PMUY Archives - Good News 24x7 https://www.goodnews24x7.com/tag/pmuy/ Kannada Sat, 07 Mar 2026 08:50:01 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg PMUY Archives - Good News 24x7 https://www.goodnews24x7.com/tag/pmuy/ 32 32 ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್! https://www.goodnews24x7.com/oil-companies-give-another-big-shock-to-the-people/ Sat, 07 Mar 2026 08:49:42 +0000 https://www.goodnews24x7.com/?p=8774 ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

The post ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್! appeared first on Good News 24x7.

]]>

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ.

ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದ್ದು, ಗೃಹಬಳಕೆಯ ಹಾಗೂ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ಈ ಪರಿಷ್ಕೃತ ಹೊಸ ದರಗಳು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬಂದಿವೆ.

ತೈಲ ಕಂಪನಿಗಳು ಪ್ರಕಟಿಸಿರುವ ಹೊಸ ದರಪಟ್ಟಿಯ ಪ್ರಕಾರ, 14.2 ಕೆ.ಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 60 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದೆ. ಅದೇ ರೀತಿ, ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸಲಾಗುವ 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ 115 ರೂಪಾಯಿಗಳಷ್ಟು ದಿಢೀರ್ ಹೆಚ್ಚಳ ಮಾಡಲಾಗಿದೆ.

ದೆಹಲಿಯಲ್ಲಿ 913 ರೂ.ಗೆ ತಲುಪಿದ ಬೆಲೆ
ಈ ಹೊಸ ದರ ಏರಿಕೆಯ ಬಳಿಕ, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಬ್ಸಿಡಿ ರಹಿತ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 853 ರೂಪಾಯಿಯಿಂದ 913 ರೂಪಾಯಿಗೆ ಏರಿಕೆಯಾಗಿದೆ. ದೇಶದ ಇತರ ಪ್ರಮುಖ ನಗರಗಳಲ್ಲೂ ಸ್ಥಳೀಯ ತೆರಿಗೆಗಳಿಗೆ ಅನುಗುಣವಾಗಿ ಬೆಲೆಗಳಲ್ಲಿ ಬದಲಾವಣೆಯಾಗಿದ್ದು, ಗ್ರಾಹಕರಿಗೆ ಆರ್ಥಿಕ ಹೊರೆಯಾಗಲಿದೆ.

ಬೆಲೆ ಏರಿಕೆಗೆ ಕಾರಣವೇನು?
ಮಧ್ಯಪ್ರಾಚ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಇರಾನ್ ಹಾಗೂ ಇಸ್ರೇಲ್ ನಡುವೆ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಅನಿಲದ ಬೆಲೆಗಳಲ್ಲಿ ತೀವ್ರ ಏರುಪೇರಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಈ ಬೆಲೆ ಏರಿಕೆಯನ್ನು ಸರಿದೂಗಿಸಲು ಭಾರತದಲ್ಲೂ ಸಿಲಿಂಡರ್ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಕಳೆದ 2025ರ ಏಪ್ರಿಲ್ ತಿಂಗಳಲ್ಲಿ ಕೊನೆಯ ಬಾರಿಗೆ ಗೃಹ ಬಳಕೆಯ ಸಿಲಿಂಡರ್ ದರವನ್ನು 50 ರೂಪಾಯಿಗಳಷ್ಟು ಏರಿಕೆ ಮಾಡಲಾಗಿತ್ತು. ಅದಾದ ಬಳಿಕ ಸ್ಥಿರವಾಗಿದ್ದ ದರ, ಇದೀಗ ದಿಢೀರನೆ ಮತ್ತೆ ಏರಿಕೆಯ ಬರೆ ಎಳೆದಿದೆ.

ಉಜ್ವಲಾ ಫಲಾನುಭವಿಗಳಿಗೆ ರಿಲೀಫ್!
ಸಾಮಾನ್ಯ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದ್ದರೂ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಧಾನ ಮಂತ್ರಿ ಉಜ್ವಲಾ ಯೋಜನೆ’ಯ (PMUY) ಫಲಾನುಭವಿಗಳಿಗೆ ಕೊಂಚ ನಿರಾಳತೆ ಸಿಕ್ಕಿದೆ. ಈ ಹಿಂದಿನಂತೆಯೇ ಈಗಲೂ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 300 ರೂಪಾಯಿಗಳ ಸಬ್ಸಿಡಿ ದರದಲ್ಲಿ (ರಿಯಾಯಿತಿ) ಸಿಲಿಂಡರ್ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಲಾಗಿದೆ.

 

The post ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್! appeared first on Good News 24x7.

]]>