Mysore Archives - Good News 24x7 https://www.goodnews24x7.com/tag/mysore/ Kannada Tue, 17 Feb 2026 12:59:32 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Mysore Archives - Good News 24x7 https://www.goodnews24x7.com/tag/mysore/ 32 32 ಕೋಲಾರದ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ. https://www.goodnews24x7.com/prime-minister-modi-inaugurates-private-mini-helicopter-assembly-plant-in-kolar/ Tue, 17 Feb 2026 12:59:30 +0000 https://www.goodnews24x7.com/?p=8379 ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ​​ ಉದ್ಘಾಟಿಸಿದ್ದಾರೆ. ಭಾರತದ ಮೊದಲ…

The post ಕೋಲಾರದ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ. appeared first on Good News 24x7.

]]>

ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ​​ ಉದ್ಘಾಟಿಸಿದ್ದಾರೆ. ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ ಇದಾಗಿದ್ದು, 2027ರಲ್ಲಿ ಮೊದಲ ಹೆಲಿಕಾಪ್ಟರ್ ಇಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದೆ. ಕೋಲಾರ ತಾಲೂಕಿನ ವೇಮಗಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್​​ ಸಿಂಗ್​, ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೋಲಾರ ಕ್ಷೇತ್ರದ ಸಂಸದ ಮಲ್ಲೇಶ್ ಬಾಬು ಸೇರಿ ಮತ್ತಿತರರು ಉಪಸ್ಥಿತರಿದ್ದರು.


ಸುಮಾರು 16 ಎಕರೆ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗಿದೆ. ವರ್ಷಕ್ಕೆ H125 ಮಾದರಿಯ ಹತ್ತು ಹೆಲಿಕಾಪ್ಟರ್‌ಗಳನ್ನು ಮೊದಲ ಹಂತದಲ್ಲಿ ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. ರಕ್ಷಣಾ ಇಲಾಖೆಗೆ ಸೇರಿದ ಹೆಲಿಕಾಪ್ಟರ್​​ಗಳು ಇಲ್ಲಿ ತಯಾರಾಗಲಿದ್ದು, ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಪ್ಲ್ಯಾನ್​​ ಸಿದ್ಧವಾಗಿರುವ ಮಾಹಿತಿ ಇದೆ.

 

The post ಕೋಲಾರದ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ. appeared first on Good News 24x7.

]]>
ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ ವೈರಲ್ ! https://www.goodnews24x7.com/vijay-deverakonda-rashmika-wedding-card-viral/ Mon, 16 Feb 2026 13:07:31 +0000 https://www.goodnews24x7.com/?p=8368 ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ…

The post ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ ವೈರಲ್ ! appeared first on Good News 24x7.

]]>

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ವಿವಾಹವಾಗಲಿದ್ದಾರೆ . ಈ ವಿಷಯ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ಮದುವೆಗೆ ಅತಿಥಿಗಳನ್ನು ಆಹ್ವಾನಿಸುತ್ತಿದ್ದಾರೆ. ಈ ರೀತಿ ಆಹ್ವಾನ ನೀಡಿದವರ ಪೈಕಿ ಒಬ್ಬರು ಮದುವೆ ಆಮಂತ್ರಣ ಪತ್ರವನ್ನು ವೈರಲ್ ಮಾಡಿದ್ದಾರೆ. ವಿವಾಹ ಆಮಂತ್ರಣ ಬಾಕ್ಸ್ ಅಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಎಂದು ಬರೆದಿದೆ. ಆಮಂತ್ರಣ ಪತ್ರದಲ್ಲಿ ಮದುವೆ ಫೆಬ್ರವರಿ 26ರಂದು ನಡೆಯಲಿದೆ ಎಂದು ಬರೆಯಲಾಗಿದೆ. ಹೈದರಾಬಾದ್​ ಅಲ್ಲಿರುವ ವಿಜಯ್ ಅಭಿಮಾನಿಗಳಿಗೋಸ್ಕರ ವಿಶೇಷ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.


ಹೌದು, ಮಾರ್ಚ್ 4ರಂದು ಹೈದರಾಬಾದ್​​ನ ತಾಜ್ ಕೃಷ್ಣಾದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಕೆಲವು ಸಮಯದಿಂದ ಪ್ರೀತಿಸುತ್ತಿದ್ದ ವಿಜಯ್ ಮತ್ತು ರಶ್ಮಿಕಾ ಈಗ ಮದುವೆಯಾಗುತ್ತಿದ್ದಾರೆ. ಅವರ ವಿವಾಹದ ಸುದ್ದಿ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡಿತ್ತು. ಇತ್ತೀಚೆಗೆ, ಅವರಿಬ್ಬರ ನಿಶ್ಚಿತಾರ್ಥ ನಡೆದಿದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಈ ವಿಷಯದಲ್ಲಿ ಇಲ್ಲಿಯವರೆಗೆ ಯಾವುದೇ ಅಧಿಕೃತ ಘೋಷಣೆ ಬಂದಿರಲಿಲ್ಲ. ಈಗ ಅವರ ಆಮಂತ್ರಣ ಪತ್ರದಿಂದ ಎಲ್ಲವೂ ಅಧಿಕೃತವಾಗಿದೆ.

The post ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ ವೈರಲ್ ! appeared first on Good News 24x7.

]]>
ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ನಿಧನ ! https://www.goodnews24x7.com/mysores-famous-wrestler-tiger-balaji-passes-away/ Sat, 31 Jan 2026 04:53:19 +0000 https://www.goodnews24x7.com/?p=8338 ಮೈಸೂರು : ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ಜ.30 ರಂದು ನಿಧನರಾಗಿದ್ದಾರೆ. ಅವರ ನಿಧನದಿಂದ ಮೈಸೂರಿನ ಅಖಾಡ ವಲಯ ಹಾಗೂ ಕುಸ್ತಿ ಪ್ರೇಮಿಗಳಲ್ಲಿ ತೀವ್ರ ಶೋಕ ಅಲೆ ಹರಡಿದೆ. ಪಾರಂಪರಿಕ ಮಣ್ಣಿನ ಕುಸ್ತಿಯಲ್ಲಿ ಆದ ಶೈಲಿ, ಬಲಿಷ್ಠ ದೇಹಮರ್ಥ್ಯ ಮತ್ತು…

The post ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ನಿಧನ ! appeared first on Good News 24x7.

]]>

ಮೈಸೂರು : ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ಜ.30 ರಂದು ನಿಧನರಾಗಿದ್ದಾರೆ. ಅವರ ನಿಧನದಿಂದ ಮೈಸೂರಿನ ಅಖಾಡ ವಲಯ ಹಾಗೂ ಕುಸ್ತಿ ಪ್ರೇಮಿಗಳಲ್ಲಿ ತೀವ್ರ ಶೋಕ ಅಲೆ ಹರಡಿದೆ.
ಪಾರಂಪರಿಕ ಮಣ್ಣಿನ ಕುಸ್ತಿಯಲ್ಲಿ ಆದ ಶೈಲಿ, ಬಲಿಷ್ಠ ದೇಹಮರ್ಥ್ಯ ಮತ್ತು ಆಕ್ರಮಣಕಾರಿ ಆಟ ಗುರುತಿಸಲ್ಪಟ್ಟ ಟೈಗರ್ ಬಾಲಾಜಿ, ಅನೇಕ ಗ್ರಾಮೀಣ ಹಾಗೂ ರಾಜ್ಯಮಟ್ಟದ ಕುಸ್ತಿ ವೇದಿಕೆಗಳಲ್ಲಿ ಮೈಸೂರಿನ ಹೆಸರನ್ನು ಎತ್ತಿ ಹಿಡಿದಿದ್ದರು. ಅಖಾಡದ ಶಿಸ್ತು, ಕ್ರೀಡಾಸ್ಫೂರ್ತಿ ಮತ್ತು ಮಾನವೀಯ ಮೌಲ್ಯಗಳನ್ನು ಅವರು ತಮ್ಮ ಬದುಕಿನ ಮೂಲಕ ಸಾರಿದ್ದರು.

ಯುವ ಕುಸ್ತಿಪಟುಗಳಿಗೆ ಪ್ರೇರಣೆಯಾಗಿ ನಿಂತಿದ್ದ ಅವರು, ಅಖಾಡ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅವರ ಅಗಲಿಕೆಗೆ ಕುಸ್ತಿ ಸಮುದಾಯ, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.

ಟೈಗರ್ ಬಾಲಾಜಿ ಅವರ ಅಂತ್ಯಕ್ರಿಯೆಯ ವಿವರಗಳನ್ನು ಕುಟುಂಬಸ್ಥರು ನಂತರ ಪ್ರಕಟಿಸಲಾಗುವುದು. ಮೈಸೂರಿನ ಪ್ರಸಿದ್ಧ ಕುಸ್ತಿಪಟು ಟೈಗರ್ ಬಾಲಾಜಿ ಜ.30 ರಂದು ನಿಧನರಾದರು. ಅವರ ನಿಧನವು ಮೈಸೂರು ಕುಸ್ತಿ ಸಮುದಾಯ ಮತ್ತು ಕುಸ್ತಿ ಪ್ರಿಯರಲ್ಲಿ ದುಃಖದ ಅಲೆಯನ್ನು ಮೂಡಿಸಿದೆ.

ಸಾಂಪ್ರದಾಯಿಕ ಮಣ್ಣಿನ ಕುಸ್ತಿಯಲ್ಲಿ ವಿಶಿಷ್ಟ ಶೈಲಿ, ಬಲಿಷ್ಠ ಮೈಕಟ್ಟು ಮತ್ತು ಆಕ್ರಮಣಕಾರಿ ಆಟಕ್ಕೆ ಹೆಸರುವಾಸಿಯಾಗಿದ್ದ ಟೈಗರ್ ಬಾಲಾಜಿ, ಅನೇಕ ಗ್ರಾಮೀಣ ಮತ್ತು ರಾಜ್ಯ ಮಟ್ಟದ ಕುಸ್ತಿ ವೇದಿಕೆಗಳಲ್ಲಿ ಮೈಸೂರಿನ ಹೆಸರನ್ನು ಎತ್ತಿಹಿಡಿದ್ದರು. ಅವರು ತಮ್ಮ ಜೀವನದುದ್ದಕ್ಕೂ ಕ್ರೀಡಾಂಗಣದ ಶಿಸ್ತು, ಕ್ರೀಡಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಬೋಧಿಸಿದ್ದಾರೆ.

The post ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ನಿಧನ ! appeared first on Good News 24x7.

]]>
ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ? https://www.goodnews24x7.com/is-mysore-central-jail-also-providing-royal-hospitality-to-prisoners/ Tue, 11 Nov 2025 07:54:46 +0000 https://www.goodnews24x7.com/?p=8114 ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ವೈರಲ್​ ಬೆನ್ನಲ್ಲೇ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ಮದ್ಯ, ಮಾಂಸ, ಮೊಬೈಲ್ ಫೋನ್‌ಗಳಂತಹ ದುಬಾರಿ ಸೌಲಭ್ಯಗಳು ಲಭ್ಯವಾಗುತ್ತಿರುವ ಬಗ್ಗೆ ವರದಿಯಾಗಿದೆ. ಜೈಲುಗಳು ಸುಧಾರಣಾ ಕೇಂದ್ರಗಳ ಬದಲಿಗೆ ಮೋಜಿನ ತಾಣಗಳಾಗಿ ಮಾರ್ಪಟ್ಟಿದ್ದು, ರಾಜ್ಯದ ಕಾರಾಗೃಹ…

The post ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ? appeared first on Good News 24x7.

]]>

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ವೈರಲ್​ ಬೆನ್ನಲ್ಲೇ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ಮದ್ಯ, ಮಾಂಸ, ಮೊಬೈಲ್ ಫೋನ್‌ಗಳಂತಹ ದುಬಾರಿ ಸೌಲಭ್ಯಗಳು ಲಭ್ಯವಾಗುತ್ತಿರುವ ಬಗ್ಗೆ ವರದಿಯಾಗಿದೆ. ಜೈಲುಗಳು ಸುಧಾರಣಾ ಕೇಂದ್ರಗಳ ಬದಲಿಗೆ ಮೋಜಿನ ತಾಣಗಳಾಗಿ ಮಾರ್ಪಟ್ಟಿದ್ದು, ರಾಜ್ಯದ ಕಾರಾಗೃಹ ವ್ಯವಸ್ಥೆಯಲ್ಲಿನ ಲೋಪಗಳನ್ನು ಇದು ಎತ್ತಿ ತೋರಿಸುತ್ತಿದೆ.

ಮೈಸೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್​ ಆಗಿದ್ದು, ಉಗ್ರ ಮತ್ತು ಅತ್ಯಾಚಾರಿಗಳೂ ಮೊಬೈಲ್​ ಬಳಸುತ್ತಿದ್ದ ಕ್ಲಿಪ್​ಗಳು ಹೊರ ಬಂದಿದ್ದವು. ಆ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಸರ್ಕಾರ ಘಟನೆ ಸಂಬಂಧ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಿ, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಿತ್ತು. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿಯೂ ಕೈದಿಗಳಿಗೆ ಸಕಲ ಸೌಕರ್ಯ ಸಿಗುತ್ತಿರುವ ಬಗ್ಗೆ ವರದಿಯಾಗಿದೆ.

ಮೈಸೂರು ಕೇಂದ್ರ ಕಾರಾಗ್ರಹದಲ್ಲಿ ಕೆಲ ಕೈದಿಗಳಿಗೆ ಬೇಕಾದ ಸೌಲಭ್ಯ ಒದಗಿಸಲಾಗುತ್ತಿದ್ದು, ಮದ್ಯ, ಮಾಂಸಾಹಾರ, ಸಿಗರೇಟುಗಳು ಮತ್ತು ಬೀಡಿ, ಮೊಬೈಲ್ ಫೋನ್​ಗಳು ನಿರ್ದಿಷ್ಟ ಬೆಲೆಗೆ ಲಭ್ಯವಾಗುತ್ತಿವೆ. ಆ ಮೂಲಕ ಕೈದಿಗಳ ಮನಃಪರಿವರ್ತನಾ ಕೇಂದ್ರಗಳಾಗಬೇಕಿದ್ದ ಜೈಲು, ಮೋಜಿನ ಸ್ಥಳವಾಗಿ ಮಾರ್ಪಟ್ಟಿದೆ. ಕಾರಾಗೃಹದ ಒಳಭಾಗದಲ್ಲಿ ಪ್ರತಿ ವಸ್ತುವಿಗೂ ನಿಗದಿತ ಬೆಲೆ ಇದ್ದು, ಮಾರುಕಟ್ಟೆಯಲ್ಲಿ ದರ ಬದಲಾದರೂ ಇಲ್ಲಿ ಯಾವುದೇ ಏರಿಳಿತ ಆಗಲ್ಲ. ಒಂದು ವಸ್ತುವಿನ ಕನಿಷ್ಟ ಬೆಲೆಯೇ 150 ರೂ. ಇದೆ. ಇಷ್ಟು ಹಣ ಕೊಟ್ಟು ಖರೀದಿಸುವ ಸಾಮರ್ಥ್ಯ ಇರುವವರಿಗಾಗಿ ಪ್ರತಿ ವಾರ ಮದ್ಯ ಮತ್ತು ಮಾಂಸವನ್ನು ಆರ್ಡರ್​ ಮಾಡಲಾಗುತ್ತೆ ಎಂಬ ಬಗ್ಗೆ ಜೈಲ್ ವಿಸಿಟಿಂಗ್ ಬೋರ್ಡಿನ ಸದಸ್ಯ ಪವನ ಸಿದ್ದರಾಮು ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಕೈದಿಗಳಿಗೆ ಐಷಾರಾಮಿ ಜೀವನಕ್ಕೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಕ್ಯಾಂಟೀನ್​ ಆಪರೇಟರ್​​ಗಳು ಮತ್ತು ಕೆಲ ಕರ್ನಾಟಕ ಸ್ಟೇಟ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಸಿಬ್ಬಂದಿ ಪಾತ್ರ ವಹಿಸಿದ್ದಾರೆ. ಇವು ಜೈಲು ಅಧೀಕ್ಷಕರ ಮೂಗಿನ ಕೆಳಗೆಯೇ ನಡೆಯುತ್ತಿರುವ ಘಟನೆಗಳಾಗಿವೆ. ಮೈಸೂರು ಪೊಲೀಸರು ಸರ್ಪ್ರೈಸ್​ ವಿಸಿಟ್​ಗಳನ್ನು ನಡೆಸಿದರೂ ಅಲ್ಲಿ ಏನು ಸಿಗದಿರುವುದು ವಿಪರ್ಯಾಸ. ಸರಿಯಾಗಿ ದಾಳಿ ನಡೆಸಿದರೆ ಪ್ರತಿಬಾರಿಯೂ ನೂರಾರು ಸಿಮ್ ಕಾರ್ಡ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಬಹುದು. ಮೈಸೂರು ಕೇಂದ್ರ ಕಾರಾಗೃಹದ ಪ್ರಸ್ತುತ ಮುಖ್ಯ ಸೂಪರ್‌ಟೆಂಡೆಂಟ್ ಹಿಂದೆ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲಸ ಮಾಡಿದ್ದರು. ಈಗ ಅಲ್ಲಿಂದ ದೇಶಾದ್ಯಂತ ಸುದ್ದಿಯಾಗುವ ರೀತಿಯ ವಿಡಿಯೋಗಳು ಹೊರ ಬಂದಿವೆ. ಆ ಮೂಲಕ ನಾವು ಕಾರಾಗೃಹಗಳಲ್ಲಿ ಪ್ಯಾರಲೆಲ್ ಮಾಫಿಯಾ ನೆಟ್‌ವರ್ಕ್ ನಿರ್ಮಿಸುತ್ತಿದ್ದೇವೆ ಎಂದು ಪವನ ಸಿದ್ದರಾಮು ತಿಳಿಸಿದ್ದಾರೆ ಎಂದು ವರದಿಯಾಗಿದೆ.

The post ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ? appeared first on Good News 24x7.

]]>
ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ. https://www.goodnews24x7.com/government-gives-in-to-farmers-struggle-decides-to-give-rs-3300/ Sat, 08 Nov 2025 04:32:52 +0000 https://www.goodnews24x7.com/?p=8066 ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ 3,300 ರೂ ನೀಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರೈತರು ಮತ್ತು ಕಾರ್ಖಾನೆ…

The post ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ. appeared first on Good News 24x7.

]]>

ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ 3,300 ರೂ ನೀಡಲು ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರೈತರು ಮತ್ತು ಕಾರ್ಖಾನೆ ಮಾಲೀಕರ ಜೊತೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ದರ ನಿಗದಿ ಮಾಡಲು ನಿರ್ಧರಿಸಿದೆ. ಸರ್ಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ನೀಡಲಾಗುವುದು. ಈ ಮೂಲಕ ಒಟ್ಟು 3300 ರೂಪಾಯಿ ನೀಡಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬೆಳಗಾವಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ನಿರಂತರ ಸಭೆ ನಡೆಸಿದ್ದು ಇದೀಗ ಪ್ರತಿ ಟನ್ ಕಬ್ಬಿಗೆ 3300 ರೂ ನಿಗದಿಪಡಿಸಿದ್ದಾರೆ.

The post ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ. appeared first on Good News 24x7.

]]>
ಬಂಡೀಪುರ – ನಾಗರಹೊಳೆ ಸಫಾರಿ ಬಂದ್ ! ರಾಷ್ಟ್ರೀಯ ಉದ್ಯಾನವನದ ಸಿ ಎಫ್ ಪ್ರಭಾಕರನ್ ಎತ್ತಂಗಡಿ. https://www.goodnews24x7.com/bandipur-nagarhole-safari-bandh-cf-prabhakaran-of-the-national-park-is-on-the-run/ Fri, 07 Nov 2025 13:48:40 +0000 https://www.goodnews24x7.com/?p=8061 ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಸರಗೂರು ತಾಲೂಕಿನ ಗಡಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನರಭಕ್ಷಕ ವ್ಯಾಘ್ರಗಳು ನಾಲ್ಕು ಜನರ ಮೇಲೆ ದಾಳಿ ಮಾಡಿ ಮೂವರು ಮೃತಪಟ್ಟಿದ್ದಾರೆ. ಸರಗೂರು ತಾಲೂಕಿನಲ್ಲಿ ಇಂದು ನಡೆದಿರುವ ಹುಲಿಯ ದಾಳಿಯಿಂದ ಜನರು ರೊಚ್ಚಿಗೆದ್ದಿದ್ದಾರೆ. ಬಂಡಿಪುರ ರಾಷ್ಟ್ರೀಯ…

The post ಬಂಡೀಪುರ – ನಾಗರಹೊಳೆ ಸಫಾರಿ ಬಂದ್ ! ರಾಷ್ಟ್ರೀಯ ಉದ್ಯಾನವನದ ಸಿ ಎಫ್ ಪ್ರಭಾಕರನ್ ಎತ್ತಂಗಡಿ. appeared first on Good News 24x7.

]]>

ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಸರಗೂರು ತಾಲೂಕಿನ ಗಡಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನರಭಕ್ಷಕ ವ್ಯಾಘ್ರಗಳು ನಾಲ್ಕು ಜನರ ಮೇಲೆ ದಾಳಿ ಮಾಡಿ ಮೂವರು ಮೃತಪಟ್ಟಿದ್ದಾರೆ.
ಸರಗೂರು ತಾಲೂಕಿನಲ್ಲಿ ಇಂದು ನಡೆದಿರುವ ಹುಲಿಯ ದಾಳಿಯಿಂದ ಜನರು ರೊಚ್ಚಿಗೆದ್ದಿದ್ದಾರೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಿಎಫ್ ಪ್ರಭಾಕರ್ ಎಂಬುವರನ್ನ ವರ್ಗಾವಣೆಗೊಳಿಸಿ ನೂತನ ಸಿಎಫ್ ಸಂಪತ್ ಕುಮಾರ್ ಎಂಬುವರನ್ನು ನಿಯೋಜನೆ ಮಾಡಿದ್ದಾರೆ.

ಹಳೆ ಹೆಗ್ಗುಡಿಲು ಗ್ರಾಮದ ದಂಡನಾಯಕ ಎಂಬ ರೈತನನ್ನು ಬಲಿ ಪಡೆದ ನರಭಕ್ಷಕ ವ್ಯಾಘ್ರವನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಅಗ್ರಹಿಸಿ ಸಾಕಷ್ಟು ಜನರ ತಂಡ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮುಗಿಬಿದ್ದಿದ್ದಾರೆ ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ. ಮೊಳೆಯೂರು ಮತ್ತು ಸರಗೂರು ಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೃತ ಎಂಬ ಮಹಿಳಾ ಆರ್ ಎಫ್ ಓ ಗೆ ಛೀಮಾರಿ ಹಾಕಿ ವಾಗ್ದಾಳಿ ನಡೆಸಿ ತಳ್ಳಾಟ ನೂಕಾಟ ನಡೆಸಲಾಗಿದೆ. ಹುಲಿಯ ದಾಳಿಯಿಂದ ಮೃತಪಟ್ಟಿರುವ ರೈತ ದಂಡ ನಾಯಕ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದಂಡನಾಯಕನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲು ಗ್ರಾಮಸ್ಥರು ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಗಡಿಭಾಗದ ತಾಲೂಕಾಗಿರುವ ನಂಜನಗೂಡು ಮತ್ತು ಸರಗೂರು ಭಾಗದ ರೈತರು ಆತಂಕದಲ್ಲೇ ದಿನದೊಡುತ್ತಿದ್ದಾರೆ.

ಹುಲಿಗಳ ಸಂತತಿ ಹೆಚ್ಚಾಗಿರುವ ಹಿನ್ನೆಲೆ ಯಾವ ವೇಳೆಯಲ್ಲಿ ಯಾರ ಮೇಲೆ ದಾಳಿ ಮಾಡುತ್ತದೆ? ಯಾರ ಜೀವ ಬಲಿ ತೆಗೆದುಕೊಳ್ಳುತ್ತದೆ ಎಂದು ರೈತರಲ್ಲಿ ಜೀವ ಭಯ ಎದುರಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಎಂದು ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಸಾರ್ವಜನಿಕರು ಮತ್ತು ರೈತರು ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ

The post ಬಂಡೀಪುರ – ನಾಗರಹೊಳೆ ಸಫಾರಿ ಬಂದ್ ! ರಾಷ್ಟ್ರೀಯ ಉದ್ಯಾನವನದ ಸಿ ಎಫ್ ಪ್ರಭಾಕರನ್ ಎತ್ತಂಗಡಿ. appeared first on Good News 24x7.

]]>
ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ. https://www.goodnews24x7.com/minister-m-b-patil-to-visit-mysore-district-on-october-29/ Tue, 28 Oct 2025 11:56:21 +0000 https://www.goodnews24x7.com/?p=7919 ಮೈಸೂರು :- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ…

The post ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ. appeared first on Good News 24x7.

]]>

ಮೈಸೂರು :- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 2 ಗಂಟೆಯ ವರೆಗೆ ಮೈಸೂರಿನ ವಿವಿಧ ಕೈಗಾರಿಕಾ ಘಟಗಳಿಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮೈಸೂರು ವಿವಿಧ Industry Association ಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮೈಸೂರು ಜಿಲ್ಲೆ ವ್ಯಾಪ್ತಿಯ ಕೈಗಾರಿಕಾ ಇಲಾಖೆ ಹಾಗೂ KIADB ವಿಷಯಗಳ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಇತರೆ ಸಂಬoಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

The post ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ. appeared first on Good News 24x7.

]]>
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್… ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ https://www.goodnews24x7.com/mud-special-tahsildar-k-v-rajashekar-suspended-allegedly-issued-purchase-order-illegally/ Tue, 28 Oct 2025 09:35:49 +0000 https://www.goodnews24x7.com/?p=7899 ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಲತಾ ರವರ ಆದೇಶದ ಮೇರೆಗೆ ಮುಡಾ…

The post ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್… ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ appeared first on Good News 24x7.

]]>

ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಲತಾ ರವರ ಆದೇಶದ ಮೇರೆಗೆ ಮುಡಾ ಆಯುಕ್ತರು ಸಸ್ಪೆಂಡ್ ಆರ್ಡರ್ ಹೊರಡಿಸಿದ್ದಾರೆ.ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ರವರು ನೀಡಿದ ದೂರಿನ ಅನ್ವಯದಂತೆ ದಾಖಲೆಗಳನ್ನ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ.

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು…

ಮೈಸೂರಿನ ಗೋಕುಲಂ ಬಡಾವಣೆ 3 ನೇ ಹಂತ ಮನೆ ಸಂಖ್ಯೆ 867 ಕ್ಕೆ 02-04-1982 ರಂದು ಲಿಲಿಯನ್ ಶಾರದಾ ಜೋಸೆಫ್ w/o ಅನ್ನಿ ಜೋಸೆಫ್ ಎಂಬುವರಿಗೆ ಮುಡಾ ದಿಂದ 30*40 ವಿಸ್ತೀರ್ಣ ನಿವೇಶನ ಮಂಜೂರಾಗಿದೆ.ಇದಕ್ಕೆ ಕರಾರು ಪತ್ರ ಸಹ ನೀಡಲಾಗಿದೆ.03-09-1983 ರಲ್ಲಿ ಲಿಲಿಯನ್ ಜೋಸೆಫ್ ಮರಣ ಹೊಂದಿರುತ್ತಾರೆ.06-04-2024 ರ ವರೆಗೂ ಸದರಿ ಸ್ವತ್ತು ಯಾರಿಗೂ ವರ್ಗಾವಣೆ ಆಗಿರುವುದಿಲ್ಲ.ಆದರೆ 26-03-2024 ರಂದು ಕ್ರಮಬದ್ದ ವಾರಸುದಾರರಲ್ಲದವರಿಗೆ ಅಂದರೆ ನೆವಿಲ್ ಮಾರ್ಕಸ್ ಜೋಸೆಫ್ ರವರ ಹೆಸರಿಗೆ ಕ್ರಮಬದ್ದ ವಂಶವೃಕ್ಷ ಪಡೆಯದೆ ಪೌತಿಖಾತೆ ವರ್ಗಾವಣೆ ಮಾಡಿ ಜೊತೆಗೆ ತುಂಡು ಜಾಗವನ್ನೂ ಸಹ ಮಂಜೂರು ಮಾಡಿ ಹಕ್ಕುಪತ್ರ ನೀಡಲಾಗಿದೆ.ಈ ಅಕ್ರಮದ ಬಗ್ಗೆ ಆರ್.ಟಿ.ಐ.ಕಾರ್ಯಕರ್ತರಾದ ಬಿ.ಎನ್.ನಾಗೇಂದ್ರ ರವರು ದಾಖಲೆಗಳನ್ನ ಪಡೆದು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿ ದೂರು ನೀಡಿದ್ದರು.

ಈ ಸಂಬಂಧ ಪರಿಶೀಲನೆ ನಡೆಸಿದಾಗ ಮುಡಾದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಹಾಗೂ ವ್ಯವಸ್ಥಾಪಕ ಸೋಮಸುಂದ್ರು ರವರ ಕೈವಾಡ ಇರುವುದು ಬೆಳಕಿಗೆ ಬಂದಿದೆ.ಮುಡಾದಲ್ಲಿ ಯಾವುದೇ ಕ್ರಯಪತ್ರ ನೀಡುವ ಹಾಗೂ ಅನುಮೋದಿಸುವ ಅಧಿಕಾರ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿ ಆದೇಶವಾಗಿರುತ್ತದೆ.ಆದರೆ ಈ ಇಬ್ಬರು ಅಧಿಕಾರಿಗಳು ಕಾರ್ಯದರ್ಶಿಯವರಿಂದ ಅನುಮೋದನೆ ಪಡೆಯಲು ಕಡತಗಳನ್ನು ಮಂಡಿಸದೆ ಆಯುಕ್ತರ ಆದೇಶ ಮೀರಿ ತಮ್ಮ ಹಂತದಲ್ಲಿಯೇ ತಿದ್ದುಪಡಿ ಕ್ರಯಪತ್ರ ಮಾಡಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.ಈ ಅಕ್ರಮದ ಹಿನ್ನಲೆ ಈಗಾಗಲೇ ವ್ಯವಸ್ಥಾಪಕರಾದ ಸೋಮಸುಂದ್ರ ಅಮಾನತು ಶಿಕ್ಷೆ ಅನುಭವಿಸುತ್ತಿದ್ದಾರೆ.ವಿಶೇಷ ತಹಸೀಲ್ದಾರ್ ವಿರುದ್ದವೂ ಕ್ರಮ ಕೈಗೊಳ್ಳಬೇಕೆಂದು ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಸರ್ಕಾರಕ್ಕೆ ಮಾಡಿದ ಮನವಿಗೆ ಸ್ಪಂದನೆ ದೊರೆತಿದೆ.ಮುಡಾ ಕಾರ್ಯದರ್ಶಿಗಳು ಅಕ್ರಮ ನಡೆದಿರುವುದಾಗಿ ವರದಿಯನ್ನೂ ಸಹ ನೀಡಿದ್ದಾರೆ.

ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಗಳ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತರ ಆದೇಶದಂತೆ ಮುಡಾ (MDA) ಆಯುಕ್ತರು ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಅಮಾನತ್ತಿನಲ್ಲಿ ಇಡುವಂತೆ ಆದೇಶ ಹೊರಡಿಸಿದ್ದಾರೆ…

The post ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್… ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ appeared first on Good News 24x7.

]]>
ಸ್ನಾನಕ್ಕೆ ಗೀಸರ್ ಬಳಸುವಾಗ ಎಚ್ಚರ! ಗ್ಯಾಸ್ ಗೀಸರ್ ಸೋರಿಕೆ, ಉಸಿರುಗಟ್ಟಿ ಅಕ್ಕ-ತಂಗಿ ಸಾ *. https://www.goodnews24x7.com/be-careful-when-using-a-geyser-for-bathing-gas-geyser-leaks-siblings-suffocate/ Sat, 25 Oct 2025 11:29:52 +0000 https://www.goodnews24x7.com/?p=7837 ಮೈಸೂರು :- ಪಿರಿಯಾಪಟ್ಟಣ: ಸ್ನಾನದ ಕೋಣೆಯಲ್ಲಿದ್ದ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ್ದಾರೆ, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ.           ಗ್ಯಾಸ್‌ ಗೀಸರ್‌ನಿಂದ ಕಾರ್ಬನ್ ಮಾನಾಕ್ಸೆಡ್ ಸೋರಿಕೆಯಾಗಿ…

The post ಸ್ನಾನಕ್ಕೆ ಗೀಸರ್ ಬಳಸುವಾಗ ಎಚ್ಚರ! ಗ್ಯಾಸ್ ಗೀಸರ್ ಸೋರಿಕೆ, ಉಸಿರುಗಟ್ಟಿ ಅಕ್ಕ-ತಂಗಿ ಸಾ *. appeared first on Good News 24x7.

]]>

ಮೈಸೂರು :- ಪಿರಿಯಾಪಟ್ಟಣ: ಸ್ನಾನದ ಕೋಣೆಯಲ್ಲಿದ್ದ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ್ದಾರೆ, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ.

 

 

 

 

 

ಗ್ಯಾಸ್‌ ಗೀಸರ್‌ನಿಂದ ಕಾರ್ಬನ್ ಮಾನಾಕ್ಸೆಡ್ ಸೋರಿಕೆಯಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಪಿರಿಯಾಪಟ್ಟಣದ ಕಾವಾಡಗೇರಿಯಲ್ಲಿ ನಡೆದಿರುವ ಘಟನೆ. ಗುಲ್ಬರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ ದುರ್ದೈವಿಗಳು. ಗುಲ್ಬಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನದ ಕೋಣೆಗೆ ಹೋದಾಗ ಘಟನೆ ಸಂಭವಿಸಿದೆ.


ಸ್ನಾನದ ಕೋಣೆಗೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿಲ್ಲ. ಅನುಮಾನಗೊಂಡ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ. ಆಗಲೂ ಬಾಗಿಲು ತೆಗೆದಿಲ್ಲ ತೆರೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿರೋದು ಗೊತ್ತಾಗಿದೆ. ತಕ್ಷಣ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಕೋಣೆಯಲ್ಲಿ ಕಿಟಕಿ ಇರಲಿಲ್ಲ ಎನ್ನಲಾಗಿದೆ, ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

The post ಸ್ನಾನಕ್ಕೆ ಗೀಸರ್ ಬಳಸುವಾಗ ಎಚ್ಚರ! ಗ್ಯಾಸ್ ಗೀಸರ್ ಸೋರಿಕೆ, ಉಸಿರುಗಟ್ಟಿ ಅಕ್ಕ-ತಂಗಿ ಸಾ *. appeared first on Good News 24x7.

]]>
ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು! https://www.goodnews24x7.com/i-am-not-afraid-of-such-threats-kharge-is-not-afraid-either-cm-siddaramaiah-retorts/ Wed, 15 Oct 2025 11:06:49 +0000 https://www.goodnews24x7.com/?p=7721 ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು…

The post ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು! appeared first on Good News 24x7.

]]>

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ಇಂದು ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಆರ್.ಎಸ್.ಎಸ್.ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ.


ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ ಅವರು ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು.

ಬೆದರಿಕೆಗೆ ಹೆದರುವುದಿಲ್ಲ

ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ ಅವರು ಹೆದರುವುದಿಲ್ಲ. ನಾನೂ ಹೆಸದರುವುದಿಲ್ಲ ಎಂದರು.

ಸಮೀಕ್ಷೆ: ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದರು.

ಎಲ್ಲ ಶಾಸಕರಿಗೂ ಅನುದಾನ

ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿ ಜೆಡಿಎಸ್ ನವರು ನಮ್ಮ ಶಾಸಕರಿಗೆ ಅನುದಾನ ನೀಡಿದ್ದರೇ ? ಎಂದು ಪ್ರಶ್ನಿಸಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ ಎಂದರು.ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಬಿಜೆಪಿಯವರು ತಾಕತ್ತಿದ್ದರೆ ಆರ್.ಎಸ್.ಎಸ್. ಮೇಲೆ ನಿಷೇಧ ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ ಸೋತು ಹೋದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

The post ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು! appeared first on Good News 24x7.

]]>