movies Archives - Good News 24x7 https://www.goodnews24x7.com/tag/movies/ Kannada Tue, 18 Nov 2025 06:55:34 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg movies Archives - Good News 24x7 https://www.goodnews24x7.com/tag/movies/ 32 32 ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ ಜಗ್ಗೇಶ್ https://www.goodnews24x7.com/45-years-since-entering-the-film-industry-navarasa-nayaka-jaggesh-opens-a-page-of-memories/ Tue, 18 Nov 2025 06:55:34 +0000 https://www.goodnews24x7.com/?p=8194 ಯಾವುದೇ ಹಿನ್ನೆಲೆ ಇಲ್ಲದೇ ಬಂದ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಿದರು. ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡಿ ಇಂದಿಗೆ (ನವೆಂಬರ್ 17) 45 ವರ್ಷಗಳನ್ನು ಪೂರೈಸಿದ್ದಾರೆ. ಈ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಿನಿಜರ್ನಿಯ ನೆನಪು ಮೆಲುಕು…

The post ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ ಜಗ್ಗೇಶ್ appeared first on Good News 24x7.

]]>

ಯಾವುದೇ ಹಿನ್ನೆಲೆ ಇಲ್ಲದೇ ಬಂದ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಿದರು. ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡಿ ಇಂದಿಗೆ (ನವೆಂಬರ್ 17) 45 ವರ್ಷಗಳನ್ನು ಪೂರೈಸಿದ್ದಾರೆ. ಈ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಿನಿಜರ್ನಿಯ ನೆನಪು ಮೆಲುಕು ಹಾಕಿದ್ದಾರೆ.

ಖ್ಯಾತ ನಟ ಜಗ್ಗೇಶ್ (Jaggesh) ಅವರು ಚಿತ್ರರಂಗದಲ್ಲಿ ನಾಲ್ಕೂವರೆ ದಶಕಗಳ ಅನುಭವ ಹೊಂದಿದ್ದಾರೆ. ಅನೇಕ ಏಳು-ಬೀಳುಗಳನ್ನು ಅವರು ನೋಡಿದ್ದಾರೆ. ಇಂದಿಗೆ (ನವೆಂಬರ್ 17) ‘ನವರಸ ನಾಯಕ’ ಜಗ್ಗೇಶ್ ಅವರು ಚಿತ್ರರಂಗಕ್ಕೆ (Kannada Film Industry) ಕಾಲಿಟ್ಟು ಬರೋಬ್ಬರಿ 45 ವರ್ಷಗಳು ಕಳೆದಿವೆ. ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಸ್ಟಾರ್ ನಟನಾಗಿ ಯಶಸ್ಸು ಕಂಡಿದ್ದಾರೆ. ಎಷ್ಟೇ ಸಾಧನೆ ಮಾಡಿದರೂ ಕೂಡ ಅವರು ತಮಗೆ ಅವಕಾಶ ಕೊಟ್ಟವರನ್ನು ಇಂದಿಗೂ ಮರೆತಿಲ್ಲ. ಸೋಶಿಯಲ್ ಮೀಡಿಯಾ ಮೂಲಕ ಅವರು ಎಲ್ಲವನ್ನೂ ನೆನಪು ಮಾಡಿಕೊಂಡಿದ್ದಾರೆ. ಅವರ ಪೋಸ್ಟ್ ಇಲ್ಲಿದೆ.‘1980 ನವಂಬರ್ 17ನೇ ತಾರೀಖು. ಆಗ ನನಗೆ 18 ವರ್ಷ ವಯಸ್ಸು. ನಾನು ಬಣ್ಣಹಚ್ಚಿ ನಟಿಸಿದ ಚಿತ್ರ ‘ಕನ್ನಡತಿ ಮಾನವತಿ’. ಸ್ಥಳ ಗುಬ್ಬಿ ಚನ್ನಬಸವೇಶ್ವರ ಆಲಯ. ಬಣ್ಣ ಹಚ್ಚಿದವರು ಅಂಬರೀಶ್ ಅವರ ಮೇಕಪ್ ಮಾಡುತ್ತಿದ್ದ ರಾಮಕೃಷ್ಣ ಹಾಗೂ ಅವರ ಶಿಷ್ಯ ಕೃಷ್ಣ. ಪಾತ್ರ ಕೊಡಿಸಿದವ ನನ್ನ ಮಿತ್ರ ಶಂಭು’ ಎಂದು ಜಗ್ಗೇಶ್ ಅವರು ಆ ದಿನಗಳ ಪುಟ ತೆರೆದಿದ್ದಾರೆ.

‘ನನಗೆ ಮೀಸೆ ಬರೆದವರು ಹಾಸ್ಯನಟ ರನ್ನಾಕರ್. ಚಿತ್ರದ ನಾಯಕ ರಾಮಕೃಷ್ಣ. ನಾಯಕಿ ಪ್ರಮೀಳ ಜೋಯ್ಸ್. ನನ್ನ ಜೊತೆ ನಟಿಸಿದ ನಟಿ ಸಿಹಿಕಹಿ ಗೀತಾ ಅಕ್ಕ. ಚಿತ್ರ ಬಿಡುಗಡೆ ಆಗಲಿಲ್ಲ. ನನ್ನ ಅದೃಷ್ಟ ನಿರ್ದೇಶಕ ಸಿದ್ದಲಿಂಗಯ್ಯ ಅವರ ಮಗ ಮುರಳಿ ಅವರ ಚಿತ್ರ ‘ಬಿಳಿ ಗುಲಾಬಿ’ ಸಿಗಲು ಕಾರಣವಾದರು ಪುಟ್ಟಣ್ಣ ಕಣಗಲ್ ಅವರ ಸಹಾಯಕ ನಿರ್ದೇಶಕ ದಿವಂಗತ ಅರಕಲಗೂಡು ನಂಜುಂಡ’ ಎಂದಿದ್ದಾರೆ ಜಗ್ಗೇಶ್. ‘ನಂತರ ಕೆ.ವಿ. ಜಯರಾಂ ಅವರ ಕೃಪೆಯಿಂದ ಅವರ ‘ಇಬ್ಬನಿ ಕರಗಿತು’ ಸಿನಿಮಾದಲ್ಲಿ ಮುಂದುವರಿದು, 1984ರಲ್ಲಿ ‘ಶ್ವೇತ ಗುಲಾಬಿ’ ಚಿತ್ರದ ಅವಕಾಶ ಸಿಕ್ಕು ನಂತರ ಪರಿಮಳ ನಾನು ಮದುವೆಯಾಗಿ ಸ್ಟೇಷನ್ ಸುಪ್ರೀಮ್ ಕೋರ್ಟು ಅವಾಂತರ ಮುಗಿಸಿ ನಂತರ ಹಿಂದೆ ನೋಡದೇ ರಾಯರ ಕೃಪೆಯಿಂದ ಅಂದಿನ ಕನ್ನಡ ಪ್ರೇಕ್ಷಕರ ಪ್ರೀತಿ ಚಪ್ಪಾಳೆಯಿಂದ ವಿವಿಧ ಪಾತ್ರ ಮಾಡುತ್ತ ಬೆಳೆದುನಿಂತೆ’ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

‘ಇಂದಿಗೆ ನನ್ನ ಸಿನಿಮಾ ಪ್ರಯಾಣಕ್ಕೆ 45 ವರ್ಷ ಆಯುಷ್ಯ. ನಡೆದು ಬಂದ ದಾರಿ ನೆನಪಿನ ಬುತ್ತಿ. ಮುಂದೆಯೂ ನಿಮ್ಮ ಪ್ರೀತಿ ನನ್ನ ಮೇಲಿರಲಿ ಹಾಗೂ ನನ್ನಂತೆ ಮುಂದೆ ಚಿತ್ರರಂಗಕ್ಕೆ ಬರುವ ಹೊಸ ಕಲಾವಿದರ ಹರಸಿ ಬೆಳೆಸಿ. ಶುಭಸಂಜೆ’ ಎಂದು ಜಗ್ಗೇಶ್ ಅವರು ಪೋಸ್ಟ್ ಮಾಡಿದ್ದಾರೆ. ಚಿತ್ರರಂಗದಲ್ಲಿ ಖ್ಯಾತಿ ಪಡೆದ ಅವರು ರಾಜಕೀಯದಲ್ಲೂ ಯಶಸ್ಸು ಕಂಡಿದ್ದಾರೆ.

The post ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ ಜಗ್ಗೇಶ್ appeared first on Good News 24x7.

]]>
ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ https://www.goodnews24x7.com/gaddappa-nina-of-thithi-movie-fame/ Wed, 12 Nov 2025 08:24:43 +0000 https://www.goodnews24x7.com/?p=8135 ಗಡ್ಡಪ್ಪ ಚನ್ನೇ ಗೌಡ ನಿ*ನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು…

The post ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ appeared first on Good News 24x7.

]]>

ಗಡ್ಡಪ್ಪ ಚನ್ನೇ ಗೌಡ ನಿ*ನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು. ಸರಿಯಾಗಿ 10 ವರ್ಷಗಳ ಹಿಂದೆ ತೆರೆಗೆ ಬಂದು ಸೂಪರ್ ಹಿಟ್ ಆಗಿದ್ದ ಸಿನಿಮಾ ಎಂದರೆ ಅದು ‘ತಿಥಿ’. 2015ರಲ್ಲಿ ತೆರೆಗೆ ಬಂದ ಈ ಚಿತ್ರ ಮೆಚ್ಚುಗೆ ಪಡೆಯಿತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು. ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ‘ತಿಥಿ’ ಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಗಡ್ಡಪ್ಪ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಪಾಂಡವಪುರಕ್ಕೆ ಹೋಗುವ ರಸ್ತೆಯಲ್ಲಿ ಈ ಊರು ಸಿಗುತ್ತದೆ. ಅವರು ‘ತಿಥಿ’ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು. ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು. ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು.

 

‘ಗಡ್ಡಪ್ಪ’ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಜವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ.

The post ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ appeared first on Good News 24x7.

]]>
‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್ https://www.goodnews24x7.com/su-phram-so-o%e1%b9%adi%e1%b9%adige-bandaru-thiye%e1%b9%adarnalli-nintilla-kalek%e1%b9%a3an-rajbshettymoviesottsufromsopopularityjptuminadfilm-raj-bi-se%e1%b9%ad%e1%b9%adi-ni/ Wed, 10 Sep 2025 06:03:28 +0000 https://www.goodnews24x7.com/?p=7444 ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಾಮ್ ಸೋ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ನಂತರವೂ ಥಿಯೇಟರ್‌ಗಳಲ್ಲಿ ಉತ್ತಮ ಪ್ರದರ್ಶನ ಕಂಡಿತು. 46 ದಿನಗಳ ಯಶಸ್ವಿ ಪ್ರದರ್ಶನದ ನಂತರ ಒಟಿಟಿಗೆ ಬಿಡುಗಡೆಯಾದರೂ, ಸಿನಿಮಾ ಉತ್ತಮ ಗಳಿಕೆ ಮಾಡುತ್ತಲೇ ಇದೆ. ಇದು ಸಿನಿಮಾದ ಜನಪ್ರಿಯತೆ…

The post ‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್ appeared first on Good News 24x7.

]]>

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಾಮ್ ಸೋ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ನಂತರವೂ ಥಿಯೇಟರ್‌ಗಳಲ್ಲಿ ಉತ್ತಮ ಪ್ರದರ್ಶನ ಕಂಡಿತು. 46 ದಿನಗಳ ಯಶಸ್ವಿ ಪ್ರದರ್ಶನದ ನಂತರ ಒಟಿಟಿಗೆ ಬಿಡುಗಡೆಯಾದರೂ, ಸಿನಿಮಾ ಉತ್ತಮ ಗಳಿಕೆ ಮಾಡುತ್ತಲೇ ಇದೆ. ಇದು ಸಿನಿಮಾದ ಜನಪ್ರಿಯತೆ ಮತ್ತು ಪ್ರೇಕ್ಷಕರ ಆಸಕ್ತಿಯನ್ನು ತೋರಿಸುತ್ತದೆ.

ಕೆಲವು ಸಿನಿಮಾಗಳು ಒಟಿಟಿಗೆ ಬರೋ ಮೊದಲೇ ಥಿಯೇಟರ್​ನಿಂದ ಕಾಲ್ಕಿತ್ತಿರುತ್ತವೆ. ಕಲೆಕ್ಷನ್ ಕೂಡ ಸಂಪೂರ್ಣವಾಗಿ ನಿಂತು ಹೋಗಿರುತ್ತದೆ. ಆದರೆ, ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ (Su From So) ಇದಕ್ಕೆ ಭಿನ್ನ. ಈ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದಾಗ್ಯೂ ಚಿತ್ರ ಥಿಯೇಟರ್​​ನಲ್ಲಿ ಕಲೆಕ್ಷನ್ ಮಾಡೋದನ್ನು ಮುಂದುವರಿಸಿದೆ. ಇದು ಅನೇಕರಿಗೆ ಅಚ್ಚರಿ ತಂದಿದೆ. ಇದು ಸಿನಿಮಾದ ಜನಪ್ರಿಯತೆಯನ್ನು ಸೂಚಿಸುತ್ತದೆ. ‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಸುಮಾರು 46 ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರದಲ್ಲಿ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಸಿನಿಮಾ ಒಂದೇ ದಿನ 6 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಉದಾಹರಣೆ ಇದೆ. ಈಗ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದರೆ, ಸಿನಿಮಾದ ಕಲೆಕ್ಷನ್ ಮಾತ್ರ ತಗ್ಗಿಲ್ಲ.

 

‘ಸು ಫ್ರಮ್ ಸೋ’ ಸಿನಿಮಾ ಸೆಪ್ಟೆಂಬರ್ 9ರಂದು 5 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟಿಟಿಗೆ ಬಂದ ಹೊರತಾಗಿಯೂ ಥಿಯೇಟರ್​ನಲ್ಲಿ ಸಾಕಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರದ ಹೆಚ್ಚುಗಾರಿಕೆ. ಅನೇಕರಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟ ವಿಚಾರ ತಿಳಿದಿಲ್ಲದೇ ಇರಬಹುದು. ಹೀಗಾಗಿ, ದುಡ್ಡು ಕೊಟ್ಟು ಥಿಯೇಟರ್​ನಲ್ಲಿ ಸಿನಿಮಾ ವೀಕ್ಷಿಸುತ್ತಿದ್ದಾರೆ. ‘ಸು ಫ್ರಮ್ ಸೋ’ ಸಿನಿಮಾಗೆ ರಾಜ್​ ಬಿ ಶೆಟ್ಟಿ ನಿರ್ಮಾಣ ಇದೆ. ಈ ಸಿನಿಮಾದಿಂದ ಅವರು ದೊಡ್ಡ ಮಟ್ಟದಲ್ಲಿ ಲಾಭ ಕಂಡಿದ್ದಾರೆ. ಈ ಚಿತ್ರ ವಿಶ್ವ ಮಟ್ಟದಲ್ಲಿ 122.34 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಸಿನಿಮಾದ ಅಂತಿಮ ಕಲೆಕ್ಷನ್ ಎಂದೇ ಹೇಳಬಹುದು. ಈ ಚಿತ್ರದ ಭಾರತದಲ್ಲಿ 107.34 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಚಿತ್ರಕ್ಕೆ ವಿದೇಶದಿಂದ 15 ಕೋಟಿ ರೂಪಾಯಿ ಹರಿದು ಬಂದಿದೆ. ‘ಸು ಫ್ರಮ್ ಸೋ’ ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡುವುದರ ಜೊತೆಗೆ ನಟನೆಯನ್ನೂ ಮಾಡಿದ್ದಾರೆ. ಈ ಸಿನಿಮಾಗೆ ಜೆಪಿ ತುಮಿನಾಡ್ ನಿರ್ದೇಶನ ಇದೆ. ಈ ಚಿತ್ರದಲ್ಲಿ ಹಲವು ಸ್ಥಳೀಯ ಕಲಾವಿದರು ನಟಿಸಿದ್ದಾರೆ.

The post ‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್ appeared first on Good News 24x7.

]]>