state government Archives - Good News 24x7 https://www.goodnews24x7.com/tag/state-government/ Kannada Fri, 17 Apr 2026 10:56:03 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg state government Archives - Good News 24x7 https://www.goodnews24x7.com/tag/state-government/ 32 32 ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ.. https://www.goodnews24x7.com/%e0%b2%b6%e0%b2%be%e0%b2%b8%e0%b2%95-%e0%b2%b5%e0%b2%bf%e0%b2%a8%e0%b2%af%e0%b3%8d-%e0%b2%95%e0%b3%81%e0%b2%b2%e0%b2%95%e0%b2%b0%e0%b3%8d%e0%b2%a3%e0%b2%bf%e0%b2%97%e0%b3%86-%e0%b2%9c%e0%b3%80/ Fri, 17 Apr 2026 10:56:03 +0000 https://www.goodnews24x7.com/?p=9292 ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ ಜೀವಾವಧಿ ಶಿಕ್ಷೆ, ಇದರ ಕತೆಗೆ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಪ್ರಮುಖ…

The post ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ.. appeared first on Good News 24x7.

]]>

ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ ಜೀವಾವಧಿ ಶಿಕ್ಷೆ, ಇದರ ಕತೆಗೆ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಪ್ರಮುಖ ಆರೋಪಿಯಾಗಿರುವ ಇವರಿಗೆ ನ್ಯಾಯಾಲವೂ ಬುದ್ಧವಾರ (ಏ.15) ಅಪರಾಧಿ ಎಂದು ಘೋಷಣೆ ಮಾಡಿತ್ತು. ಇದೀಗ ಪ್ರಕಟ ಮಾಡಿದೆ. ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ.

ಇದೊಂದು ಕರ್ನಾಟಕ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲವನ್ನು ಮೂಡಿಸಿದೆ. ಇದೀಗ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು.ಇನ್ನು ಉಳಿದಂತೆ ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್​​ ಅವರನ್ನು ದೋಷಿಗಳು ಎಂದು ಹೇಳಿ, ಶಿಕ್ಷೆಯನ್ನು ನೀಡಿದೆ.

 

 

ಇನ್ನು ಪ್ರಕರಣದ ಹಿನ್ನಲೆಗಳೇನು?
2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಈ ಕೊಲೆ ಆಸ್ತಿ ವಿವಾದದ ವಿಚಾರಕ್ಕಾಗಿ ನಡೆದಿದೆ ಎಂದು ಹೇಳಲಾಗಿದೆ.ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದ್ರೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಈ ಕೊಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್‌ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್​​ಗೆ ನೀಡಲಾಗಿತ್ತು, ಇದೀಗ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.

The post ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ.. appeared first on Good News 24x7.

]]>
ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ https://www.goodnews24x7.com/medical-staff-unions-to-strike-from-march-11medical-staff-unions-to-strike-from-march-11/ Sun, 01 Mar 2026 08:45:17 +0000 https://www.goodnews24x7.com/?p=8567 ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ, ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿ ಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಗಳ ಲಭ್ಯತೆ ಕುರಿತು…

The post ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ appeared first on Good News 24x7.

]]>

ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ,
ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿ ಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಗಳ ಲಭ್ಯತೆ ಕುರಿತು ಜನಸಾಮಾನ್ಯ ರಲ್ಲಿ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರ್ತವ್ಯಕ್ಕೆ ಗೈರಾಗು ವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಆಯ್ಕೆಗಳನ್ನು ಸರ್ಕಾರ ಪರಿಶೀಲಿಸು ತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಹುಕಾಲದಿಂದ ಬಾಕಿ ಇರುವ ಸೇವಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ವೈದ್ಯಕೀಯ ಸಿಬ್ಬಂದಿ ಸಂಘಗಳು ಹಂತ ಹಂತವಾಗಿ ಸೇವೆ ಸ್ಥಗಿತಗೊಳಿ ಸುವುದಾಗಿ ಘೋಷಿಸಿವೆ. ಎರಡೂವರೆ ವರ್ಷಕ್ಕೂ ಹೆಚ್ಚು ಕಾಲ ಕಾಯುತ್ತಿ ದ್ದೇವೆ. ಪದೋನ್ನತಿ, ಕೇಡರ್ ನಿಯಮ ಗಳು, ಹಿರಿಯ ಹುದ್ದೆಗಳ ಭರ್ತಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂ ಡಿಲ್ಲ ಎಂದು ಕರ್ನಾಟಕ ಸರ್ಕಾರ ವೈದ್ಯ ಕೀಯ ಸಂಘದ ಅಧ್ಯಕ್ಷ ಡಾ.ರವೀಂದ್ರ ನಾಥ್ ಎಂ.ಮೇಟಿ ತಿಳಿಸಿದ್ದಾರೆ.
ಹೊರರೋಗಿ ವಿಭಾಗ ಸೇವೆಗಳು ಸ್ಥಗಿತಗೊಳ್ಳಲಿವೆ: ತುರ್ತು ಚಿಕಿತ್ಸೆ ಮಾತ್ರ ಮುಂದುವರಿ ಯಲಿದೆ. ಮಾರ್ಚ್ 16ರಿಂದ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತುರ್ತು ಸೇವೆಗಳನ್ನು ಒಳ ಗೊಂಡಂತೆ ಸಂಪೂರ್ಣ ಕರ್ತವ್ಯ ಬಹಿಷ್ಕಾರ ಮಾಡ ಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಸುಮಾರು 65 ಸಾವಿರ ದಿಂದ 80 ಸಾವಿರ ಸಿಬ್ಬಂದಿ, ಅದರಲ್ಲೂ ರಾಷ್ಟ್ರೀಯ ಆರೋಗ್ಯ ಮಿಷನ್ ಸಿಬ್ಬಂದಿ ಸೇರಿದಂತೆ, ಹಲವರು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಸರ್ಕಾರ ನಮ್ಮೆಲ್ಲರ ಮೇಲೂ ಕ್ರಮ ಕೈಗೊಳ್ಳಲಿ, ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯುವು ದಿಲ್ಲ ಎಂದು ಮೇಟಿ ಹೇಳಿದರು. ದೀರ್ಘ ಕಾಲದಿಂದ ಖಾಲಿ ಇರುವ ಹುದ್ದೆಗಳ ಕಾರಣ ಹಿರಿಯ ವೈದ್ಯರು ಪದೋನ್ನತಿ ಇಲ್ಲದೇ ನಿವೃತ್ತಿಯಾ ಗುತ್ತಿದ್ದಾರೆ ಎಂದು ಹೇಳಿದರು.
ರೋಗಿಗಳಿಗೆ ಉಂಟಾಗುವ ತೊಂದರೆ ಗಳಿಗಾಗಿ ಸಂಘ ಕ್ಷಮೆಯಾಚಿಸಿದ್ದರೂ, ಜವಾಬ್ದಾರಿ ಸರ್ಕಾರದದ್ದೇ ಎಂದು ಹೇಳಿದೆ.

The post ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ appeared first on Good News 24x7.

]]>
ಸರ್ಕಾರಕ್ಕೆ ಕನ್ನಡ ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದ – ಮಾಜಿ ಸಿಎಂ ಬೊಮ್ಮಾಯಿ https://www.goodnews24x7.com/former-cm-bommai-urges-government-to-reopen-kannada-schools/ Wed, 11 Feb 2026 11:00:27 +0000 https://www.goodnews24x7.com/?p=8356 ನವದೆಹಲಿ, : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು, ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ…

The post ಸರ್ಕಾರಕ್ಕೆ ಕನ್ನಡ ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದ – ಮಾಜಿ ಸಿಎಂ ಬೊಮ್ಮಾಯಿ appeared first on Good News 24x7.

]]>

ನವದೆಹಲಿ, : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು, ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದ್ದು, ಸರ್ಕಾರದ ನಡೆ ಖಂಡನೀಯವಾದರು ಎಂದು ಕಿಡಿಕಾರಿದರು.

ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಶಿಕ್ಷಕರ ನೇಮಕಾತಿ ಮತ್ತು ಶಿಕ್ಷಕರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು

The post ಸರ್ಕಾರಕ್ಕೆ ಕನ್ನಡ ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದ – ಮಾಜಿ ಸಿಎಂ ಬೊಮ್ಮಾಯಿ appeared first on Good News 24x7.

]]>
ಟೊಮೆಟೊ ದರ ಏಕಾಏಕಿ ಕುಸಿತ ; ಗದಗ ರೈತರು ಕಂಗಾಲು…. https://www.goodnews24x7.com/%e0%b2%9f%e0%b3%8a%e0%b2%ae%e0%b3%86%e0%b2%9f%e0%b3%8a-%e0%b2%a6%e0%b2%b0-%e0%b2%8f%e0%b2%95%e0%b2%be%e0%b2%8f%e0%b2%95%e0%b2%bf-%e0%b2%95%e0%b3%81%e0%b2%b8%e0%b2%bf%e0%b2%a4-%e0%b2%97%e0%b2%a6/ Mon, 07 Apr 2025 12:04:46 +0000 https://www.goodnews24x7.com/?p=3077 ರೈತರ ಗೋಳು ಕೇಳುವವರು ಯಾರು ಎಂಬ ಪರಿಸ್ಥಿತಿಗೆ ತಲುಪಿದೆ ಕರ್ನಾಟಕದ ರೈತರ ಪರಿಸ್ಥಿತಿ. ಅದಕ್ಕೆ ನಿದರ್ಶನದಂತೆ ಕರ್ನಾಟಕದಲ್ಲಿ ಟಮೋಟ ದರವು ಏಕಾಏಕಿ ಕುಸಿತವಾಗಿದೆ. : ಗದಗದ ಎಪಿಎಂಸಿಯಲ್ಲಿ ಟೊಮೆಟೊ ದರ ಭಾರೀ ಕುಸಿತದಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 25 ಕೆಜಿ ಟ್ರೇ…

The post ಟೊಮೆಟೊ ದರ ಏಕಾಏಕಿ ಕುಸಿತ ; ಗದಗ ರೈತರು ಕಂಗಾಲು…. appeared first on Good News 24x7.

]]>

ರೈತರ ಗೋಳು ಕೇಳುವವರು ಯಾರು ಎಂಬ ಪರಿಸ್ಥಿತಿಗೆ ತಲುಪಿದೆ ಕರ್ನಾಟಕದ ರೈತರ ಪರಿಸ್ಥಿತಿ. ಅದಕ್ಕೆ ನಿದರ್ಶನದಂತೆ ಕರ್ನಾಟಕದಲ್ಲಿ ಟಮೋಟ ದರವು ಏಕಾಏಕಿ ಕುಸಿತವಾಗಿದೆ. : ಗದಗದ ಎಪಿಎಂಸಿಯಲ್ಲಿ ಟೊಮೆಟೊ ದರ ಭಾರೀ ಕುಸಿತದಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 25 ಕೆಜಿ ಟ್ರೇ ಕೇವಲ 50 ರೂ.ಗೆ ಮಾರಾಟವಾಗುತ್ತಿದೆ. ಬೆಳೆಗೆ ಹೆಚ್ಚಿನ ವೆಚ್ಚವಾಗಿದ್ದರೂ, ಕಡಿಮೆ ದರದಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಬದನೆಕಾಯಿ ಮತ್ತು ನುಗ್ಗೆಕಾಯಿ ದರಗಳೂ ಕುಸಿದಿವೆ. ಸರ್ಕಾರದ ವಿರುದ್ಧ ರೈತರು ಕಿಡಿಕಾರಿದ್ದಾರೆ. ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದ್ದು ರೈತರು ಕಂಗಾಲಾಗಿದ್ದಾರೆ. ದರ ಕುಸಿತಕ್ಕೆ ಗದಗ ಎಪಿಎಂಸಿಯಲ್ಲಿ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ಅಗತ್ಯ ವಸ್ತುಗಳ ದರಗಳು ಏರಿಕೆಯಾದರೂ ರೈತರು ಬೆಳೆದ ಬೆಳೆಗಳ ದರ ಏಕೆ ಏರಿಕೆಯಾಗುತ್ತಿಲ್ಲ ಅಂತ ಕಿಡಿಕಾರಿದ್ದಾರೆ. ಅಷ್ಟಕ್ಕೂ ಅನ್ನ ನೀಡುವ ಅನ್ನದಾತನಿಗೆ ಸರಿಯಾದ ಬೆಲೆ ಸಿಗಲಿಲ್ಲವಾದರೆ ದೇಶ ಅಭಿವೃದ್ಧಿಯಾಗುವುದು ಖಂಡಿತವಾಗಿಯೂ ಕಷ್ಟವಾಗಿದೆ.

ಮಾರುಕಟ್ಟೆಗೆ ಹೆಚ್ಚು ಫಸಲು ಬಂದಿದ್ದರಿಂದ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. 25 ಕೆಜಿ ಟ್ರೇ ಕೇವಲ 50 ರೂ. ಮಾರಾಟವಾಗುತ್ತಿದೆ. ಮಾರುಕಟ್ಟೆಯಲ್ಲಿ 20-30 ರೂ. ಕೆಜಿ ಟೊಮೆಟೊ ಮಾರಾಟವಾಗುತ್ತಿದ್ದರು, ರೈತರಿಗೆ ಕೆಜಿ ಕೇವಲ 2 ರೂ. ಸಿಗುತ್ತಿದೆ. ರೈತರಿಗಾಗುತ್ತಿರುವ ಈ ಅನ್ಯಾಯ ತಿಳಿದಿದ್ದರೂ ಎಪಿಎಂಸಿ ಅಧಿಕಾರಿಗಳು ಮೌನವಾಗಿದ್ದಾರೆ. ಬದನೆಕಾಯಿ, ನುಗ್ಗೆಕಾಯಿ ಬೆಲೆಯೂ ಕುಸಿತವಾಗಿದೆ. ಒಂದು ಟ್ರೇ ಬದನೆಕಾಯಿಗೆ 50 ರಿಂದ 80 ರೂ ಬೆಲೆ ಇದೆ. ನುಗ್ಗೆಕಾಯಿ ಒಂದು ಕೆಜಿಗೆ 10 ರೂ ಮಾರಾಟವಾಗುತ್ತಿದೆ. ಇನ್ನು ಒಂದು ಟ್ರೇ ಟೊಮೆಟೊ ಮಾರುಕಟ್ಟೆಯಲ್ಲಿ 50 ರೂ. ಮಾರಾಟವಾಗುತ್ತಿದೆ. ರೈತರು ಎಕರೆಗೆ 30-50 ಸಾವಿರ ರೂ ಮಾಡಿರುವ ಖರ್ಚು ಕೂಡ ವಾಪಸ್ ಬರಿತ್ತಿಲ್ಲ. ಸಾಮಾನ್ಯ ಮಾರುಕಟ್ಟೆಯಲ್ಲಿ ಸಿಗುವ ಬೆಲೆಯೂ ಕಷ್ಟಪಟ್ಟು ಬೆಳೆದ ರೈತನಿಗೆ ಸಿಗುತ್ತಿಲ್ಲ. ಬದಲಾಗಿ ಇದು ಮಧ್ಯವರ್ತಿಗಳಿಗೆ ಸೇರುತ್ತಿದೆ. ಕೃಷಿ ಅವರಂಬಿಕ ದೇಶವಾದ ಭಾರತದಲ್ಲಿ, ರೈತರಿಗೆ ಹೆಚ್ಚಿನ ಮನ್ನಣೆ ನೀಡುವಂತಾಗಲಿ ಎಂಬುದು ಎಲ್ಲರ ಮನವಿಯಾದರೂ ಸಹ, ಅಧಿಕಾರಿಗಳು ಇದರ ಬಗ್ಗೆ ಮೌನದಿಂದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಒಂದು ಟ್ರೇ ನಲ್ಲಿ ಸುಮಾರು 20-25 ಕೆಜಿ ಟೊಮೆಟೊ ಇರುತ್ತೆ. 2 ರೂ ಕೆಜಿಯಂತೆ ಟೊಮೆಟೊ ಮಾರಾಟವಾಗುತ್ತಿದ್ದು, ಸರ್ಕಾರ ಹಾಗೂ ಎಪಿಎಂಸಿ ವರ್ತಕರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರುಕಟ್ಟೆಗೆ ಕ್ವಿಂಟಾಲ್ಗಟ್ಟಲೇ ಟೊಮೆಟೊ ತಂದರೂ ರೈತರ ಕೈ ಖಾಲಿ ಖಾಲಿ ಆಗಿದೆ.ಟೊಮೆಟೊ ಕಟಾವು ಮಾಡುವ ಕಾರ್ಮಿಕರಿಗೆ 300 ರೂ ದಿನ ಕೂಲಿ ಕೊಡಬೇಕು. ಮಾರುಕಟ್ಟೆಗೆ ಒಂದು ಟ್ರೇ ಹೇರಿಕೊಂಡು ಬಂದರೆ 30 ರೂ. ವಾಹನ ಬಾಡಿಗೆ ಇದೆ. ಜೊತೆಗೆ ದಲ್ಲಾಳಿಗೆ 10 ರೂ. ಕೊಡಬೇಕು. ಹಾಗಾಗಿ ಒಂದು ಟ್ರೇ ಗೆ ರೈತರಿಗೆ 10 ರೂ ಮಾತ್ರ ಸಿಗುತ್ತದೆ ಎಂದು ಕಿಡಿಕಾರಿದ್ದಾರೆ. ಆ 10 ರೂ ಟೀ, ತಿಂಡಿ ಮಾಡಿದರೆ ಖಾಲಿ ಕೈಯಲ್ಲಿ ಮನೆಗೆ ಹೋಗಬೇಕಾಗುತ್ತೆ ಎಂದು ಗೋಳಾಡಿದರು.

ಹಗಲು ರಾತ್ರಿ ಕಷ್ಟ ಪಟ್ಟು ಟೊಮೆಟೊ ಬೆಳೆದಿದ್ದೇವೆ. ಮಾರುಕಟ್ಟೆಗೆ ತಂದರೆ ಸೂಕ್ತ ದರ ಸಿಗುತ್ತಿಲ್ಲ ಹೀಗಾದರೆ ಕುಟುಂಬ ನಿರ್ವಹಣೆಗೆ ತುಂಬಾನೆ ತೊಂದರೆ ಆಗುತ್ತದೆ. ಸರ್ಕಾರ ಟೊಮೆಟೊ ಬೆಳೆದ ರೈತರ ನೆರವಿಗೆ ಬರಬೇಕು. ಸೂಕ್ತದ ದರ ನಿಗದಿ ಮಾಡಬೇಕೆಂದು ಒತ್ತಾಯಿಸಲಾಗಿದೆ. ಬೆಳೆದ ಬೆಳೆಗೆ ಸರಿಯಾದ ಫಲ ಸಿಗಲಿಲ್ಲವಾದರೆ ರೈತರು ಸಾಲದ ಮಡುವಿನಲ್ಲಿ ಬೀಳುತ್ತಾರೆ. ನಂತರ ತಮ್ಮ ಜೀವನದಲ್ಲಿ ಏರುಪೇರು ಆದಾಗ ಅವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಈ ರೀತಿ ಆಗಬಾರದೆಂದರೆ ಸರ್ಕಾರ ಹಾಗೂ ಎಪಿಎಂಸಿ ವರ್ತಕರು ಈ ವಿಷಯದ ಬಗ್ಗೆ ಕೂಡಲೇ ಗಮನಹರಿಸಬೇಕಾದದು ಪ್ರಮುಖವಾಗಿದೆ.

The post ಟೊಮೆಟೊ ದರ ಏಕಾಏಕಿ ಕುಸಿತ ; ಗದಗ ರೈತರು ಕಂಗಾಲು…. appeared first on Good News 24x7.

]]>
ಪಂಚ ಗ್ಯಾರಂಟಿಗೆ ಗೌರ್ನರ್ ಶ್ಲಾಘನೆ! https://www.goodnews24x7.com/%e0%b2%aa%e0%b2%82%e0%b2%9a-%e0%b2%97%e0%b3%8d%e0%b2%af%e0%b2%be%e0%b2%b0%e0%b2%82%e0%b2%9f%e0%b2%bf%e0%b2%97%e0%b3%86-%e0%b2%97%e0%b3%8c%e0%b2%b0%e0%b3%8d%e0%b2%a8%e0%b2%b0%e0%b3%8d-%e0%b2%b6/ Tue, 04 Mar 2025 08:45:27 +0000 https://www.goodnews24x7.com/?p=2555 ರಾಜ್ಯ ಸರ್ಕಾರವು ಪ್ರತಿ ವರ್ಷ 90,000 ಕೋಟಿ ರು.ಗೂ ಹೆಚ್ಚು ಹಣವನ್ನು ಕಲ್ಯಾಣ ಕಾರ್ಯಕ್ರಮಗಳ ಮೂಲಕ ನೇರವಾಗಿ ಜನ ರಿಗೆ ತಲುಪಿಸುತ್ತಿದೆ. ಗ್ಯಾರಂಟಿಗಳಿಂದ ಹಣ ಕಾಸು ಸ್ಥಿತಿ ಹದಗೆಡುತ್ತದೆ ಎನ್ನುತ್ತಿದ್ದವರ ಭವಿಷ್ಯವನ್ನು ಸುಳ್ಳಾಗಿಸಿ ವಿಶ್ವಸಂಸ್ಥೆ ಮುಖ್ಯಸ್ಥ ರಿಂದಲೇ ಶ್ಲಾಘನೆ ಪಡೆದಿದೆ ಎಂದು…

The post ಪಂಚ ಗ್ಯಾರಂಟಿಗೆ ಗೌರ್ನರ್ ಶ್ಲಾಘನೆ! appeared first on Good News 24x7.

]]>

ರಾಜ್ಯ ಸರ್ಕಾರವು ಪ್ರತಿ ವರ್ಷ 90,000 ಕೋಟಿ ರು.ಗೂ ಹೆಚ್ಚು ಹಣವನ್ನು ಕಲ್ಯಾಣ ಕಾರ್ಯಕ್ರಮಗಳ ಮೂಲಕ ನೇರವಾಗಿ ಜನ ರಿಗೆ ತಲುಪಿಸುತ್ತಿದೆ. ಗ್ಯಾರಂಟಿಗಳಿಂದ ಹಣ ಕಾಸು ಸ್ಥಿತಿ ಹದಗೆಡುತ್ತದೆ ಎನ್ನುತ್ತಿದ್ದವರ ಭವಿಷ್ಯವನ್ನು ಸುಳ್ಳಾಗಿಸಿ ವಿಶ್ವಸಂಸ್ಥೆ ಮುಖ್ಯಸ್ಥ ರಿಂದಲೇ ಶ್ಲಾಘನೆ ಪಡೆದಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರುಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ್ದಾರೆ.
ಸೋಮವಾರಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ‘ಆಡಳಿತ’ ಎಂಬುದು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶ ಎಂದು ಜನ ಕಲ್ಯಾಣವನ್ನೇ ಧೈಯವಾಗಿಟ್ಟು ಕೊಂಡು ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರವು ಸರ್ವರ ಅಭ್ಯುದಯಕ್ಕಾಗಿ ಕೆಲಸ ಮಾಡುತ್ತಿದೆ ಎಂದರು.
ಉಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಲಿದೆ, ಹಣಕಾಸು ಸ್ಥಿತಿ ಹದಗೆಡಲಿದೆ ಎಂದು ಹೇಳಲಾಗುತ್ತಿತ್ತು. ಅಂತ ಹವರ ಭವಿಷ್ಯ ಸುಳ್ಳಾಗುವಂತೆ ಅನುಷ್ಠಾನಗೊ ಳಿಸಲಾಗಿದೆ.

ರಾಜ್ಯಪಾಲರ ಭಾಷಣದಲ್ಲೇನಿದೆ?
# ವಿವಿಧ ವಿವಿಗಳು ಗ್ಯಾರಂಟಿ ಮಾದರಿಯನ್ನು ಅಧ್ಯಯನ ನಡೆಸುವಂತಾಗಿದೆ
# ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಒಯ್ಯಲು ಮುಂದಡಿ
# ಕಳೆದ 19 ತಿಂಗಳಲ್ಲಿ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ
# ನಂಜುಂಡಪ್ಪ ವರದಿ ಜಾರಿ ಮಾಡಿ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಕ್ರಮ
# ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಪ್ರಕ್ರಿಯೆ

ಹಿಂದಿನ ಸರ್ಕಾರ ಅಕ್ರಮ ತಾರ್ಕಿಕ ಅಂತ್ಯ: ಗೌರರ್

ಹಿಂದಿನ ಸರ್ಕಾರದ ಅವಧಿಯ ಭ್ರಷ್ಟಾಚಾರ ಗಳನ್ನು ತಾರ್ಕಿಕ ಅಂತ್ಯಕ್ಕೆ ತರಲಾಗುವುದು ಎಂದು ರಾಜ್ಯಪಾಲರು ಹೇಳಿದ್ದಾರೆ. ತನ್ಮೂಲಕ ಹಿಂದಿನ ಬಿಜೆಪಿ ಸರ್ಕಾರದ ಹಗರಣಗಳು, ಭ್ರಷ್ಟಾಚಾರ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುವುದಾಗಿ ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ಸಂದೇಶ ನೀಡಿದೆ.

ತಾವೇ ತಿರಸ್ಕರಿಸಿದ್ದ ಸುಗ್ರೀವಾಜ್ಞೆಗೆ ಮೆಚ್ಚುಗೆ!

ಬಲವಂತದ ಸಾಲ ವಸೂಲಿ ವಿರುದ್ಧ ರಾಜ್ಯ ಸರ್ಕಾರ ಹೊರಡಿಸಿದ್ದ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹಲೋಸ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಆ ಸುಗ್ರೀವಾಜ್ಞೆಯನ್ನು ಸಮರ್ಥಿಸಿಕೊಂಡಿದ್ದಾರೆ.

The post ಪಂಚ ಗ್ಯಾರಂಟಿಗೆ ಗೌರ್ನರ್ ಶ್ಲಾಘನೆ! appeared first on Good News 24x7.

]]>
ಹೋಟೆಲ್ನ ಬಿಸಿಬಿಸಿ ತಿಂಡಿ ಪಾರ್ಸೆಲ್ಗೆ ಬಳಸುವ ಪ್ಲಾಸ್ಟಿಕ್ ನಿಷೇಧ! https://www.goodnews24x7.com/%e0%b2%b9%e0%b3%8b%e0%b2%9f%e0%b3%86%e0%b2%b2%e0%b3%8d%e0%b2%a8-%e0%b2%ac%e0%b2%bf%e0%b2%b8%e0%b2%bf%e0%b2%ac%e0%b2%bf%e0%b2%b8%e0%b2%bf-%e0%b2%a4%e0%b2%bf%e0%b2%82%e0%b2%a1%e0%b2%bf-%e0%b2%aa/ Fri, 28 Feb 2025 09:36:54 +0000 https://www.goodnews24x7.com/?p=2460 ಬೆಂಗಳೂರು :- (ಕೆಎಂಶಿ) ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಬಳಸದಂತೆ ರಾಜ್ಯ ಸರ್ಕಾರ ನಿಷೇಧಿಸಿದೆ. ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್. ಇಡ್ಲಿ, ವಡೆ, ಸಾಂಬಾರ್, ಕಾಫಿ, ಟೀ…

The post ಹೋಟೆಲ್ನ ಬಿಸಿಬಿಸಿ ತಿಂಡಿ ಪಾರ್ಸೆಲ್ಗೆ ಬಳಸುವ ಪ್ಲಾಸ್ಟಿಕ್ ನಿಷೇಧ! appeared first on Good News 24x7.

]]>

ಬೆಂಗಳೂರು :- (ಕೆಎಂಶಿ) ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಬಳಸದಂತೆ ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್.
ಇಡ್ಲಿ, ವಡೆ, ಸಾಂಬಾರ್, ಕಾಫಿ, ಟೀ ಸೇರಿದಂತೆ ಪ್ಲಾಸ್ಟಿಕ್ ಚೀಲ ಗಳಲ್ಲಿ ಬಿಸಿ ಬಿಸಿ ತಿಂಡಿ ಪಾರ್ಸೆಲ್ ನೀಡುವುದು ಮಾರಣಾಂತಿಕ ರೋಗಕ್ಕೆ ಕಾರಣವಾಗಲಿದೆ ಎಂದಿ ದ್ದಾರೆ. ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಬಳಸುತ್ತಿರುವುದು ಅನೇಕ ರೋಗಗಳಿಗೆ ಎಡೆಮಾಡಿದೆ, ಅದರಲ್ಲೂ, ರಸ್ತೆ ಬದಿಯ ತಿಂಡಿ ಅಂಗಡಿ ಗಳು ಪ್ಲಾಸ್ಟಿಕ್ ಬಳಕೆ ಮಾಡಿ ಆಹಾರ ತಯಾರಿಕೆ ಹಾಗೂ ಪಾರ್ಸಲ್ಗಳಿಗೆ ಬಳಸುತ್ತಿರುವುದು ಅಪಾಯಕಾರಿಯಾಗಿದೆ.
ಹೋಟೆಲ್ ಇಡ್ಲಿ ಮತ್ತಿತರ ಆಹಾರ ಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಅಪಾಯಕಾರಿ ಪ್ಲಾಸ್ಟಿಕ್ ಅಂಶಗಳಿರುವುದು ಪತ್ತೆಯಾಗಿದೆ. ಪ್ರಯೋಗಾಲಯದ ಪರೀಕ್ಷೆ ವೇಳೆ ಇಡ್ಲಿ ಮತ್ತಿತರ ಆಹಾರಗಳಲ್ಲಿ ಕಾರ್ಸಿನೋಜೆನಿಕ್ ವಿಷ ಅಂಶ ಪತ್ತೆಯಾಗಿದೆ. ಈ ಹಾನಿ ಕಾರಕ ಅಂಶದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಆಗಿರುವುದು ಪತ್ತೆಯಾಗಿದೆ. ಮೊದಲು ಇಡ್ಲಿಯನ್ನು ಹತ್ತಿ ಬಟ್ಟೆ ಬಳಸಿ ಬೇಯಿಸುತ್ತಿದ್ದರು, ಆದರೆ, ನಂತರ ಸುಲಭ ವಿಧಾನ ಕಂಡುಕೊಂಡು ಹೋಟೆಲ್ ಉದ್ಯಮ ಪ್ಲಾಸ್ಟಿಕ್ ಬಳಕೆಗೆ ಮೊರೆ ಹೋಗಿದೆ.

ಜಿಟಿ ದೇವೇಗೌಡರ ಮುನಿಸಿಗೆ ಕಾರಣ ಏನು ?
ಇದು ಇಡ್ಲಿ ತಯಾರಿಕೆಗೆ ಮಾತ್ರ ಸೀಮಿತವಾಗಿಲ್ಲ, ಪ್ಲಾಸ್ಟಿಕ್ ಬಳಕೆಯಿಂದ ಆಹಾರ ಅಸುರಕ್ಷಿತ ಎಂಬುದು ಪ್ರಯೋ ಗಾಲದಿಂದ ದೃಢಪಟ್ಟಿದೆ. ಪ್ಲಾಸ್ಟಿಕ್ ಹಾಳೆ ಶಾಖಕ್ಕೆ ಒಡ್ಡಿಕೊಳ್ಳುವುದರಿಂದ ಹಾನಿಕಾರಕ ವಸ್ತು ಹೊರ ಸೂಸುತ್ತದೆ. ಇದು ಕ್ಯಾನ್ಸರ್ ರೋಗಕ್ಕೆ ಮೂಲ ಕಾರಣ ಎಂದು ತಜ್ಞರು ಹೇಳಿದ್ದಾರೆ. ತಜ್ಞರು ನೀಡಿರುವ ಶಿಫಾ ರಸಿನ ಮೇರೆಗೆ ಆಹಾರ ಪದಾರ್ಥಗಳ ಉತ್ಪಾ ದನಾ ಕೇಂದ್ರ ಹೋಟೆಲ್ ಹಾಗೂ ರೆಸ್ಟೋ ರೆಂಟ್ಗಳಲ್ಲಿ ಪ್ಲಾಸ್ಟಿಕ್ ನಿಷೇಧ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗುಂಡೂರಾವ್ ತಿಳಿಸಿದರು. ಆದರೆ ದುರ ದೃಷ್ಟಕರ ಸಂಗತಿ ಎಂದರೆ, ಮೈಸೂರಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ದ್ದರೂ ತಯಾರಕರು, ಮಾರಾಟಗಾರರು ಕೇರ್ ಮಾಡುತ್ತಿಲ್ಲ. ಪಾಲಿಕೆ ಅಧಿಕಾರಿ ಗಳು ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ.

The post ಹೋಟೆಲ್ನ ಬಿಸಿಬಿಸಿ ತಿಂಡಿ ಪಾರ್ಸೆಲ್ಗೆ ಬಳಸುವ ಪ್ಲಾಸ್ಟಿಕ್ ನಿಷೇಧ! appeared first on Good News 24x7.

]]>
ರೈತರು ಜಾಗೃತರಾದರೆ ಅಪಾಯ ಕಡಿಮೆ. ಶೋಷಣೆ ಮೆಟ್ಟಿ ನಿಲ್ಲಬಹುದು : ರಾಜ್ಯಾಧ್ಯಕ್ಷ ಶಾಂತಕುಮಾರ್. https://www.goodnews24x7.com/%e0%b2%b0%e0%b3%88%e0%b2%a4%e0%b2%b0%e0%b3%81-%e0%b2%9c%e0%b2%be%e0%b2%97%e0%b3%83%e0%b2%a4%e0%b2%b0%e0%b2%be%e0%b2%a6%e0%b2%b0%e0%b3%86-%e0%b2%85%e0%b2%aa%e0%b2%be%e0%b2%af-%e0%b2%95%e0%b2%a1/ Wed, 05 Feb 2025 10:07:30 +0000 https://www.goodnews24x7.com/?p=2251 ಇಂದು ಕೆರಗಳ್ಳಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಘಟಕ ತೆಂಗಿನ ಗಿಡ ನೆಡುವ ಮೂಲಕ ಉದ್ಘಾಟಿಸಿದ ರಾಜ್ಯಾಧ್ಯಕ್ಷ ರೈತರತ್ನ ಕುರುಬುರ್ ಶಾಂತಕುಮಾರ್ ಮಾತನಾಡುತ್ತ ರೈತ ಕೃಷಿಯಲ್ಲಿ ಜೂಜಾಟ ಆಡುತ್ತಿದ್ದಾನೆ ಪ್ರಕೃತಿ ಮುನಿದಾಗ ಜೂಜಾಟದಲ್ಲಿ ಸೋಲುತ್ತಿದ್ದಾನೆ ಎಂದು ತಿಳಿಸಿದರು. ಕಳೆದ ವರ್ಷ ಶುಂಠಿ…

The post ರೈತರು ಜಾಗೃತರಾದರೆ ಅಪಾಯ ಕಡಿಮೆ. ಶೋಷಣೆ ಮೆಟ್ಟಿ ನಿಲ್ಲಬಹುದು : ರಾಜ್ಯಾಧ್ಯಕ್ಷ ಶಾಂತಕುಮಾರ್. appeared first on Good News 24x7.

]]>

ಇಂದು ಕೆರಗಳ್ಳಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಘಟಕ ತೆಂಗಿನ ಗಿಡ ನೆಡುವ ಮೂಲಕ ಉದ್ಘಾಟಿಸಿದ ರಾಜ್ಯಾಧ್ಯಕ್ಷ ರೈತರತ್ನ ಕುರುಬುರ್ ಶಾಂತಕುಮಾರ್ ಮಾತನಾಡುತ್ತ ರೈತ ಕೃಷಿಯಲ್ಲಿ ಜೂಜಾಟ ಆಡುತ್ತಿದ್ದಾನೆ ಪ್ರಕೃತಿ ಮುನಿದಾಗ ಜೂಜಾಟದಲ್ಲಿ ಸೋಲುತ್ತಿದ್ದಾನೆ ಎಂದು ತಿಳಿಸಿದರು.

ಕಳೆದ ವರ್ಷ ಶುಂಠಿ ಬೆಲೆ 12 ಸಾವಿರ ಇತ್ತು ಈಗ 1ಸಾವಿರ ರೂಗೆ ಇಳಿದಿದೆ. ರೈತರ ಒತ್ತಾಯಕ್ಕೆ ಈಗ ರಾಜ್ಯ ಸರ್ಕಾರ 7,000 ರೂಗೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಕೇಂದ್ರಕ್ಕೆ ವರದಿ ಸಲ್ಲಿಸುತ್ತಿದೆ ರೈತರು ದಳ್ಳಾಳಿಗೆಗೆ ಮಾರಾಟ ಮಾಡದೆ ಸ್ವಲ್ಪ ದಿನ ಕಾಯುವಂತಾಗಬೇಕು ಇಂದು ಮಧ್ಯವರ್ತಿಗಳು ದಲ್ಲಾಳಿಗಳು ಬಂಡವಾಳ ಶಾಹಿಗಳು. ಭೂ ಮಾಫಿಯಾದವರು ರೈತರನ್ನ ಒಕ್ಕಲಿಬ್ಬಿಸುವ ಕಾರ್ಯದಲ್ಲಿ ಮುಂದಾಗುತ್ತಿದ್ದಾರೆ. ಸರ್ಕಾರದ ಇಬ್ಬಗೆಯ ನೀತಿಗಳು ರೈತರನ್ನ ಸಂಕಷ್ಟಕ್ಕೆ ತಳ್ಳುತ್ತಿವೆ. ತೊಗರಿ ಬೆಳೆಗೆ ಹೆಚ್ಚುವರಿ 500ರೂ ಪ್ರೋತ್ಸಾಹ ಧನ ನೀಡಿದ ರಾಜ್ಯ ಸರ್ಕಾರ ರಾಜ್ಯದಲ್ಲಿ 20 ಲಕ್ಷ ರೈತರು ಭತ್ತ ಬೆಳೆಯುತ್ತಿದ್ದರು ರಾಜ್ಯ ಸರ್ಕಾರದ ನಿರ್ಲಕ್ಷ ಧೋರಣೆಯಿಂದ ಖರೀದಿ ಕೇಂದ್ರಗಳು ಆರಂಭವಾಗದೆ ಹೆಚ್ಚುವರಿ ಪ್ರೋತ್ಸಾದನ ನೀಡದೇ ಇದ್ದ ಕಾರಣ ಭತ್ತ ಬೆಳೆದ ರೈತರು ಎಂ ಎಸ್ ಪಿ ಗಿಂತ ಕಡಿಮೆ ಬೆಲೆಗೆ ಬತ್ತ ಮಾರಾಟ ಮಾಡಿ ನಷ್ಟ ಅನುಭವಿಸುವಂತಾಯಿತು. ಇಂತಹ ಇಬ್ಬಂದಿ ನೀತಿಗಳು ರೈತರನ್ನ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಮಾತನಾಡಿ ದೆಹಲಿ ರೈತರ ಹೋರಾಟ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ. ಭೂ ಮಾಫಿಯಾದವರು ರೈತರ ಜಮೀನು ಖರೀದಿಸಿ ವಂಚನೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಲು ನಮ್ಮ ಸಂಘಟನೆ ಕಾರ್ಯಕ್ರಮ ರೂಪಿಸುತ್ತದೆ ಎಂದು ತಿಳಿಸಿದರು.
ಕೇರಗಳ್ಳಿ ಘಟಕ ಅಧ್ಯಕ್ಷ ಸತೀಶ್ ರವರು ಮಾತನಾಡಿ ರಾಜ್ಯ ಸರ್ಕಾರ ಹಾಲು ಉತ್ಪಾದಕರ ಪ್ರೂತ್ಸಹ ಧನ 5 ರೂ ಬಿಡುಗಡೆಗೆ ಒತ್ತಾಯಿಸಿದರು. ತಾಲೂಕ ಅಧ್ಯಕ್ಷ ಪೈಲ್ವಾನ್ ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಸಿಎಂ ಸಿದ್ದರಾಮಯ್ಯ ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ


ಉಪಾಧ್ಯಕ್ಷ ವಾಜಮಂಗಲ ಮಹದೇವ್. ನೀಲಕಂಠಪ್ಪ. ಕೇರಗಹಳ್ಳಿಘಟಕದ ಗೌರವ ಅಧ್ಯಕ್ಷ ನಾಗರಾಜು.ಶಿವಕುಮಾರ.ಬಾಲು. ವಿಜೇಯೆಂದ್ರ. ಮಹದೇವಸ್ವಾಮಿ ವರಕೂಡ ನಾಗೇಶ. ಮಂಜುನಾಥ. ಉಪಾಧ್ಯಕ್ಷರು ಬಾಲು ಆರ್, ಉಪಾಧ್ಯಕ್ಷರು ಶಿವಕುಮಾರ್. ಬಿ ಸಂದೀಪ್ ಸಿ ಕಾರ್ಯದರ್ಶಿ, ಅಭಿಷೇಕ್ ಎಂ ಖಜಾಂಚಿ, ಮಂಜುನಾಥ್ ಸಂಘಟನಾ ಕಾರ್ಯದರ್ಶಿ ಹಾಗೂ ಗ್ರಾಮದ ಯಜಮಾನರು ಬಸವರಾಜ್, ಬಸವಗೌಡ,ಶಿವಪ್ಪ, ಮಲ್ಲೇಶ, ಬಸವರಾಜು, ದೊಳೇಗೌಡ್ರು, ನಾಗಣ್ಣ ಮುಂತಾದವರು ಇದ್ದರು.

The post ರೈತರು ಜಾಗೃತರಾದರೆ ಅಪಾಯ ಕಡಿಮೆ. ಶೋಷಣೆ ಮೆಟ್ಟಿ ನಿಲ್ಲಬಹುದು : ರಾಜ್ಯಾಧ್ಯಕ್ಷ ಶಾಂತಕುಮಾರ್. appeared first on Good News 24x7.

]]>
ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು https://www.goodnews24x7.com/%e0%b2%97%e0%b3%8d%e0%b2%af%e0%b2%be%e0%b2%b8%e0%b3%8d-%e0%b2%b8%e0%b2%bf%e0%b2%b2%e0%b2%bf%e0%b2%82%e0%b2%a1%e0%b2%b0%e0%b3%8d-%e0%b2%b8%e0%b3%8d%e0%b2%ab%e0%b3%8b%e0%b2%9f-%e0%b2%ae%e0%b2%a4/ Fri, 27 Dec 2024 06:26:48 +0000 https://www.goodnews24x7.com/?p=1268 ಹುಬ್ಬಳ್ಳಿ: ಇಲ್ಲಿನ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ…

The post ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು appeared first on Good News 24x7.

]]>

ಹುಬ್ಬಳ್ಳಿ: ಇಲ್ಲಿನ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಹಾಗೂ ಸಂಜಯ ಸವದತ್ತಿ (20) ಎಂಬ ಇಬ್ಬರು ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದರು. ಬಳಿಕ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿ (21) ಕೂಡ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಇನ್ನುಳಿದ ಗಾಯಾಳುಗಳಾದ ವಿನಾಯಕ ಬಾತಕೇರ (12), ಪ್ರಕಾಶ ಬಾರಕೇರ (42), ಮಂಜು ತೋರದ (22), ಪ್ರವೀಣ ಚಲವಾದಿ (24), ತೇಜಸ್ ರೆಡ್ಡಿ (26) ಮತ್ತು ಶಂಕರ ರಾಯನಗೌಡ್ರ (29) ಇವರುಗಳ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಡಿಸೆಂಬರ್ 23ರಂದು ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿದೆ. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರವು ಈಗಾಗಲೇ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಕೆಎಂಸಿಆರ್ಐ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಈ ಘೋಷಣೆ ಮಾಡಿದ್ದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ದೇವರು ನೀಡಲಿ ಎಂದು ಅವರು ಪ್ರಾರ್ಥಿಸಿದ್ದರು.

The post ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು appeared first on Good News 24x7.

]]>