notification Archives - Good News 24x7 https://www.goodnews24x7.com/tag/notification/ Kannada Wed, 30 Apr 2025 05:55:39 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg notification Archives - Good News 24x7 https://www.goodnews24x7.com/tag/notification/ 32 32 ಆಸ್ತಿ ತೆರಿಗೆ ಪಾವತಿದಾರರಿಗೆ ಅಕ್ಷಯ ತೃತೀಯದಂದು ಬಿಬಿಎಂಪಿ ಗುಡ್ ನ್ಯೂಸ್. https://www.goodnews24x7.com/bbmp-good-news-for-property-tax-payers-on-akshaya-tritiya/ Wed, 30 Apr 2025 05:55:39 +0000 https://www.goodnews24x7.com/?p=3472 ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಏಪ್ರಿಲ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ಶೇ.5ರಷ್ಟು ವಿನಾಯಿತಿ ಜೊತೆ ತೆರಿಗೆ ಪಾವತಿ ಅವಧಿವನ್ನು ಮೇ 30ರವರೆಗೆ…

The post ಆಸ್ತಿ ತೆರಿಗೆ ಪಾವತಿದಾರರಿಗೆ ಅಕ್ಷಯ ತೃತೀಯದಂದು ಬಿಬಿಎಂಪಿ ಗುಡ್ ನ್ಯೂಸ್. appeared first on Good News 24x7.

]]>

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಏಪ್ರಿಲ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ಶೇ.5ರಷ್ಟು ವಿನಾಯಿತಿ ಜೊತೆ ತೆರಿಗೆ ಪಾವತಿ ಅವಧಿವನ್ನು ಮೇ 30ರವರೆಗೆ ವಿಸ್ತರಣೆ ಮಾಡಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿ ಆಸ್ತಿ ತೆರಿಗೆ ಪಾವತಿದಾರರಿಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಆದಾಯ ಹೆಚ್ಚಿಸಿಕೊಳ್ಳಲು ಬಿಬಿಎಂಪಿ ಈ ಪ್ಲ್ಯಾನ್ ರೂಪಿಸಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏಪ್ರಿಲ್ 30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿತ್ತು.


ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿದೆ. ಹಾಗಾಗಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.
2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿದೆ. ಆ ಮೂಲಕ ಆದೇಶ ನೀಡಿ ಅಧಿಸೂಚನ ಹೊರಡಿಸಲಾಗಿದೆ.
ಸರ್ಕಾರದ ಆದೇಶ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

The post ಆಸ್ತಿ ತೆರಿಗೆ ಪಾವತಿದಾರರಿಗೆ ಅಕ್ಷಯ ತೃತೀಯದಂದು ಬಿಬಿಎಂಪಿ ಗುಡ್ ನ್ಯೂಸ್. appeared first on Good News 24x7.

]]>