resignation Archives - Good News 24x7 https://www.goodnews24x7.com/tag/resignation/ Kannada Fri, 05 Sep 2025 13:22:32 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg resignation Archives - Good News 24x7 https://www.goodnews24x7.com/tag/resignation/ 32 32 ಭೋವಿ ನಿಗಮದಲ್ಲಿ ಲಂಚದ ಆರೋಪ: ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ. https://www.goodnews24x7.com/allegations-of-bribery-in-bhovi-corporation-s-ravikumar-resigns-as-president/ Fri, 05 Sep 2025 13:22:32 +0000 https://www.goodnews24x7.com/?p=7385 ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಲಂಚದ ಆರೋಪದ ಹೊರೆ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಿಕಟಪೂರ್ವದಲ್ಲಿ ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ…

The post ಭೋವಿ ನಿಗಮದಲ್ಲಿ ಲಂಚದ ಆರೋಪ: ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ. appeared first on Good News 24x7.

]]>

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಲಂಚದ ಆರೋಪದ ಹೊರೆ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ನಿಕಟಪೂರ್ವದಲ್ಲಿ ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಮೌರ್ಯ ಅವರು ಪತ್ರಿಕಾಗೋಷ್ಠಿ ಮೂಲಕ ನಿಗಮದಲ್ಲಿ ಲಂಚದ ಆರೋಪ ಹೊರಿಸಿದ್ದರು. ನಿಗಮದ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಕ್ಷೇಪ ಹಾಕಿದ ಅವರು, ಸುಮಾರು ₹15 ಕೋಟಿ ಮೊತ್ತದ ಭೂಯೋಜನೆಯಲ್ಲಿ ಫಲಾನುಭವಿಗಳಿಂದ ಶೇ.60ರಷ್ಟು ಲಂಚ ಕೇಳಲಾಗಿದೆ ಎಂದು ದೂರಿದ್ದರು. ಈ ಸಂಬಂಧದ ವಿಡಿಯೋ ಒಂದೂ ವೈರಲ್ ಆಗಿದೆ.

ಈ ಘಟನೆ ರಾಜಕೀಯ ತೀವ್ರತೆ ಪಡೆದುಕೊಂಡಿದ್ದು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರವಿಕುಮಾರ್‌ಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆಯೆಂಬ ಸುದ್ದಿ ಹರಿದಿದೆ. ಕೊನೆಗೆ, ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ರವಿಕುಮಾರ್ ಸ್ಪಷ್ಟನೆ ಏನು?

2024ರ ಮಾರ್ಚ್ 15ರಿಂದ ನಿಗಮದ ಅಧ್ಯಕ್ಷರಾಗಿದ್ದ ರವಿಕುಮಾರ್, ತಮ್ಮ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಪಟ್ಟಿ ಹಾಕಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಕುರಿತಾಗಿ ತನಿಖೆ ನಡೆಯುತ್ತಿದೆ ಎಂಬುದು ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ.

ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, “ನಾನು ಪಾರದರ್ಶಕ ಆಡಳಿತ ನೀಡಲು ಪ್ರಯತ್ನಿಸಿದ ಕಾರಣ, ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ. ನನ್ನ ಮಾನಹಾನಿಗೆ ಕಾರಣವಾಗುವ ರೀತಿಯಲ್ಲಿ ವಿಡಿಯೋ ಕ್ಲಿಪ್‌ಗಳನ್ನು ತಿದ್ದುಪಡಿ ಮಾಡಲಾಗಿದೆ. ಇದನ್ನು ಎಐ ತಂತ್ರಜ್ಞಾನ ಬಳಸಿಕೊಂಡು ತಿರುಚಲಾಗಿದೆ,” ಎಂದು ಆರೋಪಿಸಿದ್ದಾರೆ.

ಅವರು ಸೈಬರ್ ಮತ್ತು ಎಫ್‌ಎಸ್‌ಎಲ್ ತಂಡಗಳಿಂದ ತಕ್ಷಣ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜೀನಾಮೆಯ ಹಿಂದೆ ರಾಜಕೀಯ ಒತ್ತಡವೇ?

ಮುನ್ಸೂಚನೆಯಂತೆ, ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರೆ ರಾಜೀನಾಮೆ ನೀಡಲು ಸಿದ್ಧ ಎನ್ನುವುದಾಗಿ ರವಿಕುಮಾರ್ ಇದೇ ಹಿಂದೆ ಹೇಳಿದ್ದರು. “ಪಕ್ಷಕ್ಕೆ ಮುಜುಗರವಾಗದಂತೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ,” ಎಂದು ಅವರು ತಿಳಿಸಿದ್ದಾರೆ.

ಹಿಂದೆ ಏನಾಯಿತ್ತೆಂದು ರವಿಕುಮಾರ್ ಅಭಿಪ್ರಾಯ?

“ಭೋವಿ ನಿಗಮದ ಅಧ್ಯಕ್ಷ ಸ್ಥಾನ ಮಣಿಕಟ್ಟಿದ ಕುರ್ಚಿ. ಭ್ರಷ್ಟಾಚಾರ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೆ. ಆದರೆ ಕೆಲವರು ರಾಜಕೀಯ ಹಾಗೂ ಆಂತರಿಕ ಬೇದभावದಿಂದಾಗಿ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ,” ಎಂದು ಅವರು ಈ ಹಿಂದೆ ಹೇಳಿದ್ದಾರೆ.

ಹೊಂದಾಣಿಕೆಗೆ ಪ್ರಾಮುಖ್ಯತೆ ನೀಡಿದ ರವಿಕುಮಾರ್ ರಾಜೀನಾಮೆ ತೋರಿಸುತ್ತಿದ್ದರೂ, ಈ ಘಟನೆ ಭೋವಿ ನಿಗಮದೊಳಗಿನ ವ್ಯವಹಾರಗಳ ಕುರಿತು ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಮುಂದಿನ ದಿನಗಳಲ್ಲಿ ತನಿಖೆಯ ವರದಿ ಏನನ್ನು ತರುವುದೆಂದು ಕಾದು ನೋಡಬೇಕಿದೆ.

The post ಭೋವಿ ನಿಗಮದಲ್ಲಿ ಲಂಚದ ಆರೋಪ: ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ. appeared first on Good News 24x7.

]]>
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ. https://www.goodnews24x7.com/pe%e1%b9%adrol-suriduko%e1%b9%87%e1%b8%8du-atmahatyege-yatnisida-raja%e1%b9%87%e1%b9%87a-bembaliga-knrajannapetrolmadhugiricongressresignationbjpgovernmentsuicidedcmdkmlasunilkumarlegislat/ Tue, 12 Aug 2025 11:38:50 +0000 https://www.goodnews24x7.com/?p=5951 ಸಚಿವ ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮಧುಗಿರಿ ಬಂದ್​​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ರಾಜಣ್ಣರನ್ನು ವಜಾ ಮಾಡಿದ್ದನ್ನೇ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ, ಸದನದ ಹೊರಗೂ ಒಳಗೂ ಕಾಂಗ್ರೆಸ್ ನಾಯಕರನ್ನು ಮಾತಿನಲ್ಲೇ…

The post ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ. appeared first on Good News 24x7.

]]>

ಸಚಿವ ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮಧುಗಿರಿ ಬಂದ್​​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ರಾಜಣ್ಣರನ್ನು ವಜಾ ಮಾಡಿದ್ದನ್ನೇ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ, ಸದನದ ಹೊರಗೂ ಒಳಗೂ ಕಾಂಗ್ರೆಸ್ ನಾಯಕರನ್ನು ಮಾತಿನಲ್ಲೇ ಕಟ್ಟಿ ಹಾಕುವ ಯತ್ನ ಮಾಡಿದೆ.

ಸಚಿವ ಸ್ಥಾನದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಿದ್ದನ್ನು ಖಂಡಿಸಿ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ರಾಜಣ್ಣ ಬೆಂಬಲಿಗರು, ಅಭಿಮಾನಿಗಳು ಮಂಗಳವಾರ ಬೃಹತ್​​ ಪ್ರತಿಭಟನೆ ನಡೆಸಿದರು. ಮಧುಗಿರಿ ಬಂದ್​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಭಾಗಿಯಾದರು. ಈ ವೇಳೆ ರಾಜಣ್ಣ ಅಭಿಮಾನಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸುವಂತೆ ಹೈಡ್ರಾಮಾ ಮಾಡಿದ. ಕೂಡಲೇ ಸ್ಥಳದಲ್ಲಿದ್ದವರು ಆತನ ಮೇಲೆ ನೀರು ಸುರಿದು ರಕ್ಷಿಸಿದರು.

ನಾಟಿ ಹೋರಿಗಳ ಕತ್ತು ಕೊಯ್ದು ಕಟುಕರು ! ಅಕ್ರಮ ಸಾಗಣೆಯ ಅನುಮಾನ!

 

ಸಾಮೂಹಿಕ ರಾಜೀನಾಮೆಗೆ ಮುಂದಾದ ರಾಜಣ್ಣ ಬೆಂಬಲಿಗರು
ಮಧುಗಿರಿಯ ಪುರಸಭೆ ವಾರ್ಡ್​ ಸಂಖ್ಯೆ 22 ರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. 10ನೇ ವಾರ್ಡ್ ಸದಸ್ಯೆ ಗಿರಿಜಾ ಮಂಜುನಾಥ್ ಉಪ ವಿಭಾಗಾಧಿಕಾರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅತ್ತ ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ಹಾದಿ ತುಳಿದಿದ್ದರೆ, ಇತ್ತ ಬಿಜೆಪಿಗೆ ರಾಜಣ್ಣರನ್ನು ವಜಾ ಮಾಡಿದ್ದೇ ಅಸ್ತ್ರವಾಗಿ ಸಿಕ್ಕಿದೆ.

ರಾಜಣ್ಣ ವಜಾ ಮಾಡಿದ್ದೇಕೆ? ಸದನದಲ್ಲಿ ಉತ್ತರಕ್ಕೆ ಬಿಜೆಪಿ ಪಟ್ಟು
ವಿಧಾನಸಭೆ ಕಲಾಪದ ಆರಂಭದಲ್ಲಿ, ಅಂದರೆ ಪ್ರಶ್ನೋತ್ತರ ವೇಳೆ ಶುರುವಾಗುವ ಮುನ್ನ ವಿಪಕ್ಷ ನಾಯಕ ಆರ್​ ಅಶೋಕ್ ಮಾತನಾಡಿ, ರಾಜಣ್ಣರನ್ನು ವಜಾ ಮಾಡಿದ್ದೇಕೆ? ಸರ್ಕಾರ ಇದಕ್ಕೆ ಉತ್ತರ ಕೊಡಬೇಕೆಂದು ಆಗ್ರಹಿಸಿದರು. ಈ ವೇಳೆ, ಸ್ಪೀಕರ್ ಖಾದರ್ ಇದು ಅವರ ಪಕ್ಷದ ಆಂತರಿಕ ವಿಚಾರ ಎಂದಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಇಷ್ಟಕ್ಕೆ ಸುಮ್ಮನಾಗದ ಆರ್​.ಅಶೋಕ್, ಮತ ಕಳ್ಳತನದ ಕುರಿತು ರಾಜಣ್ಣ ಸತ್ಯ ಹೇಳಿದ್ದಾರೆ. ಸತ್ಯ ಹೇಳಿದ್ದಕ್ಕೆ ಅವರನ್ನು ಬಲಿ ಪಡೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಇತ್ತ ವಿಧಾನ ಪರಿಷತ್​ನಲ್ಲೂ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪತ್ರವನ್ನು ಓದಿದರು. ಇದಕ್ಕೆ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭಾಪತಿ ಹೊರಟ್ಟಿ, ಪ್ರಶ್ನೋತ್ತರ ಕಲಾಪದ ಬಳಿಕ ಬಳಿಕ ಪ್ರಸ್ತಾಪಿಸುವಂತೆ ಸೂಚನೆ ನೀಡಿದರು. ಆಗ ಬಿಜೆಪಿ ಸದಸ್ಯರು ಈಗಲೇ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಕೆಮ್ಮಿದ್ದಕ್ಕೆ ಕಿಚಾಯಿಸಿದ ಬಿಜೆಪಿ
ಇದೆಲ್ಲದರ ನಡುವೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿರುವಾಗ ಉತ್ತರ ನೀಡಲು ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ಕೆಮ್ಮತೊಡಗಿದರು. ಈ ವೇಳೆ, ಬಿಜೆಪಿ ಶಾಸಕ ಸುನಿಲ್ ಕುಮಾರ್, ‘ನೀವು ಕೆಮ್ಮಿದರೆ ಯಾರಿಗೆ ಅಪಾಯ ಕಾದಿದೆಯೋ ಗೊತ್ತಿಲ್ಲ’ ಎಂದು ಕಾಲೆಳೆದರು. ಸುನೀಲ್ ಕುಮಾರ್ ಮಾತಿಗೆ ಸದನ ನಗೆ ಗಡಲಲ್ಲಿ ತೇಲಿತು. ಏನೂ ಪ್ರತಿಕ್ರಿಯೆ ನೀಡದ ಡಿಕೆ ಶಿವಕುಮಾರ್ ಉತ್ತರ ಮುಂದುವರಿಸಿದರು.
ಸದನದ ಹೊರಗೂ ಮಾತನಾಡಿರುವ ಬಿಜೆಪಿ ನಾಯಕರು, ರಾಜಣ್ಣ ವಜಾ ಮಾಡುವಂಥ ಅಪರಾಧ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

The post ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ. appeared first on Good News 24x7.

]]>
ಸಚಿವ ರಾಜಣ್ಣ ದಿಢೀರ್ ರಾಜೀನಾಮೆ ನಿರ್ಧಾರದ ಹಿಂದಿನ ಕೈವಾಡ ಯಾರದ್ದು? https://www.goodnews24x7.com/who-is-behind-the-sudden-resignation-of-minister-rajanna/ Mon, 11 Aug 2025 13:01:33 +0000 https://www.goodnews24x7.com/?p=5854 ಬೆಂಗಳೂರು : ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದು ಇದ್ದಕ್ಕಿದ್ದಂತೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದ ಜನರಿಗೆ ಶಾಕ್ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್…

The post ಸಚಿವ ರಾಜಣ್ಣ ದಿಢೀರ್ ರಾಜೀನಾಮೆ ನಿರ್ಧಾರದ ಹಿಂದಿನ ಕೈವಾಡ ಯಾರದ್ದು? appeared first on Good News 24x7.

]]>

ಬೆಂಗಳೂರು : ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದು ಇದ್ದಕ್ಕಿದ್ದಂತೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದ ಜನರಿಗೆ ಶಾಕ್ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ ಇಷ್ಟೆಲ್ಲ ಬೆಳವಣಿಗೆಗಳು ನಡೆಯಲು ಕಾರಣವೇನು? ಕೆಎನ್ ರಾಜಣ್ಣ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದರೇ? ಅಥವಾ ಯಾರದ್ದಾದರೂ ಒತ್ತಡಕ್ಕೆ ಕಟ್ಟುಬಿದ್ದು ಅವರು ಈ ನಿರ್ಧಾರ ತೆಗೆದುಕೊಂಡರೇ? ಎಂಬ ಕುತೂಹಲಗಳಿಗೆ ಉತ್ತರ ಇಲ್ಲಿದೆ.

ಇಂದು ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಕಾರ್ಯದರ್ಶಿಗೆ ಕೆಎನ್ ರಾಜಣ್ಣ ರಾಜೀನಾಮೆ ಪತ್ರ ನೀಡಿ ವಿಧಾನಸೌಧದಿಂದ ಹೊರಟಿದ್ದಾರೆ. ಬಳಿಕ ಸಿಎಂ ಆ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದರು. ಹೀಗೆ ದಿಢೀರೆಂದು ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಹಿಂದೆ ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜಣ್ಣ ಅವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಸೂಚನೆ ನೀಡಿತ್ತು. ಇಂದು ಸಂಜೆ 6 ಗಂಟೆಯೊಳಗೆ ರಾಜೀನಾಮೆ ಪಡೆಯುವಂತೆ ಸೂಚನೆ ನೀಡಲಾಗಿತ್ತು. ಇಂದುವೇಳೆ ಅವರು ರಾಜೀನಾಮೆ ನೀಡದಿದ್ದರೆ ರಾಜಣ್ಣ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಬೇಕಾಗುತ್ತದೆ ಎಂದು ತಿಳಿಸಲಾಗಿತ್ತು.

ಇಂದು ಸಂಜೆ 6ರೊಳಗೆ ರಾಜೀನಾಮೆ ನೀಡದಿದ್ದರೆ ಕೆ.ಎನ್.ರಾಜಣ್ಣ ಅವರನ್ನು ಉಚ್ಚಾಟನೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿತ್ತು. ಹೀಗಾಗಿ, ತಕ್ಷಣ ರಾಜಣ್ಣ ಅವರ ಜೊತೆ ಮಾತುಕತೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಉಚ್ಛಾಟನೆಯಿಂದ ಪಾರಾಗಲು ರಾಜೀನಾಮೆ ಸಲ್ಲಿಸುವಂತೆ ಸಲಹೆ ನೀಡಿದ್ದರು. ಹೀಗಾಗಿ, ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕೆ.ಎನ್.ರಾಜಣ್ಣ ಅವರಿಂದ ರಾಜೀನಾಮೆ ಪಡೆದು ರಾಜ್ಯಪಾಲರಿಗೆ ಕಳುಹಿಸಿ, ರಾಜಭವನದಿಂದ ಬಂದ ಅಂಗೀಕಾರದ ಪ್ರತಿಯನ್ನು ರಾಹುಲ್ ಗಾಂಧಿಯ ಕಚೇರಿಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ನಿರ್ಧಾರಕ್ಕೆ ಕಾರಣವೇನು?:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಕೆಎನ್ ರಾಜಣ್ಣ ಅವರ ತಲೆದಂಡ ಕಾಂಗ್ರೆಸ್ ಪಕ್ಷದಲ್ಲಿಯೂ ಭಾರೀ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯನವರ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣ ಇತ್ತೀಚೆಗೆ ಕೆಲವು ಬಾರಿ ಕಾಂಗ್ರೆಸ್ ವಿರುದ್ಧವೇ ಹೇಳಿಕೆ ನೀಡಿ ಹೈಕಮಾಂಡ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಆಗಸ್ಟ್ 8ರಂದು ಬೆಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ರಾಜಣ್ಣ, ನಾವೇ ಮೊದಲು ಮತಪಟ್ಟಿಯನ್ನು ನೋಡಿಕೊಳ್ಳಬೇಕಿತ್ತು. ಅದು ಬಿಟ್ಟು ಈಗ ಆ ವಿಷಯವನ್ನು ಹೇಳುತ್ತಿರುವುದು ಸರಿಯಲ್ಲ. ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದಾಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ನಮ್ಮ ನಾಯಕರು ಕಣ್ಣುಮುಚ್ಚಿ ಕುಳಿತಿದ್ದರಾ? ಎಂದು ತಮ್ಮದೇ ಪಕ್ಷದವರ ವಿರುದ್ಧ ತುಮಕೂರಿನಲ್ಲಿ ಹೇಳಿಕೆ ನೀಡಿದ್ದರು.

ಇದೇ ವಿಡಿಯೋವನ್ನು ಬಳಸಿಕೊಂಡು ಬಿಜೆಪಿ ಕಾಂಗ್ರೆಸ್ ಸರ್ಕಾರ ಹಾಗೂ ರಾಹುಲ್ ಗಾಂಧಿಯ ವಿರುದ್ಧ ಟೀಕಾಪ್ರಹಾರ ನಡೆಸಿತ್ತು. ನಿಮ್ಮದೇ ಪಕ್ಷದ ಸಚಿವರು ನಿಮ್ಮ ಬಂಡವಾಳ ಬಿಚ್ಚಿಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿತ್ತು. ರಾಜಣ್ಣ ಮಾತನಾಡಿದ್ದ ಆ ವಿಡಿಯೋ ಕಾಂಗ್ರೆಸ್ ಹೈಕಮಾಂಡ್ ನಾಯಕರ ಕೈಸೇರಿತ್ತು. ಇದೇ ಕಾರಣಕ್ಕೆ ರಾಜಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿತ್ತು ಎನ್ನಲಾಗಿದೆ. ಹೀಗಾಗಿ, ರಾಜೀನಾಮೆ ಅಥವಾ ಉಚ್ಛಾಟನೆ ಎಂಬ 2 ಆಯ್ಕೆಯನ್ನು ರಾಜಣ್ಣ ಅವರ ಮುಂದಿಡಲಾಗಿತ್ತು. ಅನಿವಾರ್ಯವಾಗಿ ರಾಜಣ್ಣ ರಾಜೀನಾಮೆಯ ಆಯ್ಕೆಯನ್ನು ಆರಿಸಿಕೊಳ್ಳಬೇಕಾಯಿತು ಎನ್ನಲಾಗಿದೆ. ಆದರೆ, ಅವರ ಉಚ್ಛಾಟನೆಯ ಬಗ್ಗೆಯೂ ಇನ್ನೂ ವದಂತಿಗಳು ಹರಿದಾಡುತ್ತಿವೆ.

The post ಸಚಿವ ರಾಜಣ್ಣ ದಿಢೀರ್ ರಾಜೀನಾಮೆ ನಿರ್ಧಾರದ ಹಿಂದಿನ ಕೈವಾಡ ಯಾರದ್ದು? appeared first on Good News 24x7.

]]>
ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ. https://www.goodnews24x7.com/%e0%b2%b0%e0%b2%be%e0%b2%9c%e0%b3%80%e0%b2%a8%e0%b2%be%e0%b2%ae%e0%b3%86-%e0%b2%a8%e0%b2%bf%e0%b2%b0%e0%b3%8d%e0%b2%a7%e0%b2%be%e0%b2%b0%e0%b2%a6%e0%b2%bf%e0%b2%82%e0%b2%a6-%e0%b2%b9%e0%b2%bf%e0%b2%82/ Tue, 25 Mar 2025 11:04:52 +0000 https://www.goodnews24x7.com/?p=2881 ಹುಬ್ಬಳ್ಳಿ :- ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ…

The post ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ. appeared first on Good News 24x7.

]]>

ಹುಬ್ಬಳ್ಳಿ :- ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಹೊರಟ್ಟಿ, ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ. 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ಅದನ್ನ(ರಾಜೀನಾಮೆ) ಅಲ್ಲಿಗೆ ಕೈ ಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಅನ್ ಸೈನಡ್ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ . 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ಅದನ್ನ ಅಲ್ಲಿಗೆ ಕೈ ಬಿಟ್ಟಿದ್ದೇನೆ. ಬೆಂಗಳೂರಲ್ಲಿ ಸಭೆ ಮಾಡೋದಾಗಿ ಅಂದು ಕೊಂಡಿದ್ದೇವೆ. ಎಲ್ಲರೂ ಸಹ ನೀವೇ ರಾಜೀನಾಮೆ ಕೊಡಬೇಡಿ ಎಂದು ಹೇಳುತ್ತಿದ್ದಾರೆ. ನಾನು ಮಾಡಿದ ತೀರ್ಮಾನಕ್ಕೆ ವಿರೋಧ ಬಂತು . ನಮ್ಮ ಶಾಸನ ಸಭೆ ಸದಸ್ಯರು ನೋಡೋಣ ರಾಜೀನಾಮೆ ಬೇಡ ಎಂದಿದ್ದಾರೆ. ಪುಟ್ಟಣ್ಣ ಕರೆ ಮಾಡಿ ರಾಜೀನಾಮೆ ವಿಷಯದಲ್ಲಿ ಮುಂದುವರಿಬೇಡಿ ಅಂದ್ರು. ಸಾರ್ವಜನಿಕ ವಲಯದಲ್ಲಿ ನನಗೆ ಇಷ್ಟೊಂದು ಗೌರವ ಕೊಡುತ್ತಿರುವುದಕ್ಕೆ ನಾನು ರಾಜೀನಾಮೆಯಿಂದ ಹಿಂದೆ ಸರಿದಿದ್ದೇನೆ ಎಂದು ಬಸವರಾಜ್ ಹೊರಟ್ಟಿ ಹೇಳಿದರು.

ಈ ಹಿಂದೆ ಇಂತಹ ಘಟನೆ ಆಗಿಲ್ಲ. ಮಾರ್ಚ್ 19, 20, 21ಕ್ಕೆ ಸದನ ಮುಂದುವರೆಸಲಾಗದಂತೆ ಆಯ್ತು. ಬಜೆಟ್ ಮೇಲೆ ಸಿಎಂ ಉತ್ತರ ಕೊಟ್ಟ ನಂತರ ಹನಿಟ್ರ್ಯಾಪ್ ಉತ್ತರ ಕೊಡಿಸುತ್ತೇನೆ ಎಂದು ಹೇಳಿದ್ದೆ. ತಪ್ಪಿಗಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಹ ಹೇಳಿದ್ದರು. ಆದರೂ ಅದೇ ಗದ್ದಲದಲ್ಲಿ ಬಿಲ್ ಕೂಡ ಪಾಸ್ ಆಯ್ತು. ಚರ್ಚೆ ಆಗದೆ ಈ ರೀತಿ ಗದ್ದಲದಲ್ಲಿ ಬಿಲ್ ಪಾಸ್ ಆಗಬಾರದು. ಅದು ಜನರಿಗೆ ಮೋಸ ಮಾಡಿದಂತೆ. ನಾನು ಅಲ್ಲಿ ಇದ್ರು ಕೂಡ ಈ ರೀತಿ ಮಾಡಿದ್ರು . ಹೀಗಾಗಿ ಮನಸ್ಸಿಗೆ ಬೇಜಾರ್ ಆಯ್ತು ಎಂದು ಬೇಸರ ಹೊರಹಾಕಿದರು.
ಹಲವು ನಾಯಕರು ರಾಜೀನಾಮೆ ಕೊಡುವುದರಿಂದ ಎಲ್ಲಾ ಬಗೆ ಹರಿಯುವುದಿಲ್ಲ ಅಂದ್ರು. ಹೀಗಾಗಿ ರಾಜೀನಾಮೆ ನೀಡಬಾರದು ಎಂದು ಈಗಾಗಲೇ ತೀರ್ಮಾನ ಮಾಡಿದ್ದೇನೆ. 27ರ ನಂತರ ಎಲ್ಲಾ 75 ಸದಸ್ಯರಿಗೆ ಪತ್ರ ಕಳುಹಿಸುತ್ತೇನೆ. ಯಾರು ನನ್ನ ಮಾತು ಮೀರಲ್ಲ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಿನ ದಿನಮಾನಗಳಲ್ಲಿ ಒಣ ಪ್ರತಿಷ್ಠೆನೇ ಜಾಸ್ತಿ ಆಗಿದೆ. ಜನರ ಅಭಿವೃದ್ಧಿ ಬಗ್ಗೆ ಯಾವ ಚರ್ಚೆ ಕೂಡ ಆಗಿಲ್ಲ . ಹನಿಟ್ರ್ಯಾಪ್ ಬಗ್ಗೆ ಮುಖ್ಯಮಂತ್ರಿ ಕ್ರಮ ಕೈಗೊಳ್ಳುತ್ತೇವೆ ಅಂದ್ರೆ ಮುಗಿದೋಯ್ತು. ಮುಂದಿನ ಅಧಿವೇಶನಕ್ಕೆ ಸದನ ಉತ್ತಮಗೊಳಿಸುವ ಕೆಲಸ ಮಾಡುತ್ತೇವೆ. ಈ ಘಟನೆ ಆಗಿದ್ದು ಒಳ್ಳೆದಾಯ್ತು, ಸುಧಾರಣೆಗೆ ಒಂದು ದಾರಿ ಆದಂತಾಗಿದೆ. ನಾನು ಸ್ವಲ್ಪ ಭಾವುಕನಾಗೋದು ಸಹಜವಾಗಿ ಕಣ್ಣಲ್ಲಿ ನೀರು ಬರುತ್ತೆ. ವ್ಯವಸ್ಥೆ ಸರಿ ಪಡಿಸಲು ಏನಾದರೂ ಮಾಡಬೇಕು . ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

The post ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ. appeared first on Good News 24x7.

]]>
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ್ ಹೊರಟ್ಟಿ ರಾಜೀನಾಮೆ! https://www.goodnews24x7.com/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0%e0%b2%be%e0%b2%9c%e0%b3%8d%e0%b2%af-%e0%b2%b0%e0%b2%be%e0%b2%9c%e0%b2%95%e0%b2%be%e0%b2%b0%e0%b2%a3%e0%b2%a6%e0%b2%b2%e0%b3%8d/ Sun, 23 Mar 2025 12:14:28 +0000 https://www.goodnews24x7.com/?p=2871 ಬೆಂಗಳೂರು/ಹುಬ್ಬಳ್ಳಿ : ಕರ್ನಾಟಕದಲ್ಲಿ ಹನಿಟ್ರ್ಯಾಪ್ ಪ್ರಕರಣ ಗದ್ದಲದ ಮಧ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು…

The post ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ್ ಹೊರಟ್ಟಿ ರಾಜೀನಾಮೆ! appeared first on Good News 24x7.

]]>

ಬೆಂಗಳೂರು/ಹುಬ್ಬಳ್ಳಿ : ಕರ್ನಾಟಕದಲ್ಲಿ ಹನಿಟ್ರ್ಯಾಪ್ ಪ್ರಕರಣ ಗದ್ದಲದ ಮಧ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹಾಗಾಗಿ, ನಾನು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಇಂದು (ಮಾರ್ಚ್ 23) ಬೆಳಗ್ಗೆ ಅಷ್ಟೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗಾಗಲೇ ಅವರು ರಾಜೀನಾಮೆ ಪತ್ರವನ್ನು ಉಪಸಭಾಪತಿಗೆ ರವಾನಿಸಿರುವುದು ಬೆಳಕಿಗೆ ಬಂದಿದೆ.


ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ಏನಿದೆ?
ಇನ್ನು ಬಸವರಾಜ್ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಇಂದು (ಮಾರ್ಚ್ 23) ಬೆಳಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿರುವುದು ಬೆಳಕಿಗೆ ಬಂದಿದೆ. ಹೌದು..ಮಾರ್ಚ್ 18ರಂದೇ ಹೊರಟ್ಟಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಾಣೇಶ್ ಅವರಿಗೆ ಕಳುಹಿಸಿದ್ದು, ದಿನಾಂಕ 1-4-25ರಂದು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ವೈಯಕ್ತಿ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆಯನ್ನು 31-3-25ರೊಳಗೆ ಸ್ವೀಕರಿಸಿ ದಿನಾಂಕ 1-4-2025ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ಹಾಗೂ ನನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಹೊರಟ್ಟಿ ತಮ್ಮ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.


ಬೆಳಗ್ಗೆ ಅಷ್ಟೇ ರಾಜೀನಾಮೆ ಬಗ್ಗೆ ಮಾತನಾಡಿದ್ದ ಹೊರಟ್ಟಿ
ಮಾ. 23ರಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾಡಿರುವ ಹೊರಟ್ಟ, ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಹಾಗೂ ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ಇಂದಿನ ದಿನಗಳಲ್ಲಿ ಸದನಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಅರ್ಥವಾಗಿದೆ. ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.
ಸದನದಲ್ಲಿ ನಡೆಯುತ್ತಿರುವ ಘಟನೆಗಳಿಂದ ನನಗೆ ಬೇಜಾರಾಗಿದೆ. ಸಭಪತಿಗೆ ಹೇಳೋದಿಲ್ಲ ಕೇಳೋದಿಲ್ಲ. ಸದನದೊಳಗೆ ಪ್ರತಿಭಟನೆ ನಡೆಸುತ್ತಾರೆ. ಪರಿಷತ್ಗೆ ಪ್ಲೇ ಕಾರ್ಡ್ಗಳನ್ನು ತೆಗೆದುಕೊಂಡು ಬರುತ್ತಾರೆ. ಸದನ ನಡೆಸುವುದಕ್ಕೆ ನನಗೆ ಯೋಗ್ಯತೆ ಇಲ್ಲ. ಮೊನ್ನೆ ನಾನು 17 ನಿಮಿಷ ಸುಮ್ಮನೆ ಕುತ್ತಿದ್ದೆ. ಇದರಿಂದ ನಾನು ಸದನದಲ್ಲಿ ಇರಬಾರದು ಎಂದು ತೀರ್ಮಾನ ಮಾಡಿದ್ದೇನೆ. 45 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಸದನದಲ್ಲಿ ಯಾರೂ ಗೌರವ ಕೊಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು.
ಈ ಹಿಂದೆಯೂ ರಾಜೀನಾಮೆ ಬಗ್ಗೆ ಮಾತನಾಡಿದ್ದ ಹೊರಟ್ಟಿ
ಬಸವರಾಜ್ ಹೊರಟ್ಟಿ ಅವರು ಹಿಂದೆಯೇ ರಾಜೀನಾಮೆ ಮಾತನಾಡಿದ್ದರು. ಇತ್ತೀಚೆಗೆ ಮೇಲ್ಮನೆಯಲ್ಲಿ ಸಭಾಪತಿ ಹೊರಟ್ಟಿಯವರ ವಿರುದ್ಧವೇ ಅವಿಶ್ವಾಸ ಗೊತ್ತುವಳಿ ಮಂಡಿಸಲು ಕಾಂಗ್ರೆಸ್ ಸಜ್ಜಾಗಿತ್ತು. ಆಗಲೇ ಈ ಬಗ್ಗೆ ಎದ್ದಿದ್ದ ಊಹಾಪೋಹಗಳ ಬಗ್ಗೆ ಮಾತನಾಡಿದ್ದ ಹೊರಟ್ಟಿಯವರು, ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದರೆ, ಅದಕ್ಕೂ ಮುನ್ನವೇ ನಾನೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ನಾನು ಹಿಂದೆ ಮೇಷ್ಟ್ರು ಆಗಿದ್ದವನು. ಅಲ್ಲಿಂದ ಇಲ್ಲಿಯವರೆಗೆ ಸಾಗಿ ಬಂದಿದ್ದೇನೆ. ನನ್ನ ಈ ಸಾಧನೆಯ ಬಗ್ಗೆ ತೃಪ್ತಿಯಿದೆ. ಹಾಗಾಗಿ, ಯಾವುದೇ ಕ್ಷಣದಲ್ಲಿ ಸಭಾಪತಿ ಸ್ಥಾನ ತ್ಯಜಿಸುವ ಸಂದರ್ಭ ಬಂದರೆ ಖಂಡಿತವಾಗಿಯೂ ಆ ಸ್ಥಾನ ತ್ಯಜಿಸಿ ಮತ್ತೆ ನನ್ನ ಶಿಕ್ಷಕ ವೃತ್ತಿಗೆ ಹೋಗುತ್ತೇನೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

The post ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ್ ಹೊರಟ್ಟಿ ರಾಜೀನಾಮೆ! appeared first on Good News 24x7.

]]>