PriyankaAchar Archives - Good News 24x7 https://www.goodnews24x7.com/tag/priyankaachar/ Kannada Sun, 17 Aug 2025 07:14:31 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg PriyankaAchar Archives - Good News 24x7 https://www.goodnews24x7.com/tag/priyankaachar/ 32 32 ‘ಏಳುಮಲೆ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ https://www.goodnews24x7.com/elumale-movie-release-date-fixed/ Sun, 17 Aug 2025 07:14:31 +0000 https://www.goodnews24x7.com/?p=6276 ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾ ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿದೆ. ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ಆಕ್ಷನ್ ಕಟ್ ಹೇಳಿರುವ…

The post ‘ಏಳುಮಲೆ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ appeared first on Good News 24x7.

]]>

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾ ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿದೆ. ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ಆಕ್ಷನ್ ಕಟ್ ಹೇಳಿರುವ ಏಳುಮಲೆ ಸಿನಿಮಾ ಸೆಪ್ಟೆಂಬರ್ 5ರಂದು ತೆರೆಗೆ ಬರ್ತಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ `ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ತಾರಾಬಳಗದಲ್ಲಿದ್ದಾರೆ.

ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ

The post ‘ಏಳುಮಲೆ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ appeared first on Good News 24x7.

]]>