Priyanka Gandhi Archives - Good News 24x7 https://www.goodnews24x7.com/tag/priyanka-gandhi/ Kannada Fri, 29 Nov 2024 07:18:23 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Priyanka Gandhi Archives - Good News 24x7 https://www.goodnews24x7.com/tag/priyanka-gandhi/ 32 32 ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ https://www.goodnews24x7.com/cm-siddaramaiah-congratulates-priyanka-gandhi-on-her-victory-from-wayanad-lok-sabha-constituency/ Fri, 29 Nov 2024 07:18:23 +0000 https://www.goodnews24x7.com/?p=1039 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ…

The post ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ appeared first on Good News 24x7.

]]>

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು. ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.

The post ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ appeared first on Good News 24x7.

]]>
ಪ್ರಿಯಾಂಕಾ ಗಾಂಧಿ ಜಯಗಳಿಸುವುದು ನಿಶ್ಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ https://www.goodnews24x7.com/priyanka-gandhi-is-certain-to-win-chief-minister-siddaramaiah/ Wed, 23 Oct 2024 12:28:14 +0000 https://www.goodnews24x7.com/?p=898 ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಮ್ಮ ವಿರೋಧಿ, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ…

The post ಪ್ರಿಯಾಂಕಾ ಗಾಂಧಿ ಜಯಗಳಿಸುವುದು ನಿಶ್ಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Good News 24x7.

]]>

ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಮ್ಮ ವಿರೋಧಿ, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.

ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.

The post ಪ್ರಿಯಾಂಕಾ ಗಾಂಧಿ ಜಯಗಳಿಸುವುದು ನಿಶ್ಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Good News 24x7.

]]>
ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ https://www.goodnews24x7.com/navya-haridas-contest-from-bjp-against-priyanka-gandhi/ Sun, 20 Oct 2024 02:10:31 +0000 https://www.goodnews24x7.com/?p=883 ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ ಮುಂಬರುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಕೇರಳದ ವಯನಾಡಿನಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಗಳಿಬ್ಬರು ಮುಖಾಮುಖಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ…

The post ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ appeared first on Good News 24x7.

]]>

ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ

ಮುಂಬರುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಕೇರಳದ ವಯನಾಡಿನಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಗಳಿಬ್ಬರು ಮುಖಾಮುಖಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧಿಸಲಿದ್ದಾರೆ.

36 ವರ್ಷದ ನವ್ಯಾ ಹರಿದಾಸ್ ಅವರು ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಓದಿದ್ದು ,ಕ್ಯಾಲಿಕಟ್ ವಿಶ್ವವಿದ್ಯಾಲಯದ ಕೆಎಂಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಸದ್ಯ ಅವರು ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ ಕೌನ್ಸಿಲರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಟ್ವಿಟ್ಟರ್ ಪ್ರೊಫೈಲ್ ಪ್ರಕಾರ ಅವರು ಬಿಜೆಪಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದಾರೆ.

The post ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ appeared first on Good News 24x7.

]]>
ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ https://www.goodnews24x7.com/priyanka-gandhi-vadra-is-contesting-from-wayanad-lok-sabha-constituency/ Wed, 16 Oct 2024 01:46:15 +0000 https://www.goodnews24x7.com/?p=838 ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ. ಸಂಸದ ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು…

The post ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ appeared first on Good News 24x7.

]]>

ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ

ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ. ಸಂಸದ ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸುವುದಾಗಿ ಎಐಸಿಸಿ ಅಧಿಕೃತ ಪ್ರಕಟಣೆಯ ಮೂಲಕ ತಿಳಿಸಿದೆ.

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ ತನ್ನ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದ್ದು, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

The post ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ appeared first on Good News 24x7.

]]>