movie Archives - Good News 24x7 https://www.goodnews24x7.com/tag/movie/ Kannada Wed, 08 Jul 2026 07:34:19 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg movie Archives - Good News 24x7 https://www.goodnews24x7.com/tag/movie/ 32 32 ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’ https://www.goodnews24x7.com/yash-kiara-in-a-very-bold-avatar-for-tabahi/ Wed, 08 Jul 2026 07:34:19 +0000 https://www.goodnews24x7.com/?p=9807 ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ನಟನೆಯ ‘ಟಾಕ್ಸಿಕ್’ ಸಿನಿಮಾದ ಮೊದಲ ವಿಡಿಯೋ ಸಾಂಗ್ ‘ತಬಾಹಿ’ ಬಿಡುಗಡೆಯಾಗಿದೆ. ಹಾಡಿನಲ್ಲಿ ಯಶ್ ಹಾಗೂ ಕಿಯಾರಾ ಅವರ ಸಖತ್ ಬೋಲ್ಡ್ ಮತ್ತು ಗ್ಲಾಮರಸ್ ಅವತಾರ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ. ಆಗಸ್ಟ್ 26…

The post ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’ appeared first on Good News 24x7.

]]>

ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ನಟನೆಯ ‘ಟಾಕ್ಸಿಕ್’ ಸಿನಿಮಾದ ಮೊದಲ ವಿಡಿಯೋ ಸಾಂಗ್ ‘ತಬಾಹಿ’ ಬಿಡುಗಡೆಯಾಗಿದೆ. ಹಾಡಿನಲ್ಲಿ ಯಶ್ ಹಾಗೂ ಕಿಯಾರಾ ಅವರ ಸಖತ್ ಬೋಲ್ಡ್ ಮತ್ತು ಗ್ಲಾಮರಸ್ ಅವತಾರ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ. ಆಗಸ್ಟ್ 26 ರಂದು ರಿಲೀಸ್ ಆಗಲಿರುವ ಈ ಚಿತ್ರದ ಹಾಡಿನ ಸಂಪೂರ್ಣ ವಿವರ ಇಲ್ಲಿದೆ.

ಟಾಕ್ಸಿಕ್’ ಚಿತ್ರದಿಂದ ‘ತಬಾಹಿ’ ವಿಡಿಯೋ ಸಾಂಗ್ ಔಟ್
ರಾಯ-ರುಮಿ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ
ಯೋಗರಾಜ್ ಭಟ್ ಸಾಹಿತ್ಯದ ಮೂಡಿ ಬಂದ ಹಾಡು
ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ಅವರ ಹಾಟೆಸ್ಟ್ ಅವತಾರ ಅನಾವರಣಗೊಂಡಿದೆ. ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡಿನಲ್ಲಿ ಇಬ್ಬರೂ ಸಖತ್ ಬೋಲ್ಡ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ರೊಮ್ಯಾನ್ಸ್ ಮಿತಿಮೀರಿದೆ. ಈ ವಿಡಿಯೋದ ನೋಡಿದ ಎಲ್ಲರೂ ಕಣ್ಣರಳಿಸುತ್ತಿದ್ದಾರೆ. ಕಿಯಾರಾ ಅವರ ಗ್ಲಾಮರ್, ಯಶ್ ಅವರ ಕಟ್ಟುಮಸ್ತಾದ ದೇಹ ಕಂಡು ಎಲ್ಲರೂ ನಿಬ್ಬೆರಗಾಗಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಆಗಸ್ಟ್​ 26ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಅದರ ಭಾಗವಾಗಿ ಸಿನಿಮಾ ಪ್ರಚಾರ ಆರಂಭಿಸಿದೆ. ಈ ಮೊದಲು ಟೀಸರ್​​ಗಳ ಮೂಲಕ ಸೆಳೆದಿದ್ದ ಈ ಚಿತ್ರ ತಂಡ ಈಗ ‘ತಬಾಹಿ’ ವಿಡಿಯೋ ಸಾಂಗ್ ಅನಾವರಣ ಮಾಡಿದೆ. ಬೆಳಿಗ್ಗೆ 11.33ಕ್ಕೆ ಸರಿಯಾಗಿ ಸಾಂಗ್ ರಿಲೀಸ್ ಆಗಿದೆ.

ಯಶ್ ಹಾಗೂ ಕಿಯಾರಾ ‘ಟಾಕ್ಸಿಕ್’ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ‘ತಬಾಹಿ’ ಹಾಡಿನ ಉದ್ದಕ್ಕೂ ಯಶ್ ಹಾಗೂ ಕಿಯಾರಾ ರೊಮ್ಯಾನ್ಸ್ ಮಾಡುತ್ತಾರೆ. ಯಶ್ ಅವರು ರಾಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಿಯಾರಾ ಅವರು ರುಮಿ ಪಾತ್ರದಲ್ಲಿ ನಟಿಸಿದ್ದಾರೆ. ಒಂದು ದೃಶ್ಯದಲ್ಲಿ ನಯನತಾರಾ ಕೂಡ ಕಾಣಿಸುತ್ತಾರೆ.

 

ಈ ಸಾಂಗ್ ಕೇವಲ ಸಾಂಗ್ ಆಗಿ ಮಾತ್ರ ಉಳಿದಿಲ್ಲ, ಸಿನಿಮಾದಲ್ಲಿ ದೃಶ್ಯ ಎಷ್ಟು ಅದ್ದೂರಿಯಾಗಿ ಇರಲಿದೆ ಎಂಬುದಕ್ಕೆ ಒಂದು ಮಾದರಿ ರೀತಿಯಲ್ಲಿ ಕಾಣಿಸಿದೆ. ಅದ್ದೂರಿ ದೃಶ್ಯಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡಿಗೆ ಯೋಗರಾಜ್​ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈ ಮೊದಲು ಲಿರಿಕಲ್ ವಿಡಿಯೋ ಮಾತ್ರ ರಿಲೀಸ್ ಆಗಿತ್ತು.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಪ್ಯಾನ್ ವರ್ಡ್​ ಸಿನಿಮಾ ಇದೇ ಆಗಸ್ಟ್ 26ರಂದು ಅದ್ಧೂರಿಯಾಗಿ ವಿಶ್ವಾದ್ಯಂತ ತೆರೆಗೆ ಬರಲು ಸಜ್ಜಾಗುತ್ತಿದೆ. ಖ್ಯಾತ ನಿರ್ದೇಶಕಿ ಗೀತು ಮೋಹನ್ ದಾಸ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಗಳು ಜಂಟಿಯಾಗಿ ಭಾರಿ ಬಜೆಟ್‌ನಲ್ಲಿ ಬಂಡವಾಳ ಹೂಡಿವೆ. ಚಿತ್ರದಲ್ಲಿ ಯಶ್ ಅವರಿಗೆ ಜೋಡಿಯಾಗಿ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದು, ಇವರೊಂದಿಗೆ ನಯನತಾರಾ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದಕ್ಷಿಣ ಹಾಗೂ ಬಾಲಿವುಡ್‌ನ ದಂಡೇ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಒಟ್ಟಿಗೆ ಶೂಟ್ ಆಗಿರುವ ಈ ಸಿನಿಮಾ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಿಗೂ ಡಬ್ ಆಗಿ ಬಿಡುಗಡೆಯಾಗುತ್ತಿದ್ದು, ಸದ್ಯ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ.

 

The post ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’ appeared first on Good News 24x7.

]]>
ಈಗ’ ಚಿತ್ರಕ್ಕೆ ಸುದೀಪ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ https://www.goodnews24x7.com/sudeep-was-the-last-choice-for-the-film-eega-rajamouli/ Fri, 03 Jul 2026 06:37:27 +0000 https://www.goodnews24x7.com/?p=9753 ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಶನ್‌ನ ಸೂಪರ್ ಹಿಟ್ ‘ಈಗ’ ಸಿನಿಮಾ ಇತ್ತೀಚೆಗೆ ವಿದೇಶದ ವಿಶೇಷ ಪ್ರದರ್ಶನದಲ್ಲೂ ಧೂಳೆಬ್ಬಿಸಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಹಳೆಯ ವಿಡಿಯೋದಲ್ಲಿ, ‘ಈಗ’ ಚಿತ್ರದ ಜಟಿಲ ಖಳನಾಯಕನ ಪಾತ್ರಕ್ಕೆ ಸುದೀಪ್ ಅವರನ್ನೇ…

The post ಈಗ’ ಚಿತ್ರಕ್ಕೆ ಸುದೀಪ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ appeared first on Good News 24x7.

]]>

ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಶನ್‌ನ ಸೂಪರ್ ಹಿಟ್ ‘ಈಗ’ ಸಿನಿಮಾ ಇತ್ತೀಚೆಗೆ ವಿದೇಶದ ವಿಶೇಷ ಪ್ರದರ್ಶನದಲ್ಲೂ ಧೂಳೆಬ್ಬಿಸಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಹಳೆಯ ವಿಡಿಯೋದಲ್ಲಿ, ‘ಈಗ’ ಚಿತ್ರದ ಜಟಿಲ ಖಳನಾಯಕನ ಪಾತ್ರಕ್ಕೆ ಸುದೀಪ್ ಅವರನ್ನೇ ಆಯ್ಕೆ ಮಾಡಲು ಇದ್ದ ಮುಖ್ಯ ಕಾರಣ ಹಾಗೂ ಅಮಿತಾಭ್ ಬಚ್ಚನ್ ಎದುರು ಅವರ ನಟನೆ ನೋಡಿ ಬೆರಗಾದ ಕ್ಷಣವನ್ನು ರಾಜಮೌಳಿ ಬಿಚ್ಚಿಟ್ಟಿದ್ದಾರೆ.

ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಸ್ಯಾಂಡಲ್‌ವುಡ್ ಬಾದ್‌ಶಾ ಕಿಚ್ಚ ಸುದೀಪ್ ಕಾಂಬಿನೇಶನ್‌ನ ‘ಈಗ’ ಸಿನಿಮಾ ಎಷ್ಟು ದೊಡ್ಡ ಹಿಟ್ ಆಗಿತ್ತು ಎಂಬುದು ಎಲ್ಲರಿಗೂ ಗೊತ್ತು. ಈ ಚಿತ್ರದಲ್ಲಿ ಸುದೀಪ್ ಅವರ ಅಪ್ರತಿಮ ಖಳನಾಯಕನ ನಟನೆಗೆ ಇಡೀ ಭಾರತೀಯ ಚಿತ್ರರಂಗವೇ ಫಿದಾ ಆಗಿತ್ತು. ಇತ್ತೀಚೆಗೆ ಈ ಸಿನಿಮಾದ ವಿಶೇಷ ಪ್ರದರ್ಶನ ವಿದೇಶದಲ್ಲಿ ನಡೆದಿದ್ದು, ಎಲ್ಲರೂ ಫಿದಾ ಆಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ಸಂದರ್ಶನದ ವಿಡಿಯೋವೊಂದರಲ್ಲಿ ರಾಜಮೌಳಿ ಅವರು, ‘ಈಗ’ ಚಿತ್ರಕ್ಕೆ ಸುದೀಪ್ ಅವರನ್ನೇ ವಿಲನ್ ಪಾತ್ರಕ್ಕೆ ಆಯ್ಕೆ ಮಾಡಲು ಇದ್ದ ಮುಖ್ಯ ಕಾರಣವನ್ನು ಬಹಿರಂಗಪಡಿಸಿದ್ದರು.

‘ಚಿತ್ರದಲ್ಲಿ ಅಷ್ಟು ಭಯಾನಕ ವಿಲನ್ ಆಗಿರುವ ವ್ಯಕ್ತಿ, ತನ್ನ ಮೊದಲ ಡೈಲಾಗ್‌ನಲ್ಲೇ ‘ಪ್ರತಿ ವಿಷಯಕ್ಕೂ ವೈಲೆನ್ಸ್ ಯಾಕೆ?’ ಅಂತಾನೆ. ಆಮೇಲೆ ಆತ ತುಂಬಾ ವೈಲೆಂಟ್ ಆಗಿ ಬದಲಾಗುತ್ತಾನೆ. ಮಧ್ಯದಲ್ಲಿ ಕಾಮಿಡಿ ಮಾಡುತ್ತಾನೆ, ರೋಮ್ಯಾಂಟಿಕ್ ಆಗುತ್ತಾನೆ, ನಂತರ ಹುಚ್ಚನಂತೆ ಆಡುತ್ತಾನೆ. ಇಷ್ಟೂ ಶೇಡ್‌ಗಳನ್ನು ನಟನೆಯಲ್ಲಿ ತೋರಿಸುವುದು ಕತ್ತಿಯ ಮೇಲಿನ ನಡಿಗೆಯಿದ್ದಂತೆ. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅದು ಓವರ್ ಆಕ್ಟಿಂಗ್ ಎನಿಸಿಕೊಳ್ಳುತ್ತದೆ’ ಎಂದು ರಾಜಮೌಳಿ ಆ ಪಾತ್ರದ ಗಾಂಭೀರ್ಯತೆಯನ್ನು ವಿವರಿಸಿದ್ದರು.

ಅಮಿತಾಭ್ ಬಚ್ಚನ್ ಮುಂದೆ ಸುದೀಪ್ ನಟನೆ ನೋಡಿ ಬೆರಗಾಗಿದ್ದರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ರನ್’ ಚಿತ್ರದಲ್ಲಿ ಸುದೀಪ್ ಅವರ ನಟನೆಯನ್ನು ನೋಡಿ ತಾನು ಫುಲ್ ಫ್ಲಾಟ್ ಆಗಿದ್ದಾಗಿ ರಾಜಮೌಳಿ ನೆನಪಿಸಿಕೊಂಡಿದ್ದಾರೆ. ‘ರನ್ ಸಿನಿಮಾದಲ್ಲಿ ಸುದೀಪ್ ಅವರ ಸೂಕ್ಷ್ಮ ನಟನೆ ಹಾಗೂ ಮ್ಯಾನರಿಸಂ ಅದ್ಭುತವಾಗಿತ್ತು. ಅದರಲ್ಲೂ ಬಾಲಿವುಡ್ ಮಹಾನಾಯಕ ಅಮಿತಾಭ್ ಬಚ್ಚನ್ ಅವರ ಮುಂದೆಯೇ ಅಷ್ಟು ಭರ್ಜರಿಯಾಗಿ ನಟಿಸುವುದನ್ನು ಕಂಡು, ಸುದೀಪ್ ನಿಜಕ್ಕೂ ಒಬ್ಬ ಗ್ರೇಟ್ ಆಕ್ಟರ್ ಎಂದು ನನಗೆ ಅನಿಸಿತ್ತು. ಹಾಗಾಗಿ ‘ಈಗ’ ಚಿತ್ರದ ಕ್ಯಾರೆಕ್ಟರ್ ರೆಡಿಯಾದ ತಕ್ಷಣ ನಮಗೆ ಮೊದಲು ನೆನಪಾಗಿದ್ದೇ ಸುದೀಪ್’ ಎಂದಿದ್ದರು ರಾಜಮೌಳಿ

ಸುದೀಪ್ ಅವರೇ ಫಸ್ಟ್… ಅವರೇ ಲಾಸ್ಟ್
ಸಂದರ್ಶನದ ಕೊನೆಯಲ್ಲಿ ನಿರೂಪಕರು, ‘ಹಾಗಾದರೆ ಈ ಪಾತ್ರಕ್ಕೆ ನಿಮ್ಮ ಮೊದಲ ಆಯ್ಕೆ ಸುದೀಪ್ ಅವರೇನಾ?’ ಎಂದು ಕೇಳಿದಾಗ, ರಾಜಮೌಳಿ ಅವರು ನಗುತ್ತಾ, ‘ಫಸ್ಟ್ ಚಾಯ್ಸ್ ಕೂಡ ಅವರೇ, ಲಾಸ್ಟ್ ಚಾಯ್ಸ್ ಕೂಡ ಅವರೇ! ಫೈನಲ್ ಆಗಿ ಎಲ್ಲವೂ ಅವರೇ ಆಗಿದ್ದರು’ ಎಂದು ಹೇಳುವ ಮೂಲಕ ಕಿಚ್ಚನ ಮೇಲಿರುವ ತಮ್ಮ ಗೌರವ ಹಾಗೂ ನಂಬಿಕೆಯನ್ನು ವ್ಯಕ್ತಪಡಿಸಿದ್ದರು.

The post ಈಗ’ ಚಿತ್ರಕ್ಕೆ ಸುದೀಪ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ appeared first on Good News 24x7.

]]>
70ನೇ ಫಿಲ್ಮ್​ಫೇರ್ ಪ್ರಶಸ್ತಿ ಪಡೆದ ಕನ್ನಡ ಕಲಾವಿದರು https://www.goodnews24x7.com/kannada-artists-wkannada-artists-who-won-the-70th-filmfare-awardsho-won-the-70th-filmfare-awards/ Sun, 22 Feb 2026 05:57:25 +0000 https://www.goodnews24x7.com/?p=8445   70ನೇ ಫಿಲ್ಮ್​ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. ಕೇರಳದ ಕೊಚ್ಚಿಯಲ್ಲಿ ‘70ನೇ ಫಿಲ್ಮ್​​ಫೇರ್…

The post 70ನೇ ಫಿಲ್ಮ್​ಫೇರ್ ಪ್ರಶಸ್ತಿ ಪಡೆದ ಕನ್ನಡ ಕಲಾವಿದರು appeared first on Good News 24x7.

]]>

 

70ನೇ ಫಿಲ್ಮ್​ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ.

ಕೇರಳದ ಕೊಚ್ಚಿಯಲ್ಲಿ ‘70ನೇ ಫಿಲ್ಮ್​​ಫೇರ್ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆದಿದೆ. 2024ರಲ್ಲಿ ತೆರೆಕಂಡ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಝಗಮಗಿಸುವ ವೇದಿಕೆಯಲ್ಲಿ ಅವಾರ್ಡ್ ಫಂಕ್ಷನ್ ನಡೆಯಿತು. ‘ಕೋಳಿ ಎಸ್ರು’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ‘ಬಘೀರ’ ಸಿನಿಮಾದ ನಟನೆಗಾಗಿ ಶ್ರೀಮುರಳಿ ಅವರಿಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ನೀಡಲಾಯಿತು.

‘ಕೆರೆಬೇಟೆ’ ಸಿನಿಮಾದಲ್ಲಿನ ನಟನೆಗಾಗಿ ಗೌರಿಶಂಕರ್ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ಅಂಕಿತಾ ಅಮರ್ ಅವರಿಗೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ‘ಬ್ಲಿಂಕ್’ ಚಿತ್ರಕ್ಕಾಗಿ ಗೋಪಾಲಕೃಷ್ಣ ದೇಶಪಾಂಡೆ ಅವರು ಅತ್ಯುತ್ತಮ ಪೋಷಕ ನಟ ಪಶಸ್ತಿ ಪಡೆದರು. ‘ಭೀಮ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಪ್ರಿಯಾ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸಿಕ್ಕಿದೆ.

70ನೇ ಫಿಲ್ಮ್ ಫೇರ್ ಪ್ರಶಸ್ತಿ ಪಡೆದವರ ಪಟ್ಟಿ: ಅತ್ಯುತ್ತಮ ಸಿನಿಮಾ: ಶಾಖಾಹಾರಿ (ನಿರ್ದೇಶನ: ಸಂದೀಪ್ ಸುಂಕದ್) ಅತ್ಯುತ್ತಮ ನಿರ್ದೇಶಕ: ಪೃಥ್ವಿ ಕೋಣನೂರು (ಹದಿನೇಳೆಂಟು) ಅತ್ಯುತ್ತಮ ನಿನಿಮಾ: ವಿಮರ್ಶಕರ ಆಯ್ಕೆ- ಬ್ಲಿಂಕ್ (ನಿರ್ದೇಶನ: ಶ್ರೀನಿಧಿ ಬೆಂಗಳೂರು) ಅತ್ಯುತ್ತಮ ಸಂಗೀತ: ಅರ್ಜುನ್ ಜನ್ಯ (ಕೃಷ್ಣಂ ಪ್ರಣಯ ಸಖಿ)

ಅತ್ಯುತ್ತಮ ಹೊಸ ನಟಿ: ಬಿಂಧು ಶಿವರಾಮ್ (ಕೆರೆಬೇಟೆ) ಅತ್ಯುತ್ತಮ ಹೊಸ ನಟ: ಸಮರ್​ಜಿತ್ ಲಂಕೇಶ್ (ಗೌರಿ) ಅತ್ಯುತ್ತಮ ಹಿನ್ನೆಲೆ ಗಾಯಕಿ: ಶ್ರುತಿ ಪ್ರಹ್ಲಾದ (ಹಿತ್ತಲಕ ಕರಿಬ್ಯಾಡ) ಅತ್ಯುತ್ತಮ ಹಿನ್ನೆಲೆ ಗಾಯಕ: ಜಸ್ಕರಣ್ ಸಿಂಗ್ (ದ್ವಾಪರ ದಾಟುತ) ಅತ್ಯುತ್ತಮ ಗೀತರಚನೆ: ನಾಗೇಂದ್ರ ಪ್ರಸಾದ್ (ದ್ವಾಪರ ದಾಟುತ)

The post 70ನೇ ಫಿಲ್ಮ್​ಫೇರ್ ಪ್ರಶಸ್ತಿ ಪಡೆದ ಕನ್ನಡ ಕಲಾವಿದರು appeared first on Good News 24x7.

]]>
‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್ https://www.goodnews24x7.com/tap-your-chest-and-say-i-am-an-indian-live-with-pride-i-am-a-kannadigan-yash/ Sat, 01 Nov 2025 10:15:07 +0000 https://www.goodnews24x7.com/?p=7965 ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ…

The post ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್ appeared first on Good News 24x7.

]]>

ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ ವದಂತಿಗಳನ್ನು ನಿರ್ಮಾಪಕರು ತಳ್ಳಿ ಹಾಕಿದ್ದು, ಸಿನಿಮಾ ಯುಗಾದಿಗೆ ತೆರೆಗೆ ಬರಲಿದೆ.

ರಾಕಿಂಗ್ ಸ್ಟಾರ್ ಯಶ್ (Yash) ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರಿಗೆ ಕನ್ನಡದ ಮೇಲೆ ಗೌರವ ಇನ್ನೂ ಹಾಗೆಯೇ ಉಳಿದುಕೊಂಡಿದೆ. ಆದರೆ, ಅವರು ಕರ್ನಾಟಕದಲ್ಲಿ ನಡೆಯೋ ಎಲ್ಲಾ ಬೆಳವಣಿಗೆ ಬಗ್ಗೆಯೂ ಪ್ರತಿಕ್ರಿಯೆ ನೀಡೋದಿಲ್ಲ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಯಶ್ ಕನ್ನಡ ಮರೆತಿದ್ದಾರೆ ಎಂಬ ಆರೋಪ ಮರೆತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಒಂದೇ ಟ್ವೀಟ್ ಮೂಲಕ ಅವರು ಅದನ್ನು ಸುಳ್ಳು ಮಾಡಿದ್ದಾರೆ.

ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವ. ಈ ಸಮಯದಲ್ಲಿ ಅನೇಕರು ಶುಭಾಶಯ ಕೋರುತ್ತಿದ್ದಾರೆ. ಯಶ್ ಕೂಡ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಟ್ವೀಟ್ ಮಾಡಿದ್ದಾರೆ. ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು. ಸಾವಿರ ಭಾಷೆ ನಾಲಿಗೆಯಲ್ಲಿರಲಿ. ಕನ್ನಡ ಭಾಷೆ ಹೃದಯದಲ್ಲಿರಲಿ. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ’ ಎಂದು ಯಶ್ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಟಾಕ್ಸಿಕ್ ಸಿನಿಮಾ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟನೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಹಲವು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್​ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಮುಂದಿನ ವರ್ಷ ಮಾರ್ಚ್ 19ರಂದು ತೆರೆಗೆ ಬರಲಿದೆ. ಯುಗಾದಿ ಪ್ರಯುಕ್ತ ಸಿನಿಮಾ ರಿಲೀಸ್ ಆಗಲಿದೆ.

ಹಬ್ಬಿತ್ತು ವದಂತಿ
‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿದ್ದವು. ಈ ಸಿನಿಮಾದ ಶೂಟಿಂಗ್ ಬಗ್ಗೆ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ಗೆ ಕಿರಿಕ್ ಆಗಿದೆ ಎಂದು ವರದಿ ಆಗಿತ್ತು. ಆದರೆ, ಇದನ್ನು ನಿರ್ಮಾಣ ಸಂಸ್ಥೆ ಕೆವಿಎನ್ ತಳ್ಳಿ ಹಾಕಿದೆ. ಇದು ಕೇವಲ ವಂದತಿ ಎಂದು ಸ್ಪಷ್ಟಪಡಿಸಿದೆ. ಇದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಸಿನಿಮಾ ಅಂದುಕೊಂಡ ದಿನಾಂಕದಂದೇ ತೆರೆಗೆ ಬರಲಿದೆ.

The post ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್ appeared first on Good News 24x7.

]]>
ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ; ‘ಕಾಂತಾರ 1’ ಟಿಕೆಟ್ ದರ ಇಳಿಕೆ https://www.goodnews24x7.com/gift-for-kannada-rajyotsava-kantara-1-ticket-price-reduced/ Fri, 31 Oct 2025 08:18:10 +0000 https://www.goodnews24x7.com/?p=7931 Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಇದೀಗ ಸಿನಿಮಾದ ನಿರ್ಮಾಣ ಸಂಸ್ಥೆ ಹೊಂಬಾಳೆ, ಕನ್ನಡ…

The post ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ; ‘ಕಾಂತಾರ 1’ ಟಿಕೆಟ್ ದರ ಇಳಿಕೆ appeared first on Good News 24x7.

]]>

Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಇದೀಗ ಸಿನಿಮಾದ ನಿರ್ಮಾಣ ಸಂಸ್ಥೆ ಹೊಂಬಾಳೆ, ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ನೀಡಿದ್ದಾರೆ ಎನ್ನಲಾಗುತ್ತಿದೆ. ಅಸಲಿಗೆ ಅದು ಉಡುಗೊರೆಯಾ ಮಾರುಕಟ್ಟೆ ತಂತ್ರವಾ?

ಹೊಂಬಾಳೆ ಫಿಲಮ್ಸ್ (Hombale Films) ನಿರ್ಮಾಣ ಮಾಡಿ, ರಿಷಬ್ ಶೆಟ್ಟಿ ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದಿದೆ. ಭಾರತದಾದ್ಯಂತ ಸಿನಿಮಾ ಅತ್ಯುತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದ್ದು, ಆಂಧ್ರ, ತೆಲಂಗಾಣ ವಿಶೇಷವಾಗಿ ಉತ್ತರ ಭಾರತದ ಹಿಂದಿ ಪ್ರದೇಶದಲ್ಲಿ ಭರ್ಜರಿ ಜನಪ್ರೀತಿ ಗಳಿಸಿದೆ, ಗಲ್ಲಾಪೆಟ್ಟಿಗೆಯನ್ನೂ ಸಹ ತುಂಬಿಸಿಕೊಂಡಿದೆ. ಇದೀಗ ಸಿನಿಮಾದ ಇಂಗ್ಲೀಷ್ ಆವೃತ್ತಿ ಬಿಡುಗಡೆ ಆಗಲಿದ್ದು, ಇಂದಷ್ಟೆ ಸಿನಿಮಾದ ಸ್ಪ್ಯಾನಿಷ್ ಭಾಷೆಯ ಟ್ರೈಲರ್ ಸಹ ಬಿಡುಗಡೆ ಆಗಿದೆ. ಇಷ್ಟೆಲ್ಲದರ ಮಧ್ಯೆ, ಹೊಂಬಾಳೆಯು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟಿಕೆಟ್ ದರವನ್ನು ಇಳಿಕೆ ಮಾಡಿದ್ದು ಕನ್ನಡ ರಾಜ್ಯೋತ್ಸವಕ್ಕೆ ಕನ್ನಡಿಗರಿಗೆ ಉಡುಗೊರೆ ಎನ್ನಲಾಗುತ್ತಿದೆ. ಅಸಲಿಗೆ ಇದು ನಿಜಕ್ಕೂ ಉಡುಗೊರೆಯಾ? ಅಥವಾ ಮಾರುಕಟ್ಟೆ ತಂತ್ರವಾ?

ಭಾರತದಾದ್ಯಂತ ಅಬ್ಬರಿಸುತ್ತಿರುವ ಈ ಸಿನಿಮಾ ಕರ್ನಾಟಕ ಒಂದರಲ್ಲೇ 250 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. 2025ರ ಅತ್ಯಂತ ಯಶಸ್ವಿ ಸಿನಿಮಾ ಎನಿಸಿಕೊಂಡಿದೆ. ಇದೀಗ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಿನಿಮಾದ ಟಿಕೆಟ್ ದರಗಳನ್ನು ಕರ್ನಾಟಕದಲ್ಲಿ ಇಳಿಕೆ ಮಾಡಲಾಗಿದೆ. ನಾಳೆಯಿಂದ (ಅಕ್ಟೋಬರ್ 31) ‘ಕಾಂತಾರ ಚಾಪ್ಟರ್ 1’ ಸಿನಿಮಾದ ಟಿಕೆಟ್ ದರಗಳು ಕಡಿಮೆ ಆಗಲಿದ್ದು, ಸಿಂಗಲ್ ಸ್ಕ್ರೀನ್‌ಗಳಲ್ಲಿ (ಏಕಪರದೆ) ಕೇವಲ 99 ರೂಪಾಯಿಗೆ ಸಿನಿಮಾ ವೀಕ್ಷಿಸಬಹುದಾಗಿದೆ. ಇನ್ನು ರಾಜ್ಯದ ಯಾವುದೇ ಮಲ್ಟಿಪ್ಲೆಕ್ಸ್‌ಗಳಲ್ಲಿ ಕೇವಲ 150 ರೂಪಾಯಿಗಳಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ. ಅಂದಹಾಗೆ ರಾಜ್ಯ ಸರ್ಕಾರವು ಏಕರೂಪ ಟಿಕೆಟ್ ದರದ ಆದೇಶ ಹೊರಡಿಸಿದಾಗ ಆದೇಶಕ್ಕೆ ತಡೆ ತರುವಲ್ಲಿ ಹೊಂಬಾಳೆಯ ಪಾತ್ರ ಮಹತ್ವದ್ದು, ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೊಂಬಾಳೆ ನಿರ್ಮಾಣ ಸಂಸ್ಥೆ, ಸರ್ಕಾರದ ಆದೇಶದಿಂದ ಕಡಿಮೆ ಆಗಿದ್ದ ಟಿಕೆಟ್ ದರಗಳು ಮತ್ತೆ ಹೆಚ್ಚಾಗುವಂತೆ ಮಾಡಿದ ನಿರ್ಮಾಣ ಸಂಸ್ಥೆಗಳಲ್ಲಿ ಪ್ರಮುಖವಾದದ್ದಾಗಿತ್ತು ಎಂಬುದನ್ನು ಇಲ್ಲಿ ಮರೆಯುವಂತಿಲ್ಲ.

ಇದನ್ನು ಹೊಂಬಾಳೆ ಕಡೆಯಿಂದ ರಾಜ್ಯೋತ್ಸವಕ್ಕೆ ಉಡುಗೊರೆ ಎನ್ನಲಾಗುತ್ತಿದೆಯಾದರೂ, ಇದರ ಹಿಂದೆ ಮಾರುಕಟ್ಟೆ ತಂತ್ರವೂ ಇದೆ. ನಾಳೆ ಅಂದರೆ ಅಕ್ಟೋಬರ್ 31 ರಿಂದಲ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆರಂಭ ಮಾಡಲಿದೆ. ಅದಕ್ಕೆ ಸರಿಯಾಗಿ ಚಿತ್ರಮಂದಿರಗಳಲ್ಲಿಯೂ ಸಹ ಸಿನಿಮಾದ ಟಿಕೆಟ್ ದರವನ್ನು ಕಡಿಮೆ ಮಾಡಲಾಗಿದೆ. ಸಿನಿಮಾ ಒಟಿಟಿಗೆ ಬಂದಮೇಲೂ ಚಿತ್ರಮಂದಿರಗಳಿಗೆ ಜನರನ್ನು ಸೆಳೆಯಲೆಂದು ಹೀಗೊಂದು ಅದ್ಭುತ ಆಫರ್ ಅನ್ನು ಹೊಂಬಾಳೆ ನೀಡಿದೆ. ಸಿನಿಮಾ ಒಟಿಟಿಗೆ ಬಂದಮೇಲೆಯೂ ಸಹ ಜನ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಅಕ್ಟೋಬರ್ 2 ರಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಯ್ತು. ಈ ಸಿನಿಮಾ ಈ ವರೆಗೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 900 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಈ ವರ್ಷ ಭಾರತದ ಯಾವುದೇ ಭಾಷೆಯಲ್ಲಿ ಈ ವರೆಗೆ ಬಿಡುಗಡೆ ಆದ ಸಿನಿಮಾಗಳ ಪೈಕಿ ಅತ್ಯಂತ ಯಶಸ್ವಿ ಸಿನಿಮಾ ಇದೆನಿಸಿಕೊಂಡಿದೆ. 2022 ರಲ್ಲಿ ಬಿಡುಗಡೆ ಆದ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಅಂದರೆ ಮುಂದಿನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ರಿಷಬ್ ಶೆಟ್ಟಿ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ರುಕ್ಮಿಣಿ ವಸಂತ್ ನಾಯಕಿ. ಬಾಲಿವುಡ್​​ನಲ್ಲಿ ಮಿಂಚುತ್ತಿರುವ ಕನ್ನಡಿಗ ಗುಲ್ಷನ್ ದೇವಯ್ಯ, ಮಲಯಾಳಂ ನಟ ಜಯರಾಂ ಇನ್ನೂ ಕೆಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ

The post ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ; ‘ಕಾಂತಾರ 1’ ಟಿಕೆಟ್ ದರ ಇಳಿಕೆ appeared first on Good News 24x7.

]]>
‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ https://www.goodnews24x7.com/kantara-cap%e1%b9%adar-1era%e1%b8%8du-varaga%e1%b8%b7alli-visvadyanta-717-50-ko%e1%b9%adi-ru-kalek%e1%b9%a3an-kantarachapter1movieactorrishabshettyindianboxofficetamiltelugu/ Sun, 19 Oct 2025 10:09:28 +0000 https://www.goodnews24x7.com/?p=7778 ‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ…

The post ‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ appeared first on Good News 24x7.

]]>

‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ಕಲೆಕ್ಷನ್ ವರದಿ ಇಲ್ಲಿದೆ.

ನಟ ರಿಷಬ್ ಶೆಟ್ಟಿ (Rishab Shetty) ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಅತಿ ಬೇಡಿಕೆಯ ನಟನಾಗಿ, ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಗೆಲುವು. ಅಕ್ಟೋಬರ್ 2ರಂದು ಬಿಡುಗಡೆ ಆದ ಈ ಸಿನಿಮಾ ಇಂದಿಗೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಭಾಷೆಗಳಲ್ಲೂ ಅಬ್ಬರಿಸುತ್ತಿದೆ. 17 ದಿನಗಳು ಕಳೆದರೂ ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಉತ್ತಮವಾಗಿಯೇ ಕಲೆಕ್ಷನ್ (Kantara Chapter 1 Collection) ಆಗುತ್ತಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾದ ಗಳಿಕೆ 500 ಕೋಟಿ ರೂಪಾಯಿ ಮೀರಿದೆ.

ಈ ಬಗ್ಗೆ ಇಲ್ಲಿದೆ ವಿವರ Sacnilk ವರದಿ ಪ್ರಕಾರ ‘ಕಾಂತಾರ: ಚಾಪ್ಟರ್ 1’ ಸಿನಿಮಾ 17ನೇ ದಿನ ಭಾರತದ ಗಲ್ಲಾಪೆಟ್ಟಿಗೆಯಲ್ಲಿ 12.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಲ್ಲಿಗೆ, ಭಾರತದಲ್ಲಿ ಸಿನಿಮಾದ ಒಟ್ಟು ಕಲೆಕ್ಷನ್ 506 ಕೋಟಿ ರೂಪಾಯಿ ಆಗಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಯಲ್ಲಿ ಬಿಡುಗಡೆ ಆದ ಈ ಸಿನಿಮಾಗೆ ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಭಾರತದ ಆಚೆ ಕೂಡ ಹಲವು ದೇಶಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಉತ್ತಮವಾಗಿ ಪ್ರದರ್ಶನ ಕಂಡಿದೆ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯೇ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಎರಡು ವಾರಗಳಲ್ಲಿ ಈ ಸಿನಿಮಾಗೆ ವಿಶಾದ್ಯಂತ 717.50 ಕೋಟಿ ರೂಪಾಯಿ ಆಗಿದೆ. ಇನ್ನೂ ಹೆಚ್ಚಿನ ಕಲೆಕ್ಷನ್ ಮಾಡುವ ಸಾಧ್ಯತೆ ದಟ್ಟವಾಗಿದೆ.

ಭಾನುವಾರ (ಅಕ್ಟೋಬರ್ 19) ಕೂಡ ಅನೇಕ ಕಡೆಗಳಲ್ಲಿ ಬುಕಿಂಗ್ ಚೆನ್ನಾಗಿದೆ. ಅಲ್ಲದೇ, ದೀಪಾವಳಿ ಹಬ್ಬದ ರಜೆ ಬಂದಿರುವುದರಿಂದ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರ ಸಂಖ್ಯೆ ಹೆಚ್ಚುವ ನಿರೀಕ್ಷೆ ಜಾಸ್ತಿ ಇದೆ. ಈ ಎಲ್ಲದರ ಪರಿಣಾಮವಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇನ್ನೂ ಉತ್ತಮವಾಗಿ ಕಲೆಕ್ಷನ್ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಗೆ ಭರ್ಜರಿ ಲಾಭ ಆಗಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಾಗಿದೆ. ನಟಿ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಫೇಮಸ್ ಆಗಿದ್ದಾರೆ. ಪರಭಾಷೆ ಮಂದಿ ಮತ್ತೆ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ರಿಷಬ್ ಶೆಟ್ಟಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ.

The post ‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ appeared first on Good News 24x7.

]]>
‘ಕೂಲಿ’ ಸಿನಿಮಾ ಬಗ್ಗೆ ವಿಷಾದ ವ್ಯಕ್ತಪಡಿಸಿದ ನಟ ಆಮಿರ್ ಖಾನ್ https://www.goodnews24x7.com/actor-aamir-khan-expressed-regret-over-the-movie-coolie/ Sun, 14 Sep 2025 09:14:09 +0000 https://www.goodnews24x7.com/?p=7527 ನಟ ಆಮಿರ್ ಖಾನ್ ಅವರು ತಮಿಳಿನ ‘ಕೂಲಿ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ಮಾಡಿದ್ದಕ್ಕೆ ಅವರು ಈಗ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಆ ಕುರಿತು ಪತ್ರಿಕೆಯೊಂದರಲ್ಲಿ ವರದಿ ಆದ ಬಳಿಕ ಆಮಿರ್ ಖಾನ್…

The post ‘ಕೂಲಿ’ ಸಿನಿಮಾ ಬಗ್ಗೆ ವಿಷಾದ ವ್ಯಕ್ತಪಡಿಸಿದ ನಟ ಆಮಿರ್ ಖಾನ್ appeared first on Good News 24x7.

]]>

ನಟ ಆಮಿರ್ ಖಾನ್ ಅವರು ತಮಿಳಿನ ‘ಕೂಲಿ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ಮಾಡಿದ್ದಕ್ಕೆ ಅವರು ಈಗ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಆ ಕುರಿತು ಪತ್ರಿಕೆಯೊಂದರಲ್ಲಿ ವರದಿ ಆದ ಬಳಿಕ ಆಮಿರ್ ಖಾನ್ ತಂಡದ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ.

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ‘ಕೂಲಿ’ ಸಿನಿಮಾ ಆಗಸ್ಟ್ 14ರಂದು ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಹಲವು ಕಲಾವಿದರು ನಟಿಸಿದರು. ಉಪೇಂದ್ರ, ರಚಿತಾ ರಾಮ್, ಸೌಬಿನ್ ಶಾಹಿರ್, ಆಮಿರ್ ಖಾನ್ (Aamir Khan), ನಾಗಾರ್ಜುನ, ಶ್ರುತಿ ಹಾಸನ್, ಪೂಜಾ ಹೆಗ್ಡೆ ಮುಂತಾದವರು ಅಭಿನಯಿಸಿದರು. ಬಾಕ್ಸ್ ಆಫೀಸ್​​ನಲ್ಲಿ ಈ ಚಿತ್ರಕ್ಕೆ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇತ್ತೀಚೆಗೆ ಒಂದು ಸುದ್ದಿ ಪ್ರಕಟ ಆಯಿತು. ಆಮಿರ್ ಖಾನ್ ಅವರು ‘ಕೂಲಿ’ (Coolie) ಸಿನಿಮಾದಲ್ಲಿ ನಟಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಯಿತು. ಆ ಬಗ್ಗೆ ಅವರ ತಂಡದವರಿಂದ ಪ್ರತಿಕ್ರಿಯೆ ಬಂದಿದೆ.

ಅಂದಹಾಗೆ, ಆಮಿರ್ ಖಾನ್ ಅವರು ‘ಕೂಲಿ’ ಸಿನಿಮಾದಲ್ಲಿ ಮಾಡಿದ್ದು ಅತಿಥಿ ಪಾತ್ರ. ಅದನ್ನು ಆಮಿರ್ ಖಾನ್ ಅವರೇ ಮಾಡಬೇಕು ಎಂಬುದೇನೂ ಇರಲಿಲ್ಲ. ರಜನಿಕಾಂತ್ ಅವರ ಮೇಲಿನ ಪ್ರೀತಿ, ಗೌರವದ ಕಾರಣಕ್ಕೆ ಅವರು ಆ ಪಾತ್ರವನ್ನು ಮಾಡಲು ಒಪ್ಪಿಕೊಂಡರು. ಆದರೆ ಈಗ ‘ಯಾಕಾದ್ರೂ ರಜನಿ ಜೊತೆ ಕೂಲಿ ಸಿನಿಮಾ ಮಾಡಿದ್ನೋ’ ಎಂದು ಆಮಿರ್ ಖಾನ್ ಬೇಸರ ಮಾಡಿಕೊಂಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಟ್ವಿಸ್ಟ್ ಏನೆಂದರೆ ಆಮಿರ್ ಖಾನ್ ಅವರು ಯಾವ ಪತ್ರಿಕೆಗೂ ಆ ರೀತಿಯ ಹೇಳಿಕೆ ನೀಡಿಲ್ಲ! ಈ ಕುರಿತು ಅವರ ಟೀಮ್ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ. ‘ಆಮಿರ್ ಖಾನ್ ಅವರು ಇಂಥ ಯಾವುದೇ ಸಂದರ್ಶನ ನೀಡಿಲ್ಲ. ಕೂಲಿ ಸಿನಿಮಾ ಬಗ್ಗೆ ಅವರು ನೆಗೆಟಿವ್ ಆಗಿ ಮಾತನಾಡಿಲ್ಲ’ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.

ರಜನಿಕಾಂತ್ ಬಗ್ಗೆ ಆಮಿರ್ ಖಾನ್ ಅವರಿಗೆ ಬಹಳ ಗೌರವ ಇದೆ. ನಿರ್ದೇಶಕ ಲೋಕೇಶ್ ಕನಗರಾಜ್ ಮತ್ತು ಇಡೀ ಕೂಲಿ ಸಿನಿಮಾ ತಂಡದ ಬಗ್ಗೆ ಅವರಿಗೆ ಆ ಗೌರವ ಇದೆ. ಬಾಕ್ಸ್​ ಆಫೀಸ್​​ನಲ್ಲಿ ಈ ಸಿನಿಮಾ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಬಗ್ಗೆ ಈ ಗಳಿಕೆಯೇ ಎಲ್ಲವನ್ನೂ ಹೇಳುತ್ತಿದೆ’ ಎಂದು ಆಮಿರ್ ಖಾನ್ ತಂಡದವರು ಪ್ರತಿಕ್ರಿಯಿಸಿದ್ದಾರೆ.

‘ಕೂಲಿ’ ಸಿನಿಮಾಗೆ ಅಂದಾಜು 400 ಕೋಟಿ ರೂಪಾಯಿ ಬಂಡವಾಳ ಸುರಿಯಲಾಗಿತ್ತು. ಅದಕ್ಕೆ ಹೋಲಿಸಿದರೆ 500 ಕೋಟಿ ರೂಪಾಯಿ ಕಲೆಕ್ಷನ್ ಏನೇನೂ ಅಲ್ಲ. ಅಲ್ಲದೇ ವಿಮರ್ಶೆ ದೃಷ್ಟಿಯಿಂದಲೂ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ಒಟಿಟಿಯಲ್ಲೂ ವೀಕ್ಷಣೆಗೆ ಲಭ್ಯವಿದೆ. ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ಆಮಿರ್ ಖಾನ್ ಇನ್ನೊಂದು ಸಿನಿಮಾ ಮಾಡಬೇಕಿತ್ತು. ಆದರೆ ಈ ಚಿತ್ರ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ.

The post ‘ಕೂಲಿ’ ಸಿನಿಮಾ ಬಗ್ಗೆ ವಿಷಾದ ವ್ಯಕ್ತಪಡಿಸಿದ ನಟ ಆಮಿರ್ ಖಾನ್ appeared first on Good News 24x7.

]]>
ಸ್ಟಾರ್ ಹೀರೋ ಜೊತೆ ಸುಕ್ಕಾ ಸೂರಿ ಹೊಸ ಸಿನಿಮಾ, ಶೀಘ್ರವೇ ಪ್ರಾರಂಭ…..! https://www.goodnews24x7.com/sukka-suris-new-movie-with-star-hero-starting-soon/ Tue, 26 Aug 2025 13:12:08 +0000 https://www.goodnews24x7.com/?p=6769 ಸುಕ್ಕಾ ಸೂರಿ ಕನ್ನಡ ಚಿತ್ರರಂಗದ ಭಿನ್ನ ದನಿಯ ನಿರ್ದೇಶಕ. ಅವರ ಸಿನಿಮಾ ಕಟ್ಟುವ ರೀತಿಗೆ, ಕತೆ ಹೇಳುವ ಪರಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಆದರೆ ಯಾಕೋ ಇತ್ತೀಚೆಗೆ ಯಶಸ್ಸು ಸುಕ್ಕಾ ಸೂರಿಯ ಕೈ ಹಿಡಿದಿಲ್ಲ. ಸೂರಿ ನಿರ್ದೇಶಿಸಿದ್ದ ಈ ಹಿಂದಿನ ಸಿನಿಮಾ…

The post ಸ್ಟಾರ್ ಹೀರೋ ಜೊತೆ ಸುಕ್ಕಾ ಸೂರಿ ಹೊಸ ಸಿನಿಮಾ, ಶೀಘ್ರವೇ ಪ್ರಾರಂಭ…..! appeared first on Good News 24x7.

]]>

ಸುಕ್ಕಾ ಸೂರಿ ಕನ್ನಡ ಚಿತ್ರರಂಗದ ಭಿನ್ನ ದನಿಯ ನಿರ್ದೇಶಕ. ಅವರ ಸಿನಿಮಾ ಕಟ್ಟುವ ರೀತಿಗೆ, ಕತೆ ಹೇಳುವ ಪರಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಆದರೆ ಯಾಕೋ ಇತ್ತೀಚೆಗೆ ಯಶಸ್ಸು ಸುಕ್ಕಾ ಸೂರಿಯ ಕೈ ಹಿಡಿದಿಲ್ಲ. ಸೂರಿ ನಿರ್ದೇಶಿಸಿದ್ದ ಈ ಹಿಂದಿನ ಸಿನಿಮಾ ‘ಬ್ಯಾಡ್ ಮ್ಯಾನರ್ಸ್’ ಫ್ಲಾಪ್ ಆಯ್ತು. ಭಾರಿ ನಿರೀಕ್ಷೆಯನ್ನು ಅಭಿಮಾನಿಗಳು ಈ ಸಿನಿಮಾ ಮೇಲಿರಿಸಿದ್ದರು. ಆದರೆ ಸಿನಿಮಾ ನಿರೀಕ್ಷಿತ ಯಶಸ್ಸು ಗಳಿಸಲಿಲ್ಲ. ಇದೀಗ ಸೂರಿ ಹೊಸ ಸಿನಿಮಾಕ್ಕೆ ಕೈ ಹಾಕಿದ್ದು, ಕನ್ನಡದ ಸ್ಟಾರ್ ನಟರೊಬ್ಬರೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

ಪ್ಯಾನ್ ಇಂಡಿಯಾ ನಟನಾಗಿ ಗುರುತಿಸಿಕೊಳ್ಳುತ್ತಿರುವ ಧ್ರುವ ಸರ್ಜಾ ಅವರೊಟ್ಟಿಗೆ ಸಿನಿಮಾ ಮಾಡಲು ಸೂರಿ ಮುಂದಾಗಿದ್ದಾರೆ. ಕೆಲ ಮೂಲಗಳ ಪ್ರಕಾರ ಇಬ್ಬರ ನಡುವೆ ಒಂದು ಹಂತದ ಮಾತುಕತೆ ಪೂರ್ಣವಾಗಿದೆಯಂತೆ. ಧ್ರುವ ಅವರ ಇಮೇಜಿಗೆ ತಕ್ಕಂತೆ ಆಕ್ಷನ್ ಸಿನಿಮಾ ನಿರ್ದೇಶಿಸಲು ಸೂರಿ ಮುಂದಾಗಿದ್ದಾರೆ. ಸೂರಿಯ ಭಿನ್ನ ಸಿನಿಮಾ ಮೇಕಿಂಗ್ ಮತ್ತು ಧ್ರುವ ಅವರ ಪವರ್ ಹೌಸ್ ಆಕ್ಷನ್ ಇಮೇಜು ಎರಡಕ್ಕೂ ಹೊಂದಿಕೆ ಆಗುವ ಕತೆ ತೆರೆಯ ಮೇಲೆ ಬರಲಿದೆ ಎನ್ನಲಾಗುತ್ತಿದೆ.

ಸೂರಿ ಅವರು ಯುವ ರಾಜ್​ಕುಮಾರ್ ಅವರಿಗಾಗಿ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ‘ಎಕ್ಕ’ ಸಿನಿಮಾದ ಬಿಡುಗಡೆ ಬಳಿಯ ಸೂರಿ ಮತ್ತು ಯುವರಾಜ್ ಕುಮಾರ್ ಅವರ ಸಿನಿಮಾ ಸೆಟ್ಟೇರಲಿದೆ ಎನ್ನಲಾಗಿತ್ತು. ಆದರೆ ಆ ಸಿನಿಮಾ ಕಾರಣಾಂತರಗಳಿಂದಾಗಿ ಮುಂದೆ ಹೋಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಯುವ ರಾಜ್​ಕುಮಾರ್ ಅವರ ಬೇರೆ ಸಿನಿಮಾದ ಕಮಿಟ್​ಮೆಂಟ್​ ನಿಂದಾಗಿ ಸೂರಿ ಜೊತೆಗಿನ ಸಿನಿಮಾ ಮುಂದೂಡಲ್ಪಟ್ಟಿದೆ ಎಂಬ ಸುದ್ದಿ ಇದೆ.

ಇನ್ನು ಧ್ರುವ ಸರ್ಜಾ ಪ್ರಸ್ತುತ ‘ಕೆಡಿ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಪ್ರೇಮ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಸಂಜಯ್ ದತ್, ರಮೇಶ್ ಅರವಿಂದ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರೀಷ್ಮಾ ನಾಣಯ್ಯ, ಅಭಿಜಿತ್ ಇನ್ನೂ ಕೆಲವು ಪ್ರಮುಖ ನಟರುಗಳು ನಟಿಸಿದ್ದಾರೆ. ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ.

‘ದುನಿಯಾ’, ‘ಟಗರು’, ‘ಅಣ್ಣಾ ಬಾಂಡ್’, ‘ಜಾಕಿ’, ‘ಕಡ್ಡಿಪುಡಿ’, ‘ಜಂಗ್ಲಿ’, ‘ಕೆಂಡಸಂಪಿಗೆ’, ‘ಪಾಪ್ ಕಾರ್ನ್ ಮಂಕಿ ಟೈಗರ್’ ಅಂಥಹಾ ಸಿನಿಮಾಗಳನ್ನು ನೀಡಿರುವ ಸೂರಿಗೆ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಸೋಲಿನಿಂದ ಸಣ್ಣ ಹಿನ್ನಡೆ ಆಗಿದ್ದು, ಈಗ ಮತ್ತೊಂದು ಹಿಟ್ ಮೂಲಕ ರೀಎಂಟ್ರಿಗೆ ಸಜ್ಜಾಗುತ್ತಿದ್ದಾರೆ.

 

The post ಸ್ಟಾರ್ ಹೀರೋ ಜೊತೆ ಸುಕ್ಕಾ ಸೂರಿ ಹೊಸ ಸಿನಿಮಾ, ಶೀಘ್ರವೇ ಪ್ರಾರಂಭ…..! appeared first on Good News 24x7.

]]>
ಡಿಸೆಂಬರ್ 12ಕ್ಕೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ, ದರ್ಶನ್ ಅಭಿಮಾನಿಗಳಿಗೆ ಹಬ್ಬ https://www.goodnews24x7.com/the-devil-movie-to-release-on-december-12-a-feast-for-darshan-fans/ Sun, 24 Aug 2025 08:23:44 +0000 https://www.goodnews24x7.com/?p=6649 ದರ್ಶನ್ ಅಭಿಮಾನಿಗಳ ಪಾಲಿನ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಈ ವರ್ಷವೇ ತೆರೆಕಾಣಲಿದೆ. ಡಿಸೆಂಬರ್ 12ರಂದು ಸಿನಿಮಾ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ರಿಲೀಸ್ ಡೇಟ್ ಅನೌನ್ಸ್ ಆಗಿದೆ. ದರ್ಶನ್ ಅವರು ಜೈಲಿನಲ್ಲಿ ಇದ್ದರೂ ಕೂಡ ಸಿನಿಮಾದ ಬಿಡುಗಡೆಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ.…

The post ಡಿಸೆಂಬರ್ 12ಕ್ಕೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ, ದರ್ಶನ್ ಅಭಿಮಾನಿಗಳಿಗೆ ಹಬ್ಬ appeared first on Good News 24x7.

]]>

ದರ್ಶನ್ ಅಭಿಮಾನಿಗಳ ಪಾಲಿನ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಈ ವರ್ಷವೇ ತೆರೆಕಾಣಲಿದೆ. ಡಿಸೆಂಬರ್ 12ರಂದು ಸಿನಿಮಾ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ರಿಲೀಸ್ ಡೇಟ್ ಅನೌನ್ಸ್ ಆಗಿದೆ. ದರ್ಶನ್ ಅವರು ಜೈಲಿನಲ್ಲಿ ಇದ್ದರೂ ಕೂಡ ಸಿನಿಮಾದ ಬಿಡುಗಡೆಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ನಟ ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾದ ತಮ್ಮ ಪಾಲಿನ ಎಲ್ಲ ಕೆಲಸಗಳನ್ನು ಮುಗಿಸಿಕೊಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಅವರು ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ಸಿನಿಮಾ ಬಿಡುಗಡೆಗೆ ತೊಂದರೆ ಆಗಬಾರದು ಎಂದು ಅವರು ನಿರ್ಧರಿಸಿದ್ದಾರೆ. ಆದ್ದರಿಂದ ದರ್ಶನ್ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಈಗ ಈ ಚಿತ್ರದ ರಿಲೀಸ್ ದಿನಾಂಕ ಪ್ರಕಟಿಸಲಾಗಿದೆ. ಇದೇ ವರ್ಷ ಈ ಸಿನಿಮಾ ಬಿಡುಗಡೆ ಆಗಲಿದೆ. ಡಿಸೆಂಬರ್ 12ರಂದು ‘ದಿ ಡೆವಿಲ್’ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ. ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡಿದ್ದಾರೆ. ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈಗಾಗಲೇ ಟೀಸರ್ ಗಮನ ಸೆಳೆದಿದೆ. ಅಲ್ಲದೇ, ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಕೂಡ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ.

ಆಗಸ್ಟ್ 24ರಂದು ದರ್ಶನ್ ಅಭಿಮಾನಿಗಳಿಗೆ ಡಬಲ್ ಧಮಾಕಾ ಎದುರಾಯಿತು. ಬೆಳಗ್ಗೆ 10 ಗಂಟೆ 3 ನಿಮಿಷಯಕ್ಕೆ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ ಆಯಿತು. ಅದರ ಬೆನ್ನಲ್ಲೇ ಚಿತ್ರತಂಡದವರು ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡಿದರು. ಇದು ಅಭಿಮಾನಿಗಳಿಗೆ ಸರ್ಪ್ರೈಸ್ ಆಗಿತ್ತು. ಒಟ್ಟಿನಲ್ಲಿ ‘ದಿ ಡೆವಿಲ್’ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ದರ್ಶನ್ ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ‘ದಿ ಡೆವಿಲ್’ ಸಿನಿಮಾದ ರಿಲೀಸ್ ಡೇಟ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಜೈಲಿನಲ್ಲಿ ಇರುವ ಅವರ ಖಾತೆಯನ್ನು ಈಗ ಪತ್ನಿ ವಿಜಯಲಕ್ಷ್ಮಿ ಅವರು ನಿಭಾಯಿಸುತ್ತಿದ್ದಾರೆ. ‘ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು. ನೀವು ಕಾತುರದಿಂದ ಕಾಯುತ್ತಿದ್ದ ದಿ ಡೆವಿಲ್ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆ’ ಎಂದು ಪೋಸ್ಟ್ ಮಾಡಲಾಗಿದೆ. ‘ದಿ ಡೆವಿಲ್’ ಸಿನಿಮಾದ ಬಿಡುಗಡೆಗೆ ಇನ್ನೂ ಸಮಯ ಇದೆ. ಅಷ್ಟರೊಳಗೆ ದರ್ಶನ್ ಅವರು ಒಂದು ವೇಳೆ ಜಾಮೀನು ಪಡೆದು ಹೊರಗೆ ಬಂದರೆ ಖಂಡಿತವಾಗಿಯೂ ಅಭಿಮಾನಿಗಳಿಗೆ ಹಬ್ಬ ಆಗಲಿದೆ. ತಮ್ಮ ನೆಚ್ಚಿನ ನಟನ ಜೊತೆಯಲ್ಲೇ ‘ದಿ ಡೆವಿಲ್’ ಬಿಡುಗಡೆಯನ್ನು ಸಂಭ್ರಮಿಸಬಹುದು. ಜಾಮೀನು ಸಿಗದೇ ಇದ್ದರೆ ಆ ಕೊರಗಿನ ನಡುವೆಯೂ ಸಿನಿಮಾ ನೋಡುವುದು ಅಭಿಮಾನಿಗಳಿಗೆ ಅನಿವಾರ್ಯ ಆಗಲಿದೆ.

The post ಡಿಸೆಂಬರ್ 12ಕ್ಕೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ, ದರ್ಶನ್ ಅಭಿಮಾನಿಗಳಿಗೆ ಹಬ್ಬ appeared first on Good News 24x7.

]]>
ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..! https://www.goodnews24x7.com/rajinikanth-kamal-haasan-on-the-same-screen-after-4-decades/ Wed, 20 Aug 2025 10:11:10 +0000 https://www.goodnews24x7.com/?p=6401 ದಕ್ಷಿಣ ಭಾರತದ ಸೂಪರ್ ಸ್ಟಾರ್​ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು 46 ವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಲೆಜೆಂಡರಿ ಹೀರೋಗಳು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು ಈ ಸಿನಿಮಾವನ್ನು ಲೋಕೇಶ್ ಕನಕರಾಜ್ ಅವರು ನಿರ್ದೇಶನನ ಮಾಡಲಿದ್ದಾರೆ…

The post ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..! appeared first on Good News 24x7.

]]>

ದಕ್ಷಿಣ ಭಾರತದ ಸೂಪರ್ ಸ್ಟಾರ್​ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು 46 ವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಲೆಜೆಂಡರಿ ಹೀರೋಗಳು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು ಈ ಸಿನಿಮಾವನ್ನು ಲೋಕೇಶ್ ಕನಕರಾಜ್ ಅವರು ನಿರ್ದೇಶನನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಉಳಗನಾಯಗನ್ ಕಮಲ್ ಹಾಸನ್ ಅವರಿಗೆ ಈಗಾಗಲೇ 70 ವರ್ಷಗಳು ದಾಟಿದ್ದರೂ ಗ್ಯಾಂಗ್​ಸ್ಟರ್​ಗಳಾಗಿ ಸಿನಿಮಾದಲ್ಲಿ ಮಿಂಚಲಿದ್ದಾರಂತೆ. ಈ ಕುರಿತು ಸಿನಿಮಾ ಸ್ಕ್ರೀಪ್ಟ್​ ಅನ್ನು ಕೊರೊನಾಗಿಂತ ಮೊದಲೇ ಸಿದ್ಧವಾಗಿತ್ತು. ಆದರೆ ಇಷ್ಟು ದಿನ ಈ ಸ್ಕ್ರೀಪ್ಟ್​ ಅನ್ನು ಹಾಗೇ ಇಡಲಾಗಿತ್ತು. ಈಗ ಮತ್ತೆ ಇದು ಮುನ್ನೆಲೆಗೆ ಬಂದಿದ್ದು ಹೆಸರಿಡದ ಸಿನಿಮಾ ಮತ್ತೊಂದು ಹಂತಕ್ಕೆ ಹೋಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ದಿಗ್ಗಜ ನಟರು ಅಭಿನಯಿಸಲಿದ್ದಾರೆ ಎನ್ನುವ ಸಿನಿಮಾ ಇನ್ನು ಮಾತುಕತೆಯಲ್ಲಿದೆ. ಇದರ ನಡುವೆ ಲೋಕೇಶ್ ಕನಕರಾಜ್ ಅವರು ಕಾರ್ತಿ ಜೊತೆ ಖೈದಿ-2 ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರ ಮುಂಬರುವ ದೊಡ್ಡ ಪ್ರಾಜೆಕ್ಟ್ ಇದಾಗಿದ್ದು, ಹೀಗಾಗಿ ಅವರಿಗಾಗಿ ನಿರ್ದೇಶಕರು ಇನ್ನಷ್ಟು ಕಾಯಬೇಕಾಗಿದೆ ಎಂದು ಹೇಲಾಗುತ್ತಿದೆ.

ಈ ಹಿಂದೆ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಜನರ ಮನ ಗೆದ್ದಿದ್ದರು. ಆದರೆ ಈ ದಿಗ್ಗಜ ನಟರು 1979ರಲ್ಲಿ ರಿಲೀಸ್ ಆದಂತಹ ಅಲಾವುದ್ದೀನುಮ್ ಅಲ್ಭೂತ ವಿಲಕ್ಕುಮ್ ಎನ್ನುವ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಅಂದಿನಿಂದ ಇಬ್ಬರು ಸೇರಿ ಒಟ್ಟಿಗೆ ಯಾವುದೇ ಸಿನಿಮಾದಲ್ಲಿ ಮತ್ತೆ ಅಭಿನಯ ಮಾಡಿರಲಿಲ್ಲ. ಸದ್ಯ 46 ವರ್ಷಗಳ ಬಳಿಕ ರಜನಿ-ಕಮಲ್ ಸ್ಕ್ರೀನ್ ಶೇರ್ ಮಾಡುತ್ತಾರೆ ಎಂದು ಹೇಳಲಾಗುತ್ತದೆ.

ಸ್ಟ್ 24 ಭಾನುವಾರ ಬೆಳಗ್ಗೆ 10- 05 ಕ್ಕೆ ” ದಿ ಡೆವಿಲ್ ” ನ , ಮೊದ

The post ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..! appeared first on Good News 24x7.

]]>