RaghavendraSwamyMutt Archives - Good News 24x7 https://www.goodnews24x7.com/tag/raghavendraswamymutt/ Kannada Sun, 13 Jul 2025 06:25:09 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg RaghavendraSwamyMutt Archives - Good News 24x7 https://www.goodnews24x7.com/tag/raghavendraswamymutt/ 32 32 ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ. https://www.goodnews24x7.com/three-youths-from-hassan-go-missing-after-swimming-in-tungabhadra-river-near-mantralaya/ Sun, 13 Jul 2025 06:25:09 +0000 https://www.goodnews24x7.com/?p=5064 ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ…

The post ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ. appeared first on Good News 24x7.

]]>

ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ.

ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ ದರ್ಶನಕ್ಕಾಗಿ ಹಾಸನದಿಂದ 7 ಜನ ಯುವಕರ ತಂಡ ಬಂದಿತ್ತು. ಯುವಕರು ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದರು. ಆಗ ನದಿಗೆ ಹೆಚ್ಚಿನ ನೀರು ಹರಿಬಿಟ್ಟಿರುವುದ್ದರಿಂದ, ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ. ರಾತ್ರಿಯಾಗಿದ್ದರಿಂದ ಶೋಧ ಕಾರ್ಯಾಚರಣೆ ನಿಲ್ಲಿಸಿದ್ದು, ಭಾನುವಾರ ಬೆಳಗ್ಗೆ ಪುನರಾರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

The post ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ. appeared first on Good News 24x7.

]]>