Ramayana Archives - Good News 24x7 https://www.goodnews24x7.com/tag/ramayana/ Kannada Thu, 30 Jul 2026 09:43:09 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Ramayana Archives - Good News 24x7 https://www.goodnews24x7.com/tag/ramayana/ 32 32 ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ ! https://www.goodnews24x7.com/the-entire-trailer-of-ramayana-is-full-of-ravana/ Thu, 30 Jul 2026 09:42:59 +0000 https://www.goodnews24x7.com/?p=9884   ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

The post ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ ! appeared first on Good News 24x7.

]]>

 

ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ.
‘ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ; ಯಶ್ ರೌದ್ರಾವತಾರ

ಕಿರುತೆರೆ ಮೂಲಕ ಜರ್ನಿ ಆರಂಭಿಸಿ, ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟರು. ಏನಾದರೂ ಮಾಡಿಯೇ ಮಾಡುತ್ತೇನೆ ಎಂದು ಅವರು ಬಲವಾಗಿ ಅಂದುಕೊಂಡಿದ್ದರು. ‘ಕೆಜಿಎಫ್’ ಚಿತ್ರದ ಮೂಲ ಅದನ್ನು ಸಾಧಿಸಿದರು. ಅಲ್ಲಿಗೆ ಅವರು ನಿಲ್ಲಿಸಲಿಲ್ಲ. ‘ಕೆಜಿಎಫ್ 2’ ಮಾಡಿದರು. ಈಗ ‘ಟಾಕ್ಸಿಕ್’ ರಿಲೀಸ್​​ಗೆ ರೆಡಿ ಆಗುತ್ತಿದ್ದಾರೆ. ಇದರ ಜೊತೆಗೆ ‘ರಾಮಾಯಣ’ ಟ್ರೇಲರ್ ಮೂಲಕ ಧೂಳೆಬ್ಬಿಸಿದ್ದಾರೆ.

‘ರಾಮಾಯಣ’ ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿದೆ. ಈ ಟ್ರೇಲರ್ ಹಾಲಿವುಡ್‌ನ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಚಿತ್ರದ ಜೊತೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ ನೋಡಿದವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಭರ್ಜರಿ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಡೀ ಟ್ರೇಲರ್‌ನಲ್ಲಿ ಲಂಕೇಶ್ವರ ರಾವಣನಾಗಿ ನಟಿಸಿರುವ ರಾಕಿಂಗ್ ಸ್ಟಾರ್ ಯಶ್ ಅವರದ್ದೇ ಸಂಪೂರ್ಣ ಅಧಿಪತ್ಯ ಎದ್ದು ಕಾಣುತ್ತಿದೆ ಎಂದು ಅನೇಕರು ಬಣ್ಣಿಸುತ್ತಿದ್ದಾರೆ.

ಟ್ರೇಲರ್ ವೀಕ್ಷಿಸಿದ ಪ್ರೇಕ್ಷಕರು ಯಶ್ ಅವರ ನಟನೆಗೆ ಫುಲ್ ಫಿದಾ ಆಗಿದ್ದಾರೆ. ‘ಇಡೀ ರಾಮಾಯಣ ಟ್ರೇಲರ್‌ನಲ್ಲಿ ಅತ್ಯಂತ ರೋಮಾಂಚನ ನೀಡಿದ ಕ್ಷಣ ಎಂದರೆ ಅದು ಯಶ್ ಅವರ ರಾವಣನ ಅವತಾರ. ಅವರ ಕಣ್ಣುಗಳಲ್ಲಿನ ತೀವ್ರತೆ, ಗಾಂಭೀರ್ಯದ ವ್ಯಕ್ತಿತ್ವ ಮತ್ತು ಪರದೆಯ ಮೇಲಿನ ಅವರ ಅಪ್ರತಿಮ ಕ್ರೌರ್ಯದ ನಟನೆ ಎಂದಿಗೂ ಮರೆಯಲಾಗದ ಮೊದಲ ಆಕರ್ಷಣೆ’ ಎಂದು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.

ಚಿತ್ರಮಂದಿರಗಳಲ್ಲಿ ಟ್ರೇಲರ್ ಪ್ರದರ್ಶನವಾಗುವಾಗ ರಾವಣನ ಎಂಟ್ರಿ ದೃಶ್ಯಕ್ಕೆ ಪ್ರೇಕ್ಷಕರಿಂದ ಹುಚ್ಚೆದ್ದು ಕೂಗಿದ್ದಾರೆ. ‘ಯಶ್ ಅವರು ಇಡೀ ಟ್ರೇಲರ್ ಅನ್ನು ಅತ್ಯಂತ ಸುಲಭವಾಗಿ ಡಾಮಿನೇಟ್ ಮಾಡಿದ್ದಾರೆ’ ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಈ ಭವ್ಯ ವಿಶ್ಯುಯಲ್ ವೈಭವ ಹಾಗೂ ಯಶ್ ಅವರ ರೌದ್ರಾವತಾರವನ್ನು ನೋಡುತ್ತಿದ್ದರೆ, ‘ರಾಮಾಯಣ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿ, ಸುನಾಮಿ ಎಬ್ಬಿಸುವುದು ಖಚಿತ ಎಂದು ಸಿನಿವಿಶ್ಲೇಷಕರು ಹಾಗೂ ಪ್ರೇಕ್ಷಕರು ಜಂಟಿಯಾಗಿ ಭವಿಷ್ಯ ನುಡಿಯುತ್ತಿದ್ದಾರೆ.

The post ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ ! appeared first on Good News 24x7.

]]>
ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ https://www.goodnews24x7.com/ramayana-cinema-is-being-promoted-extensively-in-more-than-400-schools-across-the-country9820-2/ Sat, 11 Jul 2026 07:57:49 +0000 https://www.goodnews24x7.com/?p=9820 ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್​ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿಭಾರತೀಯ…

The post ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ appeared first on Good News 24x7.

]]>

ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್​ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ರಾಮಾಯಣ’ ಬಿಡುಗಡೆಗೆ ಸಿದ್ಥತೆ ನಡೆಯುತ್ತಿದೆ. ಇದೀಗ ಪ್ರೇಕ್ಷಕರನ್ನು ತಲುಪಲು ಚಿತ್ರತಂಡ ಅದ್ದೂರಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ದೇಶಾದ್ಯಂತ ಬೃಹತ್ ಶಾಲಾ ಅಭಿಯಾನವನ್ನು ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ. ಜುಲೈ 9ರಿಂದಲೇ ಈ ಮಹತ್ವದ ಶಾಲಾ ಅಭಿಯಾನ ಆರಂಭವಾಗಿದೆ. ದೇಶದ 18 ಪ್ರಮುಖ ನಗರಗಳ 400ಕ್ಕೂ ಹೆಚ್ಚು ಶಾಲೆಗಳನ್ನು ತಲುಪುವ ಗುರಿ ಹೊಂದಲಾಗಿದೆ.

ಈ ಕಾರ್ಯಕ್ರಮದ ಮೂಲಕ ಬರೋಬ್ಬರಿ 5 ಲಕ್ಷಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳಿಗೆ ರಾಮಾಯಣದ ಕಥೆ ಹಾಗೂ ಅದರಲ್ಲಿರುವ ಉದಾತ್ತ ಮೌಲ್ಯಗಳನ್ನು ಅತ್ಯಂತ ಆಕರ್ಷಕವಾಗಿ ಪರಿಚಯಿಸಲಾಗುತ್ತದೆ. ಈ ಸಿನಿಮಾದಲ್ಲಿ ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ, ಸನ್ನಿ ಡಿಯೋಲ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.ಚಿತ್ರತಂಡವು ಕೇವಲ ಸಾಂಪ್ರದಾಯಿಕ ಪ್ರಚಾರಕ್ಕೆ ಸೀಮಿತವಾಗದೆ, ಮಕ್ಕಳಲ್ಲಿ ರಾಮಾಯಣದ ನೈಜ ಸಾರವನ್ನು ಮೂಡಿಸಲು ಯೋಜನೆ ರೂಪಿಸಿದೆ. ಇದಕ್ಕಾಗಿ ಶಾಲೆಗಳಲ್ಲಿ ರೇಖಾಚಿತ್ರ ಸ್ಪರ್ಧೆಗಳು, ರಸಪ್ರಶ್ನೆಗಳು ಹಾಗೂ ಸಂವಾದದ ರೀತಿಯ ವಿವಿಧ ಸೃಜನಶೀಲ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದು ಮಕ್ಕಳ ಜೊತೆಗೆ ಅವರ ಕುಟುಂಬದಲ್ಲೂ ರಾಮಾಯಣದ ಸಾಂಸ್ಕೃತಿಕ ಮಹತ್ವದ ಬಗ್ಗೆ ಚರ್ಚೆಗಳು ನಡೆಯಲು ಪ್ರೇರೇಪಿಸಲಿದೆ.

‘ನಮ್ಮ ಸತ್ಯ. ನಮ್ಮ ಇತಿಹಾಸ’ ಎಂಬ ಶೀರ್ಷಿಕೆಯಡಿ ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಯುವ ಪೀಳಿಗೆಯು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂಭ್ರಮಿಸುವಂತೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಚಿತ್ರತಂಡ ಹೇಳಿದೆ. ಚಿತ್ರದ ಬಿಡುಗಡೆಗೆ ಇನ್ನೂ ಸಾಕಷ್ಟು ಸಮಯ ಇದೆ. ಆದರೆ ಮುಂಚಿತವಾಗಿಯೇ ಇಂಥ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.‘ರಾಮಾಯಣವು ತಲೆಮಾರುಗಳಿಂದ ಕಥೆಗಳು ಹಾಗೂ ನೈತಿಕ ಮೌಲ್ಯಗಳ ಮೂಲಕ ಜೀವಂತವಾಗಿದೆ. ಈ ಶಾಲಾ ಪ್ರಚಾರದ ಅಭಿಯಾನದಲ್ಲಿ ಮೂಲಕ ಆ ಭವ್ಯ ಪರಂಪರೆಯನ್ನು ಇಂದಿನ ಯುವ ಮನಸ್ಸುಗಳಿಗೆ ಅರ್ಥಪೂರ್ಣವಾಗಿ ತಲುಪಿಸುವುದು ನಮ್ಮ ಪ್ರಯತ್ನ. ಕೇವಲ ಪುರಾಣದ ಕಥೆಯಾಗಿ ಮಾತ್ರವಲ್ಲದೆ ಧೈರ್ಯ, ಕರ್ತವ್ಯ, ಪ್ರೀತಿ ಮತ್ತು ಧರ್ಮದ ಸಂದೇಶವಾಗಿ ಮಕ್ಕಳು ಇದನ್ನು ಗ್ರಹಿಸಬೇಕು’ ಎಂದು ಚಿತ್ರತಂಡ ಹೇಳಿದೆ

‘ದಂಗಲ್’ ಖ್ಯಾತಿಯ ನಿರ್ದೇಶಕ ನಿತೇಶ್ ತಿವಾರಿ ಅವರು ‘ರಾಮಾಯಣ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಮಿತ್ ಮಲ್ಹೋತ್ರಾ ಅವರ ‘ಪ್ರೈಮ್ ಫೋಕಸ್ ಸ್ಟುಡಿಯೋಸ್’, ‘DNEG’ ಮತ್ತು ಯಶ್ ಅವರ ‘ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್’ ಜಂಟಿಯಾಗಿ ಈ ಸಿನಿಮಾವನ್ನು ದೊಡ್ಡ ಬಜೆಟ್‌ನಲ್ಲಿ ನಿರ್ಮಿಸುತ್ತಿವೆ.

The post ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ appeared first on Good News 24x7.

]]>
‘ರಾವಣ ಪಾತ್ರಧಾರಿ ಯಶ್ ನಟನೆಯ ರಾಮಾಯಣ’ದ ಬಗ್ಗೆ ಹರಡಿರುವ ವದಂತಿಗೆ ನಟಿ ಫುಲ್ ಸ್ಟಾಪ್ . https://www.goodnews24x7.com/actress-puts-full-stop-to-rumours-about-yash-playing-ravana-in-ramayana/ Wed, 30 Apr 2025 11:43:46 +0000 https://www.goodnews24x7.com/?p=3504 ಕೆಜಿಎಫ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ‘ರಾಮಾಯಣ’ ಸಿನಿಮಾದ ಸೀತಾ ಪಾತ್ರದ ಆಫರ್ ಕೆಜಿಎಫ್ ಸಹನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಸಿಕ್ಕಿತ್ತು. ಈ ಬಗ್ಗೆ ಹರಡಿರುವ ವದಂತಿಗಳಿಗೀಗ ನಟಿ ಫುಲ್ ಸ್ಟಾಪ್ ಇಟ್ಟಿದ್ದಾರೆ. ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ ನಿರ್ದೇಶನದ…

The post ‘ರಾವಣ ಪಾತ್ರಧಾರಿ ಯಶ್ ನಟನೆಯ ರಾಮಾಯಣ’ದ ಬಗ್ಗೆ ಹರಡಿರುವ ವದಂತಿಗೆ ನಟಿ ಫುಲ್ ಸ್ಟಾಪ್ . appeared first on Good News 24x7.

]]>

ಕೆಜಿಎಫ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ‘ರಾಮಾಯಣ’ ಸಿನಿಮಾದ ಸೀತಾ ಪಾತ್ರದ ಆಫರ್ ಕೆಜಿಎಫ್ ಸಹನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಸಿಕ್ಕಿತ್ತು. ಈ ಬಗ್ಗೆ ಹರಡಿರುವ ವದಂತಿಗಳಿಗೀಗ ನಟಿ ಫುಲ್ ಸ್ಟಾಪ್ ಇಟ್ಟಿದ್ದಾರೆ.


ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಪ್ರಾಜೆಕ್ಟ್ನಲ್ಲಿ ಸೀತಾದೇವಿ ಪಾತ್ರವನ್ನು ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ನೀಡಲಾಗಿತ್ತು. ಈ ಅಧಿಕೃತ ಮಾಹಿತಿಯನ್ನು ಇತ್ತೀಚೆಗೆ ಸ್ವತಃ ನಟಿ ಬಹಿರಂಗಪಡಿಸಿದ್ದರು. ಆದ್ರೆ ತಮ್ಮ ಹೇಳಿಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ರಾವಣ ಪಾತ್ರಧಾರಿ ಯಶ್ ಕಾರಣದಿಂದಾಗಿ ನಾನು ಆ ಸಿನಿಮಾ ಬಿಡಲಿಲ್ಲ. ಅಂತಿಮವಾಗಿ, ಆ ಪಾತ್ರಕ್ಕೆ ಸಾಯಿ ಪಲ್ಲವಿ ಅವರು ಆಯ್ಕೆ ಆದ್ರು ಎಂದು ಸ್ಪಷ್ಟನೆ ನೀಡಿದ್ದಾರೆ.


”ದೊಡ್ಡ ಗೊಂದಲ ಆಗಿದೆ. ನಾನು ಯಾಕಾದರೂ ಆ ಬಗ್ಗೆ ಮಾತನಾಡಿದೆ ಎಂದೆನಿಸಿದೆ. ರಾಮಾಯಣ ಸಿನಿಮಾದ ಆಡಿಷನ್ಗೆ ನನ್ನನ್ನು ಕರೆದಿದ್ದರು. ಹೊಸ ಪ್ರತಿಭೆಯನ್ನು ಅಷ್ಟು ದೊಡ್ಡ ಪಾತ್ರಕ್ಕೆ ಪರಿಗಣಿಸಿರೋದೇ ದೊಡ್ಡ ವಿಷಯ. ನಾನು ಬಹಳ ಖುಷಿಯಿಂದಲೇ ಹೋಗಿದ್ದೆ. ಆಡಿಷನ್ ಕೂಡಾ ಕೊಟ್ಟೆ. ಅದಕ್ಕೂ ಮುನ್ನ ಸಾಕಷ್ಟು ನಟಿಯರು ಆಡಿಷನ್ ಕೊಟ್ಟಿದ್ದಾರೋ, ಇಲ್ಲವೋ ಎಂಬುದು ಗೊತ್ತಿಲ್ಲ. ಫೈನಲಿ, ನಟಿ ಸಾಯಿ ಪಲ್ಲವಿ ಅವರು ಸೆಲೆಕ್ಟ್ ಆಗಿದ್ದಾರೆ.

ಅದು ನನಗೆ ಬಹಳ ಖುಷಿ ಕೊಟ್ಟಿದೆ. ಬ್ರಿಲಿಯಂಟ್ ಛಾಯ್ಸ್. ನನಗೂ ಅವರೆಂದರೆ ಬಹಳ ಇಷ್ಟ. ಅವರು ಸ್ಫೂರ್ತಿ. ಈ ಉದ್ಯಮದಲ್ಲಿ ಮಹಿಳೆಯರು ಎಷ್ಟು ಚೆನ್ನಾಗಿದ್ದಾರೆ, ಎಷ್ಟು ಎಲಿಗೆಂಟ್ ಆಗಿದ್ದಾರೆ ಎಂಬುದನ್ನು ಅವರನ್ನು ನೋಡಿ ಕಲಿಯಬೇಕು. ಅವರ ಪ್ರತಿಭೆ, ನಟನೆ ಬಗ್ಗೆ ಹೇಳೋ ಹಾಗೇ ಇಲ್ಲ. ಗ್ರೇಟ್ ಚಾಯ್ಸ್” – ಶ್ರೀನಿಧಿ ಶೆಟ್ಟಿ.


ಆಡಿಷನ್ ಕೊಟ್ಟಿದ್ದು ನಿಜ, ಆದ್ರೆ ಸೆಲೆಕ್ಟ್ ಆಗ್ಲಿಲ್ಲ: ಮಾತು ಮುಂದುವರಿಸಿದ ನಟಿ, ಯಶ್ ಕಾರಣದಿಂದ ನಾನು ಈ ಸಿನಿಮಾ ಬಿಟ್ಟೆ ಎಂದು ನನ್ನ ಹೇಳಿಕೆಗಳನ್ನು ತಿರುಚಲಾಗಿದೆ. ಸೀತಾ ಪಾತ್ರ ನನಗೆ ಮೊದಲು ಬಂದಿದ್ದು, ಆದ್ರೆ ನಾನು ರಿಜೆಕ್ಟ್ ಮಾಡಿದ್ದೇನೆ ಎಂದೆಲ್ಲಾ ವೈರಲ್ ಆಗಿದೆ. ಆ ಸಂದರ್ಶನದಲ್ಲಿ ಕ್ಯಾಶುವಲ್ ಆಗಿ ನನ್ನ ಅನಿಸಿಕೆ ಹಂಚಿಕೊಂಡಿದ್ದೆ. ಕೆಜಿಎಫ್ ಸಿನಿಮಾ ಆಗಷ್ಟೇ ತೆರೆಕಂಡು ಸೂಪರ್ ಹಿಟ್ ಆಗಿತ್ತು.

ರಾಕಿ ರೀನಾ ಪಾತ್ರಗಳು ಎಲ್ಲರಿಗೂ ಇಷ್ಟ ಆಗಿದ್ದವು. ರಾಮಾಯಣದಲ್ಲಿ ರಾವಣ ಪಾತ್ರವನ್ನು ಯಶ್ ನಿರ್ವಹಿಸಲಿದ್ದಾರೆ ಎಂಬ ಮಾತೂ ಕೂಡಾ ಕೇಳಿಬಂತು. ಹಾಗಾಗಿ, ನಾನು ಕ್ಯಾಶುವಲ್ ಆಗಿ ರಾವಣ ಸೀತೆ ವಿರುದ್ಧ ಪಾತ್ರಗಳಲ್ಲವೇ? ಎಂದು ಅನಿಸಿಕೆ ಹಂಚಿಕೊಂಡಿದ್ದೆಯಷ್ಟೇ. ಆದ್ರೆ ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.

ಯಶ್ ರಾವಣ ರೋಲ್ ನಿರ್ವಹಿಸುತ್ತಿರೋದ್ರಿಂದ ಶ್ರೀನಿಧಿ ಸೀತಾ ಪಾತ್ರ ಬಿಟ್ಟರು ಎಂದೆಲ್ಲಾ ಹಬ್ಬಿಸಲಾಗಿದೆ. ನಾನ್ಯಾರು ಸೀತಾ ಪಾತ್ರವನ್ನು ತಿರಸ್ಕರಿಸಲು? ಸೀತೆ ಬಹಳ ದೊಡ್ಡ ಪಾತ್ರ. ನಾನದನ್ನು ತಿರಸ್ಕರಿಸಿಲ್ಲ. ಆಡಿಷನ್ ಕೊಟ್ಟಿದ್ದು ನಿಜ. ಆದ್ರೆ ಸೆಲೆಕ್ಟ್ ಆಗ್ಲಿಲ್ಲ. ಕೊನೆಗೆ ಸಾಯಿ ಪಲ್ಲವಿ ಅವರು ಸೆಲೆಕ್ಟ್ ಆದ್ರು. ಗೊಂದಲ ಹರಡಿಸಬೇಡಿ ಎಂದು ನೆಟ್ಟಿಗರಲ್ಲಿ ಮನವಿ ಮಾಡಿಕೊಂಡರು.

ನಿತೀಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲಿ ರಣ್ಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ರಾಮ ಸೀತೆಯಾಗಿ, ಯಶ್ ಅವರು ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ.

The post ‘ರಾವಣ ಪಾತ್ರಧಾರಿ ಯಶ್ ನಟನೆಯ ರಾಮಾಯಣ’ದ ಬಗ್ಗೆ ಹರಡಿರುವ ವದಂತಿಗೆ ನಟಿ ಫುಲ್ ಸ್ಟಾಪ್ . appeared first on Good News 24x7.

]]>