Shivarajkumar Archives - Good News 24x7 https://www.goodnews24x7.com/tag/shivarajkumar/ Kannada Sun, 31 Aug 2025 09:38:06 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Shivarajkumar Archives - Good News 24x7 https://www.goodnews24x7.com/tag/shivarajkumar/ 32 32 ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ https://www.goodnews24x7.com/shivarajkumars-new-movie-with-kvn-productions-directed-by-pawan-wadiyar/ Sun, 31 Aug 2025 09:38:06 +0000 https://www.goodnews24x7.com/?p=7085 ನಿರ್ದೇಶಕ ಪವನ್ ಒಡೆಯರ್ ಅವರು ಇದೇ ಮೊದಲ ಬಾರಿಗೆ ಶಿವರಾಜ್​​ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಕೂಡ ಮೊದಲ ಬಾರಿಗೆ ಶಿವಣ್ಣನ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಸೆಪ್ಟೆಂಬರ್ 3 ರಂದು ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ. ಹಲವು…

The post ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ appeared first on Good News 24x7.

]]>

ನಿರ್ದೇಶಕ ಪವನ್ ಒಡೆಯರ್ ಅವರು ಇದೇ ಮೊದಲ ಬಾರಿಗೆ ಶಿವರಾಜ್​​ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಕೂಡ ಮೊದಲ ಬಾರಿಗೆ ಶಿವಣ್ಣನ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಸೆಪ್ಟೆಂಬರ್ 3 ರಂದು ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ. ಹಲವು ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಜತೆ ಶಿವರಾಜ್​​ಕುಮಾರ್ ಹೊಸ ಸಿನಿಮಾ; ಪವನ್ ಒಡೆಯರ್ ನಿರ್ದೇಶನ

ಯಶ್ ನಟನೆಯ ‘ಟಾಕ್ಸಿಕ್’, ಧ್ರುವ ಸರ್ಜಾ ನಟನೆಯ ‘ಕೆಡಿ’, ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸೇರಿ ಹಲವು ಬಹುನಿರೀಕ್ಷಿತ ಸಿನಿಮಾಗಳನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಇತ್ತೀಚೆಗೆ ಈ ಸಂಸ್ಥೆ ತೆಲುಗು ಚಿತ್ರರಂಗಕ್ಕೂ ಎಂಟ್ರಿ ನೀಡಿತು. ಈಗ ನಟ ಶಿವರಾಜ್​​ಕುಮಾರ್ ಜೊತೆ ಸಿನಿಮಾ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಮುಂದಾಗಿದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಸಿನಿಮಾಗೆ ಸ್ಕ್ರಿಪ್ಟ್ ಪೂಜೆ ಮಾಡಲಾಯಿತು.

ನಿರ್ದೇಶಕ ಪವನ್‌ ಒಡೆಯರ್‌ ಅವರು ಪುನೀತ್‌ ರಾಜ್‌ಕುಮಾರ್‌ ಜೊತೆ ಎರಡು ಸಿನಿಮಾಗಳನ್ನು ಮಾಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಶಿವರಾಜ್‌ಕುಮಾರ್‌ ಜೊತೆ ಸಿನಿಮಾ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ. ಸೆಪ್ಟೆಂಬರ್ 3ರಂದು ಈ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ನಿರ್ದೇಶನ ಮಾಡುವುದರ ಜೊತೆಗೆ ಪವನ್ ಒಡೆಯರ್ ಅವರು ನಿರ್ಮಾಣದಲ್ಲೂ ಕೈ ಜೋಡಿಸುತ್ತಿದ್ದಾರೆ.

ವೆಂಕಟ್ ಕೊನಂಕಿ ಅವರ ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ಪವನ್ ಒಡೆಯರ್ ಅವರ ‘ಒಡೆಯರ್ ಮೂವೀಸ್’ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿವೆ. ದೇಶದ ಹಲವು ಭಾಗಗಳಲ್ಲಿ ಈ ಸಿನಿಮಾಗೆ ಶೂಟಿಂಗ್ ನಡೆಯಲಿದೆ. ಸೆಪ್ಟೆಂಬರ್ ‌3ರಂದು ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಶುರು ಆಗಲಿದೆ. ನಂತರ ಮಂಡ್ಯ , ಮುಂಬೈ, ಹೈದರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಇದು ಒಂದು ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಸಿನಿಮಾ ಆಗಿರಲಿದೆ ಎಂದು ಚಿತ್ರತಂಡ ಹೇಳಿದೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶಶಾಂಕ್ ನಾರಾಯಣ್ ಅವರು ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಶಿವರಾಜ್​​ಕುಮಾರ್ , ಪವನ್ ಒಡೆಯರ್ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಕಾಂಬಿನೇಷನ್​ ಆದ್ದರಿಂದ ನಿರೀಕ್ಷೆ ಜೋರಾಗಿದೆ.

ಈ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಜೊತೆ ಹಲವು ಕಲಾವಿದರು ಅಭಿನಯಿಸಲಿದ್ದಾರೆ. ಜಯರಾಮ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿ, ಸಾಯಿ ಕುಮಾರ್, ಸಂಜನಾ ಆನಂದ್, ದೀಕ್ಷಿತ್ ಶೆಟ್ಟಿ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಇತ್ತೀಚೆಗೆ ನಡೆದ ಸ್ಕ್ರಿಪ್ಟ್ ಪೂಜೆಯಲ್ಲಿ ಚಿತ್ರತಂಡದ ಹಲವರು ಭಾಗಿಯಾಗಿದ್ದರು.

The post ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ appeared first on Good News 24x7.

]]>
ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು https://www.goodnews24x7.com/madenoor-manu-fell-at-shivaraj-kumars-feet-and-apologized/ Tue, 26 Aug 2025 06:42:16 +0000 https://www.goodnews24x7.com/?p=6740 ಮಡೆನೂರು ಮನು ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಆಗಿದ್ದು ಅವರು ನಡೆದು ಕೊಂಡ ರೀತಿ. ಅವರು ಶಿವರಾಜ್​ಕುಮಾರ್, ದರ್ಶನ್, ಧ್ರುವ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಬಗ್ಗೆ ತುಚ್ಚವಾಗಿ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಹೇಳಿಕೆ…

The post ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು appeared first on Good News 24x7.

]]>

ಮಡೆನೂರು ಮನು ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಆಗಿದ್ದು ಅವರು ನಡೆದು ಕೊಂಡ ರೀತಿ. ಅವರು ಶಿವರಾಜ್​ಕುಮಾರ್, ದರ್ಶನ್, ಧ್ರುವ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಬಗ್ಗೆ ತುಚ್ಚವಾಗಿ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಹೇಳಿಕೆ ಬೆನ್ನಲ್ಲೇ ಧ್ರುವ ಸರ್ಜಾ ಬಳಿ ತೆರಳಿ ಅವರು ಕ್ಷಮೆ ಕೇಳಿದ್ದರು. ಈಗ ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಮನು ಕ್ಷಮೆ ಕೇಳಿದ್ದಾರೆ.

The post ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು appeared first on Good News 24x7.

]]>
ವಿಗ್ ಹಾಕಿಕೊಂಡು ಎರಡು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾದ ಶಿವಣ್ಣ. https://www.goodnews24x7.com/%e0%b2%b5%e0%b2%bf%e0%b2%97%e0%b3%8d-%e0%b2%b9%e0%b2%be%e0%b2%95%e0%b2%bf%e0%b2%95%e0%b3%8a%e0%b2%82%e0%b2%a1%e0%b3%81-%e0%b2%8e%e0%b2%b0%e0%b2%a1%e0%b3%81-%e0%b2%a4%e0%b2%bf%e0%b2%82%e0%b2%97/ Tue, 04 Mar 2025 10:34:22 +0000 https://www.goodnews24x7.com/?p=2568 ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ಕಾರಣಕ್ಕೆ ದೊಡ್ಡ ಬ್ರೇಕ್ ಪಡೆದಿದ್ದರು. ಅಮೆರಿಕದಿಂದ ಸಕ್ಸಸ್ ಫುಲ್ ಆಪರೇಷನ್ ನೊಂದಿಗೆ ಶಿವಣ್ಣ ಕರ್ನಾಟಕಕ್ಕೆ ಮರಳಿದ್ದರು. ಅವರನ್ನು ಅಭಿಮಾನಿಗಳು ಬಹಳ ಸಂತೋಷದಿಂದ ಬರ ಮಾಡಿಕೊಂಡಿದ್ದರು. ಆದರೆ ಅವರ ಮುಂದಿನ ಚಿತ್ರದ ಬಗ್ಗೆ ಯಾವುದೇ…

The post ವಿಗ್ ಹಾಕಿಕೊಂಡು ಎರಡು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾದ ಶಿವಣ್ಣ. appeared first on Good News 24x7.

]]>

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ಕಾರಣಕ್ಕೆ ದೊಡ್ಡ ಬ್ರೇಕ್ ಪಡೆದಿದ್ದರು. ಅಮೆರಿಕದಿಂದ ಸಕ್ಸಸ್ ಫುಲ್ ಆಪರೇಷನ್ ನೊಂದಿಗೆ ಶಿವಣ್ಣ ಕರ್ನಾಟಕಕ್ಕೆ ಮರಳಿದ್ದರು. ಅವರನ್ನು ಅಭಿಮಾನಿಗಳು ಬಹಳ ಸಂತೋಷದಿಂದ ಬರ ಮಾಡಿಕೊಂಡಿದ್ದರು. ಆದರೆ ಅವರ ಮುಂದಿನ ಚಿತ್ರದ ಬಗ್ಗೆ ಯಾವುದೇ ಸಂಪೂರ್ಣ ಮಾಹಿತಿ ದೊರಕಿರಲಿಲ್ಲ. ಇದೀಗ ಶಿವಣ್ಣರವರು ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಳ್ಳುವುದು ಖಚಿತವಾದೊಡನೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಶಿವರಾಜ್ ಕುಮಾರ್ ಅವರು ಯಾವುದೇ ಸಿನಿಮಾ ಶೂಟ್ನಲ್ಲೂ ಭಾಗಿ ಆಗಿರಲಿಲ್ಲ. ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆದು ಬಂದರು. ಈಗ ಶಿವರಾಜ್ಕುಮಾರ್ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿದ್ದಾರೆ ಎಂಬುದು ಎಲ್ಲರಿಗೂ ಖುಷಿ ಕೊಟ್ಟ ಸುದ್ದಿ. ಈಗ ಅವರ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಶಿವಣ್ಣ ಸೈಲೆಂಟ್ ಆಗಿ ಚಿತ್ರೀಕರಣ ಆರಂಭಿಸಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಇನ್ನೊಂದೆಡೆ ಶಿವಣ್ಣ ಚಿತ್ರ ರಂಗಕ್ಕೆ ಮರಳಿರುವುದು ಚಿತ್ರರಂಗದವರೆಗೂ ಸಂತಸದ ಸುದ್ದಿಯಾಗಿದೆ.

ಶಿವರಾಜ್ ಕುಮಾರ್ ವಿಗ್ ಹಾಕಿರುವ ಲುಕ್ ಗಮನ ಸೆಳೆದಿದೆ. ಅವರು ಗಡ್ಡ,ಮೀಸೆಯನ್ನು ತೆಗೆದಿದ್ದು, ಸಂಪೂರ್ಣವಾಗಿ ಭಿನ್ನವಾಗಿ ಗಮನ ಸೆಳೆದಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದರಿಂದ ಫ್ಯಾನ್ಸ್ ಶಿವಣ್ಣ ಅವರನ್ನು ಸಂಭ್ರಮಿಸಿದ್ದಾರೆ.ಶಿವರಾಜ್ ಕುಮಾರ್ ಅವರು ಶೂಟ್ ಮಾಡ್ತಿರೋದು ಯಾವ ಸಿನಿಮಾ? ಯಾರ ಜೊತೆ? ಎಂಬ ಹಲವಾರು ಪ್ರಶ್ನೆಗಳಿಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಆದರೆ, ಕೆಲವು ವರದಿಗಳ ಪ್ರಕಾರ ಅವರು ಆರಂಭಿಸಿರೋದು ರಾಮ್ ಚರಣ್ ನಟನೆಯ, ಬುಚ್ಚಿ ಬಾಬು ನಿರ್ದೇಶನದ

‘ಆರ್ಸಿ 16’ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ಚರಣ್ ಚಿತ್ರದ ಶೂಟಿಂಗ್ನಲ್ಲಿ ಭಾಗಿ ಆಗೋದಾಗಿ ಈ ಮೊದಲು ಶಿವಣ್ಣ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಇತ್ತೀಚೆಗೆ ಅವರು ಶೂಟಿಂಗ್ನಲ್ಲಿ ಭಾಗಿ ಆಗಲಿದ್ದಾರೆ ಎಂದು ತೆಲುಗು ಚಿತ್ರರಂಗದಿಂದ ವರದಿಗಳು ಕೂಡ ಆಗಿದ್ದವು. ಹೀಗಾಗಿ, ಅವರು ಇದೇ ಸಿನಿಮಾದ ಶೂಟ್ನಲ್ಲಿ ಭಾಗಿ ಆಗುತ್ತಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಚಿತ್ರರಂಗಕ್ಕೆ ಮರಳಿದ್ದು, ಸಿನಿಮಾ ಶೂಟ್ ಒಂದರಲ್ಲಿ ಭಾಗಿಯಾಗಿದ್ದು, ಸಿನಿ ಪ್ರೇಕ್ಷಕರಿಗೆ ಸಂತಸದ ಸುದ್ದಿಯಾಗಿದೆ.

The post ವಿಗ್ ಹಾಕಿಕೊಂಡು ಎರಡು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾದ ಶಿವಣ್ಣ. appeared first on Good News 24x7.

]]>
ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್? https://www.goodnews24x7.com/%e0%b2%aa%e0%b2%a4%e0%b3%8d%e0%b2%a8%e0%b2%bf%e0%b2%af-%e0%b2%ac%e0%b2%b3%e0%b2%bf-%e0%b2%95%e0%b2%a3%e0%b3%8d%e0%b2%a3%e0%b3%80%e0%b2%b0%e0%b3%81-%e0%b2%b9%e0%b2%be%e0%b2%95%e0%b3%81%e0%b2%a4/ Sun, 02 Feb 2025 11:55:02 +0000 https://www.goodnews24x7.com/?p=2159 ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್?ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಭಾನುವಾರವಷ್ಟೇ ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜ್ ಕುಮಾರ್ ಅವರನ್ನು ಗಣ್ಯರು ಸೆರಿದಂತೆ ಅನೇಕ ಸಿನಿ ಕಲಾವಿದರು ಭೇಟಿ ಕೊಟ್ಟಿದ್ದಾರೆ. ಇದೀಗ ಶಿವಣ್ಣ ಸಂದರ್ಶನವೊಂದರಲ್ಲಿ ಪತ್ನಿ ಗೀತಾ ಶಿವರಾಜ್…

The post ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್? appeared first on Good News 24x7.

]]>

ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್?ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಭಾನುವಾರವಷ್ಟೇ ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜ್ ಕುಮಾರ್ ಅವರನ್ನು ಗಣ್ಯರು ಸೆರಿದಂತೆ ಅನೇಕ ಸಿನಿ ಕಲಾವಿದರು ಭೇಟಿ ಕೊಟ್ಟಿದ್ದಾರೆ. ಇದೀಗ ಶಿವಣ್ಣ ಸಂದರ್ಶನವೊಂದರಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ತ್ಯಾಗದ ಕುರಿತು ಭಾವುಕರಾಗಿದ್ದಾರೆ. ನಾನು ಕೆಲವೊಂದು ತಪ್ಪು ಮಾಡಿದ್ದೇನೆ. ಅವರ ಪ್ರೀತಿಗೆ ನಾನು ಫಿಟ್ ಆಗಿದ್ದೇನಾ ಗೊತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

ಸಂದರ್ಶನದಲ್ಲಿ ಶಿವಣ್ಣ ಮಾತನಾಡಿದರು. ಕ್ಯಾನ್ಸರ್ ಇರುವ ಬಗ್ಗೆ ಗೀತಾ ಅವರು ಶಿವಣ್ಣ ಅವರಿಂದ ಮುಚ್ಚಿಟ್ಟಿದ್ದರು. ಇದನ್ನು ಹೇಗೆ ಸ್ವೀಕರಿಸುತ್ತಾರೇನೋ ಎನ್ನುವ ಭಯ ಗೀತಾ ಅವರನ್ನು ಕಾಡಿತ್ತು ಅಂತೆ. ಕಿಮೋ ಥೆರಪಿ ಮಾಡಿಸಲೇಬೇಕಾದ ಅನಿವಾರ್ಯತೆ ಎದುರಾದಾಗ ಶಿವರಾಜ್ಕುಮಾರ್ಗೆ ಕ್ಯಾನ್ಸರ್ ಇರುವ ವಿಚಾರವನ್ನು ಹೇಳಲೇ ಬೇಕಾಯಿತು ಎಂದರು. ಇನ್ನು ಶಿವಣ್ಣ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಹೀಗೆ, ಮನೆಯಲ್ಲಿ ನಂಗೆ ಎಲ್ಲರ ಸಫೊರ್ಟ್ ಸಿಕ್ಕಿತು. ನನ್ನ ಬಗ್ಗೆ ಎಲ್ಲರಿಗೂ ಒಂದು ಕನ್ಸರ್ನ್ ಇತ್ತು. ಇವತ್ತು ಇವರ ಸಪೋರ್ಟ್ ಇಲ್ಲ ಎಂದಿದ್ದರೆ ಕಷ್ಟ ಇತ್ತು. ನಂಗೆ ಗೀತಾ ಎಲ್ಲ ಸ್ಥಾನ ತುಂಬಿದಳು. ಗೀತಾ, ಪತ್ನಿಯಾಗಿ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಶಿವಣ್ಣ ಹೇಳಿದ್ದಾರೆ. ನಮ್ಮಿಬ್ಬರ ಮಧ್ಯೆ ಏನೇ ಇರಬಹುದು ಆದರೆ, ನನ್ನನ್ನು ತನ್ನವನು ಎನ್ನುವಂತೆ ನೋಡಿದ್ದಾರೆ. ಅವರು ಹೆಂಡತಿಯಾಗಿ ಮಾತ್ರವಲ್ಲ ತಾಯಿಯಾಗಿ, ಗೆಳತಿಯಾಗಿ ನನ್ನನ್ನು ನೋಡಿದ್ದಾರೆ. ಅವರ ಪ್ರೀತಿಗೆ ನಾನು ಫಿಟ್ ಆಗಿದ್ದೇನಾ ಗೊತ್ತಿಲ್ಲ. ಸಾರಿ ಅಂತ ಆರಾಮಾಗಿ ನಾನು ಹೇಳಬಹುದು.ಆದರೆ ಆ ಬಗ್ಗೆ ಆಲೋಚನೆ ಮಾಡಿದಾಗ ಅರ್ಥ ಆಳವಾಗಿ ಹೋಗುತ್ತೆ ಎಂದು ಕಣ್ಣೀರಿಟ್ಟಿದ್ದಾರೆ. ಶಿವರಾಜ್ ಕುಮಾರ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕಣ್ಣೀರಿಡದಂತೆ ಶಿವಣ್ಣನಿಗೆ ಧೈರ್ಯ ಹೇಳಿದ್ದಾರೆ.

ಅಮೆರಿಕಾದಲ್ಲಿ ಟ್ರೀಟ್ಮೆಂಟ್ ತೆಗೆದುಕೊಳ್ಳುವಾಗ ಶಿವಣ್ಣ ಅವರಿಗೆ ಸ್ಪೆಷಲ್ ವ್ಯಕ್ತಿಯೊಬ್ಬರು ಸಖತ್ ಕೇರ್ ಮಾಡಿದ್ದಾರೆ. ಅವರ ಬಗ್ಗೆ ಗೀತಾ ಅವರು ಗುಣಗಾನ ಮಾಡಿದ್ದಾರೆ. ಅದು ಬೇರೆ ಯಾರೂ ಅಲ್ಲ, ಶಾಸಕ ಭೀಮಣ್ಣ ನಾಯ್ಕ್. ಹೌದು ಗೀತಾ ಶಿವರಾಜ್ ಕುಮಾರ್ ಅವರ ಸೋದರ ಮಾವ ಭೀಮಣ್ಣ ನಾಯ್ಕ್. ಈಗ ಗೀತಾ ಶಿವರಾಜ್ಕುಮಾರ್ ಈ ಬಗ್ಗೆ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ. ಅಲ್ಲಿಯೂ ಸೈ ಇಲ್ಲಿಯೂ ಸೈ ನಿಮ್ಮೆಲ್ಲರ ಪ್ರೀತಿಯ ಭೀಮಣ್ಣ, ನನಗೆ ಭೀಮ್ ಮಾಮ. ಅಂದಿನಿಂದ ಇಲ್ಲಿಯವರೆಗೆ ಸ್ವಲ್ಪ ಕೂಡ ಬದಲಾಗದ ವ್ಯಕ್ತಿತ್ವ. ಮಾತು, ಕೋಪ ತುಂಬಾ ಕಡಿಮೆ, ಆದರೆ ಕೆಲಸ ಎಲ್ಲರಿಗಿಂತ ಜಾಸ್ತಿ. ಯಾವತ್ತು ಕಡಿಮೆ ಆಗದ ಪ್ರೀತಿ ವಿಶ್ವಾಸ. ಅವರಿಗೆ ಕುಟುಂಬದವರಾಗಲಿ, ಊರಿನ ಜನರಾಗಲಿ ಎಲ್ಲರು ಒಂದೇ.
ಮಾಮ ಅಮೆರಿಕಾದ ಮಿಯಾಮಿ ಅಲ್ಲಿ ಶಿವಣ್ಣ ಅವರ ಟ್ರೀಟ್ಮೆಂಟ್ ಸಮಯದಲ್ಲಿ ಎರಡು ವಾರ ನಮ್ಮ ಜೊತೆಗೆ ಇದ್ದರು. ನನ್ನ ಕೆಲಸಗಳಿಗೆ ಸಹಾಯ, ಶಿವಣ್ಣ ಜೊತೆಗೆ ವಾಕಿಂಗ್, ಕಾಫಿ, ಹಾಸ್ಪಿಟಲ್ ಭೇಟಿಗೆ ಜೊತೆಗೆ ಇರುತ್ತಿದ್ದರು. ನಮ್ಮ ಪ್ರೀತಿಯ ಭೀಮ್ ಮಾಮ, ನಿಮಗೆ ಶಾಸಕರು. ನಮ್ಮ ಕುಟುಂಬದ ಸುಖ ದುಃಖ ಎರಡರಲ್ಲೂ ಸದಾ ಜೊತೆಗೆ ನಿಂತವರು. ನಿಮ್ಮ ಶಾಸಕರಾಗಿ ಅವರು ಸದಾ ನಿಮ್ಮ ಜೊತೆಯಲ್ಲಿ ನಿಂತಿರಲಿ, ಹಾಗು ಅವರ ಮತ್ತು ನಿಮ್ಮ ಮುಗುಳ್ನಗೆ ಎಂದಿಗೂ ಮಾಸದಿರಲಿ ಎಂದು ಎಂದು ದೇವರಲ್ಲಿ ನಾನು ಹಾಗು ಶಿವ ರಾಜಕುಮಾರ್ ಅವರು ಕೇಳಿಕೊಳ್ಳುತೇವೆ. ಇಂತಿ, ಗೀತಾ ಶಿವರಾಜಕುಮಾರ್ ಹಾಗು ಶಿವರಾಜಕುಮಾರ್ ಎಂದು ಬರೆದುಕೊಂಡಿದ್ದರು.

ಸದ್ಯ ಶಿವಣ್ಣ ಆ್ಯಕ್ಟಿವ್ ಆಗಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಈ ವಾರದ ಸಂಚಿಕೆಯಲ್ಲಿ ಶಿವಣ್ಣ ಹಾಗೂ ಗೀತಕ್ಕ ವಿಶೇಷ ಅತಿಥಿಗಳಾಗಿ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದಾರೆ ಸ್ಪರ್ಧಿಗಳು, ತೀರ್ಪುಗಾರರು, ಜ್ಯೂರಿ ಮೆಂಬರ್ಸ್, ನಿರೂಪಕಿ ಅನುಶ್ರೀ ಹಾಗೂ ಇತರ ಅತಿಥಿಗಳು ಶಾಕ್ ಆಗಿದ್ದು, ಶಿವಣ್ಣನನ್ನು ನೋಡಿ ಭಾವುಕರಾಗಿದ್ದಾರೆ.

The post ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್? appeared first on Good News 24x7.

]]>
ಅಮೆರಿಕದ ಮಿಯಾಮಿಯಲ್ಲಿ ಶಿವರಾಜ್ ಕುಮಾರ್ ಯಶಸ್ವಿ ಶಸ್ತ್ರಚಿಕಿತ್ಸೆ. https://www.goodnews24x7.com/%e0%b2%85%e0%b2%ae%e0%b3%86%e0%b2%b0%e0%b2%bf%e0%b2%95%e0%b2%a6-%e0%b2%ae%e0%b2%bf%e0%b2%af%e0%b2%be%e0%b2%ae%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b6%e0%b2%bf%e0%b2%b5%e0%b2%b0/ Wed, 25 Dec 2024 10:48:11 +0000 https://www.goodnews24x7.com/?p=1247 ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ…

The post ಅಮೆರಿಕದ ಮಿಯಾಮಿಯಲ್ಲಿ ಶಿವರಾಜ್ ಕುಮಾರ್ ಯಶಸ್ವಿ ಶಸ್ತ್ರಚಿಕಿತ್ಸೆ. appeared first on Good News 24x7.

]]>

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಶಸ್ತ್ರಚಿಕಿತ್ಸೆಯು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿದೆ. ”ಶಸ್ತ್ರಚಿಕಿತ್ಸೆ ವೇಳೆ ಮತ್ತು ನಂತರದ ಆರೈಕೆ ಸಮಯದಲ್ಲಿ ಶಿವರಾಜ್ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು” ಎಂದು ಡಾ. ಮುರುಗೇಶ ಮನೋಹರನ್ ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

”ಸದ್ಯ ಸುಗಮ ಚೇತರಿಕೆಗೆ ನೆರವಾಗಲು ಅಗತ್ಯ ಚಿಕಿತ್ಸೆ ಮುಂದುವರೆಸಲಾಗಿದೆ. ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ತಂಡದಿಂದ ಅತ್ಯುತ್ತಮ ಆರೈಕೆ ನಡೆಯುತ್ತಿದೆ. ಶಿವರಾಜ್ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಹಾಗೂ ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಶಿವರಾಜ್ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು” ಎಂದು ಗೀತಾ ಶಿವರಾಜ್ಕುಮಾರ್ ಮಾಹಿತಿ ನೀಡಿದ್ದಾರೆ.
ಶಿವರಾಜ್ಕುಮಾರ್ ಕಳೆದ ಬುಧವಾರ ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದರು. ಫ್ಲೋರಿಡಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. ಕೆಲ ದಿನಗಳ ಕಾಲ ವಿಶ್ರಾಂತಿ ಪಡೆದು ಜನವರಿ ಅಂತ್ಯದ ವೇಳೆಗೆ ಸ್ವದೇಶಕ್ಕೆ ವಾಪಸಾಗಲಿದ್ದಾರೆ.

ಶಿವರಾಜ್ಕುಮಾರ್ ಯುಎಸ್ ಪ್ರಯಾಣದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಚಿತ್ರರಂಗ ಸೇರಿದಂತೆ ಸಿನಿಮಾ, ರಾಜಕೀಯ ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಭೇಟಿ ಕೊಟ್ಟು ಗುಣಮಟ್ಟದ ಸಮಯ ಕಳೆದಿದ್ದರು. ನಟ ಕಿಚ್ಚ ಸುದೀಪ್, ಮಾಜಿ ಸಚಿವ ಬಿ.ಸಿ.ಪಾಟೀಲ್, ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಗಣ್ಯರಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಅದರಲ್ಲೂ ಕಿಚ್ಚ ಸುದೀಪ್ ಭಾವುಕರಾದ ಕ್ಷಣ, ಶಿವಣ್ಣನನ್ನು ಅಪ್ಪಿಕೊಂಡಿದ್ದ ಫೋಟೋ ಕಂಡ ಅಭಿಮಾನಿಗಳು ಮರುಗಿದ್ದರು.
ಅಲ್ಲದೆ, ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲೆಂದು ಪ್ರಾರ್ಥಿಸಿ ಅಭಿಮಾನಿಗಳು ರಾಜ್ಯದ ಹಲವೆಡೆ ದೇವಸ್ಥಾನಗಳಲ್ಲಿ ಉರುಳು ಸೇವೆ, ಕೇಶ ಮುಂಡನೆ ಹಾಗೂ ಮಹಾ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿದ್ದರು.

The post ಅಮೆರಿಕದ ಮಿಯಾಮಿಯಲ್ಲಿ ಶಿವರಾಜ್ ಕುಮಾರ್ ಯಶಸ್ವಿ ಶಸ್ತ್ರಚಿಕಿತ್ಸೆ. appeared first on Good News 24x7.

]]>