SaraswatiSamman Archives - Good News 24x7 https://www.goodnews24x7.com/tag/saraswatisamman/ Kannada Thu, 25 Sep 2025 09:37:17 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg SaraswatiSamman Archives - Good News 24x7 https://www.goodnews24x7.com/tag/saraswatisamman/ 32 32 ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ https://www.goodnews24x7.com/government-green-signal-for-construction-of-sl-bhyrappa-memorial/ Thu, 25 Sep 2025 09:32:35 +0000 https://www.goodnews24x7.com/?p=7631 ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್​​ಎಲ್​ ಭೈರಪ್ಪ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸಾಹಿತ್ಯ ಕ್ಷೇತ್ರಕ್ಕೆ…

The post ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ appeared first on Good News 24x7.

]]>

ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್​​ಎಲ್​ ಭೈರಪ್ಪ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸಾಹಿತ್ಯ ಕ್ಷೇತ್ರಕ್ಕೆ ಭೈರಪ್ಪ ಅವರ ಕೊಡುಗೆಗಳನ್ನು ಸ್ಮರಿಸಿದರು.

ಬೆಂಗಳೂರು: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್​ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು. ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುನಾದಗೊಂಡಿವೆ. ಬಹುಶಃ ಕನ್ನಡದ ಇತರ ಯಾವ ಸಾಹಿತಿಯ ಕೃತಿಗಳೂ ಅಷ್ಟೊಂದು ಸಂಖ್ಯೆಯಲ್ಲಿ ಬೇರೆ ಭಾಷೆಗಳಿಗೆ ಅನುವಾದಗೊಂಡಿಲ್ಲ. ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ಕೂಡ ಸಿಗಬೇಕಿತ್ತು. ಅವರು ಅದಕ್ಕೆ ಅರ್ಹರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
ಅಂತಿಮ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಭೈರಪ್ಪ ಅವರ ಪತ್ನಿ ಹಾಗೂ ಮಕ್ಕಳ ಜತೆ ಕುಳಿತುಕೊಂಡು ಮಾತನಾಡಿ ಅವರಿಗೆ ಸಾಂತ್ವನ ಹೇಳಿದರು.

ಎಸ್ಎಲ್ ಭೈರಪ್ಪ ಬುಧವಾರ ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಸದ್ಯ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಅಂತಿಮ ದರ್ಶನ ನಡೆಯುತ್ತಿದ್ದು, ಮಧ್ಯಾಹ್ನದ ನಂತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇದೆ. ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

The post ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ appeared first on Good News 24x7.

]]>