Rishabh Shetty Archives - Good News 24x7 https://www.goodnews24x7.com/tag/rishabh-shetty/ Kannada Sun, 12 Jan 2025 05:36:59 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Rishabh Shetty Archives - Good News 24x7 https://www.goodnews24x7.com/tag/rishabh-shetty/ 32 32 ಹನುಮಂತನಿಗೆ ಅವಮಾನ: ರಿಷಬ್ ಶೆಟ್ಟಿ ಹಾಗೂ ತಂಡದ ವಿರುದ್ಧ ದಾಖಲಾಗಿದೆ ದೂರು. https://www.goodnews24x7.com/%e0%b2%b9%e0%b2%a8%e0%b3%81%e0%b2%ae%e0%b2%82%e0%b2%a4%e0%b2%a8%e0%b2%bf%e0%b2%97%e0%b3%86-%e0%b2%85%e0%b2%b5%e0%b2%ae%e0%b2%be%e0%b2%a8-%e0%b2%b0%e0%b2%bf%e0%b2%b7%e0%b2%ac%e0%b3%8d-%e0%b2%b6/ Sun, 12 Jan 2025 05:36:53 +0000 https://www.goodnews24x7.com/?p=1703 ರಿಷಬ್ ಶೆಟ್ಟಿ ಇದೀಗ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದರ ಜೊತೆಗೆ ಕೆಲ ಪರಭಾಷೆ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದಾರೆ. ಆದರೆ ಇದೀಗ ರಿಷಬ್ ಅವರ ಪರಭಾಷೆ ಸಿನಿಮಾ ಇಕ್ಕಟ್ಟಿನಲ್ಲಿ ಸಿಲುಕಿದೆ. ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡದ ಮೇಲೆ ದೂರು…

The post ಹನುಮಂತನಿಗೆ ಅವಮಾನ: ರಿಷಬ್ ಶೆಟ್ಟಿ ಹಾಗೂ ತಂಡದ ವಿರುದ್ಧ ದಾಖಲಾಗಿದೆ ದೂರು. appeared first on Good News 24x7.

]]>

ರಿಷಬ್ ಶೆಟ್ಟಿ ಇದೀಗ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದರ ಜೊತೆಗೆ ಕೆಲ ಪರಭಾಷೆ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದಾರೆ. ಆದರೆ ಇದೀಗ ರಿಷಬ್ ಅವರ ಪರಭಾಷೆ ಸಿನಿಮಾ ಇಕ್ಕಟ್ಟಿನಲ್ಲಿ ಸಿಲುಕಿದೆ. ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡದ ಮೇಲೆ ದೂರು ದಾಖಲಾಗಿದೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ 2’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ರಿಷಬ್ ಶೆಟ್ಟಿಗೆ ತೆಲುಗು, ಹಿಂದಿ ಚಿತ್ರರಂಗದಿಂದ ಒಂದರ ಹಿಂದೊಂದು ಆಫರ್ಗಳು ಬರುತ್ತಲೇ ಇವೆ. ‘ಹನುಮ್ಯಾನ್’ ಸಿನಿಮಾ ನಿರ್ದೇಶಿಸಿ ಸೂಪರ್ ಹಿಟ್ ನೀಡಿರುವ ಪ್ರಶಾಂತ್ ವರ್ಮಾ ಅವರ ಮುಂದಿನ ತೆಲುಗು ಸಿನಿಮಾ ‘ಜೈ ಹನುಮಾನ್’ನಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಸಿನಿಮಾದ ಪೋಸ್ಟರ್ ಹಾಗೂ ಕಿರು ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಅದರ ಬೆನ್ನಲ್ಲೆ ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡದ ವಿರುದ್ಧ ದೂರು ಸಹ ದಾಖಲಾಗಿದೆ.
‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಆಂಜನೇಯ ಸ್ವಾಮಿಯ ಪಾತ್ರದಲ್ಲಿ ನಟಿಸಲಿದ್ದಾರೆ. ಈಗ ಬಿಡುಗಡೆ ಆಗಿರುವ ಪೋಸ್ಟರ್ನಲ್ಲಿ ರಿಷಬ್ ಶೆಟ್ಟಿ ಉದ್ದನೆಯ ಗಡ್ಡ ಬಿಟ್ಟುಕೊಂಡು, ಉದ್ದನೆಯ ಕೂದಲು ಬಿಟ್ಟುಕೊಂಡು ಶ್ರೀರಾಮನ ಮೂರ್ತಿಯನ್ನು ಅಪ್ಪಿಕೊಂಡಿರುವ ಚಿತ್ರ ಇದೆ. ಟೀಸರ್ನಲ್ಲೂ ಬಹುತೇಕ ಇದೇ ಇತ್ತು. ಈ ಹಿಂದೆ ಭಾರತೀಯ ಚಿತ್ರರಂಗದಲ್ಲಿ ನಿರ್ಮಿಸಲಾಗಿರುವ ಎಲ್ಲ ಪೌರಾಣಿಕ ಸಿನಿಮಾಗಳಲ್ಲಿ ಹನುಮಂತನ ಪಾತ್ರವನ್ನು ತೋರಿಸಿದ್ದಕ್ಕಿಂತಲೂ ಭಿನ್ನವಾಗಿ ‘ಜೈ ಹನುಮಾನ್’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.
ಹನುಮಂತನ ಮುಖವನ್ನೇ ‘ಜೈ ಹನುಮಾನ್’ ಸಿನಿಮಾದಲ್ಲಿ ಬದಲಾಯಿಸಲಾಗಿದೆ. ಎಲ್ಲರಿಗೂ ತಿಳಿದಿರುವಂತೆ ಹನುಮಂತನ ಮುಖ ವಾನರ ಮುಖವನ್ನು ಹೋಲುತ್ತದೆ. ಆದರೆ ‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿಯ ಮುಖವನ್ನು ಸಾಮಾನ್ಯ ಮನುಷ್ಯನ ಮುಖದಂತೆಯೇ ತೋರಿಸಲಾಗಿದೆ. ವಾನರನ ರೀತಿ ಹನುಮಂತನನ್ನು ತೋರಿಸಿಲ್ಲ ಇದೇ ಕಾರಣಕ್ಕೆ ಈಗ ವಕೀಲ ತಿರುಮಲ ರಾವ್ ಎಂಬುವರು ನಾಂಪಲ್ಲಿ ನ್ಯಾಯಾಲಯದಲ್ಲಿ ಸಿನಿಮಾದ ನಿರ್ದೇಶಕ ಪ್ರಶಾಂತ್ ವರ್ಮಾ, ರಿಷಬ್ ಶೆಟ್ಟಿ, ಸಿನಿಮಾದ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ವಿರುದ್ಧ ದೂರು ದಾಖಲಿಸಿದ್ದಾರೆ.
ಹನುಮಂತನ ಮುಖವನ್ನೇ ಬದಲಾಯಿಸುವ ಮೂಲಕ, ಹನುಮನ ಪಾತ್ರವನ್ನು ತಿದ್ದುವ ಕೆಲಸ ಮಾಡಲಾಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡುವ ಕಾರ್ಯ ಇದಾಗಿದ್ದು, ಶೀಘ್ರವೇ ಸಿನಿಮಾದ ಪೋಸ್ಟರ್, ಟೀಸರ್ಗಳನ್ನು ಹಿಂಪಡೆಯುವಂತೆ ಆದೇಶಿಸಬೇಕೆಂದು ವಕೀಲ ತಿರುಮಲ ವರ್ಮಾ ಅರ್ಜಿ ದಾಖಲಿಸಿದ್ದಾರೆ. ರಿಷಬ್ ಶೆಟ್ಟಿಯ ‘ಜೈ ಹನುಮಾನ್’ ಸಿನಿಮಾ ರಾಮಾಯಣದ ನಂತರದ ಕತೆಯನ್ನು ಒಳಗೊಂಡಿದೆಯಂತೆ. ರಾಮನಿಗೆ ಹನುಮಂತ ನೀಡಿರುವ ಪ್ರತಿಜ್ಞೆಯ ಕತೆ ಇದಾಗಿದೆಯಂತೆ. ಸಿನಿಮಾದಲ್ಲಿ ರಿಷಬ್ ಶೆಟ್ಟಿ ಹನುಮಂತನ ಪಾತ್ರದಲ್ಲಿ ನಟಿಸಲಿದ್ದಾರೆ.

The post ಹನುಮಂತನಿಗೆ ಅವಮಾನ: ರಿಷಬ್ ಶೆಟ್ಟಿ ಹಾಗೂ ತಂಡದ ವಿರುದ್ಧ ದಾಖಲಾಗಿದೆ ದೂರು. appeared first on Good News 24x7.

]]>
ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ https://www.goodnews24x7.com/rishabh-shetty-received-the-best-actor-award/ Wed, 09 Oct 2024 04:29:02 +0000 https://www.goodnews24x7.com/?p=780 ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನೆನ್ನೆ (ಅ.8) ದೆಹಲಿಯಲ್ಲಿ ನಡೆದಿದೆ. ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್ ಶೆಟ್ಟಿ…

The post ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ appeared first on Good News 24x7.

]]>

ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನೆನ್ನೆ (ಅ.8) ದೆಹಲಿಯಲ್ಲಿ ನಡೆದಿದೆ. ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ‌ ನಟ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದ್ದು, ಚಿತ್ರದ ನಿರ್ಮಾಣ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

The post ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ appeared first on Good News 24x7.

]]>
ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ https://www.goodnews24x7.com/best-actor-award-for-actor-director-rishabh-shetty/ Fri, 16 Aug 2024 10:46:13 +0000 https://www.goodnews24x7.com/?p=373 ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ…

The post ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ appeared first on Good News 24x7.

]]>

ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ ‘ಅತ್ಯುತ್ತಮ ಮನರಂಜನಾ ಚಿತ್ರ’ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಸಿನಿಮಾಗಳಿಗೆ ಇಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡದ ಕೆಜಿಎಫ್-2​ ಚಿತ್ರಕ್ಕೆ ಎರಡು ಪ್ರಶಸ್ತಿ ಒಲಿದು ಬಂದಿದೆ. ಕೆಜಿಎಫ್​-2 ಸಿನಿಮಾಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ಹಾಗೂ ಸಾಹಸ ವಿಭಾಗದಲ್ಲೂ ಕೆಜಿಎಫ್-2​ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ ಅತ್ತುತ್ತಮ ನಟ ಪ್ರಶಸ್ತಿ ಘೋಷಣೆಯಾಗಿದೆ.

ಜನಮೆಚ್ಚುಗೆ ಗಳಿಸಿದ್ದ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅಭಿನಯ ಅಮೋಘವಾಗಿತ್ತು. ಅತ್ಯುತ್ತಮ ನಟ ಜೊತೆಗೆ ಅತ್ಯುತ್ತಮ ಮನೋರಂಜನಾ ಪ್ರಶಸ್ತಿಗೆ ಕಾಂತಾರ ಸಿನಿಮಾ ಆಯ್ಕೆಯಾಗಿದೆ. ಕಾಂತಾರ ಖ್ಯಾತಿಯ ರಿಷಬ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.

The post ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ appeared first on Good News 24x7.

]]>