R. Ashok Archives - Good News 24x7 https://www.goodnews24x7.com/tag/r-ashok/ Kannada Wed, 11 Mar 2026 11:22:52 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg R. Ashok Archives - Good News 24x7 https://www.goodnews24x7.com/tag/r-ashok/ 32 32 ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ. https://www.goodnews24x7.com/former-mp-pratap-simha-reveals-the-story-of-the-behind-the-scenes-struggle-mysore-silk-heritage/ Wed, 11 Mar 2026 11:11:50 +0000 https://www.goodnews24x7.com/?p=8853 ಟಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ನೂಲು ಘಟಕದ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಮತ್ತು ನೌಕರರ ಹೋರಾಟದ ಫಲವಾಗಿ, ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು, ಲಾಭದಾಯಕ ಘಟಕವನ್ನು ಉಳಿಸಿ ಅಭಿವೃದ್ಧಿಪಡಿಸುವುದಾಗಿ ಭರವಸೆ…

The post ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ. appeared first on Good News 24x7.

]]>

ಟಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ನೂಲು ಘಟಕದ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಮತ್ತು ನೌಕರರ ಹೋರಾಟದ ಫಲವಾಗಿ, ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು, ಲಾಭದಾಯಕ ಘಟಕವನ್ನು ಉಳಿಸಿ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದೆ. ಈ ಬೆಳವಣಿಗೆಯು ಮೈಸೂರು ಸಿಲ್ಕ್ ಉದ್ಯಮಕ್ಕೆ ನಿಟ್ಟುಸಿರು ತಂದಿದೆ.

ಬೆಂಗಳೂರು ವಿಧಾನಸೌಧದಲ್ಲಿ ಕರ್ನಾಟಕ ಸಿಲ್ಕ್ ಇಂಡಸ್ಟ್ರಿ ಕಾರ್ಪೊರೇಷನ್ ಸಂಬಂಧಿಸಿದಂತೆ ನಡೆದ ಬೆಳವಣಿಗೆಗಳ ಕುರಿತು ರಾಜಕೀಯ ನಾಯಕರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಟಿ. ನರಸೀಪುರದಲ್ಲಿರುವ ರೇಷ್ಮೆ ನೂಲು ಉತ್ಪಾದನಾ ಘಟಕವನ್ನು ಉಳಿಸುವ ಹೋರಾಟದಲ್ಲಿ ಬೆಂಬಲ ನೀಡಿದ ನಾಯಕರಿಗೆ ಕೃತಜ್ಞತೆ ಸಲ್ಲಿಸಲು ಕೆಎಸ್ಐಸಿ ನೌಕರರು ವಿಧಾನಸೌಧಕ್ಕೆ ಆಗಮಿಸಿದ್ದರು.

1912ರಲ್ಲಿ ಮೈಸೂರು ಮಹಾರಾಜರು ಆರಂಭಿಸಿದ ಮೈಸೂರು ಸಿಲ್ಕ್ ಉದ್ಯಮ
ಈ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ, 1912ರಲ್ಲಿ ಮೈಸೂರು ಮಹಾರಾಜರು ಆರಂಭಿಸಿದ ಮೈಸೂರು ಸಿಲ್ಕ್ ಉದ್ಯಮವು ಇಂದು ಜಾಗತಿಕ ಖ್ಯಾತಿ ಗಳಿಸಿದೆ. ಈ ಸಂಸ್ಥೆಗೆ ಅಗತ್ಯವಾದ ರೇಷ್ಮೆ ನೂಲು ಉತ್ಪಾದಿಸುವ ಪ್ರಮುಖ ಘಟಕವು ಟಿ. ನರಸೀಪುರ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 12 ಎಕರೆ ಪ್ರದೇಶದಲ್ಲಿ ಈ ಫ್ಯಾಕ್ಟರಿ ಸ್ಥಾಪಿಸಲಾಗಿದೆ. ಆದರೆ ಈ ಜಾಗದಲ್ಲಿ ಸುಮಾರು 6 ಎಕರೆ ಭೂಮಿಯನ್ನು ತೆಗೆದುಕೊಂಡು ಸ್ಟೇಡಿಯಂ ನಿರ್ಮಿಸಲು ಸರ್ಕಾರ ಮುಂದಾಗಿತ್ತು ಎಂಬ ಆರೋಪವೂ ಕೇಳಿಬಂದಿತ್ತು.

ಆ ಜಾಗ ಎಲ್‌ ಆಕಾರದಲ್ಲಿರುವುದರಿಂದ ಅಲ್ಲಿ ಸ್ಟೇಡಿಯಂ ನಿರ್ಮಾಣ ಸಾಧ್ಯವಿಲ್ಲ. ವೃತ್ತಾಕಾರದ ಭೂಮಿಯಲ್ಲಿ ಮಾತ್ರ ಸೂಕ್ತವಾಗಿ ಸ್ಟೇಡಿಯಂ ನಿರ್ಮಾಣ ಸಾಧ್ಯವಾಗುತ್ತದೆ. ಆದರೂ ಅವೈಜ್ಞಾನಿಕವಾಗಿ ಆ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ ಎಂದು ಸಿಂಹ ಆರೋಪಿಸಿದರು. ಈ ವಿಷಯದಲ್ಲಿ ಉದ್ಯೋಗಿಗಳು ತಮ್ಮ ಧ್ವನಿಯನ್ನು ಎತ್ತಿದರೂ, ಸರ್ಕಾರ ಅದನ್ನು ಗಮನಿಸಿಲ್ಲ . ಆದರೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಶಾಸಕ ಶ್ರೀವತ್ಸ ಅವರು ನೌಕರರ ಪರ ನಿಂತು ಹೋರಾಟ ನಡೆಸಿದ ಪರಿಣಾಮ ಆ ಜಾಗ ಉಳಿಯುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.

98 ಕೋಟಿ ರೂಪಾಯಿ ಲಾಭ
ಇನ್ನು ಇದೇ ವೇಳೆ ಮಾತನಾಡಿದ ಆರ್. ಅಶೋಕ್ ಅವರು, ರೇಷ್ಮೆ ಕಾರ್ಖಾನೆಯನ್ನು ಉಳಿಸಲು ತಮ್ಮ ಪಕ್ಷದ ಶಾಸಕರು ಮತ್ತು ಮಾಜಿ ಸಂಸದರು ಒಟ್ಟಾಗಿ ಹೋರಾಟ ನಡೆಸಿದ್ದಾರೆ ಎಂದು ಹೇಳಿದರು. ಜಿಐ ಗುರುತು ಹೊಂದಿರುವ ಈ ಸಂಸ್ಥೆ ಪ್ರತಿವರ್ಷ ಸುಮಾರು 98 ಕೋಟಿ ರೂಪಾಯಿ ಲಾಭ ಗಳಿಸುತ್ತಿದೆ. ಇಂತಹ ಲಾಭದಾಯಕ ಸಂಸ್ಥೆಯನ್ನು ಖಾಸಗಿ ಒತ್ತಡಗಳಿಗೆ ಮಣಿದು ಮುಚ್ಚುವ ಪ್ರಯತ್ನ ನಡೆದಿದೆ ಎಂಬ ಆರೋಪವೂ ಮಾಡಿದರು. ಈ ಕಾರ್ಖಾನೆ ಮುಚ್ಚಿದರೆ ಚೀನಾದಿಂದ ರೇಷ್ಮೆ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಉಂಟಾಗಬಹುದು ಎಂದು ಅವರು ಎಚ್ಚರಿಸಿದರು.

ಇದಲ್ಲದೆ, ಈ ಘಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿದ್ದು, ಅವರ ಜೀವನೋಪಾಯಕ್ಕೂ ಇದು ಪ್ರಮುಖ ಆಧಾರವಾಗಿದೆ ಎಂದು ಅಶೋಕ್ ಹೇಳಿದರು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಮುಚ್ಚುವ ಯತ್ನ ಮಾಡಿದರೆ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಮುಂಚೆಯೇ ಎಚ್ಚರಿಕೆ ನೀಡಿದ್ದೆ ಎಂದರು. ಅದರ ಪರಿಣಾಮವಾಗಿ ಸರ್ಕಾರ ಈ ಜಾಗವನ್ನು ಮುಟ್ಟುವುದಿಲ್ಲ ಹಾಗೂ ಘಟಕವನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದೆ. ಭವಿಷ್ಯದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ಸಂಸ್ಥೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಇನ್ನು ಮಾರ್ಚ್ 9ರಂದು ನಡೆದ ವಿಧಾನಸಭಾ ಅಧಿವೇಶನದಲ್ಲಿಯೂ ಈ ವಿಷಯ ಪ್ರಸ್ತಾಪವಾಗಿತ್ತು. ಟಿ. ನರಸೀಪುರ ರೇಷ್ಮೆ ನೂಲು ತಯಾರಿಕಾ ಘಟಕವನ್ನು ಮುಚ್ಚುವ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರವನ್ನು ಪ್ರಶ್ನಿಸಿದ್ದರು. ಈ ಸ್ಥಳದಲ್ಲಿ ಸ್ಟೇಡಿಯಂ ನಿರ್ಮಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂದು ಅವರು ಹೇಳಿ, ಈ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪಶುಸಂಗೋಪನಾ ಸಚಿವ K. ವೆಂಕಟೇಶ್, ಸ್ಟೇಡಿಯಂ ನಿರ್ಮಾಣಕ್ಕೆ ಆ ಜಾಗ ಸೂಕ್ತವೆಂದು ಯಾರೋ ತಪ್ಪು ಮಾಹಿತಿ ನೀಡಿದ್ದರು ಎಂದು ಹೇಳಿದರು. ಇದೀಗ ಸರ್ಕಾರ ಆ ಯೋಜನೆಯನ್ನು ಕೈಬಿಟ್ಟಿದ್ದು, ಟಿ. ನರಸೀಪುರದಲ್ಲಿರುವ ಕೆಎಸ್‌ಐಸಿ ಘಟಕ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲಿಗೆ ಸ್ಟೇಡಿಯಂ ನಿರ್ಮಿಸುವ ಯೋಜನೆ ಇಲ್ಲ ಎಂದು ಸಚಿವರು ಹೇಳಿದರು. ಈ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ಅಶೋಕ್ ಸ್ವಾಗತಿಸಿದರು.

ಅದೇ ದಿನ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಶ್ರೀವತ್ಸ ಮೈಸೂರು ಸಿಲ್ಕ್ ಸೀರೆಯ ಬೇಡಿಕೆ ಕುರಿತು ಪ್ರಶ್ನೆ ಎತ್ತಿದ್ದರು. ಮೈಸೂರು ಸಿಲ್ಕ್ ಸೀರೆಗಳಿಗೆ ಅಪಾರ ಬೇಡಿಕೆ ಇರುವುದರಿಂದ ಜನರು ಬೆಳಗಿನ ಜಾವವೇ ಅಂಗಡಿಗಳ ಮುಂದೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಗಮನ ಸೆಳೆದರು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಆನ್‌ಲೈನ್ ಮಾರಾಟ ತಾತ್ಕಾಲಿಕ ನಿಲ್ಲಿಸುವಂತೆ ಚಿಂತನೆ
ಇದಕ್ಕೆ ಉತ್ತರಿಸಿದ ಸಚಿವ ಕೆ. ವೆಂಕಟೇಶ್ ಅವರು, ಮೈಸೂರು ಸಿಲ್ಕ್ ಸೀರೆಗಳಿಗೆ ಅಪಾರ ಬೇಡಿಕೆ ಇರುವುದನ್ನು ಒಪ್ಪಿಕೊಂಡರು. ಸ್ವಲ್ಪ ಹಾನಿಯಾಗಿದ್ದರೂ ಮಹಿಳೆಯರು ಆ ಸೀರೆಗಳನ್ನು ಖರೀದಿಸಲು ಹಿಂದೇಟು ಹಾಕುವುದಿಲ್ಲ ಎಂದರು. ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಬೆಳಿಗ್ಗೆ ಮೂರು ಗಂಟೆಗೆ ಜನರು ಸಾಲಿನಲ್ಲಿ ನಿಲ್ಲುತ್ತಾರೆ ಎಂಬ ಮಾಹಿತಿ ಸರಿಯಲ್ಲ. ಕೆಲವೊಮ್ಮೆ ‘ಸೆಕೆಂಡ್ ಸೇಲ್’ ಸಂದರ್ಭದಲ್ಲಿ ಜನರು ಸ್ವಲ್ಪ ಬೇಗ ಬರುತ್ತಾರೆ ಎಂದರು

ಇದಲ್ಲದೆ, ಮೈಸೂರು ಸಿಲ್ಕ್ ಸೀರೆಗಳ ಮಾರಾಟದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವ ಉದ್ದೇಶದಿಂದ ಕೆಲವು ಸಂದರ್ಭಗಳಲ್ಲಿ ಆನ್‌ಲೈನ್ ಮಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಬಗ್ಗೆ ಕೂಡ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವರು ಹೇಳಿದರು. ಒಟ್ಟಿನಲ್ಲಿ, ಟಿ. ನರಸೀಪುರದ ಕೆಎಸ್ಐಸಿ ಘಟಕವನ್ನು ಉಳಿಸುವ ಬಗ್ಗೆ ಸರ್ಕಾರದ ಸ್ಪಷ್ಟನೆ ಮತ್ತು ಅದನ್ನು ಸ್ವಾಗತಿಸಿರುವ ವಿರೋಧ ಪಕ್ಷದ ನಾಯಕರು ರಾಜ್ಯದ ರೇಷ್ಮೆ ಉದ್ಯಮಕ್ಕೆ ಸ್ವಲ್ಪ ಮಟ್ಟಿನ ನಿಟ್ಟುಸಿರು ತಂದಂತಾಗಿದೆ.

The post ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ. appeared first on Good News 24x7.

]]>
ಮೈಸೂರಿನಲ್ಲಿ ನೀಡಿರುವ ನಿಷೇದಾಜ್ಞೆ ಜಾರಿಗೆ ನಾವು ಹೆದರುವ ಮಾತ್ತಿಲ್ಲ; ವಿಪಕ್ಷ ನಾಯಕ ಆರ್.ಅಶೋಕ್. https://www.goodnews24x7.com/%e0%b2%ae%e0%b3%88%e0%b2%b8%e0%b3%82%e0%b2%b0%e0%b2%bf%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%a8%e0%b3%80%e0%b2%a1%e0%b2%bf%e0%b2%b0%e0%b3%81%e0%b2%b5-%e0%b2%a8%e0%b2%bf%e0%b2%b7%e0%b3%87/ Mon, 24 Feb 2025 07:53:37 +0000 https://www.goodnews24x7.com/?p=2399 ಮೈಸೂರು, (ಫೆಬ್ರವರಿ,24,2025) :- ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಖಂಡಿಸಿ ನಾವು ನಮ್ಮ ಹೋರಾಟವನ್ನು ನಡೆಸಲು ಮುಂದಾಗಿರುವಗ ನಮ್ಮ ಹೋರಾಟವನ್ನು ಹತ್ತಿಕ್ಕಲು ಮೈಸೂರಿನಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ನಾವು ಯಾವುದಕ್ಕೂ ಹೆದರಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್…

The post ಮೈಸೂರಿನಲ್ಲಿ ನೀಡಿರುವ ನಿಷೇದಾಜ್ಞೆ ಜಾರಿಗೆ ನಾವು ಹೆದರುವ ಮಾತ್ತಿಲ್ಲ; ವಿಪಕ್ಷ ನಾಯಕ ಆರ್.ಅಶೋಕ್. appeared first on Good News 24x7.

]]>

ಮೈಸೂರು, (ಫೆಬ್ರವರಿ,24,2025) :- ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಖಂಡಿಸಿ ನಾವು ನಮ್ಮ ಹೋರಾಟವನ್ನು ನಡೆಸಲು ಮುಂದಾಗಿರುವಗ ನಮ್ಮ ಹೋರಾಟವನ್ನು ಹತ್ತಿಕ್ಕಲು ಮೈಸೂರಿನಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ನಾವು ಯಾವುದಕ್ಕೂ ಹೆದರಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಆರ್.ಅಶೋಕ್, ಮುಸ್ಲೀಮರ ಓಲೈಕೆಯಷ್ಟೆ ಕಾಂಗ್ರೆಸ್ ಉದ್ದೇಶ . ನಮಗೆ ಮತ ಹಾಕಿ ನೀವು ಏನು ಬೇಕಾದರೂ ಮಾಡಿ. ಇದು ಕಾಂಗ್ರೆಸ್ ಸರ್ಕಾರದ ಸ್ಲೋಗನ್. ಮುಸ್ಲೀಂ ಮತಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಹಾಲಿನ ದರ, ನೀರಿನ ದರ ಏರಿಕೆ ಮಾಡ್ತಾರಂತೆ!
ಕಾಂಗ್ರೆಸ್ ಸರ್ಕಾರ ಬಂದಾಗ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ. ಈ ಸರ್ಕರ ಕಿತ್ತು ಒಗೆಯುವುದೇ ನಮ್ಮ ಉದ್ದೇಶ ಎಂದು ಆರ್.ಅಶೋಕ್ ತಿಳಿಸಿದರು.

The post ಮೈಸೂರಿನಲ್ಲಿ ನೀಡಿರುವ ನಿಷೇದಾಜ್ಞೆ ಜಾರಿಗೆ ನಾವು ಹೆದರುವ ಮಾತ್ತಿಲ್ಲ; ವಿಪಕ್ಷ ನಾಯಕ ಆರ್.ಅಶೋಕ್. appeared first on Good News 24x7.

]]>
ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ https://www.goodnews24x7.com/the-incident-that-took-place-during-the-dissolution-of-ganesha-is-very-reprehensible-r-ashok/ Thu, 12 Sep 2024 05:33:48 +0000 https://www.goodnews24x7.com/?p=585 ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ. ನಿನ್ನೆ ರಾತ್ರಿ ಮಂಡ್ಯ…

The post ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ appeared first on Good News 24x7.

]]>

ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್

ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ.

ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ.

ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ.

@INCKarnataka
ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ.

ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ @siddaramaiahಹಾಗು ಗೃಹ ಸಚಿವ
@DrParameshwara ಅವರನ್ನ ಒತ್ತಾಯಿಸುತ್ತೇನೆ ಎಂದು ಆರ್ ಅಶೋಕ್ ಟ್ವೀಟ್​ ಮಾಡಿದ್ದಾರೆ.

The post ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ appeared first on Good News 24x7.

]]>
ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? : ಆರ್.​ ಅಶೋಕ್​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು https://www.goodnews24x7.com/in-which-language-are-you-asking-for-my-resignation-cm-siddaramaiah-hits-out-at-r-ashok/ Mon, 19 Aug 2024 08:15:44 +0000 https://www.goodnews24x7.com/?p=410 “ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ BS Yediyurappa ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. R…

The post ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? : ಆರ್.​ ಅಶೋಕ್​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು appeared first on Good News 24x7.

]]>

“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ BS Yediyurappa ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. R Ashoka ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ?

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು.

ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ.

ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ BJP Karnataka ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ.

The post ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? : ಆರ್.​ ಅಶೋಕ್​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು appeared first on Good News 24x7.

]]>