ParappanaAgraharaJail Archives - Good News 24x7 https://www.goodnews24x7.com/tag/parappanaagraharajail/ Kannada Tue, 09 Sep 2025 12:01:13 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg ParappanaAgraharaJail Archives - Good News 24x7 https://www.goodnews24x7.com/tag/parappanaagraharajail/ 32 32 ವಿಷ ಕೊಡಿ ಎಂದ ದರ್ಶನ್​ ಬಿಗ್ ರಿಲೀಫ್ ನೀಡಿದ ಕೋರ್ಟ್ https://www.goodnews24x7.com/court-gives-big-relief-to-darshan-who-asked-to-give-him-poison/ Tue, 09 Sep 2025 12:01:13 +0000 https://www.goodnews24x7.com/?p=7424 ನಟ ದರ್ಶನ್​​ಗೆ ಬೆಂಗಳೂರು ಸೆಷನ್ಸ್ ಕೋರ್ಟ ಬಿಗ್ ರಿಲೀಫ್ ನೀಡಿದೆ. ದರ್ಶನ್​ರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಅಲ್ಲದೆ, ದರ್ಶನ್​ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಇದರೊಂದಿಗೆ ದರ್ಶನ್​ಗೆ ಬಿಗ್ ರಿಲೀಫ್ ದೊರೆತಂತಾಗಿದೆ.…

The post ವಿಷ ಕೊಡಿ ಎಂದ ದರ್ಶನ್​ ಬಿಗ್ ರಿಲೀಫ್ ನೀಡಿದ ಕೋರ್ಟ್ appeared first on Good News 24x7.

]]>

ನಟ ದರ್ಶನ್​​ಗೆ ಬೆಂಗಳೂರು ಸೆಷನ್ಸ್ ಕೋರ್ಟ ಬಿಗ್ ರಿಲೀಫ್ ನೀಡಿದೆ. ದರ್ಶನ್​ರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಅಲ್ಲದೆ, ದರ್ಶನ್​ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಇದರೊಂದಿಗೆ ದರ್ಶನ್​ಗೆ ಬಿಗ್ ರಿಲೀಫ್ ದೊರೆತಂತಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ (Darshan) ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಬಿಗ್ ರಿಲೀಫ್ ದೊರೆತಂತಾಗಿದೆ. A2 ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೊಲೆ ಆರೋಪಿ ದರ್ಶನ್​ಗೆ ಜೈಲಿನ ಆವರಣದಲ್ಲಿ ಓಡಾಡಲು ಅನುಮತಿ ಕೊಟ್ಟಿದೆ.
ದರ್ಶನ್ ಮನವಿಗೆ ಸ್ಪಂದಿಸಿದ ಕೋರ್ಟ್ ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ದರ್ಶನ್ ಮಾಡಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಪುರಸ್ಕರಿಸಿದೆ. ದರ್ಶನ್​ಗೆ ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡಲು ಅನುಮತಿ ನೀಡಿದೆ. ಆದರೆ, ಜೈಲಿನ ಕೈಪಿಡಿ ಅನುಸರಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ. ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ್ದೇ ಆದಲ್ಲಿ ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದೂ ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.

ವಿಷ ಕೊಡಿ ಎಂದಿದ್ದ ದರ್ಶನ್: ತೀರ್ಪಿಗೂ ಮುನ್ನ ವಿಚಾರಣೆ ವೇಳೆ ಜಡ್ಜ್ ಬಳಿ ಮನವಿ ಮಾಡಿದ್ದ ದರ್ಶನ್, ‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ, ನನಗೆ ಮಾತ್ರ ವಿಷ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ಮನವಿ ಮಾಡಿದ್ದರು. ಆಗ ಜಡ್ಜ್ ‘ನೀವು ಹಾಗೆಲ್ಲಾ ಹೇಳುವಂತಿಲ್ಲ’ ಎಂದಿದ್ದರು.

ವಿಷ ಕೊಡಿ ಎಂದಿದ್ದೇಕೆ ದರ್ಶನ್? ಸುಪ್ರೀಂ ಕೋರ್ಟ್​ ಖಡಕ್ ಸೂಚನೆಯ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲಿನಂತೆ ವಿಐಪಿ ಸೌಲಭ್ಯ ಸಿಗುತ್ತಿರಲಿಲ್ಲ. ರಾಜಾತಿಥ್ಯ ಸಿಗುತ್ತಿರಲಿಲ್ಲ. ಜೈಲಿನಲ್ಲಿ ಓರ್ವ ಸಾಮಾನ್ಯ ಖೈದಿಯಂತೆ ಪರಿಗಣಿಸಲಾಗುತ್ತಿತ್ತು. ಜೈಲಿನ ಖೈದಿಗಳ ಕೊಠಡಿಯಿಂದಲೂ ಹೊರಗೆ ಬರಲಾಗುತ್ತಿರಲಿಲ್ಲ. ಇದರಿಂದ ನರಕಯಾತನೆ ಅನುಭವಿಸುತ್ತಿರುವ ದರ್ಶನ್ ವಿಷ ಕೊಡಿ ಎಂದು ಮನವಿ ಮಾಡಿದ್ದರು. ಇದೀಗ ಕೋರ್ಟ್ ಸಹ ದರ್ಶನ್ ಬಗ್ಗೆ ತುಸು ಕನಿಕರ ತೋರಿದ್ದು, ಹಾಸಿಗೆ ದಿಂಬು ಹಾಗೂ ಜೈಲಿನಲ್ಲಿ ಓಡಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್​ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

The post ವಿಷ ಕೊಡಿ ಎಂದ ದರ್ಶನ್​ ಬಿಗ್ ರಿಲೀಫ್ ನೀಡಿದ ಕೋರ್ಟ್ appeared first on Good News 24x7.

]]>
ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು https://www.goodnews24x7.com/dasani-does-not-have-royal-hospitality-in-jail-darshan-is-hesitant-to-provide-bedsheets-and-bedding/ Sat, 06 Sep 2025 07:53:22 +0000 https://www.goodnews24x7.com/?p=7415 ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್​​​ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ…

The post ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು appeared first on Good News 24x7.

]]>

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್​​​ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ನಟ ದರ್ಶನ್​​ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸ್ತಿದ್ದಾರೆ.. ಕೆಲ ದಿನಗಳಲ್ಲೇ ಟ್ರಯಲ್ ಕೋರ್ಟ್​ನಲ್ಲಿ ವಿಚಾರಣೆ ಆರಂಭ ಆಗಲಿದ್ದು ಬಳ್ಳಾರಿಗೆ ಶಿಫ್ಟ್ ಆಗ್ತಾರಾ ಅಥವಾ ಇಲ್ವಾ

ನಟ ದರ್ಶನ್​ಗೆಗೆ ಪರಪ್ಪನ ಅಗ್ರಹಾರ ಜೈಲು ನರಕವಾಗಿ ಪರಿಣಮಿಸಿದೆ. ಹೀಗಾಗಿ ಹಾಸಿಗೆ, ದಿಂಬು ಹಾಗೂ ಮನೆ ಊಟಕ್ಕೆ ಅನುಮತಿ ಕೋರಿ ನ್ಯಾಯಾಲಯದಲ್ಲಿ ವಿಚಾರಣೆ ನಡೀತಿದ್ದು ಇನ್ನಷ್ಟೇ ತೀರ್ಮಾನ ಆಗ್ಬೇಕಿದೆ.. ಈ ನಡುವೆ ನಟ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಾ, ಇಲ್ವಾ ಅನುಮಾನ ಮೂಡಿಸಿದೆ.. ಈ ಹಿಂದೆಯೂ ಜೈಲಿನ ನಿಯಮದ ಪ್ರಕಾರ ಸೌಕರ್ಯ ನೀಡಿದ್ರೂ ಕೈದಿಗಳು ಅದನ್ನು ದುರುಪಯೋಗ ಪಡಿಸಿಕೊಂಡಿದ್ದರು. ಮತ್ತೊಂದೆಡೆ ದರ್ಶನ್​ಗೆ ಸೌಲಭ್ಯ ನೀಡಿದ್ದಕ್ಕೆ ಗರಂ ಆಗಿದ್ದ ಸುಪ್ರೀಂಕೋರ್ಟ್ ಅಧಿಕಾರಿಗಳಿಗೆ ಅಮಾನತಿಗೆ ಎಚ್ಚರಿಕೆ ಕೂಡ ನೀಡಿತ್ತು.. ಹೀಗಾಗಿ ನಟ ದರ್ಶನ್​ಗೆ ಜೈಲಾಧಿಕಾರಿಗಳು ಸೌಕರ್ಯ ಕೊಡಲು ಹಿಂದೇಟು ಹಾಕ್ತಿದ್ದಾರೆ.

ದಾಸನಿಗಿಲ್ಲ ರಾಜಾತಿಥ್ಯ!

ದಪ್ಪನೆ ಹಾಸಿಗೆಗಳಲ್ಲಿ ಮೊಬೈಲ್, ಸಿಮ್ ಕಾರ್ಡ್ ಇಡುವ ಸಾಧ್ಯತೆ
ಈ ಹಿಂದೆ ಹಲವರ ಬಳಿ ಮೊಬೈಲ್ ಸಿಮ್ ಪತ್ತೆ ಹಚ್ಚಿ ಪೊಲೀಸರು
ಜೈಲಿನ ಮೇಲೆ ಸಿಸಿಬಿ ದಾಳಿಯ ವೇಳೆಯೂ ಮೊಬೈಲ್​ಗಳು ಪತ್ತೆ
ಹಾಸಿಗೆ, ದಿಂಬುಗಳಲ್ಲಿ ಮೊಬೈಲ್​ಗಳನ್ನು ಅಡಗಿಸಿಡುವ ಆತಂಕ
ಹಳೆಯ ಘಟನೆಗಳಿಂದ ಆರೋಪಿ ದರ್ಶನ್ ಮೇಲೂ ಪರಿಣಾಮ
ಅಲ್ಲದೇ ರಾಜಾತಿಥ್ಯ ವಿಚಾರವಾಗಿ ಸುಪ್ರೀಂಕೋರ್ಟ್ ತರಾಟೆ
ಸೆಲೆಬ್ರಿಟಿ ಅಂತಾ ವಿಶೇಷ ಫೆಸಿಲಿಟಿ ಕೊಡಬಾರದು ಅಂತ ಆದೇಶ
ಅಂತಹ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ
ಆದೇಶದ ಮಧ್ಯೆಯೂ ವ್ಯವಸ್ಥೆ ಮಾಡಿದ್ರೆ ಕುತ್ತು ಬರುವ ಆತಂಕ
ದರ್ಶನ್​ಗೆ ಸವಲತ್ತು ಕೊಟ್ರೆ ಉಳಿದ ಕೈದಿಗಳು ಕೇಳುವ ಸಾಧ್ಯತೆ
ಇದೇ ಕಾರಣ ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು

ಒಂದ್ಕಡೆ ಸುಪ್ರೀಂ ಕೋರ್ಟ್ ಭಯ.. ಮತ್ತೊಂದೆಡೆ ಉಳಿದ ಕೈದಿಗಳು ಸೌಲಭ್ಯ ಕೇಳುವ ಪರಿಸ್ಥಿತಿ ಇದೆ, ಬೆನ್ನುನೋವು ಸೇರಿ ಇತರೆ ಆರೋಗ್ಯ ಸಮಸ್ಯೆಗಳಿದ್ದು ಹಾಸಿಗೆ, ತಲೆದಿಂಬು ಇಲ್ಲದೆ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಜೈಲೂಟ ಕೂಡ ದೇಹಕ್ಕೆ ಒಗ್ಗದೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದೇನೆ. ಹೀಗಾಗಿ ಕನಿಷ್ಠ ಸೌಲಭ್ಯ ನೀಡ್ಬೇಕು ಅಂತ ದರ್ಶನ್ ಮನವಿ ಮಾಡಿದ್ದಾರೆ.. ಸದ್ಯ ಸೆಪ್ಟೆಂಬರ್ 9ಕ್ಕೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ಅಥವಾ ಇಲ್ವಾ ಅನ್ನೋ ತೀರ್ಪು ಹೊರಬೀಳಲಿದೆ.. ಆವತ್ತೇ ಜೈಲಲ್ಲಿ ಸವಲತ್ತು ನೀಡುವ ಕುರಿತು ಕೋರ್ಟ್​ ತೀರ್ಪು ನೀಡುವ ಸಾಧ್ಯತೆ ಇದೆ, ಅದೇನೇ ಇರಲಿ, ಬಣ್ಣದ ಲೋಕದಲ್ಲಿ ಕೋಟ್ಯಂತರ ಅಭಿಮಾನಿಗಳ ದಾಸನ ಪರಿಸ್ಥಿತಿ ಮಾತ್ರ​​​ ಮಾಡಿದ್ದುಣ್ಣೋ ಮಹರಾಯ ಎನ್ನುವಂತಾಗಿದೆ.

The post ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು appeared first on Good News 24x7.

]]>
ಬೆಂಗಳೂರು ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್ ಮಾಡಿದ್ದ ಉಗ್ರ ನಾಸೀರ್ ಮೂವರು ಶಂಕಿತ ಉಗ್ರರ ಬಂಧನ. https://www.goodnews24x7.com/be%e1%b9%85g%e1%b8%b7uralli-vidhvansaka-kr%cc%a5tyakke-plyan-ma%e1%b8%8didda-ugra-nasir-muvaru-sa%e1%b9%85kita-ugrara-bandhana-be%e1%b9%85ga%e1%b8%b7uru-jailinindale-karna%e1%b9%adaka-seri-desada-viv/ Wed, 09 Jul 2025 09:46:08 +0000 https://www.goodnews24x7.com/?p=4980 ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್ ಪೊಲೀಸ್ ಅಧಿಕಾರಿ ಸೇರಿ…

The post ಬೆಂಗಳೂರು ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್ ಮಾಡಿದ್ದ ಉಗ್ರ ನಾಸೀರ್ ಮೂವರು ಶಂಕಿತ ಉಗ್ರರ ಬಂಧನ. appeared first on Good News 24x7.

]]>

ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್ ಪೊಲೀಸ್ ಅಧಿಕಾರಿ ಸೇರಿ ಮೂವರು ಶಂಕಿತ ಉಗ್ರರರನ್ನ ಬಂಧಿಸಿದೆ.

ಶಂಕಿತ ಉಗ್ರರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿರುವ ಎನ್ಐಎ ಅಧಿಕಾರಿಗಳ ತಂಡ, 14 ದಿನಗಳ ಕಾಲ ಕಸ್ಟಡಿಗೆ ಪಡೆಯಲು ಮುಂದಾಗಿದೆ. ಈ ಮಧ್ಯೆ ಉಗ್ರ ಟಿ.ನಾಸೀರ್ ಕುರಿತು ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳೆದಿದೆ.

ಜೈಲಿನಲ್ಲಿದ್ದುಕೊಂಡೇ ಉಗ್ರ ಕೃತ್ಯಕ್ಕೆ ಸಂಚು

2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್ನನ್ನು ವಶಕ್ಕೆ ಪಡೆದು ಎನ್ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್ ಜೈಲಿನಲ್ಲಿದ್ದಾನೆ. ಭಯೋತ್ಪಾದನೆ ಬಗ್ಗೆ ಯುವಜನರ ಮೈಂಡ್ ವಾಶ್ ಮಾಡೋದ್ರಲ್ಲಿ ನಿಸ್ಸೀಮನಾಗಿದ್ದ ನಾಸೀರ್, ಹಲವು ಯುವಜನರನ್ನ ಉಗ್ರ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾನೆ ಎಂದೂ ಸಹ ಎನ್ಐಎ ತನಿಖೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ ಅಲ್ಲದೇ ಜೈಲಿನಲ್ಲಿದ್ದುಕೊಂಡೇ ಉಗ್ರ ಚಟುವಟಿಕೆಗಳ ಬಗ್ಗೆ ಪ್ಲ್ಯಾನ್ ಮಾಡಿದ್ದ. 2008ರ ಸರಣಿ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ, ರಾಮೇಶ್ವರಂ ಕೆಫೆ ಬ್ಲಾಸ್ಟ್ ಸೇರಿ ಹಲವು ಪ್ರಕರಣಗಳಲ್ಲಿ ನಾಸೀರ್ ಕೈವಾಡ ಇದೆ. ಅಷ್ಟೇ ಅಲ್ಲ ಬೆಂಗಳೂರಿನಲ್ಲಿ ದೊಡ್ಡಮಟ್ಟದ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್ ಮಾಡಿದ್ದ ಅನ್ನೋದು ಎನ್ಐಎ ತನಿಖೆಯಲ್ಲಿ ಬಯಲಾಗಿದೆ.

ಇನ್ನೂ ಉಗ್ರ ಕೃತ್ಯಕ್ಕೆ ನಾಸೀರ್ ಜುನೈದ್, ಮೊಹಮ್ಮದ್ ಹರ್ಷದ್ ಖಾನ್, ಸುಹೈಲ್, ಫೈಜಲ್, ಜಾಹಿದ್ ತಬ್ರೇಜ್, ಮುದಾಸಿರ್ ಎಂಬ ಯುವಕರ ತಂಡವನ್ನೂ ರೆಡಿ ಮಾಡಿದ್ದ. ಆದ್ರೆ ಜೀವಂತ ಗ್ರೆನೇಡ್ಗಳು, ಪಿಸ್ತೂಲ್ಗಳು, ಸ್ಫೋಟಕ ವಸ್ತುಗಳ ಸಮೇತ ತಂಡ ಸಿಕ್ಕಿಬಿದ್ದಿತ್ತು. ಈ ಐವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಎನ್ಐಎ ಈ ಪ್ರಕರಣದ ಹೊಣೆ ವಹಿಸಿಕೊಂಡಿತು. ಸದ್ಯ ಮೂವರನ್ನು ಬಂಧಿಸಿರುವ ಎನ್ಐಎ, ಬಂಧಿತರಿಂದ ಒಂದಷ್ಟು ಹಣ, ಸಂವಹನಕ್ಕೆ ಬಳಸುತ್ತಿದ್ದ ವಾಕಿಟಾಕಿ ಸೇರಿ ಹಲವು ವಸ್ತುಗಳು ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಏರ್ಟೆಲ್ ಮಾಜಿ ಉದ್ಯೋಗಿಗೆ ನೋಟಿಸ್
ಇನ್ನೂ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ತಾಲ್ಲೂಕು ಭಟ್ರಹಳ್ಳಿ ಗ್ರಾಮದ ಸತೀಶ್ ಗೌಡ ಎಂಬಾತನಿಗೆ ಎನ್ಐಎ ನೋಟಿಸ್ ನೀಡಿದೆ. ಶಂಕಿತರಿಗೆ ಸಿಮ್ ಕಾರ್ಡ್ ನೀಡಿದ ಆರೋಪದ ಮೇಲೆ ಸತೀಶ್ ಗೌಡಗೆ ನೋಟಿಸ್ ನೀಡಲಾಗಿದೆ. ಸತೀಶ್ ಮನೆಯಲ್ಲಿ ಇಲ್ಲದ ಕಾರಣ ಕಾರಣ ಕುಟುಂಬಸ್ಥರಿಗೆ ನೋಟೀಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಅಧಿಕಾರಿಗಳು. ಮೂರು ವರ್ಷಗಳ ಹಿಂದೆ ಸತೀಶ್ಗೌಡ ಏರ್ಟೆಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈ ಕೆಲಸ ಮಾಡಿರುವುದಾಗಿ ಸಂಶಯ ವ್ಯಕ್ತವಾಗಿದೆ.

 

The post ಬೆಂಗಳೂರು ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್ ಮಾಡಿದ್ದ ಉಗ್ರ ನಾಸೀರ್ ಮೂವರು ಶಂಕಿತ ಉಗ್ರರ ಬಂಧನ. appeared first on Good News 24x7.

]]>