Political Archives - Good News 24x7 https://www.goodnews24x7.com/tag/political/ Kannada Wed, 01 Jul 2026 06:07:14 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Political Archives - Good News 24x7 https://www.goodnews24x7.com/tag/political/ 32 32 SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? https://www.goodnews24x7.com/giving-counter-to-sir-griha-jyoti-verification/ Wed, 01 Jul 2026 06:07:14 +0000 https://www.goodnews24x7.com/?p=9714 ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಂದ ಎಪಿಕ್ ಕಾರ್ಡ್ ಹಾಗೂ ಜಾತಿ ವಿವರ ಸಂಗ್ರಹಿಸಲು ಸರ್ಕಾರ ಮುಂದಾಗಿದ್ದು, ಇದು ಚುನಾವಣಾ ಆಯೋಗ ನಡೆಸುತ್ತಿರುವ ‘ಎಸ್‌ಐಆರ್’ ಪ್ರಕ್ರಿಯೆಗೆ ಕೌಂಟರ್ ಕೊಡುವ ತಂತ್ರವೇ ಎಂಬ ಬಲವಾದ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಹಾಗಾದರೆ, ಈ ಕ್ರಮದಿಂದ…

The post SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? appeared first on Good News 24x7.

]]>

ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಂದ ಎಪಿಕ್ ಕಾರ್ಡ್ ಹಾಗೂ ಜಾತಿ ವಿವರ ಸಂಗ್ರಹಿಸಲು ಸರ್ಕಾರ ಮುಂದಾಗಿದ್ದು, ಇದು ಚುನಾವಣಾ ಆಯೋಗ ನಡೆಸುತ್ತಿರುವ ‘ಎಸ್‌ಐಆರ್’ ಪ್ರಕ್ರಿಯೆಗೆ ಕೌಂಟರ್ ಕೊಡುವ ತಂತ್ರವೇ ಎಂಬ ಬಲವಾದ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಹಾಗಾದರೆ, ಈ ಕ್ರಮದಿಂದ ಸರ್ಕಾರಕ್ಕೆ ಏನು ಲಾಭ? ಇಲ್ಲಿದೆ ವಿವರ.

SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? ಬಲವಾಯ್ತು ಅನುಮಾನ, ಕಾರಣ ಇಲ್ಲಿದೆ

ಗೃಹ ಜ್ಯೋತಿಗೆ ವೋಟರ್ ಐಡಿ ಕಡ್ಡಾಯ
ಫಲಾನುಭವಿಗಳ ಜಾತಿ ವಿವರ ಸಂಗ್ರಹ
ಐಟಿ ಪಾವತಿದಾರರಿಗೆ ಯೋಜನೆ ಕಟ್

ಜುಲೈ 1,ಬೆಂಗಳೂರು: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ವಿದ್ಯುತ್ ಯೋಜನೆ ‘ಗೃಹ ಜ್ಯೋತಿ’ ಫಲಾನುಭವಿಗಳ ಮನೆ ಬಾಗಿಲಿಗೆ ಎಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗುತ್ತಿದೆ. ಇದರ ಬೆನ್ನಲ್ಲೇ ಹೊಸದೊಂದು ರಾಜಕೀಯ ಹಾಗೂ ಸಾಮಾಜಿಕ ಚರ್ಚೆ ಮುನ್ನೆಲೆಗೆ ಬಂದಿದೆ. ಯಾವುದೇ ಸರ್ಕಾರಿ ಯೋಜನೆಗೆ ಕಡ್ಡಾಯವಲ್ಲದ ಎಪಿಕ್ (EPIC) ಕಾರ್ಡ್ ಅಥವಾ ವೋಟರ್ ಐಡಿಯನ್ನು ಈಗ ಗೃಹ ಜ್ಯೋತಿ ಯೋಜನೆಗೆ ಕಡ್ಡಾಯಗೊಳಿಸಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇದರೊಂದಿಗೆ ಫಲಾನುಭವಿಗಳ ಜಾತಿ ಹಾಗೂ ಪ್ರವರ್ಗಗಳ (ಎಸ್‌ಸಿ, ಎಸ್‌ಟಿ, ಓಬಿಸಿ, ಅಲ್ಪಸಂಖ್ಯಾತ) ವಿವರಗಳನ್ನೂ ಅಪ್‌ಡೇಟ್ ಮಾಡಲಾಗುತ್ತಿದ್ದು, ಸರ್ಕಾರ ಪರೋಕ್ಷವಾಗಿ ಮತದಾರರ ಇಂಚಿಂಚೂ ಮಾಹಿತಿ ಸಂಗ್ರಹಕ್ಕೆ ಮುಂದಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ.

ಮತದಾರರ ಅಧಿಕೃತ ದತ್ತಾಂಶ ಕ್ರೂಢೀಕರಣ ತಂತ್ರವೇ?

ಚುನಾವಣಾ ಆಯೋಗದ ಬಳಿ ಇರುವ ಮತದಾರರ ಅಧಿಕೃತ ದತ್ತಾಂಶವನ್ನು ತಾನೂ ಕ್ರೋಢೀಕರಿಸಿಕೊಳ್ಳಲು ಸರ್ಕಾರ ಈ ಹೊಸ ಮಾರ್ಗವನ್ನು ಕಂಡುಕೊಂಡಿದೆ ಎನ್ನಲಾಗುತ್ತಿದೆ. ಇದರ ಮೂಲಕ ಕರ್ನಾಟಕದ ನೈಜ ಮತದಾರರು ಎಷ್ಟು ಎಂಬ ಅಧಿಕೃತ ವಿವರ ಸರ್ಕಾರದ ಕೈಸೇರಲಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆಯ ಕಟ್ಟುನಿಟ್ಟಿನ ‘ಎಸ್‌ಐಆರ್’ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ನಡೆಯುತ್ತಿದೆ. ಈ ಪರಿಷ್ಕರಣೆ ವೇಳೆ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಸಾರ್ವಜನಿಕರೇ ಎಚ್ಚೆತ್ತುಕೊಳ್ಳಲಿ ಮತ್ತು ಯೋಜನೆಯ ಲಾಭ ಪಡೆಯುವವರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗಿಯಾಗಲಿ ಎಂಬ ಗುಪ್ತ ಯೋಜನೆ ಇದರ ಹಿಂದಿದೆ ಎನ್ನಲಾಗಿದೆ.

ಹೊರ ರಾಜ್ಯದವರಿಗೆ ಸಿಗಲ್ಲ ಗ್ಯಾರಂಟಿ

ಈ ಸಮೀಕ್ಷೆಯಿಂದಾಗಿ ಕರ್ನಾಟಕದ ಮೂಲ ಮತದಾರರಲ್ಲದವರು ಮತ್ತು ಹೊರರಾಜ್ಯದವರು ಯೋಜನೆಯಿಂದ ಹೊರಗುಳಿಯಲಿದ್ದಾರೆ. ಇದರ ಜೊತೆಗೆ, ಆದಾಯ ತೆರಿಗೆ (ಐಟಿ) ಪಾವತಿಸುತ್ತಿರುವ ಶ್ರೀಮಂತ ವರ್ಗದವರನ್ನು ಪತ್ತೆ ಹಚ್ಚಿ ಅವರಿಗೆ ಗೃಹ ಜ್ಯೋತಿ ಯೋಜನೆಯಿಂದ ಕೊಕ್ ನೀಡಲು ಸರ್ಕಾರ ಈ ಪರಿಶೀಲನೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಉಚಿತ ವಿದ್ಯುತ್ ನೆಪದಲ್ಲಿ ನಡೆಯುತ್ತಿರುವ ಈ ಹಠಾತ್ ಜಾತಿವಾರು ಮತ್ತು ವೋಟರ್ ಐಡಿ ಮಾಹಿತಿ ಸಂಗ್ರಹ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಮುಂದಿನ ದಿನಗಳಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎಬ್ಬಿಸುವ ಮುನ್ಸೂಚನೆ ನೀಡಿದೆ.

The post SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? appeared first on Good News 24x7.

]]>
ರಾಜೀನಾಮೆ ನೀಡಿದ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ https://www.goodnews24x7.com/keir-starmer-the-sixth-uk-prime-minister-to-resign-in-10-years/ Mon, 22 Jun 2026 10:26:39 +0000 https://www.goodnews24x7.com/?p=9626 ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬ್ರಿಟಿಷ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು, ಜೀವನ ವೆಚ್ಚ ಏರಿಕೆ ಹಾಗೂ ಪಕ್ಷದೊಳಗಿನ ಒತ್ತಡ ಇದಕ್ಕೆ ಪ್ರಮುಖ ಕಾರಣ. ಆಂಡಿ ಬರ್ನ್‌ಹ್ಯಾಮ್ ಸವಾಲು ಮತ್ತು…

The post ರಾಜೀನಾಮೆ ನೀಡಿದ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ appeared first on Good News 24x7.

]]>

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬ್ರಿಟಿಷ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು, ಜೀವನ ವೆಚ್ಚ ಏರಿಕೆ ಹಾಗೂ ಪಕ್ಷದೊಳಗಿನ ಒತ್ತಡ ಇದಕ್ಕೆ ಪ್ರಮುಖ ಕಾರಣ. ಆಂಡಿ ಬರ್ನ್‌ಹ್ಯಾಮ್ ಸವಾಲು ಮತ್ತು ಇತರ ಪಕ್ಷಗಳ ಪೈಪೋಟಿಯೂ ಇತ್ತು. ಲೇಬರ್ ಪಕ್ಷವನ್ನು ಅಧಿಕಾರಕ್ಕೆ ತಂದ ಬಗ್ಗೆ ಸ್ಟಾರ್ಮರ್ ತಮ್ಮ ಸಾಧನೆ ಸಮರ್ಥಿಸಿಕೊಂಡರು. ಮುಂದಿನ ಪ್ರಧಾನಿ ಯಾರೆಂಬ ಕುತೂಹಲ ಮೂಡಿಸಿದೆ.

ಲಂಡನ್, ಜೂನ್ 22: ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು ಹಾಗೂ ಸ್ವಪಕ್ಷದೊಳಗಿನ ಭಾರಿ ಒತ್ತಡಕ್ಕೆ ಮಣಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಸೋಮವಾರ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಜುಲೈ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ಮರ್, ಕೇವಲ ಎರಡು ವರ್ಷಗಳಲ್ಲೇ ಅಧಿಕಾರದಿಂದ ಕೆಳಗಿಳಿಯುವಂತಾಗಿರುವುದು ಬ್ರಿಟನ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ಕಳೆದ 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ ಇವರಾಗಿದ್ದಾರೆ.

ಲಂಡನ್‌ನ ಪ್ರಧಾನಿ ಅಧಿಕೃತ ನಿವಾಸ ’10 ಡೌನಿಂಗ್ ಸ್ಟ್ರೀಟ್’ನ ಹೊರಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, “ಮುಂದಿನ ಚುನಾವಣೆಗೆ ಪಕ್ಷವನ್ನು ಮುನ್ನಡೆಸಲು ನಾನು ಸರಿಯಾದ ವ್ಯಕ್ತಿಯೇ ಎಂದು ನನ್ನ ಪಕ್ಷ ಕೇಳುತ್ತಿದ್ದ ಪ್ರಶ್ನೆಗೆ ನನಗೆ ಉತ್ತರ ಸಿಕ್ಕಿದೆ. ಅದಕ್ಕಾಗಿಯೇ ನಾನು ರಾಜೀನಾಮೆ ನೀಡುತ್ತಿದ್ದೇನೆ” ಎಂದು ಭಾವುಕರಾಗಿ ನುಡಿದರು.

ರಾಜೀನಾಮೆಗೆ ಪ್ರಮುಖ ಕಾರಣಗಳೇನು?

ಮ್ಯಾಂಚೆಸ್ಟರ್‌ನ ಮಾಜಿ ಮೇಯರ್ ಆಂಡಿ ಬರ್ನ್‌ಹ್ಯಾಮ್ ಇತ್ತೀಚೆಗೆ ಸಂಸತ್ ಚುನಾವಣೆಯಲ್ಲಿ ಗೆದ್ದು ಬಂದ ತಕ್ಷಣ, ಪ್ರಧಾನಿ ಸ್ಟಾರ್ಮರ್ ನಾಯಕತ್ವಕ್ಕೆ ಲೇಬರ್ ಪಕ್ಷದೊಳಗೇ ಬಹಿರಂಗ ಸವಾಲು ಎದುರಾಯಿತು. ಬಹುತೇಕ ಸಂಸದರು ಬರ್ನ್‌ಹ್ಯಾಮ್ ಬೆಂಬಲಕ್ಕೆ ನಿಂತಿದ್ದು ಸ್ಟಾರ್ಮರ್ ಇಕ್ಕಟ್ಟಿಗೆ ಸಿಲುಕಿದರು.

ಆರ್ಥಿಕ ಬಿಕ್ಕಟ್ಟು ಮತ್ತು ಜೀವನ ವೆಚ್ಚ:

ಬ್ರಿಟನ್‌ನಲ್ಲಿ ಇತ್ತೀಚಿನ ದಿನಗಳಲ್ಲಿ ದಿನಬಳಕೆ ವಸ್ತುಗಳ ಬೆಲೆ (Cost of Living) ಗಗನಕ್ಕೇರಿದೆ. ಸಾರ್ವಜನಿಕ ಸೇವೆಗಳನ್ನು ಸುಧಾರಿಸುವಲ್ಲಿ ಮತ್ತು ಭರವಸೆ ನೀಡಿದ್ದ ಆರ್ಥಿಕ ಬೆಳವಣಿಗೆಯನ್ನು ತಲುಪಿಸುವಲ್ಲಿ ಸ್ಟಾರ್ಮರ್ ಸರ್ಕಾರ ಸಂಪೂರ್ಣ ಹೆಣಗಾಡುತ್ತಿತ್ತು. ಬ್ರಿಟನ್‌ನಲ್ಲಿ ಗ್ರೀನ್ ಪಾರ್ಟಿ ಮತ್ತು ರಿಫಾರ್ಮ್ ಯುಕೆ ಪಕ್ಷಗಳು ಜನಪ್ರಿಯತೆ ಗಳಿಸುತ್ತಿದ್ದು, ಲೇಬರ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದ್ದವು. ಇದರಿಂದಾಗಿ ಪಕ್ಷದ ಉಳಿವಿಗೆ ನಾಯಕತ್ವ ಬದಲಾವಣೆ ಅನಿವಾರ್ಯವಾಯಿತು.

ತಮ್ಮ ಸಾಧನೆಗಳನ್ನು ಸಮರ್ಥಿಸಿಕೊಂಡ ಸ್ಟಾರ್ಮರ್ ಪಕ್ಷದ ಇಮೇಜ್ ಬದಲಾಯಿಸಿದ್ದೆ: “ಆರು ವರ್ಷಗಳ ಹಿಂದೆ ನಾನು ಲೇಬರ್ ಪಕ್ಷದ ಜವಾಬ್ದಾರಿ ವಹಿಸಿಕೊಂಡಾಗ ಪಕ್ಷ ಮುಗಿದೇ ಹೋಯಿತು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಕಠಿಣ ಪರಿಶ್ರಮದಿಂದ ನಾವು ಪಕ್ಷವನ್ನು ಅಧಿಕಾರಕ್ಕೆ ತಂದೆವು. ನಮ್ಮ ಆಡಳಿತದಲ್ಲಿ ವೇತನಗಳು ವೇಗವಾಗಿ ಬೆಳೆದವು, ಅತಿ ದೊಡ್ಡ ಕಾರ್ಮಿಕ ಸುಧಾರಣೆ ತಂದೆವು ಹಾಗೂ ದೇಶದ ಅರ್ಧ ಮಿಲಿಯನ್ (5 ಲಕ್ಷ) ಜನರನ್ನು ಬಡತನದಿಂದ ಮುಕ್ತಗೊಳಿಸಿದೆವು ಎಂದು ಸ್ಟಾರ್ಮರ್ ತಮ್ಮ ಸಾಧನೆಗಳನ್ನು ನೆನೆದರು.

ಬ್ರಿಟನ್‌ನ ಮುಂದಿನ ಪ್ರಧಾನಿ ಯಾರು?

ಕೀರ್ ಸ್ಟಾರ್ಮರ್ ಅವರು ರಾಜೀನಾಮೆ ನೀಡಿದ್ದರೂ, ಲೇಬರ್ ಪಕ್ಷವು ತನ್ನ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೂ ಅವರು ಮಧ್ಯಂತರ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಸದ್ಯಕ್ಕೆ ಪ್ರಧಾನಿ ರೇಸ್‌ನಲ್ಲಿ ಮುಂಚೂಣಿಯಲ್ಲಿರುವವರು:

ಆಂಡಿ ಬರ್ನ್‌ಹ್ಯಾಮ್: ಪಕ್ಷದ ಸಂಸದರ ಪ್ರಬಲ ಬೆಂಬಲ ಹೊಂದಿರುವ ನಾಯಕ.

ವೆಸ್ ಸ್ಟ್ರೀಟಿಂಗ್: ಮಾಜಿ ಆರೋಗ್ಯ ಕಾರ್ಯದರ್ಶಿಯಾಗಿರುವ ಇವರು ಕೂಡ ನಾಯಕತ್ವ ಸ್ಪರ್ಧೆಗೆ ಇಳಿಯುವ ಮುನ್ಸೂಚನೆ ನೀಡಿದ್ದಾರೆ.

ಒಟ್ಟಿನಲ್ಲಿ ಇರಾನ್-ಅಮೆರಿಕ ಬಿಕ್ಕಟ್ಟಿನ ನಡುವೆ ಬ್ರಿಟನ್ ಪ್ರಧಾನಿ ರಾಜೀನಾಮೆ ನೀಡಿರುವುದು ಜಾಗತಿಕ ವಲಯದಲ್ಲೂ ಭಾರಿ ಸಂಚಲನ ಸೃಷ್ಟಿಸಿದೆ.

The post ರಾಜೀನಾಮೆ ನೀಡಿದ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ appeared first on Good News 24x7.

]]>
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ https://www.goodnews24x7.com/voter-list-revision-sir-cm-dk-shivakumar-issues-strict-instructions-to-officials%e0%b2%ae%e0%b2%a4%e0%b2%a6%e0%b2%be%e0%b2%b0%e0%b2%b0-%e0%b2%aa%e0%b2%9f%e0%b3%8d%e0%b2%9f%e0%b2%bf-%e0%b2%aa/ Thu, 04 Jun 2026 13:19:57 +0000 https://www.goodnews24x7.com/?p=9590 ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

The post ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ appeared first on Good News 24x7.

]]>

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ ಪ್ರಕ್ರಿಯೆ ಯಶಸ್ವಿಯಾಗಬೇಕು. ಯಾವುದೇ ಒಬ್ಬ ಅರ್ಹ ನಾಗರಿಕನೂ ತನ್ನ ಅತ್ಯಮೂಲ್ಯ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು” ಎಂದು ತಿಳಿಸಿದರು. ಸಾರ್ವಜನಿಕರ ನೆರವಿಗಾಗಿ ತಕ್ಷಣವೇ ‘ಹೆಲ್ಪ್ ಡೆಸ್ಕ್’ ಸ್ಥಾಪಿಸಲು ಮತ್ತು ಜಾಗೃತಿ ಮೂಡಿಸಲು ಪ್ರತ್ಯೇಕ ಅಧಿಕಾರಿಗಳ ತಂಡವನ್ನು ನೇಮಿಸುವಂತೆ ಸೂಚಿಸಿದರು. ಇದೇ ವೇಳೆ, ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾನೂನಿನ ಚೌಕಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಿಎಂ ಸ್ಪಷ್ಟಪಡಿಸಿದರು. ಇದರೊಂದಿಗೆ, ಎನ್‌ಆರ್‌ಐಗಳಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಹಾಗೂ ಉದ್ಯೋಗ ಸೃಷ್ಟಿ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

The post ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ appeared first on Good News 24x7.

]]>
ದಕ್ಷಿಣ ರಾಜ್ಯಗಳ ರಾಜಕೀಯ ಶಕ್ತಿಯನ್ನು ದುರ್ಬಲಗೊಳಿಸುವ ಕುತಂತ್ರ : ಡಾ.ಹೆಚ್ ಸಿ ಮಹದೇವಪ್ಪ. https://www.goodnews24x7.com/the-trick-to-weaken-the-political-power-of-the-southern-states-dr-h-c-mahadevappa/ Wed, 20 May 2026 11:27:12 +0000 https://www.goodnews24x7.com/?p=9516 ಭಾರತವು ರಾಜಕೀಯವಾಗಿ ಸ್ವಾತಂತ್ರ್ಯ ಗಳಿಸಿದ ಕಾಲದಿಂದ ಇಲ್ಲಿಯವರೆಗೂ ಕೂಡಾ ಜನಸಂಖ್ಯಾ ನಿಯಂತ್ರಣ ಮತ್ತು ಮಾನವ ಸಂಪನ್ಮೂಲಕ ಅಭಿವೃದ್ಧಿಗೆ ಹಲವು ರೀತಿಯ ಪ್ರಯತ್ನಗಳು ನಡೆದಿವೆ. ಪಂಚವಾರ್ಷಿಕ ಯೋಜನೆಯಿಂದ ಹಿಡಿದು ಈಗಿನ ರಾಜ್ಯಗಳ ಬಜೆಟ್ ನ ವರೆಗೆ ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು…

The post ದಕ್ಷಿಣ ರಾಜ್ಯಗಳ ರಾಜಕೀಯ ಶಕ್ತಿಯನ್ನು ದುರ್ಬಲಗೊಳಿಸುವ ಕುತಂತ್ರ : ಡಾ.ಹೆಚ್ ಸಿ ಮಹದೇವಪ್ಪ. appeared first on Good News 24x7.

]]>

ಭಾರತವು ರಾಜಕೀಯವಾಗಿ ಸ್ವಾತಂತ್ರ್ಯ ಗಳಿಸಿದ ಕಾಲದಿಂದ ಇಲ್ಲಿಯವರೆಗೂ ಕೂಡಾ ಜನಸಂಖ್ಯಾ ನಿಯಂತ್ರಣ ಮತ್ತು ಮಾನವ ಸಂಪನ್ಮೂಲಕ ಅಭಿವೃದ್ಧಿಗೆ ಹಲವು ರೀತಿಯ ಪ್ರಯತ್ನಗಳು ನಡೆದಿವೆ.

ಪಂಚವಾರ್ಷಿಕ ಯೋಜನೆಯಿಂದ ಹಿಡಿದು ಈಗಿನ ರಾಜ್ಯಗಳ ಬಜೆಟ್ ನ ವರೆಗೆ ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡರೂ ಸಹ ಭಾರತವು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ 193 ದೇಶಗಳ ಪೈಕಿ 130 ನೇ ಸ್ಥಾನದಲ್ಲಿ ಇದೆ.

ವಿಶ್ವದಲ್ಲಣೆ ಅತಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ಭಾರತದಕ್ಕೆ ಜನಸಂಖ್ಯೆ ಎಂಬುದು ವರವಾಗಬೇಕಿತ್ತು. ಆದರೆ ಇಲ್ಲಿನ ಮಾನವ ಅಭಿವೃದ್ಧಿ ಸೂಚ್ಯಂಕದ ದರವನ್ನು ಗಮನಿಸಿದರೆ ನಮ್ಮ ದೇಶದ ಮೇಲೆ ಜನಸಂಖ್ಯಾ ಸ್ಪೋಟದ ದುಷ್ಪರಿಣಾಮ ಉಂಟಾದಂತೆ ಕಾಣುತ್ತಿದೆ.

ಈ ಪೈಕಿ ದೇಶದ ಕೆಲವು ರಾಜ್ಯಗಳು, ಬಹಳ ಜಾಗೃತೆಯಿಂದ ಜನರ ತಲಾದಾಯ, ಆರೋಗ್ಯ ಹಾಗೂ ಜನರಿಗೆ ಬೇಕಾದ ಉತ್ತಮ ಆರ್ಥಿಕ ವಾತಾವರಣ ಸೃಷ್ಟಿಸುವ ಸಲುವಾಗಿ ಹಲವು ಕ್ರಮಗಳನ್ನು ಕೈಗೊಂಡರೂ ಕೂಡಾ ಒಟ್ಟಾರೆಯಾಗಿ ದೇಶದ ಹೆಚ್ಚಿನ ಜನಸಂಖ್ಯೆಯು ಮಾನವ ಸಂಪನ್ಮೂಲವಾಗಿ ಪರಿವರ್ತನೆ ಆಗಿಲ್ಲ. ಹೀಗಾಗಿಯೇ ಇಷ್ಟು ಹೊತ್ತಿಗೆ ಅಭಿವೃದ್ಧ ದೇಶಗಳ ಪಟ್ಟಿಯಲ್ಲಿ ಇರಬೇಕಾಗಿದ್ದ ದೇಶ, ಇನ್ನೂ ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಲ್ಲೇ ಇದೆ.

ಇಂತಹ ಪರಿಸ್ಥಿತಿಯಲ್ಲಿ ಜನಸಂಖ್ಯೆಯನ್ನು ಮಾನವ ಸಂಪನ್ಮೂಲವಾಗಿ ಪರಿವರ್ತನೆ ಮಾಡಬೇಕಾದ ಜವಾಬ್ದಾರಿಯನ್ನು ಹೊಂದಿರುವ ಕೇಂದ್ರದ ಬಿಜೆಪಿ ಸರ್ಕಾರವು ಜನಸಂಖ್ಯಾ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ, ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವದನ್ನು ಬಿಟ್ಟು, ಕೇವಲ ಚುನಾವಣಾ ರಾಜಕೀಯದ ದೃಷ್ಟಿಯಿಂದ ತೀರಾ ಅತಾರ್ಕಿಕವಾಗಿ ಮತ ಕ್ಷೇತ್ರಗಳ ಹೆಚ್ಚಳಕ್ಕೆ ಮುಂದಾಗಿರುವುದು ಅತ್ಯಂತ ಕೆಟ್ಟ ಸಂಗತಿಯಾಗಿದೆ.

ಜನಸಂಖ್ಯಾ ನಿಯಂತ್ರಣಕ್ಕಾಗಿ ದೇಶದ ವಿವಿಧ ರಾಜ್ಯಗಳು ಪ್ರಾಮಾಣಿಕವಾಗಿ ಶ್ರಮ ಹಾಕುತ್ತಿದ್ದು ಅದರಲ್ಲಿ ಯಶಸ್ಸು ಕಂಡಿವೆ ಕೂಡಾ.. ಈ ಪೈಕಿ ಕೇರಳ ಆದಿಯಾಗಿ ದಕ್ಷಿಣ ಭಾರತದ ರಾಜ್ಯಗಳೇ ಉತ್ತಮ ಸಾಧನೆಯನ್ನು ಮಾಡಿವೆ.

ಹೀಗಿರುವಾಗ ಜನಸಂಖ್ಯೆ ಆಧರಿಸಿ ಉತ್ತರದ ರಾಜ್ಯಗಳಿಗೆ ಹೆಚ್ಚಿನ ಚುನಾವಣಾ ಕ್ಷೇತ್ರಗಳನ್ನು ನೀಡಿ, ದಕ್ಷಿಣದ ರಾಜ್ಯಗಳಿಗೆ ಕಡಿಮೆ ಚುನಾವಣಾ ಕ್ಷೇತ್ರಗಳನ್ನು ನೀಡುವ ಹುನ್ನಾರವು ದಕ್ಷಿಣ ಭಾರತ ವಿರೋಧಿ ನಡೆಯಾಗಿದೆ.

ತೆರಿಗೆ ಪಾವತಿಯಿಂದ ಹಿಡಿದು, ದೇಶದ ಅಭಿವೃದ್ಧಿಯ ಎಲ್ಲ ಮಗ್ಗುಲುಗಳಲ್ಲೂ ಸಹ ದಕ್ಷಿಣ ಭಾರತದ ರಾಜಗಯಗಳು ತನ್ನದೇ ಆದ ಮಹತ್ವದ ಕೊಡುಗೆ ನೀಡಿವೆ

ಹೀಗಿರುವಾಗ ದಕ್ಷಿಣದ ರಾಜ್ಯಗಳ ಮೇಲೆ ಸದಾ ತಾರತಮ್ಯ ತೋರುವ ಕೇಂದ್ರದ ಬಿಜೆಪಿ ಸರ್ಕಾರ, ದಕ್ಷಿಣದ ರಾಜ್ಯಗಳ ರಾಜಕೀಯ ಅಸ್ಮಿತೆಗೆ ಕೊಡಲಿ ಪೆಟ್ಟು ನೀಡುವ ದುರುದ್ದೇಶದಿಂದ ಉತ್ತರ ಭಾರತಕ್ಕೆ ಹೆಚ್ಚು ಮತ್ತು ದಕ್ಷಿಣ ಭಾರತಕ್ಕೆ ಕಡಿಮೆ ಮತ ಕ್ಷೇತ್ರಗಳನ್ನು ಹಂಚಿಕೆ ಮಾಡಲು ಹೊರಟಿದ್ದು, ಇದನ್ನು ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ದಕ್ಷಿಣದ ರಾಜ್ಯಗಳು ಖಂಡಿಸಬೇಕು.

ಎಲ್ಲಕ್ಕಿಂತ ಮುಖ್ಯವಾಗಿ ಮತ ಕ್ಷೇತ್ರಗಳ ಹೆಚ್ಚಳದ ಮಸೂದೆಯನ್ನು ಈಗಾಗಲೇ ಅನುಮೋದಿತವಾಗಿದ್ದ ಮಹಿಳಾ ಮೀಸಲಾತಿ ಮಸೂದೆಯ ಒಳಗಿಟ್ಟು, ದಕ್ಷಿಣದ ರಾಜ್ಯಗಳನ್ನು ಹಣಿಯಲು ಕ್ಷೇಂದ್ರದ ಬಿಜೆಪಿಗರು ಸಂಚು ರೂಪಿಸಿದ್ದರು.

ಅಷ್ಟಲ್ಲದೇ ದೇಶದ ಪ್ರಮುಖ ವಿಷಯವಾದ ಮತ ಕ್ಷೇತ್ರಗಳ ಹೆಚ್ಚಳ ಕಾಯ್ದೆಯನ್ನು, ಮುನ್ನಲೆಗೆ ತಾರದೇ, ಒಳಗಿಂದೊಳಗೆಯೇ ಮಾಡುವುದರ ಉದ್ದೇಶ ಏನು ಎಂದು ಗಮನಿಸಿದರೆ ಸಾಕು, ಕೇಂದ್ರ ಸರ್ಕಾರ ಮಾಡಲು ಹೊರಟಿರುವುದು ಕುತಂತ್ರ ಎಂದೇ ಅರ್ಥವಾಗುತ್ತದೆ.

The post ದಕ್ಷಿಣ ರಾಜ್ಯಗಳ ರಾಜಕೀಯ ಶಕ್ತಿಯನ್ನು ದುರ್ಬಲಗೊಳಿಸುವ ಕುತಂತ್ರ : ಡಾ.ಹೆಚ್ ಸಿ ಮಹದೇವಪ್ಪ. appeared first on Good News 24x7.

]]>
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ https://www.goodnews24x7.com/political-revolution-in-west-bengal-from-housemaid-to-mla-kalita-majhis-achievement%e0%b2%aa%e0%b2%b6%e0%b3%8d%e0%b2%9a%e0%b2%bf%e0%b2%ae-%e0%b2%ac%e0%b2%82%e0%b2%97%e0%b2%be%e0%b2%b3%e0%b2%a6/ Tue, 05 May 2026 10:04:00 +0000 https://www.goodnews24x7.com/?p=9491 ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯು ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಸುವರ್ಣ ಅಧ್ಯಾಯ ಬರೆದಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಳ್ವಿಕೆಯನ್ನು ಅಂತ್ಯಗೊಳಿಸಿ, 294 ಕ್ಷೇತ್ರಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಐತಿಹಾಸಿಕ ಬಹುಮತ ಸಾಧಿಸಿದೆ.…

The post ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ appeared first on Good News 24x7.

]]>

ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯು ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಸುವರ್ಣ ಅಧ್ಯಾಯ ಬರೆದಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಳ್ವಿಕೆಯನ್ನು ಅಂತ್ಯಗೊಳಿಸಿ, 294 ಕ್ಷೇತ್ರಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಐತಿಹಾಸಿಕ ಬಹುಮತ ಸಾಧಿಸಿದೆ. ಈ ಬೃಹತ್ ಗೆಲುವಿನ ನಡುವೆ ಎಲ್ಲರ ಗಮನ ಸೆಳೆದಿರುವುದು ಆಸ್ಗ್ರಾಮ್ ಕ್ಷೇತ್ರದ ನೂತನ ಶಾಸಕಿ ಕಲಿತಾ ಮಾಝಿ. ಕೇವಲ ₹2,500 ಮಾಸಿಕ ವೇತನಕ್ಕೆ ನಾಲ್ಕು ಮನೆಗಳಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಇವರು, ಇಂದು ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.

ಕಳೆದ 2021ರ ಚುನಾವಣೆಯಲ್ಲಿ ಅಲ್ಪ ಅಂತರದಿಂದ ಸೋತಿದ್ದರೂ ಎದೆಗುಂದದ ಕಲಿತಾ ಮಾಝಿ ಅವರಿಗೆ ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಮಣೆ ಹಾಕಿತ್ತು. ಸಾಮಾನ್ಯ ಕಾರ್ಯಕರ್ತರಿಗೆ ಮನ್ನಣೆ ನೀಡುವ ಪಕ್ಷದ ತಂತ್ರಗಾರಿಕೆಗೆ ಸಾಕ್ಷಿಯಾಗಿ, ಮಾಝಿ ಅವರು ತಮ್ಮ ಪ್ರತಿಸ್ಪರ್ಧಿ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳ ಭರ್ಜರಿ ಅಂತರದಿಂದ ಮಣ್ಣು ಮುಕ್ಕಿಸಿದ್ದಾರೆ. 1972ರ ನಂತರ ಮೊದಲ ಬಾರಿಗೆ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಬಿಜೆಪಿ ಪಾಳಯದಲ್ಲಿ ಮಾಝಿ ಅವರ ಗೆಲುವು “ಸಾಮಾನ್ಯ ಜನರ ಗೆಲುವು” ಎಂದು ಬಣ್ಣಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು “ಬಂಗಾಳದಲ್ಲಿ ಕಮಲ ಅರಳಿದೆ” ಎಂದು ಹೇಳುವ ಮೂಲಕ ಈ ಬದಲಾವಣೆಯನ್ನು ಸ್ವಾಗತಿಸಿದ್ದು, ಇದು ಕೇವಲ ಅಧಿಕಾರ ಬದಲಾವಣೆಯಲ್ಲ, ರಾಜ್ಯದ ರಾಜಕೀಯ ದಿಕ್ಕನ್ನೇ ಬದಲಿಸಿದ ಮಹತ್ವದ ತಿರುವು ಎನ್ನಲಾಗಿದೆ.

The post ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ appeared first on Good News 24x7.

]]>
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. https://www.goodnews24x7.com/c-t-ravi-strongly-condemned-mallikarjun-kharges-statement-on-prime-minister-modi/ Wed, 22 Apr 2026 09:34:37 +0000 https://www.goodnews24x7.com/?p=9378 ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

The post ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. appeared first on Good News 24x7.

]]>

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು ನೋಡಿದರೆ ಜನ ನೀವು ಮಾನಸಿಕ ಅಸ್ವಸ್ಥರಂತೆ ಮಾತನಾಡುತ್ತಿದ್ದೀರಿ ಎಂದು ಭಾವಿಸುತ್ತಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಂದುವರಿದು, “ನಿಜವಾದ ಭಯೋತ್ಪಾದಕರನ್ನು ನಿಮ್ಮ ಪಕ್ಷದ ನಾಯಕರು ‘ಬ್ರದರ್ಸ್’ ಎಂದು ಸಂಬೋಧಿಸುತ್ತಾರೆ, ಆದರೆ ದೇಶದ ಪ್ರಧಾನಿಯನ್ನು ಟೀಕಿಸುವಾಗ ಇಂತಹ ಕೆಳಮಟ್ಟದ ಭಾಷೆ ಬಳಸುತ್ತಿರುವುದು ಖಂಡನೀಯ,” ಎಂದು ಕಿಡಿಕಾರಿದರು.

The post ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. appeared first on Good News 24x7.

]]>
ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. https://www.goodnews24x7.com/hindi-exam-high-court-orders-to-give-marks-instead-of-grades-cm-siddaramaiah-announces-compliance/ Tue, 21 Apr 2026 11:32:56 +0000 https://www.goodnews24x7.com/?p=9356 ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ…

The post ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. appeared first on Good News 24x7.

]]>

ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ ನೀಡಿದರು.

ಸುದ್ದಿಯ ಮುಖ್ಯಾಂಶಗಳು:
ಹಿಂದಿ ಮೌಲ್ಯಮಾಪನ: ತೃತೀಯ ಭಾಷೆ ಹಿಂದಿಗೆ ಈ ವರ್ಷ ಗ್ರೇಡ್‌ ಬದಲಿಗೆ ಅಂಕಗಳನ್ನೇ ನೀಡಬೇಕು ಎಂಬ ಉಚ್ಚ ನ್ಯಾಯಾಲಯದ ನಿರ್ದೇಶನವನ್ನು ಸರ್ಕಾರ ಜಾರಿಗೆ ತರಲಿದೆ. ಹಳೆಯ ಪದ್ಧತಿಯಂತೆಯೇ ಮೌಲ್ಯಮಾಪನ ನಡೆಯಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಕೇಂದ್ರದ ವಿರುದ್ಧ ಕಿಡಿ: ಐಟಿ ಮತ್ತು ಇಡಿ ದಾಳಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿವೆ. ಬಿಜೆಪಿಯವರ ಮೇಲೆ ಯಾವುದೇ ದಾಳಿಗಳು ನಡೆಯುತ್ತಿಲ್ಲ ಎಂದು ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಮನೆ ಮೇಲಿನ ಇಡಿ ದಾಳಿಯನ್ನು ಉಲ್ಲೇಖಿಸಿ ಟೀಕಿಸಿದರು.

ಮೂಢನಂಬಿಕೆ ಮತ್ತು ಚಾಮರಾಜನಗರ: “ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆಯಲ್ಲಿ ನನಗೆ ನಂಬಿಕೆಯಿಲ್ಲ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂಬುದು ನನ್ನ ಅನುಭವ,” ಎಂದು ಸಿಎಂ ಮಾರ್ಮಿಕವಾಗಿ ನುಡಿದರು.

ಕ್ಷೇತ್ರ ಮರು ವಿಂಗಡಣೆಗೆ ವಿರೋಧ: ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯ ಪರವಾಗಿದೆ, ಆದರೆ ಮೀಸಲಾತಿಯೊಂದಿಗೆ ಕ್ಷೇತ್ರ ಮರು ವಿಂಗಡನೆಯನ್ನು ಸೇರಿಸುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಕೇಂದ್ರದ ನಡೆಯನ್ನು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳು: ಆರಂಭದಲ್ಲಿ ಗ್ಯಾರಂಟಿಗಳನ್ನು ವಿರೋಧಿಸುತ್ತಿದ್ದವರಿಗೇ ಈಗ ಇದು ಬಡವರ ಕಾರ್ಯಕ್ರಮ ಎಂಬುದು ಅರ್ಥವಾಗಿದೆ. ಅದಕ್ಕಾಗಿಯೇ ಅವರೂ ಈಗ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ಇತರ ಪ್ರಮುಖ ಪ್ರತಿಕ್ರಿಯೆಗಳು:
ಸತ್ತವರಿಗೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಜೆಡಿಎಸ್ ಶಾಸಕ ಶರಣಗೌಡ ಅವರ ಪತ್ರಕ್ಕೆ ಉತ್ತರಿಸಿದ ಸಿಎಂ, ಆಮ್ಲಜನಕ ದುರಂತದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

The post ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. appeared first on Good News 24x7.

]]>
‘ಜೈಲರ್ 2’ ಚಿತ್ರಕ್ಕೆ ಪವನ್ ಕಲ್ಯಾಣ್ ನೋ: ಅತಿಥಿ ಪಾತ್ರದ ಆಯ್ಕೆಯಲ್ಲೇ ಸಿನೆಮಾತಂಡಕ್ಕೆ ಎದುರಾಯ್ತು ದೊಡ್ಡ ವಿಘ್ನ! https://www.goodnews24x7.com/pawan-kalyan-not-in-jailer-2-the-film-crew-faced-a-big-hurdle-in-choosing-a-guest-role/ Sat, 11 Apr 2026 11:08:11 +0000 https://www.goodnews24x7.com/?p=9208 ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಸಿನೆಮಾ ‘ಜೈಲರ್ 2’ ಈಗ ಅತಿಥಿ ಪಾತ್ರವೊಂದರ ಆಯ್ಕೆಯಿಂದಾಗಿ ಸುದ್ದಿಯಲ್ಲಿದೆ. ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದರೂ, ಕೇವಲ ಐದು ದಿನಗಳ ಕಾಲ ಶೂಟಿಂಗ್ ಮಾಡಬೇಕಿರುವ ಒಂದು ಪ್ರಮುಖ ಅತಿಥಿ…

The post ‘ಜೈಲರ್ 2’ ಚಿತ್ರಕ್ಕೆ ಪವನ್ ಕಲ್ಯಾಣ್ ನೋ: ಅತಿಥಿ ಪಾತ್ರದ ಆಯ್ಕೆಯಲ್ಲೇ ಸಿನೆಮಾತಂಡಕ್ಕೆ ಎದುರಾಯ್ತು ದೊಡ್ಡ ವಿಘ್ನ! appeared first on Good News 24x7.

]]>

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಸಿನೆಮಾ ‘ಜೈಲರ್ 2’ ಈಗ ಅತಿಥಿ ಪಾತ್ರವೊಂದರ ಆಯ್ಕೆಯಿಂದಾಗಿ ಸುದ್ದಿಯಲ್ಲಿದೆ. ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದರೂ, ಕೇವಲ ಐದು ದಿನಗಳ ಕಾಲ ಶೂಟಿಂಗ್ ಮಾಡಬೇಕಿರುವ ಒಂದು ಪ್ರಮುಖ ಅತಿಥಿ ಪಾತ್ರಕ್ಕೆ ಸೂಕ್ತ ನಟ ಸಿಗದೆ ಚಿತ್ರತಂಡ ಕಂಗಾಲಾಗಿದೆ. ಈ ಮಹತ್ವದ ಪಾತ್ರಕ್ಕಾಗಿ ಮೊದಲು ನಂದಮೂರಿ ಬಾಲಕೃಷ್ಣ ಮತ್ತು ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ಅವರಿಬ್ಬರೂ ನಯವಾಗಿ ತಿರಸ್ಕರಿಸಿದ ಬೆನ್ನಲ್ಲೇ, ಈಗ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಕೂಡ ಈ ಆಫರ್ ಅನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ.

ರಾಜಕೀಯ ಒತ್ತಡದ ಕಾರಣ ಹಿಂದೆ ಸರಿದ ಪವನ್ ಕಲ್ಯಾಣ್:
ಪವನ್ ಕಲ್ಯಾಣ್ ಪ್ರಸ್ತುತ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಕ್ರಿಯ ರಾಜಕೀಯ ಜವಾಬ್ದಾರಿಗಳ ಕಾರಣದಿಂದ ಚಿತ್ರೀಕರಣಕ್ಕೆ ಸಮಯ ನೀಡಲು ಅಸಾಧ್ಯ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ತೆಲುಗಿನಲ್ಲಿಯೂ ಅವರು ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿಲ್ಲ. ರಜನಿಕಾಂತ್, ಶಿವರಾಜ್‌ಕುಮಾರ್ ಮತ್ತು ಮೋಹನ್‌ಲಾಲ್ ಅವರಂತಹ ದಿಗ್ಗಜರ ಜೊತೆ ಪವನ್ ಕಲ್ಯಾಣ್ ಅವರನ್ನು ಒಂದೇ ತೆರೆಯ ಮೇಲೆ ನೋಡಬೇಕೆಂಬ ಅಭಿಮಾನಿಗಳ ಆಸೆಗೆ ಈ ನಿರ್ಧಾರದಿಂದ ತಣ್ಣೀರೆರಚಿದಂತಾಗಿದೆ.

ಬಿಡುಗಡೆಯ ತಯಾರಿಯಲ್ಲಿ ‘ಜೈಲರ್ 2’:
ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರವನ್ನು ಸನ್ ಪಿಕ್ಚರ್ಸ್ ಅದ್ಧೂರಿಯಾಗಿ ನಿರ್ಮಿಸುತ್ತಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದಾರೆ. ಈ ಬಾರಿ ಚಿತ್ರದಲ್ಲಿ ಎಸ್‌ಜೆ ಸೂರ್ಯ ಅವರು ಪ್ರಬಲ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ ಎರಡನೇ ವಾರದಲ್ಲಿ ಸಿನಿಮಾ ತೆರೆಗೆ ಬರುವ ನಿರೀಕ್ಷೆಯಿದೆ. ಆದರೆ, ಪ್ರಮುಖ ಅತಿಥಿ ಪಾತ್ರದ ಗೊಂದಲ ಇನ್ನೂ ಬಗೆಹರಿಯದಿರುವುದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

The post ‘ಜೈಲರ್ 2’ ಚಿತ್ರಕ್ಕೆ ಪವನ್ ಕಲ್ಯಾಣ್ ನೋ: ಅತಿಥಿ ಪಾತ್ರದ ಆಯ್ಕೆಯಲ್ಲೇ ಸಿನೆಮಾತಂಡಕ್ಕೆ ಎದುರಾಯ್ತು ದೊಡ್ಡ ವಿಘ್ನ! appeared first on Good News 24x7.

]]>
ಮಹಿಳಾ ಅಭ್ಯರ್ಥಿ ಗಳಿಗೆ ಗುಡ್ ನ್ಯೂಸ್, 2029ರ ಸಂಸತ್‌ ಚುನಾವಣೆಯಲ್ಲಿ ಶೇ.33ರಷ್ಟು ಮೀಸಲು! https://www.goodnews24x7.com/good-news-for-women-candidates-33-reservation-in-2029-parliamentary-elections/ Tue, 07 Apr 2026 11:02:41 +0000 https://www.goodnews24x7.com/?p=9144 ಬಾರ್ಪೇಟಾ – ದೇಶದಲ್ಲಿ 2029ರ ಸಾರ್ವತ್ರಿಕ ಚುನಾವಣೆ ಯಿಂದ ಮಹಿಳೆಯರಿಗೆ ಸಂಸತ್ತಿನಲ್ಲಿ ಶೇ 33ರಷ್ಟು ಮೀಸಲಾತಿಯನ್ನು ಜಾರಿಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಸ್ಸಾಂನ ಬಾರ್ಪೇಟಾದಲ್ಲಿ ಸೋಮವಾರ ಚುನಾವಣಾ ರ್ಯಾಲಿಯಲ್ಲಿ ಮಾತ ನಾಡಿದ ಅವರು, ಈ ವಿಷಯ ಕುರಿತು…

The post ಮಹಿಳಾ ಅಭ್ಯರ್ಥಿ ಗಳಿಗೆ ಗುಡ್ ನ್ಯೂಸ್, 2029ರ ಸಂಸತ್‌ ಚುನಾವಣೆಯಲ್ಲಿ ಶೇ.33ರಷ್ಟು ಮೀಸಲು! appeared first on Good News 24x7.

]]>

ಬಾರ್ಪೇಟಾ – ದೇಶದಲ್ಲಿ 2029ರ ಸಾರ್ವತ್ರಿಕ ಚುನಾವಣೆ ಯಿಂದ ಮಹಿಳೆಯರಿಗೆ ಸಂಸತ್ತಿನಲ್ಲಿ ಶೇ 33ರಷ್ಟು ಮೀಸಲಾತಿಯನ್ನು ಜಾರಿಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಸ್ಸಾಂನ ಬಾರ್ಪೇಟಾದಲ್ಲಿ ಸೋಮವಾರ ಚುನಾವಣಾ ರ್ಯಾಲಿಯಲ್ಲಿ ಮಾತ ನಾಡಿದ ಅವರು, ಈ ವಿಷಯ ಕುರಿತು ಚರ್ಚಿಸಲು ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ತಿಳಿಸಿದರು. ಆದರೆ ಕೆಲ ರಾಜಕೀಯ ಪಕ್ಷಗಳು ಮತ್ತು ನಾಯಕರು ಇದರ ಬಗ್ಗೆ ಇಲ್ಲಸಲ್ಲದ ಹವದಂತಿಗಳನ್ನು ಹರಡುತ್ತಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರವನ್ನು ಖಚಿತಪಡಿಸಿಕೊಳ್ಳಲು ಅಸ್ಸಾಂನ ಮಹಿಳೆಯರು ಎಲ್ಲ ಪಕ್ಷಗಳನ್ನು ಒತ್ತಾಯಿಸಬೇಕು ಎಂದು ಮೋದಿ ಆಗ್ರಹಿಸಿದರು.

ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದ ದೇಶದ ನಾಗರಿಕ ಮಗೆ ವಿಶೇಷವಾಗಿ ಬಡವರು, ಮಧ್ಯಮ ವರ್ಗ ಮತ್ತು ರೈತರ ಮೇಲಾಗುವ ದುಷ್ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಶ್ರಮಿಸುತ್ತಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ವಿರುದ್ಧ ಪ್ರಧಾನಿ ಟೀಕೆ: ನಮ್ಮ ಸರ್ಕಾರವು 2025ರಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ
ಮೇಲೆ ‘ಆಪರೇಷನ್ ಸಿಂಧೂರ’ ನಡೆಸುತ್ತಿದ್ದರೆ. ಕಾಂಗ್ರೆಸ್‌ನವರು ಪಕ್ಕದ ದೇಶದ ರಾಗಕ್ಕೆ ತಕ್ಕಂತೆ ಹಾಡುತ್ತಿದ್ದರು. 2016ರ ಸರ್ಜಿಕಲ್ ಸ್ಟೈಕ್ ನಡೆಸಿದಾ ಗಲೂ ಕಾಂಗ್ರೆಸ್ ಹಾಗೆಯೇ ವರ್ತಿಸಿತ್ತು ಎಂದು ಪ್ರಧಾನಿ ಮೋದಿ ಅವರು ಕಾಂಗ್ರೆಸ್ ವಿರುದ್ಧ ಕಟುವಾಗಿ ಟೀಕಿಸಿದರು.

ಕಾಂಗ್ರೆಸ್‌ಗೆ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಇಲ್ಲ ಎಂದು ಆರೋಪಿಸಿದ ಅವರು, ಬಿಜೆಪಿಯು ದೀರ್ಘಾವಧಿ ಬೆಳವಣಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಯನ್ನು ಕೇಂದ್ರೀಕರಿಸಿದೆ, ದಶಕಗಳಿಂದ ಮಾಜಿ ಸೈನಿಕರ ಬೇಡಿಕೆಯಾದ ‘ಒಂದು ಶ್ರೇಣಿ, ಒಂದು ಪಿಂಚಣಿ’ ಯೋಜನೆಯ ಜಾರಿಯನ್ನು ಕಾಂಗ್ರೆಸ್ ನಿರ್ಲಕ್ಷಿಸಿತ್ತು. ಆದರೆ ನಾವು ಅವರ ಬೇಡಿಕೆಗೆ ನ್ಯಾಯ ಒದಗಿಸಿದ್ದೇವೆ. ಇಲ್ಲಿಯವರೆಗೆ ಸೇನಾ ಸಿಬ್ಬಂದಿಯ ಬ್ಯಾಂಕ್ ಖಾತೆಗಳಿಗೆ 1.24 ಲಕ್ಷ ಕೋಟಿ ವಿತರಿಸಿದ್ದೇವೆ ಎಂದು ಪ್ರಧಾನಿ ಮೋದಿ ವಿವರಿಸಿದರು. ಗಾಂಧಿ ಕುಟುಂಬವು ವಂಶ ಪಾರಂಪರ್ಯ ರಾಜಕೀಯ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಅವರು ದೂರಿದರು.

‘ಮೊಹಬ್ಬತ್ ಕಿ ದುಕಾನ್’ ಕಾಂಗ್ರೆಸ್‌ ನದ್ದು
ರಾಹುಲ್ ಗಾಂಧಿ ಅವರು ‘ಮೊಹಬ್ಬತ್ ಕಿ ದುಕಾನ್’ ಹೇಳಿಕೆಗೆ ಪ್ರತಿಕ್ರಿಯಿಸಿದ ಮೋದಿ, ಕಾಂಗ್ರೆಸ್‌ನದ್ದು ಸುಳ್ಳಿನ ಅಂಗಡಿ ಆಗಿದೆ ಎಂದು ವ್ಯಂಗ್ಯ ವಾಡಿದ್ದಾರೆ.

ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂ ಗಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಲ್ಲಿ ಅವರು ಚುನಾವಣೆಗೂ ಮುನ್ನ ದೊಡ್ಡ ಭರವಸೆಗಳನ್ನು ನೀಡಿದ್ದರು. ಆದರೆ ಅವುಗಳನ್ನು ಇಲ್ಲಿಯವರೆಗೂ ಈಡೇ ರಿಸಿಲ್ಲ. ಹೀಗಾಗಿ ಕಾಂಗ್ರೆಸ್‌ನ ಸುಳ್ಳು ಭರವಸೆಗಳಿಗೆ ಬಲಿಯಾಗಬೇಡಿ ಎಂದು ಪ್ರಧಾನಿ ಹೇಳಿದರು.

The post ಮಹಿಳಾ ಅಭ್ಯರ್ಥಿ ಗಳಿಗೆ ಗುಡ್ ನ್ಯೂಸ್, 2029ರ ಸಂಸತ್‌ ಚುನಾವಣೆಯಲ್ಲಿ ಶೇ.33ರಷ್ಟು ಮೀಸಲು! appeared first on Good News 24x7.

]]>
ಉಪನಾಯಕ ಸ್ಥಾನ ಕಳೆದುಕೊಂಡ ಬಳಿಕ ರಾಘವ್ ಚಡ್ಡಾ ಮೊದಲ ವಿಡಿಯೋ – ಮೌನವೇ ಸಂದೇಶವಾ? https://www.goodnews24x7.com/raghav-chadhas-first-video-after-losing-the-deputy-leaders-post-is-silence-a-message/ Fri, 03 Apr 2026 09:41:11 +0000 https://www.goodnews24x7.com/?p=9122 ನವದೆಹಲಿ: Raghav Chadha ಅವರನ್ನು ರಾಜ್ಯಸಭೆಯ ಉಪನಾಯಕ ಹುದ್ದೆಯಿಂದ Aam Aadmi Party ತೆಗೆದುಹಾಕಿದ ಬಳಿಕ, ಅವರು ಬಿಡುಗಡೆ ಮಾಡಿರುವ ಮೊದಲ ವಿಡಿಯೋ ಇದೀಗ ಚರ್ಚೆಗೆ ಗ್ರಾಸವಾಗಿದೆ. Arvind Kejriwal ನೇತೃತ್ವದ ಎಎಪಿ ಪಕ್ಷದ ಈ ನಿರ್ಧಾರ ರಾಜಕೀಯ ವಲಯದಲ್ಲಿ ಸಾಕಷ್ಟು…

The post ಉಪನಾಯಕ ಸ್ಥಾನ ಕಳೆದುಕೊಂಡ ಬಳಿಕ ರಾಘವ್ ಚಡ್ಡಾ ಮೊದಲ ವಿಡಿಯೋ – ಮೌನವೇ ಸಂದೇಶವಾ? appeared first on Good News 24x7.

]]>

ನವದೆಹಲಿ: Raghav Chadha ಅವರನ್ನು ರಾಜ್ಯಸಭೆಯ ಉಪನಾಯಕ ಹುದ್ದೆಯಿಂದ Aam Aadmi Party ತೆಗೆದುಹಾಕಿದ ಬಳಿಕ, ಅವರು ಬಿಡುಗಡೆ ಮಾಡಿರುವ ಮೊದಲ ವಿಡಿಯೋ ಇದೀಗ ಚರ್ಚೆಗೆ ಗ್ರಾಸವಾಗಿದೆ.

Arvind Kejriwal ನೇತೃತ್ವದ ಎಎಪಿ ಪಕ್ಷದ ಈ ನಿರ್ಧಾರ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿತ್ತು. ಈ ಹಿನ್ನೆಲೆ ಚಡ್ಡಾ ಅವರ ಮೊದಲ ಪ್ರತಿಕ್ರಿಯೆ ಏನಿರಬಹುದು ಎಂಬ ನಿರೀಕ್ಷೆ ಹೆಚ್ಚಾಗಿತ್ತು.

ಆದರೆ, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಅವರು ಹಂಚಿಕೊಂಡ ವಿಡಿಯೋದಲ್ಲಿ ಯಾವುದೇ ವಿವಾದಾತ್ಮಕ ಹೇಳಿಕೆಗಳಿಲ್ಲ. ತಮ್ಮನ್ನು ಉಪನಾಯಕ ಸ್ಥಾನದಿಂದ ತೆಗೆದುಹಾಕಿರುವ ವಿಷಯವಾಗಲಿ, ಪಕ್ಷದ ಒಳಗಿನ ಮನಸ್ತಾಪವಾಗಲಿ – ಯಾವುದನ್ನೂ ಅವರು ಉಲ್ಲೇಖಿಸಿಲ್ಲ.

ಬದಲಾಗಿ, ಆ ವಿಡಿಯೋದಲ್ಲಿ ಅವರು ರಾಜ್ಯಸಭೆಯಲ್ಲಿ ಇತ್ತೀಚೆಗೆ ಮಾತನಾಡಿರುವ ವಿಷಯಗಳ ತುಣುಕುಗಳನ್ನಷ್ಟೇ ಸೇರಿಸಲಾಗಿದೆ. ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ಅವರು ಸದನದಲ್ಲಿ ಎತ್ತಿದ ಧ್ವನಿಯನ್ನೇ ಹೈಲೈಟ್ ಮಾಡಿದ್ದಾರೆ.

ಮೊಬೈಲ್ ಡೇಟಾ ಪ್ಯಾಕ್ ಅವಧಿ, ಪಿತೃತ್ವ ರಜೆ ಹಕ್ಕುಗಳು, ಗಿಗ್ ಕಾರ್ಮಿಕರ ಸಮಸ್ಯೆಗಳು, ಆಹಾರದಲ್ಲಿ ಕಲಬೆರಕೆ, ಬ್ಯಾಂಕ್ ದಂಡಗಳು ಸೇರಿದಂತೆ ಹಲವು ಜನಪರ ವಿಚಾರಗಳನ್ನು ಅವರು ಪ್ರಸ್ತಾಪಿಸಿದ್ದನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

ಇದೀಗ, ಚಡ್ಡಾ ಅವರ ಬದಲಿಗೆ ಪಂಜಾಬ್‌ನ ಸಂಸದ ಅಶೋಕ್ ಮಿತ್ತಲ್ ಅವರನ್ನು ಪಕ್ಷವು ಹೊಸ ಉಪನಾಯಕರಾಗಿ ನೇಮಿಸಿದೆ. ಪಕ್ಷವು ಈ ಬದಲಾವಣೆಗೆ ಸ್ಪಷ್ಟ ಕಾರಣ ನೀಡದಿದ್ದರೂ, ಕಳೆದ ಕೆಲವು ತಿಂಗಳಿಂದ ಈ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿದ್ದವು.

ಈ ನಡುವೆ, ಮೊದಲ ಪ್ರತಿಕ್ರಿಯೆಯಲ್ಲಿ ಚಡ್ಡಾ ಅವರು ಪಕ್ಷದ ಮೇಲೆ ಯಾವುದೇ ಅಸಮಾಧಾನ ತೋರಿಸದೇ, ತಮ್ಮ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ನೀಡಿದ್ದಕ್ಕಾಗಿ ನಾಯಕತ್ವಕ್ಕೆ ಧನ್ಯವಾದ ತಿಳಿಸಿದ್ದಾರೆ.

ಒಟ್ಟಾರೆ, ವಿವಾದದ ನಡುವೆ ಮೌನವನ್ನು ಆಯ್ಕೆ ಮಾಡಿಕೊಂಡಿರುವ ಚಡ್ಡಾ ಅವರ ನಡೆ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

The post ಉಪನಾಯಕ ಸ್ಥಾನ ಕಳೆದುಕೊಂಡ ಬಳಿಕ ರಾಘವ್ ಚಡ್ಡಾ ಮೊದಲ ವಿಡಿಯೋ – ಮೌನವೇ ಸಂದೇಶವಾ? appeared first on Good News 24x7.

]]>