಆರಂಭಿಸುತ್ತಿರುವುದರಿಂದ ಹಸಿರು ಮಾರ್ಗದ ಮೆಟ್ರೋವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ.

ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ಮೋದಿ ಅವರು ಇಂದು ಆಗಮಿಸುತ್ತಿದ್ದಾರೆ. ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದಾದ ಮೇಲೆ ಹಳದಿ ಮಾರ್ಗದ ಮೆಟ್ರೋವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕೂಡ ಇದೇ ವೇಳೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರಿಗೆ ಭದ್ರತಾ ದೃಷ್ಟಿಯಿಂದ ಹಸಿರು ಮಾರ್ಗದ ಮೆಟ್ರೋವನ್ನ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳು ಮುಗಿದ ಬಳಿಕ ಹಸಿರು ಮಾರ್ಗದ ಮೆಟ್ರೋ ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪ್ರಯಾಣಿಕರು ಸಹಕರಿಸಬೇಕು ಎಂದು ಕೋರಲಾಗಿದೆ.

ನಗರದ ಬಸವನಗುಡಿ ಪೊಲೀಸರ ಮನವಿ ಹಿನ್ನೆಲೆ ಹಸಿರು ಮಾರ್ಗದಲ್ಲಿ ಬರುವಂತಹ 4 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗುತ್ತಿದೆ. ಲಾಲ್ ಬಾಗ್, ಸೌತ್ ಎಂಡ್, ಜಯನಗರ, ಆರ್.ವಿ ರಸ್ತೆಯ ಮೆಟ್ರೋ ಸ್ಟೇಷನ್ಗಳನ್ನು ಭದ್ರತೆ ದೃಷ್ಟಿಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿರುತ್ತದೆ. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೂ ಬಂದ್ ಆಗಿರುತ್ತವೆ. 12 ಗಂಟೆ ನಂತರ ಎಂದಿನಂತೆ ಸಂಚಾರ ಆರಂಭ ಮಾಡಲಾಗುತ್ತದೆ.

The post ಹಳದಿ ಮಾರ್ಗದ ಮೆಟ್ರೋ ಲೋಕಾರ್ಪಣೆ; ಮೋದಿಗಾಗಿ ಈ ಮಾರ್ಗದ ಮೆಟ್ರೋ ಕೂಡ ಬಂದ್. appeared first on Good News 24x7.

]]>
ನಾಳೆ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ. ನಾಳಿನ ವೇಳಾಪಟ್ಟಿ ಹೀಗಿದೆ ? https://www.goodnews24x7.com/the-prime-minister-will-flag-off-the-yellow-line-metro-tomorrow-what-is-the-schedule-for-tomorrow/ Sat, 09 Aug 2025 11:06:37 +0000 https://www.goodnews24x7.com/?p=5652 ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್​ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು…

The post ನಾಳೆ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ. ನಾಳಿನ ವೇಳಾಪಟ್ಟಿ ಹೀಗಿದೆ ? appeared first on Good News 24x7.

]]>

ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್​ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು ಪ್ರಧಾನಿ ಮೋದಿ ಆಗಸ್ಟ್​ 10ರಂದು (ನಾಳೆ) ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲದೇ ಮೂರು ವಂದೇ ಭಾರತ್ ರೈಲುಗಳಿಗೂ ಮೋದಿ ಅಂದು ಚಾಲನೆ ನೀಡಲಿದ್ದಾರೆ. ಬೆಂಗಳೂರು-ಬೆಳಗಾವಿ, ಅಮೃತಸರ-ಮಾತಾ ವೈಷ್ಣೋದೇವಿ, ನಾಗಪುರ-ಪುಣೆ ಮಾರ್ಗದ ವಂದೇ ಭಾರತ್ ರೈಲುಗಳನ್ನ ಮೋದಿ ಉದ್ಘಾಟಿಲಿದ್ದಾರೆ.. ಇದೇ ವೇಳೆ ನಮ್ಮ ಮೆಟ್ರೋದ 3ನೇ ಹಂತದ 2 ಕಾರಿಡಾರ್‌ಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಜಧಾನಿಗೆ ನಮೋ! ನಾಳೆ ಪ್ರಧಾನಿ ವೇಳಾಪಟ್ಟಿ ಏನು ?

    • ನಾಳೆ ಬೆಳಗ್ಗೆ 7.50ಕ್ಕೆ ದೆಹಲಿಯಿಂದ ಹೊರಡಲಿರುವ ಮೋದಿ
    • ಬೆ.10.30ಕ್ಕೆ ಬೆಂಗಳೂರು HAL ವಿಮಾನ ನಿಲ್ದಾಣಕ್ಕೆ ಮೋದಿ ಆಗಮನ
    • ಬೆ.10.50ಕ್ಕೆ ಹೆಲಿಕಾಪ್ಟರ್‌ನಲ್ಲಿ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ಗೆ ಆಗಮನ
    • ಬೆ.11ಕ್ಕೆ ರಸ್ತೆ ಮೂಲಕ ಸಂಗೊಳ್ಳಿ ರಾಯಣ್ಣ ಸಿಟಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿ
    • ಬೆ.11.15ಕ್ಕೆ ರೈಲ್ವೆ ನಿಲ್ದಾಣದಲ್ಲಿ 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ
    • ಬೆ.11.45ಕ್ಕೆ ರಸ್ತೆ ಮಾರ್ಗವಾಗಿ ರಾಗಿಗುಡ್ಡದ ಮೆಟ್ರೋ ನಿಲ್ದಾಣಕ್ಕೆ ಆಗಮನ
    • ಬೆ.11.50 ರಿಂದ ಮ.12.50ವರೆಗೂ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
    • ಮೆಟ್ರೋ ರೈಲಿನಲ್ಲಿಯೇ ಎಲೆಕ್ಟ್ರಾನಿಕ್‌ ಸಿಟಿ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ
    • ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಮ್ಮ ಮೆಟ್ರೋದ 3ನೇ ಹಂತಕ್ಕೆ ಶಂಕುಸ್ಥಾಪನೆ
    • ಮ.1 ರಿಂದ 2 ಗಂಟೆವರೆಗೂ IIIT ಆಡಿಟೋರಿಯಂನಲ್ಲಿ ಕಾರ್ಯಕ್ರಮ
    • ಮ.2.05ಕ್ಕೆ ಹೆಲಿಕಾಪ್ಟರ್‌ನಲ್ಲಿ HAL ವಿಮಾನ ನಿಲ್ದಾಣಕ್ಕೆ ನಮೋ ವಾಪಸ್
    • ಮ.2.40ಕ್ಕೆ HAL ವಿಮಾನ ನಿಲ್ದಾಣದಿಂದ ದೆಹಲಿಗೆ ಮೋದಿಯ ಪ್ರಯಾಣ

The post ನಾಳೆ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ. ನಾಳಿನ ವೇಳಾಪಟ್ಟಿ ಹೀಗಿದೆ ? appeared first on Good News 24x7.

]]>
ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣಗೂ ತಟ್ಟಿದೆ ಸಾರಿಗೆ ನೌಕರರ ಮುಷ್ಕರದ ಬಸ್​ ಬಂದ್​ ಬಿಸಿ! https://www.goodnews24x7.com/kannada-veteran-actor-honnavalli-krishna-also-affected-by-the-transport-workers-strike-bus-bandh-is-hot/ Tue, 05 Aug 2025 10:27:32 +0000 https://www.goodnews24x7.com/?p=5371 ಸಾರಿಗೆ ನೌಕರರ ಬಂದ್ ಎಪೆಕ್ಟ್ ಬರೀ ಜನ ಸಾಮಾನ್ಯರಿಗಷ್ಟೇ ಅಲ್ಲದೇ ಸ್ಟಾರ್​ ನಟನಿಗೂ ತಟ್ಟಿದೆ. ವೈಟ್ ಪಿಲ್ಡ್​​ನಿಂದ ಮೆಟ್ರೋ ಮೂಲಕ ಮೆಜೆಸ್ಟಿಕ್​ಗೆ ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ದಂಪತಿ ಬಂದಿದ್ದರು. ಆದ್ರೆ, ಮೆಜೆಸ್ಟಿಕ್‌ನಿಂದ ಮಾದನಾಯಕಹಳ್ಳಿ ಹೋಗಲು ಬಸ್​ಗಾಗಿ ಕಾಯುತ್ತಿದ್ದರು. ಸಾರಿಗೆ…

The post ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣಗೂ ತಟ್ಟಿದೆ ಸಾರಿಗೆ ನೌಕರರ ಮುಷ್ಕರದ ಬಸ್​ ಬಂದ್​ ಬಿಸಿ! appeared first on Good News 24x7.

]]>

ಸಾರಿಗೆ ನೌಕರರ ಬಂದ್ ಎಪೆಕ್ಟ್ ಬರೀ ಜನ ಸಾಮಾನ್ಯರಿಗಷ್ಟೇ ಅಲ್ಲದೇ ಸ್ಟಾರ್​ ನಟನಿಗೂ ತಟ್ಟಿದೆ. ವೈಟ್ ಪಿಲ್ಡ್​​ನಿಂದ ಮೆಟ್ರೋ ಮೂಲಕ ಮೆಜೆಸ್ಟಿಕ್​ಗೆ ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ದಂಪತಿ ಬಂದಿದ್ದರು. ಆದ್ರೆ, ಮೆಜೆಸ್ಟಿಕ್‌ನಿಂದ ಮಾದನಾಯಕಹಳ್ಳಿ ಹೋಗಲು ಬಸ್​ಗಾಗಿ ಕಾಯುತ್ತಿದ್ದರು.

ಸಾರಿಗೆ ನೌಕರರ ಮುಷ್ಕರ ಮಾಡಿದ್ದರಿಂದ ಇತ್ತೀಚಿಗೆ ನೇಮಕವಾದ ಚಾಲಕರು ಇಂದು ಬಸ್ ಚಲಾಯಿಸುತ್ತಿದ್ದರು. ಆದ್ರೆ ಬಹುತೇಕ ಬಸ್​ಗಳು ರಸ್ತೆಗೆ ಇಳಿದಿಲ್ಲ. ಹೀಗಾಗಿ ತಮ್ಮ ತಮ್ಮ ಊರಿಗೆ ಹೋಗಲು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು.

ಆದ್ರೆ, ಸಾರಿಗೆ ನೌಕರರ ಬಂದ್ ಎಪೆಕ್ಟ್ ಬರೀ ಜನ ಸಾಮಾನ್ಯರಿಗಷ್ಟೇ ಅಲ್ಲದೇ ಸ್ಟಾರ್​ ನಟನಿಗೂ ತಟ್ಟಿದೆ. ವೈಟ್ ಪಿಲ್ಡ್​​ನಿಂದ ಮೆಟ್ರೋ ಮೂಲಕ ಮೆಜೆಸ್ಟಿಕ್​ಗೆ ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ದಂಪತಿ ಬಂದಿದ್ದರು. ಆದ್ರೆ, ಮೆಜೆಸ್ಟಿಕ್‌ನಿಂದ ಮಾದನಾಯಕನಹಳ್ಳಿಗೆ ಹೋಗಲು ಬಸ್​ಗಾಗಿ ಕಾಯುತ್ತಿದ್ದರು. ಆದರೆ ಬಸ್​ಗಳು ರಸ್ತೆಗಿಳಿಯದ ಕಾರಣ ಕ್ಯಾಬ್ ಮೂಲಕ ತೆರಳಿದ್ದಾರೆ.

ಈ ಬಗ್ಗೆ ಮಾತಾಡಿದ ನಟ ಹೊನ್ನವಳ್ಳಿ ಕೃಷ್ಣ, ಈ ತರ ಬಂದ್​ ಆಗಬಾರದಾಗಿತ್ತು. ಈಗ ತಾನೇ ಊರಿಗೆ ಹೋಗಿ ಬರ್ತಾ ಇದ್ವಿ. ಹೀಗೆ ಆಗಿದಕ್ಕೆ ಜನರಿಗೆ ತುಂಬಾ ತೊಂದರೆ ಆಗಿದೆ. ನಿಲ್ದಾಣದಲ್ಲಿ ಬಸ್​ಗಾಗಿ ಕಾದು ಕುಳಿತಿದ್ದಾರೆ. ಇನ್ನೊಂದು ಸಾರಿ ಹೀಗೆ ಆಗದಿರೋ ಹಾಗೇ ನೋಡಿಕೊಳ್ಳಬೇಕು ಎಂದರು.

The post ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣಗೂ ತಟ್ಟಿದೆ ಸಾರಿಗೆ ನೌಕರರ ಮುಷ್ಕರದ ಬಸ್​ ಬಂದ್​ ಬಿಸಿ! appeared first on Good News 24x7.

]]>
ಹೈದರಾಬಾದ್ ಮೆಟ್ರೋದಲ್ಲಿ ಹೃದಯ ರವಾನೆ, ಕನ್ನಡಿಗ ವೈದ್ಯನ ನೇತೃತ್ವ. https://www.goodnews24x7.com/%e0%b2%b9%e0%b3%88%e0%b2%a6%e0%b2%b0%e0%b2%be%e0%b2%ac%e0%b2%be%e0%b2%a6%e0%b3%8d-%e0%b2%ae%e0%b3%86%e0%b2%9f%e0%b3%8d%e0%b2%b0%e0%b3%8b%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%b9%e0%b3%83/ Sun, 19 Jan 2025 08:00:20 +0000 https://www.goodnews24x7.com/?p=1790 ಹೈದರಾಬಾದ್ :- ಹೃದಯವನ್ನು ಏರ್ಲಿಫ್ಟ್ ಮಾಡಿರುವುದು ಕೇಳಿದ್ದೇವೆ, ಆ್ಯಂಬ್ಯುಲೆನ್ಸ್ನಲ್ಲಿ ರವಾನೆ ಮಾಡಿದ್ದು ನೋಡಿದ್ದೇವೆ ಆದರೆ ಮೊದಲ ಬಾರಿಗೆ ಮೆಟ್ರೋದಲ್ಲಿ ಹೃದಯ ರವಾನೆ ಮಾಡಿ ರೋಗಿಯ ಜೀವವನ್ನು ಉಳಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕರ್ನಾಟಕದ ಧಾರವಾಡ ಮೂಲದ ವೈದ್ಯರ ಅಜಯ್ ಎಂಬುವವರು ಇದರ…

The post ಹೈದರಾಬಾದ್ ಮೆಟ್ರೋದಲ್ಲಿ ಹೃದಯ ರವಾನೆ, ಕನ್ನಡಿಗ ವೈದ್ಯನ ನೇತೃತ್ವ. appeared first on Good News 24x7.

]]>

ಹೈದರಾಬಾದ್ :- ಹೃದಯವನ್ನು ಏರ್ಲಿಫ್ಟ್ ಮಾಡಿರುವುದು ಕೇಳಿದ್ದೇವೆ, ಆ್ಯಂಬ್ಯುಲೆನ್ಸ್ನಲ್ಲಿ ರವಾನೆ ಮಾಡಿದ್ದು ನೋಡಿದ್ದೇವೆ ಆದರೆ ಮೊದಲ ಬಾರಿಗೆ ಮೆಟ್ರೋದಲ್ಲಿ ಹೃದಯ ರವಾನೆ ಮಾಡಿ ರೋಗಿಯ ಜೀವವನ್ನು ಉಳಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕರ್ನಾಟಕದ ಧಾರವಾಡ ಮೂಲದ ವೈದ್ಯರ ಅಜಯ್ ಎಂಬುವವರು ಇದರ ನೇತೃತ್ವವಹಿಸಿದ್ದರು. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ರೋಗಿಯ ಹೃದಯವನ್ನು ಮತ್ತೊಬ್ಬರಿಗೆ ಕಸಿ ಮಾಡಲಾಗಿದೆ.
ಹೈದರಾಬಾದ್ ಮೆಟ್ರೋದಲ್ಲಿ ದಾನಿಯ ಹೃದಯ ರವಾನೆ ಮಾಡಲಾಗಿದೆ. ಕೇವಲ 13 ನಿಮಿಷಗಳಲ್ಲಿ 13 ಕಿ.ಮೀ ದೂರವನ್ನು ಕ್ರಮಿಸುವ ರೀತಿಯಲ್ಲಿ ಹಸಿರು ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು. ಈ ಸಂಪೂರ್ಣ ಜವಾಬ್ದಾರಿಯನ್ನು ಕನ್ನಡಿಗ ವೈದ್ಯರೊಬ್ಬರು ಹೊತ್ತುಕೊಂಡಿದ್ದರು.
ಜನವರಿ 17 ರಂದು ಸಂಜೆ ಕಾರಿಡಾರ್ ಅನ್ನು ರಚಿಸಲಾಗಿದ್ದು, ಎಲ್ಬಿ ನಗರದ ಕಾಮಿನೇನಿ ಆಸ್ಪತ್ರೆಯಿಂದ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಗೆ ದಾನಿಗಳ ಹೃದಯವನ್ನು ಸಾಗಿಸಲು ಅನುಕೂಲವಾಯಿತು, ಈ ಜೀವ ಉಳಿಸುವ ಕಾರ್ಯಾಚರಣೆಯಲ್ಲಿ ನಿರ್ಣಾಯಕ ಸಮಯವನ್ನು ಉಳಿಸಲಾಗಿದೆ ಎಂದು ಹೈದರಾಬಾದ್ ಮೆಟ್ರೋ ರೈಲಿನ ಪ್ರಕಟಣೆ ತಿಳಿಸಿದೆ.
ಧಾರವಾಡ ಮೂಲದ ವೈದ್ಯ ಅಜಯ್ ಎಂಬುವವರು ಹೃದಯ ಸಾಗಿಸುವ ಕಾರ್ಯಾಚರಣೆಯ ಪ್ರಮುಖ ಭಾಗವಾಗಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ 35 ವರ್ಷದ ವ್ಯಕ್ತಿಯ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ ಅಂಗಾಂಗ ದಾನಕ್ಕೆ ಕುಟುಂಬ ಮುಂದಾಗಿತ್ತು. ಈ ವೇಳೆ ಗ್ಲೆನ್ ಗೆಲ್ಸ್ ಗ್ಲೋಬಲ್ ಆಸ್ಪತ್ರೆಯ ರೋಗಿಯೊಬ್ಬರಿಗೆ ಹೃದಯ ಬೇಕಿತ್ತು. ಹೃದಯ ಮತ್ತು ಶ್ವಾಸಕೋಶ ಕಸಿ ತಜ್ಞರಾಗಿರೋ ಡಾ. ಅಜಯ ಜೋಶಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಅವರ ಪತ್ನಿ ಡಾ. ನಂದಿನಿ ಸಹ ಹೈದರಾಬಾದ್ ನಲ್ಲಿ ಸ್ತ್ರಿರೋಗ ತಜ್ಞೆ.
ಧಾರವಾಡ-ಹುಬ್ಬಳ್ಳಿಯಲ್ಲಿ ಶಿಕ್ಷಣ ಪೂರೈಸಿರುವ ಡಾ. ಅಜಯ್ ಬಳಿಕ ಯುಕೆಯಲ್ಲಿ ಶ್ವಾಸಕೋಶ ಮತ್ತು ಹೃದಯ ಕಸಿ ಚಿಕಿತ್ಸೆ ಕುರಿತು ಉನ್ನತ ಶಿಕ್ಷಣ ಪಡೆದಿದ್ದಾರೆ. ಹೈದರಾಬಾದ್ ನ ಗ್ಲೆನ್ ಗೆಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಹುಬ್ಬಳ್ಳಿ ನವನಗರದಲ್ಲಿ ಅವರ ಪೋಷಕರು ವಾಸವಿದ್ದಾರೆ. ಹೈದರಾಬಾದ್ ಮೆಟ್ರೋ ರೈಲು, ವೈದ್ಯಕೀಯ ತಂಡಗಳು ಮತ್ತು ಆಸ್ಪತ್ರೆಯ ಅಧಿಕಾರಿಗಳ ನಡುವಿನ ನಿಖರವಾದ ಸಮನ್ವಯದ ಮೂಲಕ ಜೀವ ಉಳಿಸುವ ಪ್ರಯತ್ನವನ್ನು ಸಾಧಿಸಲಾಗಿದೆ.

The post ಹೈದರಾಬಾದ್ ಮೆಟ್ರೋದಲ್ಲಿ ಹೃದಯ ರವಾನೆ, ಕನ್ನಡಿಗ ವೈದ್ಯನ ನೇತೃತ್ವ. appeared first on Good News 24x7.

]]>