MP Prajwal Revanna Archives - Good News 24x7 https://www.goodnews24x7.com/tag/mp-prajwal-revanna/ Kannada Sat, 28 Jun 2025 12:09:29 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg MP Prajwal Revanna Archives - Good News 24x7 https://www.goodnews24x7.com/tag/mp-prajwal-revanna/ 32 32 ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ….!!!! https://www.goodnews24x7.com/%e0%b2%aa%e0%b3%8d%e0%b2%b0%e0%b2%9c%e0%b3%8d%e0%b2%b5%e0%b2%b2%e0%b3%8d-%e0%b2%b0%e0%b3%87%e0%b2%b5%e0%b2%a3%e0%b3%8d%e0%b2%a3-%e0%b2%9c%e0%b2%be%e0%b2%ae%e0%b3%80%e0%b2%a8%e0%b3%81-%e0%b2%95/ Sat, 28 Jun 2025 12:09:29 +0000 https://www.goodnews24x7.com/?p=4766 ಮನೆಗೆಲಸದಾಕೆ ಮೇಲಿನ ಅ*ಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಮೊದಲು ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸದೆ ನೇರವಾಗಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿದೆ. ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ…

The post ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ….!!!! appeared first on Good News 24x7.

]]>

ಮನೆಗೆಲಸದಾಕೆ ಮೇಲಿನ ಅ*ಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಮೊದಲು ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸದೆ ನೇರವಾಗಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿದೆ. ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ ವಿಚಾರಣೆ ಯನ್ನು ಜು.2ಕ್ಕೆ ಮುಂದೂಡಿತು. ಪ್ರಾಸಿಕ್ಯೂಷನ್ ಪರ ವಾದಿಸಿದ ಎಸ್ಪಿಪಿ ರವಿವರ್ಮ ಕುಮಾರ್, “ಅರ್ಜಿದಾರರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ವಜಾಗೊಳಿಸಿತ್ತು.

ಸುಪ್ರೀಂಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ. ಈಗ ಬದಲಾದ ಪರಿಸ್ಥಿತಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಮೊದಲು ಅವರು ಸೆಷನ್ಸ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ನಂತರವಷ್ಟೇ ಹೈಕೋರ್ಟ್ ಮೊರೆ ಹೋಗಬಹುದೇ ಹೊರತು ಪ್ರಕ್ರಿಯೆ ಉಲ್ಲಂಘಿಸಿ ನೇರವಾಗಿ ಹೈಕೋರ್ಟ್ನ ನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ,” ಎಂದರು. ಅರ್ಜಿದಾರರ ಪರ ವಕೀಲರು “ಹೊಳೆನರಸೀಪುರ ಪ್ರಕರಣದಲ್ಲಿ ಸಾಕ್ಷ್ಯ ವಿಚಾರಣೆಯೇ ಆರಂಭವಾಗಿಲ್ಲ. ವಿಚಾರಣೆಯೇ ಆರಂಭವಾಗದೆ ಜೈಲಿನಲ್ಲಿ ಕಳೆಯುವಂತಾಗಿದೆ. ಈ ಪ್ರಕರಣದಲ್ಲಿ 150 ಸಾಕ್ಷಿಗಳ ವಿಚಾರಣೆಯಾಗಬೇಕಿದೆ. ಸದ್ಯಕ್ಕೆ ವಿಚಾರಣೆ ಮುಗಿಯುವ ಸಾಧ್ಯತೆ ಇಲ್ಲದಿರುವುದರಿಂದ ಜಾಮೀನು ನೀಡಬೇಕು. ಈ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ಪೊಲೀಸ್ ವಶಕ್ಕೂ ತೆಗೆದುಕೊಂಡಿಲ್ಲ. ಹಾಗಾಗಿ, ಷರತ್ತು ವಿಧಿಸಿ ಜಾಮೀನು ನೀಡಬೇಕು,” ಎಂದು ಮನವಿ ಮಾಡಿದರು.

The post ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ….!!!! appeared first on Good News 24x7.

]]>
ಜೈಲಿನಲ್ಲಿರುವ ಮಾಜಿ MP ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಿಂದ ಮತ್ತೊಂದು ಶಾಕ್! https://www.goodnews24x7.com/%e0%b2%9c%e0%b3%88%e0%b2%b2%e0%b2%bf%e0%b2%a8%e0%b2%b2%e0%b3%8d%e0%b2%b2%e0%b2%bf%e0%b2%b0%e0%b3%81%e0%b2%b5-%e0%b2%ae%e0%b2%be%e0%b2%9c%e0%b2%bf-mp-%e0%b2%aa%e0%b3%8d%e0%b2%b0%e0%b2%9c%e0%b3%8d/ Thu, 03 Apr 2025 12:20:44 +0000 https://www.goodnews24x7.com/?p=3019 ಬೆಂಗಳೂರು :- ಅ*ಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದೆ. ಅ*ಚಾರ ಪ್ರಕರಣದಿಂದ ಕೈಬಿಡುವಂತೆಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

The post ಜೈಲಿನಲ್ಲಿರುವ ಮಾಜಿ MP ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಿಂದ ಮತ್ತೊಂದು ಶಾಕ್! appeared first on Good News 24x7.

]]>

ಬೆಂಗಳೂರು :- ಅ*ಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದೆ. ಅ*ಚಾರ ಪ್ರಕರಣದಿಂದ ಕೈಬಿಡುವಂತೆಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋವಜಾಗೊಳಿಸಿ ಆದೇಶ ಹೊರಡಿಸಿದೆ. ಇನ್ನು ಅ*ಚಾರಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೇ ಪ್ರಜ್ವಲ್ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿತ್ತು.
ಅ*ಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಈ ನಾಲ್ಕು ಪ್ರಕರಣದ ಜಾಮೀನು ಅರ್ಜಿಗಳು ಸಹ ವಜಾಗೊಂಡಿವೆ. ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್ನಲ್ಲಿ ಕಸರತ್ತು ನಡೆಸಿದ್ದರು.
ಪ್ರಕರಣದ ಹಿನ್ನೆಲೆ
ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್ಗಳು ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ವಿಶೇಷ ತನಿಖಾ ದಳದ ತನಿಖೆಗೆ ವಹಿಸಲಾಗಿದ್ದು, ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ಗಳನ್ನು ಹಾಸನದಲ್ಲಿ ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಕೆಲ ಅಶ್ಲೀಲ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇನ್ನು ಈ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ನಲ್ಲಿ ಜಾಮೀನು ರದ್ದಾಗಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

The post ಜೈಲಿನಲ್ಲಿರುವ ಮಾಜಿ MP ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಿಂದ ಮತ್ತೊಂದು ಶಾಕ್! appeared first on Good News 24x7.

]]>