minister Archives - Good News 24x7 https://www.goodnews24x7.com/tag/minister/ Kannada Fri, 04 Sep 2026 10:31:07 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg minister Archives - Good News 24x7 https://www.goodnews24x7.com/tag/minister/ 32 32 ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು https://www.goodnews24x7.com/government-to-honour-fans-demand-abhimanyu-to-be-made-into-a-flag-elephant/ Fri, 04 Sep 2026 10:31:07 +0000 https://www.goodnews24x7.com/?p=9963 ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

The post ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು appeared first on Good News 24x7.

]]>

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ ಘೋಷಿಸಲಾಗಿದ್ದು, ದಸರಾ ಮೆರವಣಿಗೆಯಲ್ಲಿ ಅಭಿಮನ್ಯು ಭಾಗವಹಿಸುವುದಿಲ್ಲ ಎಂಬ ಸುದ್ದಿ ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿತ್ತು. ದಿಗ್ಗಜ ಆನೆ ಅರ್ಜುನನಿಗೆ ನೀಡಿದಂತೆ ಅಭಿಮನ್ಯುವಿಗೂ ಗೌರವಪೂರ್ಣ ವಿದಾಯ ನೀಡಬೇಕು ಹಾಗೂ ಕೊನೆಯ ಬಾರಿಗೆ ನಿಶಾನೆ ಆನೆಯಾಗಿ ಕೊಂಡೊಯ್ಯಬೇಕು ಎಂದು ಸಾರ್ವಜನಿಕರು ಮತ್ತು ವನ್ಯಜೀವಿ ಪ್ರಿಯರು ವ್ಯಾಪಕ ಒತ್ತಡ ತಂದಿದ್ದರು. ಜನರ ಈ ಭಾವನಾತ್ಮಕ ಬೇಡಿಕೆಗೆ ಸ್ಪಂದಿಸಿರುವ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, 2026ರ ದಸರಾ ಮಹೋತ್ಸವದಲ್ಲಿ ಅಭಿಮನ್ಯುಗೆ ನಿಶಾನೆ ಆನೆಯಾಗಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವಂತೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ದಸರಾ ಪರಂಪರೆಯಲ್ಲಿ ತನ್ನ ಶಿಸ್ತು ಹಾಗೂ ಧೈರ್ಯದಿಂದ ನಾಡಿನ ಜನರ ಪ್ರೀತಿ ಗಳಿಸಿರುವ ಅಭಿಮನ್ಯು, ಸಚಿವರ ಈ ಹೊಸ ಆದೇಶದಿಂದ ಮತ್ತೊಮ್ಮೆ ಗಜಪಡೆಯ ಮುಂಚೂಣಿಯಲ್ಲಿ ಕಂಗೊಳಿಸುವುದು ಖಚಿತವಾಗಿದ್ದು, ಅಭಿಮಾನಿಗಳಲ್ಲಿ ಹರ್ಷ ಮೂಡಿಸಿ

The post ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು appeared first on Good News 24x7.

]]>
ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ https://www.goodnews24x7.com/nepal-floods-kannadigas-safe-cm-courageous/ Fri, 28 Aug 2026 06:36:51 +0000 https://www.goodnews24x7.com/?p=9939 ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

The post ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ appeared first on Good News 24x7.

]]>

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು ಪ್ರಸ್ತುತ ಸುರಕ್ಷಿತವಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಖಚಿತಪಡಿಸಿದೆ. ಅಲ್ಲದೆ, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಮೂಲದ 12 ಮಂದಿ ಪ್ರವಾಸಿಗರೂ ಕ್ಷೇಮವಾಗಿದ್ದು, ಶೀಘ್ರದಲ್ಲೇ ಸೋನೌಲಿ ಗಡಿ ತಲುಪಲಿದ್ದಾರೆ. ಅಲ್ಲಿಂದ ಅವರನ್ನು ತಾಯ್ನಾಡಿಗೆ ಕರೆತರಲು ಸೂಕ್ತ ಸಾರಿಗೆ ವ್ಯವಸ್ಥೆ ಮಾಡಲಾಗುತ್ತಿದೆ.

ಸಂತ್ರಸ್ತರ ಯೋಗಕ್ಷೇಮವನ್ನು ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ನಿಕಟವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ಸ್ಥಳ ಹಾಗೂ ಸಂಪರ್ಕ ವಿವರಗಳನ್ನು ಸಂಗ್ರಹಿಸಲು ರಾಜ್ಯ ಸರ್ಕಾರ ವಿಶೇಷ ನಮೂನೆಯನ್ನು ಸಿದ್ಧಪಡಿಸಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮತ್ತು ದೆಹಲಿಯ ಕರ್ನಾಟಕ ಭವನದ ಅಧಿಕಾರಿಗಳು 24 ಗಂಟೆಯೂ ಕಾರ್ಯಾಚರಿಸುತ್ತಿದ್ದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಹಾಗೂ ಕಠ್ಮಂಡು ಮತ್ತು ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸುತ್ತಿದ್ದಾರೆ.

ಇದೇ ವೇಳೆ, ದೆಹಲಿಯಿಂದಲೇ ಸಂಕಷ್ಟದಲ್ಲಿದ್ದ ಮಲ್ಲಿನಾಥ್ ಎಂಬ ಕನ್ನಡಿಗನಿಗೆ ವಿಡಿಯೋ ಕರೆ ಮಾಡಿದ ಮುಖ್ಯಮಂತ್ರಿಗಳು, “ಸರ್ಕಾರ ನಿಮ್ಮೊಂದಿಗಿದೆ, ಯಾರೂ ಆತಂಕ ಪಡಬೇಡಿ ಹಾಗೂ ಪ್ರಸ್ತುತ ಇರುವ ಸುರಕ್ಷಿತ ಸ್ಥಳದಿಂದ ಹೊರಬರಲು ಸಾಹಸ ಮಾಡಬೇಡಿ” ಎಂದು ಧೈರ್ಯ ತುಂಬಿದ್ದಾರೆ. ಸಂಪರ್ಕ ಕಡಿತಗೊಂಡಿರುವ ಉಳಿದ ಕನ್ನಡಿಗರನ್ನು ಪತ್ತೆಹಚ್ಚಿ ರಕ್ಷಿಸುವ ಕಾರ್ಯ ಚುರುಕಿನಿಂದ ಸಾಗಿದೆ.

The post ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ appeared first on Good News 24x7.

]]>
ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ . https://www.goodnews24x7.com/chamarajanagar-encounter-case-minister-ramalinga-reddy-clarifies/ Tue, 18 Aug 2026 05:48:30 +0000 https://www.goodnews24x7.com/?p=9902 ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

The post ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ . appeared first on Good News 24x7.

]]>

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದಾಗ, ತನಿಖೆಯಲ್ಲಿ ಸರ್ಕಾರಿ ಅಧಿಕಾರಿಗಳ ತಪ್ಪು ಸಾಬೀತಾದರೆ ಮತ್ತು ಸದನ ಬಯಸಿದರೆ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಮೃತಪಟ್ಟವರು ಅಕ್ರಮವಾಗಿ ಅರಣ್ಯಕ್ಕೆ ಪ್ರವೇಶಿಸಿದ ಬೇಟೆಗಾರರು ಎಂದು ತನಿಖೆಯಲ್ಲಿ ದೃಢಪಟ್ಟರೆ ಅವರಿಗೆ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಅವರು ಸದನದಲ್ಲಿ ತಿಳಿಸಿದರು. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟೀರಿಯಲ್ ತನಿಖೆ ನಡೆಯುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ. ಆ ವರದಿಯನ್ನು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗುವುದು, ಅದರಿಂದ ತೃಪ್ತಿಯಾಗದಿದ್ದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ವಿವರಣೆ ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು, ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಹಾಗೂ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಸಭೆಯಲ್ಲಿ ಪಟ್ಟು ಹಿಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆಗಸ್ಟ್ 14 ರ ರಾತ್ರಿ ಅಕ್ರಮ ಬೇಟೆಯ ಕುರಿತು ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದರು ಹಾಗೂ ಬೆಳಗಿನ ಜಾವ ಶಂಕಿತರು ದಾಳಿ ಮಾಡಲು ಮುಂದಾದಾಗ ಆತ್ಮರಕ್ಷಣೆಗಾಗಿ ಸ್ಲೈಡ್‌ ಆ್ಯಕ್ಷನ್‌ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ ಎಂದು ಸಮರ್ಥಿಸಿಕೊಂಡರು. ಘಟನಾ ಸ್ಥಳದಿಂದ ಎರಡು ನಾಡ ಬಂದೂಕುಗಳು, ಅಡುಗೆ ಪಾತ್ರೆಗಳು, ಮಸಾಲೆ ಪದಾರ್ಥಗಳು ಹಾಗೂ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದ ಅವರು, ಮೃತರು ಜಾನುವಾರುಗಳನ್ನು ಹುಡುಕಲು ಅರಣ್ಯಕ್ಕೆ ಹೋಗಿದ್ದರು ಎಂಬ ವಾದವನ್ನು ತಳ್ಳಿಹಾಕಿದರು. ಅಲ್ಲದೆ ಮೃತಪಟ್ಟವರ ಪೈಕಿ ಇಬ್ಬರ ವಿರುದ್ಧ ಈಗಾಗಲೇ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿದ್ದವು ಎಂದು ಮಾಹಿತಿ ನೀಡಿದರು.

 

The post ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ . appeared first on Good News 24x7.

]]>
ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ https://www.goodnews24x7.com/preparation-meeting-for-ashada-fridays/ Wed, 01 Jul 2026 11:01:01 +0000 https://www.goodnews24x7.com/?p=9722 ಮೈಸೂರು, ಜುಲೈ 1: ಮೈಸೂರಿನ ಚಾಮುಂಡಿ ಬೆಟ್ಟದ ಸಭಾಂಗಣದಲ್ಲಿ ಇಂದು ಆಷಾಢ ಶುಕ್ರವಾರಗಳ ಅಂಗವಾಗಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳ ಪೂರ್ವಸಿದ್ಧತೆ ಕುರಿತು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ…

The post ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ appeared first on Good News 24x7.

]]>

ಮೈಸೂರು, ಜುಲೈ 1: ಮೈಸೂರಿನ ಚಾಮುಂಡಿ ಬೆಟ್ಟದ ಸಭಾಂಗಣದಲ್ಲಿ ಇಂದು ಆಷಾಢ ಶುಕ್ರವಾರಗಳ ಅಂಗವಾಗಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳ ಪೂರ್ವಸಿದ್ಧತೆ ಕುರಿತು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಆಷಾಢ ಶುಕ್ರವಾರಗಳ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ, ಸುಗಮ ದರ್ಶನ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ಸಾರಿಗೆ, ಸಂಚಾರ ನಿಯಂತ್ರಣ, ಭದ್ರತೆ ಹಾಗೂ ತುರ್ತು ವೈದ್ಯಕೀಯ ಸೇವೆಗಳು ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಪೂಜಾ ಕಾರ್ಯಕ್ರಮಗಳು ಸುಗಮವಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಪ್ರದಾಯಿಕವಾಗಿ ನೆರವೇರಲು ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಶೇಖ್ ತನ್ವೀರ್ ಆಸೀಫ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

The post ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ appeared first on Good News 24x7.

]]>
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ! https://www.goodnews24x7.com/9383-2karnataka-sslc-result-2026-students-set-records-7-students-get-full-marks/ Thu, 23 Apr 2026 09:40:03 +0000 https://www.goodnews24x7.com/?p=9383 ಬೆಂಗಳೂರು, ಏಪ್ರಿಲ್ 23: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (ಪರೀಕ್ಷೆ-1) ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಪರೀಕ್ಷೆಯಲ್ಲಿ ಹಲವು ಹೊಸ ದಾಖಲೆಗಳು ನಿರ್ಮಾಣವಾಗಿದ್ದು, ಒಟ್ಟು ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ…

The post ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ! appeared first on Good News 24x7.

]]>

ಬೆಂಗಳೂರು, ಏಪ್ರಿಲ್ 23: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (ಪರೀಕ್ಷೆ-1) ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಪರೀಕ್ಷೆಯಲ್ಲಿ ಹಲವು ಹೊಸ ದಾಖಲೆಗಳು ನಿರ್ಮಾಣವಾಗಿದ್ದು, ಒಟ್ಟು ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಟಾಪ್‌ 7 ಸಾಧಕರು:
ದಾವಣಗೆರೆಯ ಭರತ್‌, ರಾಯಚೂರಿನ ಸುಖದೇವ್, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿಯ ಪ್ರೀತಂ, ವಿಜಯಪುರದ ಸೌಜನ್ಯ ಹಾಗೂ ಬೆಂಗಳೂರು ಉತ್ತರದ ಧನುಷ್‌ ಅವರು ‘ಔಟ್ ಆಫ್ ಔಟ್’ ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಜಿಲ್ಲಾವಾರು ಸಾಧನೆ (ಟಾಪ್ 5):
ಫಲಿತಾಂಶದಲ್ಲಿ ಕರಾವಳಿ ಜಿಲ್ಲೆಗಳ ಪ್ರಾಬಲ್ಯ ಮುಂದುವರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಮೊದಲ ಸ್ಥಾನ ಅಲಂಕರಿಸಿದೆ.

ದಕ್ಷಿಣ ಕನ್ನಡ: ಶೇ. 98.40

ಉಡುಪಿ: ಶೇ. 98.18

ಉತ್ತರ ಕನ್ನಡ: ಶೇ. 98.02

ಹಾಸನ: ಶೇ. 97.51

ಮಂಡ್ಯ: ಶೇ. 97.40

ಗ್ರಾಮೀಣ ಹಾಗೂ ಕಲ್ಯಾಣ ಕರ್ನಾಟಕದ ಪ್ರಗತಿ:
ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಭಾಗದ ಮಕ್ಕಳೇ ಈ ಬಾರಿ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಶೇ. 92ರಷ್ಟು ಫಲಿತಾಂಶ ದಾಖಲಾಗಿದ್ದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇ. 91ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗಣನೀಯ ಪ್ರಗತಿ ಕಂಡುಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯ:
ಶಿಕ್ಷಣ ಮಂಡಳಿಯು ಈ ಬಾರಿ ವಿಶೇಷ ಕ್ರಮ ಕೈಗೊಂಡಿದ್ದು, ಫಲಿತಾಂಶ ಪ್ರಕಟವಾದ ತಕ್ಷಣವೇ ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಗಳನ್ನು ‘ಡಿಜಿಲಾಕರ್’ (DigiLocker) ನಲ್ಲಿ ಲಭ್ಯವಾಗುವಂತೆ ಮಾಡಿದೆ. ವಿದ್ಯಾರ್ಥಿಗಳು digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ದಾಖಲೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ತೃತೀಯ ಭಾಷೆ: ಗ್ರೇಡ್ ಬದಲಿಗೆ ಅಂಕ:
ಈ ವರ್ಷದಿಂದ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಗ್ರೇಡ್ ನೀಡಲು ಇಲಾಖೆ ನಿರ್ಧರಿಸಿತ್ತು. ಆದರೆ, ಹೈಕೋರ್ಟ್ ಆದೇಶದಂತೆ ಈ ನಿರ್ಧಾರವನ್ನು ಕೈಬಿಟ್ಟು, ಎಂದಿನಂತೆ ಅಂಕಗಳನ್ನೇ ನೀಡಲಾಗಿದೆ. ಹೀಗಾಗಿ ಒಟ್ಟು 625 ಅಂಕಗಳಿಗೆ ಫಲಿತಾಂಶ ಪ್ರಕಟವಾಗಿದ್ದು, ತೃತೀಯ ಭಾಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

The post ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ! appeared first on Good News 24x7.

]]>
ಕಾಂಗ್ರೆಸ್ ಮುಸ್ಲಿಂ ನಾಯಕರ ಖಡಕ್ ವಾಗ್ದಾಳಿ: ಜಮೀರ್ ಅಹ್ಮದ್ ಖಾನ್‌ ವಿರುದ್ಧ ಅಸಮಾಧಾನ https://www.goodnews24x7.com/congress-muslim-leaders-sharp-attack-dissatisfaction-with-zameer-ahmed-khan9366-2/ Tue, 21 Apr 2026 13:00:53 +0000 https://www.goodnews24x7.com/?p=9366 ದಾವಣಗೆರೆ ಚುನಾವಣಾ ರಾಜಕಾರಣ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆ ಕುರಿತ ಚರ್ಚೆಗಳ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಮುಸ್ಲಿಂ ನಾಯಕರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಪ್ರಮುಖಾಂಶಗಳು: ಯಾರೇ ಹೋದರೂ ಪಕ್ಷಕ್ಕೆ…

The post ಕಾಂಗ್ರೆಸ್ ಮುಸ್ಲಿಂ ನಾಯಕರ ಖಡಕ್ ವಾಗ್ದಾಳಿ: ಜಮೀರ್ ಅಹ್ಮದ್ ಖಾನ್‌ ವಿರುದ್ಧ ಅಸಮಾಧಾನ appeared first on Good News 24x7.

]]>

ದಾವಣಗೆರೆ ಚುನಾವಣಾ ರಾಜಕಾರಣ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆ ಕುರಿತ ಚರ್ಚೆಗಳ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಮುಸ್ಲಿಂ ನಾಯಕರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಪ್ರಮುಖಾಂಶಗಳು:
ಯಾರೇ ಹೋದರೂ ಪಕ್ಷಕ್ಕೆ ನಷ್ಟವಿಲ್ಲ: ಸಿ.ಎಂ. ಇಬ್ರಾಹಿಂ ಮತ್ತು ಜಾಫರ್ ಷರೀಫ್ ಅಂತಹವರೇ ಪಕ್ಷ ಬಿಟ್ಟು ಹೋದಾಗ ಕಾಂಗ್ರೆಸ್‌ಗೆ ಏನೂ ಆಗಲಿಲ್ಲ. ಈಗ ಯಾರಾದರೂ ಹೋದರೆ ಹೊಸ ನಾಯಕತ್ವ ಬೆಳೆಯುತ್ತದೆ ಹೊರತು ಪಕ್ಷಕ್ಕೆ ನಷ್ಟವಿಲ್ಲ ಎಂದು ಉಬೇದುಲ್ಲಾ ಷರೀಫ್ ತಿರುಗೇಟು ನೀಡಿದ್ದಾರೆ.

ಶಿಸ್ತು ಕ್ರಮಕ್ಕೆ ಆಗ್ರಹ: ಚುನಾವಣಾ ಸಮಯದಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದವರು ಮತ್ತು ಪ್ರಚಾರಕ್ಕೆ ಬಾರದವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಾಯಕರು ಒತ್ತಾಯಿಸಿದ್ದಾರೆ.

ಅಬ್ದುಲ್ ಜಬ್ಬಾರ್ ನಡೆಗೆ ವಿರೋಧ: ದಾವಣಗೆರೆಯಲ್ಲಿ ಅಬ್ದುಲ್ ಜಬ್ಬಾರ್ ಅವರು ಮನೆಯಿಂದ ಹೊರಬಂದು ಪ್ರಚಾರ ಮಾಡಲಿಲ್ಲ. ಶಿಸ್ತು ಕ್ರಮ ಕೈಗೊಂಡಿದ್ದನ್ನು ಇಡೀ ಸಮುದಾಯಕ್ಕೆ ಆದ ಅನ್ಯಾಯ ಎಂದು ಬಿಂಬಿಸುವುದು ತಪ್ಪು.

ಟಿಕೆಟ್ ಹಂಚಿಕೆ ವಿವಾದ: ದಾವಣಗೆರೆ ಟಿಕೆಟ್ ವಿಚಾರದಲ್ಲಿ ಸಭೆ ನಡೆದಾಗ ಅಬ್ದುಲ್ ಜಬ್ಬಾರ್ ಹೊರತುಪಡಿಸಿ ಉಳಿದ ಆರು ಮಂದಿ ಆಕಾಂಕ್ಷಿಗಳ ಪರವಾಗಿ ಯಾರೂ ಮಾತನಾಡಲಿಲ್ಲ. ಸರಿಯಾಗಿ ಚರ್ಚೆ ಮಾಡಿದ್ದರೆ ಮುಸ್ಲಿಮರಿಗೆ ಟಿಕೆಟ್ ಸಿಗುತ್ತಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮೀರ್ ವಿರುದ್ಧ ಪರೋಕ್ಷ ವಾಗ್ದಾಳಿ: “ನಾನು ನಾಯಕ” ಎಂಬ ಹಮ್ಮು ಸಚಿವರಿಗೆ ಕಾಂಗ್ರೆಸ್‌ನಿಂದ ಸಿಕ್ಕ ಬಳುವಳಿ. ಪಕ್ಷ ನೀಡಿದ ಅಧಿಕಾರದಿಂದಲೇ ಸಂಪನ್ಮೂಲ ಕ್ರೋಢೀಕರಿಸಿಕೊಂಡು ಮೆರೆಯುತ್ತಿದ್ದಾರೆ. ಇವರ ವಿರುದ್ಧವೂ ಶಿಸ್ತು ಕ್ರಮ ಆಗಬೇಕು ಎಂದು ಹಿರಿಯ ಮುಖಂಡರು ಕಿಡಿಕಾರಿದ್ದಾರೆ.

ಗಂಭೀರ ಆರೋಪ: ಅಲ್ಪಸಂಖ್ಯಾತ ಘಟಕದ ಕೆಲವರು ಎಸ್‌ಡಿಪಿಐ ಅಭ್ಯರ್ಥಿಗೆ ಹಣಕಾಸಿನ ನೆರವು ನೀಡಿದ್ದಾರೆ. ಇಂತಹವರ ಮನೆಗೆ ಸಿಎಂ ಅಥವಾ ಡಿಸಿಎಂ ಭೇಟಿ ನೀಡುವ ಅಗತ್ಯವಿರಲಿಲ್ಲ ಎಂದು ನಾಯಕರು ಪ್ರಶ್ನಿಸಿದ್ದಾರೆ

The post ಕಾಂಗ್ರೆಸ್ ಮುಸ್ಲಿಂ ನಾಯಕರ ಖಡಕ್ ವಾಗ್ದಾಳಿ: ಜಮೀರ್ ಅಹ್ಮದ್ ಖಾನ್‌ ವಿರುದ್ಧ ಅಸಮಾಧಾನ appeared first on Good News 24x7.

]]>
ಹೆದ್ದಾರಿ ಅ*ಘಾತ: ಗಾಯಾಳುವಿನ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ. https://www.goodnews24x7.com/highway-accident-union-minister-h-d-kumaraswamy-showed-humanity-by-rushing-to-the-aid-of-the-injured/ Sun, 12 Apr 2026 07:22:54 +0000 https://www.goodnews24x7.com/?p=9227 ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹಾಸನಕ್ಕೆ ತೆರಳುತ್ತಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆಯ ವಿವರ: ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಮತ್ತು ಕಾರಿನ ನಡುವೆ…

The post ಹೆದ್ದಾರಿ ಅ*ಘಾತ: ಗಾಯಾಳುವಿನ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ. appeared first on Good News 24x7.

]]>

ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹಾಸನಕ್ಕೆ ತೆರಳುತ್ತಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಘಟನೆಯ ವಿವರ:
ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ವಿಕ್ರಂ ಎಂಬುವವರು ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದರು. ಸುಮಾರು ಅರ್ಧ ಗಂಟೆ ಕಳೆದರೂ ಯಾರೂ ಅವರ ನೆರವಿಗೆ ಧಾವಿಸಿರಲಿಲ್ಲ. ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಸಚಿವರು, ಗಾಯಾಳುವನ್ನು ಗಮನಿಸಿದ ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ಸ್ಥಳಕ್ಕೆ ಧಾವಿಸಿದರು.

ತಕ್ಷಣದ ಸ್ಪಂದನೆ:
ಪೊಲೀಸ್ ವಾಹನದ ಬಳಕೆ: ಗಾಯಾಳುವಿನ ಸ್ಥಿತಿ ಗಂಭೀರವಾಗಿರುವುದನ್ನು ಕಂಡು ಕೂಡಲೇ ಹೆದ್ದಾರಿ ಗಸ್ತು ಪೊಲೀಸರಿಗೆ ಕರೆ ಮಾಡಿದ ಸಚಿವರು, ತಮ್ಮ ಭದ್ರತಾ ಸಿಬ್ಬಂದಿಯ ವಾಹನ ಹಾಗೂ ಪೊಲೀಸ್ ವಾಹನದ ಮೂಲಕ ಗಾಯಾಳುವನ್ನು ಹತ್ತಿರದ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲು ವ್ಯವಸ್ಥೆ ಮಾಡಿದರು.

ವೈದ್ಯರಿಗೆ ಸೂಚನೆ: ಕೇವಲ ಆಸ್ಪತ್ರೆಗೆ ಕಳುಹಿಸುವುದಷ್ಟೇ ಅಲ್ಲದೆ, ಸ್ವತಃ ಸಚಿವರೇ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಕರೆ ಮಾಡಿ, ಗಾಯಾಳುವಿಗೆ ತುರ್ತು ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಮಯಪ್ರಜ್ಞೆ ಮೆರೆದು ತಮ್ಮ ಪ್ರಾಣ ಉಳಿಸಿದ ಕೇಂದ್ರ ಸಚಿವರಿಗೆ ಗಾಯಾಳು ವಿಕ್ರಂ ಹಾಗೂ ಅವರ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ. ಸಚಿವರ ಈ ಕಾರ್ಯ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

The post ಹೆದ್ದಾರಿ ಅ*ಘಾತ: ಗಾಯಾಳುವಿನ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ. appeared first on Good News 24x7.

]]>
ಬಾರಮತಿ ಉಪಚುನಾವಣೆ: ಸುನೇತ್ರಾ ಪವಾರ್‌ಗೆ ಬೆಂಬಲ ನೀಡಲು ಕಾಂಗ್ರೆಸ್ ‘ಹಠ’; ಅಜಿತ್ ಪವಾರ್ ಸಾವು ತನಿಖೆಯಾದರಷ್ಟೇ ಅಭ್ಯರ್ಥಿ ವಾಪಸ್! https://www.goodnews24x7.com/baramati-by-election-congress-insisted-on-supporting-sunetra-pawar-candidate-withdraws-only-after-ajit-pawars-death-probe/ Mon, 06 Apr 2026 11:51:40 +0000 https://www.goodnews24x7.com/?p=9133 ಬಾರಮತಿ: ಮಹಾರಾಷ್ಟ್ರ ರಾಜಕಾರಣದ ಕೇಂದ್ರಬಿಂದು ಎನಿಸಿರುವ ಬಾರಮತಿ ವಿಧಾನಸಭಾ ಉಪಚುನಾವಣೆಯ ಕಣ ಈಗ ತೀವ್ರ ಕುತೂಹಲ ಕೆರಳಿಸಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನದಿಂದ ತೆರವಾದ ಈ ಸ್ಥಾನಕ್ಕೆ ಅವರ ಪತ್ನಿ ಸುನೇತ್ರಾ ಪವಾರ್ ಸ್ಪರ್ಧಿಸುತ್ತಿದ್ದು, ಅವರಿಗೆ ಬೆಂಬಲ ನೀಡಲು…

The post ಬಾರಮತಿ ಉಪಚುನಾವಣೆ: ಸುನೇತ್ರಾ ಪವಾರ್‌ಗೆ ಬೆಂಬಲ ನೀಡಲು ಕಾಂಗ್ರೆಸ್ ‘ಹಠ’; ಅಜಿತ್ ಪವಾರ್ ಸಾವು ತನಿಖೆಯಾದರಷ್ಟೇ ಅಭ್ಯರ್ಥಿ ವಾಪಸ್! appeared first on Good News 24x7.

]]>

ಬಾರಮತಿ: ಮಹಾರಾಷ್ಟ್ರ ರಾಜಕಾರಣದ ಕೇಂದ್ರಬಿಂದು ಎನಿಸಿರುವ ಬಾರಮತಿ ವಿಧಾನಸಭಾ ಉಪಚುನಾವಣೆಯ ಕಣ ಈಗ ತೀವ್ರ ಕುತೂಹಲ ಕೆರಳಿಸಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನದಿಂದ ತೆರವಾದ ಈ ಸ್ಥಾನಕ್ಕೆ ಅವರ ಪತ್ನಿ ಸುನೇತ್ರಾ ಪವಾರ್ ಸ್ಪರ್ಧಿಸುತ್ತಿದ್ದು, ಅವರಿಗೆ ಬೆಂಬಲ ನೀಡಲು ಕಾಂಗ್ರೆಸ್ ಪಕ್ಷವು ಒಂದು ಕಠಿಣ ಷರತ್ತನ್ನು ವಿಧಿಸಿದೆ.

ಷರತ್ತಿನ ವಿವರ:
ಬಾರಮತಿ ಉಪಚುನಾವಣೆಯಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಈ ಚುನಾವಣೆ ಅವಿರೋಧವಾಗಿ ನಡೆಯಬೇಕು ಎಂಬ ಕೂಗು ಕೇಳಿಬರುತ್ತಿದೆ. ಆದರೆ, ಕಾಂಗ್ರೆಸ್ ಮಾತ್ರ ತನ್ನ ನಿಲುವಿನಿಂದ ಹಿಂದೆ ಸರಿದಿಲ್ಲ. “ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತದ ಬಗ್ಗೆ ಅಧಿಕೃತವಾಗಿ ಎಫ್‌ಐಆರ್ (FIR) ದಾಖಲಾದರೆ ಮಾತ್ರ ನಾವು ನಮ್ಮ ಅಭ್ಯರ್ಥಿ ಆಕಾಶ್ ಮೋರೆ ಅವರನ್ನು ಕಣದಿಂದ ಹಿಂಪಡೆಯುವ ಬಗ್ಗೆ ಯೋಚಿಸುತ್ತೇವೆ” ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಸ್ಪಷ್ಟಪಡಿಸಿದ್ದಾರೆ.

ತನಿಖೆಯ ಸುತ್ತ ಅನುಮಾನಗಳ ಹುತ್ತ:
ಜನವರಿ 28ರಂದು ನಡೆದ ದುರದೃಷ್ಟಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಅವರು ಮೃತಪಟ್ಟಿದ್ದರು. ಈ ಘಟನೆಯ ಕುರಿತು ಕುಟುಂಬಸ್ಥರು ಮತ್ತು ಸುನೇತ್ರಾ ಪವಾರ್ ಸ್ವತಃ ಸಿಬಿಐ ತನಿಖೆಗೆ ಆಗ್ರಹಿಸಿದ್ದರು. ಅಲ್ಲದೆ, ರೋಹಿತ್ ಪವಾರ್ ಅವರು ಮಹಾರಾಷ್ಟ್ರದಲ್ಲಿ ಪ್ರಕರಣ ದಾಖಲಿಸಲು ಪ್ರಯತ್ನಿಸಿದರೂ ವಿಫಲರಾಗಿದ್ದು, ಸದ್ಯ ಕರ್ನಾಟಕದಲ್ಲಿ ಮಾತ್ರ ಪ್ರಕರಣ ದಾಖಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಜಕೀಯ ಸಂಘರ್ಷ:

  • ಕಾಂಗ್ರೆಸ್ ಅಭ್ಯರ್ಥಿ: ರಾಜ್ಯ ಘಟಕದ ಕಾರ್ಯದರ್ಶಿ ಆಕಾಶ್ ಮೋರೆ.
  • ವಿರೋಧ ಪಕ್ಷಗಳ ನಿಲುವು: ಎನ್‌ಸಿಪಿ-ಎಸ್‌ಪಿ ಮತ್ತು ಶಿವಸೇನೆ-ಯುಬಿಟಿ ಈಗಾಗಲೇ ಅವಿರೋಧ ಆಯ್ಕೆಗೆ ಬೆಂಬಲ ಸೂಚಿಸಿವೆ.
  • ಕಾಂಗ್ರೆಸ್ ಆರೋಪ: ಬಿಜೆಪಿಯ ‘ಸೌಕರ್ಯವಾದಿ’ ರಾಜಕೀಯವನ್ನು ಟೀಕಿಸಿರುವ ಕಾಂಗ್ರೆಸ್, ಘಟನೆಯ ಸತ್ಯಾಸತ್ಯತೆ ಹೊರಬರುವವರೆಗೆ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದೆ.

ಅಜಿತ್ ಪವಾರ್ ಅವರು ಸತತ ಎಂಟು ಬಾರಿ ಪ್ರತಿನಿಧಿಸಿದ್ದ ಈ ಕ್ಷೇತ್ರದಲ್ಲಿ ಈಗ ಅವರ ನಿಧನದ ನಂತರದ ಮೊದಲ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ನ ಈ ಷರತ್ತು ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.

The post ಬಾರಮತಿ ಉಪಚುನಾವಣೆ: ಸುನೇತ್ರಾ ಪವಾರ್‌ಗೆ ಬೆಂಬಲ ನೀಡಲು ಕಾಂಗ್ರೆಸ್ ‘ಹಠ’; ಅಜಿತ್ ಪವಾರ್ ಸಾವು ತನಿಖೆಯಾದರಷ್ಟೇ ಅಭ್ಯರ್ಥಿ ವಾಪಸ್! appeared first on Good News 24x7.

]]>
ಜಾಗತಿಕ ಅಶಾಂತಿಯ ನಡುವೆ ಭಾರತ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದೆ: ಎಸ್ ಜೈಶಂಕರ್. https://www.goodnews24x7.com/india-has-faced-challenges-effectively-amid-global-unrest-s-jaishankar/ Sat, 04 Apr 2026 10:41:57 +0000 https://www.goodnews24x7.com/?p=9130 ರಾಯ್ಪುರ: ಜಾಗತಿಕ ಅಸ್ಥಿರತೆ ಮತ್ತು ವಿವಿಧ ಆಘಾತಗಳ ನಡುವೆಯೂ ಭಾರತ ದೇಶೀಯ ಹಾಗೂ ಅಂತರಾಷ್ಟ್ರೀಯ ಸವಾಲುಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಇಂದು ವಿಶ್ವದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ಐಐಎಂ ರಾಯ್ಪುರನಲ್ಲಿ ನಡೆದ…

The post ಜಾಗತಿಕ ಅಶಾಂತಿಯ ನಡುವೆ ಭಾರತ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದೆ: ಎಸ್ ಜೈಶಂಕರ್. appeared first on Good News 24x7.

]]>

ರಾಯ್ಪುರ: ಜಾಗತಿಕ ಅಸ್ಥಿರತೆ ಮತ್ತು ವಿವಿಧ ಆಘಾತಗಳ ನಡುವೆಯೂ ಭಾರತ ದೇಶೀಯ ಹಾಗೂ ಅಂತರಾಷ್ಟ್ರೀಯ ಸವಾಲುಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಇಂದು ವಿಶ್ವದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.

ಐಐಎಂ ರಾಯ್ಪುರನಲ್ಲಿ ನಡೆದ 15ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ವಿಶ್ವವು ಹಲವು ಸಂಕಷ್ಟಗಳನ್ನು ಎದುರಿಸಿದ್ದು, ಅವುಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯವನ್ನು ಭಾರತ ಪ್ರದರ್ಶಿಸಿದೆ ಎಂದು ಹೇಳಿದರು.

ಜಾಗತಿಕ ವ್ಯವಸ್ಥೆಯಲ್ಲಿ ವೇಗವಾದ ಬದಲಾವಣೆಗಳು ಸಂಭವಿಸುತ್ತಿದ್ದು, ವಿಶ್ವದ ಶಕ್ತಿಯ ಸಮತೋಲನದಲ್ಲೂ ಸ್ಪಷ್ಟ ಪರಿವರ್ತನೆ ಕಾಣುತ್ತಿದೆ. ತಂತ್ರಜ್ಞಾನ, ಇಂಧನ, ಸೈನಿಕ ಸಾಮರ್ಥ್ಯ ಮತ್ತು ಸಂಪರ್ಕದಂತಹ ಕ್ಷೇತ್ರಗಳಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳು ಹೆಚ್ಚು ಸ್ಪರ್ಧಾತ್ಮಕ ವಾತಾವರಣವನ್ನು ರೂಪಿಸುತ್ತಿವೆ ಎಂದು ಅವರು ವಿವರಿಸಿದರು.

ಕೆಲವು ಸಮಾಜಗಳಿಗೆ ಈ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಸವಾಲಾಗಿದೆಯಾದರೂ, ಭಾರತದಲ್ಲಿ ಆಶಾವಾದಿ ಮನೋಭಾವ ಸ್ಪಷ್ಟವಾಗಿ ಕಾಣಿಸುತ್ತದೆ. ಕಳೆದ ದಶಕದ ಸಾಧನೆಗಳು ಮುಂದಿನ ವರ್ಷಗಳ ಮೇಲಿನ ವಿಶ್ವಾಸವನ್ನು ಹೆಚ್ಚಿಸಿವೆ ಎಂದು ಜೈಶಂಕರ್ ಹೇಳಿದರು.

ಭಾರತದ ಪ್ರಗತಿಯನ್ನು ಉಲ್ಲೇಖಿಸಿದ ಅವರು, “ಇತ್ತೀಚಿನ ಜಾಗತಿಕ ಆಘಾತಗಳು ನಮ್ಮ ಸ್ಥೈರ್ಯವನ್ನು ಪರೀಕ್ಷಿಸಿದರೂ, ನಾವು ಅದರಿಂದ ಇನ್ನಷ್ಟು ಬಲವಾಗಿ ಹೊರಬಂದಿದ್ದೇವೆ. ದೇಶೀಯ ಮತ್ತು ಬಾಹ್ಯ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿದ್ದೇವೆ” ಎಂದು ಹೇಳಿದರು.

ಸರ್ಕಾರದ ಆದ್ಯತೆಗಳ ಕುರಿತು ಮಾತನಾಡಿದ ಅವರು, ಒಳಗೊಂಡ ಬೆಳವಣಿಗೆ, ಪ್ರಜಾಪ್ರತಿನಿಧಿ ರಾಜಕೀಯ, ದೃಢ ನಾಯಕತ್ವ ಮತ್ತು ಡಿಜಿಟಲ್ ಕ್ರಾಂತಿಗೆ ಮಹತ್ವ ನೀಡಬೇಕೆಂದು ಹೇಳಿದರು. ಜಾಗತಿಕ ಪ್ರವೃತ್ತಿಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.

“ನಮ್ಮ ನಿಯಂತ್ರಣದಲ್ಲಿರುವ ಸಾಮರ್ಥ್ಯಗಳನ್ನು ಬಲಪಡಿಸಬೇಕು. ಕೆಲವು ಕ್ಷೇತ್ರಗಳು ಹೆಚ್ಚು ಸವಾಲಿನವಾಗಿದ್ದರೂ, ವಿಶ್ವಾಸಾರ್ಹ ಪಾಲುದಾರಿಕೆಗಳು ಮತ್ತು ವೈವಿಧ್ಯಮಯ ಮೂಲಗಳು ಪರಿಹಾರವಾಗಬಹುದು. ಆದರೆ ಅಂತಿಮವಾಗಿ ಬಲವಾದ ರಾಷ್ಟ್ರೀಯ ಸಾಮರ್ಥ್ಯಗಳ ನಿರ್ಮಾಣವೇ ಮುಖ್ಯ” ಎಂದು ಅವರು ಅಭಿಪ್ರಾಯಪಟ್ಟರು.

The post ಜಾಗತಿಕ ಅಶಾಂತಿಯ ನಡುವೆ ಭಾರತ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದೆ: ಎಸ್ ಜೈಶಂಕರ್. appeared first on Good News 24x7.

]]>
ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳಿಗೆ ಮಿತಿ: ಡಿಜಿಟಲ್ ಬಳಕೆ ಕರಡು ನೀತಿ ಪ್ರಕಟ, ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಕೆ ಶಿಫಾರಸು. https://www.goodnews24x7.com/limit-social-media-usage-for-school-children-draft-policy-on-digital-usage-released-recommends-only-1-hour-of-mobile-usage-per-day/ Tue, 24 Mar 2026 13:30:40 +0000 https://www.goodnews24x7.com/?p=8979 ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅವಲಂಬನೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟು, ಜವಾಬ್ದಾರಿಯುತ ಡಿಜಿಟಲ್ ಬಳಕೆಗೆ ಸಂಬಂಧಿಸಿದ ಕರಡು ನೀತಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಘೋಷಣೆಯ ಅನಂತರ ರೂಪುಗೊಂಡ ಈ ನೀತಿ, 16 ವರ್ಷದೊಳಗಿನ…

The post ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳಿಗೆ ಮಿತಿ: ಡಿಜಿಟಲ್ ಬಳಕೆ ಕರಡು ನೀತಿ ಪ್ರಕಟ, ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಕೆ ಶಿಫಾರಸು. appeared first on Good News 24x7.

]]>

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅವಲಂಬನೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟು, ಜವಾಬ್ದಾರಿಯುತ ಡಿಜಿಟಲ್ ಬಳಕೆಗೆ ಸಂಬಂಧಿಸಿದ ಕರಡು ನೀತಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಘೋಷಣೆಯ ಅನಂತರ ರೂಪುಗೊಂಡ ಈ ನೀತಿ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಸೇರಿದಂತೆ ಹಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಸೂಚಿಸುತ್ತದೆ.

ಕರಡು ನೀತಿ ಪ್ರಕಾರ, ಶಾಲಾ ಕೆಲಸ ಹೊರತುಪಡಿಸಿ ವಿದ್ಯಾರ್ಥಿಗಳು ದಿನಕ್ಕೆ ಗರಿಷ್ಠ 1 ಗಂಟೆ ಮಾತ್ರ ಮೊಬೈಲ್ ಬಳಸಬೇಕು ಎಂದು ಶಿಫಾರಸು ಮಾಡಲಾಗಿದೆ. ನಿದ್ರೆಗೆ ಒಂದು ಗಂಟೆ ಮೊದಲು ಎಲ್ಲಾ ಡಿಜಿಟಲ್ ಸಾಧನಗಳನ್ನು ನಿಲ್ಲಿಸುವ ‘ಟೆಕ್ ಕರ್ಫ್ಯೂ’ ಜಾರಿಗೊಳಿಸುವುದಕ್ಕೂ ಸೂಚನೆ ನೀಡಲಾಗಿದೆ. ಪ್ರತಿ ಶಾಲೆಯೂ ತನ್ನದೇ ಡಿಜಿಟಲ್ ಬಳಕೆ ನೀತಿಯನ್ನು ರೂಪಿಸಿ, ಡಿಜಿಟಲ್ ವೆಲ್ನೆಸ್ ಸಮಿತಿ ಸ್ಥಾಪಿಸುವುದು ಕಡ್ಡಾಯವಾಗಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಿಮ್ಹಾನ್ಸ್, ಶಿಕ್ಷಣ ಇಲಾಖೆ ಹಾಗೂ ತಜ್ಞರ ಸಹಭಾಗಿತ್ವದಲ್ಲಿ ರೂಪುಗೊಂಡ ಈ ನೀತಿ, ಸೈಬರ್ ಬುಲಿಯಿಂಗ್ ತಡೆ, ಸುರಕ್ಷಿತ ಡಿಜಿಟಲ್ ಬಳಕೆ, ಶಿಕ್ಷಕರ ತರಬೇತಿ ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ರಕ್ಷಣೆಗೆ ವಿಶೇಷ ಒತ್ತು ನೀಡುತ್ತದೆ. ಜೊತೆಗೆ, ಪೋಷಕರಿಗೂ ಮಕ್ಕಳ ಡಿಜಿಟಲ್ ಚಟುವಟಿಕೆಗಳ ಮೇಲ್ವಿಚಾರಣೆ ಮತ್ತು ಆಫ್‌ಲೈನ್ ಚಟುವಟಿಕೆಗಳನ್ನು ಉತ್ತೇಜಿಸುವ ಜವಾಬ್ದಾರಿ ನೀಡಲಾಗಿದೆ.

The post ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳಿಗೆ ಮಿತಿ: ಡಿಜಿಟಲ್ ಬಳಕೆ ಕರಡು ನೀತಿ ಪ್ರಕಟ, ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಕೆ ಶಿಫಾರಸು. appeared first on Good News 24x7.

]]>