politician Archives - Good News 24x7 https://www.goodnews24x7.com/tag/politician/ Kannada Sun, 31 Aug 2025 12:50:36 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg politician Archives - Good News 24x7 https://www.goodnews24x7.com/tag/politician/ 32 32 ಬಿಗ್​​ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್ https://www.goodnews24x7.com/bigg-boss-season-12-date-announced-by-kiccha-sudeep/ Sun, 31 Aug 2025 12:50:36 +0000 https://www.goodnews24x7.com/?p=7163 ಬಿಗ್​​ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ…

The post ಬಿಗ್​​ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್ appeared first on Good News 24x7.

]]>

ಬಿಗ್​​ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ನಟ ಸುದೀಪ್ ಅವರು ಬಿಗ್​ಬಾಸ್ ಕನ್ನಡ ಸೀಸನ್ 12ರ ಪ್ರಾರಂಭದ ದಿನಾಂಕ ಘೋಷಣೆ ಮಾಡಿದ್ದಾರೆ.

ಎಲ್ಲೆಡೆ ಬಿಗ್​ಬಾಸ್ ಸೀಸನ್ ಪ್ರಾರಂಭವಾಗಿದೆ. ಹಿಂದಿ ಬಿಗ್​​ಬಾಸ್ ಕಳೆದ ವಾರವಷ್ಟೆ ಪ್ರಾರಂಭವಾಗಿದೆ. ಕನ್ನಡ ಬಿಗ್​ಬಾಸ್​ನ 12ರ ಮೊದಲ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿ ಇತ್ತು. ಚಾನೆಲ್​​ನವರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ಸುದೀಪ್ ಅವರು ಬಿಗ್​​ಬಾಸ್ ಸೀಸನ್ 12 ಪ್ರಾರಂಭವಾಗುವ ದಿನಾಂಕವನ್ನು ಘೋಷಣೆ ಮಾಡಿಬಿಟ್ಟಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಸುದೀಪ್ ಈ ಬಾರಿಯ ಬಿಗ್​​ಬಾಸ್ ಪ್ರಾರಂಭದ ದಿನಾಂಕ ಯಾವುದೆಂದು ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಇನ್ನೂ ಹಲವು ಗಣ್ಯರು ಭಾಗಿ ಆಗಿದ್ದರು. ಇದೇ ಕಾರ್ಯಕ್ರಮದಲ್ಲಿ ನಟ ಸುದೀಪ್ ಸಹ ಅತಿಥಿಯಾಗಿ ಭಾಗಿ ಆಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಸುದೀಪ್ ಬಿಗ್​​ಬಾಸ್ ಬಗ್ಗೆಯೂ ಮಾತನಾಡಿದರು.

 

ಅಭಿಮಾನಿಗಳ ಕೂಗಾಟ, ಚಪ್ಪಾಳೆ, ಶಿಳ್ಳೆಗಳ ನಡುವೆ ಮಾತನಾಡಿದ ಸುದೀಪ್, ‘ಶೀಘ್ರವೇ ತೆರೆ ಮೇಲೆ ಬರಲಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ ಆಶೀರ್ವಾದ ಮಾಡಿ’ ಎಂದರು. ಆ ಮೂಲಕ ಬಿಗ್​​ಬಾಸ್ ಸೀಸನ್ 12 ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ ಎಂದು ಘೋಷಣೆ ಮಾಡಿದರು. ಈ ಬಾರಿಯೂ ಸುದೀಪ್ ಅವರೇ ಬಿಗ್​​ಬಾಸ್ ನ ನಿರೂಪಣೆ ಮಾಡಲಿದ್ದು, ದಿನಾಂಕವನ್ನೂ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿಯ ಬಿಗ್​​ಬಾಸ್ ಸೀಸನ್ 11 ಸೆಪ್ಟೆಂಬರ್ 29ರಂದು ಪ್ರಾರಂಭವಾಗಿತ್ತು. ಈ ಬಾರಿ ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ. ಮೂಲಗಳ ಪ್ರಕಾರ ಈಗಾಗಲೇ ಬಹುತೇಕ ಸ್ಪರ್ಧಿಗಳ ಆಯ್ಕೆ ಆಗಿದ್ದು, ಕೆಲವರ ಆಯ್ಕೆಯಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ಕಳೆದ ಸೀಸನ್ ನಿರೂಪಣೆ ಮಾಡುವಾಗ ತಾವು ಇನ್ನು ಮುಂದೆ ಬಿಗ್​​ಬಾಸ್ ನಿರೂಪಣೆ ಮಾಡುವುದಿಲ್ಲ ಇದೇ ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಆಯೋಜಕರು ಸುದೀಪ್ ಅವರ ಮನವೊಲಿಸುವಲ್ಲಿ ಸಫಲರಾಗಿದ್ದಾರೆ. ಆಯೋಜಕರ ಒತ್ತಡಕ್ಕೆ ಮಣಿದು ಸುದೀಪ್ ಅವರು ಬಿಗ್​​ಬಾಸ್ ನಿರೂಪಣೆಗೆ ಒಪ್ಪಿಗೆ ನೀಡಿದ್ದಾರೆ.

The post ಬಿಗ್​​ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್ appeared first on Good News 24x7.

]]>
ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ -ಮುಖ್ಯಮಂತ್ರಿ ಸಿದ್ದರಾಮಯ್ಯ. https://www.goodnews24x7.com/kempegowda-is-a-visionary-politician-who-has-built-an-inclusive-society-chief-minister-siddaramaiah/ Fri, 27 Jun 2025 11:23:24 +0000 https://www.goodnews24x7.com/?p=4720 ಬೆಂಗಳೂರು : ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು…

The post ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ -ಮುಖ್ಯಮಂತ್ರಿ ಸಿದ್ದರಾಮಯ್ಯ. appeared first on Good News 24x7.

]]>

ಬೆಂಗಳೂರು : ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ಬಾಬು ಜಗಜೀವನ ರಾಮ್ ಭವನ ದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಪ್ರಾರಂಭ
ಇಂದು ಸರ್ಕಾರದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ನಾಡಿನ ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು, 2017ರಲ್ಲಿ ನಮ್ಮ ಸರ್ಕಾರ ಪ್ರತಿ ವರ್ಷ ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ತೀರ್ಮಾನವನ್ನು ಕೈಗೊಂಡಿತು. ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಪ್ರಾರಂಭಿಸಲಾಯಿತು.ಮಾಗಡಿಯ ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿಯ ಅಭಿವೃದ್ಧಿ ಕಾರ್ಯವನ್ನು ಸರ್ಕಾರ ಕೈಗೆತ್ತಿಗೊಂಡಿದೆ ಎಂದರು.


ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿದ ಕೀರ್ತಿ ಕಂಪೇಗೌಡರದ್ದು

ಬೆಂಗಳೂರು ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಲು ಕೆಂಪೇಗೌಡರೇ ಮೂಲ ಕಾರಣ.ವಿಶ್ವಮಟ್ಟದಲ್ಲಿ ಬೆಂಗಳೂರು ಅತಿವೇಗದಲ್ಲಿ ಬೆಳೆಯುತ್ತಿರುವ ನಗರ. ಎಲ್ಲ ಜನರನ್ನೊಳಗೊಂಡ ಅಭಿವೃದ್ಧಿಗೊಳಿಸುವ, ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಕೈಗೊಂಡಿದ್ದರು. ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣವೇ ನಮ್ಮ ಸಂವಿಧಾನದ ಆಶಯ. 500 ವರ್ಷಗಳ ಹಿಂದೆಯೇ ನಾಡಪ್ರಭು ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಿಸುವ ದೂರದೃಷ್ಟಿಯನ್ನು ಹೊಂದಿದ್ದ ಮುತ್ಸದ್ದಿ ನಾಯಕರಾಗಿದ್ದರು. ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿ, ಬೆಂಗಳೂರನ್ನು ವಾಣಿಜ್ಯ ಕೇಂದ್ರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ.

ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರು ಕಾರಣ

ಹಂಪಿ ಬಹಳ ಪ್ರವರ್ಧಮಾನಕ್ಕೆ ಬಂದಿದ್ದ ಕಾಲದಲ್ಲಿ ಪ್ರೇರಣೆ ಪಡೆದು ಬೆಂಗಳೂರನ್ನು ಅಭಿವೃದ್ಧಿಪಡಿಸುವ ಉದ್ದೇಶ ಕೆಂಪೇಗೌಡರಿಗಿತ್ತು.ಹಾಗಾಗಿ ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ, ಸ್ಟಾರ್ಟ್ ಅಪ್ ರಾಜಧಾನಿ , ಶೈಕ್ಷಣಿಕ ಹಾಗೂ ಆರೋಗ್ಯ ಕೇಂದ್ರವಾಗಿದ್ದರೆ ಅದಕ್ಕೆ ಈ ನಗರದ ಅಡಿಪಾಯ ಹಾಕಿದ ಕೆಂಪೇಗೌಡರು ಕಾರಣ ಎಂದರು.

ಬೆಂಗಳೂರಿನ ಅಭಿವೃದ್ಧಿ ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ
ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಬಹುತೇಕ ಜಯಂತಿಗಳನ್ನು ಆಚರಣೆಗೆ ತಂದಿರುವುದು ಕಾಂಗ್ರೆಸ್ ಸರ್ಕಾರ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದು ನಮ್ಮ ಸರ್ಕಾರ. ಸರ್ಕಾರದ ವತಿಯಿಂದ 33 ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಜಯಂತಿಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿರುವ ಬಗ್ಗೆ ಅಭಿಮಾನ, ಗೌರವವಿದೆ. ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಕೃಷ್ಣ ಜಯಂತಿ, ಮಹಾವೀರ ಜಯಂತಿ, ವಾಮನ ಜಯಂತಿ ಸೇರಿದಂತೆ ಮುಖ್ಯವಾದ ಜಯಂತಿಗಳ ಆಚರಣೆಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ.

ಕೆಂಪೇಗೌಡರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ.
ಕೆಂಪೇಗೌಡರ ಆಡಳಿತ ಜನಪರವಾಗಿದ್ದು, ಅವರನ್ನು ನೆನೆದು ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಕೆಂಪೇಗೌಡರ ಬಗ್ಗೆ ಅಗಾಧ ಗೌರವವನ್ನು ಇಟ್ಟುಕೊಂಡಿದ್ದು, ಅವರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ. ಎಲಾ ಜಾತಿಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದರು.

ಪ್ರಶಸ್ತಿಗೆ ಭಾಜನವಾಗಿದೆ ಸಂಸ್ಥೆಗಳಿಗೆ ಅಭಿನಂದನೆ
ಐಐಎಸ್ಸಿ ,ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ,ಮೈಸೂರು ಸೋಪ್ಸ್ ಅಂಡ್ ಡಿಟಜೆಂಟ್ಸ್ ಸಂಸ್ಥೆ ಪ್ರಶಸ್ತಿಗೆ ಭಾಜನವಾಗಿದೆ. ಈ ಸಂಸ್ಥೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಮುಖ್ಯಮಂತ್ರಿಗಳು ಅಭಿನಂದಿಸಿದರು.

ಕೆಂಪೇಗೌಡ ಭವನಕ್ಕೆ ಶಂಕುಸ್ಥಾಪನೆ
ಕಳೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಸುಮನಹಳ್ಳಿ ವೃತ್ತದಲ್ಲಿ ಕೆಂಪೇಗೌಡ ಭವನವನ್ನು ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಆದಷ್ಟೂ ಶೀಘ್ರವಾಗಿ ಕಟ್ಟಡವನ್ನು ನಿರ್ಮಾಣ ಮಾಡಿ ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

The post ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ -ಮುಖ್ಯಮಂತ್ರಿ ಸಿದ್ದರಾಮಯ್ಯ. appeared first on Good News 24x7.

]]>
ಬಿ.ಜೆ.ಪಿ ಪಕ್ಷದಿಂದ ಶಾಸಕ ಎಸ್.ಟಿ ಸೋಮಶೇಖರ್ ಉಚ್ಚಾಟನೆ….!! https://www.goodnews24x7.com/%e0%b2%ac%e0%b2%bf-%e0%b2%9c%e0%b3%86-%e0%b2%aa%e0%b2%bf-%e0%b2%aa%e0%b2%95%e0%b3%8d%e0%b2%b7%e0%b2%a6%e0%b2%bf%e0%b2%82%e0%b2%a6-%e0%b2%b6%e0%b2%be%e0%b2%b8%e0%b2%95-%e0%b2%8e%e0%b2%b8%e0%b3%8d/ Tue, 27 May 2025 11:49:10 +0000 https://www.goodnews24x7.com/?p=4097 ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬರೋಬ್ಬರಿ ಎರಡು ವರ್ಷದ ಬಳಿಕ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಕ್ರಮಕೈಗೊಂಡಿದೆ. ಇನ್ನು ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್…

The post ಬಿ.ಜೆ.ಪಿ ಪಕ್ಷದಿಂದ ಶಾಸಕ ಎಸ್.ಟಿ ಸೋಮಶೇಖರ್ ಉಚ್ಚಾಟನೆ….!! appeared first on Good News 24x7.

]]>

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬರೋಬ್ಬರಿ ಎರಡು ವರ್ಷದ ಬಳಿಕ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಕ್ರಮಕೈಗೊಂಡಿದೆ. ಇನ್ನು ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳನಂತಿದೆ.ಬಿಜೆಪಿಯಿಂದ ಗೆದ್ದು ವಿಧಾನಸಭೆ ಪ್ರವೇಶಿಸಿರುವ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅಮವಾಸ್ಯೆ ದಿನ ಒಳ್ಳೆ ನಿರ್ಧಾರ ಕೈಗೊಂಡಿದ್ದಾರೆ. ಬೆಳಗ್ಗೆ 10.30ರಲ್ಲಿ ಮೊಬೈಲ್ ನೋಡಿದಾಗ ಈ ವಿಚಾರ ತಿಳಿಯಿತು. ಚುನಾವಣೆ ವೇಳೆಗೆ ಬಿಜೆಪಿಯಲ್ಲಿ ಇನ್ನೂ 10-12 ಸೀಟ್ ಖಾಲಿ ಆಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಪಕ್ಷದಿಂದ ನಮ್ಮನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿತ್ತು. ಆದ್ರೆ ಯಾವಾಗ ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿರಲಿಲ್ಲ. 6 ವರ್ಷಗಳ ಕಾಲ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಾರೆ. ನೋಟಿಸ್ ಕೊಡುವ ಮುನ್ನ ಅಮಿತ್ ಶಾ ನನ್ನ ಜತೆ ಮಾತಾಡಿದ್ದರು. ಕ್ಷೇತ್ರದಲ್ಲಿರುವ ಭಿನ್ನಮತದ ಬಗ್ಗೆ ಅಮಿತ್ ಶಾ ಜತೆ ಮಾತನಾಡಿದ್ದೆ. ಸಮಸ್ಯೆ ಬಗೆಹರಿಸದಿದ್ದರೆ ಪಕ್ಷ ತೊರೆಯುವುದಾಗಿ ನಾನು ಹೇಳಿದ್ದೆ. ಬಿಜೆಪಿಯ ಯಾರೂ ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಲಿಲ್ಲ. ಅಮಾವಾಸ್ಯೆಯ ದಿನ ಒಳ್ಳೆಯದು ಮಾಡಿದ್ದಾರೆ. ಸಂತೋಷವಾಗಿದ್ದೇನೆ. ಚುನಾವಣೆ ವೇಳೆಗೆ ಬಿಜೆಪಿಯಲ್ಲಿ ಇನ್ನೂ 10-12 ಸೀಟ್ ಖಾಲಿ ಆಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದರು.

ಉಚ್ಚಾಟನೆ ಮಾಡಿದವರಿಗೆ ಚಾಮುಂಡೇಶ್ವರಿ ಆರೋಗ್ಯ ಭಾಗ್ಯ ಕೊಟ್ಟು ಕಾಪಾಡಲಿ. ನಮ್ಮ ಉಚ್ಚಾಟನೆಗೂ, ಯತ್ನಾಳ್ ಉಚ್ಚಾಟನೆಗೂ ತುಂಬಾ ವ್ಯತ್ಯಾಸವಿದೆ. ಯತ್ನಾಳ್ ರನ್ನ ಅಂದೇ ಉಚ್ಚಾಟಿಸಿದ್ದರೆ ಬಿಜೆಪಿ ಸರ್ಕಾರ ಹೋಗುತ್ತಿರಲಿಲ್ಲ. ಬಿಜೆಪಿಯ ಒಬ್ಬ ಶಾಸಕ ವಿಧಾನಸೌಧದಲ್ಲಿ ರೇಪ್ ಮಾಡುತ್ತಾನೆ. ವಿಪಕ್ಷ ನಾಯಕರಿಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಪ್ರಯತ್ನ ಮಾಡುತ್ತಾರೆ. ಒಕ್ಕಲಿಗ ಹೆಣ್ಮಗಳನ್ನು ಮಂಚಕ್ಕೆ ಕರೆಯುವುದನ್ನು ಎಲ್ಲಾದ್ರೂ ಕೇಳಿದ್ದೀರಾ? ಬಿಜೆಪಿ ಪ್ರಾಮಾಣಿಕ ಆಗಿದ್ದರೆ ಇಂತಹವರನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಪರೋಕ್ಷವಾಗಿ ಶಾಸಕ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು. ಉಚ್ಚಾಟನೆಯಲ್ಲಿ ಬಿಎಸ್ವೈ, ವಿಜಯೇಂದ್ರರದ್ದು ಯಾವ ಪಾತ್ರ. ಉಳಿದ ನಾಯಕರೂ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ನಾನಾಗಿ ಹೋಗಿ ಮೇಲೆ ಬಿದ್ದು ಕೇಳುವ ಮನಸ್ಸು ನನ್ನದಲ್ಲ. ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉಳಿಸಿಕೊಳ್ಳುವ ಪ್ರಯತ್ನ ಮಾಡ್ಲಿಲ್ಲ. ಇಬ್ಬರೂ ಕೂಡ 100% ನನ್ನ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ಅವರು ಪ್ರಯತ್ನ ಮಾಡಿದ್ದರೆ ಇಂದು ನಾನು ಉಚ್ಚಾಟನೆ ಆಗುತ್ತಿರಲಿಲ್ಲ ಎಂದರು.

The post ಬಿ.ಜೆ.ಪಿ ಪಕ್ಷದಿಂದ ಶಾಸಕ ಎಸ್.ಟಿ ಸೋಮಶೇಖರ್ ಉಚ್ಚಾಟನೆ….!! appeared first on Good News 24x7.

]]>
ಜನಾರ್ದನ ರೆಡ್ಡಿಗೆ ಮತ್ತೆ ಜೈಲು ವಾಸ ಫಿಕ್ಸ್,…. ಶಾಸಕ ಸ್ಥಾನಕ್ಕೂ ಕುತ್ತು!…. https://www.goodnews24x7.com/%e0%b2%9c%e0%b2%a8%e0%b2%be%e0%b2%b0%e0%b3%8d%e0%b2%a6%e0%b2%a8-%e0%b2%b0%e0%b3%86%e0%b2%a1%e0%b3%8d%e0%b2%a1%e0%b2%bf%e0%b2%97%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%86-%e0%b2%9c/ Tue, 06 May 2025 12:32:25 +0000 https://www.goodnews24x7.com/?p=3682 ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು…

The post ಜನಾರ್ದನ ರೆಡ್ಡಿಗೆ ಮತ್ತೆ ಜೈಲು ವಾಸ ಫಿಕ್ಸ್,…. ಶಾಸಕ ಸ್ಥಾನಕ್ಕೂ ಕುತ್ತು!…. appeared first on Good News 24x7.

]]>

ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗಾದ್ರೆ, ರೆಡ್ಡಿ ಮತ್ತೆ ಜೈಲಿಗೆ ಹೋಗುತ್ತಾರಾ? ಅವರ ಶಾಸಕ ಸ್ಥಾನದ ಗತಿ ಏನು? ಹಾಗೇ ಅವರ ಮುಂದಿರುವ ಆಯ್ಕೆಗಳೇನು ಎನ್ನುವ ಮಾಹಿತಿ ಇಲ್ಲಿದೆ.ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬರೋಬ್ಬರಿ 884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್ , ಮಾಜಿ ಸಚಿವ, ಹಾಲಿ ಶಾಸಕ ಜನಾರ್ಧನ ರೆಡ್ಡಿಯನ್ನು ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಜೊತೆಹೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಸಾಬೀತಾಗಿದ್ದು,ಈಗಾಗಲೇ ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆಯನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ಮನವಿ ಮಾಡಿದ್ದಾರೆ. ಆದ್ರೆ, ಸಿಬಿಐ ವಿಶೇಷ ಕೋರ್ಟ್ , ರೆಡ್ಡಿ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್ ಆದಂತಾಗಿದೆ.

ನ್ಯಾಯಾಲಯದ ವಿಚಾರಣೆ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ಇಂದು (ಮೇ 06) ಬೆಳಗ್ಗೆ ಹೈದರಾಬಾದ್ ಗೆ ತೆರಳಿದ್ದರು. ಇನ್ನು ಏಳು ವರ್ಷ ನೀಡಿರುವ ಶಿಕ್ಷೆಯಲ್ಲಿ ಕಡಿಮೆ ಮಾಡಿ ಎಂದು ಜನಾರ್ದನ ರೆಡ್ಡಿ ಅವರು ಕೋರ್ಟ್ಗೆ ಮನವಿ ಮಾಡಿದ್ದಾರೆ. ನಾನು ಈಗಾಗಲೇ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಕಳೆದಿದ್ದೇನೆ. ನನ್ನ ವಯಸ್ಸು ಮತ್ತು ನಾನು ಮಾಡಿದ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ. ಬಳ್ಳಾರಿ ಮತ್ತು ಗಂಗಾವತಿಯ ಜನರು ನನ್ನನ್ನು ಭಾರಿ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ನಾನು ಸಾರ್ವಜನಿಕ ಸೇವೆಗೆ ಸಮರ್ಪಿತನಾಗಿದ್ದೇನೆ . ಸಾರ್ವಜನಿಕರಿಂದ ನನಗೆ ಸಿಗುವ ಬೆಂಬಲವು ಆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ದಯವಿಟ್ಟು ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್ಗೆ ಅಂಗಲಾಚಿದ್ದಾರೆ. ಆದ್ರೆ, ಕೋರ್ಟ್ ನಿರಾಕರಿಸಿದೆ. ನಿಮಗೆ 10 ವರ್ಷಗಳ ಶಿಕ್ಷೆಯನ್ನು ಏಕೆ ನೀಡಬಾರದು? ನೀವು ಜೀವಾವಧಿ ಶಿಕ್ಷೆಗೆ ಅರ್ಹರು ಎಂದು ತಪರಾಕಿ ಹಾಕಿ ರೆಡ್ಡಿ ಮನವಿಯನ್ನು ತಿರಸ್ಕರಿಸಿದೆ. 3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗಿರುವುದರಿಂದ ಶಾಸಕ ಜನಾರ್ದನ ರೆಡ್ಡಿ ಜೈಲು ಖಚಿತವಾಗಿದೆ. ಇನ್ನು ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಹಾಗೇ ಒಂದು ತಿಂಗಳೊಳಗೆ ರೆಡ್ಡಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಹೈಕೋರ್ಟ್ನಿಂದ ತಡೆ ಸಿಕ್ಕರಷ್ಟೇ ರೆಡ್ಡಿ ಬಚಾವ್ ಆಗಲಿದ್ದಾರೆ. ಹೀಗಾಗಿ ರೆಡ್ಡಿ ಜಾಮೀನಿಗಾಗಿ ಹೈದರಾಬಾದ್ನ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಬೇಕು. ಆದರೆ, ಹೈಕೋರ್ಟ್ ಜಾಮೀನು ನೀಡುವವರೆಗೆ ಜೈಲಿನಲ್ಲಿರಬೇಕು. ಇನ್ನು ಶಿಕ್ಷೆಗೆ ತಡೆಯಾಜ್ಞೆ ಸಿಗದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿಯೂ ಇದೆ.ಆಂಧ್ರ ಪ್ರದೇಶದಲ್ಲಿ ವೈ.ಎಸ್ ರಾಜಶೇಖರರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಗಣಿಗಾರಿಕೆ ಮಂಜೂರಾತಿ ವೇಳೆ ಇಲಾಖೆಗಳಿಂದ ಅಕ್ರಮವಾಗಿದೆ. ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ಆಗಿದೆ ಎಂದು ಆರೋಪಿಸಲಾಗಿತ್ತು. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಇವರ ಮೇಲಿದೆ. ಈಗಾಗಲೇ ಇದೇ ಪ್ರಕರಣದಲ್ಲಿ ಮೂರುವರೇ ವರ್ಷ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಆಚೆ ಬಂದಿದ್ದಾರೆ.

 

The post ಜನಾರ್ದನ ರೆಡ್ಡಿಗೆ ಮತ್ತೆ ಜೈಲು ವಾಸ ಫಿಕ್ಸ್,…. ಶಾಸಕ ಸ್ಥಾನಕ್ಕೂ ಕುತ್ತು!…. appeared first on Good News 24x7.

]]>
ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧದ ಭೂ ಒತ್ತುವರಿ ಆರೋಪ ; ತೆರೆವು ಕಾರ್ಯಾಚರಣೆ. https://www.goodnews24x7.com/%e0%b2%b9%e0%b3%86%e0%b2%9a%e0%b3%8d%e0%b2%a1%e0%b2%bf-%e0%b2%95%e0%b3%81%e0%b2%ae%e0%b2%be%e0%b2%b0%e0%b2%b8%e0%b3%8d%e0%b2%b5%e0%b2%be%e0%b2%ae%e0%b2%bf-%e0%b2%95%e0%b3%81%e0%b2%9f%e0%b3%81%e0%b2%82/ Tue, 18 Mar 2025 06:58:17 +0000 https://www.goodnews24x7.com/?p=2797 ರಾಮನಗರ :- ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಕೇಳಿ ಬಂದಿರುವ ಭೂಒತ್ತುವರಿ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಇದೀಗ ಕಂದಾಯ ಇಲಾಖೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಮುಂದಾಗಿದೆ.…

The post ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧದ ಭೂ ಒತ್ತುವರಿ ಆರೋಪ ; ತೆರೆವು ಕಾರ್ಯಾಚರಣೆ. appeared first on Good News 24x7.

]]>

ರಾಮನಗರ :- ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಕೇಳಿ ಬಂದಿರುವ ಭೂಒತ್ತುವರಿ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಇದೀಗ ಕಂದಾಯ ಇಲಾಖೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಮುಂದಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ. ಹೆಚ್ಡಿಕೆ ಕುಟುಂಬದ ವಿರುದ್ಧ ಕೇಳಿಬಂದಿರುವ ಭೂಒತ್ತುವರಿ ಆರೋಪ ಸಂಬಂಧ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ರಚನೆ ಮಾಡಿದ್ದರು. ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17, 79 ರಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಂದಾಯ ಇಲಾಖೆ, ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆದಿದೆ. ಇದೀಗ ಸರ್ಕಾರಕ್ಕೆ ಸರ್ವೆ ವರದಿ ಸಲ್ಲಿಸಿ ಒತ್ತುವರಿ ತೆರವು ಮಾಡಲು ಇಲಾಖೆ ಮುಂದಾಗಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳಿಂದ ಒತ್ತುವರಿ ತೆರವು ಸಾಧ್ಯತೆ ಇದೆ. ಒತ್ತುವರಿ ತೆರವಿಗೆ ಕುಮಾರಸ್ವಾಮಿ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಸಿದ್ಧವಾಗಿವೆ.

 

 

 

 

ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಕುಟುಂಬದವರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿತ್ತು. ಇದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣ ಸಂಬಂಧ ಹೈಕೋರ್ಟಿನಲ್ಲಿ ಸೋಮವಾರ ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ಕೆ ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಎಸ್ಐಟಿ ರಚನೆ ಮಾಡಿದ್ದಾರೆ. ಹಾಗಾದರೆ ಕಂದಾಯ ಇಲಾಖೆ ಅಷ್ಟೊಂದು ಶಕ್ತಿಶಾಲಿಯಾಗಿದೆಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಭೂ ಒತ್ತುವರಿ ತೆರವು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಾಗಾದರೆ ಉಳಿದ 71 ಎಕರೆ ಭೂಮಿ ಒತ್ತುವರಿಯನ್ನು ತೆರವು ಮಾಡಬೇಕಾಗಿದೆ ಅಲ್ಲವೇ ಎಂದು ವಿಭಾಗಿಯ ಪೀಠ ಸರ್ಕಾರವನ್ನು ಪ್ರಶ್ನಿಸಿತು.
ಇಷ್ಟೇ ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬ್ರೈನ್ ಮ್ಯಾಪಿಂಗ್ಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಭೂ ಒತ್ತುವರಿ ತೆರವು ಕಾರ್ಯಚರಣೆಗೆ ಮುಂದಾಗಿದೆ.

 

The post ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧದ ಭೂ ಒತ್ತುವರಿ ಆರೋಪ ; ತೆರೆವು ಕಾರ್ಯಾಚರಣೆ. appeared first on Good News 24x7.

]]>